IPL 2026: ಆರ್ಸಿಬಿಗೆ ಎದುರಾಯ್ತು ಸಂಕಷ್ಟ; ಸ್ಟಾರ್ ವೇಗಿಗೆ ಸಿಕ್ಕಿಲ್ಲ ಎನ್ಒಸಿ
2026 ರ ಐಪಿಎಲ್ ಆರಂಭಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಲೀಗ್ನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್ಸಿಬಿಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಲೀಗ್ನಿಂದ ಹೊರಬೀಳುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಗಾಯದಿಂದ ಬಳಲುತ್ತಿರುವ ನುವಾನ್ ತುಷಾರ ಪ್ರಸ್ತುತ ಚೇತರಿಕೆಯ ಹಾದಿಯಲಿದ್ದಾರೆ. ಹೀಗಾಗಿ ಅವರು ಸಂಪೂರ್ಣ ಚೇತರಿಸಿಕೊಳ್ಳುವರೆಗೂ ಅವರಿಗೆ ಐಪಿಎಲ್‌ನಲ್ಲಿ…