All posts by nagaraj11081993

ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತೆರಡು ಮಂದಿ ಸ್ಥಿತಿ ಗಂಭೀರ

ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತೆರಡು ಮಂದಿ ಸ್ಥಿತಿ ಗಂಭೀರ

ಆನೇಕಲ್​​, ಮಾರ್ಚ್​​ 29: ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯೋರ್ವ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ, ಬಳಿಕ ತಾನೂ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಘಟನೆಯಲ್ಲಿ ತಾಯಿ ಮತ್ತು ಅಕ್ಕ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬಾಲಕ ಸೇರಿ ಇಬ್ಬರಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ತಾಯಿ ಆಶಾ(55), ಅಕ್ಕ ವರ್ಷಿತಾ(34) ಮೃತರಾಗಿದ್ದು, ಮೋಹನ್ ಗೌಡ(27), ಅಕ್ಕನ ಮಗ ಮಯಾಂಕ್(11) ಸ್ಥಿತಿ ಗಂಭೀರವಾಗಿದೆ.

ಸಾಲಗಾರರ ಕಾಟದಿಂದ ಮೋಹನ್​​ ಗೌಡ ತೀವ್ರವಾಗಿ ಬೇಸತ್ತಿದ್ದರು. ಈ ಸಂಬಂಧ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ವಿಡಿಯೋ ಮಾಡಿದ್ದ ಮೋಹನ್, ಅದನ್ನು ತನ್ನ ಸಂಬಂಧಿಕರಿಗೆ ಕೂಡ ಕಳುಹಿಸಿದ್ದರು. ವಿಡಿಯೋ ನೋಡಿ ಆತಂಕಗೊಂಡ ಸಂಬಂಧಿಕರು ಮನೆ ಬಳಿ ಬಂದಿದ್ದಾರೆ. ಈ ವೇಳೆ ಡೋರ್​​ ಲಾಕ್​​ ಆಗಿರೋದು ಕಂಡುಬಂದಿದ್ದು, ಬಾಗಿಲನ್ನು ಒಡೆದು ಒಳ ಹೋಗಿ ನೋಡಿದಾಗ ಎರಡು ಮೃತ ದೇಹಗಳು ಪತ್ತೆಯಾಗಿವೆ. ಜೊತೆಗೆ ಮೋಹನ್​​ ಮತ್ತು ಮಯಾಂಕ್ ನೆಲದ ನೇಲೆ ಒದ್ದಾಡುತ್ತಿರುವುದನ್ನು ಕಂಡ ಸಂಬಂಧಿಕರು ಕೂಡಲೇ ಅವರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರಿಬ್ಬರಿಗೂ ಸದ್ಯ ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅತ್ತಿಬೆಲೆ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಇನ್ನು ಘಟನೆ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾತ್ ಮಾಹಿತಿ ನೀಡಿದ್ದು, ರಾತ್ತಿ 10:30ರ ಸುಮಾರಿಗೆ ಆತ್ಮಹತ್ಯೆ ಯತ್ನದ ಬಗ್ಗೆ ಮಾಹಿತಿ ಸಿಕ್ಕಿದೆ. ಕೂಡಲೇ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅತಿಯಾದ ಸಾಲ ಘಟನೆಗೆ ಕಾರಣ ಎಂಬುದು ಗೊತ್ತಾಗಿದೆ. ಗಾಯಾಳು ಮೋಹನ್ ಚೀಟಿ ವ್ಯವಹಾರದಲ್ಲಿ ಸಾಲ ಮಾಡಿಕೊಂಡಿದ್ದ. ಜೊತೆಗೆ ಐಷಾರಾಮಿ ಜೀವನಕ್ಕೆಂದು ದುಂದು ವೆಚ್ಚ ಮಾಡಿದ್ದು, ಸಾಲ ತೀರಿಸಲಾಗದೆ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿದೆ. ಗಾಯಾಳು ಮೋಹನ್ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕುತ್ತಿಗೆ ಸೀಳಿ ಬಳಿಕ ತಾನು ಕುತ್ತಿಗೆ ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಮುಂದಿನ ತನಿಖೆ ವೇಳೆ ನಿಖರ ಕಾರಣ ತಿಳಿಯಲಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Horoscope Today: ಇಂದು ಈ ರಾಶಿಯವರು ಮಾನಸಿಕವಾಗಿ ಸದೃಢರಾಗಿರಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 29​, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಏಕಾದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ಆಶ್ಲೇಷ ನಕ್ಷತ್ರದಲ್ಲಿ ಚಂದ್ರನ ಸಂಚಾರವು ವಿವಿಧ ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ.

 

 

 

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 29ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಕೃಷಿಯಲ್ಲಿ ತೊಡಗಿಕೊಂಡವರು ಜಮೀನಿನಲ್ಲಿ ಕೆಲವು ದೀರ್ಘಾವಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಿದ್ದೀರಿ. ಕೊಟ್ಟಿಗೆ, ಗೋದಾಮು, ಇತರೆ ನಿಮ್ಮ ಚಟುವಟಿಕೆಗೆ ಅನುಕೂಲ ಆಗುವ ರೀತಿ ಯೋಜನೆ ಮಾಡಿಕೊಳ್ಳಲಿದ್ದೀರಿ. ಕುಟುಂಬ ಸದಸ್ಯರು ನಿಮ್ಮ ಆಲೋಚನೆಗಳಿಗೆ ಆರ್ಥಿಕವಾಗಿ ನೆರವು ನೀಡಲಿದ್ದಾರೆ. ತಕ್ಷಣಕ್ಕೆ ಬೇಡ ಅಂದುಕೊಂಡಂಥ ಕೆಲವು ಕೆಲಸಗಳನ್ನು ನಿರ್ಧಾರ ಬದಲಿಸಿ, ಆರಂಭ ಮಾಡಿಬಿಡುತ್ತೀರಿ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದಂಥವರು ಅದನ್ನು ಹಿಂತೆಗೆದುಕೊಳ್ಳವ ಆಲೋಚನೆ ಬಂದರೆ ಅದರಂತೆಯೇ ನಡೆದುಕೊಳ್ಳುವುದು ಉತ್ತಮ. ನಿಮಗೆ ಉದ್ಯೋಗ ಸ್ಥಳದಲ್ಲಿ ನೀಡಿದ್ದ ಭರವಸೆಗಳನ್ನು ಮೇಲಧಿಕಾರಿಗಳು ಈಡೇರಿಸುವ ಸೂಚನೆ ದೊರೆಯಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ತುಂಬ ಉತ್ಸಾಹದಿಂದ ಕೆಲಸ- ಕಾರ್ಯಗಳಲ್ಲಿ ತೊಡಗಿಕೊಳ್ಳುವುದಕ್ಕೆ ಆಗಲ್ಲ. ಮುಖ್ಯವಾಗಿ ಮೈ- ಕೈ ನೋವು, ಜ್ವರ, ತಲೆನೋವು ಇಂಥವು ನಿಮ್ಮನ್ನು ಈ ದಿನ ಬಹುವಾಗಿ ಕಾಡಲಿವೆ. ಯಾಕೆ- ಏನು ಎಂಬುದನ್ನು ವಿಚಾರಿಸದೆ ಸ್ನೇಹಿತರು ಹೇಳುವಂತಹ ಕೆಲಸಗಳನ್ನು ಮಾಡುವುದಕ್ಕೆ ಒಪ್ಪಿಕೊಳ್ಳಬೇಡಿ. ಸಂಘ- ಸಂಸ್ಥೆಗಳನ್ನು ಮುನ್ನಡೆಸುತ್ತಾ ಇರುವವರಿಗೆ ದೊಡ್ಡ ಜವಾಬ್ದಾರಿಯೊಂದು ಹೆಗಲು ಏರಲಿದೆ. ಇನ್ನು ಬಿಡಿ ಬಿಡಿಯಾಗಿ ಕೆಲಸ ಮುಗಿಸುವ ಬದಲಿಗೆ ಒಂದೇ ಸಲಕ್ಕೆ ಎಲ್ಲವನ್ನೂ ಮಾಡಿಬಿಡೋಣ ಎಂದುಕೊಂಡು ಮುಂದಕ್ಕೆ ಹಾಕಿಕೊಂಡು ಹೋಗಬೇಡಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಬಂದದ್ದು ಬರಲಿ ಎಂದು ಧೈರ್ಯವಾಗಿ ನೀವು ತೆಗೆದುಕೊಂಡ ತೀರ್ಮಾನಗಳು ಲಾಭದಾಯಕ ಆಗಲಿದೆ. ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸುವುದಕ್ಕಾಗಿ ವಿರೋಧಿಗಳು ಮಾಡುವ ಪ್ರಯತ್ನಗಳು ಅವರಿಗೇ ಉಲ್ಟಾ ಹೊಡೆಯಲಿದೆ. ನಿಧಾನವಾಗಿ ಬದಲಾವಣೆಗೆ ಹೊಂದಾಣಿಕೆ ಮಾಡಿಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ಕೆಲವು ತಾಂತ್ರಿಕ ತರಬೇತಿಗಳನ್ನು ಅನಿವಾರ್ಯವಾಗಿ ಕಲಿಯಬೇಕು ಎಂಬ ಸ್ಥಿತಿ ನಿರ್ಮಾಣ ಆಗಲಿದೆ. ಆದರೆ ಇದರಿಂದ ಭವಿಷ್ಯದಲ್ಲಿ ನಿಮಗೆ ಅನುಕೂಲ ಆಗಲಿದೆ. ಕ್ರೀಡಾಪಟುಗಳಿಗೆ ಪ್ರಾಯೋಜಕರು ದೊರೆಯುವಂಥ ಯೋಗ ಇದೆ. ಪ್ರತಿಷ್ಠಿತ ಸಂಸ್ಥೆ ಅಥವಾ ವ್ಯಕ್ತಿಗಳು ಅವರಾಗಿಯೇ ಭೇಟಿ ಆಗುವಂತೆ ತಿಳಿಸಿದಲ್ಲಿ ನಿಧಾನ ಮಾಡಬೇಡಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನೀವು ನಂಬಿದ ವ್ಯವಹಾರ ಬೆಳವಣಿಗೆಗೆ ಸಹಕಾರಿ ಆಗುವ ಸುಳಿವು ನೀಡಲಿದೆ. ಸಂಗಾತಿ ಕುಟುಂಬದ ಕಡೆಯಿಂದ ದೊಡ್ಡ ಮಟ್ಟದಲ್ಲಿ ಬೆಂಬಲ ದೊರೆಯಲಿದೆ. ನಿಮ್ಮ ಜೊತೆಗೆ ಓದಿದಂಥ ಸ್ನೇಹಿತರ ಸಲಹೆಯಿಂದ ಆಲೋಚನಾ ವಿಧಾನವನ್ನು ಬದಲಾವಣೆ ಮಾಡಿಕೊಳ್ಳಲಿದ್ದೀರಿ. ನಿಮಗೆ ಗೊತ್ತಿರುವ ಕೌಶಲಕ್ಕೆ ಬೇಡಿಕೆ ಹೆಚ್ಚಾಗಲಿದ್ದು, ಕೆಲವು ಪ್ರಾಜೆಕ್ಟ್ ಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣ ಮಾಡಿಕೊಟ್ಟಲ್ಲಿ ಮಾರುಕಟ್ಟೆಯಲ್ಲಿ ಇರುವುದಕ್ಕಿಂತ ಹೆಚ್ಚಿನ ಮೊತ್ತವನ್ನು ನೀಡುವುದಾಗಿ ಕೆಲವರು ಪ್ರಸ್ತಾವ ಇಡಲಿದ್ದಾರೆ. ನೀವು ಹಾಕಿದ್ದ ಪ್ಲಾನ್ ಗೆ ಸಂಬಂಧಿಸಿದಂತೆ ಇರುವ ಅನಿಶ್ಚಿತತೆ ದೂರ ಆಗಲಿದ್ದು, ಕುಟುಂಬದ ಎಲ್ಲ ಸದಸ್ಯರು ಬೆಂಬಲವನ್ನು ನೀಡಲಿದ್ದಾರೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿಮ್ಮ ಬುದ್ಧಿವಂತಿಕೆ ಹಾಗೂ ಚೌಕಾಶಿ ಮಾಡುವ ಸಾಮರ್ಥ್ಯ ಅತ್ಯುತ್ತಮವಾದ ಫಲ ನೀಡುವ ದಿನ ಇದಾಗಿರುತ್ತದೆ. ನಿಮ್ಮ ಜಮೀನು, ಸೈಟು ಅಥವಾ ಯಾವುದೇ ಅಸ್ತಿಗೆ ಸಂಬಂಧಿಸಿದ ಕಾಗದ ಪತ್ರದ ವ್ಯವಹಾರಕ್ಕೆ ಬಹಳ ಸಮಯದಿಂದ ಓಡಾಡುತ್ತಾ ಇದ್ದೀರಿ ಅಂತಾದರೆ ಅದು ಪೂರ್ಣಗೊಳ್ಳುವ ಯೋಗ ಇದೆ. ನಿಮ್ಮಿಂದ ಸಾಲ ಪಡೆದು ಬಹಳ ಸಮಯದಿಂದ ಅದನ್ನು ಹಿಂತಿರುಗಿಸಲ್ಲ ಅಂತಾದಲ್ಲಿ ಅದನ್ನು ವಸೂಲಿ ಮಾಡುವಂಥ ಯೋಗ ಈ ದಿನ ಇದೆ. ಬೇಕರಿ ಪದಾರ್ಥಗಳಿಂದ ದೂರ ಇರುವುದು ಒಳ್ಳೆಯದು. ಅದರಲ್ಲೂ ಇತ್ತೀಚೆಗೆ ನಿಮಗೆ ಹೊಟ್ಟೆನೋವಿನ ಸಮಸ್ಯೆ ತೀವ್ರ ಆಗಿದೆ ಅಂತಾದಲ್ಲಿ ಈ ಸಲಹೆಯನ್ನು ಕಡ್ಡಾಯವಾಗಿ ಪಾಲಿಸಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಈ ದಿನ ಚಂಚಲತೆ ವಿಪರೀತ ಕಾಡುತ್ತದೆ. ಆತುರದಲ್ಲಿ ನಿಮ್ಮ ಯಾವುದೇ ತೀರ್ಮಾನ ಹೇಳುವುದಕ್ಕೆ ಹೋಗಬೇಡಿ. ಇನ್ನು ನಿಮ್ಮ ಬಳಿ ಇರುವ ಹಣಕ್ಕೆ ಎಷ್ಟು ಅಷ್ಟಕ್ಕೆ ಮಾತ್ರ ಯೋಜನೆ ಹಾಕಿಕೊಳ್ಳಿ. ಏನನ್ನಾದರೂ ದಕ್ಕಿಸಿಕೊಳ್ಳ ಬಲ್ಲೆ ಎಂಬ ಆಲೋಚನೆ ಅಪಾಯಕಾರಿ ಆಗಲಿದೆ. ಸರ್ಕಾರಿ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ಮುಗಿಸಿಕೊಳ್ಳುವುದಕ್ಕೆ ಎಲ್ಲ ಪ್ರಯತ್ನ ಮಾಡಿದ ನಂತರವೂ ಕೊನೆ ಹಂತದಲ್ಲಿ ಅದು ನಿಂತು ಬಿಡಲಿದೆ. ಬೆನ್ನು ನೋವು ವಿಪರೀತವಾಗಿ ಕಾಡಬಹುದು. ಅದರಲ್ಲಿಯೂ ದ್ವಿಚಕ್ರ ವಾಹನವನ್ನು ಹೆಚ್ಚಾಗಿ ಬಳಸುತ್ತೀರಿ ಅಂತಾದಲ್ಲಿ ವೈದ್ಯರ ಬಳಿ ತೆರಳಿ, ಸಲಹೆ ತೆಗೆದುಕೊಳ್ಳುವುದು ಕ್ಷೇಮ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಪಾಲಿನ ಜವಾಬ್ದಾರಿಯನ್ನು ಶ್ರದ್ಧೆಯಿಂದ ಮಾಡಿದ್ದರ ಉತ್ತಮ ಫಲಿತವನ್ನು ಪಡೆದುಕೊಳ್ಳಲಿದ್ದೀರಿ. ನಿಮ್ಮಲ್ಲಿ ಕೆಲವರು ಹೆಚ್ಚಿನ ಬಡ್ಡಿದರಕ್ಕೆ ತಂದಿದ್ದ ಸಾಲವನ್ನು ಹಿಂತಿರುಗಿಸುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಮಿನರಲ್ ವಾಟರ್ ವಿತರಣೆಯ ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಉದ್ಯೋಗ ಸ್ಥಳದಲ್ಲಿ ಸವಾಲು ಎನಿಸಿದಂ ಕೆಲವು ಕೆಲಸಗಳನ್ನು ನೀವಾಗಿಯೇ ಮುಂದೆ ಹೋಗಿ ವಹಿಸಿಕೊಳ್ಳಲಿದ್ದೀರಿ. ಇದರಿಂದ ಯಶಸ್ಸು ಹಾಗೂ ಭವಿಷ್ಯದಲ್ಲಿ ಬಡ್ತಿ ಇತ್ಯಾದಿ ವಿಷಯಗಳಿಗೆ ಅನುಕೂಲ ಒದಗಿ ಬರುತ್ತದೆ. ಸಾದ್ಯಂತವಾಗಿ ಪರೀಕ್ಷೆ ಮಾಡದ ಹೊರತು ಯಾವುದೇ ಮುಖ್ಯ ಕಾಗದ- ಪತ್ರಗಳಿಗೆ ಸಹಿ ಮಾಡುವುದಕ್ಕೆ ಹೋಗಬೇಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು ಮಾಡಿಸಿಕೊಳ್ಳಲು ಅವಕಾಶಗಳು ಉದ್ಭವ ಆಗಲಿವೆ. ಕೆಲವು ಹಣಕಾಸಿನ ವಿಚಾರದ ನಿರ್ಧಾರಗಳು ಮುಂದಕ್ಕೆ ಹಾಕಿಕೊಳ್ಳಬೇಕಾಗುತ್ತದೆ. ಮೆಡಿಕಲ್ ಶಾಪ್ ನಡೆಸುತ್ತಾ ಇರುವವರು ಇದಕ್ಕೆ ಪೂರಕವಾಗಿ ಕೆಲವು ಹೊಸ ವ್ಯವಹಾರ ನಡೆಸುವ ಚಿಂತನೆ ನಡೆಸುತ್ತೀರಿ. ಉದ್ಯೋಗ ಸ್ಥಳದಲ್ಲಿ ನೀವು ಯಾವುದನ್ನು ಕೊನೆ ಆಯ್ಕೆ ಎಂದು ಭಾವಿಸಿರುತ್ತೀರೋ ಅದನ್ನೇ ಆರಿಸಿಕೊಳ್ಳುವಂತೆ ಆಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಇತರರ ವೈಯಕ್ತಿಕ ಅಭಿಪ್ರಾಯಗಳನ್ನು ತೆಗೆದುಹಾಕಲು ಹೋಗಬೇಡಿ. ಉದ್ಯೋಗ, ವೃತ್ತಿ- ವ್ಯವಹಾರಗಳಲ್ಲಿ ನೀಡುವಂಥ ಎಚ್ಚರಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ. ದೂರ ಪ್ರಯಾಣಕ್ಕೆ ಅಚಾನಕ್ ಆಗಿ ತೆರಳಲೇ ಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ಹಳೇ ಒಪ್ಪಂದಗಳನ್ನು ಮುಂದುವರಿಸುವುದು ಬೇಡ ಎಂದುಕೊಳ್ಳಲಿದ್ದೀರಿ. ತರಕಾರಿ- ಹಣ್ಣುಗಳ ಸರಬರಾಜು ವಾಹನವನ್ನು ಚಾಲನೆ ಮಾಡುವವರು ಇದ್ದಲ್ಲಿ ಅದರದೇ ವ್ಯಾಪಾರವನ್ನು ಶುರು ಮಾಡುವ ಆಲೋಚನೆ ಮೂಡಲಿದೆ. ದುಡಿಮೆಯು ನಿರೀಕ್ಷೆ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಪೈಕಿ ಕೆಲವರು ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ.

ಲೇಖನ- ಎನ್‌.ಕೆ.ಸ್ವಾತಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಎದುರುಹಾಕಿಕೊಳ್ಳುವುದು ಬೇಡ, ಯುಕ್ತಿ ಬಳಸಿ

ಮೇಷ ರಾಶಿ:

ನಿಮ್ಮ ಆನಂದದ ವ್ಯಕ್ತಿತ್ವದಿಂದಾಗಿ ಇತರರು ನಿಮ್ಮೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಾರೆ. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು. ಸಾಮಾಜಿಕ ಗೌರವದಿಂದ ನಿಮ್ಮ ನೈತಿಕವಾದ ಸ್ಥೈರ್ಯ ಹೆಚ್ಚುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ.

ವೃಷಭ ರಾಶಿ:

ನೀವು ಕುಟುಂಬ ಸದಸ್ಯರಿಂದ ಒತ್ತಡವನ್ನು ಎದುರಿಸಬಹುದು. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ಹಣದ ಬಗ್ಗೆ ವಾದಗಳು ಇರಬಹುದು. ನೀವು ಲೌಕಿಕ ಭೋಗಗಳಿಂದ ಮತ್ತು ಸೇವಕರಿಂದ ಎಲ್ಲ ರೀತಿಯ ಸಂತೋಷ ಮತ್ತು ಲಾಭವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಆರೋಗ್ಯದ ಕಡೆ ಸ್ವಲ್ಪ ಹೆಚ್ಚು ಗಮನವಿರಲಿ. ನಿಮ್ಮ ಕೆಲಸವು ಕೇವಲ ಸುತ್ತಾಟದಲ್ಲಿಯೇ ಮುಕ್ತಾಯವಾಗುವುದು. ಅಪ್ರಯೋಜಕ ವಿಚಾರದ ಬಗ್ಗೆ ಚಿಂತೆ ಮಾಡುವಿರಿ.

ಮಿಥುನ ರಾಶಿ:

ಅಧಿಕಾರಿಗಳಿಂದ ಕ್ರಮ ತೆಗೆದುಕೊಳ್ಳಬಹುದು. ವಾಹನ ಚಾಲನೆಯಿಂದ ಆಯಾಸವಾಗುವುದು. ನಿಮ್ಮನ್ನು ಇತರರು ನೋಡುವರು. ರಾಜಕಾರಣಿಗಳು ಕಾರ್ಯಕ್ರಮದ ಒತ್ತಡದಲ್ಲಿ ಇರುವರು. ಮಾನಸಿಕ ಒತ್ತಡದಿಂದ ಬೇರೆ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ಹಳೆಯ ವಿಚಾರವನ್ನು ವಿರೋಧಿಗಳು ಪುನಃ ಮೇಲಕ್ಕೆ ತಂದು ಕಲಹ ಮಾಡಬಹುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ.

ಕರ್ಕಾಟಕ ರಾಶಿ:

ಪರೋಪಕಾರದ ಬಗ್ಗೆ ಆಸಕ್ತಿಯು ಮೂಡಬಹುದು. ಧಾರ್ಮಿಕ ವಿಧಿವಿಧಾನಗಳಲ್ಲಿ ಆಸಕ್ತಿ ವಹಿಸಿ ಸಂಪೂರ್ಣ ಸಹಕಾರ ನೀಡುವಿರಿ. ಭೂ ವ್ಯವಹಾರದಿಂದ ಸೋಲು. ಅದೃಷ್ಟದಿಂದಲೂ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ, ನಿಮ್ಮ ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ನಿಮ್ಮನ್ನು ನಂಬಿದವರಿಗೆ ನೀವು ಮೋಸ ಮಾಡುವುದು ಬೇಡ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು.

ಸಿಂಹ ರಾಶಿ:

ವ್ಯಾಪಾರ ಬೆಳವಣಿಗೆಗೆ ಮಾಡಿದ ಪ್ರಯತ್ನಗಳು ಫಲಪ್ರದವಾಗುವುದಿಲ್ಲ. ಭವಿಷ್ಯದಲ್ಲಿ ನೀವು ಒಳ್ಳೆಯ ಫಲಿತಾಂಶವನ್ನು ಪಡೆಯುವಿರಿ. ಪರರ ಒಳಿತನ್ನು ನೋಡಿ ಅಸೂಯೆ ಬೇಡ. ಬರುವ ಕಾಲದ ವರೆಗೆ ತಾಳ್ಮೆ ಬೇಕು. ಬೇಡದ ಮಾತುಗಳನ್ನು ನೀವು ಎಲ್ಲರೆದುರು ಪ್ರಸ್ತಾಪಿಸುವಿರಿ. ನೀವು ತಾಳ್ಮೆಯಿಂದ ಮಾಡುವ ಯಾವುದೇ ಕೆಲಸವನ್ನು ನೀವು ಯಶಸ್ವಿಯಾಗಿ ಪೂರ್ಣಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ. ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ.

ಕನ್ಯಾ ರಾಶಿ:

ಇಂದು ನಿಮ್ಮ ಕರ್ತವ್ಯದ ಕಡೆ ಗಮನ ಹೆಚ್ಚಿರಲಿದೆ. ನೀವು ಸ್ವಂತ ಕೆಲಸಕ್ಕಾಗಿ ಸಾಕಷ್ಟು ಓಡಾಟ ಹಾಗೂ ಖರ್ಚನ್ನು ಮಾಡಬೇಕಾದೀತು. ನೀವು ನಿಮ್ಮ ಗುರುವಿನ ಬಗ್ಗೆ ಸಂಪೂರ್ಣ ಭಕ್ತಿ ಮತ್ತು ನಿಷ್ಠೆಯನ್ನು ಇಟ್ಟುಕೊಳ್ಳುವಿರಿ. ಮನಸ್ಸಿನ ನಿಯಂತ್ರಣದಲ್ಲಿ ನಿಮಗೆ ಕಷ್ಟವಾದೀತು. ಕುಟುಂಬದ ತೊಡಕುಗಳನ್ನು ಸೂಕ್ಷ್ಮವಾಗಿ ಪರಿಹರಿಸಿಕೊಳ್ಳಿ. ನೀವು ಹೊಸ ಕೆಲಸದಲ್ಲಿ ಹೂಡಿಕೆ ಮಾಡಬೇಕಾದರೆ, ನೀವು ಲಾಭವನ್ನು ಪಡೆಯುತ್ತೀರಿ ಮತ್ತು ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭವಿದೆ.

ತುಲಾ ರಾಶಿ:

ಇಂದು ಕಷ್ಟಕರವಾದ ಕಾರ್ಯಗಳೂ ಕೆಲವರಿಗೆ ಭಾರವಾಗದೇ ಇರಬಹುದು. ನಿಮ್ಮ ಉದ್ಯಮದ ಗುಣಮಟ್ಟವನ್ನು ಏರಿಸುವಿರಿ. ಪ್ರತಿಯೊಂದು ವಿಷಯದಲ್ಲೂ ನಿಮ್ಮ ಪೋಷಕರಿಂದ ನೀವು ಸಂತೋಷ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ. ನೀವು ಜನರಿಂದ ಪೂರ್ಣ ಗೌರವವನ್ನು ಪಡೆಯುತ್ತೀರಿ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಆಪ್ತರು ನಿಮಗೆ ಆತಿಥ್ಯವನ್ನು ಕೊಡಿಸುವರು. ಇಂದು ವಿದ್ಯಾರ್ಥಿಗಳಿಗೆ ಪ್ರಶಂಸೆ ಸಿಗುವುದು.

ವೃಶ್ಚಿಕ ರಾಶಿ:

ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಬಾಂಧವರ ಜೊತೆ ಸ್ನೇಹದಿಂದ ಇರುವಿರಿ. ಭೂಮಿಯ ವ್ಯವಹಾರವನ್ನು ಮಾಡಲು ಬಹಳ ಉತ್ಸಾವಿರಲಿದೆ. ಪೋಷಕರ ಬೆಂಬಲ ಮತ್ತು ಆಶೀರ್ವಾದದಿಂದ ಸಮಾಧಾನವಿರುತ್ತದೆ. ನಿಮ್ಮ ಬಂಧುಗಳ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮಾಡಬೇಡಿ. ಇಲ್ಲದಿದ್ದರೆ ನೀವು ಸಮಸ್ಯೆಗಳನ್ನು ಎದುರಿಸಬಹುದು. ಮಧುರವಾದ ಮಾತುಗಳಿಂದ ತುಂಡಾಗುವ ಸಂಬಂಧವನ್ನು ಸರಿ ಮಾಡಿಕೊಳ್ಳುವಿರಿ.

ಧನು ರಾಶಿ:

ಇಂದು ಅದೃಷ್ಟವು ನಿಮ್ಮ ಕಡೆ ಇರುವಂತೆ ಕಾಣುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಮಕ್ಕಳ ವೃತ್ತಿಜೀವನದಲ್ಲಿ ನೀವು ಸಾಕಷ್ಟು ತೃಪ್ತರಾಗುವಿರಿ. ಇಂದು, ತಾಯಿಯ ಕಡೆಯಿಂದ ಪ್ರೀತಿ ಮತ್ತು ವಿಶೇಷ ಬೆಂಬಲವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಐಷಾರಾಮಿಗಳಿಗಾಗಿ ನೀವು ಹಣವನ್ನು ಖರ್ಚು ಮಾಡುತ್ತೀರಿ. ಇದರಿಂದ ನಿಮ್ಮ ಶತ್ರುಗಳನ್ನು ಅಸಮಾಧಾನಗೊಳಿಸುತ್ತದೆ. ಕಾಲಿನ ಕೆಳನ ಭಾಗಕ್ಕೆ ಗಾಯವಾಗುವ ಸಾಧ್ಯತೆ ಇದೆ.

ಮಕರ ರಾಶಿ:

ಯಾವುದೇ ಕೂಲಂಕುಷವಾಗಿ ಯೋಚಿಸಿದ ಅನಂತರ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ನಿಮ್ಮ ಶತ್ರುಗಳಿಗೆ ತಾನಾಗಿಯೇ ಸೋಲಾಗುವುದು. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಉಂಟಾಗುವುದು. ಇಂದು ಕಛೇರಿಯಲ್ಲಿ ಕೊಡುವ ಕೆಲಸವನ್ನು ಬಹಳ ಜವಾಬ್ದಾರಿಯಿಂದ ಮಾಡಬೇಕಾದೀತು. ಆರೋಗ್ಯ ಸಮಸ್ಯೆಗಳು ನಿಮ್ಮ ಸರಿಯಿಲ್ಲದ ದಿನಚರಿಯಿಂದ ಬರಲಿದೆ. ಸೊಂಟದ ಭಾಗದಲ್ಲಿ ನೋವು ಕಾಣಿಸುಬುದು. ಅಮೂಲ್ಯ ವಸ್ತುವಿನ ಬಗ್ಗೆ ನಿಷ್ಕಾಳಜಿ ಸರಿಯಲ್ಲ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು.

ಕುಂಭ ರಾಶಿ:

ಇಂದು ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವು ನಿಮಗೇ ಪ್ರಯೋಜನವನ್ನು ನೀಡುತ್ತದೆ. ಮಾನಸಿಕ ಸ್ಥೈರ್ಯ ನಿಮಗೆ ಕಡಿಮೆಯಾಗಬಹುದು.‌ ಇಂದು ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ನಿಮ್ಮ ಮನಸ್ಸಿನಲ್ಲಿ ನೀವು ತುಂಬಾ ಸಂತೋಷವಾಗಿರುತ್ತೀರಿ. ಇಂದಿನ ಆದಾಯವು ಮಧ್ಯಮಕ್ಕಿಂತ ಚೆನ್ನಾಗಿ ಇರುವುದು. ಚಂಚಲ ಮನಸ್ಸು ಸಹಜವಾದುದನ್ನು ಗುರುತಿಸಲಾರದು. ಶತ್ರುಗಳ ಚಿಂತೆಯಿಂದ ಮಾನಸಿಕವಾಗಿ ಕುಗ್ಗುವಿರಿ. ನಿಮ್ಮಷ್ಟಕ್ಕೆ ನೀವಿರಲು ಸಾಧ್ಯವಾಗದು.

ಮೀನ ರಾಶಿ:

ಇಂದು ನೀವು ಹಣದ ವಿಷಯಗಳಲ್ಲಿ ಯಾವುದೇ ರೀತಿಯ ಅಪಾಯವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ಬಂಧುಗಳ ಒತ್ತಾಯಕ್ಕೆ ಮಣಿಯಬೇಕಾಗುವುದು. ನೀವು ಹಳೆಯ ಸ್ನೇಹಿತರಿಂದ ಬೆಂಬಲವನ್ನು ಪಡೆಯುವಿರಿ. ಉತ್ತಮ ಸ್ನೇಹಿತರ ಸಮೂಹವೂ ಸಹ ಹೆಚ್ಚಾಗಲಿದೆ. ಉತ್ತಮ ಕೆಲಸದ ಅನ್ವೇಷಣೆಯನ್ನು ಮಾಡುವಿರಿ. ನಿಮ್ಮ ಮಗನ ಮೇಲೆ ಸಂಪತ್ತಿನ ದೂರುವಿರಿ. ತುರ್ತು ಕಾರ್ಯಕ್ಕಾಗಿ ಮನೆಯಿಂದ ದೂರ ಹೋಗಬೇಕಾಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಭಾನು ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಸುಕರ್ಮ, ಕರಣ : ಗರಜ, ಸೂರ್ಯೋದಯ – 06 – 23 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:04 – 18:35, ಯಮಗಂಡ ಕಾಲ 12:29 – 14:01, ಗುಳಿಕ ಕಾಲ 16:32 – 17:04

-ಲೋಹಿತ ಹೆಬ್ಬಾರ್-8762924271 (what’s app only)

Source link

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಪಡೆದ ಆರ್​ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು.

ವಾಸ್ತವವಾಗಿ ಗುರಿ ಬೆನ್ನಟಲು ಬಂದ ಆರ್​ಸಿಬಿಗೆ ಉತ್ತಮ ಆರಂಭ ಸಿಗಲಿಲ್ಲ. ಫೀಲ್ಡಿಂಗ್​ನಲ್ಲಿ ಮಿಂಚಿದ್ದ ಫಿಲ್ ಸಾಲ್ಟ್ ಬ್ಯಾಟಿಂಗ್​ನಲ್ಲಿ ಕಮಾಲ್ ಮಾಡಲು ಸಾಧ್ಯವಾಗಲಿಲ್ಲ. ಕೇವಲ 9 ರನ್ ಗಳಿಸಿ ಔಟಾದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಖಾತೆ ತೆರೆದರು. ಆ ಬಳಿಕವೂ ಟಾಪ್ ಗೇರ್​ನಲ್ಲಿ ಬ್ಯಾಟಿಂಗ್‌ ಮಾಡಿದ ಪಡಿಕ್ಕಲ್ ಬೌಂಡರಿ ಸಿಕ್ಸರ್​ಗಳ ಮಳೆಗರೆದರು. ಇದರ ಪರಿಣಾಮವಾಗಿ ಆರ್​​ಸಿಬಿ ಕೇವಲ 4 ಓವರ್​ಗಳಲ್ಲಿ ಅರ್ಧಶತಕದ ಗಡಿ ದಾಟಿತು.

ಈ ಹಂತದಲ್ಲಿ ಪಡಿಕ್ಕಲ್ 11 ಎಸೆತಗಳಲ್ಲಿ 34 ರನ್ ಬಾರಿಸಿದ್ದರು. ನಂತರವೂ ಅಬ್ಬರ ಮುಂದುವರೆಸಿದ ಪಡಿಕ್ಕಲ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ಬರೆದರು. ಅಂತಿಮವಾಗಿ 9ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ ಪಡಿಕ್ಕಲ್ 26 ಎಸೆತಗಳಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 61 ರನ್ ಬಾರಿಸಿ ಔಟಾದರು. ಹಾಗೆಯೇ ಕೊಹ್ಲಿ ಜೊತೆಗೆ ಎರಡನೇ ವಿಕೆಟ್​ಗೆ ಶತಕದ ಜೊತೆಯಾಟವನ್ನು ನಡೆಸಿ ತಂಡದ ಗೆಲುವನ್ನು ಖಚಿತಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs SRH: ತವರಿನಲ್ಲಿ ಶುಭಾರಂಭ; ಆರ್​ಸಿಬಿ ಅಬ್ಬರಕ್ಕೆ ಸುಸ್ತಾದ ಸನ್​ರೈಸರ್ಸ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ತಂಡವನ್ನು ಸಲುಭವಾಗಿ ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್​ಹೆಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ, ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಅರ್ಧಶತಕದ ನೆರವಿನಿಂದ ಸುಲಭ ಜಯ ದಾಖಲಿಸಿತು.

Source link

ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರದ ವೇಳೆ ಶಾಸಕ ಪ್ರದೀಪ್​ ಈಶ್ವರ್​ಗೆ ಚಪ್ಪಲಿ ತೋರಿಸಿದ ಬಿಜೆಪಿ ಕಾರ್ಯಕರ್ತರು

ದಾವಣಗೆರೆ, ಮಾರ್ಚ್​ 28: ಉಪಚುನಾವಣಾ ಅಖಾಡ ರಂಗೇರಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾವು ಪಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್​ ಪರ ಇಂದು ಪ್ರಚಾರಕ್ಕಿಳಿದಿದ್ದ ಶಾಸಕ ಪ್ರದೀಪ್ ಈಶ್ವರ್​​ಗೆ ಪ್ರತಿಭಟನೆ ಬಿಸಿ ತಟ್ಟಿದೆ. ಬಿಜೆಪಿ ಬಗ್ಗೆ ಅವಹೇಳನಕಾರಿ ಪದ ಬಳಕೆಗೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೂರಕೆ ತೋರಿಸಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಭಾರೀ ಹೈಡ್ರಾಮಾವೇ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

‘ಉಳಿದವರು ಕಂಡಂತೆ’ಗೆ 12 ವರ್ಷ, ರಕ್ಷಿತ್ ಶೆಟ್ಟಿ ನೆನಪು ಮಾಡಿಕೊಂಡಿದ್ದಕ್ಕೆ ಕಾರಣ ಇದೆ

‘ಉಳಿದವರು ಕಂಡಂತೆ’ ರಕ್ಷಿತ್ ಶೆಟ್ಟಿಯ (Rakshit Shetty) ಮೊದಲ ನಿರ್ದೇಶನದ ಸಿನಿಮಾ. ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ (ಮಾರ್ಚ್ 28) ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ಸಿನಿಮಾವನ್ನು ನೆನಪು ಮಾಡಿಕೊಳ್ಳಲು ಏನೇನೋ ಹೊಸ ಕಾರಣಗಳು ಸಿಗುತ್ತಲೇ ಇರುತ್ತವೆ ಎಂದಿದ್ದಾರೆ. ಜೊತೆಗೆ ಒಂದು ಲಿಂಕ್ ಸಹ ಹಂಚಿಕೊಂಡಿದ್ದಾರೆ.

‘ಉಳಿದವರು ಕಂಡಂತೆ’ ಸಿನಿಮಾ 2014 ರ ಮಾರ್ಚ್ 28ಕ್ಕೆ ಬಿಡುಗಡೆ ಆಗಿತ್ತು. ಲೈವ್ ಸೌಂಡ್, ಭಿನ್ನ ರೀತಿಯ ಸ್ಟೋರಿ ಟೆಲ್ಲಿಂಗ್ ಸೇರಿದಂತೆ ಹಲವು ಪ್ರಯೋಗಗಳನ್ನು ರಕ್ಷಿತ್ ಶೆಟ್ಟಿ ಮಾಡಿದ್ದರು. ಬಹುತೇಕ ವಿಮರ್ಶಕರು ಸಿನಿಮಾ ಚೆನ್ನಾಗಿಲ್ಲ ಎಂದೇ ಬರೆದರು. ಪ್ರೇಕ್ಷಕರಿಗೂ ಸಹ ಸಿನಿಮಾ ಆರಂಭದಲ್ಲಿ ಅರ್ಥವಾಗಲಿಲ್ಲ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಎನಿಸಿಕೊಂಡಿತು. ಆದರೆ ಸಿನಿಮಾಕ್ಕೆ ಒಂದು ಕಲ್ಟ್ ಅಭಿಮಾನಿ ವರ್ಗ ಹುಟ್ಟಿಕೊಳ್ತು, ಸಿನಿಮಾವನ್ನು ಪೈರಸಿ ಡೌನ್​​ಲೋಡ್ ಮಾಡಿ ಹೆಚ್ಚು ಮಂದಿ ನೋಡಿದರು. ಹಾಗೆ ನೋಡುತ್ತಾ-ನೋಡುತ್ತಾ ಸಿನಿಮಾ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿತು. ಇದೀಗ 21ನೇ ಶತಮಾನದ ಈ ವರೆಗಿನ ಅತ್ಯುತ್ತಮ 25 ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ:ರಕ್ಷಿತ್ ಶೆಟ್ಟಿ ಹೇಗಿದ್ದಾರೆ, ಏನು ಮಾಡ್ತಿದ್ದಾರೆ? ಗೆಳೆಯ ಹೇಮಂತ್ ಕೊಟ್ಟರು ಉತ್ತರ

ಜನಪ್ರಿಯ ಸಿನಿಮಾ ಮ್ಯಾಗಜೈನ್ ‘ದಿ ಹಾಲಿವುಡ್ ರಿಪೋರ್ಟರ್’ 2000ರ ಶತಕದಲ್ಲಿ ಅಥವಾ 21ನೇ ಶತಮಾನದ ಈ ವರೆಗಿನ ಅತ್ಯುತ್ತಮ 25 ಭಾರತೀಯ ಸಿನಿಮಾಗಳ ಪಟ್ಟಿ ಪ್ರಕಟಿಸಿದ್ದು, ಆ ಪಟ್ಟಿಯಲ್ಲಿ ‘ಉಳಿದವರು ಕಂಡಂತೆ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ‘ಲಗಾನ್’, ‘ಗ್ಯಾಂಗ್ಸ್ ಆಫ್ ವಸೇಪುರ್’ ಸೇರಿದಂತೆ ಹಲವು ಅತ್ಯುತ್ತಮ ಸಿನಿಮಾಗಳಿರುವ ಪಟ್ಟಿಯಲ್ಲಿ ‘ಉಳಿದವರು ಕಂಡಂತೆ’ ಸಹ ಸ್ಥಾನ ಪಡೆದುಕೊಂಡಿರುವುದು ಮಾತ್ರವೇ ಅಲ್ಲದೆ, ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಕನ್ನಡ ಸಿನಿಮಾ ಇದಾಗಿದೆ.

ಈ ಪಟ್ಟಿಯಲ್ಲಿ ಮಲಯಾಳಂನ ‘ಕುಂಬಳಂಗಿ ನೈಟ್ಸ್’, ‘ಮಹೇಶಿಂಟೆ ಪ್ರತಿಕಾರಂ’, ‘ಅಂಗಮಲೈ ಡೈರೀಸ್’, ‘ದೃಶ್ಯಂ’, ‘ದಿ ಗ್ರೇಟ್ ಇಂಡಿಯನ್ ಕಿಚನ್’ ಇನ್ನೂ ಹಲವು ಸಿನಿಮಾಗಳಿವೆ. ಹಿಂದಿಯ ‘ಲಗಾನ್’, ‘ಗ್ಯಾಂಗ್ಸ್ ಆಫ್ ವಸೇಪುರ್’, ‘ಚಕ್ ದೇ ಇಂಡಿಯಾ’, ‘ದಿಲ್ ಚಾಹ್ತಾ ಹೈ’, ‘ಓಂಕಾರ’ ಇನ್ನೂ ಹಲವು ಸಿನಿಮಾಗಳಿವೆ. ತಮಿಳಿನ ‘ಅಲೈಪಾಯುತೆ’, ‘ಅನ್ಬೆ ಶಿವಂ’, ‘ಆಡುಕುಳಂ’, ‘ಪರಿಯೇರುಂ ಪೆರುಮಾಲ್’ ಇನ್ನೂ ಹಲವು ಸಿನಿಮಾಗಳಿವೆ. ಮರಾಠಿಯ ‘ಕೋರ್ಟ್’, ‘ಸೈರಾಟ್’ ಇನ್ನೂ ಕೆಲ ಸಿನಿಮಾಗಳಿವೆ. ತೆಲುಗಿನ ‘ಈಗ’ ಇದೆ. ಕನ್ನಡದ ‘ಉಳಿದವರು ಕಂಡಂತೆ’ ಸಿನಿಮಾ ಇದೆ. ‘ಉಳಿದವರು ಕಂಡಂತೆ’ ಹೊರತಾಗಿ ಇನ್ಯಾವ ಕನ್ನಡ ಸಿನಿಮಾ ಸಹ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ರಕ್ಷಿತ್ ಶೆಟ್ಟಿ ಅವರು ‘ಉಳಿದವರು ಕಂಡಂತೆ’ ಸಿನಿಮಾದ ಸ್ಪಿನ್ ಆಫ್ ಆಗಿರುವ ‘ರಿಚರ್ಡ್ ಆಂಟೊನಿ’ ಸಿನಿಮಾ ಘೋಷಿಸಿದ್ದು, ಸಿನಿಮಾ ಘೋಷಿಸಿಯೇ ವರ್ಷಗಳು ಕಳೆದಿವೆ. ಇತ್ತೀಚೆಗಷ್ಟೆ ಮಾಧ್ಯಮಗಳೊಟ್ಟಿಗೆ ಮಾತನಾಡಿ, ‘ರಿಚರ್ಡ್ ಆಂಟೊನಿ’ ಸಿನಿಮಾದ ಚಿತ್ರೀಕರಣ ಶುರು ಮಾಡಿರುವುದಾಗಿ ಹೇಳಿದ್ದರು. ಮುಂದೇನಾಗುತ್ತದೆ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಪಡೆದ ಆರ್​ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು.

ವಾಸ್ತವವಾಗಿ ಗುರಿ ಬೆನ್ನಟಲು ಬಂದ ಆರ್​ಸಿಬಿಗೆ ಉತ್ತಮ ಆರಂಭ ಸಿಗಲಿಲ್ಲ. ಫೀಲ್ಡಿಂಗ್​ನಲ್ಲಿ ಮಿಂಚಿದ್ದ ಫಿಲ್ ಸಾಲ್ಟ್ ಬ್ಯಾಟಿಂಗ್​ನಲ್ಲಿ ಕಮಾಲ್ ಮಾಡಲು ಸಾಧ್ಯವಾಗಲಿಲ್ಲ. ಕೇವಲ 9 ರನ್ ಗಳಿಸಿ ಔಟಾದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಖಾತೆ ತೆರೆದರು. ಆ ಬಳಿಕವೂ ಟಾಪ್ ಗೇರ್​ನಲ್ಲಿ ಬ್ಯಾಟಿಂಗ್‌ ಮಾಡಿದ ಪಡಿಕ್ಕಲ್ ಬೌಂಡರಿ ಸಿಕ್ಸರ್​ಗಳ ಮಳೆಗರೆದರು. ಇದರ ಪರಿಣಾಮವಾಗಿ ಆರ್​​ಸಿಬಿ ಕೇವಲ 4 ಓವರ್​ಗಳಲ್ಲಿ ಅರ್ಧಶತಕದ ಗಡಿ ದಾಟಿತು.

ಈ ಹಂತದಲ್ಲಿ ಪಡಿಕ್ಕಲ್ 11 ಎಸೆತಗಳಲ್ಲಿ 34 ರನ್ ಬಾರಿಸಿದ್ದರು. ನಂತರವೂ ಅಬ್ಬರ ಮುಂದುವರೆಸಿದ ಪಡಿಕ್ಕಲ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ಬರೆದರು. ಅಂತಿಮವಾಗಿ 9ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ ಪಡಿಕ್ಕಲ್ 26 ಎಸೆತಗಳಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 61 ರನ್ ಬಾರಿಸಿ ಔಟಾದರು. ಹಾಗೆಯೇ ಕೊಹ್ಲಿ ಜೊತೆಗೆ ಎರಡನೇ ವಿಕೆಟ್​ಗೆ ಶತಕದ ಜೊತೆಯಾಟವನ್ನು ನಡೆಸಿ ತಂಡದ ಗೆಲುವನ್ನು ಖಚಿತಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 2 LPG ಟ್ಯಾಂಕರ್‌ಗಳು

ನವದೆಹಲಿ, ಮಾರ್ಚ್ 28: ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟನ್ನು (LPG Crisis) ಬಗೆಹರಿಸುವ ನಿಟ್ಟಿನಲ್ಲಿ ಇನ್ನೆರಡು ಎಲ್​ಪಿಜಿ ಟ್ಯಾಂಕರ್​ಗಳು ಇರಾನ್​ನ ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತದತ್ತ ಸಾಗಿವೆ. ಭಾರತ ಸೇರಿದಂತೆ 5 ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲಾಗುವುದು ಎಂದು ನಿನ್ನೆ ಇರಾನ್ ಹೇಳಿಕೆ ನೀಡಿತ್ತು. ಅದರಂತೆ ಇಂದು 2 ಟ್ಯಾಂಕರ್​ಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಭಾರತದತ್ತ ಆಗಮಿಸುತ್ತಿವೆ.

90,000 ಟನ್‌ಗಳಿಗಿಂತ ಹೆಚ್ಚು LPG ಹೊತ್ತ ಎರಡು ಭಾರತ ಧ್ವಜವಿರುವ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯನ್ನು ದಾಟಿವೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ವಿಶ್ವದ ಅತ್ಯಂತ ನಿರ್ಣಾಯಕ ತೈಲ ಸಾಗಣೆ ಚಾಕ್‌ಪಾಯಿಂಟ್‌ಗಳಲ್ಲಿ ಒಂದಾದ ಹಾರ್ಮುಜ್ ಬಗ್ಗೆ ಟೆಹ್ರಾನ್‌ನ ನಿಲುವನ್ನು ಸ್ಪಷ್ಟಪಡಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. 5 “ಸ್ನೇಹಪರ ರಾಷ್ಟ್ರಗಳಾದ” ಚೀನಾ, ರಷ್ಯಾ, ಭಾರತ, ಇರಾಕ್ ಮತ್ತು ಪಾಕಿಸ್ತಾನಗಳ ಟ್ಯಾಂಕರ್‌ಗಳಿಗೆ ಸುರಕ್ಷಿತ ಮಾರ್ಗವನ್ನು ಅನುಮತಿಸಲಾಗುವುದು ಎಂದು ಅರಘ್ಚಿ ತಿಳಿಸಿದ್ದರು.

ಇದನ್ನೂ ಓದಿ: ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು

ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ಭಾರತಕ್ಕೆ ತೆರಳುತ್ತಿದ್ದ ಎರಡು ಎಲ್‌ಪಿಜಿ (ಅಡುಗೆ ಅನಿಲ) ಟ್ಯಾಂಕರ್‌ಗಳಾದ ಬಿಡಬ್ಲ್ಯೂ ಎಲ್ಮ್ ಮತ್ತು ಬಿಡಬ್ಲ್ಯೂ ಟೈರ್, ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿವೆ.
ಇರಾನ್ ವಿರುದ್ಧ ಅಮೆರಿಕ-ಇಸ್ರೇಲಿ ದಾಳಿಗಳಿಂದಾಗಿ ಈ ಪ್ರಮುಖ ಸಮುದ್ರ ಮಾರ್ಗವು ಅಪಾಯದಲ್ಲಿದೆ. ಆದರೂ ಇರಾನ್ ತನ್ನ ಅನುಮತಿಯೊಂದಿಗೆ ಮಿತ್ರ ರಾಷ್ಟ್ರಗಳ ಹಡಗುಗಳು ಅದರ ಮೂಲಕ ಹಾದುಹೋಗಬಹುದು ಎಂದು ಹೇಳಿದೆ.

ಇದನ್ನೂ ಓದಿ: ಗೃಹೇತರ ಬಳಕೆಯ ಎಲ್​ಪಿಜಿ, ಹೆಚ್ಚುವರಿ ಶೇ. 20 ಹಂಚಿಕೆ; ಒಟ್ಟು ಪೂರೈಕೆ ಶೇ. 70ಕ್ಕೆ ಏರಿಕೆ

ಭಾರತೀಯ ಧ್ವಜ ಹೊತ್ತ ಎರಡೂ ಹಡಗುಗಳು ಈಗ ಗಲ್ಫ್ ಪ್ರದೇಶವನ್ನು ದಾಟಿ ಪೂರ್ವ ಹಾರ್ಮುಜ್ ಜಲಸಂಧಿಯನ್ನು ತಲುಪಿವೆ. ಇಲ್ಲಿಯವರೆಗೆ, ಶಿವಾಲಿಕ್, ನಂದಾ ದೇವಿ, ಪೈನ್ ಗ್ಯಾಸ್ ಮತ್ತು ಜಗ್ ವಸಂತ್ ಎಂಬ ನಾಲ್ಕು ಟ್ಯಾಂಕರ್‌ಗಳು ಹಾರ್ಮುಜ್ ದಾಟಿ ಬಂದಿವೆ. ಭಾರತವು ವಿಶ್ವದ ಎರಡನೇ ಅತಿದೊಡ್ಡ LPG ಆಮದುದಾರ ರಾಷ್ಟ್ರವಾಗಿದ್ದು, ಪ್ರಸ್ತುತ ದಶಕಗಳಲ್ಲಿಯೇ ಅತ್ಯಂತ ಕೆಟ್ಟ ಅನಿಲ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮಧ್ಯಪ್ರಾಚ್ಯದ ಮೇಲಿನ ಅತಿಯಾದ ಅವಲಂಬನೆ
ಕಳೆದ ವರ್ಷ ಭಾರತ ಸುಮಾರು 33.15 ಮಿಲಿಯನ್ ಟನ್ ಎಲ್‌ಪಿಜಿಯನ್ನು ಬಳಸಿದ್ದು, ಅದರಲ್ಲಿ ಸುಮಾರು ಶೇ.60ರಷ್ಟು ಆಮದುಗಳಿಂದ ಬಂದಿದೆ. ಈ ಪೂರೈಕೆಗಳಲ್ಲಿ ಸುಮಾರು ಶೇ. 90ರಷ್ಟು ಮಧ್ಯಪ್ರಾಚ್ಯದಿಂದ ಬರುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link