ಕಲಿಯುಗದ ‘ಶ್ರವಣ ಕುಮಾರ’; 90 ವರ್ಷದ ಅತ್ತೆಯನ್ನು ತಲೆ ಮೇಲೆ ಹೊತ್ತು 260 ಕಿ.ಮೀ ಪಾದಯಾತ್ರೆ ಮಾಡಿದ ಗಾಯಕಿ! – Kannada News
ಮಥುರಾ, ಜೂನ್ 4: ಇಂದಿನ ಆಧುನಿಕ ಯುಗದಲ್ಲಿ ಅತ್ತೆ-ಸೊಸೆಯರ ಸಂಬಂಧದ ಬಗ್ಗೆ ನೆಗೆಟಿವ್ ಸುದ್ದಿಗಳೇ ಹೆಚ್ಚಾಗಿ ಕೇಳಿಬರುವಾಗ ಹರಿಯಾಣದ ಪ್ರಸಿದ್ಧ ಜಾನಪದ ಗಾಯಕಿ ಕಾಜಲ್ ಚೌಧರಿ (Kajal Chaudhary) ಅವರು ಇಡೀ ಸಮಾಜಕ್ಕೇ ಮಾದರಿಯಾಗುವಂತಹ ಕೆಲಸ ಮಾಡಿ ಎಲ್ಲರ ಮನ ಗೆದ್ದಿದ್ದಾರೆ. ನಡೆಯಲು ಸಾಧ್ಯವಾಗದ ತಮ್ಮ 90 ವರ್ಷದ ಅತ್ತೆಯನ್ನು ವಿಶೇಷವಾಗಿ ಸಿದ್ಧಪಡಿಸಿದ ಪ್ಲಾಸ್ಟಿಕ್ ಬುಟ್ಟಿಯಲ್ಲಿ ಕೂರಿಸಿಕೊಂಡು, ಆ ಬುಟ್ಟಿಯನ್ನು ತಮ್ಮ ತಲೆಯ ಮೇಲೆ ಹೊತ್ತುಕೊಂಡು ಬರೋಬ್ಬರಿ 260 ಕಿಲೋಮೀಟರ್ ದೂರದ ಪವಿತ್ರ ‘ಬ್ರಜ್ ಪರಿಕ್ರಮ’ (Brij…