ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆಗಳನ್ನು ಬಂದ್ ಮಾಡಿ ವಿಭಿನ್ನ ಪ್ರತಿಭಟನೆ – Kannada News | Upper Caste Families Block Dalit Land Access for Two Years in Yadgiri
ಯಾದಗಿರಿ, ಜೂನ್ 19: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗೂರನೂರು ಗ್ರಾಮದಲ್ಲಿ ಮೇಲ್ವರ್ಗದವರಿಂದ ದಲಿತರ ಮೇಲೆ ದಬ್ಬಾಳಿಕೆ ಆರೋಪ ಕೇಳಿಬಂದಿದೆ. ದಲಿತ ಕುಟುಂಬಗಳು ಜಮೀನುಗಳಿಗೆ ಹೋಗುವ ದಾರಿಯನ್ನು ಮೇಲ್ವರ್ಗದ ಎರಡು ಕುಟುಂಬಗಳು ಬಂದ್ ಮಾಡಿದ್ದು, ಕಳೆದ ಎರಡು ವರ್ಷಗಳಿಂದ ಇದೇ ಸ್ಥಿತಿ ಇಲ್ಲಿದೆ. ಈ ಸಂಬಂಧ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಲಾಗಿದ್ದು, ಇದರಿಂದ ಬೇಸತ್ತ ಗ್ರಾಮಸ್ಥರು, ದಲಿತರ ಜೊತೆ ಕೈಜೋಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ತಮ್ಮ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡುವ…