All posts by nagaraj11081993

ಈ ವರ್ಷ ಟೀಂ ಇಂಡಿಯಾ ಯಾವೆಲ್ಲ ತಂಡಗಳ ವಿರುದ್ಧ ಸೆಣಸಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿಯ ಐಪಿಎಲ್ (IPL 2026)​ ಮುಕ್ತಾಯಗೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯುವ ಮೂಲಕ ತಮ್ಮ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ. ಸುಮಾರು 2 ತಿಂಗಳಿಗೂ ಹೆಚ್ಚಿನ ಕಾಲ ನಡೆದ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು ಭಾಗವಹಿಸಿದ್ದರು. ಹೀಗಾಗಿ ಈ ಸಮಯದಲ್ಲಿ ಭಾರತ ತಂಡ ಯಾವುದೇ ಅಂತರರಾಷ್ಟ್ರೀಯ ಸರಣಿಗಳನ್ನು ಆಡಲಿಲ್ಲ. ಇದೀಗ ಐಪಿಎಲ್ ಮುಗಿದಿದ್ದು, ಟೀಂ ಇಂಡಿಯಾ ಕೂಡ ಅಂತರರಾಷ್ಟ್ರೀಯ ವೇಳಾಪಟ್ಟಿಯ ಕಡೆಗೆ ತನ್ನ ಗಮನ ಹಾಯಿಸಲಿದೆ. ಅದರಂತೆ ಜೂನ್ 6 ರಿಂದ ಟೀಂ ಇಂಡಿಯಾದ ಅಂತರರಾಷ್ಟ್ರೀಯ ವೇಳಾಪಟ್ಟಿಗೆ ಚಾಲನೆ ಸಿಗಲಿದೆ.

ಐಪಿಎಲ್ ಮುಗಿದ ಕೇವಲ 5 ದಿನಗಳ ನಂತರ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಅನೇಕ ಸ್ಟಾರ್ ಆಟಗಾರರು ಮೈದಾನಕ್ಕೆ ಮರಳಲಿದ್ದಾರೆ. ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಏಕೈಕ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಅದಾದ ನಂತರ ಏಕದಿನ ಮತ್ತು ಟಿ20 ಪಂದ್ಯಗಳ ಸರಣಿಗಳ ಜೊತೆಗೆ 2026 ರ ಏಷ್ಯನ್ ಕ್ರೀಡಾಕೂಟಕ್ಕಾಗಿ ಯುವ ತಂಡ ಜಪಾನ್‌ಗೆ ಪ್ರಯಾಣಿಸಲಿದೆ.

ಟೀಂ ಇಂಡಿಯಾದ ವೇಳಾಪಟ್ಟಿ

ಜೂನ್ 2026

  • ಜೂನ್ 6-10: ಭಾರತ-ಅಫ್ಘಾನಿಸ್ತಾನ ನಡುವೆ ಟೆಸ್ಟ್ ಪಂದ್ಯ
  • ಜೂನ್ 13-20: ಭಾರತ-ಅಫ್ಘಾನಿಸ್ತಾನದ ನಡುವೆ 3 ಪಂದ್ಯಗಳ ಏಕದಿನ ಸರಣಿ
  • ಜೂನ್ 26-29: ಭಾರತ 2 ಟಿ20 ಪಂದ್ಯಗಳಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ.

ಜುಲೈ 2026

  • ಜುಲೈ 1-11: ಭಾರತ 5 ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಲಿದೆ
  • ಜುಲೈ 14-19: ಟಿ20 ಸರಣಿ ಮುಗಿದ ಬಳಿಕ ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ
  • ಜುಲೈ 23-26: 3 ಪಂದ್ಯಗಳ ಟಿ20 ಸರಣಿಗಾಗಿ ಭಾರತ. ಜಿಂಬಾಬ್ವೆ ಪ್ರವಾಸ ಮಾಡಲಿದೆ.

ಆಗಸ್ಟ್ 2026

  • 2 ಟೆಸ್ಟ್ ಮತ್ತು 3 ಟಿ20 ಪಂದ್ಯಗಳಿಗಾಗಿ ಭಾರತ, ಶ್ರೀಲಂಕಾ ಪ್ರವಾಸ ಮಾಡಲಿದೆ. ವೇಳಾಪಟ್ಟಿ ಇನ್ನಷ್ಟೇ ಪ್ರಕಟವಾಗಬೇಕಿದೆ.

ಸೆಪ್ಟೆಂಬರ್ ಮತ್ತು ಅಕ್ಟೋಬರ್ 2026

  • ಸೆಪ್ಟೆಂಬರ್ 17 – ಅಕ್ಟೋಬರ್ 3: ಏಷ್ಯನ್ ಗೇಮ್ಸ್ 2026, ಜಪಾನ್ (ಟಿ20 ಸ್ವರೂಪ)
  • ಸೆಪ್ಟೆಂಬರ್ 27 – ಅಕ್ಟೋಬರ್ 3: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 3 ಪಂದ್ಯಗಳ ಏಕದಿನ ಸರಣಿ
  • ಅಕ್ಟೋಬರ್ 6-17: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 5 ಪಂದ್ಯಗಳ ಟಿ20 ಸರಣಿ

ಅಕ್ಟೋಬರ್ ಮತ್ತು ಡಿಸೆಂಬರ್ 2026

  • ಅಕ್ಟೋಬರ್ 22 – ಡಿಸೆಂಬರ್: ಭಾರತ 2 ಟೆಸ್ಟ್, 5 ಏಕದಿನ, 5 ಟಿ20 ಪಂದ್ಯಗಳ ಟಿ20 ಸರಣಿಗಾಗಿ ನ್ಯೂಜಿಲೆಂಡ್ ಪ್ರವಾಸ ಮಾಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚನಿಗೆ ನೀಡಲಾಗಿದೆ ಟ್ರಿಬ್ಯೂಟ್; ಇದು ಪ್ರಿಯಾ ಸುದೀಪ್ ಸರ್ಪ್ರೈಸ್

ಕಿಚ್ಚ ಸುದೀಪ್ (Kichcha Sudeep) ಅವರ ಪತ್ನಿ ಪ್ರಿಯಾ ಅವರು ಮೊದಲ ಬಾರಿಗೆ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಬ್ಯಾನರ್ ಮೂಲಕ ಅವರು ‘ಮ್ಯಾಂಗೋ ಪಚ್ಚ’ (Mango Pachcha) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್ಲಿ ಅವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ಸುದೀಪ್ ಅವರಿಗೆ ಸಣ್ಣ ಟ್ರಿಬ್ಯೂಟ್ ರೀತಿ ಈ ಸಿನಿಮಾದಲ್ಲಿ ತೋರಿಸಬೇಕು ಎಂಬ ಆಸೆ ನನಗೆ ಇತ್ತು. ಆ ಬಗ್ಗೆ ನಾನು ಮತ್ತು ಸಂಚಿತ್ ಮಾತನಾಡಿಕೊಂಡ್ವಿ. ಸಿನಿಮಾದ ಎಲ್ಲೋ ಒಂದು ಸಣ್ಣ ತುಣುಕಿನಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳಬೇಕಾ ಅಥವಾ ಬೇರೆ ಯಾವುದೇ ರೀತಿಯಲ್ಲಿ ನಾವು ಅವರಿಗೆ ಧನ್ಯವಾದ ಹೇಳಬೇಕು. ಯಾಕೆಂದರೆ ಅವರು ನಮ್ಮ ಕೈ ಹಿಡಿದಿದ್ದಾರೆ. ಒಳ್ಳೆಯ ಮಾರ್ಗದರ್ಶಕರಾಗಿ ನಿಂತಿದ್ದಾರೆ. ಸಣ್ಣ ಸಣ್ಣ ಬದಲಾವಣೆಗಳನ್ನು ಸೂಚಿಸಿದ್ದಾರೆ. ವಿವರಣೆಗಳಿಗೆ ಹೆಚ್ಚು ಗಮನ ನೀಡಿದ್ದಾರೆ. ಅದರಿಂದಾಗಿ ಪರದೆ ಮೇಲೆ ದೊಡ್ಡ ವ್ಯತ್ಯಾಸ ಆಗುತ್ತದೆ. ಅದನ್ನೆಲ್ಲ ನಾವು ಅವರಿಂದ ಕಲಿತಿದ್ದೇವೆ. ನಾವು ಈ ಚಿತ್ರರಂಗಕ್ಕೆ ಬಂದಿದ್ದೇವೆ ಅಂದರೆ ಅದು ಅವರನ್ನು ನೋಡಿಕೊಂಡು ಬಂದಿರುವುದು. ಹಾಗಾಗಿ ನಮ್ಮ ಕಡೆಯಿಂದ ಸುದೀಪ್ ಅವರಿಗೆ ಒಂದು ಸಣ್ಣ ಗೌರವ ಸಲ್ಲಿಸಬೇಕು ಎಂಬ ಕಾರಣಕ್ಕಾಗಿ ಸಿನಿಮಾದಲ್ಲಿ ಒಂದು ಸರ್ಪ್ರೈಸ್ ಇಟ್ಟಿದ್ದೇವೆ. ನೀವು ಸಿನಿಮಾ ನೋಡಿದಾಗ ಅದು ತಿಳಿಯುತ್ತದೆ’ ಎಂದು ಪ್ರಿಯಾ ಸುದೀಪ್ (Priya Sudeep) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಿದ್ದರಾಮಯ್ಯ ಪುತ್ರನಿಗೆ ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಬೆಂಗಳೂರು, (ಜೂನ್ 01): ಡಿ.ಕೆ. ಶಿವಕುಮಾರ್​ ಅವರು ಇದೇ ಜೂನ್ 03ರಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಜೊತೆ ಕೆಲವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಸಚಿವರು ಆಗುವ ಶಾಸಕರು ಯಾರ್ಯಾರು ಎನ್ನುವುದೇ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಮಂತ್ರಿ ಸ್ಥಾನಕ್ಕೆ ಶಾಸಕರು ಭರ್ಜರಿ ಲಾಬಿ ನಡೆಸಿದ್ದಾರೆ.

ಹೌದು.. ಬೀದರ್​ನಿಂದ ಹಿಡಿದು ಚಾಮರಾಜನಗರದವರೆಗೆ ಮಂತ್ರಿಗಿರಿಗಾಗಿ ಪೈಪೋಟಿ ಶುರುವಾಗಿದೆ. ಸಿದ್ದರಾಮಯ್ಯರ ಸಂಪುಟದಲ್ಲಿ ಇದ್ದ, ಕೆಲವರಿಗೆ ಪಟ್ಟ ಕೈತಪ್ಪಿ ಹೋಗೋ ಆತಂಕವೂ ಕಾಡುತ್ತಿದೆ. ಹೀಗಾಗಿ ಅನೇಕರು ದೆಹಲಿಗೆ ದಂಡಯಾತ್ರೆ ನಡೆಸುತ್ತಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್ ಆಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅವರೇ ಪ್ರತಿಕ್ರಿಯಿಸಿ, ಹೈಕಮಾಂಡ್ ಕೊಟ್ಟ ಭರವಸೆಯನ್ನು ಬಹಿರಂಗಪಡಿಸಿದ್ದಾರೆ.

Source link

ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಕಂದಮ್ಮನಿಗೆ ಮರುಜೀವ ನೀಡಿದ ಆ್ಯಂಬುಲೆನ್ಸ್ ಸಿಬ್ಬಂದಿ

ಹೈದರಾಬಾದ್, ಜೂನ್ 01: ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಮಗುವಿಗೆ ತುರ್ತು ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ ಸಿಬ್ಬಂದಿ ಜೀವ ಉಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನಲೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ ಆಸ್ಪತ್ರೆಗೆ ರೆಫರ್ ಮಾಡಿದ್ದರು ಅದಕ್ಕಾಗಿ ಮಗುವನ್ನು ಕರೆದೊಯ್ಯುವಾಗ ಶಿಶು ಚಿಂತಾಜನಕ ಸ್ಥಿತಿಗೆ ತಲುಪಿತ್ತು ಕೂಡಲೇ ಎಚ್ಚೆತ್ತ ಆ್ಯಂಬುಲೆನ್ಸ್ ಸಿಬ್ಬಂದಿ ಸಿಪಿಆರ್ (CPR) ನೀಡಿ ಜೀವ ಉಳಿಸಿದ್ದಾರೆ.

ಘಟನೆ ಏನು?

ವಿಕಾರಾಬಾದ್ ಜಿಲ್ಲೆಯ ಕೊಡಂಗಲ್ ಕ್ಷೇತ್ರದ ತುಂಕಿಮೆಟ್ಲ ಗ್ರಾಮದ ಭುವನೇಶ್ವರಿ ಅವರು ಮೂರು ದಿನಗಳ ಹಿಂದೆ ತಾಂಡೂರಿನ ಮಾತಾ- ಶಿಶು ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ನವಜಾತ ಶಿಶು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಹೈದರಾಬಾದ್‌ ನಲ್ಲಿರುವ ನೀಲೋಫರ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಮಗುವಿನ ಆರೋಗ್ಯ ಏಕಾಏಕಿ ಹದಗೆಟ್ಟಿತು, ಉಸಿರಾಟದಲ್ಲಿ ತೀವ್ರ ತೊಂದರೆ ಕಾಣಿಸಿಕೊಂಡು, ಮಗು ಪ್ರಾಣಾಪಾಯದ ಸ್ಥಿತಿಗೆ ತಲುಪಿತ್ತು. ಆಗ ಆ್ಯಂಬುಲೆನ್ಸ್‌ನಲ್ಲಿದ್ದ ಶಾಂತ್ ಕುಮಾರ್ ಹಾಗೂ ಆಯೂಬ್ ಪಾಷಾ ಪರಿಸ್ಥಿತಿಯನ್ನು ತಕ್ಷಣ ಅರಿತು ಕಾರ್ಯಪ್ರವೃತ್ತರಾದರು. ಕ್ಷಣವೂ ವಿಳಂಬ ಮಾಡದೆ ಮಗುವಿಗೆ ಸಿಪಿಆರ್ (Cardio Pulmonary Resuscitation) ನೀಡಿದರು. ಮಗುವಿನ ಹೃದಯ ಬಡಿತ ಮತ್ತು ಉಸಿರಾಟವನ್ನು ಪುನಃ ಚೇತರಿಸಲು ಅವರು ನಿರಂತರವಾಗಿ ಪ್ರಯತ್ನಿಸಿದರು.

ಆ್ಯಂಬುಲೆನ್ಸ್ ಸಿಬ್ಬಂದಿ ಕಾರ್ಯಕ್ಕೆ ನೆಟ್ಟಿಗರ ಮೆಚ್ಚುಗೆ

ಅವರ ತ್ವರಿತ ಕ್ರಮ ಫಲಕಾರಿಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಮಗುವಿನ ಸ್ಥಿತಿ ಸುಧಾರಿಸಿದ್ದು ನಂತರ ಮಗುವನ್ನು ಸುರಕ್ಷಿತವಾಗಿ ಹೈದರಾಬಾದ್‌ನ ನೀಲೋಫರ್ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗಿದೆ. ತಮ್ಮ ಕಣ್ಣೆದುರೇ ಜೀವ ಕಳೆದುಕೊಳ್ಳುತ್ತಿದ್ದ ಮಗುವನ್ನು ಉಳಿಸಿದ ಆ್ಯಂಬುಲೆನ್ಸ್ ಸಿಬ್ಬಂದಿಗೆ ಮಗುವಿನ ಪೋಷಕರು ಧನ್ಯವಾದ ಸಲ್ಲಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಿಬ್ಬಂದಿಯ ಸಮಯಪ್ರಜ್ಞೆ, ಸೇವಾ ಮನೋಭಾವ ಮತ್ತು ವೃತ್ತಿಪರತೆಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪರಮೇಶ್ವರ್, ರಾಜಣ್ಣಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ನಿರ್ಧಾರ

ತುಮಕೂರು, ಜೂನ್​ 01: ತುಮಕೂರು ವಿಶ್ವವಿದ್ಯಾಲಯದ (Tumkur University) 19ನೇ ಘಟಿಕೋತ್ಸವವು ಜೂನ್ 3ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ (Honorary Doctorate) ನೀಡದಿರಲು ವಿವಿಯ ಪರಿಶೀಲನಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆ ಮಾಜಿ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ ಕೆ. ಎನ್. ರಾಜಣ್ಣಗೆ ಗೌರವ ಡಾಕ್ಟರೇಟ್​ ನೀಡದಿರಲು ನಿರ್ಧರಿಸಲಾಗಿದೆ ಎಂದು ತುಮಕೂರು ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದ್ದಾರೆ.

ಮುಖ್ಯಾಂಶಗಳು

  • ತುಮಕೂರು ವಿವಿ 19ನೇ ಘಟಿಕೋತ್ಸವ
  • ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನಿರಾಕರಣೆ
  • ತುಮಕೂರು ವಿಶ್ವವಿದ್ಯಾಲಯದ ವಿಸಿ ಪ್ರೊ.ಎಂ.ವೆಂಕಟೇಶ್ವರಲು ಮಾಹಿತಿ

ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದ್ದಿಷ್ಟು 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ. ಜಿ. ಪರಮೇಶ್ವರ್ ಹಾಗೂ ಕೆ. ಎನ್. ರಾಜಣ್ಣ ಅವರ ಕೊಡುಗೆ ತುಂಬಾನೇ ಇದೆ. ಹೀಗಾಗಿ ಇಬ್ಬರಿಗೂ ಗೌರವ ಡಾಕ್ಟರೇಟ್ ನೀಡಬೇಕೆಂಬ ಆಶಯ ನಮಗಿತ್ತು. ಈ ನಿಟ್ಟಿನಲ್ಲಿ ನಾವು ಮೊನ್ನೆ ಇಬ್ಬರ ಹೆಸರುಗಳನ್ನು ಸೇರಿಸಿದ್ದೆವು. ಆದರೆ, ಪರಿಶೀಲನಾ ಸಮಿತಿಯು ಬೇರೆ ಬೇರೆ ರಾಜ್ಯಗಳಲ್ಲಿ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡುವ ನಿಯಮಗಳೇನು ಹಾಗೂ ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಯಾವ್ಯಾವ ರಾಜಕಾರಣಿಗಳು ಇದನ್ನು ಸ್ವೀಕರಿಸಿದ್ದಾರೆ ಅಥವಾ ನಿರಾಕರಿಸಿದ್ದಾರೆ ಎಂಬುದರ ಕುರಿತು ಚರ್ಚಿಸಲಾಗಿದೆ.

ಇದನ್ನೂ ಓದಿ: ತುಮಕೂರು ವಿವಿ: ಏಳು ವರ್ಷಗಳೇ ಕಳೆದರೂ ಸರಿಯಾಗಿ ಸಿಮೆಂಟ್ ಕಲಿಸಿಲ್ಲ, ಕಾಮಗಾರಿ ಪೂರ್ಣಗೊಂಡಿಲ್ಲ -ಆದರೂ ಹಾಸ್ಟೆಲ್ ಉದ್ಘಾಟನೆ ಭಾಗ್ಯ!

ಈ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸತೀಶ್ ಜಾರಕಿಹೊಳಿ ಅವರು ತಮಗೆ ಬಂದ ಗೌರವ ಡಾಕ್ಟರೇಟ್ ಅನ್ನು ತಿರಸ್ಕರಿಸಿದ್ದರು. ಅಲ್ಲದೆ, ಸಿದ್ದರಾಮಯ್ಯಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದಾಗ, ಅವರೇ ಖುದ್ದಾಗಿ ಕರೆದು ಈ ರೀತಿ ಕೊಡಬಾರದು ಎಂದು ಹೇಳಿದ್ದರು. ಈ ಎಲ್ಲಾ ವಿಚಾರಗಳನ್ನು ಚರ್ಚಿಸಿದ ಸಮಿತಿಯು, ಇನ್ಮುಂದೆ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡಬಾರದು ಎಂದು ಅಂತಿಮವಾಗಿ ನಿರ್ಧರಿಸಿದೆ ಎಂದರು.

ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

ರಾಜಕಾರಣಿಗಳನ್ನು ಹೊರತುಪಡಿಸಿ ಈ ಬಾರಿ ವಿವಿಧ ಕ್ಷೇತ್ರಗಳ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಟಿ. ಆರ್. ರೇವಣ್ಣ, ಕನ್ನಡದ ಕವಿ, ವಚನಕಾರ ಹಾಗೂ ಚಿಂತಕ ದ್ವಾರನಕುಂಟೆ ಪಾತಣ್ಣ, ಮತ್ತು ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್ ಹಾಗೂ ವೃತ್ತಿನಿರತ ವಕೀಲ ಎನ್. ಆರ್. ಪ್ರದೀಪ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ.

ರಾಜ್ಯಪಾಲರಿಗೆ ಆಹ್ವಾನ

ಈ ಬಾರಿಯ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್​ರಿಗೆ ಆಹ್ವಾನಿಸಲಾಗಿದ್ದು, ಮುಖ್ಯಮಂತ್ರಿಗಳ ಪದಗ್ರಹಣ ಕಾರ್ಯಕ್ರಮ ಇರುವುದರಿಂದ ಅವರು ಬರುವುದು ಇನ್ನೂ ಅಧಿಕೃತವಾಗಿಲ್ಲ. ಘಟಿಕೋತ್ಸವಕ್ಕೂ ಮುನ್ನ ರಾಜ್ಯಪಾಲರು ತುಮಕೂರು ವಿವಿಯಲ್ಲಿ ನೂತನವಾಗಿ ಸ್ಥಾಪನೆಗೊಂಡಿರುವ ತುಮಕೂರು ಇನ್ನೋವೇಶನ್ ಇನ್ ಕ್ಯುಬೇಶನ್ ಅಂಡ್ ಆಂತ್ರಪ್ರಿನ್ಯುರ್ ಶಿಪ್ ಕೌನ್ಸಿಲ್ ಹಾಗೂ ಗೋ ಗ್ರೀನ್- ಬೈಸಿಕಲ್ ಇನೀಶಿಯೇಟೀವ್ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಒಟ್ಟು 29 ಲಕ್ಷ ರೂ ವೆಚ್ಚದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಪದವಿ ಹಾಗೂ ರ‍್ಯಾಂಕ್​ಗಳ ವಿವರ

ಇನ್ನು ಈ ಬಾರಿಯ ಘಟಿಕೋತ್ಸವದಲ್ಲಿ ಒಬ್ಬ ಅಭ್ಯರ್ಥಿಗೆ ಡಿ.ಲಿಟ್ ಪದವಿ, 59 ಅಭ್ಯರ್ಥಿಗಳಿಗೆ ಪಿಎಚ್.ಡಿ, 2,058 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಹಾಗೂ 8,781 ಅಭ್ಯರ್ಥಿಗಳಿಗೆ ಸ್ನಾತಕ ಪದವಿಗಳನ್ನು ಪ್ರದಾನ ಮಾಡಲಾಗುತ್ತಿದೆ. ವಿಶ್ವವಿದ್ಯಾಲಯವು ಎಲ್ಲಾ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ‍್ಯಾಂಕ್​ಗಳನ್ನು ಘೋಷಿಸಿದ್ದು, ಒಟ್ಟು 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕಗಳನ್ನು ಹಾಗೂ ನಾಲ್ಕು ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಗುತ್ತಿದೆ ಎಂದು ಕುಲಪತಿಗಳು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಆಫ್ರಿಕಾದಿಂದ ಬಂದ ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಕುಂಟಾ: 1 ದಿನಕ್ಕೆ 4 ಲಕ್ಷ ರೂಪಾಯಿ ಸಂಬಳ

ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹಲವು ದಿನಗಳ ವಿಳಂಬದ ನಂತರ ಈ ಸಿನಿಮಾ ಕೊನೆಗೂ ಜೂನ್ 4ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಪ್ರಚಾರದ ವೇಳೆ ರಾಮ್ ಚರಣ್ (Ram Charan) ಅವರ ರಗಡ್ ಲುಕ್ ಮತ್ತು ಲಾಂಗ್ ಹೇರ್ ಸ್ಟೈಲ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡ್ ಮಾಡುತ್ತಿದ್ದರೆ, ಅವರ ಜೊತೆಗಿರುವ ಬಾಡಿಗಾರ್ಡ್ ಕೆವಿನ್ ಕುಂಟಾ (Kevin Kunta) ಕೂಡ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರ ಸಂಬಳ ಎಷ್ಟು ಎಂಬುದು ಸದ್ಯಕ್ಕೆ ಟಾಕ್ ಆಫ್ ದಿ ಟೌನ್ ಆಗಿದೆ.

ಮೂಲತಃ ಆಫ್ರಿಕಾದ ಗಾಂಬಿಯಾ ದೇಶದವರಾದ ಕೆವಿನ್ ಕುಂಟಾ ಸದ್ಯ ಇಟಲಿಯ ಫ್ಲಾರೆನ್ಸ್‌ನಲ್ಲಿ ನೆಲೆಸಿದ್ದಾರೆ. ಇವರು ಕೇವಲ ಸಾಮಾನ್ಯ ಬಾಡಿಗಾರ್ಡ್ ಅಲ್ಲ, ಅಂತರರಾಷ್ಟ್ರೀಯ ಮಟ್ಟದ ವೃತ್ತಿಪರ ಎಂಎಂಎ (Mixed Martial Arts) ಫೈಟರ್. 2021ರಲ್ಲಿ ಇಟಲಿಯ ರಾಷ್ಟ್ರೀಯ ಎಂಎಂಎ ತಂಡದ ಭಾಗವಾಗಿದ್ದ ಕೆವಿನ್, ಹಲವು ಕಠಿಣ ಪಂದ್ಯಗಳಲ್ಲಿ ಭಾಗವಹಿಸಿ ಯಶಸ್ಸು ಕಂಡಿದ್ದಾರೆ. ತಮ್ಮ ದೇಹದಾರ್ಢ್ಯತೆ ಮತ್ತು ಫಿಟ್ನೆಸ್‌ನಿಂದಾಗಿ ಅವರು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಫಾಲೋವರ್ಸ್ ಹೊಂದಿದ್ದಾರೆ.

ವರದಿಗಳ ಪ್ರಕಾರ, ‘ಪೆದ್ದಿ’ ಚಿತ್ರದ ರಾಷ್ಟ್ರವ್ಯಾಪಿ ಪ್ರಚಾರದ ಸಂದರ್ಭದಲ್ಲಿ ರಾಮ್ ಚರಣ್ ಅವರಿಗೆ ಬಿಗಿ ಭದ್ರತೆ ಒದಗಿಸಲು ಕೆವಿನ್ ಕುಂಟಾ ಅವರನ್ನು ನೇಮಿಸಿಕೊಳ್ಳಲಾಗಿದೆ. ಇದಕ್ಕಾಗಿ ಅವರಿಗೆ ದಿನವೊಂದಕ್ಕೆ ಬರೋಬ್ಬರಿ 2 ಲಕ್ಷದಿಂದ 4 ಲಕ್ಷ ರೂಪಾಯಿವರೆಗೆ ಸಂಭಾವನೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಇದು ನಿಜವೇ ಆದಲ್ಲಿ, ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಸೆಲೆಬ್ರಿಟಿ ಬಾಡಿಗಾರ್ಡ್‌ಗಳಲ್ಲಿ ಕೆವಿನ್ ಕೂಡ ಒಬ್ಬರಾಗಲಿದ್ದಾರೆ.

ರಾಮ್ ಚರಣ್ ಸಾರ್ವಜನಿಕವಾಗಿ ಎಲ್ಲೇ ಕಾಣಿಸಿಕೊಂಡರೂ ಕೆವಿನ್ ನೆರಳಿನಂತೆ ಅವರ ಜೊತೆಯಿರುತ್ತಾರೆ. ಅವರ ಎತ್ತರ ಹಾಗೂ ಬಲಿಷ್ಠ ಕಾಯ ಕೇವಲ ಅಭಿಮಾನಿಗಳನ್ನು ನಿಯಂತ್ರಿಸುವುದಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಹೊಸ ಟ್ರೆಂಡ್ ಸೃಷ್ಟಿಸಿದೆ. ರಾಮ್ ಚರಣ್ ಕ್ಯಾಶುವಲ್ ಡ್ರೆಸ್‌ನಲ್ಲಿ ಸರಳವಾಗಿ ಕಾಣಿಸಿಕೊಂಡರೆ, ಕೆವಿನ್ ಮಾತ್ರ ಶಾರ್ಪ್ ಸೂಟ್‌ ಧರಿಸಿ ಅತ್ಯಂತ ಸ್ಟೈಲಿಶ್ ಆಗಿ ಮಿಂಚುತ್ತಿದ್ದಾರೆ.

ಇದನ್ನೂ ಓದಿ: ಜಸ್ಪ್ರೀತ್ ಬುಮ್ರಾ ಓರ್ವ ಫುಟ್‌ಬಾಲ್ ಆಟಗಾರ ಎಂದ ರಾಮ್ ಚರಣ್; ತಪ್ಪಿಗೆ ಕ್ಷಮೆ ಕೇಳಿದ ನಟ

ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿಮಾದಲ್ಲಿ ರಾಮ್ ಚರಣ್‌ಗೆ ಜೋಡಿಯಾಗಿ ಜಾನ್ವಿ ಕಪೂರ್ ನಟಿಸಿದ್ದಾರೆ. ಜೊತೆಗೆ ಶಿವರಾಜ್‌ಕುಮಾರ್, ದಿವ್ಯೇಂದು ಶರ್ಮಾ, ರವಿ ಕಿಶನ್, ಬೊಮನ್ ಇರಾನಿ ಮತ್ತು ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿದ್ದಾರೆ. ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಸಂಗೀತ ನಿರ್ದೇಶನವಿರುವ ಈ ಚಿತ್ರವನ್ನು ‘ವೃದ್ಧಿ ಸಿನಿಮಾಸ್’, ‘ಮೈತ್ರಿ ಮೂವಿ ಮೇಕರ್ಸ್’ ಮತ್ತು ‘ಸುಕುಮಾರ್ ರೈಟಿಂಗ್ಸ್’ ಜಂಟಿಯಾಗಿ ನಿರ್ಮಿಸಿವೆ. ಸಿನಿಮಾ ಜೂನ್ 4ರಂದು ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026 Final: ಕರ್ನೂಲ್​ನಲ್ಲಿ ಆರ್​ಸಿಬಿ ಫ್ಯಾನ್ಸ್ ಅತಿರೇಕ; ಬಸ್ ಮೇಲೆ ಕಲ್ಲು ತೂರಾಟ

2025 ರ ಐಪಿಎಲ್‌ನಲ್ಲಿ ಆರ್​ಸಿಬಿ ಚಾಂಪಿಯನ್‌ ಆದ ಬಳಿಕ ರಾಜ್ಯಾದ್ಯಂತ ಕೋಟ್ಯಾಂತರ ಅಭಿಮಾನಿಗಳು ರಸ್ತೆಗಳಿದು ಸಂಭ್ರಮಾಚರಣೆ ನಡೆಸಿದರು. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಗಳಾಗಿದ್ದವು. ಹೀಗಾಗಿ ಈ ಬಾರಿ ಆ ರೀತಿಯ ಘಟನೆಗಳು ನಡೆಯುವುದನ್ನು ತಡೆಯುವ ಸಲುವಾಗಿ ರಾಜ್ಯದಲ್ಲಿ ಬಿಗ್ ಬಂದೋಬಸ್ತ್ ಮಾಡಲಾಗಿತ್ತು. ಹೀಗಾಗಿ ಈ ಬಾರಿ ರಾಜ್ಯದಲ್ಲಿ ಆ ರೀತಿಯ ಅಹಿತಕರ ಘಟನೆಗಳು ಯಾವು ನಡೆಯಲಿಲ್ಲ. ಆದರೆ ಪಕ್ಕದ ರಾಜ್ಯ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಆರ್​ಸಿಬಿ ಫ್ಯಾನ್ಸ್​ಗಳ ಅತಿರೇಕದಿಂದಾಗಿ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ. ಮಾತ್ರವಲ್ಲದೆ ಅಭಿಮಾನಿಗಳ ಸಂಭ್ರಮಾಚರಣೆ ಹಿಂಸಾತ್ಮಕವಾಗಿ ತಿರುಗಿ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಕಿಟಕಿ ಗ್ಲಾಸ್​ಗಳನ್ನು ಧ್ವಂಸಗೊಳಿಸಲಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಆರ್‌ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಬೆಂಗಳೂರು ತಂಡ ಸತತ ಎರಡನೇ ವರ್ಷ ಐಪಿಎಲ್ ಟ್ರೋಫಿ ಗೆದ್ದ ನಂತರ ದೇಶಾದ್ಯಂತ ಆರ್‌ಸಿಬಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಕರ್ನೂಲ್ ನಗರದಲ್ಲಿಯೂ ಸಹ, ನೂರಾರು ಯುವಕರು ಮತ್ತು ಅಭಿಮಾನಿಗಳು ಭಾನುವಾರ ಮಧ್ಯರಾತ್ರಿ ಬ್ಯಾನರ್‌ಗಳನ್ನು ಹಿಡಿದು ರಸ್ತೆಗಳಿಗೆ ಇಳಿದಿದ್ದರು. ಆದರೆ, ಈ ಸಂತೋಷ ಹೆಚ್ಚು ಕಾಲ ಉಳಿಯಲಿಲ್ಲ.

ಖಾಸಗಿ ಬಸ್ ಮೇಲೆ ಕಲ್ಲು ತೂರಾಟ

ನಗರದ ರಾಜು ವಿಹಾರ್ ಸೆಂಟರ್‌ಗೆ ಆಗಮಿಸಿದ ಅಭಿಮಾನಿಗಳ ದೊಡ್ಡ ಗುಂಪು ಇದ್ದಕ್ಕಿದ್ದಂತೆ ರಸ್ತೆ ತಡೆದು ಸಂಭ್ರಮಾಚರಣೆಯಲ್ಲಿ ಮೊಳಗಿತು. ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸುತ್ತಾ ಘೋಷಣೆಗಳನ್ನು ಕೂಗಿದರು. ಇದು ಸಾಮಾನ್ಯ ಪ್ರಯಾಣಿಕರು ಮತ್ತು ವಾಹನ ಚಾಲಕರಿಗೆ ತೀವ್ರ ತೊಂದರೆಯನ್ನುಂಟುಮಾಡಿತು. ಈ ಸಂಭ್ರಮಾಚರಣೆ ಗದ್ದಲಕ್ಕೆ ತಿರುಗುತ್ತಿದ್ದಂತೆ, ಇದ್ದಕ್ಕಿದ್ದಂತೆ ಕಾನೂನು ಸುವ್ಯವಸ್ಥೆ ಹದಗೆಡಲಾರಂಭಿಸಿತು. ಇದೇ ವೇಳೆ ಕೆಲವು ಅಪರಿಚಿತ ದುಷ್ಕರ್ಮಿಗಳು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಖಾಸಗಿ ಸಾರಿಗೆ ಬಸ್ ಮೇಲೆ ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆಸಿ ವಿಧ್ವಂಸಕ ಕೃತ್ಯ ಎಸಗಿದರು.

ದಾಳಿಯಲ್ಲಿ ಬಸ್ಸಿನ ಕಿಟಕಿ ಗ್ಲಾಸ್​ಗಳು ಸಂಪೂರ್ಣವಾಗಿ ಪುಡಿಪುಡಿಯಾದವು. ಇದರಿಂದ ಮಧ್ಯರಾತ್ರಿ ತಮ್ಮ ಆಸನಗಳಲ್ಲಿ ಮಲಗಿದ್ದ ಪ್ರಯಾಣಿಕರು ಹಠಾತ್ ದಾಳಿಯಿಂದ ಆಘಾತಕ್ಕೊಳಗಾಗಿ ಜೋರಾಗಿ ಕಿರುಚಾಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಕರ್ನೂಲ್ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಭಿಮಾನಿಗಳ ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿದ ನಂತರ ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಪುಟ್ಟ ಹಳ್ಳಿಯ ಹೈಟೆಕ್ ಗ್ರಂಥಾಲಯ: ಏನೇನಿದೆ ಗೊತ್ತಾ?

Source link

Chanakya Niti: ಈ ಐದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡುವುದು ತರವಲ್ಲ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಕೆಲವು ಸಂಗತಿಗಳನ್ನು ವಿವರಿಸಿದ್ದಾರೆ.  ನಾವು ಕೆಲವೊಮ್ಮೆ ತಾಳ್ಮೆಯನ್ನು ವಹಿಸದೆ  ಆತುರದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಇದರಿಂದಾಗಿ ಭವಿಷ್ಯದಲ್ಲಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಜೊತೆಗೆ ಈ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ, ಕೆಲಸಗಳನ್ನು ಮಾಡುವಾಗ ತುಂಬಾನೇ ತಾಳ್ಮೆಯನ್ನು ವಹಿಸಬೇಕು, ಚಿಂತಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಭವಿಷ್ಯವೇ ಹಾಳಾಗುತ್ತದೆ ಎಂದು ಎಂದಿದ್ದಾರೆ. ಹಾಗಿದ್ರೆ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡಬಾರದು ಎಂಬುದನ್ನು ನೋಡೋಣ ಬನ್ನಿ.

ಈ ವಿಚಾರಗಳ ಬಗ್ಗೆ ಆತುರ ಬೇಡ:

ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಬೇಡ: ನಿಮ್ಮ ಜೀವನದಲ್ಲಿ ಉದ್ಯೋಗ, ವೃತ್ತಿ ಅಥವಾ ಜೀವನ ಸಂಗಾತಿಯ ಆಯ್ಕೆ, ಹೊಸ ವ್ಯವಹಾರವನ್ನು ಪ್ರಾರಂಭಿಸುವಂತಹ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ  ಆತುರಪಡಬಾರದು ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಪೂರ್ಣ ಮಾಹಿತಿಯಿಲ್ಲದ ಮತ್ತು ಯೋಚಿಸದೆ ತೆಗೆದುಕೊಳ್ಳುವ ನಿರ್ಧಾರವು ಭವಿಷ್ಯದಲ್ಲಿ ದೊಡ್ಡ ಸಮಸ್ಯೆಯನ್ನು ಉಂಟುಮಾಡಬಹುದು. ಹಾಗಾಗಿ ಈ ವಿಷಯಗಳಿಗೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ತೆಗೆದುಕೊಳ್ಳುವಾಗ, ಪ್ರತಿಯೊಂದು ಅಂಶದ ಬಗ್ಗೆಯೂ ಎಚ್ಚರಿಕೆ ವಹಿಸುವುದು ಅತ್ಯಗತ್ಯ.

ಸಂಬಂಧಗಳನ್ನು ಮಾಡುವಾಗ ಮತ್ತು ಮುರಿಯುವಾಗ ಆತುರ ಬೇಡ: ಚಾಣಕ್ಯ ನೀತಿಯ ಪ್ರಕಾರ, ಸ್ನೇಹಿತರನ್ನು ಮಾಡಿಕೊಳ್ಳುವಾಗ, ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಮತ್ತು ಸಂಬಂಧವನ್ನು ಮುರಿಯುವುದು ಇವೆಲ್ಲವೂ ತುಂಬಾ ಸೂಕ್ಷ್ಮ ವಿಷಯ. ಇಂತಹ ವಿಚಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ, ಸಂಬಂಧಗಳ ವಿಷಯಕ್ಕೆ ಬಂದಾಗ, ಯಾವಾಗಲೂ ತಾಳ್ಮೆ ಮತ್ತು ತಿಳುವಳಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಹಣಕ್ಕೆ ಸಂಬಂಧಿಸಿದ ವಹಿವಾಟುಗಳ ಬಗ್ಗೆ ಆತುರ ಬೇಡ: ಹಣದ ವಿಚಅರದ  ಬಗ್ಗೆ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಒಂದು ಸ್ಥಳದಲ್ಲಿ ಹೂಡಿಕೆ ಮಾಡುವುದಾಗಲಿ ಅಥವಾ ದೊಡ್ಡ ವಸ್ತುಗಳನ್ನು ಖರೀದಿ ಮಾಡುವುದಾಗಲಿ ಇಂತಹ ವಿಚಾರಗಳಲ್ಲಿ ನೀವು ಯೋಚಿಸದೆ ನಿರ್ಧಾರ ತೆಗೆದುಕೊಂಡರೆ, ಅದು ಆರ್ಥಿಕ  ನಷ್ಟಕ್ಕೆ, ಆರ್ಥಿಕ ಸಮಸ್ಯೆಗಳು ಉದ್ಭವಿಸಲು ಕಾರಣವಾಗಬಹುದು. ಹಾಗಾಗಿ ಹಣದ ವಿಚಾರದಲ್ಲಿ ಯಾವಾಗಲೂ ಚಿಂತನಶೀಲ ನಿರ್ಧಾರಗಳನ್ನು ತೆಗೆದುಕೊಳ್ಳುವುದು ತುಂಬಾನೇ ಮುಖ್ಯ.

ಇದನ್ನೂ ಓದಿ:  ತಪ್ಪುಗಳು ವ್ಯಕ್ತಿಯ ಜೀವನವನ್ನು ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಕೋಪದಲ್ಲಿ ಪ್ರತಿಕ್ರಿಯಿಸುವುದು: ಕೋಪವು ವ್ಯಕ್ತಿಯನ್ನು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಒಂದು ಪ್ರಚೋದನೆಯಾಗಿದೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ.  ಕೋಪದಲ್ಲಿ ಮಾತನಾಡುವ ಮಾತುಗಳು ಮತ್ತು ಮಾಡುವ ಕ್ರಿಯೆಗಳು ನಿಮ್ಮ ಸಂಬಂಧವನ್ನು ಮಾತ್ರವಲ್ಲದೆ ನಿಮ್ಮ ಸ್ವಾಭಿಮಾನವನ್ನೂ ಹಾಳುಮಾಡುತ್ತವೆ. ಹಾಗಾಗಿ ನೀವು ಕೋಪಗೊಂಡಾಗ ತಕ್ಷಣ ಪ್ರತಿಕ್ರಿಯಿಸುವ ಬದಲು ತಾಳ್ಮೆಯಿಂದ ವರ್ತಿಸಿ.

ಯಾರನ್ನಾದರೂ ನಂಬುವುದು: ಆಚಾರ್ಯ ಚಾಣಕ್ಯರ ಪ್ರಕಾರ, ನೀವು ಭೇಟಿಯಾಗುವ ಪ್ರತಿಯೊಬ್ಬ ವ್ಯಕ್ತಿಯೂ ನಮ್ಮ ನಂಬಿಕೆಗೆ ಅರ್ಹರಲ್ಲ. ನೀವು ಯಾರನ್ನಾದರೂ ಆತುರದಿಂದ ನಂಬಿದರೆ, ಭವಿಷ್ಯದಲ್ಲಿ ನೀವು ಮೋಸ ಹೋಗಬಹುದು. ಯಾರನ್ನಾದರೂ ನಂಬುವ ಮೊದಲು ಅವರ ನಡವಳಿಕೆ ಮತ್ತು ಅವರ ಉದ್ದೇಶಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೂನ್​ನಲ್ಲಿ ಪ್ಯಾನ್ ಕಾರ್ಡ್, ಯುಪಿಐ, ಅಡ್ವಾನ್ಸ್ ಟ್ಯಾಕ್ಸ್ ಇತ್ಯಾದಿ ಪ್ರಮುಖ ಬದಲಾವಣೆಗಳನ್ನು ಗಮನಿಸಿ

ನವದೆಹಲಿ, ಜೂನ್ 1: ಹೊಸ ತಿಂಗಳು ಆರಂಭವಾಗುತ್ತಿದ್ದಂತೆ ದೇಶದಲ್ಲಿ ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುವ ಹಲವು ಪ್ರಮುಖ ಆರ್ಥಿಕ ಮತ್ತು ಬ್ಯಾಂಕಿಂಗ್ ನಿಯಮಗಳು (Financial and Banking rules) ಬದಲಾಗಿವೆ. ಆದಾಯ ತೆರಿಗೆ ಸಲ್ಲಿಕೆದಾರರಿಂದ ಹಿಡಿದು ಸಾಮಾನ್ಯ ಯುಪಿಐ (UPI) ಬಳಕೆದಾರರವರೆಗೆ ಪ್ರತಿಯೊಬ್ಬರೂ ತಿಳಿಯಲೇಬೇಕಾದ ಪ್ರಮುಖ 5 ಬದಲಾವಣೆಗಳ ವಿವರ ಇಲ್ಲಿದೆ:

ಪ್ಯಾನ್ ಕಾರ್ಡ್ ನಿಯಮ ಸರಳೀಕರಣ

ಕೇಂದ್ರ ಸರ್ಕಾರವು ಪ್ಯಾನ್ ಕಾರ್ಡ್ (PAN Card) ವಿತರಣಾ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲು ಮತ್ತು ಸುಲಭಗೊಳಿಸಲು ಹೊಸ ನಿಯಮವನ್ನು ತಂದಿದೆ. ಇನ್ಮುಂದೆ ಹೊಸ ಪ್ಯಾನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವಾಗ ಅಥವಾ ಅದರಲ್ಲಿ ತಿದ್ದುಪಡಿ (Correction) ಮಾಡುವಾಗ ಅನಗತ್ಯ ವಿಳಂಬ ತಪ್ಪಿಸಲು ತಂತ್ರಜ್ಞಾನ ಆಧಾರಿತ ಸ್ವಯಂಚಾಲಿತ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದರಿಂದಾಗಿ ಅರ್ಜಿದಾರರು ಕೆಲವೇ ಗಂಟೆಗಳಲ್ಲಿ ತಮ್ಮ ಇ-ಪ್ಯಾನ್ (e-PAN) ಪಡೆಯಲು ಸಾಧ್ಯವಾಗುತ್ತದೆ.

ಮುಂಗಡ ತೆರಿಗೆ ಪಾವತಿಗೆ ಜೂನ್ 15 ಕೊನೆಯ ದಿನ

ಆದಾಯ ತೆರಿಗೆ ಪಾವತಿದಾರರಿಗೆ (Taxpayers) ಪ್ರಸಕ್ತ ಹಣಕಾಸು ವರ್ಷದ (FY 2026-27) ಮೊದಲ ಕಂತಿನ ಮುಂಗಡ ತೆರಿಗೆಯನ್ನು (Advance Tax) ಪಾವತಿಸಲು ಜೂನ್ 15, 2026 ಕೊನೆಯ ದಿನವಾಗಿದೆ.

ಯಾರ ವಾರ್ಷಿಕ ಅಂದಾಜು ಒಟ್ಟು ತೆರಿಗೆ ಬಾಧ್ಯತೆಯು ₹10,000 ಅಥವಾ ಅದಕ್ಕಿಂತ ಹೆಚ್ಚಿರುತ್ತದೆಯೋ, ಅವರು ಜೂನ್ 15 ರೊಳಗೆ ತಮ್ಮ ಒಟ್ಟು ತೆರಿಗೆಯ ಕನಿಷ್ಠ ಶೇಕಡಾ 15 ರಷ್ಟನ್ನು ಮುಂಗಡ ತೆರಿಗೆಯಾಗಿ ಪಾವತಿಸುವುದು ಕಡ್ಡಾಯವಾಗಿದೆ.

ನಿಗದಿತ ದಿನಾಂಕದೊಳಗೆ ಪಾವತಿಸದಿದ್ದರೆ ಮಾಸಿಕ ಶೇ. 1 ರಷ್ಟು ಬಡ್ಡಿ (Interest) ವಿಧಿಸಲಾಗುತ್ತದೆ.

ಇದನ್ನೂ ಓದಿ: ಇಂದಿನಿಂದ ಭಾರತ-ಓಮನ್ ವ್ಯಾಪಾರ ಒಪ್ಪಂದ ಜಾರಿಯಲ್ಲಿ; ಭಾರತಕ್ಕೇನು ಲಾಭ, ಒಪ್ಪಂದ ಮುಖ್ಯಾಂಶಗಳೇನು? ಇಲ್ಲಿದೆ ಮಾಹಿತಿ

ಯುಪಿಐ ಪಾವತಿಯಲ್ಲಿ ಹೊಸ ಸುರಕ್ಷತಾ ಕ್ರಮಗಳು

ಡಿಜಿಟಲ್ ವಂಚನೆಗಳನ್ನು ತಡೆಗಟ್ಟಲು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಯುಪಿಐ ವಹಿವಾಟುಗಳಲ್ಲಿ ಹೊಸ ಅಪ್‌ಡೇಟ್ ತಂದಿದೆ.

ಇನ್ಮುಂದೆ ದೊಡ್ಡ ಮೊತ್ತದ ಹಣವನ್ನು ಅಪರಿಚಿತ ಖಾತೆಗಳಿಗೆ ವರ್ಗಾಯಿಸುವಾಗ ಹೆಚ್ಚುವರಿ ಭದ್ರತಾ ಹಂತಗಳು (Multi-factor authentication) ಇರಲಿವೆ.

ಆನ್‌ಲೈನ್ ಗೇಮಿಂಗ್ ಮತ್ತು ಹೂಡಿಕೆ ಆಪ್‌ಗಳ ಮೂಲಕ ನಡೆಯುವ ಯುಪಿಐ ವಹಿವಾಟುಗಳ ಮೇಲಿನ ನಿಗಾವನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಬಾಡಿಗೆದಾರರಿಗೆ ಹೆಚ್‌ಆರ್‌ಎ ವಿನಾಯಿತಿ ರಿಲೀಫ್

ಉದ್ಯೋಗಿಗಳಿಗೆ ಮನೆ ಬಾಡಿಗೆ ಭತ್ಯೆ (HRA – House Rent Allowance) ಕ್ಲೈಮ್ ಮಾಡುವ ಪ್ರಕ್ರಿಯೆಯಲ್ಲಿ ಆದಾಯ ತೆರಿಗೆ ಇಲಾಖೆ ಸಣ್ಣ ಸಡಿಲಿಕೆ ನೀಡಿದೆ. ನಕಲಿ ಬಾಡಿಗೆ ರಶೀದಿಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ನಿಯಮಗಳಿದ್ದರೂ, ನೈಜವಾಗಿ ಬಾಡಿಗೆ ಮನೆಯಲ್ಲಿರುವ ಉದ್ಯೋಗಿಗಳಿಗೆ ಐಟಿ ರಿಟರ್ನ್ಸ್ (ITR) ಸಲ್ಲಿಕೆ ವೇಳೆ ಹೆಚ್‌ಆರ್‌ಎ ವಿನಾಯಿತಿ ಪಡೆಯುವ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸಲಾಗಿದೆ.

ಇದನ್ನೂ ಓದಿ: ಮೇ ತಿಂಗಳಲ್ಲಿ ಭರ್ಜರಿ ಜಿಎಸ್​ಟಿ ಸಂಗ್ರಹ; 1.94 ಲಕ್ಷ ಕೋಟಿ ರೂಗೆ ಏರಿದ ತೆರಿಗೆ ಆದಾಯ

ಇಪಿಎಫ್‌ಒ (EPFO) ಖಾತೆದಾರರಿಗೆ ಎಚ್ಚರಿಕೆ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ತನ್ನ ಚಂದಾದಾರರಿಗೆ ಇಪಿಎಫ್ ಖಾತೆಗೆ ಬ್ಯಾಂಕ್ ಖಾತೆ ವಿವರಗಳನ್ನು ಮತ್ತು ಇತರ ಕಡ್ಡಾಯ ಕೆವೈಸಿ (KYC) ದಾಖಲೆಗಳನ್ನು ಅಪ್‌ಡೇಟ್ ಮಾಡಲು ಸೂಚಿಸಿದೆ. ವಿವರಗಳು ಹೊಂದಾಣಿಕೆಯಾಗದಿದ್ದರೆ ಜೂನ್ ತಿಂಗಳಿನಿಂದ ಪಿಎಫ್ ಹಣ ಹಿಂಪಡೆಯುವಿಕೆ (PF Withdrawal) ಅಥವಾ ಕ್ಲೈಮ್‌ಗಳು ತಿರಸ್ಕೃತಗೊಳ್ಳುವ ಸಾಧ್ಯತೆ ಇರುತ್ತದೆ.

ಜೂನ್ ತಿಂಗಳ ಈ ಎಲ್ಲಾ ಆರ್ಥಿಕ ಬದಲಾವಣೆಗಳು ತೆರಿಗೆ ಪಾವತಿಯನ್ನು ಉತ್ತೇಜಿಸಲು ಮತ್ತು ಆನ್‌ಲೈನ್ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶವನ್ನು ಹೊಂದಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link