Dharwad: ನಶೆಯಲ್ಲಿದ್ದವನ ಬರ್ಬರ ಕೊಲೆ; ದೇವಸ್ಥಾನದ ಎದುರೇ ಹರಿದ ನೆತ್ತರು – Kannada News | Drunk Man Brutally Murdered by Brother and Brother in Law in Kalaghatagi
ಧಾರವಾಡ, ಡಿಸೆಂಬರ್ 24: ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮ ನಿವಾಸಿ ವಿಟ್ಠಲ್ ಕೂರಾಡಿ ಮೃತ ದುರ್ದೈವಿಯಾಗಿದ್ದು, ಇವರ ಸಂಬಂಧಿಕರೇ ಆರೋಪಿಗಳು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕಸ್ತೂರಿ ಜೊತೆ ವಿವಾಹವಾಗಿದ್ದ ವಿಟ್ಠಲ್, ಪೆಂಡಾಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ನಿತ್ಯವೂ ಕುಡಿದು ಬಂದು ಈತ ಜಗಳ ಮಾಡುತ್ತಿದ್ದ…