ಡಿಕೆ ಶಿವಕುಮಾರ್ ಪ್ರಮಾಣವಚನ: ಖಾಕಿ ಭದ್ರಕೋಟೆಯಾದ ಲೋಕಭವನ! 2000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ – Kannada News
ಲೋಕಭವನ ಸುತ್ತ ಬ್ಯಾರಿಕೇಡ್ ಹಾಕಿ ಭದ್ರತಾ ಸಿದ್ಧತೆ ಮಾಡಿರುವುದುImage Credit source: tv9 ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ, ಸಮಾರಂಭ ನಡೆಯಲಿರುವ ಲೋಕಭವನ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಇಡೀ…