Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ – Kannada News
ಬೆಂಗಳೂರು, ಜೂನ್ 03: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…