‘ಧುರಂಧರ್’ ಸಿನಿಮಾ ಬಳಿಕ ಮತ್ತೆ ಸಕ್ರಿಯವಾದ ದಾವೂದ್ ಇಬ್ರಾಹಿಂ ಗ್ಯಾಂಗ್ ‘ಡಿ ಕಂಪನಿ’?
ಬಾಲಿವುಡ್‌ನಲ್ಲಿ ಸೂಪರ್ ಹಿಟ್ ಆದ ‘ಧುರಂಧರ್’ (Dhurandhar) ಚಿತ್ರವು ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂನ ಡಿ-ಕಂಪನಿಯನ್ನು (D-Company) ಕೆರಳಿಸಿದೆ. ರಣವೀರ್ ಸಿಂಗ್ ನಟನೆಯ ಈ ಬ್ಲಾಕ್‌ಬಸ್ಟರ್ ಚಿತ್ರದ ಯಶಸ್ಸಿನ ಬೆನ್ನಲ್ಲೇ, ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ತನ್ನ ಮುಂಬೈ ನೆಟ್‌ವರ್ಕ್ ಅನ್ನು ಮತ್ತೆ ಸಕ್ರಿಯಗೊಳಿಸಿದ್ದಾನೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿರುವ ‘ಧುರಂಧರ್’ ಚಿತ್ರದಲ್ಲಿ ‘ಬಡೇ ಸಾಹೇಬ್’ ಎಂಬ ಪಾತ್ರವೊಂದಿದೆ. ಮರಣ ಶಯ್ಯೆಯಲ್ಲಿರುವಂತೆ ತೋರಿಸಲಾದ ಈ…