Headlines

nagaraj11081993

ಕಲಿಯುಗದ ‘ಶ್ರವಣ ಕುಮಾರ’; 90 ವರ್ಷದ ಅತ್ತೆಯನ್ನು ತಲೆ ಮೇಲೆ ಹೊತ್ತು 260 ಕಿ.ಮೀ ಪಾದಯಾತ್ರೆ ಮಾಡಿದ ಗಾಯಕಿ! – Kannada News

ಮಥುರಾ, ಜೂನ್ 4: ಇಂದಿನ ಆಧುನಿಕ ಯುಗದಲ್ಲಿ ಅತ್ತೆ-ಸೊಸೆಯರ ಸಂಬಂಧದ ಬಗ್ಗೆ ನೆಗೆಟಿವ್ ಸುದ್ದಿಗಳೇ ಹೆಚ್ಚಾಗಿ ಕೇಳಿಬರುವಾಗ ಹರಿಯಾಣದ ಪ್ರಸಿದ್ಧ ಜಾನಪದ ಗಾಯಕಿ ಕಾಜಲ್ ಚೌಧರಿ (Kajal Chaudhary) ಅವರು ಇಡೀ ಸಮಾಜಕ್ಕೇ ಮಾದರಿಯಾಗುವಂತಹ ಕೆಲಸ ಮಾಡಿ ಎಲ್ಲರ ಮನ ಗೆದ್ದಿದ್ದಾರೆ. ನಡೆಯಲು ಸಾಧ್ಯವಾಗದ ತಮ್ಮ 90 ವರ್ಷದ ಅತ್ತೆಯನ್ನು ವಿಶೇಷವಾಗಿ ಸಿದ್ಧಪಡಿಸಿದ ಪ್ಲಾಸ್ಟಿಕ್ ಬುಟ್ಟಿಯಲ್ಲಿ ಕೂರಿಸಿಕೊಂಡು, ಆ ಬುಟ್ಟಿಯನ್ನು ತಮ್ಮ ತಲೆಯ ಮೇಲೆ ಹೊತ್ತುಕೊಂಡು ಬರೋಬ್ಬರಿ 260 ಕಿಲೋಮೀಟರ್ ದೂರದ ಪವಿತ್ರ ‘ಬ್ರಜ್ ಪರಿಕ್ರಮ’ (Brij…

Read More

ಖ್ಯಾತ ನಿರ್ಮಾಪಕ, ಸಿಬಿಎಫ್‌ಸಿ ಮಾಜಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ ನಿಧನ – Kannada News

ಬಾಲಿವುಡ್‌ನ ಪ್ರಸಿದ್ಧ ಚಲನಚಿತ್ರ ನಿರ್ಮಾಪಕ ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (CBFC) ಮಾಜಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ (76) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಹಿಂದಿ ಚಿತ್ರರಂಗದಲ್ಲಿ ದಶಕಗಳ ಕಾಲ ಸಕ್ರಿಯರಾಗಿದ್ದ ಪಹ್ಲಾಜ್ ನಿಹಲಾನಿ (Pahlaj Nihalani) ಅವರು ಪತ್ನಿ ನೀತಾ ಹಾಗೂ ವಿಶಾಲ್, ದೀಪೇಶ್, ಚಿರಾಗ್ ಎಂಬ ಮೂವರು ಪುತ್ರರನ್ನು ಅಗಲಿದ್ದಾರೆ. ಹಿಂದಿ ಚಿತ್ರರಂಗದ ಪ್ರಮುಖ ನಿರ್ಮಾಪಕರಲ್ಲಿ ಒಬ್ಬರಾಗಿದ್ದ ನಿಹಲಾನಿ…

Read More

Peddi Movie review: ‘ಪೆದ್ದಿ’: ರಾಮ್ ಚರಣ್ ಸಿಕ್ಸರ್, ನಿರ್ದೇಶಕ ರನೌಟ್ – Kannada News

ಬೆಟ್ಟಗುಡ್ಡಗಳ ಬುಡದಲ್ಲಿರುವ ಒಂದು ಹೆಸರೇ ಇಲ್ಲದ ಊರು, ಆ ಊರಿನ ಜನರಿಗೆ ‘ಕೂಲಿ’ ಎಂದು ಬಿಟ್ಟರೆ ಬೇರೆ ಗುರುತು ಇಲ್ಲ. ಆ ಊರಿಗೆ ಆ ಊರಿನ ಜನ ಬಿಟ್ಟರೆ ಬೇರೆ ಯಾರೂ ಬರುವುದೂ ಇಲ್ಲ, ಬರಲು ಸೌಕರ್ಯವೂ ಇಲ್ಲ. ಊರಿನ ಬದಿಯಲ್ಲೇ ಒಂದು ರೈಲು ಹಳಿ ಹಾದಿ ಹೋಗಿದೆ, ಆದರೆ ಒಮ್ಮೆಯೂ ಆ ರೈಲು ನಿಲ್ಲುವುದಿಲ್ಲ. ಯಾವ ಸೌಕರ್ಯವೂ ಇಲ್ಲದ ಊರಿನ ಜನರಿಗೆ ಶಿಕ್ಷಣ, ಆರೋಗ್ಯ ಎಂಬುದು ಕನಸಷ್ಟೆ. ಆ ಊರಿನ ಯುವಕ ‘ಪೆದ್ದಿ’ ಬೆಟ್ಟ, ಗುಡ್ಡ…

Read More

‘ಪೆದ್ದಿ’ ರಿಲೀಸ್, ಮಗನ ಸಿನಿಮಾ ಬಗ್ಗೆ ಚಿರಂಜೀವಿಗೆ ಅದೆಷ್ಟು ಕಾಳಜಿ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಇಂದು (ಜೂನ್ 4) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಸ್ವತಃ ರಾಮ್ ಚರಣ್ ಅವರಿಗೆ ಭಾರಿ ನಿರೀಕ್ಷೆಗಳಿವೆ. ‘ಆರ್​​ಆರ್​​ಆರ್’ ಬಳಿಕ ರಾಮ್ ಚರಣ್ ನಟಿಸಿರುವ ಎರಡು ಸಿನಿಮಾಗಳು ಒಂದರ ಹಿಂದೊಂದರಂತೆ ಸೋತಿವೆ. ಹಾಗಾಗಿ ‘ಪೆದ್ದಿ’ ಮೂಲಕ ಗೆಲ್ಲಲೇ ಬೇಕಾದ ಅನಿವಾರ್ಯತೆ ರಾಮ್ ಚರಣ್​​ಗೆ ಇದೆ. ಇದೇ ಕಾರಣಕ್ಕೆ ರಾಮ್ ಚರಣ್ ತಂದೆ ಮೆಗಾಸ್ಟಾರ್ ಚಿರಂಜೀವಿ ಸಹ ‘ಪೆದ್ದಿ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ, ಕುತೂಹಲಗಳನ್ನು ಇರಿಸಿಕೊಂಡಿದ್ದಾರೆ. ಸಿನಿಮಾದ…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಬೆಂಗಳೂರಿಗೆ ಬಂದೇ ಬಿಡ್ತು ಮೊದಲ ‘ಬ್ಲೂ ಲೈನ್’ ರೈಲು – Kannada News

ಬೆಂಗಳೂರು, ಜೂನ್​ 04: ಬ್ಲೂ ಲೈನ್ (Blue Line Metro) ಬೆಂಗಳೂರಿಗರ ಬಹುನಿರೀಕ್ಷಿತ ನಮ್ಮ ಮೆಟ್ರೋ ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​ಸಿಎಲ್​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬೆನ್ನಲ್ಲೇ ಕೆಂಪೇಗೌಡ ಏರ್​ಪೋರ್ಟ್ (Kempegowda International Airport)​​ ಮಾರ್ಗಕ್ಕೆ ಮೊದಲ ರೈಲು ಬಂದಿದೆ. ಇಂದು ಬೆಳಿಗ್ಗೆ ಬೈಯಪ್ಪನಹಳ್ಳಿ ಡಿಪೋಗೆ ಟ್ರೈನ್ ಸೆಟ್​ ತಲುಪಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್ ನೀಡಿದೆ. ಮುಖ್ಯಾಂಶಗಳು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್​ ಬ್ಲೂ ಲೈನ್ ಮೆಟ್ರೋ…

Read More

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು – Kannada News

ತುಮಕೂರು, ಜೂನ್​ 04: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಪ್ರಧಾನಿ ಮೋದಿಯೊಂದಿಗೆ ವೆನಿಜುವೆಲಾ ಅಧ್ಯಕ್ಷೆ ಮಾತುಕತೆ; ಪ್ರಸ್ತಾಪಿತ ಇಂಧನ ಒಪ್ಪಂದದಿಂದ ಭಾರತಕ್ಕೇನು ಲಾಭ? – Kannada News

ಡೆಲ್ಸಿ ರೊಡ್ರಿಗಸ್, ನರೇಂದ್ರ ಮೋದಿ ನವದೆಹಲಿ, ಜೂನ್ 4: ಭಾರತಕ್ಕೆ ಐದು ದಿನಗಳ ಪ್ರವಾಸಕ್ಕೆ ಬಂದಿರುವ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ (Delcy Rodriguez) ಅವರು ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇಂಧನ, ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರದಲ್ಲಿ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧ ಗಟ್ಟಿಗೊಳಿಸುವ ಇರಾದೆಯೊಂದಿಗೆ ಮಾತುಕತೆಗಳು ನಡೆದಿವೆ. ಡೆಲ್ಸಿ ಅವರು ನಿನ್ನೆ ಭಾರತಕ್ಕೆ ಆಗಮಿಸಿದ್ದು, ಜೂನ್ 7 ರವರೆಗೆ ಇಲ್ಲಿರಲಿದ್ದಾರೆ. ವಿಶ್ವದಲ್ಲೇ ಅತಿ…

Read More

ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಿದ ಡಿಕೆ ಶಿವಕುಮಾರ್, ರೌಡಿ ನಿಗ್ರಹ ತಂಡ ರಚನೆಗೆ ಆದೇಶ – Kannada News

ಬೆಂಗಳೂರು, (ಜೂನ್ 04): ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಆರೋಪಗಳು ಕೇಳಿಬರುತ್ತಿವೆ. ಪುಡಿ ರೌಡಿಗಳ ಅಟ್ಟಹಾಸ, ಡ್ರಗ್ಸ್, ಗಾಂಜಾ, ಜೂಜಾಟ, ಅಕ್ರಮ ಮರಳು ದಂಧೆ, ಮಟ್ಕಾ ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚಿತ್ತಿವೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಕೊಲೆ, ಸುಲಿಗೆ, ಡ್ರಗ್ಸ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದೀಗ ಇವುಗಳಿಗೆ ಕಡಿವಾಣ ಹಾಕಲು ನೂತನ ಸಿಎಂ ಡಿಕೆ ಶಿವಕುಮಾರ್  (DK Shivakumar) ಸಮರ ಸಾರಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಇಂದು (ಜೂನ್ 04) ವಿಧಾನಸೌಧದಲ್ಲಿ ನಡೆದ ಮೊದಲ…

Read More

Donation Rules: ವಸ್ತ್ರದಾನ ಮಾಡುವ ಮುನ್ನ ಈ ನಿಯಮಗಳು ತಿಳಿದಿರಲಿ; ಇಲ್ಲದಿದ್ದರೆ ಪುಣ್ಯದ ಬದಲು ದೋಷ ಗ್ಯಾರಂಟಿ! – Kannada News

ಹಿಂದೂ ಧಾರ್ಮಿಕ ಗ್ರಂಥಗಳು ಮತ್ತು ಸನಾತನ ಸಂಪ್ರದಾಯದಲ್ಲಿ ಮಾನವನ ಪ್ರತಿಯೊಂದು ದೈನಂದಿನ ಕಾರ್ಯಕ್ಕೂ ಕೆಲವು ನಿರ್ದಿಷ್ಟ ನಿಯಮಗಳು ಮತ್ತು ಆಚರಣೆಗಳನ್ನು ಸೂಚಿಸಲಾಗಿದೆ. ಅವುಗಳಲ್ಲಿ ‘ದಾನ’ ಪ್ರಕ್ರಿಯೆಯೂ ಒಂದು. ದಾನ ಮಾಡುವುದನ್ನು ಅತ್ಯಂತ ದೊಡ್ಡ ಪುಣ್ಯ ಕಾರ್ಯವೆಂದು ಪರಿಗಣಿಸಲಾಗಿದ್ದರೂ, ಅದನ್ನು ಶಾಸ್ತ್ರೋಕ್ತವಾಗಿ ಮತ್ತು ಸರಿಯಾದ ರೀತಿಯಲ್ಲಿ ಮಾಡದಿದ್ದರೆ ಅಪೇಕ್ಷಿತ ಫಲಿತಾಂಶಗಳು ಸಿಗುವುದಿಲ್ಲ ಎಂದು ಆಧ್ಯಾತ್ಮಿಕ ಗ್ರಂಥಗಳು ಹೇಳುತ್ತವೆ. ಅದಕ್ಕಾಗಿಯೇ ಬಟ್ಟೆ ಅಥವಾ ಇತರ ವಸ್ತುಗಳನ್ನು ದಾನ ಮಾಡುವ ಮೊದಲು ಕೆಲವು ಪ್ರಮುಖ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಅತ್ಯಗತ್ಯ ಎಂದು ವಿದ್ವಾಂಸರು…

Read More

ಜಿಲ್ಲೆಗಳ ಪ್ರತಿ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ವರದಿ ಕೊಡಿ: ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ – Kannada News

ಬೆಂಗಳೂರು, ಜೂನ್ 4: ಎಲ್ಲಾ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು 25 ದಿನಗಳಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಗಳ ಪ್ರತಿಯೊಂದು ಸಮಸ್ಯೆಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಜಿಲ್ಲಾ ಉಸ್ತುವಾರಿ ಸಚಿವರು ಆ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗುವುದು. ಎಲ್ಲಾ ಜಿಲ್ಲಾ ಕಾರ್ಯದರ್ಶಿಗಳು ಇಲಾಖೆಗೆ ಸಂಬಂಧಿಸಿದಂತೆ ಬಾಕಿ ಇರುವ ಕೆಲಸಗಳ ಪಟ್ಟಿಯನ್ನು ಒದಗಿಸಬೇಕು. ಇದಲ್ಲದೆ, 25 ದಿನಗಳೊಳಗೆ, ಬಾಕಿ ಕೆಲಸಗಳ ಜೊತೆಗೆ,…

Read More