ರವಿಶಂಕರ್ ಗುರೂಜಿ ವಿರುದ್ಧದ ಭೂ ಕಬಳಿಕೆ ಪ್ರಕರಣ ರದ್ದು: ಹೈ ಕೋರ್ಟ್ ಮಹತ್ವದ ತೀರ್ಪು!
ಬೆಂಗಳೂರು, ಮಾರ್ಚ್ 28: ರವಿಶಂಕರ್ ಗುರೂಜಿ (Shri Shri Ravi Shankar Guruji) ವಿರುದ್ಧದ ಭೂ ಕಬಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ, ರವಿಶಂಕರ್ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲದೆ ಪ್ರಕರಣ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ತಿಳಿಸಿ ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದೆ. ಸ್ಪಷ್ಟ ಆರೋಪವಿಲ್ಲ, ಸಾಕ್ಷಿಗಳಿಲ್ಲ! ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ 19 ಸೆಪ್ಟೆಂಬರ್ 2025ರಂದು ಕರ್ನಾಟಕ ಭೂ…