ಜಿಎಸ್‌ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!
ಹುಬ್ಬಳ್ಳಿ, ಮಾರ್ಚ್ 30: ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡಿಸಿ ಭರತ್ ಹೆಗಡೆ ಜಿಎಸ್‌ಟಿ ಬಾಕಿ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆ ಲೋಕಾ (Lokayukta) ಬಲೆಗೆ ಬಿದ್ದಿದ್ದಾರೆ. ಅವರ ಈ ಅವ್ಯವಹಾರದ ಬಗ್ಗೆ ಪೆಟ್ರೋಲ್ ಬಂಕ್ ಮಾಲೀಕರೊಬ್ಬರು ದೂರು ನೀಡಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಭರತ್ ಹೆಗಡೆಯನ್ನು ಟ್ರ್ಯಾಪ್ ಮಾಡಿದ್ದಾರೆ. 60 ಲಕ್ಷ ರೂ. ಹಣಕ್ಕೆ ಬೇಡಿಕೆ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ವಿಭಾಗದ ಡೆಪ್ಯುಟಿ ಕಮಿಷನರ್ (DC) ಆಗಿರುವ ಭರತ್ ಹೆಗಡೆ, ರಾಜ್ಯದ…