Karnataka CET 2026 Toppers: ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳದ್ದೇ ಮೇಲುಗೈ! – Kannada News
ಕೆಸಿಇಟಿ ಫಲಿತಾಂಶ ಟಾಪರ್‌ಗಳ ಪಟ್ಟಿ ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಫಲಿತಾಂಶದ ಜೊತೆಯಲ್ಲೇ ರಾಜ್ಯದ ಅತ್ಯಂತ ಪೈಪೋಟಿಯುಕ್ತ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್ ಹಾಗೂ ವೆಟರ್ನರಿ (ಪಶುಸಂಗೋಪನೆ) ವಿಭಾಗದ ಟಾಪರ್‌ಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗಿದ್ದು, ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ತನಿಷಾ ಕಾರ್ತಿಕ್ ಸಾಧನೆ: ರಾಜ್ಯಾದ್ಯಂತ ತೀವ್ರ ಕುತೂಹಲ…