Headlines

nagaraj11081993

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು – Kannada News

ಬೆಂಗಳೂರು, ಜೂನ್ 4: ಬೆಂಗಳೂರಿನ (Bengaluru) ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವೆ ಹಳಿಗಳ ಇಂಜಿನಿಯರಿಂಗ್ ಕಾಮಗಾರಿ (ಲೈನ್ ಬ್ಲಾಕ್) ಹಮ್ಮಿಕೊಳ್ಳಲಾಗಿರುವ ಕಾರಣ ಈ ಮಾರ್ಗದಲ್ಲಿ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ. ಜೂನ್ 7 ಮತ್ತು ಜೂನ್ 8 ರಂದು ಎರಡು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, 6 ಮೆಮು (MEMU) ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕಚೇರಿ ಹಾಗೂ…

Read More

ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆ: ‘ಕೈ’ ಪಾಳಯದಲ್ಲಿ ಮುಂದುವರಿದ ಅಂತೆಕಂತೆ – Kannada News

ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆImage Credit source: Tv9 Kannada ಬೆಂಗಳೂರು, ಜೂನ್​​ 04: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ (DK Shivakumar)​​ ನೇತೃತ್ವದ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಬಿರುಸು ಪಡೆದುಕೊಂಡಿವೆ. ಸಿಎಂ ಡಿಕೆಶಿ ಜೊತೆ ನಿನ್ನೆ (ಜೂನ್​ 03) ಡಿಸಿಎಂ ಆಗಿ ಡಾ.ಜಿ. ಪರಮೇಶ್ವರ್​​ ಮತ್ತು 12 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದರು. ಮೊದಲ ಹಂತದಲ್ಲಿ ಕೆಲ ನಾಯಕರಷ್ಟೇ ಸಂಪುಟಕ್ಕೆ ಸೇರ್ಪಡೆಯಾಗಿದ್ದು, ಸಾಕಷ್ಟು ಚರ್ಚೆ ಬಳಿಕ…

Read More

ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ‘ಕಾಕ್ರೋಚ್ ಜನತಾ ಪಕ್ಷ’ದ ಶಾಂತಿಯುತ ಹೆಜ್ಜೆ: ಹೊಸ ವಕ್ತಾರರ ನೇಮಕ, ಜೂನ್ 6 ರಂದು ಬೃಹತ್ ಜಾಗೃತಿ ರ‍್ಯಾಲಿ – Kannada News

ನವದೆಹಲಿ, ಜೂನ್ 04: ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ದೇಶದ ಯುವಕರ ಭವಿಷ್ಯವನ್ನು ಸುರಕ್ಷಿತಗೊಳಿಸಲು ಯುವ ರಾಜಕೀಯ ಚಳವಳಿಯಾದ ‘ಕಾಕ್ರೋಚ್ ಜನತಾ ಪಕ್ಷ’ (CJP) ಮಹತ್ವದ ಸಕಾರಾತ್ಮಕ ನಿರ್ಧಾರಗಳನ್ನು ಪ್ರಕಟಿಸಿದೆ.  ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷವು ತನ್ನ ಹೊಸ ಸಂವಹನ ಸಮಿತಿಯನ್ನು ರಚಿಸಿದ್ದು, ಪ್ರತಿಭಾವಂತ ಯುವ ನಾಯಕರಿಗೆ ಜವಾಬ್ದಾರಿ ನೀಡಿದೆ. ಪ್ರಮುಖ ವಕ್ತಾರರ ನೇಮಕ ಪಕ್ಷದ ಧ್ವನಿಯಾಗಿ ಮಾಧ್ಯಮಗಳನ್ನು ಮುನ್ನಡೆಸಲು ಮೂವರು ಪ್ರಮುಖ ಗಣ್ಯರನ್ನು ಅಧಿಕೃತ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ: ಸೌರವ್ ದಾಸ್: ತನಿಖಾ…

Read More

SBI Recruitment 2026: SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ – Kannada News

SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಅವಕಾಶ ನೀಡಿದೆ. SBI ತನ್ನ ಅಪ್ರೆಂಟಿಸ್ ನೇಮಕಾತಿ 2026ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ದೇಶಾದ್ಯಂತ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಮೇ 19 ರಿಂದ ಜೂನ್ 8, 2026ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಬ್ಯಾಂಕಿಂಗ್ ಕ್ಷೇತ್ರದಲ್ಲಿ…

Read More

ಗಾಯಗೊಂಡ ವಿರಾಟ್ ಕೊಹ್ಲಿ; ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಔಟ್ – Kannada News

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಈಗಾಗಲೇ ಟೆಸ್ಟ್ ಹಾಗೂ ಟಿ20 ಮಾದರಿಯ ಕ್ರಿಕೆಟ್​​ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಐಪಿಎಲ್ ಹೊರತುಪಡಿಸಿ ಅವರ ಆಟ ನೋಡ ಸಿಗೋದು ಏಕದಿನ ಪಂದ್ಯಗಳಲ್ಲಿ ಮಾತ್ರ. ಅವರು ಅಪ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಬೇಕಿತ್ತು. ಆದರೆ, ಸ್ನಾಯು ಸೆಳೆತದ ಕಾರಣದಿಂದ ಈ ಸರಣಿಯಿಂದ ಹೊರ ನಡೆದಿದ್ದು, ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅಪ್ಘಾನಿಸ್ತಾನ ತಂಡ ಭಾರತಕ್ಕೆ ಆಗಮಿಸುತ್ತಿದ್ದು, ಜೂನ್ 6-10ರವರೆಗೆ ಒಂದು ಟೆಸ್ಟ್ ಪಂದ್ಯ ಆಡಲಿದೆ. ಜೂನ್ 13ರಿಂದ…

Read More

ಫಾರೋ ದ್ವೀಪಗಳಲ್ಲಿ700ಕ್ಕೂ ಅಧಿಕ ತಿಮಿಂಗಿಲ ಹಾಗೂ ಡಾಲ್ಫಿನ್​ಗಳ ಹತ್ಯಾಕಾಂಡ – Kannada News

ಡಾಲ್ಫಿನ್​ಗಳು Image Credit source: The Whales and Dolphins conservation ಟೋರ್ಶಾವ್ನ್, ಜೂನ್ 04: ಉತ್ತರ ಅಟ್ಲಾಂಟಿಂಕ್ ಮಹಾಸಾಗರದಲ್ಲಿರುವ ಡೆನ್ಮಾರ್ಕ್​ನ ಫಾರೋ ದ್ವೀಪಗಳಲ್ಲಿ ಇತ್ತೀಚಿಗೆ 700ಕ್ಕೂ ಹೆಚ್ಚು ತಿಮಿಂಗಿಲ(Whales) ಗಳು ಹಾಗೂ ಡಾಲ್ಫಿನ್​ಗಳನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷವೂ ಕೂಡ ಜನರು ಇವುಗಳನ್ನು ಬೇಟೆಯಾಡುತ್ತಾರೆ ಅದಕ್ಕೆ ಗ್ರೈಂಡ್ ಡ್ರಾಪ್ ಎಂದು ಹೆಸರು. ಜಾಗತಿಕ ಪರಿಸರ ಸಂರಕ್ಷಣಾ ಸಂಸ್ಥೆಯಾದ ‘ಸೀ ಶೆಫರ್ಡ್’ (Sea Shepherd) ಮತ್ತು ‘ಓಷನ್ ಕೇರ್’ (OceanCare) ವರದಿಗಳ ಪ್ರಕಾರ,…

Read More

ಒರಾಕಲ್​ನಲ್ಲಿ ಕೆಲಸ ಕಳೆದುಕೊಳ್ಳಲಿರುವ 30,000 ಉದ್ಯೋಗಿಗಳು; ಜೂನ್ 18ರೊಳಗೆ ಲೇ ಆಫ್ ಪ್ರಕ್ರಿಯೆ ಪೂರ್ಣ – Kannada News

ವಾಷಿಂಗ್ಟನ್, ಜೂನ್ 4: ವಿಶ್ವದ ಪ್ರಮುಖ ಸಾಫ್ಟ್​ವೇರ್ ಅಪ್ಲಿಕೇಶನ್ ಕಂಪನಿಯಾದ ಒರಾಕಲ್ (Oracle) ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸಲಿದೆ. ಈ ಕಂಪನಿಯು ತನ್ನ ಜಾಗತಿಕ ಉದ್ಯೋಗಿಗಳ ಪೈಕಿ ಸುಮಾರು 18% ರಷ್ಟು ಮಂದಿಯನ್ನು ಕೆಲಸದಿಂದ ತೆಗೆದುಹಾಕುತ್ತಿದೆ. ಈ ಪ್ರಕ್ರಿಯೆಯು ಜೂನ್ 1 ರಿಂದ ನಡೆಯುತ್ತಿದ್ದು ಜೂನ್ 15ರೊಳಗೆ ಪೂರ್ಣಗೊಳ್ಳಲಿದೆ. ಆಶ್ಚರ್ಯದ ಸಂಗತಿಯೆಂದರೆ, ಈ ದೊಡ್ಡಮಟ್ಟದ ಲೇ ಆಫ್ ನಡೆಯುತ್ತಿರುವುದು ಕಂಪನಿ ಸುಸ್ಥಿತಿಯಲ್ಲಿರುವಾಗಲೇ. ಒರಾಕಲ್ ಕಂಪನಿ ಉತ್ತಮ ಆದಾಯವನ್ನು ಗಳಿಸುತ್ತಿದೆ. ಕ್ಲೌಡ್…

Read More

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು – Kannada News

ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದ ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳುImage Credit source: tv9 ಬೆಂಗಳೂರು, ಜೂನ್ 4: ಚಾಮರಾಜನಗರ (Chamarajanagar) ಮತ್ತು ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಗಳಲ್ಲಿ ಗುರುವಾರ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, 7 ತಿಂಗಳ ಹಸುಗೂಸು ಹಾಗೂ ವೃದ್ಧ ದಂಪತಿ ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ವೇಗದ ಚಾಲನೆ ಮತ್ತು ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಈ ಎರಡೂ ದುರಂತಗಳು ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳು…

Read More

“ಅಧಿಕಾರ ಬೇಕಾದವರು ಡಿಕೆಶಿ ಜತೆ ಹೋಗಿ, ಪಕ್ಷ ಕಟ್ಟುವವರು ನನ್ನೊಂದಿಗೆ ಬನ್ನಿ”: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಮಾತು – Kannada News

ಬಿ.ಕೆ. ಹರಿಪ್ರಸಾದ್ ಬೆಂಗಳೂರು, ಜೂ.4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ. “ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಕಾಂಗ್ರೆಸ್​​​​ ನಾಯಕರಿಗೆ ಹಾಗೂ ಸಚಿವ ಆಕ್ಷಾಂಕಿಗಳಿಗೆ…

Read More

ಆಮಿರ್ ಖಾನ್​ಗೆ ಮೂರನೇ ವಿವಾಹ; ಮೊದಲ ಎರಡು ವೈವಾಹಿಕ ಬದುಕು ಮುರಿದುಬಿದ್ದಿದ್ದು ಏಕೆ? – Kannada News

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ನಟ ಆಮಿರ್ ಖಾನ್ ಪ್ರಸ್ತುತ ತಮ್ಮ ವೃತ್ತಿಪರ ಜೀವನಕ್ಕಿಂತ ಹೆಚ್ಚಾಗಿ ವೈಯಕ್ತಿಕ ಜೀವನದ ಕಾರಣಕ್ಕಾಗಿಯೇ ಭಾರಿ ಸುದ್ದಿಯಲ್ಲಿದ್ದಾರೆ. ಅವರ ಖಾಸಗಿ ಬದುಕಿನಲ್ಲಿ ನಡೆಯುತ್ತಿರುವ ಸರಣಿ ಘಟನೆಗಳು ಸದ್ಯ ವರದಿಯಾಗುತ್ತಿವೆ. ಆಮಿರ್ ಖಾನ್ ತಮ್ಮ 61ನೇ ವಯಸ್ಸಿನಲ್ಲಿ ಮೂರನೇ ಬಾರಿಗೆ ವಿವಾಹವಾಗಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಜುಲೈ 5 ರಂದು ಅವರು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರೊಂದಿಗೆ ಖಾಸಗಿ ಸಮಾರಂಭವೊಂದರಲ್ಲಿ ವಿವಾಹವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆಮಿರ್ ಖಾನ್ ಅವರು ತಮ್ಮ 60ನೇ ಹುಟ್ಟುಹಬ್ಬದ…

Read More