All posts by nagaraj11081993

Monsoon 2026: ಭಾರತಕ್ಕೆ ಮುಂಗಾರು ಪ್ರವೇಶ; ಕೇರಳದಲ್ಲಿ ಆರೆಂಜ್ ಅಲರ್ಟ್ ಘೋಷಣೆ – Kannada News

ನವದೆಹಲಿ, ಜೂನ್ 4: ಮೂರು ದಿನ ತಡವಾಗಿ ಕೊನೆಗೂ ಭಾರತಕ್ಕೆ ಮುಂಗಾರು (Monsoon) ಪ್ರವೇಶವಾಗಿದೆ. ನೈಋತ್ಯ ಮುಂಗಾರು ಮಾರುತಗಳು ಇಂದು ಕೇರಳವನ್ನು ಅಧಿಕೃತವಾಗಿ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಿಸಿದೆ. ಜೂನ್ ಮೊದಲ ವಾರದಲ್ಲೇ ಮುಂಗಾರು ನಿಗದಿತ ಸಮಯಕ್ಕೆ ಸರಿಯಾಗಿ ಕೇರಳ ಕರಾವಳಿಯನ್ನು ತಲುಪಿದ್ದು, ದೇಶಾದ್ಯಂತ ಕೃಷಿ ಚಟುವಟಿಕೆಗಳಿಗೆ ಚಾಲನೆ ಸಿಕ್ಕಂತಾಗಿದೆ. ಮುಂಗಾರು ಆಗಮನದ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯಾದ್ಯಂತ ‘ಆರೆಂಜ್ ಅಲರ್ಟ್’ (Orange Alert) ಘೋಷಿಸಿದೆ.

ಭಾರತದ ಒಟ್ಟಾರೆ ಮಳೆಯ ಪ್ರಮಾಣದಲ್ಲಿ ಶೇ. 70ಕ್ಕಿಂತ ಹೆಚ್ಚು ಮಳೆ ಈ ನೈಋತ್ಯ ಮುಂಗಾರಿನಿಂದಲೇ ಸಿಗುತ್ತದೆ. ದೇಶದ ಅರ್ಧಕ್ಕಿಂತ ಹೆಚ್ಚು ಕೃಷಿ ಭೂಮಿ ಇಂದಿಗೂ ಮಳೆಯನ್ನೇ ಆಶ್ರಯಿಸಿರುವುದರಿಂದ, ಮುಂಗಾರು ಸಮಯಕ್ಕೆ ಸರಿಯಾಗಿ ಆರಂಭವಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಇದು ದೇಶದ ಜಲಾಶಯಗಳ ನೀರಿನ ಮಟ್ಟವನ್ನು ಹೆಚ್ಚಿಸುವುದಲ್ಲದೆ, ಹಣದುಬ್ಬರ ನಿಯಂತ್ರಣ ಮತ್ತು ಆರ್ಥಿಕ ಬೆಳವಣಿಗೆಗೆ ಪ್ರಮುಖ ಕೊಡುಗೆ ನೀಡಲಿದೆ. ಇದೀಗ ಮುಂಗಾರು ಮಾರುತಗಳು ಯಾವುದೇ ಅಡೆತಡೆಯಿಲ್ಲದೆ ಕೇರಳವನ್ನು ಪ್ರವೇಶಿಸಿದ್ದು, ಮುಂಬರುವ ದಿನಗಳಲ್ಲಿ ದಕ್ಷಿಣ ಭಾರತದಾದ್ಯಂತ ಮಳೆಯ ಪ್ರಮಾಣ ತೀವ್ರಗೊಳ್ಳಲಿದೆ.

ಇದನ್ನೂ ಓದಿ: Monsoon 2026: ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಮಳೆಗಾಲ ಯಾವಾಗ ಶುರು?

ಕರ್ನಾಟಕಕ್ಕೆ ಮುಂಗಾರು ಪ್ರವೇಶ ಯಾವಾಗ?:

ಕೇರಳಕ್ಕೆ ಮುಂಗಾರು ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಮಾರುತಗಳು ಕರ್ನಾಟಕದ ಕರಾವಳಿ ಭಾಗವನ್ನು ತಲುಪಲಿವೆ. ಸಾಮಾನ್ಯವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಿದ 2 ರಿಂದ 3 ದಿನಗಳಲ್ಲಿ (ಅಂದರೆ ಜೂನ್ ಮೊದಲ ವಾರದ ಅಂತ್ಯದೊಳಗೆ) ಮುಂಗಾರು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳನ್ನು ಪ್ರವೇಶಿಸುತ್ತದೆ. ಜೂನ್ ಎರಡನೇ ವಾರದ ಆರಂಭದ ವೇಳೆಗೆ ಮುಂಗಾರು ಮಾರುತಗಳು ಇಡೀ ಕರ್ನಾಟಕವನ್ನು ಆವರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಇದನ್ನೂ ಓದಿ: Monsoon 2026: ಕೇರಳದಿಂದಲೇ ಮಾನ್ಸೂನ್ ಭಾರತವನ್ನು ಪ್ರವೇಶಿಸುವುದೇಕೆ?

ಮುಂಗಾರು ಮಾರುತಗಳು ಕರ್ನಾಟಕದ ಕರಾವಳಿ ಭಾಗವಾದ ಮಂಗಳೂರನ್ನು ಈಗಾಗಲೇ ಸ್ಪರ್ಶಿಸಿರುವುದರಿಂದ, ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ತೀವ್ರಗೊಳ್ಳಲಿದೆ. ಮುಂಗಾರು ಮಾರುತಗಳು ಕರ್ನಾಟಕದ ಕರಾವಳಿ ಭಾಗವಾದ ಮಂಗಳೂರನ್ನು ಈಗಾಗಲೇ ಸ್ಪರ್ಶಿಸಿರುವುದರಿಂದ, ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ತೀವ್ರಗೊಳ್ಳಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

DRDO Recruitment 2026: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ; ಪದವೀಧರರು ಅರ್ಹರು! – Kannada News

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನImage Credit source: Pinterest

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (RAC) 2026ನೇ ಸಾಲಿನ ವಿಜ್ಞಾನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 33 ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ?

DRDO RAC ಪ್ರಕಟಿಸಿರುವ ಅಧಿಸೂಚನೆಯ ಪ್ರಕಾರ, Scientist C, Scientist D ಮತ್ತು Scientist E ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಒಟ್ಟು 33 ಹುದ್ದೆಗಳಲ್ಲಿ 20 Scientist-C, 11 Scientist-D ಮತ್ತು 2 Scientist-E ಹುದ್ದೆಗಳು ಸೇರಿವೆ. ಈ ಹುದ್ದೆಗಳು ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮೆಕ್ಯಾನಿಕಲ್, ಏರೋಸ್ಪೇಸ್, ಕೆಮಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ತಾಂತ್ರಿಕ ವಿಭಾಗಗಳಿಗೆ ಸಂಬಂಧಿಸಿವೆ.

ಶೈಕ್ಷಣಿಕ ಅರ್ಹತೆ ಏನು?

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ BE/B.Tech ಅಥವಾ ಪ್ರಥಮ ದರ್ಜೆಯ M.Sc. ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 60 ಪ್ರತಿಶತ ಅಂಕಗಳು ಅಥವಾ ಸಮಾನ ಸಿಜಿಪಿಎ ಹೊಂದಿರಬೇಕು.

ಅನುಭವದ ಮಾನದಂಡ:

ಈ ಹುದ್ದೆಗಳಿಗೆ ಅನುಭವವೂ ಕಡ್ಡಾಯವಾಗಿದೆ. Scientist-C ಹುದ್ದೆಗೆ ಕನಿಷ್ಠ 3 ವರ್ಷ, Scientist-D ಹುದ್ದೆಗೆ 7 ವರ್ಷ ಮತ್ತು Scientist-E ಹುದ್ದೆಗೆ 11 ವರ್ಷಗಳ ವೃತ್ತಿಪರ ಅನುಭವ ಅಗತ್ಯವಿದೆ. ಅನುಭವವು ಸಂಬಂಧಿತ ಕ್ಷೇತ್ರದಲ್ಲಿ ಪಡೆದಿರಬೇಕು.

ವಯೋಮಿತಿ ಎಷ್ಟು?

Scientist-C ಹುದ್ದೆಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. Scientist-D ಮತ್ತು Scientist-E ಹುದ್ದೆಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ಇದೆ. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಲಭ್ಯವಿದೆ.

ಅರ್ಜಿ ಶುಲ್ಕ ವಿವರ:

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್ ವರ್ಗದ ಪುರುಷ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳು, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಅಭ್ಯರ್ಥಿಗಳ ಅರ್ಜಿಗಳನ್ನು ಮೊದಲು ಪರಿಶೀಲಿಸಲಾಗುತ್ತದೆ. ನಂತರ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಸಂದರ್ಶನದಲ್ಲಿನ ಪ್ರದರ್ಶನದ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ.

ಇದನ್ನೂ ಓದಿ: Kerala: ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸ; ಪರೀಕ್ಷೆ ಬರೆದ 20 ವರ್ಷಗಳ ನಂತರ ಬಂದ ನೇಮಕಾತಿ ಪತ್ರ!

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು DRDO RACನ ಅಧಿಕೃತ ವೆಬ್‌ಸೈಟ್ rac.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಬಹುದು.

ಪ್ರಮುಖ ದಿನಾಂಕ:

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, 2026ರ ಜೂನ್ 19 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ಕ್ಷಣದವರೆಗೆ ಕಾಯದೆ ಶೀಘ್ರವೇ ಅರ್ಜಿ ಸಲ್ಲಿಸುವುದು ಒಳಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಅಧಿಕಾರಿಗಳ ಜತೆ ಸಿಎಂ ಡಿಕೆ ಶಿವಕುಮಾರ್ ಸಭೆ: ಯೋಜನೆಗಳ ಜಾರಿ, ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಖಡಕ್ ಸೂಚನೆ – Kannada News

ಬೆಂಗಳೂರು, ಜೂನ್ 4: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ (DK Shivakumar) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಹತ್ವದ ಜಂಟಿ ಸಭೆ ನಡೆಸಿದ ಅವರು, ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 6 ಪ್ರಮುಖ ಯೋಜನೆಗಳನ್ನು ತಕ್ಷಣವೇ ಜಾರಿಗೆ ತರುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು ಎಂದಿರುವ ಸಿಎಂ, ಯಾವುದೇ ಕಾರಣಕ್ಕೂ ಆಡಳಿತ ಹಾದಿ ತಪ್ಪಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಮುಖ್ಯಾಂಶಗಳು

  • 6 ಪ್ರಮುಖ ಯೋಜನೆಗಳನ್ನು ತಕ್ಷಣ ಜಾರಿಗೆ ತರಲು ಸಿಎಂ ಆದೇಶ.
  • ಸಿಎಸ್ಆರ್ (CSR) ಫಂಡ್ ದುರ್ಬಳಕೆ ಮತ್ತು ಭ್ರಷ್ಟಾಚಾರಕ್ಕೆ ತಕ್ಷಣವೇ ಕಡಿವಾಣ ಹಾಕಲು ಸೂಚನೆ.
  • ರೌಡಿಗಳ ಹೆಡೆಮುರಿ ಕಟ್ಟಿ, ಜೂಜು, ಡ್ರಗ್ಸ್ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಗೆ ತಡೆಯೊಡ್ಡಲು ಪೊಲೀಸರಿಗೆ ಸೂಚನೆ.

ಭ್ರಷ್ಟಾಚಾರಕ್ಕೆ ಕಡಿವಾಣ, ಅಧಿಕಾರಿಗಳಿಗೆ ಸಿಎಂ ಕಿವಿಮಾತು

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ‘ರಾಜ್ಯದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿ ದುರ್ಬಳಕೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ತಕ್ಷಣವೇ ಬ್ರೇಕ್ ಹಾಕಿ, ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು’ ಎಂದು ಗುಡುಗಿದ್ದಾರೆ. ಪ್ರತಿಯೊಬ್ಬ ಅಧಿಕಾರಿಯೂ ನಿಮ್ಮ ಆತ್ಮಸಾಕ್ಷಿ ಒಪ್ಪುವ ಹಾಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಬೇಕು. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ ಜನ ಮೆಚ್ಚುವಂತೆ ಕೆಲಸ ಮಾಡುವ ಮೂಲಕ ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ, ನೀವೂ ಉತ್ತಮ ಹೆಸರು ಗಳಿಸಿ ಎಂದು ಕರೆ ನೀಡಿದ್ದಾರೆ.

ರೌಡಿಗಳ ಹೆಡೆಮುರಿ ಕಟ್ಟಲು ಐಪಿಎಸ್ ಅಧಿಕಾರಿಗಳಿಗೆ ಸೂಚನೆ

ಇದೇ ವೇಳೆ, ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಪೊಲೀಸ್ ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿದ ಸಿಎಂ, ‘ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೊಡಬಾರದು’ ಎಂದಿದ್ದಾರೆ. ರೌಡಿಗಳ ಹೆಡೆಮುರಿ ಕಟ್ಟಿ, ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರುಸಹಿತ ಕಿತ್ತೊಗೆಯಬೇಕು. ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ ಮುಕ್ತವಾಗಿ ಕೆಲಸ ಮಾಡಿ ಎಂದು ಐಪಿಎಸ್ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ.

ಇದನ್ನೂ ಓದಿ: ವಿಶೇಷ ಪೂಜೆ ಸಲ್ಲಿಸಿ ಸಿಎಂ ಕುರ್ಚಿಯಲ್ಲಿ ಕೂತ ಸಿಎಂ ಡಿಕೆ ಶಿವಕುಮಾರ್​

ಸಿಎಂ ಅವರ ಈ ಮೊದಲ ಸಭೆಯು ಇಡೀ ಆಡಳಿತ ಮತ್ತು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:42 pm, Thu, 4 June 26

Source link

ವಿದೇಶಿ ಹೂಡಿಕೆದಾರರನ್ನು ಮರಳಿ ಆಕರ್ಷಿಸಲು ಸರ್ಕಾರದ ಯತ್ನ; ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ ಅನುಮೋದನೆ – Kannada News

ನವದೆಹಲಿ, ಜೂನ್ 4: ಭಾರತದಿಂದ ವಿದೇಶಿ ಹೂಡಿಕೆದಾರರು (FPI) ಹೊರಹೋಗುತ್ತಿರುವುದನ್ನು ತಡೆಯಲು ಮತ್ತು ಅವರನ್ನು ಮತ್ತೆ ಭಾರತದ ಮಾರುಕಟ್ಟೆಗೆ ಆಕರ್ಷಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ (Ordinance) ಸರ್ಕಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ (union cabinet meeting) ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಸರ್ಕಾರದ ಭದ್ರತಾ ಪತ್ರಗಳಲ್ಲಿ (Government Securities) ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರು ಮಾಡುವ ಹೂಡಿಕೆಯ ಮೇಲೆ ‘ಬಂಡವಾಳ ಲಾಭದ ತೆರಿಗೆಯನ್ನು’ (Capital Gains Tax) ತೆಗೆದುಹಾಕಲು ಸರ್ಕಾರ ಚಿಂತನೆ ನಡೆಸಿದೆ. 2026ರ ಮೊದಲ ಐದು ತಿಂಗಳಲ್ಲಿ ವಿದೇಶಿ ಹೂಡಿಕೆದಾರರು ಸುಮಾರು 3.08 ಲಕ್ಷ ಕೋಟಿ ರೂಪಾಯಿ ಮೌಲ್ಯದ ಭಾರತೀಯ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಇದು 2025ರ ಸಂಪೂರ್ಣ ವರ್ಷದ ಹೊರಹರಿವಿಗಿಂತ (3.06 ಲಕ್ಷ ಕೋಟಿ ರೂ.) ಹೆಚ್ಚಾಗಿದೆ.

ಇದನ್ನೂ ಓದಿ: ಭಾರತದ ವಾಯುಸೇನಾ ಬಲದ ಕೊರತೆ ನೀಗಿಸಲಿರುವ 114 ರಫೇಲ್ ಯುದ್ಧವಿಮಾನಗಳು

ಪ್ರಸ್ತುತ, ವಿದೇಶಿ ಹೂಡಿಕೆದಾರರು 12 ತಿಂಗಳಿಗಿಂತ ಹೆಚ್ಚು ಕಾಲ ಹೊಂದಿರುವ ಷೇರುಗಳು ಮತ್ತು ಬಾಂಡ್‌ಗಳ ಮೇಲೆ 12.5% ಲಾಂಗ್-ಟರ್ಮ್ ಕ್ಯಾಪಿಟಲ್ ಗೇನ್ಸ್ (LTCG) ತೆರಿಗೆಯನ್ನು ಪಾವತಿಸುತ್ತಿದ್ದಾರೆ. ಅಲ್ಲದೆ, ಸರ್ಕಾರಿ ಬಾಂಡ್‌ಗಳ ಮೇಲಿನ ಬಡ್ಡಿಯ ಮೇಲೆ 20% ‘ವಿತ್‌ಹೋಲ್ಡಿಂಗ್ ಟ್ಯಾಕ್ಸ್’ (Withholding Tax) ವಿಧಿಸಲಾಗುತ್ತಿದೆ.

ಸರ್ಕಾರದಿಂದ ಏಕೆ ಈ ಹೆಜ್ಜೆ?

ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಂತಹ ಹಣಕಾಸು ಕೇಂದ್ರಗಳಿಗೆ ಹೋಲಿಸಿದರೆ ಭಾರತದ ಮಾರುಕಟ್ಟೆ ಕಡಿಮೆ ಆಕರ್ಷಕವಾಗಿ ಕಾಣುತ್ತಿದೆ. ಆ ದೇಶಗಳಲ್ಲಿ ಸಾಮಾನ್ಯವಾಗಿ ವಿದೇಶಿ ಹೂಡಿಕೆದಾರರ ಮೇಲೆ ಬಂಡವಾಳ ಲಾಭದ ತೆರಿಗೆ ಇರುವುದಿಲ್ಲ ಎನ್ನುವುದು ಒಂದು ಕಾರಣ ಇರಬಹುದು. ಹಾಗೆಯೇ, ರೂಪಾಯಿ ಮೌಲ್ಯ ಕುಸಿಯುತ್ತಿರುವುದು, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರದ ಏರಿಳಿತಗಳು ವಿದೇಶಿ ಹೂಡಿಕೆದಾರರು ಭಾರತದ ಮಾರುಕಟ್ಟೆಯಿಂದ ಹಿಂದೆ ಸರಿಯಲು ಪ್ರಮುಖ ಕಾರಣಗಳಾಗಿವೆ.

ಇದನ್ನೂ ಓದಿ: ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ

ತಜ್ಞರ ಪ್ರಕಾರ, ಕೇವಲ ತೆರಿಗೆ ವಿನಾಯಿತಿಯಿಂದ ಮಾತ್ರ ಹೂಡಿಕೆದಾರರು ಮರಳುವುದಿಲ್ಲ. ಭಾರತೀಯ ಕಂಪನಿಗಳ ಲಾಭಾಂಶ ಹೆಚ್ಚಾಗಬೇಕು ಮತ್ತು ದೇಶೀಯ ಮಾರುಕಟ್ಟೆ ಹೂಡಿಕೆದಾರರಿಗೆ ಲಾಭದಾಯಕವಾಗಿ ಕಾಣಿಸಬೇಕು. ಜೊತೆಗೆ, ತೈಲ ಬೆಲೆಗಳು ಸ್ಥಿರವಾದರೆ ಮತ್ತು ರೂಪಾಯಿಯ ಮೌಲ್ಯವು ಬಲಗೊಂಡರೆ ಮಾತ್ರ ವಿದೇಶಿ ಹೂಡಿಕೆಯು ಸುಸ್ಥಿರವಾಗಿ ಮರಳಿ ಬರಲು ಸಾಧ್ಯ ಎಂದು ವಿಶ್ಲೇಷಿಸಲಾಗಿದೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಸರ್ಕಾರವು ಈ ಸುಗ್ರೀವಾಜ್ಞೆಯ ಮೂಲಕ ಹೂಡಿಕೆದಾರರಿಗೆ ತೆರಿಗೆಯ ಹೊರೆಯಿಂದ ಸ್ವಲ್ಪ ರಿಲ್ಯಾಕ್ಸ್ ನೀಡುವ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿನ ಅವರ ವಿಶ್ವಾಸವನ್ನು ಮರಳಿ ಗಳಿಸಲು ಪ್ರಯತ್ನಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 2:15 pm, Thu, 4 June 26

Source link

ಮಂಗಳೂರು, ಕಾರವಾರ, ಗೋವಾ ಮತ್ತು ಮುಂಬೈ ಪ್ರಯಾಣಿಕರ ಗಮನಕ್ಕೆ: ಈ ರೈಲ್ವೆ ಮಾರ್ಗಕ್ಕೆ ಜೂ.15 ರಿಂದ ಹೊಸ ಮುಂಗಾರು ವೇಳಾಪಟ್ಟಿ – Kannada News

ಮಂಗಳೂರು, ಜೂ.4 : ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ಮಳೆಯ (Monsoon) ಅವಧಿಯಲ್ಲಿ ರೈಲುಗಳ ಸುರಕ್ಷಿತ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮಾರ್ಗದಲ್ಲಿ ಚಲಿಸುವ ರೈಲುಗಳಿಗಾಗಿ ವಿಶೇಷ ಮುಂಗಾರು ವೇಳಾಪಟ್ಟಿಯನ್ನು (Monsoon Time Table) ಪ್ರಕಟಿಸಲಾಗಿದೆ. ಈ ಹೊಸ ವೇಳಾಪಟ್ಟಿಯು ಜೂನ್ 15, 2026 ರಿಂದ ಜಾರಿಗೆ ಬರಲಿದ್ದು, ಅಕ್ಟೋಬರ್ 20, 2026 ರವರೆಗೆ ಜಾರಿಯಲ್ಲಿರಲಿದೆ.

ಪಶ್ಚಿಮ ಕರಾವಳಿ ಮತ್ತು ಕೊಂಕಣ ಭಾಗದಲ್ಲಿ ಮುಂಗಾರು ಮಳೆಯು ಅತ್ಯಂತ ಭೀಕರವಾಗಿರುತ್ತದೆ. ಈ ಅವಧಿಯಲ್ಲಿ ಗುಡ್ಡ ಕುಸಿತ, ಹಳಿಗಳ ಮೇಲೆ ನೀರು ನಿಲ್ಲುವುದು ಮತ್ತು ಮರಗಳು ಉರುಳುವಂತಹ ಘಟನೆಗಳು ಹೆಚ್ಚಾಗಿ ಸಂಭವಿಸುತ್ತವೆ. ಹೀಗಾಗಿ, ಯಾವುದೇ ರೀತಿಯ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡಲು ರೈಲುಗಳ ವೇಗವನ್ನು ನಿಯಂತ್ರಿಸಲಾಗುತ್ತದೆ. ಇದರ ಪರಿಣಾಮವಾಗಿ ರೈಲುಗಳ ಸಂಚಾರದ ಸಮಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತದೆ.

ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು

ಇಲ್ಲಿದೆ ನೋಡಿ ಪೋಸ್ಟ್​​:

ಮಂಗಳೂರು, ಕಾರವಾರ, ಗೋವಾ ಮತ್ತು ಮುಂಬೈ ಮಾರ್ಗವಾಗಿ ಸಂಚರಿಸುವ ಸಾವಿರಾರು ಪ್ರಯಾಣಿಕರ ಮೇಲೆ ಈ ವೇಳಾಪಟ್ಟಿ ಪ್ರಭಾವ ಬೀರಲಿದೆ. ಆದ್ದರಿಂದ ಜೂನ್ 15 ರ ನಂತರ ಕೊಂಕಣ ರೈಲ್ವೆ ಮಾರ್ಗದಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸಿರುವ ಅಥವಾ ಪ್ರಯಾಣ ಯೋಜಿಸುತ್ತಿರುವ ನಾಗರಿಕರು, ರೈಲು ನಿಲ್ದಾಣಕ್ಕೆ ಹೊರಡುವ ಮುನ್ನ ತಮ್ಮ ರೈಲಿನ ನವೀಕೃತ ಸಮಯವನ್ನು ಅಧಿಕೃತ ವೆಬ್‌ಸೈಟ್ ಅಥವಾ ಹೆಲ್ಪ್‌ಲೈನ್ ಮೂಲಕ ಪರಿಶೀಲಿಸಿಕೊಳ್ಳುವಂತೆ ಕೊಂಕಣ ರೈಲ್ವೆ ಇಲಾಖೆ ವಿನಂತಿಸಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ: ದಾಳಿ ವೇಳೆ ಕಂಪನಿಯ ಸರ್ವರ್​​ ಡೌನ್​​ ಮಾಡಿ ಕಳ್ಳಾಟ? – Kannada News

ಬೆಳಗಾವಿ, ಜೂನ್​ 04: ಶಿವಂ ಅಸೋಸಿಯೇಟ್ಸ್ ಸಂಸ್ಥೆಯಿಂದ ಸಾವಿರಾರು ಕೋಟಿ ಅಕ್ರಮ ಸಂಬಂಧ ತನಿಖೆ ನಡೆಯುತ್ತಿರುವ ನಡುವೆಯೇ ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಭಾಗ್ಯ ನಗರದಲ್ಲಿರುವ ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್​​ ಲಿಮಿಟೆಡ್​​ ಕಂಪನಿ ಮೇಲೆ ಎಸಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೇಡ್​​ ಕುರಿತು ಮಾಹಿತಿ ಸಿಗುತ್ತಿದ್ದಂತೆ ಆನ್ ಲೈನ್ ಮೂಲಕ ವ್ಯವಹಾರ ನಡೆಸುತ್ತಿದ್ದ ಕಂಪನಿಯ ವೆಬ್​​ಸೈಟ್​​ ಸ್ಥಗಿತವಾಗಿದೆ. ಹೀಗಾಗಿ ಕಂಪನಿ ಮಾಲಿಕ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸಲು ಮುಂದಾದರಾ ಎಂಬ ಅನುಮಾನವೂ ವ್ಯಕ್ತವಾಗಿದೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ವಂಚನೆ ಪ್ರಕರಣ
  • ಆದಿತ್ಯರಾಜ ಕ್ಯಾಪಿಟಲ್ ಪ್ರೈ.​​ ಲಿಮಿಟೆಡ್​​ ಕಂಪನಿ ಮೇಲೆ ದಾಳಿ
  • ರೇಡಿ ಮಾಹಿತಿ ಸಿಗುತ್ತಿದ್ದಂತೆಯೇ ಕಂಪನಿಯ ಸರ್ವರ್​​ ಡೌನ್​!

ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್​​ ಲಿಮಿಟೆಡ್​​ ಕಂಪನಿಯನ್ನು ಮಹಾರಾಷ್ಟ್ರ ಮೂಲದ ಬಲರಾಮ್ ಮಾನೆ ಎಂಬಾತ ನಡೆಸುತ್ತಿದ್ದು, ಒಟ್ಟು 7 ಶಾಖೆಗಳನ್ನು ಇದು ಹೊಂದಿದೆ ಎನ್ನಲಾಗಿದೆ. ಕಳೆದ 8 ವರ್ಷಗಳಿಂದ ಬೆಳಗಾವಿಯಲ್ಲಿ ಕಂಪನಿ ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರಿಗಳ ದಾಳಿಗೂ ಮುನ್ನ ಮೆಂಟೆನನ್ಸ್ ನೆಪ ಹೇಳಿ ಸರ್ವರ್ ಡೌನ್ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್ ನೇತೃತ್ವದಲ್ಲಿ ದಾಳಿ ವೇಳೆ ನೂರಾರು ಕೋಟಿ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದ್ದು, ಆನ್ ಲೈನ್ ಮೂಲಕ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಒಂದು ಲಕ್ಷಕ್ಕೆ ತಿಂಗಳಿಗೆ 3ಸಾವಿರ ಹಣ ಬಡ್ಡಿ ಕೊಡುವುದಾಗಿ ಆಮಿಷವೊಡ್ಡಿ ಸಾವಿರಾರು ಜನರಿಂದ ಹಣ ಠೇವಣಿ ಇರಿಸಿಕೊಂಡು ವಂಚನೆ ಆರೋಪ ಕೇಳಿಬಂದಿದೆ. ಹೀಗಾಗಿ ದಾಖಲೆ ಸೇರಿದಂತೆ ಹಣದ ಮೂಲದ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣ, ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಶುರುವಾಯ್ತು ನಡುಕ

ಈ ಹಿಂದೆ ಸದ್ದು ಮಾಡಿದ್ದ ಶಿವಂ ಅಸೋಸಿಯೇಟ್ಸ್ ಪ್ರಕರಣ

ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್​​ ಎಂಬಾತ ಯಾವುದೇ ನಿಯಮಗಳನ್ನು ಪಾಲಿಸದೆ, ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಬರೋಬ್ಬರಿ 40 ರಿಂದ 45 ಸಾವಿರ ಜನರಿಂದ ಅಂದಾಜು 4,500 ಕೋಟಿ ರೂ ಹೂಡಿಕೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ಸದ್ಯ ಶಿವಾನಂದ ನೀಲಣ್ಣವರ್​​ ಮನೆ ಸೇರಿದಂತೆ ಕಚೇರಿ ಕೂಡ ಸೀಜ್​ ಮಾಡಲಾಗಿದ್ದು, ಆ ಸಂಬಂಧ ವಿಚಾರಣೆ ಮುಂದುವರಿದೆ. ಈ ನಡುವೆಯೇ ಈಗ ಮತ್ತೊಂದು ಅಂತಹುದ್ದೇ ಪ್ರಕರಣ ವರದಿಯಾಗಿರೋದು ಪೊಲೀಸರಿಗೂ ತಲೆನೋವಾಗಿ ಮಾರ್ಪಟ್ಟಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Tirumala Laddus: ದಾಖಲೆ ಬರೆದ ಶ್ರೀವಾರಿ ಪ್ರಸಾದ; ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ತಿರುಪತಿ ಲಡ್ಡು ಮಾರಾಟ! – Kannada News

ದಾಖಲೆ ಬರೆದ ಶ್ರೀವಾರಿ ಪ್ರಸಾದImage Credit source: Pinterest

ತಿರುಮಲ: ಕಲಿಯುಗದ ಪ್ರತ್ಯಕ್ಷ ದೈವ, ವೆಂಕಟೇಶ್ವರ ಸ್ವಾಮಿಯ ಪರಮ ಪವಿತ್ರ ಪ್ರಸಾದವಾದ ‘ತಿರುಮಲ ತಿರುಪತಿ ಲಡ್ಡು’ ಇದೀಗ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ಪಾಲಿಗೆ ಕೇವಲ ಪ್ರಸಾದವಾಗಿರದೆ, ಮಹಾ ದೈವಿಕ ಶಕ್ತಿಯ ಸಂಕೇತವಾಗಿರುವ ಶ್ರೀವಾರಿ ಲಡ್ಡು ಮಾರಾಟವು ಈ ವರ್ಷದ (2026) ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ಅಧಿಕೃತವಾಗಿ ಘೋಷಿಸಿದೆ.

ದಾಖಲೆ ಬರೆದ ಮೇ ತಿಂಗಳ ಮಾರಾಟ:

ತಿರುಮಲಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚುತ್ತಿದ್ದು, ಅದಕ್ಕೆ ಪೂರಕವಾಗಿ ಲಡ್ಡು ಪ್ರಸಾದದ ಬೇಡಿಕೆಯೂ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಟಿಟಿಡಿ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, 2024 ರ ಮೇ ತಿಂಗಳಲ್ಲಿ 1.01 ಕೋಟಿ ಮತ್ತು 2025 ರ ಮೇ ತಿಂಗಳಲ್ಲಿ 1.10 ಕೋಟಿ ಲಡ್ಡುಗಳು ಮಾರಾಟವಾಗಿದ್ದವು. ಆದರೆ ಈ ವರ್ಷದ ಮೇ ತಿಂಗಳೊಂದರಲ್ಲೇ ಬರೋಬ್ಬರಿ 1,21,35,528 (1.21 ಕೋಟಿಗೂ ಹೆಚ್ಚು) ಲಡ್ಡುಗಳು ಮಾರಾಟವಾಗುವ ಮೂಲಕ ಹಳೆಯ ಎಲ್ಲಾ ದಾಖಲೆಗಳನ್ನು ಹಿಂದಿಕ್ಕಿದೆ.

ಬೇಸಿಗೆಯ ರಜಾದಿನಗಳಲ್ಲಿ ಭಕ್ತಸಾಗರ:

ಬೇಸಿಗೆಯ ರಜಾದಿನಗಳಲ್ಲಿ ತಿರುಮಲಕ್ಕೆ ಹರಿದುಬರುತ್ತಿರುವ ಭಕ್ತರ ಮಹಾಪೂರವನ್ನು ಸರಿದೂಗಿಸಲು ಟಿಟಿಡಿ ಪ್ರಸ್ತುತ ದಿನಕ್ಕೆ 4 ಲಕ್ಷಕ್ಕೂ ಹೆಚ್ಚು ಲಡ್ಡುಗಳನ್ನು ಸಿದ್ಧಪಡಿಸುತ್ತಿದೆ. ಕೇವಲ ಪ್ರಮಾಣ ಮಾತ್ರವಲ್ಲದೆ ಗುಣಮಟ್ಟ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಲಡ್ಡು ತಯಾರಿಕೆಯ ಕಚ್ಚಾ ವಸ್ತುಗಳಲ್ಲಿನ ಕಲ್ಮಶಗಳನ್ನು ಗುರುತಿಸಿ, ಸಂಪೂರ್ಣವಾಗಿ ತೆಗೆದುಹಾಕಲು ‘ಶ್ರೀವಾರಿ ಪೋಟು’ (ಮುಖ್ಯ ಅಡುಗೆಮನೆ) ನಲ್ಲಿ ಎರಡು ಕೃತಕ ಬುದ್ಧಿಮತ್ತೆ (AI) ಆಧಾರಿತ ‘ಬಣ್ಣ-ವಿಂಗಡಣೆ ಯಂತ್ರ’ಗಳನ್ನು (Color-Sorter Machines) ಸ್ಥಾಪಿಸಲಾಗಿದೆ.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಕೌಂಟರ್‌ಗಳ ಹೆಚ್ಚಳ ಮತ್ತು ಡಿಜಿಟಲ್ ಸೌಲಭ್ಯ:

ಲಡ್ಡು ಖರೀದಿಗಾಗಿ ಭಕ್ತರು ಗಂಟೆಗಟ್ಟಲೆ ಕಾಯುವುದನ್ನು ತಪ್ಪಿಸಲು ಟಿಟಿಡಿ ಆಡಳಿತ ಮಂಡಳಿ ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಭಕ್ತರಿಗೆ ಲಡ್ಡುಗಳ ವಿತರಣೆಯನ್ನು ವೇಗಗೊಳಿಸಲು ಪ್ರಸ್ತುತ 56 ಕೌಂಟರ್‌ಗಳನ್ನು ಸಜ್ಜುಗೊಳಿಸಲಾಗಿದೆ. ಇದರೊಂದಿಗೆ, ಹೆಚ್ಚುವರಿ ಲಡ್ಡುಗಳನ್ನು ಸುಲಭವಾಗಿ ಖರೀದಿಸಲು ಡಿಜಿಟಲ್ ಪಾವತಿ ಸೌಲಭ್ಯವಿರುವ ಆಧುನಿಕ ‘ಸ್ವಯಂಚಾಲಿತ ಕಿಯೋಸ್ಕ್‌ಗಳನ್ನು’ ಸಹ ಅಳವಡಿಸಲಾಗಿದೆ. ಇನ್ನು ಬೇಸಿಗೆ ರಜೆ ಮತ್ತು ಬ್ರಹ್ಮೋತ್ಸವಗಳಂತಹ ಅತಿಯಾದ ಜನದಟ್ಟಣೆಯ ದಿನಗಳಲ್ಲಿ ಲಡ್ಡುಗಳ ಕೊರತೆಯಾಗದಂತೆ, ಟಿಟಿಡಿ ಯಾವಾಗಲೂ 8 ರಿಂದ 10 ಲಕ್ಷ ಲಡ್ಡುಗಳ ಬಫರ್ ಸ್ಟಾಕ್ ಸದಾ ಸಿದ್ಧವಾಗಿಟ್ಟಿರುತ್ತದೆ. ಕೋಟ್ಯಂತರ ಭಕ್ತರ ದೈವಿಕ ನಂಬಿಕೆಯ ಸಮ್ಮಿಲನವಾಗಿರುವ ‘ಶ್ರೀವಾರಿ ಲಡ್ಡು’, ಮಾರಾಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುವ ಮೂಲಕ ತನ್ನ ಹಿರಿಮೆಯನ್ನು ಜಗತ್ತಿಗೆ ಮತ್ತೊಮ್ಮೆ ಸಾರಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:05 pm, Thu, 4 June 26

Source link

ತಂತ್ರಜ್ಞಾನದ ಸವಾಲಿಗೆ ಕಾರ್ಮಿಕನ ‘ವಿಗ್’ ಎಂಬ ಜಾಣ್ಮೆಯ ಉತ್ತರ: ಸಾಫ್ಟ್‌ವೇರ್ ಅಪ್‌ಡೇಟ್‌ಗೆ ದಾರೀದೀಪವಾದ ಘಟನೆ – Kannada News

ತೆಲಂಗಾಣ, ಜೂನ್ 04: ಗ್ರಾಮೀಣ ಭಾಗದ ಆರ್ಥಿಕತೆಗೆ ಬೆನ್ನೆಲುಬಾಗಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಪಾರದರ್ಶಕತೆ ತರಲು ಜಾರಿಗೆಗೊಳಿಸಲಾದ ಮುಖ ಗುರುತಿಸುವಿಕೆ (Face Recognition) ತಂತ್ರಜ್ಞಾನವು, ಇತ್ತೀಚೆಗೆ ಕಾರ್ಮಿಕರೊಬ್ಬರ ಅದ್ಭುತ ಸಮಯಪ್ರಜ್ಞೆ ಮತ್ತು ಜಾಣ್ಮೆಗೆ ಸಾಕ್ಷಿಯಾಗಿದೆ. ತಾಂತ್ರಿಕ ಸವಾಲೊಂದನ್ನು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಯಶಸ್ವಿಯಾಗಿ ಎದುರಿಸಿದ ಕಾರ್ಮಿಕರ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಕಾರಾತ್ಮಕ ಚರ್ಚೆ ಮತ್ತು ಮೆಚ್ಚುಗೆಗೆ ಪಾತ್ರವಾಗಿದೆ.

ಭಕ್ತಿ ಮತ್ತು ತಂತ್ರಜ್ಞಾನದ ಜುಗಲ್ಬಂದಿ
ವೀರ್ಣಪಲ್ಲಿ ಮಂಡಲದ ಎರ್ರಗದ್ದತಂಡದ ನಾಲ್ವರು ಉದ್ಯೋಗ ಖಾತರಿ ಕಾರ್ಮಿಕರು ಇತ್ತೀಚೆಗೆ ತಮ್ಮ ಇಷ್ಟದೈವವಾದ ವೇಮುಲವಾಡ ರಾಜಣ್ಣ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಹರಕೆಯ ರೂಪದಲ್ಲಿ ತಲೆಕೂದಲನ್ನು ಮುಂಡನ (ಬೋಳಿಸಿಕೊಂಡು) ಮಾಡಿಸಿಕೊಂಡಿದ್ದರು. ಮರುದಿನ ಎಂದಿನಂತೆ ಶಿಸ್ತಿನಿಂದ ಕೆಲಸಕ್ಕೆ ಹಾಜರಾದಾಗ, ಹಾಜರಾತಿ ದಾಖಲಿಸುವ NMMS ಮೊಬೈಲ್ ಆ್ಯಪ್ ಅವರ ಹೊಸ ರೂಪವನ್ನು ಗುರುತಿಸಲು ಆರಂಭದಲ್ಲಿ ವಿಫಲವಾಯಿತು.

ಹಾಜರಾತಿ ದಾಖಲಾಗದಿದ್ದರೆ ದಿನದ ಕೂಲಿ ನಷ್ಟವಾಗುವ ಸಾಧ್ಯತೆಯಿತ್ತು. ಆದರೆ ಗಾಬರಿಯಾಗದ ಕಾರ್ಮಿಕರು ಅತ್ಯಂತ ಚಾಣಾಕ್ಷ ಉಪಾಯವೊಂದನ್ನು ಹೂಡಿದರು. ತಮ್ಮ ಹಳೆಯ ಫೋಟೋದಲ್ಲಿರುವಂತೆ ಕಾಣಲು ತಲೆಯ ಮೇಲೆ ತಾತ್ಕಾಲಿಕವಾಗಿ ‘ವಿಗ್’ ಧರಿಸಿ ಆ್ಯಪ್ ಮುಂದೆ ನಿಂತರು. ತಂತ್ರಜ್ಞಾನವು ತಕ್ಷಣವೇ ಅವರ ಮುಖವನ್ನು ಗುರುತಿಸಿತ್ತು.

ವ್ಯವಸ್ಥೆಯ ಸುಧಾರಣೆಗೆ ಸಿಕ್ಕ ಉತ್ತಮ ಅವಕಾಶ
ಈ ಸ್ವಾರಸ್ಯಕರ ಘಟನೆಯು ಕೇವಲ ಸ್ಥಳೀಯರನ್ನು ರಂಜಿಸಿಲ್ಲ, ಬದಲಿಗೆ ತಂತ್ರಜ್ಞಾನವನ್ನು ಮತ್ತಷ್ಟು ಜನಸ್ನೇಹಿಯಾಗಿ ರೂಪಿಸಲು ಹಿರಿಯ ಅಧಿಕಾರಿಗಳಿಗೆ ಮತ್ತು ಸಾಫ್ಟ್‌ವೇರ್ ಅಭಿವೃದ್ಧಿಪಡಿಸುವ ತಂಡಗಳಿಗೆ ಒಂದು ಉತ್ತಮ ಪ್ರಾಯೋಗಿಕ ಉದಾಹರಣೆಯನ್ನು ಒದಗಿಸಿದೆ.

ಕೂದಲು ಬೋಳಿಸಿಕೊಂಡಾಗ, ಗಡ್ಡ ಬಿಟ್ಟಾಗ ಅಥವಾ ಸಣ್ಣಪುಟ್ಟ ಕೇಶವಿನ್ಯಾಸ ಬದಲಾದಾಗಲೂ ಗ್ರಾಮೀಣ ಕಾರ್ಮಿಕರಿಗೆ ಯಾವುದೇ ತೊಂದರೆಯಾಗದಂತೆ ಆ್ಯಪ್ ಅನ್ನು ಮತ್ತಷ್ಟು ಆಧುನಿಕವಾಗಿ ನವೀಕರಿಸಲು (Software Upgrade) ಇದು ದಾರೀದೀಪವಾಗಿದೆ. ಯಾವುದೇ ತಾಂತ್ರಿಕ ಅಡಚಣೆಯೂ ಭಾರತೀಯ ಗ್ರಾಮೀಣ ಜನರ ನೈಸರ್ಗಿಕ ಬುದ್ಧಿವಂತಿಕೆ ಮತ್ತು ಹಾಸ್ಯಪ್ರಜ್ಞೆಯ ಮುಂದೆ ದೊಡ್ಡದಲ್ಲ ಎಂಬುದನ್ನು ಈ ಘಟನೆ ಜಗತ್ತಿಗೆ ಸಾರಿದೆ.

ಡಿಜಿಟಲ್ ಇಂಡಿಯಾ ಅಭಿಯಾನದ ಭಾಗವಾಗಿ ತಂತ್ರಜ್ಞಾನವನ್ನು ಬಳಸುತ್ತಿರುವುದು ಶ್ಲಾಘನೀಯವಾಗಿದ್ದು, ಕಾರ್ಮಿಕರ ಈ ಯಶಸ್ವಿ ‘ವಿಗ್ ಪ್ರಯೋಗ’ವು ಮುಂದಿನ ದಿನಗಳಲ್ಲಿ ತಂತ್ರಜ್ಞಾನವನ್ನು ಮತ್ತಷ್ಟು ದೋಷಮುಕ್ತ ಹಾಗೂ ಜನಸಾಮಾನ್ಯರಿಗೆ ಹತ್ತಿರವಾಗಿಸಲು ನೆರವಾಗಲಿದೆ ಎಂದು ಹವಾಮಾನ ಮತ್ತು ಗ್ರಾಮೀಣಾಭಿವೃದ್ಧಿ ತಜ್ಞರು ಆಶಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಅರ್ಜಿ ಸಲ್ಲಿಕೆ ಹೇಗೆ? ಏನೇನು ದಾಖಲೆಗಳು ಬೇಕು? ಇಲ್ಲಿದೆ ವಿವರ – Kannada News

ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9

ಬೆಂಗಳೂರು, ಜೂನ್ 4: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿಕೆ ಶಿವಕುಮಾರ್ (DK Shivakumar) ವಿದ್ಯಾರ್ಥಿ ಸಮೂಹಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’ ನೀಡುವುದಾಗಿ ಮುಖ್ಯಮಂತ್ರಿಗಳು ಮಹತ್ತರ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವ್ಯಾಪ್ತಿಯಲ್ಲಿ ಸದ್ಯ ಪಾಸ್ ಪಡೆಯಲು ಇರುವ ನಿಯಮಗಳು, ಪ್ರಸ್ತುತ ಇರುವ ದರ ಪಟ್ಟಿ ಹಾಗೂ ಇನ್ನು ಮುಂದೆ ಉಚಿತ ಪಾಸ್ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈಗಿರುವ ನಿಯಮಗಳ ಪ್ರಕಾರವೇ ಅರ್ಜಿ ಸಲ್ಲಿಸಬೇಕು. ಆದರೆ, ಮುಖ್ಯ ಬದಲಾವಣೆ ಎಂದರೆ ವಿದ್ಯಾರ್ಥಿಗಳು ಇನ್ನು ಮುಂದೆ ಪಾಸ್‌ಗಾಗಿ ಯಾವುದೇ ಹಣವನ್ನು ಪಾವತಿ ಮಾಡಬೇಕಿರುವುದಿಲ್ಲ.

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು ಯಾವುದೇ ಸೈಬರ್ ಸೆಂಟರ್, ಬೆಂಗಳೂರು ಒನ್ ಕೇಂದ್ರಗಳು ಅಥವಾ ತಮ್ಮ ಮೊಬೈಲ್ ಮೂಲಕ ‘ಸೇವಾಸಿಂಧು’ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಲು ಫಾರ್ಮ್‌ಗೆ 10 ರೂ. ಹಾಗೂ ಆನ್‌ಲೈನ್ ಸಲ್ಲಿಕೆಗಾಗಿ 100 ರೂ. ಸೇವಾ ಶುಲ್ಕ ಇರಲಿದೆ.

ಉಚಿತ ಬಸ್ ಪಾಸ್​ಗೆ ಅಗತ್ಯ ದಾಖಲೆಗಳು

ವಿದ್ಯಾರ್ಥಿಯ ಆಧಾರ್ ಕಾರ್ಡ್, ಪ್ರಸ್ತುತ ಸಾಲಿನ ಕಾಲೇಜು ಪ್ರವೇಶಾತಿ ರಶೀದಿ (Admission Receipt) ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು ಇರಬೇಕು.

ಸಹ-ಸೀಲು ಕಡ್ಡಾಯ

ಆನ್‌ಲೈನ್ ಅಪ್ಲಿಕೇಶನ್ ಹಾಕಿದ ನಂತರ, ವಿದ್ಯಾರ್ಥಿಯು ತಾನು ಓದುತ್ತಿರುವ ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ (ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರು) ಸಹಿ ಮತ್ತು ಸೀಲು ಹಾಕಿಸಿಕೊಳ್ಳಬೇಕು.

ಅಪ್ರೂವಲ್ ಮತ್ತು ಮೆಸೇಜ್

ಈ ಅರ್ಜಿಯನ್ನು ಬಿಎಂಟಿಸಿ ಪಾಸ್ ವಿಭಾಗದವರು ಪರಿಶೀಲಿಸಿ ಅನುಮೋದನೆ ನೀಡುತ್ತಾರೆ. ಅಪ್ರೂವಲ್ ಆದ ತಕ್ಷಣ ವಿದ್ಯಾರ್ಥಿಯ ಮೊಬೈಲ್‌ಗೆ ಸಂದೇಶ (SMS) ಬರುತ್ತದೆ.

ಉಚಿತ ಬಸ್ ಪಾಸ್ ಎಲ್ಲಿ ಸಿಗುತ್ತೆ?

ಮೊಬೈಲ್‌ಗೆ ಮೆಸೇಜ್ ಬಂದ ನಂತರ ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಹೊಸಕೋಟೆ ಹಾಗೂ ಆನೇಕಲ್ ಬಸ್ ನಿಲ್ದಾಣಗಳಲ್ಲಿ (TTMC) ಪಾಸ್ ಪಡೆದುಕೊಳ್ಳಬಹುದು. ಆದರೆ, ಇಲ್ಲಿ ಈ ಹಿಂದೆ ನಿಗದಿಪಡಿಸಿದ್ದ ಪಾಸಿನ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ, ಉಚಿತವಾಗಿ ಪಾಸ್ ನೀಡಲಾಗುತ್ತದೆ.

ಹೆಣ್ಣುಮಕ್ಕಳಿಗೆ ಮೊದಲೇ ಉಚಿತ!

ಶಕ್ತಿ ಯೋಜನೆ ಅಡಿಯಲ್ಲಿ ಈಗಾಗಲೇ ರಾಜ್ಯದ ಎಲ್ಲಾ ಮಹಿಳಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಇರುವುದರಿಂದ ಅವರು ಪ್ರತ್ಯೇಕವಾಗಿ ಪಾಸ್ ಪಡೆಯುವ ಅಗತ್ಯವಿಲ್ಲ. ಕೇವಲ ವಿದ್ಯಾರ್ಥಿಗಳು (ಗಂಡು ಮಕ್ಕಳು) ಮಾತ್ರ ಮುಖ್ಯಮಂತ್ರಿಗಳು ಘೋಷಿಸಿರುವ ಈ ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಸ್ತುತ ಜಾರಿಯಲ್ಲಿರುವ ಬಸ್ ಪಾಸ್ ದರ ವಿವರ

ಮುಖ್ಯಮಂತ್ರಿಗಳ ಉಚಿತ ಪಾಸ್ ಆದೇಶ ಸಂಪೂರ್ಣ ಜಾರಿಗೆ ಬರುವ ಮುನ್ನ ಬಿಎಂಟಿಸಿಯಲ್ಲಿ ಚಾಲ್ತಿಯಲ್ಲಿದ್ದ ದರ ಪಟ್ಟಿ ಹೀಗಿದೆ (ಇನ್ನು ಮುಂದೆ ಈ ಪಾಸಿನ ದರಗಳು ವಿದ್ಯಾರ್ಥಿಗಳಿಗೆ ಸಂಪೂರ್ಣ ಮನ್ನಾ ಆಗಲಿವೆ):

ತರಗತಿ / ಕೋರ್ಸ್ ವಿವರ – ಹಳೆಯ ಪಾಸಿನ ದರ – ಸೇವಾ ಶುಲ್ಕ – ಒಟ್ಟು ಮೊತ್ತ (ಈಗ ಮನ್ನಾ)

  • 1 ರಿಂದ 7ನೇ ತರಗತಿ – ಉಚಿತ – ₹150 – ₹150
  • 8 ರಿಂದ 10ನೇ ತರಗತಿ (ಬಾಲಕರಿಗೆ) – ₹600 – ₹150 – ₹750
  • 11 ಮತ್ತು 12ನೇ ತರಗತಿ (ಪಿಯುಸಿ) – ₹900 – ₹150 – ₹1,050
  • ಪದವಿ ಮತ್ತು ಸ್ನಾತಕೋತ್ತರ – ₹1,150 – ₹150 – ₹1,300
  • ತಾಂತ್ರಿಕ ಮತ್ತು ವೈದ್ಯಕೀಯ – ₹1,680 – ₹150 ₹1,830

ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಈ ಹಿಂದೆಯೂ ಸಹ ಪಾಸಿನ ದರ ಉಚಿತವಾಗಿದ್ದು, ಕೇವಲ 150 ರೂ. ಸೇವಾ ಶುಲ್ಕ ಮಾತ್ರ ಇತ್ತು.

ಇದನ್ನೂ ಓದಿ: ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: ಸಿಎಂ ಘೋಷಿಸಿದ 6 ಕೊಡುಗೆಗಳಾವುವು?

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಈ ಐತಿಹಾಸಿಕ ‘ಉಚಿತ ಬಸ್ ಪಾಸ್‘ ಘೋಷಣೆಯಿಂದಾಗಿ ಇನ್ನು ಮುಂದೆ ವಿದ್ಯಾರ್ಥಿಗಳು ಮೇಲ್ಕಂಡ ಯಾವುದೇ ಶುಲ್ಕವನ್ನು ಭರಿಸಬೇಕಾಗಿಲ್ಲ. ಕೇವಲ ಆನ್‌ಲೈನ್‌ನಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಿ ಉಚಿತವಾಗಿ ಪಾಸ್ ಪಡೆದು ಪ್ರಯಾಣಿಸಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಮೆರಿಕನ್ನರ ಮನಗೆದ್ದ ನಮ್ಮ ಹೆಮ್ಮೆಯ ಬೆಂಗಳೂರು!: ಊರಿಗೆ ಹೋಗಲ್ಲ ಎಂದು ಹಠ ಹಿಡಿದ ವಿದೇಶಿ ಮಕ್ಕಳು – Kannada News

ಬೆಂಗಳೂರು, ಜೂ.4: ಟ್ರಾಫಿಕ್, ಕಸದ ಸಮಸ್ಯೆ ಎಂದು ಬೆಂಗಳೂರನ್ನು ಸದಾ ಟೀಕಿಸುವವರ ನಡುವೆ, ಅಮೆರಿಕದ ಪ್ರವಾಸಿಯೊಬ್ಬರು ನಮ್ಮ ಸಿಲಿಕಾನ್ ಸಿಟಿಯ ಜನತೆ, ಸಂಸ್ಕೃತಿ ಮತ್ತು ಆತಿಥ್ಯವನ್ನು ಕೊಂಡಾಡಿ ಬರೆದಿರುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರ ಹೃದಯ ಗೆದ್ದಿದೆ. 5 ತಿಂಗಳ ಕಾಲ ಬೆಂಗಳೂರಿನಲ್ಲಿ ವಾಸವಿದ್ದ ಅಮೆರಿಕದ ಕುಟುಂಬವೊಂದು, “ನಮ್ಮ ಮಕ್ಕಳಿಗೆ ಇಲ್ಲಿಂದ ವಾಪಸ್ ಸ್ವದೇಶಕ್ಕೆ ಹೋಗಲು ಮನಸ್ಸಿಲ್ಲ, ಬೆಂಗಳೂರಿಗೆ ನಮ್ಮ ಕಡೆಯಿಂದ 5 ಸ್ಟಾರ್ ರೇಟಿಂಗ್!” ಎಂದು ಹೆಮ್ಮೆಯಿಂದ ಹೇಳಿಕೊಂಡಿದೆ.

ರೆಡ್ಡಿಟ್​​ನಲ್ಲಿ ‘ಥ್ಯಾಂಕ್ಸ್ ಬೆಂಗಳೂರು’ (Thanks Bangalore) ಎಂಬ ಶೀರ್ಷಿಕೆಯಡಿ ಪೋಸ್ಟ್ ಮಾಡಿರುವ ವಿದೇಶಿ ಪ್ರಜೆ, “ನಾವು ಭಾರತದೊಂದಿಗೆ ಯಾವುದೇ ಪೂರ್ವ ಸಂಪರ್ಕವಿಲ್ಲದ ಅಮೆರಿಕನ್ನರು. ಕೆಲಸದ ನಿಮಿತ್ತ 5 ತಿಂಗಳ ಪ್ರವಾಸಕ್ಕಾಗಿ ಇಲ್ಲಿಗೆ ಬಂದಿದ್ದೆವು. ಬರುವ ಮುನ್ನ ಸೋಶಿಯಲ್​ ಮೀಡಿಯಾದಲ್ಲಿ ಬೆಂಗಳೂರಿನ ಕಸ, ಟ್ರಾಫಿಕ್ ಮತ್ತು ಗಾಳಿಯ ಗುಣಮಟ್ಟದ ಕೊರತೆಯ ಬಗ್ಗೆ ನೆಗೆಟಿವ್ ಕಮೆಂಟ್‌ಗಳನ್ನು ಓದಿ ಆತಂಕಗೊಂಡಿದ್ದೆವು. ಆದರೆ ಆ ಎಲ್ಲಾ ನೆಗೆಟಿವ್ ಮಾತುಗಳ ನಡುವೆಯೂ ನಿಮ್ಮದು ನಿಜಕ್ಕೂ ಒಂದು ಅದ್ಭುತವಾದ ನಗರ!” ಎಂದು ಬರೆದುಕೊಂಡಿದ್ದಾರೆ.

ಇಲ್ಲಿದೆ ನೋಡಿ ವೈರಲ್​​ ಪೋಸ್ಟ್​:

Thanks Bangalore
by
u/No-Day-2709 in
bangalore

ಇನ್ನು ಕನ್ನಡಿಗರ ಸೌಮ್ಯ ಸ್ವಭಾವ ಮತ್ತು ಸಹಾಯ ಹಸ್ತವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಅವರು, “ಇಲ್ಲಿನ ಪ್ರತಿಯೊಬ್ಬರೂ ತುಂಬಾ ದಯಾಳುಗಳು. ನಾವು ಎಲ್ಲೇ ಹೋದರೂ ಸ್ನೇಹಪರ ಜನ ಸಿಗುತ್ತಿದ್ದರು. ಅದರಲ್ಲೂ ವಿಶೇಷವಾಗಿ ನಾವು ಬೆಂಗಳೂರಿನ ಬಸ್‌ಗಳಲ್ಲಿ ದಾರಿ ಹುಡುಕಲಾಗದೆ ಪರದಾಡಿದಾಗಲೆಲ್ಲಾ, ಸ್ಥಳೀಯರೇ ಮುಂದೆ ಬಂದು ನಮಗೆ ದಾರಿ ತೋರಿಸಿ ಸಹಾಯ ಮಾಡಿದರು. ನಮ್ಮ 5 ತಿಂಗಳ ವಾಸ್ತವ್ಯದಲ್ಲಿ ಯಾರೂ ನಮಗೆ ವಂಚಿಸಲು ಪ್ರಯತ್ನಿಸಲಿಲ್ಲ, ಯಾವುದೇ ಅಪಾಯ ಎದುರಾಗಲಿಲ್ಲ (ರಸ್ತೆಗಳ ಟ್ರಾಫಿಕ್ ಹೊರತುಪಡಿಸಿ). ಕೊನೆಯದಾಗಿ ಹೇಳಬೇಕೆಂದರೆ, ನಮಗೆ ಆತಿಥ್ಯ ನೀಡಿದ್ದಕ್ಕೆ ಧನ್ಯವಾದಗಳು, ನಾವು ಖಂಡಿತಾ ಮತ್ತೆ ಬೆಂಗಳೂರಿಗೆ ಬರುತ್ತೇವೆ” ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಸ್ತೆಯೋ ಅಥವಾ ಸಾವಿನ ರನ್-ವೇಯೋ?: ಬೆಂಗಳೂರಿಗರ ಜೀವ ಹಿಂಡುತ್ತಿರುವ ಗುಂಡಿಗಳು; GBA ನಿದ್ರೆಗೆ ಜಾರಿದೆಯೇ?

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ನೆಟ್ಟಿಗರು ಭಾವುಕರಾಗಿದ್ದಾರೆ. ಒಬ್ಬ ಬಳಕೆದಾರರು, “ನಮ್ಮ ನಗರದ ಆತಿಥ್ಯ, ಆಹಾರ ಮತ್ತು ಜನರ ಪ್ರೀತಿ ನಿಮಗೆ ಇಷ್ಟವಾಗಿದ್ದಕ್ಕೆ ಸಂತೋಷ, ಮತ್ತೆ ಬನ್ನಿ” ಎಂದು ಬರೆದಿದ್ದಾರೆ. ಮತ್ತೊಬ್ಬರು, “ಕೆಲವು ನಾಗರಿಕ ಪ್ರಜ್ಞೆಯ ಕೊರತೆ ಮತ್ತು ಮೂಲಸೌಕರ್ಯದ ಸಮಸ್ಯೆಗಳಿದ್ದರೂ, ಮುಕ್ತ ಮನಸ್ಸಿನಿಂದ ಬರುವ ವಿದೇಶಿಗರಿಗೆ ಬೆಂಗಳೂರು ಅತ್ಯಂತ ಸುರಕ್ಷಿತ ಮತ್ತು ಸುಂದರ ನಗರ” ಎಂದು ಕಮೆಂಟ್ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link