ನೂತನ ಸಿಎಂ ಡಿಕೆ ಶಿವಕುಮಾರ್ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು – Kannada News
ಬೆಂಗಳೂರು, ಜೂನ್ 06: ಸಿಎಂ ಡಿಕೆ ಶಿವಕುಮಾರ್ರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ಲಿಂಗಾಯತ ಸ್ವಾಮೀಜಿಗಳು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಗಳು ಡಿಕೆ ಶಿವಕುಮಾರ್ಗೆ ಆಶೀರ್ವಾದ ಮಾಡಿ ಶುಭ ಹಾರೈಸಿದರು. ಧಾರವಾಡ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಿಂದಗಿಯ ಡಾಕ್ಟರ್ ಪ್ರಭು ಸಾರಂಗದೇವ ಸ್ವಾಮೀಜಿ, ಸೊಲ್ಲಾಪುರದ ಶ್ರೀಕಂಠ ಶಿವಾಚಾರ್ಯರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯರು, ಶಿವಗಂಗಿಯ ಡಾಕ್ಟರ್ ಮಲೆಯ ಶಾಂತಮುನಿ ಶಿವಾಚಾರ್ಯರು, ಬೆಂಗಳೂರಿನ ಡಾಕ್ಟರ್ ಮಹಾಂತಲಿಂಗ ಶಿವಾಚಾರ್ಯರು ಮತ್ತು ಶಹಾಪುರದ ಶ್ರೀ ಸುಗೂರೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು….