ಕರ್ನಾಟಕದಲ್ಲಿ ಶುರುವಾಯ್ತು ಡಿಕೆ ಶಿವಕುಮಾರ್ ರಾಜ್ಯಭಾರ: ಡಿಕೆ ಸೈನ್ಯ ಹೀಗಿದೆ
ಕಾಂಗ್ರೆಸ್ನ ಟ್ರಬಲ್ ಶೂಟರ್, ರಾಜ್ಯದ ಪ್ರಮುಖ ಒಕ್ಕಲಿಗ ನಾಯಕ, ಡಿಕೆ ಶಿವಕುಮಾರ್ ಇದೀಗ ಕರುನಾಡಿನ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆಗೇರಿದ್ದಾರೆ. ಲೋಕಭವನದಲ್ಲಿ ನೂತನ ಸಿಎಂ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಡಾ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಡಾ. ಪರಮೇಶ್ವರ್ ಡಾ. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ…