ಪ್ರಯಾಣಿಕರೇ ಗಮನಿಸಿ: ರೈತರ ‘ವಿಧಾನಸೌಧ ಚಲೋ’ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ರಸ್ತೆ ಬಂದ್ ಭೀತಿ – Kannada News
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರುImage Credit source: tv9 ಬೆಂಗಳೂರು, ಜೂನ್ 4: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ವಿಮಾನ ಪ್ರಯಾಣಿಕರು ನಾಳೆ (ಶುಕ್ರವಾರ) ತೀವ್ರ ಜಾಗ್ರತೆ ವಹಿಸಬೇಕಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಐಎಡಿಬಿ (KIADB) ಭೂಸ್ವಾಧೀನ ಪ್ರಕ್ರಿಯೆ ಖಂಡಿಸಿ ರೈತರು ಹಮ್ಮಿಕೊಂಡಿರುವ ಬೃಹತ್ ‘ವಿಧಾನಸೌಧ ಚಲೋ’ ಪ್ರತಿಭಟನೆಯಿಂದಾಗಿ ನಾಳೆ ಇಡೀ ಏರ್ಪೋರ್ಟ್ ರಸ್ತೆ ಬಂದ್ ಆಗುವ ಅಥವಾ ಭಾರಿ ಪ್ರಮಾಣದಲ್ಲಿ ಸಂಚಾರ ದಟ್ಟಣೆ…