ಭಾರತದ ಸೇವಾ ಕ್ಷೇತ್ರದಲ್ಲಿ ಹೊಸ ಹುರುಪು; ಮೇ ತಿಂಗಳ ಸರ್ವಿಸ್ ಸೆಕ್ಟರ್ ಪಿಎಂಐ 6 ತಿಂಗಳ ಗರಿಷ್ಠ ಮಟ್ಟಕ್ಕೆ – Kannada News
ನವದೆಹಲಿ, ಜೂನ್ 3: ಭಾರತದ ಆರ್ಥಿಕತೆಗೆ ಸೇವಾ ವಲಯದಿಂದ (Services Sector) ಮತ್ತೊಂದು ಅತ್ಯಂತ ಆಶಾದಾಯಕ ಸುದ್ದಿ ಹೊರಬಿದ್ದಿದೆ. ಬಲವಾದ ದೇಶೀಯ ಬೇಡಿಕೆ ಮತ್ತು ಹೊಸ ಉದ್ಯೋಗಾವಕಾಶಗಳ ಸೃಷ್ಟಿಯಿಂದಾಗಿ ಭಾರತದ ಸೇವಾ ವಲಯದ ಬೆಳವಣಿಗೆಯು ಮೇ ತಿಂಗಳಲ್ಲಿ ಕಳೆದ 6 ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟವನ್ನು ತಲುಪಿದೆ. ಎಚ್‌ಎಸ್‌ಬಿಸಿ (HSBC) ಸಂಸ್ಥೆಯು ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶಗಳ ಪ್ರಕಾರ, ಭಾರತದ ಸೇವಾ ವಲಯದ ‘ಖರೀದಿ ವ್ಯವಸ್ಥಾಪಕರ ಸೂಚ್ಯಂಕ’ (Purchasing Managers’ Index – PMI) ಏಪ್ರಿಲ್ ತಿಂಗಳಲ್ಲಿದ್ದ…