ಅಣ್ಣನ ಕಣ್ಣೆದುರೇ ತಮ್ಮ ಸಿಡಿಲಿಗೆ ಬಲಿ: ಮೃತದೇಹವನ್ನ ಹೆಗಲ ಮೇಲೆ ಹೊತ್ತು ತಂದ ಸಹೋದರ – Kannada News
ಗದಗ, ಜೂನ್ 05: ಅಣ್ಣನ ಕಣ್ಣೆದುರೇ ಸಿಡಿಲು (lightning) ಬಡಿದು ತಮ್ಮ ಸಾವನ್ನಪ್ಪಿದ (death) ದಾರುಣ ಘಟನೆಯೊಂದು ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ ನಡೆದಿದೆ. ಪ್ರಶಾಂತ್ ಹುಡೇದ(19) ಮೃತ ಯುವಕ. ಜಾನುವಾರು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದ್ದು, ತಮ್ಮನ ಶವವನ್ನು ಹೊತ್ತು ಅಣ್ಣ ಊರಿಗೆ ಬಂದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಗದಗ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರಿ ಮಳೆ…