ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿ: ಬಾಲಕಿ ಸೇರಿ ಇಬ್ಬರು ಸಾವು; ಮೂವರ ಸ್ಥಿತಿ ಗಂಭೀರ
ಉಡುಪಿ, ಮಾರ್ಚ್ 29: ನಿಂತಿದ್ದ ಕಂಟೈನರ್ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದd ಬಳಿ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಮತಾ(36) ಹಾಗೂ ಮಗಳು ಧೃತಿಕಾ(14) ಪ್ರಾಣ ಬಿಟ್ಟಿದ್ದು, ಪತಿ ರಾಘು(40), ಮಕ್ಕಳಾದ ಜಾಹ್ನವಿ(12), ಚಾರ್ವಿ(10) ಹಾಗೂ ಕಾರು ಚಾಲಕ ಕಿರಣ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ…