ಶಾಸಕರ ಗಮನಕ್ಕೆ: ಟ್ಯಾಂಕ್ ಇದೆ, ಬೋರ್‌ವೆಲ್ ಇದೆ.. ಆದ್ರೆ ನೀರಿಲ್ಲ! ಬೆಳ್ತಂಗಡಿಯ ಬೆಳಾಲು ಗ್ರಾಮದ ಜನರಿಗೆ ಕಲುಷಿತ ಗುಂಡಿ ನೀರೇ ಗತಿ – Kannada News
ಬೆಳ್ತಂಗಡಿ, ಜೂ.2: ತಾಲೂಕಿನ ಬೆಳಾಲು ಗ್ರಾಮದ ಮಾಯ ಪರಿಸರದ ಮುಂಡ್ರೋಟ್ಟು ಎಂಬಲ್ಲಿನ ನಿವಾಸಿಗಳು ತೀವ್ರ ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿದ್ದು, ದೈನಂದಿನ ಬಳಕೆಗಾಗಿ ಕಲುಷಿತಗೊಂಡ ಹೊಂಡದ ನೀರನ್ನೇ ಆಶ್ರಯಿಸಬೇಕಾದ ದಾರುಣ ಸ್ಥಿತಿ ನಿರ್ಮಾಣವಾಗಿದೆ. ಈ ಭಾಗದ ಸಣ್ಣ ಹೊಂಡ ಅಥವಾ ಗುಂಡಿಗಳಲ್ಲಿ ಶೇಖರಣೆಯಾಗುವ, ಕೀಟ ಹಾಗೂ ಕಸಕಡ್ಡಿಗಳಿಂದ ಕಲುಷಿತಗೊಂಡಿರುವ ಅಶುದ್ಧ ನೀರನ್ನೇ ಇಲ್ಲಿನ ಮಹಿಳೆಯರು ಮತ್ತು ಮಕ್ಕಳು ಕೊಡಗಳಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದಾರೆ. ಕುಡಿಯಲು, ಅಡುಗೆ ಮಾಡಲು ಹಾಗೂ ಸ್ನಾನ ಸೇರಿದಂತೆ ಇತರೆ ಎಲ್ಲಾ ಗೃಹ ಬಳಕೆಗೂ ಇದೇ…