All posts by nagaraj11081993

IPL 2026: ಆರ್​ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ? ಎಸ್‌ಆರ್‌ಎಚ್ ತಂಡ ಹೇಗಿರಲಿದೆ?

IPL 2026: ಆರ್​ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ? ಎಸ್‌ಆರ್‌ಎಚ್ ತಂಡ ಹೇಗಿರಲಿದೆ?

ಐಪಿಎಲ್ 2026 (IPL 2026) ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ತೀವ್ರ ತಯಾರಿ ನಡೆಸುತ್ತಿವೆ. ಆದಾಗ್ಯೂ ಮೊದಲ ಪಂದ್ಯಕ್ಕೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ಮಿನಿ ಹರಾಜಿನ ಬಳಿಕ ಎಲ್ಲಾ ತಂಡಗಳಿಗೆ ಉದಯೋನ್ಮುಖ ಆಟಗಾರರ ಆಗಮನವಾಗಿದೆ. ಹಾಗೆಯೇ ಕೆಲವು ಆಟಗಾರರ ಇಂಜುರಿಯಿಂದ ಅವರ ಸ್ಥಾನದಲ್ಲಿ ಯಾರು ಆಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಹಾಲಿ ಚಾಂಪಿಯನ್ ಆರ್​ಸಿಬಿ ತನ್ನ ಪ್ಲೇಯಿಂಗ್ 11ನಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲು ಹೋಗುವುದಿಲ್ಲ. ಏಕೆಂದರೆ ತಂಡವನ್ನು ಚಾಂಪಿಯನ್‌ ಮಾಡಿದ್ದ ಅದೇ 11 ಆಟಗಾರರನ್ನು ಕಣಕ್ಕಿಳಿಸಲು ಆಡಳಿತ ಮಂಡಳಿ ನೋಡಲಿದೆ. ಆದರೆ ಕೆಲವು ಆಟಗಾರರ ಅಲಭ್ಯತೆ ಹಾಗೂ ಕೆಲವರ ಇಂಜುರಿ ಸಮಸ್ಯೆಯಿಂದ ತಂಡದಲ್ಲಿ ಬದಲಾವಣೆಗಳನ್ನು ಮಾಡಲೇಬೇಕಾಗಿದೆ.

ಆರ್​ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ?

ಮೊದಲಿಗೆ ಆರ್​​ಸಿಬಿಯ ಬ್ಯಾಟಿಂಗ್‌ ವಿಭಾಗವನ್ನು ನೋಡುವುದಾದರೆ.. ಕಳೆದ ಬಾರಿಯಂತೆ ಈ ಬಾರಿಯೂ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ನಾಯಕ ರಜತ್ ಪಾಟಿದಾರ್ ಮತ್ತು ದೇವದತ್ ಪಡಿಕ್ಕಲ್ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್ ಫಿನಿಶಿಂಗ್ ಜವಾಬ್ದಾರಿಯನ್ನು ವಹಿಸಲಿದ್ದಾರೆ. ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಜಿತೇಶ್ ಶರ್ಮಾ ನಿರ್ವಹಿಸಿದರೆ, ಸ್ಪಿನ್ ಆಲ್​ರೌಂಡರ್ ಆಗಿ ಕೃನಾಲ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.

ಜೋಶ್ ಹೇಜಲ್‌ವುಡ್ ಬದಲಿಗೆ ಕಿವೀಸ್ ವೇಗಿ ಜಾಕೋಬ್ ಡಫಿ ಬೌಲಿಂಗ್ ವಿಭಾಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಅನುಭವಿ ವೇಗಿ ಭುವನೇಶ್ವರ ಕುಮಾರ್ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಇವರಿಬ್ಬರ ಜೊತೆಗೆ ಸುಯಾಶ್ ಶರ್ಮಾ ಮತ್ತು ಎಡಗೈ ವೇಗದ ಬೌಲರ್ ಮಂಗೇಶ್ ಯಾದವ್ ತಂಡದಲ್ಲಿ ಅಡುವ ಅವಕಾಶ ಪಡೆಯಬಹುದು.

ಎಸ್​​ಆರ್​ಎಚ್ ತಂಡ ಹೀಗಿರಲಿದೆ

ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸೆನ್ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಲಿಯಾಮ್ ಲಿವಿಂಗ್‌ಸ್ಟೋನ್ ಕೆಳ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್, ಬ್ರೈಡನ್ ಕಾರ್ಸೆ, ಶಿವಂ ಮಾವಿ ಕಾಣಿಸಿಕೊಳ್ಳಲಿದ್ದಾರೆ.

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜಾಕೋಬ್ ಡಫಿ.

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಬ್ರೇಡನ್ ಕಾರ್ಸೆ, ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಶಿವಂ ಮಾವಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

ಬೆಂಗಳೂರು, ಮಾರ್ಚ್​ 27: ಗಲ್ಫ್‌ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ಮಾಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗಿಯಾಗಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು.  ಕೊವಿಡ್ ರೀತಿಯಂತಹ ಹೋರಾಟಕ್ಕೆ ಸಜ್ಜಾಗುವಂತೆ ತಿಳಿಸಿದ್ದಾರೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕೆಂದು ತಿಳಿಸಿದ್ದಾರೆ. ಕಮರ್ಷಿಯಲ್ ಸಿಲಿಂಡರ್‌ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು, ಪ್ರಧಾನಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು, ನಿರಂತರ ಪರಿಶ್ರಮ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ತಮ್ಮ ಅಚಲವಾದ ಫಿಟ್ನೆಸ್ ಶಿಸ್ತಿಗೆ ಹೆಸರುವಾಸಿಯಾಗಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಅವರು ದಿನನಿತ್ಯದ ಯೋಗ, ಜಿಮ್ ವರ್ಕೌಟ್ ಮತ್ತು ಡಯೆಟ್ ಮಾಡುತ್ತಾರೆ. ‘ಆರೋಗ್ಯವಾಗಿರಿ, ಸಂತೋಷವಾಗಿರಿ’ ಎಂಬುದು ಅವರ ಧ್ಯೇಯವಾಕ್ಯ. ಅವರು ತಮ್ಮ ದೈನಂದಿನ ವ್ಯಾಯಾಮದ ದಿನಚರಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಸ್ನಾಯುಗಳ ಬಲವರ್ಧನೆಗೆ ಒತ್ತು ನೀಡುವ ಅತ್ಯಂತ ಕಠಿಣ ಹಾಗೂ ಸವಾಲಿನ ವ್ಯಾಯಾಮಗಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಆ ಮೂಲಕ ಅಭಿಮಾನಿಗಳಿಗೂ ಸ್ಪೂರ್ತಿ ತುಂಬುತ್ತಾರೆ. 50ನೇ ವಯಸ್ಸಿನಲ್ಲೂ ಫಿಟ್ ಆಗಿ ಕಾಣುವ ಶಿಲ್ಪಾ ಶೆಟ್ಟಿ ಅವರು ಇಷ್ಟೆಲ್ಲ ಶಿಸ್ತು ಪಾಲಿಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ ನೋಡಿ

ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಬೆಳ್ಳಿ ಪರದೆಯ ಬಳಿಕ ಈಗ ಡಿಜಿಟಲ್ ಲೋಕದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಮಾರ್ಚ್ 27ರಂದು ಸೋನಾಕ್ಷಿ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ 10 ಲಕ್ಷ (1 ಮಿಲಿಯನ್) ಚಂದಾದಾರರ ಮೈಲಿಗಲ್ಲನ್ನು ತಲುಪಿದೆ. ಈ ಕ್ಷಣವನ್ನು ಸಂಭ್ರಮಿಸಲು ಸೋನಾಕ್ಷಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ‘ನನ್ನ ಈ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಅವರು ಬರೆದುಕೊಂಡಿದ್ದಾರೆ. ಅವರಿಗೆ ಅಭಿಮಾನಿಗಳಿಂದ ಅಭಿನಂದನೆಗಳ ಕಮೆಂಟ್ ಬಂದಿದೆ. ಸೋನಾಕ್ಷಿ ಸಿನ್ಹಾ ಅವರ ಯೂಟ್ಯೂಬ್ ಚಾನೆಲ್ (Sonakshi Sinha YouTube Channel) ಕೇವಲ ಸಿನಿಮಾ ಪ್ರಚಾರಕ್ಕೆ ಸೀಮಿತವಾಗಿಲ್ಲ. ಬದಲಿಗೆ, ಅವರು ತಮ್ಮ ವೈಯಕ್ತಿಕ ಜೀವನ ಮತ್ತು ಆಸಕ್ತಿಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿಜಯಪುರ ಶಾಸಕ ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ

ಕೋಲಾರ, ಮಾರ್ಚ್​​ 27: ನಗರದಲ್ಲಿ ಶ್ರೀರಾಮನವಮಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿದ್ದರು. ಎಂ.ಜಿ.ರಸ್ತೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಆಯೋಜಿಸಿದ್ದ 10ನೇ ವರ್ಷದ ರಾಮೋತ್ಸವ ಸಮಾರಂಭ ಇದಾಗಿತ್ತು. ಈ ಸಂದರ್ಭದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆಗೆ ಯತ್ನಾಳ್ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಮುನಿಸ್ವಾಮಿ, ನಾಗಲಾಪುರ ಮಠದ ತೇಜೇಶಲಿಂಗ ಶಿವಚಾರ್ಯ ಸ್ವಾಮಿಜಿ, ಶ್ರೀರಾಮಸೇನೆಯ ಶ್ರೀನಿವಾಸ್ ಗುರೂಜಿ ಸೇರಿದಂತೆ ಹಲರು ಉಪಸ್ಥಿತರಿದ್ದರು. ವಿಜಯಪುರ ಶಾಸಕರನ್ನು ನೋಡಲು ಜನಸಾಗರವೇ ಕಾರ್ಯಕ್ರಮಕ್ಕೆ ಹರಿದುಬಂದಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಲಡಾಖ್‌ನ ಜೋಜಿಲಾದಲ್ಲಿ ಭಾರೀ ಹಿಮಪಾತವಾಗಿ 7 ಮಂದಿ ಸಾವು; ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್

ಲಡಾಖ್, ಮಾರ್ಚ್ 27: ಲಡಾಖ್​​ನ ಜೋಜಿಲಾ ಪಾಸ್‌ನಲ್ಲಿ ಸಂಭವಿಸಿದ ಹಿಮಪಾತದಲ್ಲಿ (Ladakh avalanche) 7 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವಾರು ಜನರು ಹಿಮಪಾತದಿಂದ ಹೂತುಹೋಗಿರುವ ವಾಹನಗಳಲ್ಲಿ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 5 ವಾಹನಗಳು ಭಾರೀ ಹಿಮದ ಅಡಿಯಲ್ಲಿ ಹೂತುಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ವಾಹನಗಳು ಹಿಮಪಾತದಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಶ್ರೀನಗರ-ಲೇಹ್ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಹಠಾತ್ ಮತ್ತು ತೀವ್ರವಾದ ಹಿಮಪಾತವು ಹಲವಾರು ವಾಹನಗಳನ್ನು ಆವರಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಪ್ರಯತ್ನಗಳು ಮುಂದುವರೆದಿವೆ. ಗ್ಯಾಂಡರ್‌ಬಾಲ್ ಪೊಲೀಸರು, ವಿಪತ್ತು ನಿರ್ವಹಣಾ ಅಧಿಕಾರಿಗಳೊಂದಿಗೆ, ಸಿಕ್ಕಿಬಿದ್ದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Video: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ, ಗುಂಡಿನ ದಾಳಿ

ಜೋಜಿಲಾ ಪಾಸ್ ಹಿಮಾಲಯದಲ್ಲಿರುವ ಒಂದು ಎತ್ತರದ ಪರ್ವತ ಮಾರ್ಗವಾಗಿದ್ದು, ಇದು ಕಾಶ್ಮೀರ ಕಣಿವೆಯನ್ನು ಲಡಾಖ್‌ನೊಂದಿಗೆ ಸಂಪರ್ಕಿಸುತ್ತದೆ. ಇದು ಶ್ರೀನಗರ ಮತ್ತು ಲೇಹ್ ನಡುವಿನ ರಾಷ್ಟ್ರೀಯ ಹೆದ್ದಾರಿ 1ರಲ್ಲಿದೆ. ಇದು ಸುಮಾರು 3,528 ಮೀಟರ್ ಎತ್ತರದಲ್ಲಿದೆ. ಇದು ಲಡಾಖ್‌ಗೆ ನಾಗರಿಕ ಸಾರಿಗೆ ಮತ್ತು ಮಿಲಿಟರಿ ಸರಬರಾಜು ಮಾರ್ಗಗಳಿಗೆ ಪ್ರಮುಖ ಮಾರ್ಗವಾಗಿ ಕಾರ್ಯನಿರ್ವಹಿಸುತ್ತದೆ.

ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಲಡಾಖ್ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ, “ಜೋಜಿಲಾದಲ್ಲಿ ಹಿಮಪಾತದ ದುರದೃಷ್ಟಕರ ಸುದ್ದಿ ಕೇಳಿದೆ. ಕಾರ್ಗಿಲ್‌ನ ಡಿಸಿ ಮತ್ತು ಎಸ್‌ಎಸ್‌ಪಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಸಜ್ಜುಗೊಳಿಸಲು ನಾನು ನಿರ್ದೇಶಿಸಿದ್ದೇನೆ. ವಿಪತ್ತು ಪರಿಹಾರ ಪಡೆಗಳು ಮತ್ತು ಬಿಆರ್‌ಒ ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ನಾನು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ” ಎಂದು ಎಕ್ಸ್‌ನಲ್ಲಿ ಬರೆದ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತ್ಯೇಕ ಅಪಘಾತ: ಮೂರು ವಷರ್ದ ಬಾಲಕಿ ಸೇರಿ ಇಬ್ಬರು ಸಾವು, 12 ಮಕ್ಕಳಿಗೆ ಗಾಯ

ಕೋಲಾರ/ಮಂಡ್ಯ, ಮಾರ್ಚ್​​ 27: ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂರು ವರ್ಷದ ಬಾಲಕಿ ಸೇರಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಒಟ್ಟು 12 ಮಕ್ಕಳಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಕೆರೆ ಕಟ್ಟೆ ಬಳಿ ಟೆಂಪೋ ಡಿಕ್ಕಿಯಾಗಿ ಬೈಕ್​​ನಲ್ಲಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಕ್ರುತ್ಯಾರೆಡ್ಡಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಬೆಂಗಳೂರಿಗೆ ತರಕಾರಿ ತಲುಪಿಸುವ ತರಾತುರಿಯಲ್ಲಿ ಟೆಂಪೋ ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೈಕ್​​ನಲ್ಲಿದ್ದ ಯುವಕರಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಲಾ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ

ಅಪಘಾತವಾದ ವಾಹನಗಳು

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿರುವ ಶಾಲಾ ಬಸ್ ಮತ್ತು ಖಾಸಗಿ ಬಸ್ ನಡುವಿನ ಅಪಘಾತದಲ್ಲಿ ಶಾಲಾ ಬಸ್​​ನಲ್ಲಿದ್ದ 12 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಾಲಾ ಬಸ್​​ ಮದ್ದೂರು ಪಟ್ಟಣದ ಮರಿಯಪ್ಪ ಶಾಲೆಗೆ ಸೇರಿದ್ದು ಎಂದು ತಿಳಿದುಬಂದಿದೆ. ಮಕ್ಕಳಿಗೆ ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆಸ್ಪತ್ರೆಗೆ ಜಿಲ್ಲಾಧಿಕಾರಿ ಹಾಗೂ ಎಸ್​ಪಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತದ ಕುರಿತು ಮಾಹಿತಿ ಪಡೆದ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.ಮದ್ದೂರು ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಕೇಸ್​​ ದಾಖಲಾಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ಕಲಬೆರಕೆ ಹಾಲು; ವರದಿಯಲ್ಲಿ ಆಘಾತಕಾರಿ ಅಂಶ

ಕಾರು ಅಪಘಾತ: ಯುವಕ ಸಾವು

ಚನ್ನಪಟ್ಟಣದ ಹರಿಸಂದ್ರ ಕ್ರಾಸ್ ಬಳಿ ನಡೆದ ಕಾರು ಅಪಘಾತದಲ್ಲಿ ಕೊಂಡಾಪುರ ಗ್ರಾಮದ ವಿಕಾಸ್(23) ಜೀವ ಕಳೆದುಕೊಂಡಿದ್ದಾರೆ. ಗಾಯಗೊಂಡ ಇಬ್ಬರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ

ಮುರ್ಷಿದಾಬಾದ್, ಮಾರ್ಚ್ 27: ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್ ಜಿಲ್ಲೆಯ ರಘುನಾಥಗಂಜ್‌ನಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಅನೇಕ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಹೆಚ್ಚಿದ ಉದ್ವಿಗ್ನತೆಯನ್ನು ತೋರಿಸುವ ಹಲವಾರು ವೀಡಿಯೊಗಳು ವೈರಲ್ ಆಗಿವೆ.

ಪರಿಸ್ಥಿತಿ ಎಷ್ಟು ಉದ್ವಿಗ್ನಗೊಂಡಿತ್ತೆಂದರೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಉದ್ವಿಗ್ನತೆ ಉಂಟಾಗಿರುವುದರಿಂದ ಪಟ್ಟಣದಲ್ಲಿ ಭಾರೀ ಪೊಲೀಸ್ ನಿಯೋಜನೆ ಮುಂದುವರೆದಿದೆ. ಇದಲ್ಲದೆ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ತಂಡಗಳನ್ನು ಸಹ ನಿಯೋಜಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ ಎಂದ ರಂಜಿತ್ ತಾಯಿ

ಆನೇಕಲ್, ಮಾರ್ಚ್ 27: ಭಾವನೇ ಬಾಮೈದನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ರಂಜಿತ್ ತಾಯಿ ಪ್ರತಿಕ್ರಿಯಿಸಿದ್ದು, ಈ ಘಟನೆ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ತಮ್ಮ ಮಗನನ್ನು ಅಳಿಯ ಶ್ರೀನಿವಾಸ್​ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಮಗ ಮತ್ತು ಶ್ರೀನಿವಾಸ್‌ನ ತಂಗಿ ಕೋಮಲ್​ ಇಬ್ಬರು ಓಡಿಹೋಗಿ ಹೈದರಾಬಾದ್‌ನಲ್ಲಿ ಒಂದು ತಿಂಗಳು ಇದ್ದು, ಬಳಿಕ ವಾಪಸ್ ಬಂದಿದ್ದರು. ಕೊಲೆ ನಡೆದ ರಾತ್ರಿ, ನವೀನ್ ಮತ್ತು ಶ್ರೀನಿವಾಸ್ ಸೇರಿದಂತೆ ನಾಲ್ವರು ಬಂದು ಮಗನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಾಯಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ಚಿನ್ನಸ್ವಾಮಿ ಪಿಚ್ ಯಾರಿಗೆ ಸಹಕಾರಿ? ಪಂದ್ಯದ ದಿನ ಬೆಂಗಳೂರು ಹವಾಮಾನ ಹೇಗಿರಲಿದೆ?

2026 ರ ಐಪಿಎಲ್ (IPL 2026), ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದೊಂದಿಗೆ ಆರಂಭವಾಗಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸುಮಾರು ಒಂದು ವರ್ಷದ ಬಳಿಕ ಚಿನ್ನಸ್ವಾಮಿ ಮೈದಾನ ಕ್ರಿಕೆಟ್ ಪಂದ್ಯವನ್ನು ಆಯೋಜಿಸುತ್ತಿದೆ. ಹೀಗಾಗಿ ಬೆಂಗಳೂರಿನ ಕ್ರಿಕೆಟ್ ಪ್ರಿಯರು ಕೂಡ ಈ ಪಂದ್ಯಕ್ಕೆ ಕಾತುರದಿಂದ ಕಾದಿದ್ದಾರೆ. ಹೀಗಾಗಿ ಈ ಪಂದ್ಯ ನಡೆಯುವ ಚಿನ್ನಸ್ವಾಮಿ ಮೈದಾನ ಯಾರಿಗೆ ಹೆಚ್ಚು ನೆರವು ನೀಡಲಿದೆ? ಮತ್ತು ಪಂದ್ಯದ ದಿನ ಬೆಂಗಳೂರಿನ ಹವಾಮಾನ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯ.

ಪಿಚ್ ಯಾರಿಗೆ ಸಹಕಾರಿ?

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಸಮತಟ್ಟಾಗಿರುತ್ತದೆ. ಅಂದರೆ ಈ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿರಲಿದೆ. ಚೆಂಡು ಉತ್ತಮ ಬೌನ್ಸ್ ಮತ್ತು ವೇಗದೊಂದಿಗೆ ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ. ಮೈದಾನವು ತುಂಬಾ ಚಿಕ್ಕದಾಗಿರುವುದರ ಜೊತೆಗೆ ಔಟ್‌ಫೀಲ್ಡ್ ವೇಗವಾಗಿರುತ್ತದೆ. ಹೀಗಾಗಿ ಈ ಮೈದಾನದಲ್ಲಿ ರನ್ ಮಳೆ ಹರಿಯುವುದು ಖಚಿತ. ಆದಾಗ್ಯೂ, ಈ ಮೈದಾನದಲ್ಲಿ ಇಬ್ಬನಿ ಫಲಿತಾಂಶದ ಮೇಲೆ ಪ್ರಮುಖ ಪಾತ್ರವಹಿಸುತ್ತದೆ. ಸಂಜೆಯ ಇಬ್ಬನಿಯು ಚೇಸಿಂಗ್ ತಂಡಕ್ಕೆ ಅನುಕೂಲಕರವಾಗಿರುತ್ತದೆ, ಆದ್ದರಿಂದ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡುವುದನ್ನು ನಿರೀಕ್ಷಿಸಬಹುದು.

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ಮಾರ್ಚ್ 28 ರಂದು ಬೆಂಗಳೂರಿನಲ್ಲಿ ಹವಾಮಾನ ಪಂದ್ಯಕ್ಕೆ ಅನುಕೂಲಕರವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಆದಾಗ್ಯೂ ಕಳೆದ ವಾರ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿತ್ತು. ಹೀಗಾಗಿ ಬೆಂಗಳೂರಿನಲ್ಲಿ ಯಾವಾಗ ಹವಾಮಾನ ಬದಲಾಗುತ್ತದೆ ಎಂದು ಹೇಳುವುದು ಕಷ್ಟ. ಆದರೆ ಹವಾಮಾನ ವರದಿಯ ಪ್ರಕಾರ, ಪಂದ್ಯದ ದಿನದಂದು ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ. ಶನಿವಾರ ಸಂಜೆ ಬೆಂಗಳೂರಿನ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಆರ್ದ್ರತೆಯು ಶೇಕಡಾ 67 ರಷ್ಟಿರಬಹುದು.

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಏಪ್ರಿಲ್ 5 ರವರೆಗೆ ಮಳೆ ಮುನ್ಸೂಚನೆ

ಏಪ್ರಿಲ್ 5ರ ವರೆಗೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯಪುರ, ಮೈಸೂರು, ವಿಜಯಪುರ, ಮೈಸೂರು, ವಿಜಯಪುರದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link