All posts by nagaraj11081993

ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ

ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ

ಇಸ್ಲಮಾಬಾದ್, ಮಾರ್ಚ್ 28: ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆಸಿತ್ತು. ಆದರೆ, ಪಾಕಿಸ್ತಾನ (Pakistan) ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ ಎಂದು ಹೇಳಿಕೊಂಡಿತ್ತು. ಅಲ್ಲದೆ, ಭಾರತ ಉಗ್ರರ ಮೇಲೆ ದಾಳಿ ನಡೆಸಿಲ್ಲ, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಪಾಕ್ ಸುಳ್ಳು ಹೇಳಿಕೆ ನೀಡಿತ್ತು. ಇದಾದ ನಂತರ ಪಾಕಿಸ್ತಾನದ ಮೇಲೆ ಸಮರ ಸಾರಿದ್ದ ಭಾರತದ ಕಾರ್ಯಾಚರಣೆಯಿಂದ ಕಂಗೆಟ್ಟಿದ್ದ ಪಾಕಿಸ್ತಾನ ಕದನವಿರಾಮಕ್ಕೆ ಮನವಿ ಮಾಡಿತ್ತು. ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಿದ ಬಳಿಕ ಭಾರತ ಕದನವಿರಾಮಕ್ಕೆ ಒಪ್ಪಿಕೊಂಡರೂ ಇಂದಿಗೂ ಪಾಕಿಸ್ತಾನ ಮಾತ್ರ ಭಾರತದ ವಿರುದ್ಧ ಕತ್ತಿ ಮಸೆಯುವುದು ನಿಲ್ಲಿಸಿಲ್ಲ.

ಯುಎಸ್ ಕಾಂಗ್ರೆಸ್ ಸಂಶೋಧನಾ ಸೇವೆ (CRS)ಯ ಹೊಸ ವರದಿಯು ಪಾಕಿಸ್ತಾನವು ಭಯೋತ್ಪಾದಕ ಗುಂಪುಗಳಿಗೆ ನಿರಂತರವಾಗಿ ಆಶ್ರಯ ನೀಡುತ್ತಿದೆ ಎಂದು ಘೋಷಿಸಿದೆ. ಹಾಗೇ, ಈ ವರದಿಯಲ್ಲಿ ಭಾರತದ ಉಲ್ಲೇಖವನ್ನೂ ಮಾಡಲಾಗಿದ್ದು, ಭಾರತದ ಮೇಲೆ ಅದರಲ್ಲೂ ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮೇಲೆ ದೀರ್ಘಕಾಲದಿಂದ ಕಣ್ಣು ನೆಟ್ಟಿರುವ ಉಗ್ರರ ಗುಂಪುಗಳು ಪಾಕಿಸ್ತಾನದ ನೆಲದಿಂದ ಕಾರ್ಯನಿರ್ವಹಿಸುವುದನ್ನು ಮುಂದುವರಿಸಿವೆ ಎಂದು ಈ ವರದಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಮಾರ್ಚ್ 25ರ ಸಿಆರ್​​ಎಸ್​ “ಇನ್ ಫೋಕಸ್” ವರದಿ ಪಾಕಿಸ್ತಾನದಲ್ಲಿರುವ 15 ಉಗ್ರ ಸಂಘಟನೆಗಳ ಹೆಸರುಗಳನ್ನು ಉಲ್ಲೇಖಿಸಿದೆ. ಅವುಗಳಲ್ಲಿ ಹಲವು ಅಮೆರಿಕದಿಂದ ವಿದೇಶಿ ಭಯೋತ್ಪಾದಕ ಸಂಘಟನೆಗಳು (ಎಫ್‌ಟಿಒ) ಎಂದು ಘೋಷಿಸಲ್ಪಟ್ಟಿದೆ. ಅವುಗಳಲ್ಲಿ ಲಷ್ಕರ್-ಎ-ತೈಬಾ (ಎಲ್‌ಇಟಿ), ಜೈಶ್-ಎ-ಮೊಹಮ್ಮದ್ (ಜೆಇಎಂ), ಹರಕತ್-ಉಲ್ ಜಿಹಾದ್ ಇಸ್ಲಾಮಿ (ಎಚ್‌ಯುಜಿ), ಹರಕತ್ ಉಲ್-ಮುಜಾಹಿದೀನ್ (ಎಚ್‌ಎಂ) ಮತ್ತು ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ)ನಂತಹ ಭಯೋತ್ಪಾದಕ ಗುಂಪುಗಳು ಸೇರಿವೆ.

ದಕ್ಷಿಣ ಏಷ್ಯಾ ತಜ್ಞ ಕೆ. ಅಲನ್ ಕ್ರೋನ್‌ಸ್ಟಾಡ್ ಸಿದ್ಧಪಡಿಸಿದ ಸಿಆರ್‌ಎಸ್ ವರದಿಯು ಪಾಕಿಸ್ತಾನವನ್ನು ಬಲಿಪಶು ದೇಶ ಎಂದು ಚಿತ್ರಿಸಿದೆ. ಆದರೂ ಅದು ಭಾರತವನ್ನು ದೀರ್ಘಕಾಲದಿಂದ ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಜಾಲಗಳನ್ನು ಹೊಂದಿದೆ ಎಂದು ಕೂಡ ಉಲ್ಲೇಖಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಯಾದಗಿರಿ, ಮಾ.28: ಸುಖವಾಗಿದ್ದ ಸಂಸಾರಕ್ಕೆ ‘ಸೈತಾನ’ನಂತೆ ಎಂಟ್ರಿ ಕೊಟ್ಟ ಪರಪುರುಷನ ಮೋಹಕ್ಕೆ ಬಿದ್ದ ಪತ್ನಿಯೊಬ್ಬಳು, ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಭೀಕರ ಘಟನೆ ಯಾದಗಿರಿ ಜಿಲ್ಲೆಯಲ್ಲಿ (Yadgiri murder case) ಬೆಳಕಿಗೆ ಬಂದಿದೆ. ಅಪಘಾತ ಎಂದು ಬಿಂಬಿಸಲು ಹೋಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿಗಳ ಕರಾಳ ಕೃತ್ಯ ಈಗ ಬಯಲಾಗಿದೆ.

ಯಾದಗಿರಿ ತಾಲೂಕಿನ ಚಾಮನಹಳ್ಳಿ ತಾಂಡದ ನಿವಾಸಿ, ಆಟೋ ಚಾಲಕ ಸಾಗರ್ ರಾಠೋಡ್ (35) ಕೊಲೆಯಾದ ದುರ್ದೈವಿ. ಸಾಗರ್ ಪತ್ನಿ ಪೂಜಾ ಹಾಗೂ ಅದೇ ಊರಿನ ರೆಡ್ಡಿ ರಾಠೋಡ್ ನಡುವೆ ಕಳೆದ ಮೂರು ವರ್ಷಗಳಿಂದ ಅಕ್ರಮ ಸಂಬಂಧವಿತ್ತು. ಮೂರು ಬಾರಿ ಪೂಜಾ ತನ್ನ ಪ್ರಿಯತಮನ ಜೊತೆ ಓಡಿ ಹೋಗಿದ್ದಳು. ಪಂಚಾಯತಿ ಮಾಡಿ ಬುದ್ಧಿ ಹೇಳಿದರೂ ಇವರ ಕಾಮದಾಟ ನಿಂತಿರಲಿಲ್ಲ. ಕೊನೆಗೆ ದಾರಿಗೆ ಅಡ್ಡವಾಗಿದ್ದ ಸಾಗರ್‌ನನ್ನು ಮುಗಿಸಲು ಪತ್ನಿ ಮತ್ತು ಪ್ರಿಯತಮ ಸ್ಕೆಚ್ ಹಾಕಿದ್ದರು.

ಪ್ರಿಯತಮ ರೆಡ್ಡಿ ರಾಠೋಡ್, ಸಾಗರ್‌ನನ್ನು ಕೊಲ್ಲಲು ಮಹೇಶ್ ಎಂಬಾತನಿಗೆ 1 ಲಕ್ಷ ರೂ. ಸುಪಾರಿ ನೀಡಿದ್ದನು. ಮಾರ್ಚ್ 22ರ ರಾತ್ರಿ ಬಾಡಿಗೆ ಇದೆ ಎಂದು ಸುಳ್ಳು ಹೇಳಿ ಸಾಗರ್‌ನನ್ನು ಆಟೋ ಸಮೇತ ಕರೆಸಿಕೊಳ್ಳಲಾಯಿತು. ಲಿಂಗೇರಿ ಬಳಿ ನಿರ್ಜನ ಪ್ರದೇಶದಲ್ಲಿ ಸಾಗರ್ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಯಿತು. ಕೊಲೆಯಾದ ನಂತರ ಮೃತದೇಹವನ್ನು ಕಾರಿನಲ್ಲಿ ಹಾಕಿಕೊಂಡು ಹೊಸಹಳ್ಳಿ ಬಳಿ ತಂದು, ಅಲ್ಲಿ ಆಟೋಗೆ ಕಾರಿನಿಂದ ಡಿಕ್ಕಿ ಹೊಡೆಸಲಾಯಿತು. ಸಾಗರ್ ಅಪಘಾತದಿಂದ ಸತ್ತಿದ್ದಾನೆ ಎಂದು ಬಿಂಬಿಸಲು ಈ ಸೀನ್ ಕ್ರಿಯೇಟ್ ಮಾಡಲಾಗಿತ್ತು.

ಇದನ್ನೂ ಓದಿ: ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಸ್ಥಳಕ್ಕೆ ಬಂದ ಪೊಲೀಸರಿಗೆ ಇದು ಅಪಘಾತವಲ್ಲ ಎಂಬ ಸಂಶಯ ಬಂದಿತ್ತು. ಸಾಗರ್ ಫೋನ್ ದಾಖಲೆಗಳನ್ನು ಪರಿಶೀಲಿಸಿದಾಗ ಮಹೇಶ್ ಎಂಬಾತನ ಕರೆ ಪತ್ತೆಯಾಯಿತು. ಮಹೇಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇಡೀ ಕೊಲೆ ರಹಸ್ಯ ಬಯಲಾಯಿತು. ಪ್ರಿಯತಮ ರೆಡ್ಡಿ ರಾಠೋಡ್ ಮತ್ತು ಪತ್ನಿ ಪೂಜಾ ಸೇರಿ ಈ ಕೃತ್ಯ ಎಸಗಿರುವುದು ಸಾಬೀತಾಯಿತು. ಯಾದಗಿರಿ ಗ್ರಾಮಾಂತರ ಪೊಲೀಸರು ಈಗ ಮಹೇಶ್, ರೆಡ್ಡಿ ರಾಠೋಡ್ ಮತ್ತು ಪತ್ನಿ ಪೂಜಾ ಎಂಬ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

‘ನನ್ನ ಸ್ಕ್ರಿಪ್ಟ್ ಕದ್ದು ಸಿನಿಮಾ ಮಾಡಿದ್ರು, ಅದು 100 ಕೋಟಿ ಕಲೆಕ್ಷ್ ಮಾಡಿತು’; ಆದಿತ್ಯ ಧಾರ್ ಆರೋಪ

ಆದಿತ್ಯ ಧಾರ್ ಅವರು ಇಂದು ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಅವರನ್ನು ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ಆದರೆ, ಅವರು ಪಟ್ಟ ಕಷ್ಟದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕ್ರಿಕೆಟರ್ ಆಗಬೇಕು ಎಂದು ಆದಿತ್ಯ ಧಾರ್ ಕನಸು ಕಂಡಿದ್ದರು. ಟೀಂ ಇಂಡಿಯಾದ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಕನಸನ್ನು ಅವರು ಕಂಡಿದ್ದರು. ಆದರೆ, ಕನಸು ಈಡೇರಲಿಲ್ಲ. ಈ ಹಿನ್ನೆಲೆಯಲ್ಲಿ ಆದಿತ್ಯ ಧಾರ್ ಅವರು ನಿರ್ದೇಶನಕ್ಕೆ ಬಂದರು. ಇಲ್ಲಿಯೂ ಅವರ ಜರ್ನಿ ಸುಲಭದಲ್ಲಿ ಇರಲಿಲ್ಲ. ಅವರ ಸ್ಕ್ರಿಪ್ಟ್​​ಗಳನ್ನು ಕದಿಯಲಾಗಿತ್ತಂತೆ. ಈ ಬಗ್ಗೆ ಅವರೇ ಹೇಳಿಕೊಂಡಿದ್ದರು. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

ಆದಿತ್ಯ ಧಾರ್ ಅವರು ಮೊದಲು ನಿರ್ದೇಶನ ಮಾಡಿದ ಸಿನಿಮಾ ಎಂದರೆ ಅದು 2019ರ ‘ಉರಿ’. ಆ ಬಳಿಕ ಅವರು 2024ರ ‘ಆರ್ಟಿಕಲ್ 370’ ಚಿತ್ರಕ್ಕೆ ಬರಹಗಾರನಾಗಿ ಕೆಲಸ ಮಾಡಿದರು. ಈ ಚಿತ್ರದ ನಿರ್ಮಾಣ ಕೂಡ ಅವರದ್ದೇ. 2025ರಲ್ಲಿ ಬಂದ ‘ಬಾರಾಮುಲ್ಲ’ ಚಿತ್ರವನ್ನು ಅವರೇ ನಿರ್ಮಾಣ ಮಾಡಿದರು. 2025ರಲ್ಲಿ ಬಂದ ‘ಧುರಂಧರ್’ ಹಾಗೂ 2026ರ ‘ಧುರಂಧರ್ 2’ ಚಿತ್ರಗಳ ನಿರ್ದೇಶನ ಆದಿತ್ಯ ಧಾರ್ ಮಾಡಿದರು.

ಈ ಮೊದಲು ಆದಿತ್ಯ ಧಾರ್ ಅವರು ತಮ್ಮ ಜರ್ನಿ ಬಗ್ಗೆ ಮಾತನಾಡಿದ್ದರು. ‘ನನ್ನ ಪ್ರಯಾಣದಲ್ಲಿ ಸಾಕಷ್ಟು ಮೋಸಗಳನ್ನು ಎದುರಿಸಿದ್ದೇನೆ. ಸ್ಕ್ರಿಪ್ಟ್ ಕದ್ದು ಸಿನಿಮಾ ಮಾಡಿದರು. ಅದು ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ನನಗೆ ಸಾಕು ಎನಿಸಿತು. ಆಗ ಕೆಲವರು, ನೀವು ಮಾಡ್ತೀರಾ ಎಂದು ಕೆಲವರು ಬೆಂಬಲ ನೀಡುತ್ತಿದ್ದರು’ ಎಂದಿದ್ದರು ಅವರು.

ಇದನ್ನೂ ಓದಿ: ‘ಧುರಂಧರ್ 2’ ಚಿತ್ರದಲ್ಲಿ ಆದಿತ್ಯ ಧಾರ್​ ಮಾಡಿದ್ರು ದೊಡ್ಡ ತಪ್ಪು; ವೈರಲ್ ಆಯ್ತು ಪೋಸ್ಟ್

‘ಸಿನಿಮಾ ಜರ್ನಿಯಲ್ಲಿ ನನ್ನ ಹಲವು ಸಿನಿಮಾಗಳು ಅರ್ಧಕ್ಕೆ ನಿಂತಿವೆ. 15 ದಿನಕ್ಕೆ ಸಿನಿಮಾ ಶೂಟ್ ಆರಂಭ ಆಗಬೇಕಿರುತ್ತದೆ. ಆದರೆ, ಅರ್ಧಕ್ಕೆ ನಿಂತಿತ್ತು. ಜೀವನ ಪೂರ್ತಿ ನೆನಪಿಟ್ಟುಕೊಳ್ಳಯವಂತೆ ಕೊಡ್ತಾನೆ ಅನ್ನೋದು ನನ್ನ ಅಮ್ಮನ ಮಾತಾಗಿತ್ತು. ದೇವರು ಚಾನ್ಸ್ ಕೊಡ್ತಾನೆ. ಆ ಚಾನ್ಸ್ 3 ವರ್ಷದಲ್ಲಿ ಬೇಕಾದರೂ ಬರಬಹುದು, 30 ವರ್ಷದಲ್ಲಿ ಬೇಕಿದ್ದರೂ ಬರಬಹುದು. 30 ವರ್ಷ ಬಿಟ್ಟು ಬಂದರೆ ಅದ ಮೌಲ್ಯ ಕೂಡ ಹೆಚ್ಚಿರುತ್ತದೆ. ನಿನ್ನ ಚಾನ್ಸ್​​​ಗಾಗಿ ಕಾಯಿರಿ’ ಎಂದು ಆದಿತ್ಯ ಧಾರ್ ಹೇಳಿದ್ದರು. ಅವರ ಮಾತು ನಿಜವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ಶ್ರೀಗಳ ನೇತೃತ್ವದಲ್ಲಿ ತುಲಾಭಾರ

ಬೆಳಗಾವಿ, ಮಾರ್ಚ್​ 28: ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಯಡೂರ ಗ್ರಾಮದ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ವಿದ್ಯಾರ್ಥಿಗಳ ಯುವ ಸಮಾವೇಶದಲ್ಲಿ ಆರ್​​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್​​ ಭಾಗವಹಿಸಿದ್ದರು. ಬಳಿಕ ಚಿಕ್ಕೋಡಿ ತಾಲೂಕಿನ ಯಡೂರಿನ ಕಾಡಸಿದ್ದೇಶ್ವರ ಮಠದಿಂದ ಮೋಹನ್ ಭಾಗವತ್​​​ರ ತುಲಾಭಾರ ಮಾಡಲಾಗಿದೆ. ಶ್ರೀಶೈಲ ಜಗದ್ಗುರು ಚನ್ನರಾಮಸಿದ್ಧ ಶ್ರೀಗಳ ನೇತೃತ್ವದಲ್ಲಿ ಗೋವುಗಳಿಗೆ ನೀಡುವ ಆಹಾರ ಪದಾರ್ಥಗಳಿಂದ ತುಲಾಭಾರ ಮಾಡಲಾಗಿದೆ. ಬಳಿಕ ಮೋಹನ್ ಭಾಗವತ್ ಗೋವುಗಳಿಗೆ ಮೇವು ಹಾಕಿ ಗೋ ಪೂಜೆ ನೆರವೇರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಈ ವಾರ ಒಟಿಟಿಗೆ ಬಂದ ಸಿನಿಮಾಗಳಿವು: ಪಟ್ಟಿ ಇಲ್ಲಿದೆ ನೋಡಿ

Source link

ಉತ್ತರ ಪ್ರದೇಶದ ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!

ಉತ್ತರ ಪ್ರದೇಶ, ಮಾರ್ಚ್​ 28: ಜೆವಾರ್‌ನಲ್ಲಿ ನಿರ್ಮಾಣಗೊಂಡಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನರೇಂದ್ರ ಮೋದಿ ಉದ್ಘಾಟಿಸಿದರು. ಸುಮಾರು 11,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದೆ. ಈ ಯೋಜನೆ ಉತ್ತರ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಮೈಲುಗಲ್ಲಾಗಲಿದೆ. ಈ ವಿಮಾನ ನಿಲ್ದಾಣ ಉದ್ಘಾಟನೆಯೊಂದಿಗೆ ಉತ್ತರ ಪ್ರದೇಶ ದೇಶದಲ್ಲೇ 5 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಮೊದಲ ರಾಜ್ಯವಾಗಿದೆ. ಹೊಸ ಏರ್‌ಪೋರ್ಟ್‌ನಿಂದ ಪ್ರಯಾಣಿಕರಿಗೆ ಸುಧಾರಿತ ಸೇವೆಗಳು ಲಭ್ಯವಾಗಲಿದ್ದು, ಉದ್ಯೋಗಾವಕಾಶಗಳು ಹೆಚ್ಚಾಗುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಫಿನಾಡಿನಲ್ಲಿ ವರುಣನ ಅಬ್ಬರ: ಬಿರುಗಾಳಿ ಸಹಿತ ಧಾರಾಕಾರ ಮಳೆ, ಮೂಡಿಗೆರೆ ರಸ್ತೆಗಳು ಜಲಾವೃತ!

ಚಿಕ್ಕಮಗಳೂರು, ಮಾ.28: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹವಾಮಾನ ದಿಢೀರ್ ಬದಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ಬಿರುಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ತಾಲೂಕಿನ ಗ್ರಾಮೀಣ ಭಾಗಗಳಲ್ಲೂ ಮಳೆಯ ಆರ್ಭಟ ಜೋರಾಗಿದೆ. ಆಲ್ದೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾಫಿ ತೋಟಗಳಿಗೆ ಇದು ಆಸರೆಯಾದರೂ ಬಿರುಗಾಳಿಯ ಭೀತಿ ಆವರಿಸಿದೆ. ಮೂಡಿಗೆರೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ರಸ್ತೆಗಳು ನದಿಯಂತಾಗಿವೆ. ಚರಂಡಿಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ಮಳೆ ನೀರು ಹರಿಯುತ್ತಿದ್ದು, ಮಾರುಕಟ್ಟೆಗೆ ಬಂದಿದ್ದ ಸಾರ್ವಜನಿಕರು ಮತ್ತು ವಾಹನ ಸವಾರರು ಹೈರಾಣಾಗಿದ್ದಾರೆ. ಮಲೆನಾಡು ಭಾಗದ ಹಲವೆಡೆ ಮರಗಳು ಉರುಳುವ ಭೀತಿ ಎದುರಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.

ವಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: 10 ತಂಡಗಳ ಆರಂಭಿಕ ಜೋಡಿಗಳ ಪಟ್ಟಿ ಇಲ್ಲಿದೆ

Source link

ಬಾಗಲಕೋಟೆಯಲ್ಲಿ ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ; ಭಯಾನಕ ವಿಡಿಯೋ

ಬಾಗಲಕೋಟೆ, ಮಾ.28: ನಗರದ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಬಾಗಲಕೋಟೆಯ ಬಸ್ ನಿಲ್ದಾಣದ ಸರ್ಕಲ್ ಬಳಿ ನಡೆದಿದೆ. ಜಿಲ್ಲಾಸ್ಪತ್ರೆಯ ಕಡೆಗೆ ವೇಗವಾಗಿ ಹೊರಟಿದ್ದ ಆಂಬುಲೆನ್ಸ್ ಮತ್ತು ಕಾಳಿದಾಸ ವೃತ್ತದ ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ ವಾಹನವು ರಸ್ತೆಯ ಮಧ್ಯದಲ್ಲೇ ಪಲ್ಟಿಯಾಗಿದೆ. ಈ ದೃಶ್ಯವು ಹತ್ತಿರದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಸ್ಥಳೀಯ ಯುವಕರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಪಲ್ಟಿಯಾದ ಆಂಬುಲೆನ್ಸ್‌ನಲ್ಲಿದ್ದ ಗರ್ಭಿಣಿ ಮಹಿಳೆಯನ್ನು ಅತ್ಯಂತ ಜಾಗರೂಕತೆಯಿಂದ ಹೊರತೆಗೆದು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಹನದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ತೀವ್ರತೆಗೆ ಎಲ್ಲರೂ ಗಾಬರಿಗೊಂಡಿದ್ದರು. ಘಟನಾ ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವನಗರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿದ್ದ ಇತರ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ, ಗ್ಯಾಸ್ ಸಿಲಿಂಡರ್‌ಗಳಿಂದ ಅನಿಲ ಸೋರಿಕೆ ಆಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಲಾರಿ ಪಲ್ಟಿಯಾದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ ಕುರಿತು ರಾಜಾಜಿನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಈ ಅಪಘಾತದ ದೃಶ್ಯಗಳು ದಾಖಲಾಗಿದ್ದು, ಫೂಟೇಜ್‌ಗಳನ್ನು ಪರಿಶೀಲಿಸಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link