ಪದತ್ಯಾಗಕ್ಕೆ ಬಂಪರ್ ಗಿಫ್ಟ್: ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ ಹೈಕಮಾಂಡ್ – Kannada News
ನವದೆಹಲಿ, (ಜೂನ್ 02): ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭೆ ಆಫರ್ ತಿರಸ್ಕರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಹತ್ವದ ಹುದ್ದೆಯನ್ನು ನೀಡಿದೆ. ಉದಾರ ಅಂತಕರಣದಿಂದ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಮೂಲಕ ಮುತ್ಸದ್ದಿತನ ತೋರಿದ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (congress working committee )ಸದಸ್ಯ ಸ್ಥಾನ ನೀಡಲಾಗಿದೆ. ಹೌದು… ಸಿದ್ದರಾಮಯ್ಯನವರನ್ನು CWC ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದಾರೆ. ಈ ಕಾರ್ಯಕಾರಿ ಸಮಿತಿ ಪಕ್ಷದ ಪರಮೋಚ್ಚ…