All posts by nagaraj11081993

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು – Kannada News

ಬೆಂಗಳೂರು, ಜೂನ್ 4: ಬೆಂಗಳೂರಿನ (Bengaluru) ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವೆ ಹಳಿಗಳ ಇಂಜಿನಿಯರಿಂಗ್ ಕಾಮಗಾರಿ (ಲೈನ್ ಬ್ಲಾಕ್) ಹಮ್ಮಿಕೊಳ್ಳಲಾಗಿರುವ ಕಾರಣ ಈ ಮಾರ್ಗದಲ್ಲಿ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ. ಜೂನ್ 7 ಮತ್ತು ಜೂನ್ 8 ರಂದು ಎರಡು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, 6 ಮೆಮು (MEMU) ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕಚೇರಿ ಹಾಗೂ ಇತರೆ ಕೆಲಸಗಳಿಗೆ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಕೋರಲಾಗಿದೆ.

ಸಂಚಾರ ರದ್ದಾಗಿರುವ ರೈಲುಗಳ ವಿವರ

ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ, ಜೂನ್ 8 ರಂದು ಸಂಚರಿಸಬೇಕಿದ್ದ ರೈಲು ಸಂಖ್ಯೆ 20623 ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 20624 ಕೆಎಸ್ಆರ್ ಬೆಂಗಳೂರು – ಅಶೋಕಪುರಂ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಜೂನ್ 7 ರಂದು ಭಾಗಶಃ ರದ್ದಾಗುವ ರೈಲುಗಳು

  • ರೈಲು ಸಂಖ್ಯೆ 66533 (ಮರಿಕುಪ್ಪಂ – ಕೆ.ಆರ್. ಪುರಂ ಮೆಮು): ಈ ರೈಲು ವೈಟ್‌ಫೀಲ್ಡ್ ಮತ್ತು ಕೆ.ಆರ್. ಪುರಂ ನಡುವೆ ಭಾಗಶಃ ರದ್ದಾಗಲಿದ್ದು, ವೈಟ್‌ಫೀಲ್ಡ್ ನಿಲ್ದಾಣದಲ್ಲೇ ಪ್ರಯಾಣ ಕೊನೆಗೊಳಿಸಲಿದೆ (Short-terminate).
  • ರೈಲು ಸಂಖ್ಯೆ 66534 (ಕೆ.ಆರ್. ಪುರಂ – ಕುಪ್ಪಂ ಮೆಮು): ಈ ರೈಲು ಕೆ.ಆರ್. ಪುರಂ ಬದಲಿಗೆ ವೈಟ್‌ಫೀಲ್ಡ್ ನಿಲ್ದಾಣದಿಂದಲೇ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.
  • ರೈಲು ಸಂಖ್ಯೆ 66560 (ಅನಂತಪುರ – ಕೆಎಸ್ಆರ್ ಬೆಂಗಳೂರು ಮೆಮು): ಚನ್ನಸಂದ್ರ ಮತ್ತು ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಈ ರೈಲಿನ ಸಂಚಾರ ಕಡಿತಗೊಳಿಸಲಾಗಿದೆ.
  • ರೈಲು ಸಂಖ್ಯೆ 66520 (ಕೆಎಸ್ಆರ್ ಬೆಂಗಳೂರು – ಮರಿಕುಪ್ಪಂ ಮೆಮು): ಕೆಎಸ್ಆರ್ ಬೆಂಗಳೂರು ಮತ್ತು ವೈಟ್‌ಫೀಲ್ಡ್ ನಡುವೆ ಭಾಗಶಃ ರದ್ದಾಗಲಿದ್ದು, ಬೆಂಗಳೂರು ಬದಲಿಗೆ ವೈಟ್‌ಫೀಲ್ಡ್‌ನಿಂದಲೇ ಸಂಚಾರ ಆರಂಭಿಸಲಿದೆ.

ಜೂನ್ 8 ರಂದು ಭಾಗಶಃ ರದ್ದಾಗುವ ರೈಲುಗಳು

  • ರೈಲು ಸಂಖ್ಯೆ 66519 (ಮರಿಕುಪ್ಪಂ – ಕೆಎಸ್ಆರ್ ಬೆಂಗಳೂರು ಮೆಮು): ಈ ರೈಲು ವೈಟ್‌ಫೀಲ್ಡ್ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ವೈಟ್‌ಫೀಲ್ಡ್ ನಿಲ್ದಾಣದಲ್ಲೇ ಸ್ಥಗಿತಗೊಳ್ಳಲಿದೆ.
  • ರೈಲು ಸಂಖ್ಯೆ 66546 (ಕೆಎಸ್ಆರ್ ಬೆಂಗಳೂರು – ಮರಿಕುಪ್ಪಂ ಮೆಮು): ಈ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದ ಬದಲಿಗೆ ವೈಟ್‌ಫೀಲ್ಡ್‌ನಿಂದಲೇ ನಿಗದಿತ ಸಮಯಕ್ಕೆ ಮರಿಕುಪ್ಪಂ ಕಡೆಗೆ ಸಂಚರಿಸಲಿದೆ.

ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿ ರೈಲುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ತಾತ್ಕಾಲಿಕ ಬದಲಾವಣೆ ಅನಿವಾರ್ಯವಾಗಿದ್ದು, ಪ್ರಯಾಣಿಕರು ರೈಲ್ವೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ನೈಋತ್ಯ ರೈಲ್ವೆ ವಿನಂತಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:20 pm, Thu, 4 June 26

Source link

ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆ: ‘ಕೈ’ ಪಾಳಯದಲ್ಲಿ ಮುಂದುವರಿದ ಅಂತೆಕಂತೆ – Kannada News

ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆImage Credit source: Tv9 Kannada

ಬೆಂಗಳೂರು, ಜೂನ್​​ 04: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ (DK Shivakumar)​​ ನೇತೃತ್ವದ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಬಿರುಸು ಪಡೆದುಕೊಂಡಿವೆ. ಸಿಎಂ ಡಿಕೆಶಿ ಜೊತೆ ನಿನ್ನೆ (ಜೂನ್​ 03) ಡಿಸಿಎಂ ಆಗಿ ಡಾ.ಜಿ. ಪರಮೇಶ್ವರ್​​ ಮತ್ತು 12 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದರು. ಮೊದಲ ಹಂತದಲ್ಲಿ ಕೆಲ ನಾಯಕರಷ್ಟೇ ಸಂಪುಟಕ್ಕೆ ಸೇರ್ಪಡೆಯಾಗಿದ್ದು, ಸಾಕಷ್ಟು ಚರ್ಚೆ ಬಳಿಕ ಈ ನಿರ್ಧಾರಕ್ಕೆ ಕಾಂಗ್ರೆಸ್​​ ಹೈಕಮಾಂಡ್​​ ಬಂದಿತ್ತು. ಹೀಗಾಗಿ ರಾಜ್ಯ ಕಾಂಗ್ರೆಸ್​​ ನಾಯಕರ ನಡುವೆಯೇ ಹತ್ತು ಹಲವು ಲೆಕ್ಕಾಚಾರಗಳು ಶುರುವಾಗಿವೆ.

ನೂತನ ಸಚಿವರಿಗೆ ಯಾವ ಖಾತೆ?

ಪ್ರಮಾಣವಚನ ಸ್ವೀಕರಿಸಿರುವ ನೂತನ ಸಚಿವರುಗಳಿಗೆ ಇನ್ನೂ ಯಾವುದೇ ಖಾತೆ ಹಂಚಿಕೆ ಆಗಿಲ್ಲ. ಹೀಗಾಗಿ ಸಂಭವನೀಯ ಖಾತೆಗಳ ಬಗ್ಗೆಯೂ ಸಾಕಷ್ಟು ಚರ್ಚೆಗಳು ಶುರುವಾಗಿವೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರು ಸಚಿವ ಎಂ.ಬಿ.ಪಾಟೀಲ್, ಸಚಿವರಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿಗಳ ಪರಮಾಧಿಕಾರ. ಹೈಕಮಾಂಡ್ ಹೇಳಿದ್ದನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇವೆ ಎಂದಿದ್ದಾರೆ. ಯಾವುದೇ ಖಾತೆಯನ್ನು ಕೊಟ್ಟರೂ ನಾನು ನಿಭಾಯಿಸುತ್ತೇನೆ. ಖಾತೆ ಯಾವುದು ಅನ್ನೋದು ಮುಖ್ಯವಲ್ಲ, ಕೆಲಸ ಮುಖ್ಯ ಆಗುತ್ತೆ ಎಂದು ಮತ್ತೋರ್ವ ಸಚಿವ ಯು.ಟಿ. ಖಾದರ್​​ ತಿಳಿಸಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ; ಬಿಕೆ ಹರಿಪ್ರಾಸದ್​​​ ಒಂದೇ ದಿನ ಡಬಲ್ ಧಮಾಕ

ಎರಡನೇ ಪಟ್ಟಿಯ ಬಗ್ಗೆ ಹೆಚ್ಚಿದ ಚಿಂತೆ

ಇನ್ನು ಡಿಕೆಶಿ ಸಂಪುಟಲ್ಲಿ ಸಚಿವರಾಗಲಿರುವ ಶಾಸಕರ ಎರಡನೇ ಪಟ್ಟಿಯನ್ನು ಹೈಕಮಾಂಡ್​​ ರಿಲೀಸ್​​ ಮಾಡಬೇಕಿದ್ದು, ಅದರಲ್ಲಿ ಯಾರ್ಯಾರಿಗೆ ಸ್ಥಾನ ಸಿಗಲಿದೆ ಎಂಬುದೀಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಸಂತೋಷ್​​ ಲಾಡ್​​ ಸೇರಿದಂತೆ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದ ಅನೇಕರು ಮತ್ತೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರೆ, ಮೊದಲ ಬಾರಿ ಶಾಸಕರಾದವರು ಮತ್ತು ಹಿರಿಯ ನಾಯಕರಾಗಿಯೂ ಈವರೆಗೆ ಸಚಿವ ಸ್ಥಾನ ಸಿಗದವರು ಕೂಡ ರೇಸ್​​ನಲ್ಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂತೋಷ್​​ ಲಾಡ್​​, ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಲಿದೆ ಎಂಬ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ‘ಕಾಕ್ರೋಚ್ ಜನತಾ ಪಕ್ಷ’ದ ಶಾಂತಿಯುತ ಹೆಜ್ಜೆ: ಹೊಸ ವಕ್ತಾರರ ನೇಮಕ, ಜೂನ್ 6 ರಂದು ಬೃಹತ್ ಜಾಗೃತಿ ರ‍್ಯಾಲಿ – Kannada News

ನವದೆಹಲಿ, ಜೂನ್ 04: ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ದೇಶದ ಯುವಕರ ಭವಿಷ್ಯವನ್ನು ಸುರಕ್ಷಿತಗೊಳಿಸಲು ಯುವ ರಾಜಕೀಯ ಚಳವಳಿಯಾದ ‘ಕಾಕ್ರೋಚ್ ಜನತಾ ಪಕ್ಷ’ (CJP) ಮಹತ್ವದ ಸಕಾರಾತ್ಮಕ ನಿರ್ಧಾರಗಳನ್ನು ಪ್ರಕಟಿಸಿದೆ.  ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷವು ತನ್ನ ಹೊಸ ಸಂವಹನ ಸಮಿತಿಯನ್ನು ರಚಿಸಿದ್ದು, ಪ್ರತಿಭಾವಂತ ಯುವ ನಾಯಕರಿಗೆ ಜವಾಬ್ದಾರಿ ನೀಡಿದೆ.

ಪ್ರಮುಖ ವಕ್ತಾರರ ನೇಮಕ
ಪಕ್ಷದ ಧ್ವನಿಯಾಗಿ ಮಾಧ್ಯಮಗಳನ್ನು ಮುನ್ನಡೆಸಲು ಮೂವರು ಪ್ರಮುಖ ಗಣ್ಯರನ್ನು ಅಧಿಕೃತ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ: ಸೌರವ್ ದಾಸ್: ತನಿಖಾ ಪತ್ರಕರ್ತರಾದ ಇವರು ರಾಷ್ಟ್ರೀಯ ವಕ್ತಾರರಾಗಿ ನೇತೃತ್ವ ವಹಿಸಲಿದ್ದಾರೆ. ವಿಜೇತಾ ದಹಿಯಾ: ಪ್ರಸಿದ್ಧ ರಾಜಕೀಯ ವಿದ್ವಾಂಸೆ ಹಾಗೂ ಚಲನಚಿತ್ರ ನಿರ್ಮಾಪಕಿ. ಅಶುತೋಷ್ ರಂಕಾ: ಕಾರ್ಪೊರೇಟ್ ವಲಯದ ಮಾಜಿ ನಿರ್ವಹಣಾ ತಜ್ಞ.

ಪ್ರಮುಖ ಬೇಡಿಕೆಗಳು ಮತ್ತು ಸಾರ್ವಜನಿಕ ಬೆಂಬಲ
NEET, SSC GD ಮತ್ತು CBSE ಪರೀಕ್ಷೆಗಳಲ್ಲಿ ವರದಿಯಾಗಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಗೆ ಸಾಂಸ್ಥಿಕ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಎಂದು ಪಕ್ಷವು ಒತ್ತಾಯಿಸಿದೆ.

8 ಲಕ್ಷಕ್ಕೂ ಹೆಚ್ಚು ಸಹಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಹಮ್ಮಿಕೊಂಡಿದ್ದ ಆನ್‌ಲೈನ್ ಅರ್ಜಿಗೆ ಈಗಾಗಲೇ 800,000 ಕ್ಕೂ ಹೆಚ್ಚು ನಾಗರಿಕರು ಬೆಂಬಲ ಸೂಚಿಸಿದ್ದಾರೆ. ಇಬ್ಬರು ಅಧಿಕಾರಿಗಳ ವರ್ಗಾವಣೆಗಿಂತಲೂ, ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ದೋಷಮುಕ್ತಗೊಳಿಸುವುದು ಇಂದಿನ ಅಗತ್ಯವಾಗಿದೆ ಎಂದು ಸಿಜೆಪಿ ವಕ್ತಾರರು ಪ್ರಬುದ್ಧವಾಗಿ ಪ್ರತಿಪಾದಿಸಿದ್ದಾರೆ.

ಮತ್ತಷ್ಟು ಓದಿ: ಕಾಕ್ರೋಚ್ ಜನತಾ ಪಾರ್ಟಿಗೆ ಪಾಕಿಸ್ತಾನ ಬಾಂಗ್ಲಾದೇಶದಲ್ಲೇ ಹೆಚ್ಚು ಫಾಲೋವರ್ಸ್‌: ಇದು ದೊಡ್ಡ ಸಂಚು ಎಂದ ನೆಟ್ಟಿಗರು

ಜೂನ್ 6 ರ ಶಾಂತಿಯುತ ಪ್ರತಿಭಟನೆ
ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರಲು ಜೂನ್ 6 ರ ಶನಿವಾರದಂದು ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಈ ಆಂದೋಲನಕ್ಕೆ ದೇಶದ ಹೆಮ್ಮೆಯ ಪರಿಸರ ಹೋರಾಟಗಾರ್ತಿ ಸೋನಮ್ ವಾಂಗ್‌ಚುಕ್ ಅವರು ಕೂಡ ತಮ್ಮ ಬೆಂಬಲ ಪ್ರಕಟಿಸಿದ್ದಾರೆ.

ಜೂನ್ 6 ರಂದು ಬೆಳಗ್ಗೆ 8 ಗಂಟೆಗೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ದೆಹಲಿ ತಲುಪಲಿದ್ದಾರೆ. ಅಲ್ಲಿಂದ ಇಡೀ ತಂಡವು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ, ಪ್ರತಿಭಟನೆಗೆ ಗೊತ್ತುಪಡಿಸಲಾದ ಅಧಿಕೃತ ಸ್ಥಳವಾದ ‘ಜಂತರ್ ಮಂತರ್’ನಲ್ಲಿ ಶಾಂತಿಯುತ ಪ್ರದರ್ಶನ ನಡೆಸಲು ಕಾನೂನುಬದ್ಧವಾಗಿ ಅನುಮತಿ ಕೋರಲಿದೆ.

ಇದು ಯಾವುದೇ ಒಂದು ಪಕ್ಷದ ವಿರುದ್ಧದ ಹೋರಾಟವಲ್ಲ, ಬದಲಿಗೆ ದೇಶದ ಯುವಕರ ನಂಬಿಕೆಯನ್ನು ಪುನಃಸ್ಥಾಪಿಸುವ ಪ್ರಯತ್ನವಾಗಿದೆ. ಆದ್ದರಿಂದ ಯಾವುದೇ ನಿರ್ದಿಷ್ಟ ರಾಜಕೀಯ ಬ್ಯಾನರ್ ಇಲ್ಲದೆ, ದೇಶದ ಯುವಜನತೆ ಮತ್ತು ಎಲ್ಲಾ ಸಂಘಟನೆಗಳು ಕಟ್ಟುನಿಟ್ಟಾಗಿ ಕಾನೂನಿನ ಮಿತಿಯೊಳಗೆ ಈ ಶಾಂತಿಯುತ ಜಾಗೃತಿಯಲ್ಲಿ ಭಾಗವಹಿಸಬೇಕಾಗಿ ಸಿಜೆಪಿ ಮುಕ್ತ ಆಹ್ವಾನ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:08 pm, Thu, 4 June 26

Source link

SBI Recruitment 2026: SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ – Kannada News

SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿImage Credit source: Pinterest

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಅವಕಾಶ ನೀಡಿದೆ. SBI ತನ್ನ ಅಪ್ರೆಂಟಿಸ್ ನೇಮಕಾತಿ 2026ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ದೇಶಾದ್ಯಂತ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಮೇ 19 ರಿಂದ ಜೂನ್ 8, 2026ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಉತ್ತಮ ಅವಕಾಶವೆಂದು ಪರಿಗಣಿಸಲಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸಾಮಾನ್ಯವಾಗಿ 20 ರಿಂದ 28 ವರ್ಷ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಲಭ್ಯವಿರುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಅಭ್ಯರ್ಥಿಗಳ ಆಯ್ಕೆಗಾಗಿ ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಸ್ಥಳೀಯ ಭಾಷಾ ಪರೀಕ್ಷೆ (Local Language Test) ಹಾಗೂ ಅಗತ್ಯವಿರುವ ಇತರೆ ಹಂತಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.

ಇದನ್ನೂ ಓದಿ: Kerala: ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸ; ಪರೀಕ್ಷೆ ಬರೆದ 20 ವರ್ಷಗಳ ನಂತರ ಬಂದ ನೇಮಕಾತಿ ಪತ್ರ!

ಸ್ಟೈಪೆಂಡ್ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಅವಧಿಯಲ್ಲಿ ತಿಂಗಳಿಗೆ 15,000ರೂ. ಸ್ಟೈಪೆಂಡ್ ನೀಡಲಾಗುತ್ತದೆ. ಆದರೆ ಇದು ಶಾಶ್ವತ ಉದ್ಯೋಗವಲ್ಲ; ತರಬೇತಿ ಕಾರ್ಯಕ್ರಮ ಮಾತ್ರವಾಗಿದೆ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಗಳಿಸಲು ಮತ್ತು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಬಯಸುವ ಪದವೀಧರರಿಗೆ SBI ಅಪ್ರೆಂಟಿಸ್ ಯೋಜನೆ ಉತ್ತಮ ಅವಕಾಶವಾಗಿದೆ.

ವಿವರವಾದ SBI ಅಪ್ರೆಂಟಿಸ್ ನೇಮಕಾತಿ 2026 ಅಧಿಸೂಚನೆಯನ್ನು ಪರಿಶೀಲಿಸಲು ಮತ್ತು ಡೌನ್‌ಲೋಡ್ ಮಾಡಲು ನೇರ ಲಿಂಕ್​ಗೆ ಇಲ್ಲಿ ಕ್ಲಿಕ್​ ಮಾಡಿ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಗಾಯಗೊಂಡ ವಿರಾಟ್ ಕೊಹ್ಲಿ; ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಔಟ್ – Kannada News

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಈಗಾಗಲೇ ಟೆಸ್ಟ್ ಹಾಗೂ ಟಿ20 ಮಾದರಿಯ ಕ್ರಿಕೆಟ್​​ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಐಪಿಎಲ್ ಹೊರತುಪಡಿಸಿ ಅವರ ಆಟ ನೋಡ ಸಿಗೋದು ಏಕದಿನ ಪಂದ್ಯಗಳಲ್ಲಿ ಮಾತ್ರ. ಅವರು ಅಪ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಬೇಕಿತ್ತು. ಆದರೆ, ಸ್ನಾಯು ಸೆಳೆತದ ಕಾರಣದಿಂದ ಈ ಸರಣಿಯಿಂದ ಹೊರ ನಡೆದಿದ್ದು, ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಅಪ್ಘಾನಿಸ್ತಾನ ತಂಡ ಭಾರತಕ್ಕೆ ಆಗಮಿಸುತ್ತಿದ್ದು, ಜೂನ್ 6-10ರವರೆಗೆ ಒಂದು ಟೆಸ್ಟ್ ಪಂದ್ಯ ಆಡಲಿದೆ. ಜೂನ್ 13ರಿಂದ ಮೂರು ಏಕದಿನ ಸರಣಿಗಳು ನಡೆಯಲಿವೆ. ಆದರೆ, ಇಂಜೂರಿ ಕಾರಣದಿಂದ ಕೊಹ್ಲಿ ಅವರು ಈ ಸರಣಿಯಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಇದೆ. ಇನ್ನು, ಹಿರಿಯ ಆಟಗಾರ ರೋಹಿತ್ ಶರ್ಮಾ ಅವರ ಇರುವಿಕೆ ಕೂಡ ಖಾತ್ರಿ ಆಗಿಲ್ಲ. ಐಪಿಎಲ್ ಸಂದರ್ಭದಲ್ಲಿ ಅವರೂ ಗಾಯಕ್ಕೆ ಒಳಗಾಗಿ, ಕೆಲವು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದರು. ಇಬ್ಬರು ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಅಪ್ಘಾನಿಸ್ತಾನದ ವಿರುದ್ಧ ಕಣಕ್ಕೆ ಇಳಿಯಬೇಕಿದೆ.

ವಿರಾಟ್ ಕೊಹ್ಲಿ ಅವರು ಗಾಯದ ಕಾರಣ ನೀಡಿ ಪಂದ್ಯಗಳಿಂದ ಹೊರಗೆ ಉಳಿದಿದ್ದು ತುಂಬಾನೇ ಕಡಿಮೆ. ಈ ಬಾರಿಯ ಐಪಿಎಲ್ ಫೈನಲ್ ವೇಳೆ ಅವರ ಬ್ಯಾಟ್​ನಿಂದ 75 ರನ್​​ಗಳು ಬಂದಿದ್ದವು. ಕಾಲಿನಲ್ಲಿ ಉಂಟಾದ ಸಮಸ್ಯೆ ಅವರ ಆಟದ ಮೇಲೆ ನೇರ ಪರಿಣಾಮ ಬೀಳುತ್ತಾ ಇತ್ತು. ಅವರು ಗಾಯದ ಮಧ್ಯೆಯೂ ಆಟ ಮುಂದುವರಿಸಿದ್ದರು. ಈಗ ಗಾಯದಿಂದ ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ಈ ಸರಣಿಯಿಂದ ಹೊರಗುಳಿಯಬೇಕಾದ ಪರಿಸ್ಥಿತಿ ಬಂದಿದೆ.

ಇದನ್ನೂ ಓದಿ: ಆರ್‌ಸಿಬಿಗೆ ಬರ್ತಾರೆ ಪಾಂಡ್ಯ? ದಿನೇಶ್ ಕಾರ್ತಿಕ್ ಜೊತೆಗಿನ ಫೋಟೋದ ಅಸಲಿ ಕಥೆಯೇ ಬೇರೆ

ಆರ್​​ಸಿಬಿ ಸತತ ಎರಡನೇ ಬಾರಿ ಕಪ್ ಗೆದ್ದ ಬಳಿಕ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ ಜೊತೆ ಸೇರಿ ಮಥುರಾ ಮತ್ತು ಬೃಂದಾವನದ ಪ್ರಸಿದ್ಧ ಸಂತ ಪ್ರೇಮಾನಂದ್ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿದ್ದರು. ದೀರ್ಘ ಹಾಗೂ ಒತ್ತಡದ ಕ್ರಿಕೆಟ್ ಸೀಸನ್ ಮುಗಿದ ನಂತರ, ಮನಸ್ಸಿನ ಶಾಂತಿ ಮತ್ತು ಧನ್ಯತಾ ಭಾವದೊಂದಿಗೆ ಅವರು ಪತ್ನಿ ಅನುಷ್ಕಾ ಶರ್ಮಾ ಜೊತೆಗೂಡಿ ಪ್ರಸಿದ್ಧ ಆಶ್ರಮಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಹೆಚ್ಚಿನ ಕ್ರೀಡಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫಾರೋ ದ್ವೀಪಗಳಲ್ಲಿ700ಕ್ಕೂ ಅಧಿಕ ತಿಮಿಂಗಿಲ ಹಾಗೂ ಡಾಲ್ಫಿನ್​ಗಳ ಹತ್ಯಾಕಾಂಡ – Kannada News

ಡಾಲ್ಫಿನ್​ಗಳು Image Credit source: The Whales and Dolphins conservation

ಟೋರ್ಶಾವ್ನ್, ಜೂನ್ 04: ಉತ್ತರ ಅಟ್ಲಾಂಟಿಂಕ್ ಮಹಾಸಾಗರದಲ್ಲಿರುವ ಡೆನ್ಮಾರ್ಕ್​ನ ಫಾರೋ ದ್ವೀಪಗಳಲ್ಲಿ ಇತ್ತೀಚಿಗೆ 700ಕ್ಕೂ ಹೆಚ್ಚು ತಿಮಿಂಗಿಲ(Whales) ಗಳು ಹಾಗೂ ಡಾಲ್ಫಿನ್​ಗಳನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷವೂ ಕೂಡ ಜನರು ಇವುಗಳನ್ನು ಬೇಟೆಯಾಡುತ್ತಾರೆ ಅದಕ್ಕೆ ಗ್ರೈಂಡ್ ಡ್ರಾಪ್ ಎಂದು ಹೆಸರು. ಜಾಗತಿಕ ಪರಿಸರ ಸಂರಕ್ಷಣಾ ಸಂಸ್ಥೆಯಾದ ‘ಸೀ ಶೆಫರ್ಡ್’ (Sea Shepherd) ಮತ್ತು ‘ಓಷನ್ ಕೇರ್’ (OceanCare) ವರದಿಗಳ ಪ್ರಕಾರ, ಇತ್ತೀಚಿನ ಮೂರು ಪ್ರತ್ಯೇಕ ಬೇಟೆಗಳಲ್ಲಿ ಒಟ್ಟು 706 ಪೈಲಟ್ ತಿಮಿಂಗಿಲಗಳು ಮತ್ತು ಡಾಲ್ಫಿನ್‌ಗಳನ್ನು ಕರಾವಳಿಗೆ ತಂದು ಹಿಡಿಯಲಾಗಿದೆ.

ಈ ಘಟನೆಯು ಜಾಗತಿಕ ಮಟ್ಟದಲ್ಲಿ ಪ್ರಾಣಿ ಹಿಂಸೆ ತಡೆಗಟ್ಟುವಿಕೆ ಮತ್ತು ಸಾಂಪ್ರದಾಯಿಕ ಆಚರಣೆಗಳ ನಡುವಿನ ಸಮತೋಲನದ ಕುರಿತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ವ್ಯಾಪಕ ಸಕಾರಾತ್ಮಕ ಒತ್ತಡವನ್ನು ಸೃಷ್ಟಿಸಿದೆ.

ಜಾಗತಿಕ ಎನ್‌ಜಿಒಗಳ ಜಾಗೃತಿ ಮತ್ತು ನಿಗಾ
ಮೇ ಕೊನೆಯ ವಾರದಲ್ಲಿ ದ್ವೀಪದ ರಾಜಧಾನಿ ಟೋರ್ಶಾವ್ನ್ ಸೇರಿದಂತೆ ಮೂರು ಪ್ರಮುಖ ಕೊಲ್ಲಿಗಳಲ್ಲಿ ಈ ಬೇಟೆಗಳು ನಡೆದಿವೆ.
ಈ ಬಾರಿಯ ಬೇಟೆಯಲ್ಲಿ ಪ್ರಾಣಿಗಳನ್ನು ಬೇಗನೆ ನಿಷ್ಕ್ರಿಯಗೊಳಿಸುವ ಕಡ್ಡಾಯ ಆಧುನಿಕ ಉಪಕರಣಗಳ ಕೊರತೆಯಿದ್ದ ಕಾರಣ, ಪ್ರಕ್ರಿಯೆಯು ವಿಳಂಬವಾಯಿತು ಮತ್ತು ಪ್ರಾಣಿಗಳು ದೀರ್ಘಕಾಲದವರೆಗೆ ಒತ್ತಡವನ್ನು ಅನುಭವಿಸಿದವು ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: ಉತ್ತರ ಕನ್ನಡ: 35 ಮೀ. ಉದ್ದದ ನೀಲಿ ತಿಮಿಂಗಿಲದ ಮೃತದೇಹ ಪತ್ತೆ; ಇಲ್ಲಿದೆ ಫೋಟೋಸ್

ವೈಕಿಂಗ್ ಸಂಪ್ರದಾಯ
ಸುಮಾರು 1,000 ವರ್ಷಗಳಷ್ಟು ಹಳೆಯದಾದ ವೈಕಿಂಗ್ ಸಂಪ್ರದಾಯವನ್ನು ಸ್ಥಳೀಯ ಸರ್ಕಾರ ಮತ್ತು ಅದರ ಬೆಂಬಲಿಗರು ದ್ವೀಪದ ಪ್ರಮುಖ ‘ಸಾಂಸ್ಕೃತಿಕ ಗುರುತು’ ಮತ್ತು ಸಮುದಾಯಕ್ಕೆ ನೈಸರ್ಗಿಕ ಆಹಾರ ಒದಗಿಸುವ ಮೂಲ ಎಂದು ಸಮರ್ಥಿಸಿಕೊಳ್ಳುತ್ತಾರೆ. ಆದರೆ, ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಪ್ರಸ್ತುತ ಫಾರೋ ದ್ವೀಪಗಳು ಆಧುನಿಕ ಮತ್ತು ಉನ್ನತ ಆರ್ಥಿಕತೆ ಹೊಂದಿರುವ ರಾಷ್ಟ್ರವಾಗಿರುವುದರಿಂದ, ಇಂತಹ ಹಳೆಯ ಅಭ್ಯಾಸಗಳ ಬದಲಾಗಿ ಪರಿಸರ ಸ್ನೇಹಿ ಪರ್ಯಾಯಗಳನ್ನು ಕಂಡುಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ವ್ಯಾಪಾರ ಒಪ್ಪಂದಗಳ ಪರಿಶೀಲನೆ: ಯುನೈಟೆಡ್ ಕಿಂಗ್‌ಡಮ್ (UK) ಸಂಸತ್ತಿನ 72 ಕ್ಕೂ ಹೆಚ್ಚು ಸಂಸದರು ಈ ಸಾಂಪ್ರದಾಯಿಕ ವಧೆಯನ್ನು ಖಂಡಿಸಿದ್ದು, 2026 ರ ಕೊನೆಯಲ್ಲಿ ನಡೆಯಲಿರುವ ಫಾರೋ ದ್ವೀಪಗಳೊಂದಿಗಿನ ಜಾಗತಿಕ ವ್ಯಾಪಾರ ಒಪ್ಪಂದಗಳ ಮರುಪರಿಶೀಲನೆಯಲ್ಲಿ ಪ್ರಾಣಿ ಕಲ್ಯಾಣದ ಮಾನದಂಡಗಳನ್ನು ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಒರಾಕಲ್​ನಲ್ಲಿ ಕೆಲಸ ಕಳೆದುಕೊಳ್ಳಲಿರುವ 30,000 ಉದ್ಯೋಗಿಗಳು; ಜೂನ್ 18ರೊಳಗೆ ಲೇ ಆಫ್ ಪ್ರಕ್ರಿಯೆ ಪೂರ್ಣ – Kannada News

ವಾಷಿಂಗ್ಟನ್, ಜೂನ್ 4: ವಿಶ್ವದ ಪ್ರಮುಖ ಸಾಫ್ಟ್​ವೇರ್ ಅಪ್ಲಿಕೇಶನ್ ಕಂಪನಿಯಾದ ಒರಾಕಲ್ (Oracle) ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸಲಿದೆ. ಈ ಕಂಪನಿಯು ತನ್ನ ಜಾಗತಿಕ ಉದ್ಯೋಗಿಗಳ ಪೈಕಿ ಸುಮಾರು 18% ರಷ್ಟು ಮಂದಿಯನ್ನು ಕೆಲಸದಿಂದ ತೆಗೆದುಹಾಕುತ್ತಿದೆ. ಈ ಪ್ರಕ್ರಿಯೆಯು ಜೂನ್ 1 ರಿಂದ ನಡೆಯುತ್ತಿದ್ದು ಜೂನ್ 15ರೊಳಗೆ ಪೂರ್ಣಗೊಳ್ಳಲಿದೆ.

ಆಶ್ಚರ್ಯದ ಸಂಗತಿಯೆಂದರೆ, ಈ ದೊಡ್ಡಮಟ್ಟದ ಲೇ ಆಫ್ ನಡೆಯುತ್ತಿರುವುದು ಕಂಪನಿ ಸುಸ್ಥಿತಿಯಲ್ಲಿರುವಾಗಲೇ. ಒರಾಕಲ್ ಕಂಪನಿ ಉತ್ತಮ ಆದಾಯವನ್ನು ಗಳಿಸುತ್ತಿದೆ. ಕ್ಲೌಡ್ ಹಾಗೂ ಕೃತಕ ಬುದ್ಧಿಮತ್ತೆ (AI) ವಲಯದಲ್ಲಿ ಭಾರಿ ಬೆಳವಣಿಗೆ ಕಾಣುತ್ತಿದೆ. ಕಂಪನಿಯು ಮೂರನೇ ತ್ರೈಮಾಸಿಕದಲ್ಲಿ 22% ಆದಾಯ ಹೆಚ್ಚಳವನ್ನೂ ಕಂಡಿದೆ. ಆದರೂ ಕೂಡ ಒರಾಕಲ್ ದೊಡ್ಡ ಮಟ್ಟದ ಲೇಆಫ್​ಗೆ ಕೈಹಾಕಿದೆ.

ಇದನ್ನೂ ಓದಿ: ವಿದೇಶಿ ಬಂಡವಾಳ ಸೆಳೆಯಲು ಭರ್ಜರಿ ಪ್ಲಾನ್: ಬಾಂಡ್ ತೆರಿಗೆ ಕಡಿತ ಮತ್ತು ಹೂಡಿಕೆ ನಿಯಮಗಳ ಸಡಿಲಿಕೆಗೆ ಕೇಂದ್ರ ಸರ್ಕಾರ ಮುಂದು

ಒರಾಕಲ್​ನ ಈ ಕತ್ತರಿಗೆ ಏನು ಕಾರಣ?

ಒರಾಕಲ್ ಕಂಪನಿಯು ತನ್ನ ಸಂಪನ್ಮೂಲಗಳನ್ನು ಹೆಚ್ಚು ಬೆಳವಣಿಗೆಯಾಗುತ್ತಿರುವ AI ವ್ಯವಹಾರಗಳ ಕಡೆಗೆ ತಿರುಗಿಸಲು ಬಯಸಿದೆ. ಮುಂದಿನ ದಿನಗಳಲ್ಲಿ ಕ್ಲೌಡ್ ಇನ್‌ಫ್ರಾಸ್ಟ್ರಕ್ಚರ್ ಮತ್ತು AI ಡೇಟಾ ಸೆಂಟರ್‌ಗಳನ್ನು ವಿಸ್ತರಿಸಲು ಕಂಪನಿಯು ಸುಮಾರು 50 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ಯೋಜಿಸಿದೆ.

ಲೇ ಆಫ್ ನಿರ್ಧಾರದಿಂದ ಉದ್ಯೋಗಿಗಳಿಗೆ ಆತಂಕ

ಒರಾಕಲ್​ನ ಲೇ ಆಫ್ ಕ್ರಮವು ಉದ್ಯೋಗಿಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಕಂಪನಿಯು ನೀಡುತ್ತಿರುವ ಪರಿಹಾರ ಪ್ಯಾಕೇಜ್ (Severance Package) ಅಸಮರ್ಪಕವಾಗಿದೆ ಎಂದು ಅನೇಕ ಬಾಧಿತ ಉದ್ಯೋಗಿಗಳು ಟೀಕಿಸಿದ್ದಾರೆ. ವಿಶೇಷವಾಗಿ, ಕಂಪನಿಯು ವಾಗ್ದಾನ ಮಾಡಿದ ಸ್ಟಾಕ್ ಆಯ್ಕೆಗಳನ್ನು (Unvested stock awards) ನೀಡದಿರುವುದು ವಿವಾದಕ್ಕೆ ಕಾರಣವಾಗಿದೆ. ಸಂಸ್ಥೆಯು ಕೆಲಸ ಕಳೆದುಕೊಂಡ ಉದ್ಯೋಗಿಗಳಿಗೆ 26 ವಾರಗಳವರೆಗೆ ವೇತನವನ್ನು ಪರಿಹಾರವಾಗಿ ನೀಡಿದೆ. ಅಂದರೆ, ಕಂಪನಿಯ ಹಿರಿಯರಿಗೆ 26 ವಾರದ ವೇತನ ಸಿಗುತ್ತದೆ. ಕಿರಿಯರಿಗೆ ಪ್ಯಾಕೇಜ್ ಕಡಿಮೆ ಇರುತ್ತದೆ.

ಇದನ್ನೂ ಓದಿ: ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ

ಒಟ್ಟಾರೆ, ಭವಿಷ್ಯದ AI ತಂತ್ರಜ್ಞಾನದ ಹೂಡಿಕೆಗೆ ಒತ್ತು ನೀಡಲು, ಪ್ರಸ್ತುತ ಇರುವ ಮಾನವ ಸಂಪನ್ಮೂಲವನ್ನು ಕಂಪನಿಯು ತೀವ್ರವಾಗಿ ಕಡಿತಗೊಳಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು – Kannada News

ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದ ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳುImage Credit source: tv9

ಬೆಂಗಳೂರು, ಜೂನ್ 4: ಚಾಮರಾಜನಗರ (Chamarajanagar) ಮತ್ತು ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಗಳಲ್ಲಿ ಗುರುವಾರ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, 7 ತಿಂಗಳ ಹಸುಗೂಸು ಹಾಗೂ ವೃದ್ಧ ದಂಪತಿ ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ವೇಗದ ಚಾಲನೆ ಮತ್ತು ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಈ ಎರಡೂ ದುರಂತಗಳು ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳು ಸಂಪೂರ್ಣ ಜಖಂಗೊಂಡಿವೆ.

ಮುಖ್ಯಾಂಶಗಳು

  • ಚಾಮರಾಜನಗರದ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಎರಡು ಕಾರುಗಳ ಡಿಕ್ಕಿ; ವೃದ್ಧ ಹಾಗೂ ಮಗು ಸಾವು.
  • ಚಿಕ್ಕಬಳ್ಳಾಪುರದ ಸಾದಲಿ ಕ್ರಾಸ್ ಬಳಿ ಟಿವಿಎಸ್ ಎಕ್ಸೇಲ್‌ಗೆ ಸರ್ಕಾರಿ ಬಸ್ ಡಿಕ್ಕಿ
  • ಬಸ್ ಚಕ್ರದಡಿ ಸಿಲುಕಿ ವೃದ್ಧ ದಂಪತಿ ಸ್ಥಳದಲ್ಲೇ ದುರ್ಮರಣ.

ಚಾಮರಾಜನಗರದಲ್ಲಿ ಕಾರುಗಳ ಡಿಕ್ಕಿ: ಇಬ್ಬರ ಸಾವು

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ವೇಗವಾಗಿ ಬಂದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಪ್ರಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಮುಬಾರಕ್ (70) ಹಾಗೂ ಕೇವಲ 7 ತಿಂಗಳ ಹಸುಗೂಸು ಸ್ಥಳದಲ್ಲೇ ಕೊನೆಯುಸಿರೆಳೆದಿವೆ. ಇನ್ನುಳಿದಂತೆ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಐವರಿಗೆ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಾಮರಾಜನಗರದ ಸಿಮ್ಸ್ (CIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಚಾಮರಾಜನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಎಪಿಎಸ್ಆರ್ಟಿಸಿ ಬಸ್ ಧಾವಂತಕ್ಕೆ ದಂಪತಿ ಬಲಿ

ಇನ್ನೊಂದೆಡೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ (NH 44) ಸಾದಲಿ ಕ್ರಾಸ್ ಬಳಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಟಿವಿಎಸ್ ಎಕ್ಸೇಲ್ (TVS XL) ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೃದ್ಧ ದಂಪತಿಗೆ ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ (APSRTC) ಬಸ್ ಡಿಕ್ಕಿ ಹೊಡೆದಿದೆ. ಕದರಿಯಿಂದ ಬೆಂಗಳೂರಿನ ಕಡೆಗೆ ಸಂಚರಿಸುತ್ತಿದ್ದ ಈ ಬಸ್ ಬರುವುದನ್ನು ಗಮನಿಸದೇ ದ್ವಿಚಕ್ರ ವಾಹನ ಸವಾರರು ದಿಢೀರ್ ರಸ್ತೆ ತಿರುವು (ಟರ್ನ್) ಪಡೆದಿದ್ದೇ ಈ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಲಕ್ಷ್ಮಣ (75) ಹಾಗೂ ಅವರ ಪತ್ನಿ ರತ್ನಮ್ಮ (70) ಬಸ್ಸಿನ ಚಕ್ರದ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೈಕ್​ ಡಿಕ್ಕಿ ತಪ್ಪಿಸಲು ಹೋಗಿ 4 ಕಾರುಗಳ ನಡುವೆ ಸರಣಿ ಅಪಘಾತ

ಮೃತರು ಶಿಡ್ಲಘಟ್ಟ ತಾಲ್ಲೂಕಿನ ತಿರುಕಾಚೇನಹಳ್ಳಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವರದಿ: ಸೂರಜ್ ಪ್ರಸಾದ್ ಎಸ್​ಎನ್ ಮತ್ತು ಭೀಮಪ್ಪ ಪಾಟೀಲ್

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

“ಅಧಿಕಾರ ಬೇಕಾದವರು ಡಿಕೆಶಿ ಜತೆ ಹೋಗಿ, ಪಕ್ಷ ಕಟ್ಟುವವರು ನನ್ನೊಂದಿಗೆ ಬನ್ನಿ”: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಮಾತು – Kannada News

ಬಿ.ಕೆ. ಹರಿಪ್ರಸಾದ್

ಬೆಂಗಳೂರು, ಜೂ.4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ. “ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಕಾಂಗ್ರೆಸ್​​​​ ನಾಯಕರಿಗೆ ಹಾಗೂ ಸಚಿವ ಆಕ್ಷಾಂಕಿಗಳಿಗೆ ಖಡಕ್​​​​​​ ಮಾತುಗಳನ್ನು ಹೇಳಿದ್ದಾರೆ. ಈ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬಿ.ಕೆ. ಹರಿಪ್ರಸಾದ್, ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ನಾಯಕರಿಗೆ ಕಳಕಳಿಯ ವಿನಂತಿ ಮಾಡಿದರು. “ಸರ್ಕಾರದಲ್ಲಿ ಈಗಾಗಲೇ ಬೇರೆ ಬೇರೆ ಕೆಲಸ ಮಾಡಿದವರು ಈಗ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ನಾವೆಲ್ಲರೂ ಸೇರಿ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ಸಂಘಟನೆ ಮತ್ತು ಸರ್ಕಾರ ಎರಡನ್ನೂ ಸಮತೋಲನವಾಗಿ ಹಂಚಿಕೊಂಡು ಮುಂದೆ ಹೋಗೋಣ. ನನ್ನ ಪೂರ್ವಜರು ಮಾಡಿದ ಪುಣ್ಯದಿಂದಾಗಿ ಈ ಪವಿತ್ರ ಪಕ್ಷದ ಅಧ್ಯಕ್ಷ ಹುದ್ದೆ ನನಗೆ ಸಿಕ್ಕಿದೆ. ಸಾಮಾನ್ಯ ಕಾರ್ಯಕರ್ತರಿಗೆ ಏನೇ ತೊಂದರೆಯಾದರೂ ನಾನು ಸದಾ ಅವರ ಜೊತೆ ಇರುತ್ತೇನೆ” ಎಂದು ಭರವಸೆ ನೀಡಿದರು.

ಇಲ್ಲಿದೆ ನೋಡಿ ಎಕ್ಸ್​​​​​ ಪೋಸ್ಟ್​​:

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಎಐಸಿಸಿ (AICC) ಹೈಕಮಾಂಡ್ ನಾಯಕರಿಗೆ ಧನ್ಯವಾದ ತಿಳಿಸಿ ಬಿ.ಕೆ. ಹರಿಪ್ರಸಾದ್ ಅವರು ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. “ಹೈಕಮಾಂಡ್‌ನ ಈ ನಿರ್ಧಾರ ಕೇವಲ ಒಬ್ಬ ವ್ಯಕ್ತಿಗೆ ನೀಡಿರುವ ಹುದ್ದೆಯಲ್ಲ. ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಗಳಾದ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ದುರ್ಬಲ ವರ್ಗಗಳ ಸಬಲೀಕರಣಕ್ಕೆ ಸಂದ ಜಯ. ನನ್ನ ಜೀವನ ಪೂರ್ತಿ ಕಾಂಗ್ರೆಸ್ ತತ್ವಗಳಿಗಾಗಿ ಮೀಸಲಿಟ್ಟಿದ್ದೇನೆ. ನನಗೆ ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ: 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿ ಏನೂ ಎಂಬುದನ್ನ ತೋರಿಸುತ್ತೇವೆ

ಪ್ರಸ್ತುತ ದೇಶದಲ್ಲಿ ದ್ವೇಷದ ರಾಜಕಾರಣ ಮತ್ತು ಧರ್ಮದ ಹೆಸರಿನಲ್ಲಿ ಧ್ರುವೀಕರಣ ನಡೆಯುತ್ತಿದೆ. ಸಂವಿಧಾನ ವಿರೋಧಿ ಪ್ರವೃತ್ತಿಗಳು ಹೆಚ್ಚಾಗುತ್ತಿರುವ ಇಂತಹ ಕಾಲದಲ್ಲಿ ನನಗೆ ರಾಜ್ಯ ಕಾಂಗ್ರೆಸ್‌ನ ನೇತೃತ್ವ ಸಿಕ್ಕಿರುವುದು ದೊಡ್ಡ ಸವಾಲಾಗಿದೆ. ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು ಮತ್ತು ಯುವಜನರ ಆಶೋತ್ತರಗಳನ್ನು ನಾನು ಬಲ್ಲೆ. ಸಂವಿಧಾನವೇ ನಮ್ಮ ದಾರಿ, ಸಾಮಾಜಿಕ ನ್ಯಾಯವೇ ನಮ್ಮ ಗುರಿ. ಈ ಸವಾಲನ್ನು ಕಾರ್ಯಕರ್ತರ ಬಲದಿಂದ ಯಶಸ್ವಿಯಾಗಿ ಎದುರಿಸುತ್ತೇನೆ. ಎಲ್ಲಾ ನಾಯಕರು ಹಾಗೂ ಪ್ರಜಾಪ್ರಭುತ್ವವಾದಿಗಳು ನನ್ನೊಂದಿಗೆ ಕೈಜೋಡಿಸಲಿದ್ದಾರೆ ಎಂಬ ನಂಬಿಕೆ ನನಗಿದೆ” ಎಂದು ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಮಿರ್ ಖಾನ್​ಗೆ ಮೂರನೇ ವಿವಾಹ; ಮೊದಲ ಎರಡು ವೈವಾಹಿಕ ಬದುಕು ಮುರಿದುಬಿದ್ದಿದ್ದು ಏಕೆ? – Kannada News

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ನಟ ಆಮಿರ್ ಖಾನ್ ಪ್ರಸ್ತುತ ತಮ್ಮ ವೃತ್ತಿಪರ ಜೀವನಕ್ಕಿಂತ ಹೆಚ್ಚಾಗಿ ವೈಯಕ್ತಿಕ ಜೀವನದ ಕಾರಣಕ್ಕಾಗಿಯೇ ಭಾರಿ ಸುದ್ದಿಯಲ್ಲಿದ್ದಾರೆ. ಅವರ ಖಾಸಗಿ ಬದುಕಿನಲ್ಲಿ ನಡೆಯುತ್ತಿರುವ ಸರಣಿ ಘಟನೆಗಳು ಸದ್ಯ ವರದಿಯಾಗುತ್ತಿವೆ. ಆಮಿರ್ ಖಾನ್ ತಮ್ಮ 61ನೇ ವಯಸ್ಸಿನಲ್ಲಿ ಮೂರನೇ ಬಾರಿಗೆ ವಿವಾಹವಾಗಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಜುಲೈ 5 ರಂದು ಅವರು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರೊಂದಿಗೆ ಖಾಸಗಿ ಸಮಾರಂಭವೊಂದರಲ್ಲಿ ವಿವಾಹವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆಮಿರ್ ಖಾನ್ ಅವರು ತಮ್ಮ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಗೌರಿ ಸ್ಪ್ರಾಟ್ ಅವರೊಂದಿಗಿನ ಸಂಬಂಧವನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದರು. ಅಲ್ಲದೆ ಇಡೀ ಜಗತ್ತಿಗೆ ತಮ್ಮ ಗೆಳತಿ ಎಂದು ಪರಿಚಯಿಸಿದ್ದರು. ಈಗ ಈ ಜೋಡಿ ಶೀಘ್ರದಲ್ಲೇ ಮದುವೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಗೌರಿ ಅವರ ಕೈಹಿಡಿಯುವ ಮುನ್ನ ಆಮಿರ್ ಖಾನ್ ಎರಡು ಬಾರಿ ವಿವಾಹವಾಗಿದ್ದರು. ಅವರು ತಮ್ಮ ಮೊದಲ ಪತ್ನಿ ರೀನಾ ದತ್ತಾ ಮತ್ತು ಎರಡನೇ ಪತ್ನಿ ಕಿರಣ್ ರಾವ್ ಇಬ್ಬರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರಾದರೂ, ಅಂತಿಮವಾಗಿ ಅವರಿಂದ ಬೇರ್ಪಟ್ಟರು. ಆಮಿರ್ ಖಾನ್ ಅವರ ಮೊದಲ ಮತ್ತು ಎರಡನೇ ವಿವಾಹಗಳು ಮುರಿದುಬಿದ್ದಿದ್ದು ಏಕೆ ಮತ್ತು ಅವರ ಮಾಜಿ ಪತ್ನಿಯರು ಈಗ ಪ್ರಸ್ತುತ ಏನು ಮಾಡುತ್ತಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

ಆಮಿರ್ ಖಾನ್ ಅವರ ಪ್ರೇಮ ಜೀವನವು ಯಾವುದೇ ಸಿನಿಮಾದ ಕಥಾಹಂದರಕ್ಕಿಂತ ಕಮ್ಮಿಯಿಲ್ಲ. ಅವರು ಕೇವಲ 21ನೇ ವಯಸ್ಸಿನಲ್ಲಿ ರೀನಾ ದತ್ತಾ ಅವರನ್ನು ಮೊದಲ ಬಾರಿಗೆ ವಿವಾಹವಾದರು, ಆದರೆ ನಂತರದ ದಿನಗಳಲ್ಲಿ ವಿಚ್ಛೇದನ ಪಡೆದರು. ಅದಾದ ಬಳಿಕ, ತಮ್ಮ 40ನೇ ವಯಸ್ಸಿನಲ್ಲಿ ಕಿರಣ್ ರಾವ್ ಅವರನ್ನು ಕೈಹಿಡಿದರು. ವಿಚ್ಛೇದನದ ನಂತರವೂ ಆಮಿರ್ ಖಾನ್ ತಮ್ಮ ಇಬ್ಬರೂ ಮಾಜಿ ಪತ್ನಿಯರೊಂದಿಗೆ ಉತ್ತಮ ಸ್ನೇಹ ಸಂಬಂಧವನ್ನು ಕಾಯ್ದುಕೊಂಡಿದ್ದಾರೆ. ಆದರೆ, ಇವರ ಮೊದಲ ಮತ್ತು ಎರಡನೇ ವಿವಾಹ ಜೀವನಗಳು ಮುರಿದು ಬೀಳಲು ಅಸಲಿ ಕಾರಣವೇನೆಂದು ಕೆಲವೇ ಜನರಿಗೆ ತಿಳಿದಿದೆ.

ಇದನ್ನೂ ಓದಿ: ಆಮಿರ್ ಖಾನ್ 3ನೇ ಮದುವೆಗೆ ದಿನಾಂಕ ನಿಗದಿ; ಜುಲೈ 5ರಂದು ಗೌರಿ ಜೊತೆ ವಿವಾಹ?

ಆಮಿರ್ ಖಾನ್ ಅವರ ಮೊದಲ ಮದುವೆ:

ನಟ ಆಮಿರ್ ಖಾನ್ ಮೊದಲು ರೀನಾ ದತ್ತಾ ಅವರನ್ನು 1986 ರಲ್ಲಿ ವಿವಾಹವಾದರು. ಆ ಸಮಯದಲ್ಲಿ ಇವರಿಬ್ಬರೂ ನೆರೆಹೊರೆಯವರಾಗಿದ್ದು, ಕ್ರಮೇಣ ಪ್ರೀತಿಯಲ್ಲಿ ಬಿದ್ದಿದ್ದರು. ಆಮಿರ್ ಮತ್ತು ರೀನಾ ತಮ್ಮ ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ಬಹಳ ಚಿಕ್ಕ ವಯಸ್ಸಿನಲ್ಲಿಯೇ (ಆಮಿರ್ 21 ವರ್ಷ ಮತ್ತು ರೀನಾ 19 ವರ್ಷ) ಮದುವೆಯಾಗಿದ್ದರು. ರೀನಾ ಮತ್ತು ಆಮಿರ್ ದಂಪತಿಗೆ ಜುನೈದ್ ಮತ್ತು ಐರಾ ಎಂಬ ಇಬ್ಬರು ಮಕ್ಕಳಿದ್ದಾರೆ. ಇವರ ವೈವಾಹಿಕ ಜೀವನವು ಹೆಚ್ಚು ಕಾಲ ಉಳಿಯಲಿಲ್ಲ. ಮದುವೆಯಾದ 16 ವರ್ಷಗಳ ನಂತರ, ಅಂದರೆ 2002 ರಲ್ಲಿ ಇಬ್ಬರೂ ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನ ಪಡೆದರು. ಆ ಸಮಯದಲ್ಲಿ ತಾವು ಸಂಪೂರ್ಣವಾಗಿ ಚಲನಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಕುಟುಂಬಕ್ಕೆ ಸರಿಯಾಗಿ ಸಮಯ ನೀಡಲು ಸಾಧ್ಯವಾಗಲಿಲ್ಲ ಎಂದು ಆಮಿರ್ ಖಾನ್ ಅವರೇ ಸ್ವತಃ ಒಪ್ಪಿಕೊಂಡಿದ್ದರು. ಇದೇ ಕಾರಣಕ್ಕಾಗಿ, 16 ವರ್ಷಗಳ ದಾಂಪತ್ಯದ ನಂತರ ಆಮಿರ್ ಮತ್ತು ರೀನಾ ಪರಸ್ಪರ ಒಪ್ಪಿಗೆಯೊಂದಿಗೆ ಬೇರೆಯಾಗಲು ನಿರ್ಧರಿಸಿದರು.

ರೀನಾ ದತ್ತಾ ಈಗ ಏನು ಮಾಡುತ್ತಿದ್ದಾರೆ?

ರೀನಾ ದತ್ತಾ ಅವರು ಸದ್ಯ ಚಿತ್ರರಂಗದ ಜನಮನ ಹಾಗೂ ಗ್ಲಾಮರ್ ಪ್ರಪಂಚದಿಂದ ದೂರವಿದ್ದಾರೆ. ಆದಾಗ್ಯೂ, ಅವರು ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಇದರೊಂದಿಗೆ ಅವರು ತಮ್ಮ ಕುಟುಂಬದವರ ಜೊತೆ ಸಮಯ ಕಳೆಯುವುದನ್ನು ಹೆಚ್ಚು ಇಷ್ಟಪಡುತ್ತಾರೆ. ಪ್ರಸ್ತುತ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ವಾಸಿಸುತ್ತಿರುವ ರೀನಾ, ಮಗಳು ಐರಾ ಖಾನ್ ಅವರ ಕುಟುಂಬದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ.

ಆಮಿರ್ ಖಾನ್ ಎರಡನೇ ಮದುವೆ

ರೀನಾ ಅವರಿಂದ ವಿಚ್ಛೇದನ ಪಡೆದ ಮೂರು ವರ್ಷಗಳ ನಂತರ, ಅಂದರೆ 2005 ರಲ್ಲಿ ಆಮಿರ್ ಖಾನ್ ಕಿರಣ್ ರಾವ್ ಅವರನ್ನು ಎರಡನೇ ಬಾರಿಗೆ ವಿವಾಹವಾದರು. ಕಿರಣ್ ಅವರು ಆಮಿರ್ ಖಾನ್ ಅವರಿಗಿಂತ 10 ವರ್ಷ ಚಿಕ್ಕವರಾಗಿದ್ದಾರೆ. ಇವರಿಬ್ಬರ ಪ್ರೇಮಕಥೆ ‘ಲಗಾನ್’ ಸಿನಿಮಾದ ಚಿತ್ರೀಕರಣದ ನಂತರ ಪ್ರಾರಂಭವಾಗಿತ್ತು. ಅವರ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿ, ಮದುವೆಗೆ ಮುಂಚೆಯೇ ಇಬ್ಬರೂ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದ್ದರು. ಅದಾದ ನಂತರ, 2011 ರಲ್ಲಿ ಇವರಿಗೆ ಆಜಾದ್ ಎಂಬ ಮಗ ಜನಿಸಿದನು. ಆದಾಗ್ಯೂ, ಈ ಸಂಬಂಧವೂ ಹೆಚ್ಚು ಕಾಲ ಉಳಿಯಲಿಲ್ಲ. ಆಮಿರ್ ಮತ್ತು ಕಿರಣ್ ರಾವ್ 2021 ರಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ಬೇರ್ಪಟ್ಟರು.

ಕಿರಣ್ ರಾವ್ ಈಗ ಏನು ಮಾಡುತ್ತಿದ್ದಾರೆ?

ಕಿರಣ್ ರಾವ್ ಅವರು ಚಿತ್ರರಂಗದ ಪ್ರಸಿದ್ಧ ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿಯಾಗಿದ್ದಾರೆ. ಅವರು ಪ್ರಸ್ತುತ ಮುಂಬೈನಲ್ಲಿ ವಾಸಿಸುತ್ತಿದ್ದು, ಆಮಿರ್ ಖಾನ್ ಅವರ ಸಿನಿಮಾ ನಿರ್ಮಾಣ ಸಂಸ್ಥೆಯ ವಿವಿಧ ಸಿನಿಮಾಗಳಿಗೆ ಸಹಾಯ ಮಾಡುತ್ತಾರೆ. ವಿಚ್ಛೇದನದ ಬಳಿಕವೂ ಇಬ್ಬರೂ ಒಟ್ಟಾಗಿ ತಮ್ಮ ಮಗ ಆಜಾದ್‌ನ ಜವಾಬ್ದಾರಿಯನ್ನು ಸಹ-ಪೋಷಕರಾಗಿನಿಭಾಯಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link