All posts by nagaraj11081993

ನಾಯಿ ಜೀವ ಉಳಿಸಲು ಹೋಗಿ ತಾಯಿಯನ್ನು ಕಳೆದುಕೊಂಡ ಮಗ: ಆಸ್ಪತ್ರೆ ಆವರಣದಲ್ಲಿ ಅಮ್ಮನಿಗಾಗಿ ಗೋಳಾಟ – Kannada News | Heartbreaking: Mother dies in Belagavi bike crash saving dog; son devastated

ಬೆಳಗಾವಿ,ಜೂ.19: ಬೆಳಗಾವಿ ನಗರದ ಹೊರವಲಯದಲ್ಲಿ ಕಲ್ಲುಹೃದಯವನ್ನೂ ಕರಗಿಸುವಂತಹ ಅತ್ಯಂತ ಹೃದಯ ವಿದ್ರಾವಕ ರಸ್ತೆ ಅಪಘಾತವೊಂದು ನಡೆದಿದೆ. ರಸ್ತೆಗೆ ಅಡ್ಡ ಬಂದ ನಾಯಿಯ ಪ್ರಾಣ ಉಳಿಸಲು ಹೋಗಿ ಬೈಕ್ ಚಲಾಯಿಸುತ್ತಿದ್ದ ಮಗನೊಬ್ಬ ತನ್ನ ಹೆತ್ತ ತಾಯಿಯನ್ನೇ ಕಳೆದುಕೊಂಡಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ (Sambra) ಬಳಿ ನಡೆದಿದೆ.

ಅಪಘಾತದಲ್ಲಿ ಪಂಥಬಾಳೆಕುಂದ್ರಿ ಗ್ರಾಮದ ನಿವಾಸಿ ಶಾಂತವ್ವ ಕಲ್ಮಠ ಎಂಬುವವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರ ಮಗ ಈರಣ್ಣಾ ಕಲ್ಮಠ ಬೈಕ್ ಚಲಾಯಿಸುತ್ತಿದ್ದರು. ತಾಯಿ ಮತ್ತು ಮಗ ಇಬ್ಬರೂ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಸಾಂಬ್ರಾ ಬಳಿ ರಸ್ತೆಗೆ ಇದ್ದಕ್ಕಿದ್ದಂತೆ ನಾಯಿಯೊಂದು ಅಡ್ಡ ಬಂದಿದೆ. ಮೂಕ ಪ್ರಾಣಿಯ ಜೀವ ಉಳಿಸಬೇಕೆಂಬ ಆತುರದಲ್ಲಿ ಈರಣ್ಣಾ ಬೈಕ್‌ನ ಹ್ಯಾಂಡಲ್ ನಿಯಂತ್ರಿಸಲು ಯತ್ನಿಸಿದ್ದಾರೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ತಾಯಿ ಶಾಂತವ್ವ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಗಾಬರಿಗೊಂಡ ಮಗ ಈರಣ್ಣಾ, ತಾಯಿಯನ್ನು ತಕ್ಷಣವೇ ಬೆಳಗಾವಿಯ ಬಿಮ್ಸ್ (BIMS) ಆಸ್ಪತ್ರೆಗೆ ಕರೆತಂದಿದ್ದಾನೆ. ಆದರೆ ಪರೀಕ್ಷಿಸಿದ ವೈದ್ಯರು ಆಕೆ ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಮಾತು ಕೇಳುತ್ತಿದ್ದಂತೆ ಮಗನ ಗೋಳಾಟ ಮುಗಿಲು ಮುಟ್ಟಿದೆ. ತಾಯಿ ಕೊನೆಕ್ಷಣದವರೆಗೂ ಕೈಯಲ್ಲಿ ಹಿಡಿದುಕೊಂಡಿದ್ದ ಬ್ಯಾಗ್ ಅನ್ನು ಎದೆಗೆ ಅಪ್ಪಿಕೊಂಡು ಆಸ್ಪತ್ರೆಯ ಆವರಣದಲ್ಲೇ ಮಗ ಕಣ್ಣೀರಿಟ್ಟ ದೃಶ್ಯ ನೆರೆದಿದ್ದವರ ಕಣ್ಣಾಲಿಗಳನ್ನು ಒದ್ದೆಯಾಗಿಸಿತು.

ಇದನ್ನೂ ಓದಿ: ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿ ಸಾವು

ಹೆತ್ತ ತಾಯಿಯನ್ನು ತನ್ನ ಕಣ್ಣೆದುರೇ ಕಳೆದುಕೊಂಡು ಅನಾಥ ಪ್ರಜ್ಞೆಯಲ್ಲಿ ಮುಳುಗಿರುವ ಮಗನ ಸ್ಥಿತಿ ಕಂಡು ಸ್ಥಳೀಯರು ಮತ್ತು ಆಸ್ಪತ್ರೆಯ ಸಿಬ್ಬಂದಿಮರುಗಿದ್ದಾರೆ. ಈ ಕರುಣಾಜನಕ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭುವನೇಶ್ವರ-ಯಶವಂತಪುರ ವೀಕ್ಲಿ ಸ್ಪೆಷಲ್ ರೈಲುಗಳ ಸಂಚಾರ ಅವಧಿ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ – Kannada News | Bhubaneswar to Yesvantpur Weekly Special Trains Extended Till August: Check Dates and Route Details Here

ಬೆಂಗಳೂರು, ಜೂನ್ 19: ಭುವನೇಶ್ವರ ಮತ್ತು ಬೆಂಗಳೂರಿನ ಯಶವಂತಪುರ ನಿಲ್ದಾಣಗಳ ನಡುವೆ ಪ್ರಯಾಣಿಸುವ ಸಾರ್ವಜನಿಕರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಶುಭ ಸುದ್ದಿ ನೀಡಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಈ ಮಾರ್ಗದಲ್ಲಿ ಚಲಿಸುವ ಸಾಪ್ತಾಹಿಕ ಬೇಸಿಗೆ ವಿಶೇಷ ರೈಲುಗಳ (ರೈಲು ಸಂಖ್ಯೆ: 02811/02812) ಸಂಚಾರ (Weekly Summer Special Train) ಅವಧಿಯನ್ನು ವಿಸ್ತರಿಸಲು ಪೂರ್ವ ಕರಾವಳಿ ರೈಲ್ವೆ ನಿರ್ಧರಿಸಿದೆ ಎಂದು ನೈಋತ್ಯ ರೈಲ್ವೆಯ ಅಧಿಕೃತ ಎಕ್ಸ್ ಖಾತೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಮುಖ್ಯಾಂಶಗಳು

  • ಸಾಪ್ತಾಹಿಕ ವಿಶೇಷ ರೈಲುಗಳ ಅವಧಿ ವಿಸ್ತರಣೆ.
  • ಆಗಸ್ಟ್ ಅಂತ್ಯದವರೆಗೆ ರೈಲುಗಳ ಸಂಚಾರ ಲಭ್ಯ.
  • ವೇಳಾಪಟ್ಟಿ ಹಾಗೂ ಬೋಗಿಗಳಲ್ಲಿ ಬದಲಾವಣೆಯಿಲ್ಲ.

ವಿಸ್ತೃತ ವೇಳಾಪಟ್ಟಿಯ ವಿವರ

  • ರೈಲು ಸಂಖ್ಯೆ 02811 (ಭುವನೇಶ್ವರ–ಯಶವಂತಪುರ): ಪ್ರತಿ ಶನಿವಾರ ಭುವನೇಶ್ವರದಿಂದ ಹೊರಡುವ ಈ ವಿಶೇಷ ರೈಲಿನ ಸೇವೆಯನ್ನು ಈ ಹಿಂದೆ ಜೂನ್ 27 ರವರೆಗೆ ನಿಗದಿಪಡಿಸಲಾಗಿತ್ತು. ಇದನ್ನು ಈಗ ಜುಲೈ 4 ರಿಂದ ಆಗಸ್ಟ್ 29 ರವರೆಗೆ ವಿಸ್ತರಿಸಲಾಗಿದೆ.
  • ರೈಲು ಸಂಖ್ಯೆ 02812 (ಯಶವಂತಪುರ–ಭುವನೇಶ್ವರ): ಪ್ರತಿ ಸೋಮವಾರ ಯಶವಂತಪುರದಿಂದ ಹೊರಡುವ ಈ ರೈಲು ಈ ಮೊದಲು ಜೂನ್ 29 ರವರೆಗೆ ಸಂಚರಿಸಲಿದೆ ಎನ್ನಲಾಗಿತ್ತು. ಇದನ್ನು ಈಗ ಜುಲೈ 6 ರಿಂದ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
  • ಈ ರೈಲುಗಳ ನಿಯಮಿತ ವೇಳಾಪಟ್ಟಿ, ನಿಲುಗಡೆ ಹಾಗೂ ಬೋಗಿಗಳ (Coaches) ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ನೈಋತ್ಯ ರೈಲ್ವೆ ಎಕ್ಸ್ ಸಂದೇಶ

ಕೆಎಸ್ಆರ್ ಬೆಂಗಳೂರು ಯಾರ್ಡ್ ಕಾಮಗಾರಿ: ಭಾಗಶಃ ಸಂಚಾರ ರದ್ದು

ಪ್ರಯಾಣಿಕರು ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶವೆಂದರೆ, ಕೆಎಸ್ಆರ್ ಬೆಂಗಳೂರು ನಿಲ್ದಾಣದ ಯಾರ್ಡ್‌ನಲ್ಲಿ ನಾನ್-ಇಂಟರ್‌ಲಾಕಿಂಗ್ ತಾಂತ್ರಿಕ ಕಾಮಗಾರಿ ನಡೆಯುತ್ತಿರುವುದರಿಂದ ಈ ರೈಲುಗಳ ಸಂಚಾರದಲ್ಲಿ ಭಾಗಶಃ ಬದಲಾವಣೆ ಇರಲಿದೆ. ಆಗಸ್ಟ್ 29 ರಂದು ಭುವನೇಶ್ವರದಿಂದ ಹೊರಡುವ ರೈಲು (02811) ಯಶವಂತಪುರ ಬದಲಿಗೆ ಯಲಹಂಕ ನಿಲ್ದಾಣದಲ್ಲೇ ಪ್ರಯಾಣ ಮುಕ್ತಾಯಗೊಳಿಸಲಿದೆ. ಹಾಗೆಯೇ, ಆಗಸ್ಟ್ 31 ರಂದು ಹೊರಡಬೇಕಿರುವ ರೈಲು (02812) ಯಶವಂತಪುರ ಬದಲಿಗೆ ಯಲಹಂಕ ನಿಲ್ದಾಣದಿಂದಲೇ ತನ್ನ ಪ್ರಯಾಣ ಆರಂಭಿಸಲಿದೆ. ಹೀಗಾಗಿ ಈ ಎರಡು ದಿನಗಳಂದು ಯಶವಂತಪುರ ಮತ್ತು ಯಲಹಂಕ ನಡುವೆ ರೈಲು ಸಂಚಾರ ಭಾಗಶಃ ರದ್ದಾಗಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೇಕೆದಾಟು ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ – Kannada News | Tamil Nadu Assembly Opposes Mekedatu Dam Project Unanimously, Demands Centre Stop DPR Review

ಚೆನ್ನೈ, ಜೂನ್ 19: ಕರ್ನಾಟಕ ಸರ್ಕಾರವು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು(Mekedatu) ಅಣೆಕಟ್ಟು ಯೋಜನೆಗೆ ತಮಿಳುನಾಡು ರಾಜ್ಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜೂನ್ 19ರ ಶುಕ್ರವಾರದಂದು ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಡಿಸಿದ ಮೇಕೆದಾಟು ವಿರೋಧಿ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ.

ಈ ಯೋಜನೆಗೆ ಯಾವುದೇ ರೀತಿಯ ತಾಂತ್ರಿಕ ಅಥವಾ ಪರಿಸರ ಇಲಾಖೆಯ ಅನುಮತಿಯನ್ನು ನೀಡಬಾರದು ಎಂದು ತಮಿಳುನಾಡು ಸರ್ಕಾರವು ಈ ನಿರ್ಣಯದ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ತಮಿಳುನಾಡು ಸರ್ಕಾರದ ವಾದವೇನು?
ನ್ಯಾಯಾಲಯದ ಆದೇಶಗಳ ಉಲ್ಲಂಘನೆ: ಕಾವೇರಿ ಜಲ ವಿವಾದ ನ್ಯಾಯಮಂಡಳಿಯ 2007ರ ಅಂತಿಮ ಆದೇಶ ಹಾಗೂ 2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸದೇ ಕರ್ನಾಟಕವು ಏಕಪಕ್ಷೀಯವಾಗಿ ಅಣೆಕಟ್ಟು ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ವಿಜಯ್ ಆರೋಪಿಸಿದ್ದಾರೆ.

ಇತರ ರಾಜ್ಯಗಳ ಒಪ್ಪಿಗೆಯಿಲ್ಲ: ಕಾವೇರಿ ನದಿ ನೀರಿನ ಜಲಾನಯನ ಪ್ರದೇಶವು ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದ್ದು, ಲಭ್ಯವಿರುವ ನೀರನ್ನು ರಾಜ್ಯಗಳ ನಡುವೆ ಹಂಚಿಕೆ ಮಾಡಲಾಗಿದೆ. ಹೀಗಾಗಿ ಇತರ ಜಲಾನಯನ ರಾಜ್ಯಗಳ ಒಪ್ಪಿಗೆಯಿಲ್ಲದೆ ಕರ್ನಾಟಕ ಯಾವುದೇ ಹೊಸ ಯೋಜನೆ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಓದಿ: ಮೇಕೆದಾಟು ವಿವಾದ: ಮತ್ತೆ ತಮಿಳುನಾಡು ಕ್ಯಾತೆ; ಮಾತುಕತೆಗೆ ಸಿದ್ದ ಎಂದ ಕರ್ನಾಟಕ ಸಿಎಂ ಡಿಕೆಶಿ

ಡಿಪಿಆರ್ ಪರಿಶೀಲಿಸದಂತೆ ಆಗ್ರಹ: ಮೇಕೆದಾಟು ಯೋಜನೆಗಾಗಿ ಕರ್ನಾಟಕ ಸಲ್ಲಿಸಿರುವ ವಿವರವಾದ ಯೋಜನಾ ವರದಿಯನ್ನು (DPR) ಕೇಂದ್ರ ಜಲ ಆಯೋಗವು ಯಾವುದೇ ಕಾರಣಕ್ಕೂ ಪರಿಶೀಲಿಸಬಾರದು ಎಂದು ತಮಿಳುನಾಡು ಒತ್ತಾಯಿಸಿದೆ.

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ತಮಿಳುನಾಡಿನ ಆಡಳಿತ ಮತ್ತು ವಿರೋಧ ಪಕ್ಷಗಳು ಈ ವಿಷಯದಲ್ಲಿ ಒಟ್ಟಾಗಿ ನಿಂತಿವೆ.

ಡಿಎಂಕೆ ಬೆಂಬಲ: ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಸರ್ಕಾರದ ನಿರ್ಣಯಕ್ಕೆ ಡಿಎಂಕೆ (DMK) ಪಕ್ಷದ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ತಮಿಳುನಾಡಿನ ಕಾವೇರಿ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಎಐಎಡಿಎಂಕೆ ಖಂಡನೆ: ಎಐಎಡಿಎಂಕೆ (AIADMK) ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಮಾತನಾಡಿ, ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆಗೆ ಏಕಪಕ್ಷೀಯವಾಗಿ ಹಣ ಮೀಸಲಿಡುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು ಹಾಗೂ ಈ ಹಿಂದೆ ತಮ್ಮ ಸರ್ಕಾರವೂ ಈ ಯೋಜನೆಯನ್ನು ಕಾನೂನಾತ್ಮಕವಾಗಿ ತಡೆದಿತ್ತು ಎಂದರು.

ಮುಂದಿನ ನಡೆ: ಪ್ರಧಾನಿ ಭೇಟಿಗೆ ಕರೆ
ಮುಖ್ಯಮಂತ್ರಿ ವಿಜಯ್ ಅವರು ತಮಿಳುನಾಡಿನ ಎಲ್ಲಾ ಪಕ್ಷಗಳ ಶಾಸಕರು ಮತ್ತು ಸಂಸದರನ್ನೊಳಗೊಂಡ ಒಂದು ಜಂಟಿ ನಿಯೋಗವನ್ನು ನವದೆಹಲಿಗೆ ಕರೆದೊಯ್ದು, ಪ್ರಧಾನಮಂತ್ರಿಯವರನ್ನು ಖುದ್ದಾಗಿ ಭೇಟಿ ಮಾಡಿ ರಾಜ್ಯದ ಬೇಡಿಕೆಯನ್ನು ಸಾಮೂಹಿಕವಾಗಿ ಮಂಡಿಸಬೇಕು ಎಂದು ಸದನದಲ್ಲಿ ಕರೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಕಾಕ್‌ಟೇಲ್ 2’ ಪ್ರದರ್ಶನದಲ್ಲಿ ಶ್ರದ್ಧಾ ಕಪೂರ್ ದರ್ಶನ; ‘ಈಥಾ’ ಟೀಸರ್ ನೋಡಿ ಫ್ಯಾನ್ಸ್ ಫಿದಾ – Kannada News | Shraddha Kapoor’s ‘Eetha’ Teaser Surprise: New Biopic Role and Release Date Revealed

ಬಾಲಿವುಡ್ ನಟ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ ಹಾಗೂ ಕೃತಿ ಸನೋನ್ ಅಭಿನಯದ ‘ಕಾಕ್‌ಟೇಲ್ 2’ ಸಿನಿಮಾ ಇಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಆದರೆ, ಥಿಯೇಟರ್‌ಗಳಲ್ಲಿ ಈ ಚಿತ್ರವನ್ನು ವೀಕ್ಷಿಸಲು ಬಂದ ಪ್ರೇಕ್ಷಕರಿಗೆ ಬಾಲಿವುಡ್‌ನ ಸ್ಟಾರ್ ನಟಿ ಶ್ರದ್ಧಾ ಕಪೂರ್ (Shradhdha Kapoor) ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ. ಹೌದು, ‘ಕಾಕ್‌ಟೇಲ್ 2’ ಚಿತ್ರದ ಪ್ರದರ್ಶನದ ಜೊತೆಗೆ ಶ್ರದ್ಧಾ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಈಥಾ’ ಚಿತ್ರದ ಅಧಿಕೃತ ಟೀಸರ್ ಅನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುತ್ತಿದೆ.

ಸೆನ್ಸಾರ್ ಮಂಡಳಿಯಿಂದ U/A 13+ ರೇಟಿಂಗ್ ಪಡೆದುಕೊಂಡಿರುವ ಈ ಟೀಸರ್ 2 ನಿಮಿಷ 18 ಸೆಕೆಂಡ್‌ಗಳ ಅವಧಿಯನ್ನು ಹೊಂದಿದೆ. ಸಿನಿಮಾ ಆರಂಭವಾಗುತ್ತಿದ್ದಂತೆ ಥಿಯೇಟರ್‌ಗಳಲ್ಲಿ ಶ್ರದ್ಧಾ ಕಪೂರ್ ಅವರ ಹೊಚ್ಚ ಹೊಸ ಅವತಾರವನ್ನು ಕಂಡು ಪ್ರೇಕ್ಷಕರು ಥ್ರಿಲ್ ಆಗಿದ್ದಾರೆ.

ಸಂಪೂರ್ಣ ವಿಭಿನ್ನ ಅವತಾರದಲ್ಲಿ ಶ್ರದ್ಧಾ ಕಪೂರ್

ಮರಾಠಿಯ ಪ್ರಸಿದ್ಧ ತಮಾಶಾ ಕಲಾವಿದೆ ವಿಠಾಬಾಯಿ ನಾರಾಯಣ ಗಾಂವ್ಕರ್ ಅವರ ಜೀವನ ಆಧಾರಿತ ಈ ಚಿತ್ರದಲ್ಲಿ ಶ್ರದ್ಧಾ ಕಪೂರ್ ‘ಈಥಾ’ ಎಂಬ ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ಇಂತಹ ಸಿನಿಮಾಗಳಲ್ಲಿ ನಾಯಕಿಯ ಮಾಸ್ ಎಂಟ್ರಿಯನ್ನು ನಿರೀಕ್ಷಿಸಲಾಗುತ್ತದೆ. ಆದರೆ, ಈ ಟೀಸರ್‌ನಲ್ಲಿ ಶ್ರದ್ಧಾ ಕಪೂರ್ ಯಾರೂ ಊಹಿಸದ ರೀತಿಯಲ್ಲಿ ಅತ್ಯಂತ ವಿಭಿನ್ನವಾಗಿ ಪರದೆಯ ಮೇಲೆ ಪ್ರತ್ಯಕ್ಷವಾಗುತ್ತಾರೆ.

ತಮ್ಮ ವೃತ್ತಿಜೀವನದಲ್ಲಿ ಹಲವು ನೆನಪಿನಲ್ಲುಳಿಯುವ ಪಾತ್ರಗಳನ್ನು ಮಾಡಿರುವ ಶ್ರದ್ಧಾ, ಈ ಚಿತ್ರಕ್ಕಾಗಿ ಸಂಪೂರ್ಣವಾಗಿ ಮರಾಠಿ ಶೈಲಿಯ ನೃತ್ಯ ಮತ್ತು ಹಾವಭಾವಗಳನ್ನು ಕರಗತ ಮಾಡಿಕೊಂಡಿರುವುದು ಟೀಸರ್‌ನಲ್ಲಿ ಎದ್ದು ಕಾಣುತ್ತಿದೆ. ಲಕ್ಷ್ಮಣ್ ಉತೇಕರ್ ನಿರ್ದೇಶನದ ಈ ಚಿತ್ರದಲ್ಲಿ ರಣದೀಪ್ ಹೂಡಾ ಮತ್ತು ಮೊಹಮ್ಮದ್ ಜೀಶನ್ ಅಯ್ಯುಬ್ ಕೂಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಸಿನಿಮಾ ರಕ್ಷಾಬಂಧನದ ಹಬ್ಬದ ಪ್ರಯುಕ್ತ ಆಗಸ್ಟ್ 28 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ಪ್ರೆಗ್ನೆಂಟ್ ಲೇಡಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಶ್ರದ್ಧಾ ಕಪೂರ್, ನೋರಾ ಫತೇಹಿಗೆ ಬಿಗ್ ರಿಲೀಫ್; ಪೊಲೀಸರಿಗೆ ಸಿಗಲೇ ಇಲ್ಲ ಸಾಕ್ಷಿ

ಶ್ರದ್ಧಾ ಕಪೂರ್ ಅವರಿಗೆ ಈ ಹಿಂದೆ ಬಂದಿದ್ದ ‘ಸ್ತ್ರೀ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಭೂತಪೂರ್ವ ಯಶಸ್ಸನ್ನು ತಂದುಕೊಟ್ಟಿತ್ತು. ಸಿನಿಮಾ ಕೋಟ್ಯಂತರ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿತ್ತು. ಈಗ ‘ಸ್ತ್ರೀ 2’ ಚಿತ್ರದ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಶ್ರದ್ಧಾ ಸಂಪೂರ್ಣ ಕಮರ್ಷಿಯಲ್ ಲೀಗ್‌ನಿಂದ ಹೊರಬಂದು, ಈ ರೀತಿಯ ಸಾಂಪ್ರದಾಯಿಕ ಹಾಗೂ ಐತಿಹಾಸಿಕ ಹಿನ್ನೆಲೆಯ ‘ಈಥಾ’ ಪಾತ್ರವನ್ನು ಆಯ್ಕೆ ಮಾಡಿಕೊಂಡಿರುವುದು ಅವರ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇನ್ಸ್​ಟಾ ಸ್ಕ್ರೋಲ್ ಮಾಡುವಾಗ ಬೇಡದ್ದು ಬರುತ್ತಿವೆಯಾ? ನೀವಿಚ್ಛಿಸುವವೇ ಫೀಡ್​ನಲ್ಲಿ ಬರುವಂತೆ ಮಾಡುತ್ತದೆ ಈ ಹೊಸ ಮೆಟಾ ಫೀಚರ್ – Kannada News | Meta brings new features in Instagram and Threads to give users more control on the feed

ನವದೆಹಲಿ, ಜೂನ್ 19: ಮೆಟಾ ಕಂಪನಿಯು ತನ್ನ ಇನ್‌ಸ್ಟಾಗ್ರಾಮ್ (Instagram) ಮತ್ತು ಥ್ರೆಡ್ಸ್ ಆಪ್‌ಗಳಲ್ಲಿ (Threads app) ಬಳಕೆದಾರರಿಗೆ ತಮ್ಮ ಫೀಡ್‌ಗಳನ್ನು ನಿಯಂತ್ರಿಸಲು ಹೊಸ ಕೃತಕ ಬುದ್ಧಿಮತ್ತೆ (AI) ಆಧಾರಿತ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದೆ. ಇದರಿಂದ ನೀವು ಇನ್​ಸ್ಟಾ ಸ್ಕ್ರೋಲ್ ಮಾಡುವಾಗ ನೀವು ಆಯ್ದುಕೊಂಡ ರೀತಿಯ ಕಂಟೆಂಟ್​ಗಳೇ ಬರುತ್ತಿರುತ್ತವೆ.

ಥ್ರೆಡ್ಸ್‌ನಲ್ಲಿ “ಯುವರ್ ಆಲ್ಗೋ”: ಥ್ರೆಡ್ಸ್ ಆಪ್‌ನಲ್ಲಿ ಯುವರ್ ಆಲ್ಗೋ (Your Algo) ಮೂಲಕ ಬಳಕೆದಾರರು ತಮಗೆ ಯಾವ ವಿಷಯಗಳು ಹೆಚ್ಚು ಬೇಕು ಅಥವಾ ಬೇಡ ಎಂಬುದನ್ನು ಖಾಸಗಿಯಾಗಿ ವಿನಂತಿಸಬಹುದು. ಉದಾಹರಣೆಗೆ, ಕ್ರೀಡೆಗೆ ಸಂಬಂಧಿಸಿದ ಪೋಸ್ಟ್‌ಗಳು ಹೆಚ್ಚು ಬರಲಿ ಮತ್ತು ಒತ್ತಡ ತರುವ ಸುದ್ದಿಗಳು ಕಡಿಮೆಯಾಗಲಿ ಎಂದು ಸೆಟ್ ಮಾಡಬಹುದು. ಈ ಆಯ್ಕೆಯು ಒಂದು ದಿನದಿಂದ ಒಂದು ವಾರದವರೆಗೆ ಸಕ್ರಿಯವಾಗಿರುತ್ತದೆ.

ಇದನ್ನೂ ಓದಿ: ಭಾರತದ ಡಿಫೆನ್ಸ್ ಸೆಕ್ಟರ್​ನಲ್ಲಿ ದಾಖಲೆಯ ₹1.78 ಲಕ್ಷ ಕೋಟಿ ಮೌಲ್ಯದ ಉತ್ಪಾದನೆ; ರಫ್ತು ಕೂಡ ಭರ್ಜರಿ ಏರಿಕೆ

ಇನ್‌ಸ್ಟಾಗ್ರಾಮ್‌ನಲ್ಲಿ “ಯುವರ್ ಆಲ್ಗಾರಿದಮ್”: ಇನ್‌ಸ್ಟಾಗ್ರಾಮ್ ಯಾವ ವಿಷಯಗಳ ಆಧಾರದ ಮೇಲೆ ನಿಮಗೆ ಪೋಸ್ಟ್‌ಗಳನ್ನು ತೋರಿಸುತ್ತಿದೆ ಎಂಬುದನ್ನು ಯುವರ್ ಆಲ್ಗಾರಿದಮ್ (Your Algorithm) ಈ ವೈಶಿಷ್ಟ್ಯದ ಮೂಲಕ ನೀವು ನೋಡಬಹುದು. ಆಸಕ್ತಿ ಇಲ್ಲದ ವಿಭಾಗಗಳನ್ನು ನೀವೇ ನೇರವಾಗಿ ಬದಲಾಯಿಸಬಹುದು. ಇದು ಫೀಡ್, ಎಕ್ಸ್‌ಪ್ಲೋರ್ ಮತ್ತು ರೀಲ್ಸ್ ಮೂರಕ್ಕೂ ಅನ್ವಯಿಸುತ್ತದೆ.

ಇದುವರೆಗೆ ಸೋಶಿಯಲ್ ಮೀಡಿಯಾ ಆಪ್‌ಗಳು ನೀವು ಲೈಕ್ ಮಾಡಿದ ಅಥವಾ ನೋಡಿದ ಹಳೆಯ ಡೇಟಾವನ್ನು ಇಟ್ಟುಕೊಂಡು ತಾವೇ ಪೋಸ್ಟ್‌ಗಳನ್ನು ಶಿಫಾರಸು ಮಾಡುತ್ತಿದ್ದವು. ಆದರೆ ಇನ್ನು ಮುಂದೆ ಬಳಕೆದಾರರು ನೇರವಾಗಿ ತಮಗೆ ಬೇಕಾದ ಆಸಕ್ತಿಗಳನ್ನು ನಿರ್ಧರಿಸಬಹುದು.

ಇದನ್ನೂ ಓದಿ: ಕ್ಯಾರಿ ಬ್ಯಾಗ್​ಗೆ ₹10 ವಸೂಲಿ; ಶೂ ಕಂಪನಿಗೆ ಬಿತ್ತು ₹8,000 ದಂಡ; ಇದು ವ್ಯಾಪಾರಿಗಳು, ಗ್ರಾಹಕರಿಗೆ ಕಣ್ತೆರೆಸುವ ಪ್ರಕರಣ

ಇನ್‌ಸ್ಟಾಗ್ರಾಮ್ ಮುಖ್ಯಸ್ಥ ಆಡಮ್ ಮೊಸ್ಸೆರಿ (Adam Mosseri) ಹೇಳುವಂತೆ, ಈ ಎಐ ತಂತ್ರಜ್ಞಾನದಿಂದಾಗಿ ಆಲ್ಗಾರಿದಮ್‌ಗಳು ಹೇಗೆ ಕೆಲಸ ಮಾಡುತ್ತವೆ ಎಂಬುದು ಬಳಕೆದಾರರಿಗೆ ಸುಲಭವಾಗಿ ಅರ್ಥವಾಗುತ್ತದೆ ಮತ್ತು ಗೊಂದಲಗಳು ನಿವಾರಣೆಯಾಗುತ್ತವೆ. ಒಟ್ಟಾರೆಯಾಗಿ, ನಿಮ್ಮ ಸೋಶಿಯಲ್ ಮೀಡಿಯಾ ಫೀಡ್‌ನಲ್ಲಿ ಏನು ಬರಬೇಕು ಎಂಬುದನ್ನು ಇನ್ನು ಮುಂದೆ ನೀವೇ ನಿರ್ಧರಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೊನೆ ಕ್ಷಣದಲ್ಲಿ ಅಮೆರಿಕ ಜತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್ – Kannada News | Iran Abruptly Halts US Peace Deal: Hardliners and Khamenei’s Death Fuel Last Minute Retreat

ಡೊನಾಲ್ಡ್​ ಟ್ರಂಪ್-ಮೊಜ್ತಬಾ Image Credit source: NDTV

ಟೆಹ್ರಾನ್, ಜೂನ್ 19: ಇನ್ನೇನು ಅಮೆರಿಕ-ಇರಾನ್(Iran) ನಡುವಿನ ಶಾಂತಿ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳಬೇಕು ಅನ್ನುವಷ್ಟರಲ್ಲಿ ಸಂಧಾನವೇ ಮುರಿದು ಬಿದ್ದಿದೆ. ಇರಾನ್ ಮತ್ತು ಅಮೆರಿಕ ನಡುವೆ ಏರ್ಪಟ್ಟಿದ್ದ ಐತಿಹಾಸಿಕ ‘ಇಸ್ಲಾಮಾಬಾದ್ ಶಾಂತಿ ಒಪ್ಪಂದ’ವನ್ನು ಜಗತ್ತಿನ ಎದುರು ಅಧಿಕೃತವಾಗಿ ಘೋಷಿಸಲು ಸ್ವಿಟ್ಜರ್‌ಲ್ಯಾಂಡ್‌ನ ಬರ್ಗೆನ್‌ಸ್ಟಾಕ್‌ನಲ್ಲಿ ಇಂದು (ಜೂನ್ 19, 2026) ನಡೆಯಬೇಕಿದ್ದ ಬೃಹತ್ ಸಾರ್ವಜನಿಕ ಸಮಾರಂಭದಿಂದ ಇರಾನ್ ಕೊನೆಕ್ಷಣದಲ್ಲಿ ಹಿಂದೆ ಸರಿದಿದೆ.

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್‌ಗೆ ನಿಕಟವಾಗಿರುವ ಮೂಲಗಳ ಪ್ರಕಾರ, ಅಮೆರಿಕ ಅಧಿಕಾರಿಗಳೊಂದಿಗೆ ವೇದಿಕೆ ಹಂಚಿಕೊಂಡರೆ ದೇಶದೊಳಗೆ ತೀವ್ರ ಜನಾಕ್ರೋಶ ವ್ಯಕ್ತವಾಗಬಹುದು ಎಂದು ತೀವ್ರಗಾಮಿಗಳು ಎಚ್ಚರಿಸಿದ ಹಿನ್ನೆಲೆಯಲ್ಲಿ ಇರಾನ್ ಈ ನಿರ್ಧಾರ ಕೈಗೊಂಡಿದೆ. ಇತ್ತ ಶ್ವೇತಭವನ ಕೂಡ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿಸಿದೆ.

ಇರಾನ್ ಹಿಂದೆ ಸರಿಯಲು ಅಸಲಿ ಕಾರಣಗಳೇನು?
ಅಮೆರಿಕದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಗೆ ಕೆಲವೇ ದಿನಗಳು ಬಾಕಿ ಇರುವಾಗ, ಅಮೆರಿಕದ ಅಧಿಕಾರಿಗಳೊಂದಿಗೆ ಹಸ್ತಲಾಘವ ಮಾಡುವ ಅಥವಾ ಟಿವಿ ಕ್ಯಾಮೆರಾಗಳ ಮುಂದೆ ನಗುತ್ತಾ ನಿಲ್ಲುವ ಚಿತ್ರಗಳು ಹೊರಬಂದರೆ, ಅದು ಸಂಘರ್ಷದಲ್ಲಿ ಮಡಿದವರಿಗೆ ಮಾಡುವ ದ್ರೋಹ ಎಂದು ಇರಾನ್‌ನ ಜನ ಭಾವಿಸುತ್ತಾರೆ ಎಂದು ತೀವ್ರಗಾಮಿ ಬಣಗಳು ಎಚ್ಚರಿಸಿದ್ದವು. ಇರಾನಿಯನ್ನರು ಸೇಡು ತೀರಿಸಿಕೊಳ್ಳಲು ಬಯಸುತ್ತಾರೆಯೇ ಹೊರತು ಸಾರ್ವಜನಿಕ ಸ್ನೇಹದ ಪ್ರದರ್ಶನವನ್ನಲ್ಲ ಎಂದು ಮೂಲಗಳು ತಿಳಿಸಿವೆ.

ಇರಾನ್ ಒಪ್ಪಂದದಿಂದ ಹಿಂದೆ ಸರಿಯುತ್ತಿರುವ ಬೆನ್ನಲ್ಲೇ, ಇಸ್ರೇಲ್ ಸೇನೆಯು ದಕ್ಷಿಣ ಲೆಬನಾನ್‌ನಲ್ಲಿ ರಾತ್ರಿಯಿಡೀ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಹೆಜ್ಬೊಲ್ಲಾ ವರದಿ ಮಾಡಿದೆ.

ಮತ್ತಷ್ಟು ಓದಿ: ವಾಸ್ತವವನ್ನು ಅರ್ಥಮಾಡಿಕೊಳ್ಳಿ: ಇರಾನ್ ಒಪ್ಪಂದ ಟೀಕಿಸಿದ ಇಸ್ರೇಲ್​ಗೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ ಎಚ್ಚರಿಕೆ

ಸಾರ್ವಜನಿಕ ಸಮಾರಂಭ ರದ್ದಾಗಿದ್ದರೂ ಒಪ್ಪಂದ ಸಂಪೂರ್ಣ ಮುರಿದುಬಿದ್ದಿಲ್ಲ. ಇನ್ನು ಯಾವುದೇ ಉನ್ನತ ನಾಯಕರು ಸ್ವಿಟ್ಜರ್‌ಲ್ಯಾಂಡ್‌ಗೆ ಪ್ರಯಾಣಿಸುವುದಿಲ್ಲ. ಬದಲಿಗೆ ಅಮೆರಿಕ, ಇರಾನ್, ಕತಾರ್ ಮತ್ತು ಪಾಕಿಸ್ತಾನದ ತಾಂತ್ರಿಕ ತಂಡಗಳು ಜ್ಯೂರಿಚ್‌ನಲ್ಲಿ ಬೀಡುಬಿಟ್ಟಿದ್ದು, ಮುಂದಿನ 60 ದಿನಗಳ ಕಾಲ ರಹಸ್ಯವಾಗಿ ಮಾತುಕತೆ ನಡೆಸಿ ಅಂತಿಮ ಒಪ್ಪಂದದ ವಿವರಗಳನ್ನು ಸಿದ್ಧಪಡಿಸಲಿವೆ.

ಇರಾನ್‌ನ ಬಳಿ ಇನ್ನೂ ನೂರಾರು ಕಿಲೋಗ್ರಾಂಗಳಷ್ಟು ಪುಷ್ಟೀಕರಿಸಿದ ಯುರೇನಿಯಂ ಇರುವುದರಿಂದ ಈ ಒಪ್ಪಂದ ಎಷ್ಟು ಯಶಸ್ವಿಯಾಗಲಿದೆ ಎಂಬ ಪ್ರಶ್ನೆ ಮೂಡಿದೆ. ಈಗಾಗಲೇ ಅಮೆರಿಕವು ಇರಾನ್ ಮೇಲಿನ ಕರಾವಳಿ ನೌಕಾ ದಿಗ್ಬಂಧನವನ್ನು ತೆಗೆದುಹಾಕುವ ಮೂಲಕ ಒಪ್ಪಂದದ ಮೊದಲ ಹೆಜ್ಜೆಯನ್ನು ಇಟ್ಟಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು! – Kannada News | Bizarre Incident in Bengaluru: Mobile Snatcher Fleeing on Scooter Suffers Sudden Heart Attack and Dies

ಬೆಂಗಳೂರು, ಜೂನ್​​ 19: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಕ್ಷಣ ಮಾತ್ರದಲ್ಲಿ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುನೈದ್ ಎಂಬಾತ ವ್ಯಕ್ತಿಯೋರ್ವರ ಮೊಬೈಲ್​​ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ ಈತನತ್ತ ಮೂಟೆಯನ್ನು ಎಸೆದಿದ್ದು, ನಿಯಂತ್ರಣ ತಪ್ಪಿ ಬಿದ್ದ ಜುನೈದ್​​ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್​​ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ ಆರೋಪಿ ಅರ್ಬಾಜ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನಾ ಹೆಲಿಕಾಪ್ಟರ್‌ ಬಳಕೆ – Kannada News | NEET UG 2026: Re Examination Details, Security Measures, and Student Concerns

ಜೂನ್ 21ರಂದು ದೇಶಾದ್ಯಂತ ನೀಟ್ ಯುಜಿ (NEET UG) ಮರು ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಜ್ಜಾಗಿದೆ. ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ, ಈ ಬಾರಿ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ. ಮಧ್ಯಾಹ್ನ 2:30 ರಿಂದ ಸಂಜೆ 5:15 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ 15 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ.

552 ನಗರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನೆಯ ಹೆಲಿಕಾಪ್ಟರ್‌ ಮತ್ತು ವಿಮಾನಗಳನ್ನು ಬಳಸಿಕೊಳ್ಳಲಾಗಿದೆ. ಸಿಆರ್‌ಪಿಎಫ್ (CRPF) ಮತ್ತು ಸಿಐಎಸ್‌ಎಫ್ (CISF) ಭದ್ರತೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಾಗಿಸಿ, ಅವುಗಳನ್ನು ಸಂಗ್ರಹಿಸುವ ಸ್ಥಳಗಳಲ್ಲೂ ಬಿಗಿ ಭದ್ರತೆ ಒದಗಿಸಲಾಗಿದೆ. ನಕಲಿ ಅಭ್ಯರ್ಥಿಗಳನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಪ್ರಶ್ನೆಪತ್ರಿಕೆ ತಯಾರಿಕೆಯಲ್ಲಿ ಭಾಗಿಯಾದ ಪ್ರೊಫೆಸರ್‌ಗಳಿಗೆ ಪರೀಕ್ಷೆ ಮುಗಿಯುವವರೆಗೆ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಈ ಎಲ್ಲಾ ಕ್ರಮಗಳು ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶ ಹೊಂದಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಮಾ ಇಂಟಿ ಬಂಗಾರಂ’ ಮ್ಯಾಜಿಕ್ ಮಾಡಿದರಾ ಸಮಂತಾ, ನೆಟ್ಟಿಗರು ಹೇಳಿದ್ದೇನು? – Kannada News | Samantha Ruth Prabhu starrer Maa Inti Bangaram movie twitter review

ಸಮಂತಾ ಋತ್ ಪ್ರಭು (Samantha Ruth Prabhu) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಇಂದು (ಜೂನ್ 19) ಬಿಡುಗಡೆ ಆಗಿದೆ. ಆಂಧ್ರ, ತೆಲಂಗಾಣದ ಕೆಲವೆಡೆ ಬೆಳಿಗ್ಗೆ ಶೋಗಳು ಪ್ರದರ್ಶನಗೊಂಡಿವೆ. ವಿದೇಶದಲ್ಲೂ ಸಹ ಭಾರತಕ್ಕಿಂತಲೂ ಮುಂಚಿತವಾಗಿ ಸಿನಿಮಾ ರಿಲೀಸ್ ಆಗಿದೆ. ಸಿನಿಮಾ ನೋಡಿದ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನೆಟ್ಟಿಗರಿಗೆ ‘ಮಾ ಇಂಟಿ ಬಂಗಾರಂ’ ಸಿನಿಮಾ ಹೇಗನ್ನಿಸಿತು, ಅವರಿಗೆ ಇಷ್ಟವಾಯ್ತಾ? ಇಲ್ಲವಾ? ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ ನೋಡಿ….

ವೆಂಕಿ ರಿವ್ಯೂಸ್ ಎಂಬ ಟ್ವಿಟ್ಟರ್ ಚಾನೆಲ್ ‘ಮಾ ಇಂಟಿ ಬಂಗಾರಂ’ ಒಂದು ಸಾಧಾರಣ ಸಿನಿಮಾ ಎಂದಿದೆ. ‘ಫ್ಯಾಮಿಲಿ ಸ್ಟೋರಿಯನ್ನು ಕೆಟ್ಟದಾಗಿ ತೆರೆ ತರಲಾಗಿದೆ. ಆರಂಭದಿಂದ ಅಂತ್ಯದವರೆಗೆ ಬಹಳ ಸಾಧಾರಣ ರೀತಿಯಲ್ಲಿ ನಿರೂಪಿತವಾದ ಹಾಗೂ ಸುಲಭವಾಗಿ ಊಹಿಸಬಹುದಾದ ಕತೆಯನ್ನು ಸಿನಿಮಾ ಒಳಗೊಂಡಿದೆ. ಮೊದಲಾರ್ಧಕ್ಕೆ ಹೋಲಿಸಿದರೆ ದ್ವಿತೀಯಾರ್ಧ ವೇಗ ಪಡೆದುಕೊಂಡರೂ, ಪರಿಣಾಮಕಾರಿಯಲ್ಲದ ಬ್ಯಾಕ್ ಸ್ಟೋರಿ, ದುರ್ಬಲ ಖಳನಾಯಕನ ಪಾತ್ರ ಮತ್ತು ಟ್ವಿಸ್ಟ್​​ಗಳ ಕೊರತೆ ಸಿನಿಮಾನಲ್ಲಿದೆ. ಸಿನಿಮಾದ ಎಮೋಷನ್ ಸೀನ್​​ಗಳು ಸಹ ಸರಿಯಾಗಿ ಟಚ್ ಆಗುವುದಿಲ್ಲ, ಸಮಂತಾ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಕಳಪೆ ಹಿನ್ನೆಲೆ ಸಂಗೀತ ಮತ್ತು ಕಳಪೆ ನಿರೂಪಣೆಯು ಚಿತ್ರವು ಹೆಚ್ಚಿನ ಪ್ರಭಾವ ಬೀರದಂತೆ ತಡೆಯುತ್ತದೆ’ ಎಂದಿದ್ದಾರೆ.

ದೀಪಕ್​ಸಿಂಗ್ ಅವರಿಗೆ ‘ಮಾ ಇಂಟಿ ಬಂಗಾರಂ’ ಸಿನಿಮಾ ಇಷ್ಟವಾಗಿದೆ. ಸಿನಿಮಾದ ಬಗ್ಗೆ ಧನಾತ್ಮಕ ವಿಮರ್ಶೆಯನ್ನು ಅವರು ನೀಡಿದ್ದಾರೆ. ‘ಟಾಲಿವುಡ್​​ಗೆ ಅಗತ್ಯವಾಗಿದ್ದ ಹಿಟ್ ಅನ್ನು ಸಮಂತಾ ನೀಡಿದ್ದಾರೆ. ಸಮಂತಾ ಅವರು ರಾಣಿಯಂತೆ ಸಿನಿಮಾನಲ್ಲಿ ಮಿಂಚಿದ್ದಾರೆ. ಇಡೀ ಸಿನಿಮಾದ ಹೈಲೆಟ್ ಸಮಂತಾ ಅವರೇ ಎಂದಿದ್ದಾರೆ.

ಐತೇ ಎಂಟಿ ಎಂಬ ಟ್ವಿಟ್ಟರ್ ಪೇಜ್​​ ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದೆ. ‘ಸಿನಿಮಾದ ಮೊದಲಾರ್ಧ ಚೆನ್ನಾಗಿದೆ ಒಳ್ಳೆಯ ಕಾಮಿಡಿ ಇದೆ. ಆದರೆ ಇಂಟರ್ವೆಲ್ ಬಳಿಕ ಸಿನಿಮಾ ಸಪ್ಪೆಯಾಗಿದೆ. ಸಿನಿಮಾದ ಎಡಿಟಿಂಗ್ ಅಂತೂ ಬಹಳ ಕೆಟ್ಟದಾಗಿದೆ. ತಮ್ಮ ಮನಸ್ಸಿಗೆ ಬಂದಂತೆ ದೃಶ್ಯಗಳನ್ನು ಕಟ್ ಮಾಡಿ ಜೋಡಿಸಿದ್ದಾರೆ. ಒಂದು ನಿಯಮಿತ ಕ್ರಮವೇ ಇಲ್ಲ’ ಎಂದು ಅವರು ದೂರಿದ್ದಾರೆ.

ದಿಲೀಪ್ ಕುಮಾರ್ ಎಂಬುವರು ಟ್ವೀಟ್ ಮಾಡಿ, ಕುಟುಂಬ ಪ್ರೇಕ್ಷಕರು ಆರಾಮವಾಗಿ ಬಂದು ನೋಡಬಹುದಾದ ಸಿನಿಮಾ ‘ಮಾ ಇಂಟಿ ಬಂಗಾರಂ’. ಸಿನಿಮಾದ ಕತೆ ಹಿಡಿದಿಟ್ಟುಕೊಳ್ಳುತ್ತದೆ. ವಿಶೇಷವಾಗಿ ಸಿನಿಮಾದ ಆಕ್ಷನ್ ಸೀನ್​​ಗಳು ಅದ್ಭುತವಾಗಿವೆ. ಸಮಂತಾ ಅದ್ಭುತವಾಗಿ ಆಕ್ಷನ್ ಮಾಡಿದ್ದಾರೆ. ಈ ಸಿನಿಮಾದ ಬಳಿಕ ಸಮಂತಾಗೆ ಲೇಡಿ ಸೂಪರ್ ಸ್ಟಾರ್ ಟ್ಯಾಗ್ ಕೊಡಬಹುದು’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗುಟ್ಟಾಗಿ ಮದುವೆ ಆದ್ರಾ ಸಾರಾ ಅಲಿ ಖಾನ್? ವೈರಲ್ ಆಯ್ತು ಫೋಟೋ – Kannada News | Did Sara Ali Khan Get Married Secretly? Truth Behind Her Viral Photo With Henry Cavill

ವೈರಲ್ ಆಗಿರುವ ಫೋಟೋದಲ್ಲಿ ಇಬ್ಬರ ಉಡುಪುಗಳು ಪ್ರೇಕ್ಷಕರಲ್ಲಿ ದೊಡ್ಡ ಗೊಂದಲ ಮೂಡಿಸಿವೆ. ಸಾರಾ ಅಲಿ ಖಾನ್ ಬಿಳಿ ಬಣ್ಣದ ಫಾರ್ಮಲ್ ಸ್ಕರ್ಟ್ ಸೂಟ್ ಧರಿಸಿ, ತಲೆಗೆ ನೆಟ್ ಮಾದರಿಯ ಬಿಳಿ ಹ್ಯಾಟ್ ಧರಿಸಿದ್ದರೆ, ಹೆನ್ರಿ ಕ್ಯಾವಿಲ್ ಸೂಟ್ ಮತ್ತು ಹ್ಯಾಟ್ ಧರಿಸಿ ಕ್ಲಾಸಿಕ್ ಬ್ಲ್ಯಾಕ್ ಅಂಡ್ ವೈಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕ್ರಿಶ್ಚಿಯನ್ ಸಂಪ್ರದಾಯದ ವಧು-ವರರಂತೆ ಕಾಣಿಸುತ್ತಿರುವುದರಿಂದ, ಅನೇಕ ಅಭಿಮಾನಿಗಳು ಸಾರಾ ಅಲಿ ಖಾನ್ ಗುಟ್ಟಾಗಿ ಮದುವೆಯಾಗಿದ್ದಾರೆ ಎಂದೇ ತಪ್ಪಾಗಿ ಭಾವಿಸಿದರು.

Source link