All posts by nagaraj11081993

ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್; ‘ನನಗೂ ಹೀಗೇ ಆಗಿತ್ತು’ ಎಂದ ನಟಿ – Kannada News

ಬಾಲಿವುಡ್ ಅಂಗಳದಲ್ಲಿ ಈಗ ‘ಡಾನ್ 3’ ಸಿನಿಮಾ (Don 3 Movie) ಮತ್ತು ನಟ ರಣವೀರ್ ಸಿಂಗ್ ಸುತ್ತಲಿನ ವಿವಾದವೇ ದೊಡ್ಡ ಚರ್ಚೆಯ ವಿಷಯವಾಗಿದೆ ಎಂಬುದು ಗೊತ್ತೇ ಇದೆ. ಕೇವಲ ಸಂಭಾವನೆ ಅಥವಾ ಸ್ಕ್ರಿಪ್ಟ್ ಭಿನ್ನಾಭಿಪ್ರಾಯದಿಂದ ಆರಂಭವಾದ ಈ ಜಗಳ, ಈಗ ಕಾನೂನು ಮತ್ತು ಚಿತ್ರರಂಗದ ಸಂಘಟನೆಗಳ ಮಟ್ಟಕ್ಕೆ ಹೋಗಿ ತಲುಪಿದೆ. ನಟ ರಣವೀರ್ ಸಿಂಗ್ ವಿರುದ್ಧ ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ ಅಸಹಕಾರದ ಆದೇಶ ಹೊರಡಿಸಿದ್ದು, ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಈ ಇಡೀ ವಿವಾದದ ಬೆನ್ನಲ್ಲೇ, ಬಾಲಿವುಡ್‌ನ ವಿವಾದಿತ ಹಾಗೂ ನೇರ ನುಡಿಯ ನಟಿ ಕಂಗನಾ ರಣಾವತ್ ಅವರು ರಣವೀರ್ ಸಿಂಗ್ ಬೆಂಬಲಕ್ಕೆ ನಿಂತಿದ್ದಾರೆ.

ತಮ್ಮ ಮುಂಬರುವ ‘ಭಾರತ್ ಭಾಗ್ಯ ವಿಧಾತಾ’ ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ಕಂಗನಾ, ರಣವೀರ್ ಸಿಂಗ್ ಮೇಲಿನ ಬ್ಯಾನ್ ಕುರಿತು ಪ್ರತಿಕ್ರಿಯಿಸಿದರು. ‘ಬದುಕಿನಲ್ಲಿ ನಮ್ಮ ಅರ್ಹತೆ ಮತ್ತು ಸ್ಥಾನಮಾನ ಬೆಳೆದಂತೆ ಶತ್ರುಗಳ ಸಂಖ್ಯೆಯೂ ಹೆಚ್ಚಾಗುವುದು ಸಹಜ. ರಣವೀರ್ ಸಿಂಗ್ ತಮಗೆ ಇಷ್ಟೊಂದು ಜನ ವಿರೋಧಿಗಳಿದ್ದಾರೆ ಎಂದರೆ ತಮ್ಮ ಯೋಗ್ಯತೆ ಎಷ್ಟು ದೊಡ್ಡದಿದೆ ಎಂದು ಯೋಚಿಸಬೇಕು. ಇದು ಒಳ್ಳೆಯದೇ. ಜೀವನದಲ್ಲಿ ಮುಂದೆ ಸಾಗುವಾಗ ಇಂತಹ ಹತ್ತಾರು ಅಡೆತಡೆಗಳು ಬರುತ್ತವೆ. ರಸ್ತೆ ಯಾವಾಗಲೂ ಸರಳವಾಗಿರಲು ಸಾಧ್ಯವಿಲ್ಲ. ನನ್ನ ಜೀವನದಲ್ಲೂ ಇಂತಹ ಘಟನೆಗಳು ತುಂಬಾ ನಡೆದಿವೆ. ಆದರೆ ನೋಡಿ, ಇವತ್ತು ನಾನು ಚೆನ್ನಾಗಿಯೇ ಇದ್ದೇನೆ, ನನ್ನ ಸಿನಿಮಾಗಳೂ ಓಡುತ್ತಿವೆ. ಇದರಿಂದ ಏನೂ ಫರಕ್ ಬೀಳಲ್ಲ (ಬದಲಾವಣೆ ಆಗಲ್ಲ). ಕಾಲಕ್ರಮೇಣ ಎಲ್ಲವೂ ಸರಿಯಾಗುತ್ತದೆ,’ ಎಂದು ಕಂಗನಾ ರಣವೀರ್‌ಗೆ ಧೈರ್ಯ ತುಂಬಿದ್ದಾರೆ.

‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಅವರು ದಿಢೀರನೆ ಹೊರನಡೆದಿದ್ದೇ ಈ ಎಲ್ಲಾ ರಾದ್ಧಾಂತಕ್ಕೆ ಕಾರಣ. ಮೇ 25 ರಂದು FWICE ಸಂಘಟನೆಯು ರಣವೀರ್ ವಿರುದ್ಧ ಅಸಹಕಾರದ ನಿರ್ದೇಶನವನ್ನು ಜಾರಿಗೊಳಿಸಿತು. ಸಿನಿಮಾ ಸಂಸ್ಥೆಯ ಪ್ರಕಾರ, ಚಿತ್ರದಿಂದ ಹೊರನಡೆಯುವ ಮುನ್ನ ರಣವೀರ್ ತಮ್ಮ ಕಡೆಯ ವಿವರಣೆ ನೀಡಲು ಖುದ್ದಾಗಿ ಹಾಜರಾಗಬೇಕಿತ್ತು. ಆದರೆ ಸಂಘಟನೆ ನೀಡಿದ ಹಲವು ನೋಟಿಸ್‌ಗಳಿಗೆ ರಣವೀರ್ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮತ್ತೊಂದೆಡೆ, ‘ಡಾನ್ 3’ ಚಿತ್ರದ ನಿರ್ಮಾಪಕ ಫರ್ಹಾನ್ ಅಖ್ತರ್ ಅವರ ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಸಂಸ್ಥೆಯು, ರಣವೀರ್ ಸಿನಿಮಾದಲ್ಲಿದ್ದಾರೆ ಎಂಬ ಕಾರಣಕ್ಕೆ ಪ್ರೀ-ಪ್ರೊಡಕ್ಷನ್ ಕೆಲಸಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿತ್ತು. ಈಗ ನಟ ಅರ್ಧದಲ್ಲೇ ಕೈಕೊಟ್ಟಿರುವುದರಿಂದ ತಮಗೆ ನಷ್ಟವಾಗಿದೆ ಎಂದು ಆರೋಪಿಸಿ, 45 ಕೋಟಿ ರೂ. ಪರಿಹಾರ ನೀಡುವಂತೆ ರಣವೀರ್‌ಗೆ ಬೇಡಿಕೆ ಇಟ್ಟಿದೆ.

ಇದನ್ನೂ ಓದಿ: ‘ಡಾನ್ 3’ ಮಾತ್ರವಲ್ಲ, ನಿಂತು ಹೋದ ರಣ್ವೀರ್ ಸಿಂಗ್ ಸಿನಿಮಾಗಳಿವು 

ಕೆಲವು ದಿನಗಳ ಹಿಂದಷ್ಟೇ ‘ಡಾನ್ 3’ ಚಿತ್ರದ ಸ್ಕ್ರಿಪ್ಟ್ ಬದಲಾವಣೆ ಹಾಗೂ ಸಂಭಾವನೆ ವಿಚಾರದಲ್ಲಿ ರಣವೀರ್ ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ ನಡುವೆ ತೀವ್ರ ಭಿನ್ನಾಭಿಪ್ರಾಯ ಮೂಡಿತ್ತು. ರಣವೀರ್ ಸಿಂಗ್ ಭಾರಿ ಮೊತ್ತದ ಸಂಭಾವನೆ ಮತ್ತು ಚಿತ್ರದ ಲಾಭದಲ್ಲಿ ಪಾಲು ಕೇಳಿದ್ದರು ಎನ್ನಲಾಗಿದೆ. ಆದರೆ ರಣವೀರ್ ಅವರ ಇತ್ತೀಚಿನ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಸರಣಿ ಸೋಲು ಕಂಡಿದ್ದರಿಂದ ನಿರ್ಮಾಪಕರು ಅಷ್ಟು ದೊಡ್ಡ ಮೊತ್ತ ನೀಡಲು ಒಪ್ಪಲಿಲ್ಲ. ಮಾತುಕತೆ ಮುರಿದುಬಿದ್ದಾಗ ರಣವೀರ್ ಚಿತ್ರದಿಂದ ಹೊರನಡೆದರು. ಇದೇ ಈಗ ದೊಡ್ಡ ಮಟ್ಟದ ವಿವಾದವಾಗಿ ರೂಪಾಂತರಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಸಿಲ್ಕ್ ಬೋರ್ಡ್​ ಸೇರಿದಂತೆ ಬೆಂಗಳೂರಿನ ಹಲವೆಡೆ ಉತ್ತಮ ವಾಯು ಗುಣಮಟ್ಟ – Kannada News

ಬೆಂಗಳೂರಿನ ಜೊತೆಗೆ ಚಿಕ್ಕಮಗಳೂರಿನ ವಾಯು ಗುಣಮಟ್ಟವೂ ಅತ್ಯುತ್ತಮ

ಬೆಂಗಳೂರು, ಜೂನ್ 03: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಬಹುತೇಕ ಉತ್ತಮ ಹಾಗೂ ಸಾಧಾರಣ ಮಟ್ಟದಲ್ಲಿದೆ. ಇತ್ತೀಚೆಗೆ ಸುರಿದ ಮಳೆಯ ಕಾರಣದಿಂದಾಗಿ ಗಾಳಿಯಲ್ಲಿನ ಧೂಳಿನ ಕಣಗಳು ಕಡಿಮೆಯಾಗಿದ್ದು, ಜನತೆಗೆ ನಿರಾಳತೆ ತಂದಿದೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ ಸಾಧಾರಣ ಮಟ್ಟದಲ್ಲಿದೆ.
  • ಗದಗ ಮತ್ತು ಮಂಗಳೂರು ನಗರಗಳು ಅತ್ಯಂತ ಸ್ವಚ್ಛ ಗಾಳಿಯನ್ನು ಹೊಂದಿವೆ.
  • ಪೀಣ್ಯ ಮತ್ತು ಸಿಲ್ಕ್ ಬೋರ್ಡ್‌ಗಳಲ್ಲಿ ಮಾಲಿನ್ಯ ಪ್ರಮಾಣ ಕೊಂಚ ಹೆಚ್ಚಾಗಿದೆ.

ಬೆಂಗಳೂರಿನ ಇಂದಿನ ವಾಯು ಗುಣಮಟ್ಟ

ಬೆಂಗಳೂರಿನಲ್ಲಿ ಇಂದು ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 39 ರಿಂದ 64ರ ಆಸುಪಾಸಿನಲ್ಲಿದ್ದು, ಇದನ್ನು ಉತ್ತಮ ಮತ್ತು ಸಾಧಾರಣ ಶ್ರೇಣಿಯಲ್ಲಿ ವರ್ಗೀಕರಿಸಲಾಗಿದೆ. ನಗರದ ವಿವಿಧ ವಲಯಗಳ ವಿವರ ಹೀಗಿದೆ:

  • ಬಿಟಿಎಂ ಲೇಔಟ್ – 64
  • ಪೀಣ್ಯ – 59-70
  • ಸಿಲ್ಕ್ ಬೋರ್ಡ್- 75
  • ಹೆಬ್ಬಾಳ – 65
  • ಜಯನಗರ – 69

ಬೆಂಗಳೂರಿನ ಗಾಳಿಯಲ್ಲಿ ಪ್ರಮುಖವಾಗಿ PM2.5 ಮತ್ತು PM10 ಕಣಗಳ ಪ್ರಮಾಣ ನಿಯಂತ್ರಣದಲ್ಲಿದೆ. ಈ ಮಟ್ಟದ ಗಾಳಿಯು ಬಹುತೇಕ ಜನರಿಗೆ ಆರೋಗ್ಯಕರವಾಗಿದ್ದು, ಯಾವುದೇ ಆತಂಕವಿಲ್ಲದೆ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು. ಆದಾಗ್ಯೂ, ತೀವ್ರ ಉಸಿರಾಟದ ಸಮಸ್ಯೆ ಇರುವವರು ಪೀಣ್ಯ ಮತ್ತು ಸಿಲ್ಕ್ ಬೋರ್ಡ್‌ನಂತಹ ದಟ್ಟಣೆಯ ಪ್ರದೇಶಗಳಲ್ಲಿ ಸ್ವಲ್ಪ ಎಚ್ಚರ ವಹಿಸುವುದು ಸೂಕ್ತ.

ಕರ್ನಾಟಕದ ಇತರೆ ನಗರಗಳಲ್ಲಿ ಹೇಗಿದೆ AQI?

ರಾಜ್ಯದ ಇತರೆ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ಅತ್ಯುತ್ತಮ ದಾಖಲೆಯಲ್ಲಿದೆ.

  • ಗದಗ – 11
  • ಮಂಗಳೂರು – 13-18
  • ಕೊಪ್ಪಳ – 38
  • ಚಿಕ್ಕಬಳ್ಳಾಪುರ – 42

ಹಾಸನದ ಕೆಲವು ಭಾಗಗಳ ಕೈಗಾರಿಕಾ ಕೇಂದ್ರಗಳಲ್ಲಿ ಸ್ಥಳೀಯ ತಾಂತ್ರಿಕ ಕಾರಣಗಳಿಂದಾಗಿ ವಾಯು ಮಾಲಿನ್ಯ ಸೂಚ್ಯಂಕದಲ್ಲಿ ಏರಿಳಿತಗಳು ದಾಖಲಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಡೈಪರ್ ಚೇಂಜ್ ಮಾಡೋದು ಅಂದ್ರೆ ಆಗಲ್ಲ, ಅಲ್ಲಿಂದ ಜಾರಿಕೊಳ್ತೀನಿ; ರಾಮ್ ಚರಣ್ – Kannada News

ರಾಮ್ ಚರಣ್ ಸದ್ಯ ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಪೆದ್ದಿ’ (Peddi) ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರು ವಿವಿಧ ವಾಹಿನಿಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ತಮ್ಮ ವೈಯಕ್ತಿಕ ಜೀವನ ಹಾಗೂ ಮೂವರು ಮಕ್ಕಳ ತಂದೆಯಾಗಿರುವ ಜವಾಬ್ದಾರಿಯ ಬಗ್ಗೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಹಂಚಿಕೊಂಡಿದ್ದಾರೆ. ತಾವೊಬ್ಬ ಜವಾಬ್ದಾರಿಯುತ ತಂದೆ ಹೌದಾದರೂ, ಮಕ್ಕಳ ಡೈಪರ್ ಬದಲಾಯಿಸುವ ವಿಷಯ ಬಂದಾಗ ಅಲ್ಲಿಂದ ಕಾಲ್ಕಿಳುತ್ತಿರುವುದಾಗಿ ರಾಮ್ ಚರಣ್ ಒಪ್ಪಿಕೊಂಡಿದ್ದಾರೆ.

ಸಂದರ್ಶನ ಒಂದರಲ್ಲಿ ಮಾತನಾಡಿದ ರಾಮ್ ಚರಣ್, ‘ನಾನು ಒಳ್ಳೆಯ ತಂದೆಯೋ ಅಥವಾ ಸಾಮಾನ್ಯ ತಂದೆಯೋ ಗೊತ್ತಿಲ್ಲ. ಆದರೆ ಮಕ್ಕಳ ಎಲ್ಲಾ ಜವಾಬ್ದಾರಿಗಳಲ್ಲೂ ನಾನು ಭಾಗಿಯಾಗುತ್ತೇನೆ. ಅವರಿಗೆ ಊಟ ಮಾಡಿಸುವುದು, ಮಲಗಿಸುವುದು ಎಲ್ಲವನ್ನೂ ಮಾಡುತ್ತೇನೆ.  ಮಗಳು ಕಾರಾ ಪ್ರತಿ ರಾತ್ರಿಯೂ ನನ್ನ ಜೊತೆಯಲ್ಲೇ ಮಲಗುತ್ತಾಳೆ. ಒಬ್ಬ ಸಾಮಾನ್ಯ ತಂದೆ ಮಾಡುವ ಎಲ್ಲಾ ಕೆಲಸಗಳನ್ನೂ ನಾನು ಮಾಡುತ್ತೇನೆ. ಆದರೆ, ಡೈಪರ್ ಬದಲಾಯಿಸುವ ಕೆಲಸ ಮಾತ್ರ ನನ್ನ ಕೈಲಿ ಆಗಲ್ಲ. ಆ ಸಮಯ ಬಂದಾಗ ಸದ್ದಿಲ್ಲದೆ ರೂಮ್‌ನಿಂದ ಹೊರಟುಬಿಡುತ್ತೇನೆ’ ಎಂದು ನಗುತ್ತಾ ಹೇಳಿದ್ದಾರೆ.

ಕೆಲವೇ ವಾರಗಳ ಹಿಂದೆ ಬಾಲಿವುಡ್ ನಟ ವಿಕ್ಕಿ ಕೌಶಲ್ ಕೂಡ ತಮ್ಮ ಮಗುವಿನ ವಿಷಯದಲ್ಲಿ ಇಂತಹುದೇ ಹೇಳಿಕೆ ನೀಡಿ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಕಳೆದ ವರ್ಷ ತಂದೆಯಾಗಿದ್ದ ವಿಕ್ಕಿ ಕೌಶಲ್, ‘ಮಗುವಿಗೆ ಈಗ ಮೂರು ತಿಂಗಳು. ಇಷ್ಟು ಸಣ್ಣ ಮಗುವಿದ್ದಾಗ ತಂದೆಯಾಗಿ ಮಾಡಲು ಹೆಚ್ಚಿನ ಕೆಲಸ ಇರುವುದಿಲ್ಲ. ನಾನು ಕೇವಲ ಚೀರ್ ಲೀಡರ್ ತರಹ ಇದ್ದು, ಮಗು ಸ್ವಲ್ಪ ದೊಡ್ಡದಾಗಲಿ ಎಂದು ಕಾಯುತ್ತಿದ್ದೇನೆ. ಆಗ ನಾನು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬಹುದು’ ಎಂದಿದ್ದರು.

ಜೊತೆಗೆ ಪತ್ನಿ ಕತ್ರಿನಾ ಕೈಫ್ ಅವರನ್ನು ಹೊಗಳುತ್ತಾ, ‘ಸದ್ಯಕ್ಕೆ ತಾಯಿಯೇ ಸೂಪರ್ ಹೀರೋ. ಪ್ರೆಗ್ನೆನ್ಸಿ ಹಾಗೂ ಮಗುವಿನ ಪಾಲನೆಯಲ್ಲಿ ಆಕೆ ಒಬ್ಬ ಯೋಧನಂತೆ ಶ್ರಮಿಸುತ್ತಿದ್ದಾಳೆ. ಆಕೆಯ ಬಗ್ಗೆ ನನಗೆ ಹೆಮ್ಮೆಯಿದೆ’ ಎಂದು ಹೇಳಿದ್ದರು.

ಇದನ್ನೂ ಓದಿ: ಜಾನ್ವಿ ಕಪೂರ್ ಮೈಮೇಲೆ ಬೀಳಲು ಬಂದ ರಾಮ್ ಚರಣ್ ಅಭಿಮಾನಿ; ವಿಡಿಯೋ ವೈರಲ್

ವಿಕ್ಕಿ ಕೌಶಲ್ ಅವರ ಈ ಹೇಳಿಕೆ ಹಲವರಿಗೆ ಇಷ್ಟವಾಗಿರಲಿಲ್ಲ. ರೆಡ್ಡಿಟ್​ನಲ್ಲಿ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿ, ‘ಮಗುವಿಗೆ ಹಾಲುಣಿಸುವುದನ್ನು ಬಿಟ್ಟರೆ ತಾಯಿ ಮಾಡುವ ಯಾವ ಕೆಲಸವನ್ನು ತಂದೆ ಮಾಡಲು ಸಾಧ್ಯವಿಲ್ಲ ಹೇಳಿ? ವಿಕ್ಕಿ ಅವರ ಈ ಹೇಳಿಕೆ 20ನೇ ಶತಮಾನದ ಚಿಂತನೆಯನ್ನು ನೆನಪಿಸುತ್ತದೆ’ ಎಂದು ಆಕ್ರೋಶ ಹೊರಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ಊಟ-ತಿಂಡಿ, ಕಾಫಿ-ಚಹಾ ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರ ಸಿದ್ಧತೆ – Kannada News

ಬೆಂಗಳೂರು, ಜೂನ್ 3: ಮಧ್ಯಪ್ರಾಚ್ಯ ಸಂಘರ್ಷ, ಯುದ್ಧದ ಭೀತಿಯ ಪರಿಣಾಮ ನೇರವಾಗಿ ಸಾಮಾನ್ಯ ಜನರ ಅಡುಗೆ ಮನೆ ಹಾಗೂ ಹೋಟೆಲ್ ಉದ್ಯಮದ ಮೇಲೆ ತಟ್ಟಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಸಿಲಿಂಡರ್ ದರ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಬೆಂಗಳೂರಿನ (Bengaluru) ಬಹುತೇಕ ಹೋಟೆಲ್‌ಗಳಲ್ಲಿ ಊಟ, ತಿಂಡಿ, ಕಾಫಿ ಮತ್ತು ಟೀ ದರಗಳನ್ನು ಹೆಚ್ಚಿಸಲು ಮಾಲೀಕರು ಸಜ್ಜಾಗಿದ್ದಾರೆ. ಈಗಾಗಲೇ ಕೆಲವು ಹೋಟೆಲ್‌ಗಳು ದರ ಏರಿಕೆ ಮಾಡಿದ್ದರೆ, ಇನ್ನುಳಿದ ಹೋಟೆಲ್‌ಗಳು ಈ ವಾರದಿಂದಲೇ ಹೊಸ ದರ ಪಟ್ಟಿಯನ್ನು ಜಾರಿಗೆ ತರಲು ಮುಂದಾಗಿವೆ.

ಮುಖ್ಯಾಂಶಗಳು

  • ವಾಣಿಜ್ಯ ಸಿಲಿಂಡರ್ ದರ ಮೂರೇ ತಿಂಗಳಲ್ಲಿ ₹1,240 ಏರಿಕೆ
  • ]ಸದ್ಯ ₹3,198 ಇರುವ ಸಿಲಿಂಡರ್ ಬೆಲೆ ಶೀಘ್ರದಲ್ಲೇ ₹4,000 ಮುಟ್ಟುವ ಭೀತಿ.
  • ಬೆಂಗಳೂರಿನ ಹೋಟೆಲ್‌ಗಳಲ್ಲಿ ಇಡ್ಲಿ, ವಡೆ, ದೋಸೆ ಹಾಗೂ ರೈಸ್ ಐಟಂಗಳ ಮೇಲೆ ₹5 ರಿಂದ ₹20 ಹಾಗೂ ಕಾಫಿ-ಟೀ ಮೇಲೆ ₹2 ರಿಂದ ₹3 ಹೆಚ್ಚಳ.

ಗಗನಕ್ಕೇರಿದ ಕಮರ್ಷಿಯಲ್ ಗ್ಯಾಸ್ ದರ

ಕಳೆದ ಮೂರು ತಿಂಗಳ ಅವಧಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಬರೋಬ್ಬರಿ 1,240 ರೂ. ಏರಿಕೆಯಾಗಿದೆ. ಕಳೆದ ತಿಂಗಳು 991 ರೂ. ಹೆಚ್ಚಳವಾಗಿದ್ದರೆ, ಜೂನ್ 1 ರಂದು ಮತ್ತೆ 46 ರೂ. ಏರಿಕೆ ಮಾಡಲಾಗಿದೆ. ಇಷ್ಟಕ್ಕೇ ನಿಲ್ಲದ ಬೆಲೆ ಏರಿಕೆ ಮುಂಬರುವ ದಿನಗಳಲ್ಲಿ ಮತ್ತೆ 800 ರೂ. ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ 3,198 ರೂ.ಗೆ ಮಾರಾಟವಾಗುತ್ತಿರುವ ಸಿಲಿಂಡರ್ ಬೆಲೆ 4,000 ರೂ. ತಲುಪುವ ಮುನ್ಸೂಚನೆ ಸಿಕ್ಕಿರುವುದರಿಂದ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಗ್ರಾಹಕರ ಮೇಲೆ ಆರ್ಥಿಕ ಹೊರೆ ಹೊರಿಸಲು ಮುಂದಾಗಿದ್ದಾರೆ.

ದರ ಏರಿಕೆ ಅನಿವಾರ್ಯತೆ ಬಗ್ಗೆ ಹೋಟೆಲ್ ಮಾಲೀಕರು ಏನಂತಾರೆ?

ಈ ಕುರಿತು ಮಾತನಾಡಿರುವ ವಿಲ್ಸನ್ ಗಾರ್ಡನ್ ಟಿಫಿನ್ ಸೆಂಟರ್ ಮಾಲೀಕ ಶ್ರೀನಿವಾಸ್ ಹಾಗೂ ದೋಸೆ ಕ್ಯಾಂಪ್ ಮಾಲೀಕ ಧನುಷ್, ‘ಗ್ಯಾಸ್ ಬಳಸದೇ ಅಡುಗೆ ಮಾಡಲು ಸಾಧ್ಯವಿಲ್ಲ. ಈಗಾಗಲೇ ರೈಸ್ ಬಾತ್ ದರವನ್ನು 30 ರೂ.ನಿಂದ 40 ರೂ.ಗೆ ಏರಿಸಲಾಗಿದೆ. ಕಮರ್ಷಿಯಲ್ ಗ್ಯಾಸ್ ಬೆಲೆ ಹೀಗೇ ಏರುತ್ತಿದ್ದರೆ ಹೋಟೆಲ್ ಉದ್ಯಮ ನಡೆಸುವುದು ಕಷ್ಟವಾಗಿ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಅನಿವಾರ್ಯವಾಗಿ ಪ್ರತಿ ತಿಂಡಿಯ ಮೇಲೆ 5 ರಿಂದ 10 ರೂ.ವರೆಗೆ ದರ ಏರಿಕೆ ಮಾಡಲೇಬೇಕಾದ ಕಠಿಣ ಪರಿಸ್ಥಿತಿಯಲ್ಲಿದ್ದೇವೆ’ ಎಂದು ಅಳಲು ತೋಡಿಕೊಂಡಿದ್ದಾರೆ. ಸಾನಿಧ್ಯ ಹೋಟೆಲ್ ಮ್ಯಾನೇಜರ್ ಯೋಗೇಶ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಗ್ಯಾಸ್ ದರ ನೋಡಿಕೊಂಡು ಮತ್ತಷ್ಟು ಬೆಲೆ ಹೆಚ್ಚಳ ಮಾಡುವ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ಹೋಟೆಲ್ ತಿಂಡಿಗಳ ದರ ಏರಿಕೆಯಿಂದಾಗಿ ಕಚೇರಿ ನೌಕರರು, ಮಧ್ಯಮ ವರ್ಗದ ಕುಟುಂಬಗಳು ಹಾಗೂ ಬ್ಯಾಚುಲರ್‌ಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಬಹುತೇಕ ಹೋಟೆಲ್‌ಗಳಲ್ಲಿ ಇಡ್ಲಿ-ವಡೆ, ದೋಸೆ ಮೇಲೆ 5 ರಿಂದ 10 ರೂ. ಹಾಗೂ ಊಟದ ಮೇಲೆ 10 ರಿಂದ 20 ರೂ. ವರೆಗೆ ದರ ಹೆಚ್ಚಿಸಲಾಗಿದೆ. ಕಾಫಿ-ಟೀ ಬೆಲೆಯೂ 2 ರಿಂದ 3 ರೂ. ದುಬಾರಿಯಾಗಿದೆ. ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಗ್ರಾಹಕ ಶಿವಕುಮಾರ್, ‘ಹಿಂದೆ 40 ರೂ. ಇದ್ದ ಇಡ್ಲಿ ಈಗ 50 ರೂ. ಆಗಿದೆ. ನಮ್ಮ ಸಂಬಳ ಮಾತ್ರ ಹೆಚ್ಚುತ್ತಿಲ್ಲ, ನಿತ್ಯ ಊಟ-ತಿಂಡಿಗೆ 60 ರೂ. ಹೆಚ್ಚುವರಿ ಖರ್ಚಾಗುತ್ತಿರುವುದರಿಂದ ಒಂದು ಹೊತ್ತಿನ ಊಟ ಬಿಡುವ ಸ್ಥಿತಿ ಬಂದಿದೆ’ ಎಂದಿದ್ದಾರೆ. ಒಟ್ಟಾರೆಯಾಗಿ ಜಾಗತಿಕ ಯುದ್ಧದ ಎಫೆಕ್ಟ್ ಸಿಟಿ ಜನರ ಹಸಿವಿನ ಮೇಲೆ ಬರೆ ಎಳೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊಜ್ತಬಾ ಖಮೇನಿ ಬದುಕಿದ್ದಾರಾ? ಶಾಂತಿ ಮಾತುಕತೆ ಯಾವ ಹಾದಿಯಲ್ಲಿದೆ, ಮಾರ್ಕೊ ರುಬಿಯೊ ಹೇಳಿದ್ದೇನು ಇಲ್ಲಿದೆ ಮಾಹಿತಿ – Kannada News

ವಾಷಿಂಗ್ಟನ್, ಜೂನ್ 03: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ಬೂದಿ ಮುಚ್ಚಿದ ಕೆಂಡದಂತಾಗಿದೆ. ಒಂದೆಡೆ ಯುದ್ಧವೂ ಇಲ್ಲ, ಮತ್ತೊಂದೆಡೆ ಶಾಂತಿಯೂ ಇಲ್ಲ. ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಉದ್ವಿಗ್ನತೆಯನ್ನು ಕೊನೆಗಾಣಿಸಿ ಶಾಂತಿ ಪುನಃಸ್ಥಾಪಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಬೆಳವಣಿಗೆಯೊಂದು ಕಂಡುಬಂದಿದೆ. ಇರಾನ್ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ (Mojtaba Khamenei) ಜೀವಂತವಾಗಿದ್ದಾರೆ ಮತ್ತು ದೇಶದ ವ್ಯವಹಾರಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಅಮೆರಿಮ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಹೇಳಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ನಡೆದ ಮಿಲಿಟರಿ ದಾಳಿಯ ನಂತರ ಅವರ ಆರೋಗ್ಯದ ಕುರಿತು ಸಾಕಷ್ಟು ವದಂತಿಗಳು ಹರಡಿದ್ದವು, ಅವರು ಚೇತರಿಸಿಕೊಂಡು ಮತ್ತೆ ಆಡಳಿತಕ್ಕೆ ಮರಳಿರುವುದು ಮಾತುಕತೆಯ ಹೊಸ ಹಾದಿಯನ್ನೇ ತೆರೆದಿದೆ ಎನ್ನಬಹುದು.

ಜಾಗತಿಕ ಮಾರುಕಟ್ಟೆ ಮತ್ತು ಹಾರ್ಮುಜ್ ಜಲಸಂಧಿ ಮುಕ್ತ ಮುನ್ಸೂಚನೆ

ಮಾರ್ಕೊ ರುಬಿಯೊ ಮಾತನಾಡಿ, ಅಮೆರಿಕ ಮತ್ತು ಇರಾನ್ ನಡುವೆ ಶೀಘ್ರದಲ್ಲೇ ಐತಿಹಾಸಿಕ ಒಪ್ಪಂದವೊಂದು ಏರ್ಪಡುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಒಪ್ಪಂದದ ಭಾಗವಾಗಿ ಜಾಗತಿಕ ತೈಲ ಮತ್ತು ಅನಿಲ ಸಾರಿಗೆಯ ಪ್ರಮುಖ ಮಾರ್ಗವಾಗಿರುವ ‘ಹಾರ್ಮುಜ್ ಜಲಸಂಧಿ’ಯನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಇರಾನ್ ಸಜ್ಜಾಗುತ್ತಿದೆ.

ನಿರ್ಬಂಧಗಳಿಗೆ ಮುಕ್ತಿ

ಇರಾನ್ ಮೇಲಿನ ಆರ್ಥಿಕ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಅಮೆರಿಕ ಸಿದ್ಧವಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ತನ್ನ ಯುರೇನಿಯಂ ಪುಷ್ಟೀಕರಣದ ಚಟುವಟಿಕೆಗಳನ್ನು ತೀವ್ರವಾಗಿ ಮಿತಿಗೊಳಿಸಲು ಅಥವಾ ರದ್ದುಗೊಳಿಸಲು ಮಾತುಕತೆ ನಡೆಸುತ್ತಿದೆ.

ಮತ್ತಷ್ಟು ಓದಿ: ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ಮಾರ್ಕೊ ರುಬಿಯೊ ಹೇಳಿಕೆ: ಈ ಶಾಂತಿ ಒಪ್ಪಂದ ಇಂದು, ನಾಳೆ ಅಥವಾ ಮುಂದಿನ ವಾರದಲ್ಲೇ ಯಶಸ್ವಿಯಾಗಬಹುದು. ಇರಾನ್ ತನ್ನ ಪರಮಾಣು ಚಟುವಟಿಕೆಗಳನ್ನು ಮಿತಿಗೊಳಿಸಲು ಒಪ್ಪಿದರೆ, ಅವರ ಮೇಲಿರುವ ಎಲ್ಲಾ ಆರ್ಥಿಕ ನಿರ್ಬಂಧಗಳಿಗೆ ದೊಡ್ಡ ಪರಿಹಾರ ಸಿಗಲಿದೆ.

ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದಿರುವ ಕದನ ವಿರಾಮದ ಪ್ರಯತ್ನಗಳ ನಡುವೆ, ಅಮೆರಿಕವು ಇರಾನ್ ಜೊತೆಗೆ ಸೌಹಾರ್ದಯುತ ಒಪ್ಪಂದ ಮಾಡಿಕೊಳ್ಳಲು ತೋರಿರುವ ಈ ರಾಜತಾಂತ್ರಿಕ ಆಸಕ್ತಿಯು ಜಾಗತಿಕ ತೈಲ ಮಾರುಕಟ್ಟೆ ಹಾಗೂ ವಿಶ್ವ ಶಾಂತಿಯ ದೃಷ್ಟಿಯಿಂದ ಅತ್ಯಂತ ಆಶಾದಾಯಕ ಸುದ್ದಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ

ಟೌಂಟನ್​ನ ಕೂಪರ್ ಅಸೋಸಿಯೇಟ್ಸ್ ಕೌಂಟಿ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಸೋಲನುಭವಿಸಿದೆ. ಸರಣಿ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ಷಾರ್ಲೆಟ್ ಡೀನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ (8) ಹಾಗೂ ಶಫಾಲಿ ವರ್ಮಾ (11) ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಬಂದ ಯಾಸ್ತಿಕಾ ಭಾಟಿಯಾ 18 ಎಸೆತಗಳಲ್ಲಿ 32 ರನ್ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಮತ್ತೊಂದೆಡೆ ಜೆಮಿಮಾ ರೊಡ್ರಿಗಸ್ 29 ರನ್​ಗಳ ಕೊಡುಗೆ ನೀಡಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಹರ್ಮನ್​ಪ್ರೀತ್ ಕೌರ್ 40 ಎಸೆತಗಳಲ್ಲಿ ಕಲೆಹಾಕಿದ್ದು 56 ರನ್​ಗಳು ಮಾತ್ರ. ಹಾಗೆಯೇ 24 ಎಸೆತಗಳನ್ನು ಎದುರಿಸಿದ ದೀಪ್ತಿ ಶರ್ಮಾ ಗಳಿಸಿದ್ದು 32 ರನ್​ಗಳು. ಈ ಇಬ್ಬರ ನಿಧಾನಗತಿಯ ಬ್ಯಾಟಿಂಗ್​ ಹೊರತಾಗಿಯೂ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 180 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಯಶಸ್ವಿಯಾಗಿದ್ದರು. 2ನೇ ಓವರ್​ನಲ್ಲಿ ಕ್ರಾಂತಿ ಗೌಡ್​, ವ್ಯಾಟ್ ಹಾಡ್ಜ್​ (6) ವಿಕೆಟ್ ಉರುಳಿಸಿದರು. ಇದರ ಬೆನ್ನಲ್ಲೇ ಆರುಂಧತಿ ರೆಡ್ಡಿ ಸೋಫಿಯಾ ಡಂಕಿ (16) ವಿಕೆಟ್ ಕಬಳಿಸಿದರು. ಇನ್ನು ಆ್ಯಮಿ ಜೋನ್ಸ್ (3) ರನ್ನು ಬೇಗನೆ ಔಟ್ ಮಾಡುವಲ್ಲಿ ಕ್ರಾಂತಿ ಗೌಡ್ ಯಶಸ್ವಿಯಾದರು.

ಆದರೆ ಈ ಹಂತದಲ್ಲಿ ಕಣಕ್ಕಿಳಿದ ಅಲಿಸ್ ಕ್ಯಾಪ್ಸಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಟೀಮ್ ಇಂಡಿಯಾ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಕ್ಯಾಪ್ಟಿ ಮೈದಾನದ ಮೂಲೆ ಮೂಲೆಗೆ ಫೋರ್​ಗಳನ್ನು ಬಾರಿಸಿದರು. ಕ್ಯಾಪ್ಟಿಗೆ ಉತ್ತಮ ಸಾಥ್ ನೀಡಿದ ಹೀದರ್ ನೈಟ್ ಕೂಡ ಅಬ್ಬರಿಸಲಾರಂಭಿಸಿದರು.

ಪರಿಣಾಮ ಅಲಿಸ್ ಕ್ಯಾಪ್ಸಿ ಬ್ಯಾಟ್​ನಿಂದ ಕೇವಲ 43 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 82 ರನ್​ಗಳು ಮೂಡಿಬಂತು ಇನ್ನು ಹೀದರ್ ನೈಟ್ 42 ಎಸೆತಗಳಲ್ಲಿ 70 ರನ್ ಚಚ್ಚಿದರು. ಈ ಮೂಲಕ ಇಂಗ್ಲೆಂಡ್ ತಂಡವು 18.4 ಓವರ್​ಗಳಲ್ಲಿ 184 ರನ್​​ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಇಂಗ್ಲೆಂಡ್ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

Source link

‘ನಿಮ್ಮ ಲೈಫ್ ನೋಡಿಕೊಳ್ಳಿ’; ಕ್ಯಾನ್ಸರ್ ಪೀಡಿತ ಅಭಿಮಾನಿ ಜೊತೆ ಮಾತನಾಡಿದ ಯಶ್ – Kannada News

ರಾಕಿಂಗ್ ಸ್ಟಾರ್ ಯಶ್ ಅವರು (ಯಶ್) ಕೇವಲ ಹೀರೋ ಆಗಿ ಮಾತ್ರವಲ್ಲ, ಮಾನವೀಯತೆ ತೋರುವ ವ್ಯಕ್ತಿಯಾಗಿಯೂ ಇಷ್ಟ ಆಗುತ್ತಾರೆ. ಅಭಿಮಾನಿಗಳು ಕೊಟ್ಟಷ್ಟೇ ಪ್ರೀತಿಯನ್ನು ಇವರು ಕೊಡುತ್ತಾರೆ. ಇದಕ್ಕೆ ಸಾಕಷ್ಟು ಉದಾಹರಣೆಗಳು ಈಗಾಗಲೇ ಸಿಕ್ಕಿವೆ. ಇತ್ತೀಚೆಗೆ ಕ್ಯಾನ್ಸರ್ ಪೀಡಿತ ಅಭಿಮಾನಿ ಜೊತೆ ಯಶ್ ಅವರು ವಿಡಿಯೋ ಕಾಲ್​​ ಮೂಲಕ ಮಾತನಾಡಿದ್ದಾರೆ. ಅಭಿಮಾನಿಗೆ ಅವರು ಧೈರ್ಯ ತುಂಬಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಪ್ರಶಂಸೆಗೆ ಕಾರಣವಾಗಿದೆ.

ಯಶ್ ಅವರು ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ಪ್ಯಾನ್ ಇಂಡಿಯಾ ಮಟ್ಟಕ್ಕೆ ತೆರಳಿದ್ದಾರೆ. ‘ಟಾಕ್ಸಿಕ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ವಿಶ್ವದರ್ಜೆ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಯೋಜನೆ ಅವರಿಗೆ ಇದೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಸಿನಿಮಾ ರಿಲೀಸ್ ಆದರೆ ಹಬ್ಬ ಮಾಡಬೇಕು ಎಂದು ಕಾದು ಕುಳಿತ ಅಭಿಮಾನಿಯೊಬ್ಬರ ಆರೋಗ್ಯ ಹದಗೆಟ್ಟಿದೆ. ಕ್ಯಾನ್ಸರ್ ಇರುವ ವಿಷಯ ಗೊತ್ತಾಗಿದೆ.

ಇದನ್ನೂ ಓದಿ: ಅಲಿಬಾಗ್​ನಲ್ಲಿ 24 ಕೋಟಿ ರೂಪಾಯಿ ಆಸ್ತಿ ಖರೀದಿಸಿದ ಯಶ್, ರಾಧಿಕಾ ಪಂಡಿತ್

ಅಭಿಮಾನಿಗೆ ಕ್ಯಾನ್ಸರ್ ಇರುವ ವಿಷಯ ಗೊತ್ತಾಗುತ್ತಿದ್ದಂತೆ ರಾಕಿಂಗ್ ಸ್ಟಾರ್ ಯಶ್ ಅವರು ವಿಡಿಯೋ ಕಾಲ್ ಮೂಲಕ 10 ನಿಮಿಷಕ್ಕೂ ಹೆಚ್ಚು ಸಮಯ ಮಾತನಾಡಿದ್ದಾರೆ. ಮೊದಲು ಏನಾಯಿತು? ಕ್ಯಾನ್ಸರ್ ಇದೆ ಎಂಬುದು ಏಕೆ ಗೊತ್ತಾಗಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಆ ಬಳಿಕ ಯಶ್ ಅವರು ಒಂದು ಪ್ರಮುಖವಾದ ಕಿವಿಮಾತು ಹೇಳಿದ್ದಾರೆ.

ಅಭಿಮಾನಿ ಜೊತೆ ಮಾತನಾಡಿದ ಯಶ್

‘ನಿಮ್ಮ ಸಿನಿಮಾ ಟಾಕ್ಸಿಕ್​​ನ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಬೇಕು ಎಂದು ಪ್ಲ್ಯಾನ್ ಮಾಡಿದ್ದೆವು’ ಎಂದು ಕ್ಯಾನ್ಸರ್ ಪೀಡಿತ ಅಭಿಮಾನಿ ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಯಶ್, ‘ನಿಮ್ಮ ಲೈಫ್ ನೋಡಿಕೊಳ್ಳಿ. ಸಿನಿಮಾ ಬರುತ್ತೆ, ಹೋಗುತ್ತೆ. ನಿಮ್ಮ ಆರೋಗ್ಯವನ್ನು ಮೊದಲು ನೋಡಿಕೊಳ್ಳಬೇಕು’ ಎಂದು ಯಶ್ ಕಿವಿಮಾತು ಹೇಳಿದ್ದಾರೆ. ‘ಏನ್ ಮಾತನಾಡಬೇಕು ಎಂದು ಗೊತ್ತಾಗುತ್ತಿಲ್ಲ ಚಿನ್ನ. ಮಿರಾಕಲ್​​ಗಳು ಆಗುತ್ತೆ. ಹೋಪ್ ಇರಲಿ’ ಎಂದು ಯಶ್ ಹೇಳಿದ್ದಾರೆ. ಕೊನೆಯಲ್ಲಿ ಅಭಿಮಾನಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ! – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಮರಗಳು ನಮಗೆ ಉಸಿರಾಡಲು, ಆಯುಷ್ಯ ವೃದ್ಧಿಸಲು ಸಹಕರಿಸುತ್ತವೆ. ಆದರೆ, ಕೆಲವು ನಿರ್ದಿಷ್ಟ ವೃಕ್ಷಗಳು ಮನೆಯ ಗೋಡೆ, ಕಾಂಪೌಂಡ್ ಅಥವಾ ಚಾವಣಿಯ ಮೇಲೆ ಬೆಳೆದಾಗ ಅದು ಶುಭವೋ ಅಶುಭವೋ ಎಂಬ ಪ್ರಶ್ನೆ ಮೂಡುತ್ತದೆ. ಧರ್ಮಶಾಸ್ತ್ರ ಮತ್ತು ವಾಸ್ತು ಪ್ರಕಾರ, ಈ ರೀತಿಯಾಗಿ ಬೆಳೆಯುವ ಅಶ್ವತ್ಥ (ಅರಳಿ), ಬೇವಿನ ಮತ್ತು ನಿಂಬೆ ಮರಗಳು ಅಷ್ಟು ಶುಭಸೂಚಕವಲ್ಲ.

ವಿಶೇಷವಾಗಿ ಅಶ್ವತ್ಥ ವೃಕ್ಷವು ಮನೆಯ ಗೋಡೆ ಅಥವಾ ಚಾವಣಿಯ ಮೇಲೆ ತಾನಾಗಿಯೇ ಬೆಳೆದರೆ, ಇದನ್ನು ಶುಭಕರವೆಂದು ಪರಿಗಣಿಸಲಾಗುವುದಿಲ್ಲ. ಏಕೆಂದರೆ, ಇಂತಹ ವೃಕ್ಷಗಳಿಗೆ ದೇವರ ಲಹರಿಗಳು ಆವಾಹನೆ ಆಗುವ ಸಾಧ್ಯತೆ ಇರುತ್ತದೆ. ಸಂಸಾರಿಗಳಾದ ನಾವು ಆ ಶಕ್ತಿಯನ್ನು ತಡೆದುಕೊಳ್ಳಲು ಸದಾ ಪೂಜೆ, ಶುದ್ಧತೆ ಕಾಯ್ದುಕೊಳ್ಳುವುದು ಕಷ್ಟಸಾಧ್ಯ. ಇದರಿಂದ ಮನೆಯಲ್ಲಿ ಹಣದ ಒಳಹರಿವಿಗೆ ಅಡ್ಡಿ, ಕೆಲಸಕಾರ್ಯಗಳಲ್ಲಿ ಸ್ಥಗಿತ, ಆರೋಗ್ಯ ಸಮಸ್ಯೆಗಳು ಮತ್ತು ಮನಸ್ಸಿನ ಭಾವನೆಗಳಲ್ಲಿ ನೆಮ್ಮದಿ ಇರುವುದಿಲ್ಲ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Source link

DK Shivakumar Oath Taking: 25ನೇ ಮುಖ್ಯಮಂತ್ರಿಯಾಗಿ ಇಂದು ಡಿಕೆ ಶಿವಕುಮಾರ್ ಪ್ರಮಾಣವಚನ: ಲೋಕಭವನದಲ್ಲಿ ಸಂಭ್ರಮ – Kannada News

ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಲೋಕಭವನದಲ್ಲಿ ಸಿದ್ಧತೆImage Credit source: tv9

ಬೆಂಗಳೂರು, ಜೂನ್ 3: ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಲೋಕಭವನದ ಗಾಜಿನ ಮನೆ (ಗ್ಲಾಸ್ ಹೌಸ್) ಮದುವಣಗಿತ್ತಿಯಂತೆ ಕಂಗೊಳಿಸುತ್ತಿದ್ದು, ಇಂದು (ಜೂನ್ 3) ಸಂಜೆ ಸರಿಯಾಗಿ 4 ಗಂಟೆ 5 ನಿಮಿಷದ ಶುಭ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಆಡಂಬರವಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ಈ ಐತಿಹಾಸಿಕ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ನಿಯೋಜಿತ ಸಿಎಂ ಅವರ ಬೃಹತ್ ಕಟೌಟ್‌ ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ.

ಮುಖ್ಯಾಂಶಗಳು

  • ಇಂದು ಸಂಜೆ 4:05ಕ್ಕೆ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್.
  • ಜ್ಯೋತಿಷಿ ಸಲಹೆಯಂತೆ ಇದೇ ಮೊದಲ ಬಾರಿಗೆ ಪೂರ್ವಾಭಿಮುಖವಾಗಿ ಸಜ್ಜಾದ ಲೋಕಭವನದ ವೇದಿಕೆ.
  • ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಲು ಆದಿಚುಂಚನಗಿರಿ ಸರ್ವಧರ್ಮದ 55 ಪ್ರಮುಖ ಧರ್ಮಗುರುಗಳಿಗೆ ಆಹ್ವಾನ

ಪರಿಶ್ರಮಕ್ಕೆ ಸಿಕ್ಕ ಫಲ, ಜಂಟಿ ಆಡಳಿತದ ಭರವಸೆ

ಮುಖ್ಯಮಂತ್ರಿ ಸ್ಥಾನಕ್ಕೆ ತಲುಪುವುದು ಬರೀ ಕನಸಾಗಿರಲಿಲ್ಲ, ಇದು ಕಠಿಣ ಪರಿಶ್ರಮದೊಂದಿಗಿನ ಸಮರ್ಪಣೆಯಾಗಿದೆ. ಸಮಯ ಜಟಿಲವಾಗಿತ್ತು, ವಿಳಂಬವಾಗಿರಬಹುದು ಆದರೆ ಹೈಕಮಾಂಡ್ ನನ್ನನ್ನು ನಿರಾಕರಿಸಿಲ್ಲ. ಇದು ಕೇವಲ ಶಿವಕುಮಾರ್ ಒಬ್ಬನ ಸಾಧನೆಯಲ್ಲ. ಕಾಂಗ್ರೆಸ್ ಇತಿಹಾಸ ಹಾಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿರುವ ಸಾವಿರಾರು ಕಾರ್ಯಕರ್ತರ ಶ್ರಮದ ಫಲ ಎಂದು ಡಿಕೆ ಶಿವಕುಮಾರ್ ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಗಾಂಧಿ-ನೆಹರು ಕುಟುಂಬಕ್ಕೆ ನಿಷ್ಠರಾಗಿರುವುದು ತಮ್ಮ ಕರ್ತವ್ಯ ಎಂದಿರುವ ಅವರು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ತ್ಯಾಗವನ್ನು ಕೊಂಡಾಡಿದ್ದಾರೆ. ಅಲ್ಲದೆ, ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆ ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮೂಲಕ ರಾಜ್ಯದಲ್ಲಿ ಹೊಸ ‘ಯುವಯುಗ’ ಹಾಗೂ ‘ನವಯುಗ’ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ.

ವೇದಿಕೆಗೆ ವಾಸ್ತು ಟಚ್ ಮತ್ತು ಸರ್ವಧರ್ಮ ಸಮನ್ವಯತೆ

ಈ ಬಾರಿಯ ಪದಗ್ರಹಣ ಕಾರ್ಯಕ್ರಮಕ್ಕೆ ವಿಶೇಷವಾಗಿ ವಾಸ್ತು ಸ್ಪರ್ಶ ನೀಡಲಾಗಿದೆ. ಈ ಹಿಂದೆ ಲೋಕಭವನದಲ್ಲಿ ನಡೆಯುತ್ತಿದ್ದ ಕಲಾಪಗಳ ವೇದಿಕೆ ಪಶ್ಚಿಮಾಭಿಮುಖವಾಗಿ ಇರುತ್ತಿತ್ತು. ಆದರೆ, ಈ ಬಾರಿ ಜ್ಯೋತಿಷಿ ಆರಾಧ್ಯ ಅವರ ಸಲಹೆಯ ಮೇರೆಗೆ ವೇದಿಕೆಯನ್ನು ಪೂರ್ವಾಭಿಮುಖವಾಗಿ ಅತ್ಯಂತ ಆಕರ್ಷಕವಾಗಿ ಸಿದ್ಧಪಡಿಸಲಾಗಿದೆ. ಇಡೀ ಕಾರ್ಯಕ್ರಮದ ಜವಾಬ್ದಾರಿಯನ್ನು ಸಂಸದ ಡಿ.ಕೆ.ಸುರೇಶ್ ಹೊತ್ತುಕೊಂಡಿದ್ದು, ಪ್ರತಿಯೊಂದು ಸಿದ್ಧತೆಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಮತ್ತೊಂದೆಡೆ, ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಲು ಸರ್ವಧರ್ಮ ಸಮನ್ವಯತೆಗೆ ಆದ್ಯತೆ ನೀಡಲಾಗಿದೆ. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಸುತ್ತೂರು ಶ್ರೀಗಳು, ತರಳುಬಾಳು ಶ್ರೀಗಳು, ಪೇಜಾವರ ಶ್ರೀಗಳು, ರಂಭಾಪುರಿ ಶ್ರೀಗಳು ಹಾಗೂ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ಸೇರಿದಂತೆ ವಿವಿಧ ಮಠಾಧೀಶರು, ಚರ್ಚ್‌ನ ಆರ್ಚ್ ಬಿಷಪ್ ಡಾ. ಪೀಟರ್ ಮಚಾಡೋ ಮತ್ತು ಮೌಲ್ವಿಗಳು ಸೇರಿದಂತೆ ಒಟ್ಟು 55 ಸರ್ವಧರ್ಮದ ಪ್ರಮುಖ ಗುರುಗಳಿಗೆ ಗೌರವಪೂರ್ವಕ ಆಹ್ವಾನ ನೀಡಲಾಗಿದೆ.

ಇದನ್ನೂ ಓದಿ: ಪದತ್ಯಾಗಕ್ಕೆ ಬಂಪರ್ ಗಿಫ್ಟ್​​: ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ ಹೈಕಮಾಂಡ್

ಬೃಹತ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ. ವೇಣುಗೋಪಾಲ್ ಹಾಗೂ ಕಾಂಗ್ರೆಸ್ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. ಸಿನಿಮಾ ತಾರೆಯರು ಸೇರಿದಂತೆ ವಿವಿಧ ರಂಗದ ಗಣ್ಯರಿಗಾಗಿ ಲೋಕಭವನದಲ್ಲಿ 1,100 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, 3 ಹಂತದ ಪ್ರತ್ಯೇಕ ಪಾಸ್‌ಗಳನ್ನು ವಿತರಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ವಸಂತನಗರದ ಶಾಂಗ್ರೀಲಾ ಹೋಟೆಲ್ ಹಾಗೂ ಕೆಪಿಸಿಸಿ ಕಚೇರಿಯ 1 ಕಿ.ಮೀ ವ್ಯಾಪ್ತಿಯಲ್ಲಿ ‘ನೋ-ಫ್ಲೈ ಝೋನ್’ ಘೋಷಿಸಲಾಗಿದೆ. ಭದ್ರತೆ ಹಾಗೂ ಟ್ರಾಫಿಕ್ ದಟ್ಟಣೆ ನಿಯಂತ್ರಿಸುವ ಸಲುವಾಗಿ ವಿಧಾನಸೌಧ, ವಿಕಾಸಸೌಧ ಮತ್ತು ಎಂ.ಎಸ್. ಬಿಲ್ಡಿಂಗ್ ಸಿಬ್ಬಂದಿಗೆ ಇಂದು ಅರ್ಧ ದಿನ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today: ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 3, ಬುಧವಾರದ ದ್ವಾದಶ ರಾಶಿಗಳ ಸಮಗ್ರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ತದಿಗೆ, ಶುಭಯೋಗ, ಭದ್ರಕರ್ಣ ಮತ್ತು ಪೂರ್ವಾಷಾಡ ನಕ್ಷತ್ರಗಳೊಂದಿಗೆ ಈ ದಿನದ ಆಸ್ಟ್ರೋಲಾಜಿಕಲ್ ವಿವರಗಳನ್ನು ನೀಡಿದ್ದಾರೆ. ರಾಹುಕಾಲವು ಮಧ್ಯಾಹ್ನ 12:17 ರಿಂದ 1:53 ರವರೆಗೆ ಇದ್ದರೆ, ಸರ್ವಸಿದ್ಧಿ ಸಂಕಲ್ಪ ಕಾಲವು ಬೆಳಗ್ಗೆ 10:41 ರಿಂದ 12:17 ರವರೆಗೆ ಇರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Source link