ನೂತನ ಸಚಿವರಿಗೆ ಖಾತೆ ಹಂಚಿಕೆ:ಪ್ರಿಯಾಂಕ್ ಖರ್ಗೆಗೆ ಗೃಹ, ಇನ್ನುಳಿದ ಯಾರಿಗೆ ಯಾವ ಖಾತೆ? – Kannada News
ಬೆಂಗಳೂರು, (ಜೂನ್ 04): ಡಿಕೆ ಶಿವಕುಮಾರ್ (DK Shivakuamr) ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆ ಶಿವಕುಮಾರ್ ಜೊತೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವ ವಚನ ಸ್ವೀಕರಿಸಿದ್ದ 13 ನೂತನ ಸಚಿವರಿಗೆ ಇಲಾಖೆಗಳ (Portfolios) ಜವಾಬ್ದಾರಿ ನೀಡಲಾಗಿದೆ. ಈ ಪೈಕಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಣಕಾಸು ಇಲಾಖೆ, DPAR ಸೇರಿದಂತೆ ಇತರೆ ಕೆಲ ಖಾತೆಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದು, ಇನ್ನುಳಿದ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಇದರೊಂದಿಗೆ ಆಯಕಟ್ಟಿನ ಹಣಕಾಸು, ಜಲಸಂಪನ್ಮೂಲ, ಗೃಹ, ಲೋಕೋಪಯೋಗಿ, ಬೆಂಗಳೂರು ಅಭಿವೃದ್ದಿ…