ರಾಷ್ಟ್ರಮಟ್ಟದಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡುಗೇರಿಸಿಕೊಂಡ ಕೆಎಸ್ಆರ್ಟಿಸಿ!
ಬೆಂಗಳೂರು, ಮಾರ್ಚ್ 27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ತನ್ನ ಸಾಧನೆಯನ್ನು ತೋರಿದೆ. ಇಲೆಟ್ಸ್ ಮೊಬಿಲಿಟಿ ಎಕ್ಸೆಲೆನ್ಸ್ ಅವಾರ್ಡ್ಸ್ನಲ್ಲಿ (Elets Mobility Excellence Awards 2026) ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಇನೋವೇಶನ್ ಇನ್ ಸಿಟಿಜೆನ್ ಎಂಗೇಜ್ಮೆಂಟ್ ಆ್ಯಂಡ್ ಇನ್ಕ್ಲೂಸಿವ್ ಮೊಬಿಲಿಟಿ ಅಂದರೆ ತಂತ್ರಜ್ಞಾನ ಮತ್ತು ಸಮುದಾಯದ ಸಲಹೆಗಳನ್ನು ಬಳಸಿ, ಸಮಾಜದ ಪ್ರತಿಯೊಬ್ಬರಿಗೂ (ವಿಶೇಷವಾಗಿ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ) ಸುಲಭ ಹಾಗೂ ಸುರಕ್ಷಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಧ್ವನಿ ಸ್ಪಂದನ…