ಹಾವೇರಿ, (ಮಾರ್ಚ್ 26): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Davanagere South By Election) ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್‌ಗೆ (Congress) ಮುಸ್ಲಿಂ ಸಮುದಾಯದ ಮತಗಳು ಕೈತಪ್ಪುವ ಭಯ ಶುರುವಾಗಿದೆ. ಯಾಕಂದ್ರೆ, ಟಿಕೆಟ್ ಕೈತಪ್ಪಿದ್ದರಿಂದ ಮುಸ್ಲಿಂ ನಾಯಕರು ಬಂಡಾಯ ಎದ್ದಿದ್ದು, ಇದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ಗೆ ಆತಂಕಕ್ಕೆ ಕಾರಣವಾಗಿದೆ. ಇದರ ಮಧ್ಯೆ ಮತ್ತೊಂದೆಡೆ ಶ್ರೀಶೈಲ ಜಗದ್ಗುರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆ ಬೆಂಬಲಿಸುವಂತೆ ಭಕ್ತರಿಗೆ ಕರೆ ಕೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಆನೆಬಲ ಬಂದಂತಾಗಿದೆ.
ಹಾವೇರಿಯ ರಾಣೇಬೆನ್ನೂರು ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ಮಾತನಾಡಿರುವ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ, ಸಮಾಜದ ಯಾವುದೇ ವ್ಯಕ್ತಿ ಯಾವುದೇ ಪಕ್ಷದಿಂದ ಸ್ಪರ್ಧಿಸಲಿ. ಸಮಾಜದವರೆಲ್ಲರೂ ಬೆಂಬಲಿಸೋದು ಅವರ ಆದ್ಯ ಕರ್ತವ್ಯ. ಶಾಮನೂರು ಶಿವಶಂಕರಪ್ಪ ಸಮಾಜದ ಒಗ್ಗಟ್ಟಿಗೆ ಶ್ರಮಿಸಿದ್ದಾರೆ. ಅಖಿಲ ಭಾರತ ವೀರಶೈವಸಂಘವನ್ನು ಸುಧೀರ್ಘವಾಗಿ ಮುನ್ನಡೆಸಿದ್ದಾರೆ. ಅವರ ಮೊಮ್ಮಗ ಈಗ ಚುನಾವಣಾ ಎದುರಿಸ್ತಿದ್ದಾರೆ. ಅವರಿಗೆ ಬೆಂಬಲಿಸಬೇಕು ಅಂತೇಳಿ ಸಮಾಜದವರಿಗೆ ಹೇಳಲು ಬಯಸ್ತೀನಿ ಎಂದು ಕರೆ ನೀಡಿದರು.
ಚೆನ್ನೈ, ಮಾರ್ಚ್ 26: ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಓಡಾಡುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
2026 ರ ಐಪಿಎಲ್ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಅದರಂತೆ ಲೀಗ್ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿದ್ದು, ಇದರ ನಡುವೆ ಆರ್ಸಿಬಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.
ಎಲ್ಲರಿಗೂ ತಿಳಿದಿರುವಂತೆ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಬಾರಿಗೆ ಟ್ರೋಫಿ ಎತ್ತಿಹಿಡಿಯಲು ಪ್ರಮುಖ ಕಾರಣ, ತಂಡದ ಬಲಿಷ್ಠ ಬೌಲಿಂಗ್. ಅನುಭವಿಗಳಿಂದ ಕೂಡಿದ್ದ ಈ ವಿಭಾಗ ಆರ್ಸಿಬಿ ಗೆಲುವಿನ ಪ್ರಮುಖ ಪಾತ್ರವಹಿಸಿತ್ತು. ಆದಾಗ್ಯೂ 2026 ರ ಸೀಸನ್ ಆರಂಭಕ್ಕೂ ಮುನ್ನ ಪ್ರಮುಖ ವೇಗಿಯ ಅಲಭ್ಯತೆ ತಂಡದ ತಲೆನೋವು ಹೆಚ್ಚಿಸಿತ್ತು.
ವಾಸ್ತವವಾಗಿ ಆಸ್ಟ್ರೇಲಿಯಾದ ಅನುಭವಿ ವೇಗದ ಬೌಲರ್ ಜೋಶ್ ಹೇಜಲ್ವುಡ್, ಇಂಜುರಿಯಿಂದ ಚೇತರಿಸಿಕೊಳ್ಳದ ಕಾರಣ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಂಡಿರಲಿಲ್ಲ. ಈ ಮೊದಲು ವರದಿಯಾದಂತೆ ಹೇಜಲ್ವುಡ್, ಐಪಿಎಲ್ನ ಆರಂಭಿಕ ಪಂದ್ಯಗಳನ್ನು ಆಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಮೊದಲ ಪಂದ್ಯಕ್ಕೂ ಮುನ್ನ ಹೇಜಲ್ವುಡ್ ತಂಡವನ್ನು ಸೇರಿಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ, ಹೇಜಲ್ವುಡ್ ಆಗಮನವನ್ನು ಖಚಿತಪಡಿಸಿದೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹೇಜಲ್ವುಡ್ ತಂಡ ಕೂಡಿಕೊಂಡಿರುವ ಬಗ್ಗೆ ಫ್ರಾಂಚೈಸಿ ಸುಳಿವು ನೀಡಿದೆ. ಆದಾಗ್ಯೂ ಇದೀಗ ತಂಡವನ್ನು ಕೂಡಿಕೊಂಡಿರುವ ಹೇಜಲ್ವುಡ್ ಮೊದಲ ಎರಡು ಪಂದ್ಯಗಳಲ್ಲಿ ಆಡುವುದು ಕಷ್ಟಕರವಾಗಿದೆ.
ಗಾಯದಿಂದಾಗಿ ಬಹಳ ದಿನಗಳಿಂದ ಕ್ರಿಕೆಟ್ನಿಂದ ದೂರ ಉಳಿದಿರುವ ಹೇಜಲ್ವುಡ್, ಆಶಸ್ ಟೆಸ್ಟ್ ಸರಣಿ ಮತ್ತು ಟಿ20 ವಿಶ್ವಕಪ್ನಿಂದಲೂ ಹೊರಗುಳಿದಿದ್ದರು. ಆದರೀಗ ಚೇತರಿಸಿಕೊಂಡಿರುವ ಹೇಜಲ್ವುಡ್ ಐಪಿಎಲ್ನ ಮುಂದಿನ ಪಂದ್ಯಗಳಲ್ಲಿ ಆಡುವುದು ಖಚಿತ. ಆದರೆ ಮೊದಲೆರಡು ಪಂದ್ಯಗಳಲ್ಲಿ ಹೇಜಲ್ವುಡ್ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಮೂಡಿದೆ.
ಪ್ರಸ್ತುತ ತಂಡದಲ್ಲಿ ಹೇಜಲ್ವುಡ್ ಬದಲಿಗೆ ನ್ಯೂಜಿಲೆಂಡ್ ವೇಗಿ ಜಾಕೋಬ್ ಡಫಿ ಇದ್ದಾರೆ. ಹೀಗಾಗಿ ಹೇಜಲ್ವುಡ್ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯುವವರೆಗೆ ಡಫಿ ತಂಡದಲ್ಲಿ ಆಡುವ ಸಾಧ್ಯತೆಗಳಿವೆ. ಆದಾಗ್ಯೂ ಹೇಜಲ್ವುಡ್ ಜೊತೆಗೆ ಯಶ್ ದಯಾಳ್ ಕೂಡ ತಂಡದಲ್ಲಿ ಇಲ್ಲದಿರುವುದು ಆರ್ಸಿಬಿಯ ಬೌಲಿಂಗ್ ವಿಭಾಗದ ಶಕ್ತಿಯನ್ನು ಕೊಂಚ ತಗ್ಗಿಸಿದೆ ಎನ್ನಬಹುದು. ಹೀಗಿರುವಾಗ ಮೊದಲ ಪಂದ್ಯದಲ್ಲಿ ತಂಡ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.
ಬೆಂಗಳೂರು, (ಮಾರ್ಚ್ 26): ಶಾಲೆ ದಾಖಲಿಗೆ ಮಕ್ಕಳಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಮಾರ್ಚ್ 26)ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಯುಕೆಜಿ ಮುಗಿಸಿದರೂ 6 ವರ್ಷ ಪೂರ್ಣಗೊಂಡಿಲ್ಲವೆಂದು ಚಿಂತೆಯಲ್ಲಿದ್ದ ಪೋಷಕರು ನಿರಾಳರಾಗಿದ್ದಾರೆ.
ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಪ್ರಸಕ್ತ ವರ್ಷಕ್ಕೆ ಅನ್ವಯವಾಗುವಂತೆ ಮಕ್ಕಳ ಶಾಲಾ ಪ್ರವೇಶಕ್ಕೆ ನಿಗದಿಪಡಿಸಿದ್ದ 6 ವರ್ಷಗಳ ವಯೋಮಿತಿಗೆ 60 ದಿನಗಳ ಕಾಲ ವಿನಾಯಿತಿ ನೀಡಲಾಗಿದೆ. ಪ್ರತಿ ವರ್ಷ ಪೋಷಕರಿಗೆ ಈ ಬಗ್ಗೆ ಗೊಂದಲವಾಗುತ್ತಿದೆ. ಎಲ್‌ಕೆಜಿ ಮತ್ತು ಯುಕೆಜಿ ಸೇರ್ಪಡೆಗೆ ಸೂಕ್ತ ವಯೋಮಿತಿ ಕಾನೂನು ಇಲ್ಲದಿರುವುದು ಇದಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಎಲ್‌ಕೆಜಿ, ಯುಕೆಜಿ ಸೇರ್ಪಡೆಗೆ ಸಂಬಂಧಿಸಿದಂತೆ ಕಾನೂನು ಜಾರಿ ಮಾಡುತ್ತೇವೆ. ಈ ಬಗ್ಗೆ ಅಗತ್ಯ ಸಭೆ ನಡೆಸಲಾಗುತ್ತದೆ ಹೇಳಿದರು.
ಪ್ರಥಮ್ ಅವರು ನಟಿಸಿದ ‘ಫಸ್ಟ್ ನೈಟ್ ವಿತ್ ದೆವ್ವ’ (First Night With Devva) ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈ ಸಿನಿಮಾದ ಶೀರ್ಷಿಕೆಗೆ ‘ಸುಬ್ಬ ಸುಬ್ಬಿ ಹಾರರ್ ಸ್ಟೋರಿ’ ಎಂಬ ಟ್ಯಾಗ್ ಲೈನ್ ಇದೆ. ಈ ಕಥೆ ಯಾರಿಗಾದರೂ ಲಿಂಕ್ ಆಗುತ್ತಾ ಎಂಬ ಅನುಮಾನ ಮೂಡಿದೆ. ಆ ಬಗ್ಗೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ‘ಮೊದಲ ದೃಶ್ಯದಲ್ಲೇ ಮದುವೆ. ಮದುವೆ ಆಗಿ 10 ನಿಮಿಷದ ಬಳಿಕ ನನ್ನ ಹೆಂಡತಿ ಮೈ ಮೇಲೆ ದೆವ್ವ ಇದೆ ಎಂಬುದು ಗೊತ್ತಾಗುತ್ತದೆ. ಹನಿಮೂನ್ ಆಗುತ್ತಾ ಅಥವಾ ಆ ದೆವ್ವ ಸೇಡು ತೀರಿಸಿಕೊಳ್ಳುತ್ತಾ ಎಂಬುದೇ ಕಥೆ. ಕಥೆಗೆ ಸೂಕ್ತ ಎಂಬ ಕಾರಣಕ್ಕೆ ಸುಬ್ಬ ಸುಬ್ಬಿ ಅಂತ ಇಟ್ಟಿದ್ದೇವೆ. ಕರ್ನಾಟಕದಲ್ಲಿ 7 ಕೋಟಿ ಜನರು ಇದ್ದಾರೆ. ಒಬ್ಬರ ಕಥೆ, ಮಾತು ಇನ್ನೊಬ್ಬರಿಗೆ ಲಿಂಕ್ ಆಗುತ್ತದೆ’ ಎಂದು ಪ್ರಥಮ್ (Pratham) ಅವರು ಹೇಳಿದ್ದಾರೆ.
ಆನೇಕಲ್, ಮಾರ್ಚ್ 26: ಬಾವನಿಂದ ಬಾಮೈದನ ಕೊಲೆ ನಡೆದಿರುವಂತಹ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಶ್ರೀನಿವಾಸ್ನಿಂದ ರಂಜಿತ್ (24)ನ ಕೊಲೆ(kill) ಮಾಡಲಾಗಿದೆ. ಆಸಾಮಿ ಕೊಲೆ ಮಾಡಿದಲ್ಲದೇ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸ್ಥಳಕ್ಕೆ ಬನ್ನೇರುಘಟ್ಟ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಡೆದಿದ್ದೇನು?
ರಂಜಿತ್ನ ಸ್ವಂತ ಅಕ್ಕ ಪವಿತ್ರರನ್ನು ಶ್ರೀನಿವಾಸ್ ಮದುವೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ ತಂಗಿ ಕೋಮಲ್ ಜೊತೆಗೆ ರಂಜಿತ್ ಸಂಬಂಧ ಹೊಂದಿದ್ದ. ಕೋಮಲ್ನ್ನು ಬೇರೊಬ್ಬರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಗಂಡನನ್ನ ಬಿಟ್ಟು ರಂಜಿತ್ ಜೊತೆಗೆ ಪರಾರಿಯಾಗಿದ್ದಳು. ಈ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿತ್ತು.
ಶ್ರೀನಿವಾಸ್ ರಂಜಿತ್ನ ಕರೆದು ವಾರ್ನಿಂಗ್ ಕೂಡ ಮಾಡಿದ್ದ. ಇದೆಲ್ಲದರಿಂದ ಕೋಪಗೊಂಡ ಶ್ರೀನಿವಾಸ್ ರಂಜಿತ್ ಮೇಲೆ ಸೇಡು ಬೆಳೆಸಿಕೊಂಡಿದ್ದ. ಇಂದು ಸಂಜೆ ವೇಳೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿಯ ನಿರ್ಜನ ಪ್ರದೇಶಕ್ಕೆ ರಂಜಿತ್ನನ್ನು ಕರೆತಂದಿದ್ದ ಶ್ರೀನಿವಾಸ್ ಕೊಲೆ ಮಾಡಿದ್ದಾನೆ. ಸದ್ಯ ಬನ್ನೇರುಘಟ್ಟ ಪೊಲೀಸರಿಂದ ಆರೋಪಿ ಶ್ರೀನಿವಾಸನನ್ನು ವಶಕ್ಕೆ ಪಡೆಯಲಾಗಿದೆ.
ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಹೇಳಿದ್ದಿಷ್ಟು
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಬಗ್ಗೆ ಬನ್ನೇರುಘಟ್ಟ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಮಾಹಿತಿ ನೀಡಿದ್ದು, ಸೋಕೋ ಟೀಮ್ನಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ. ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮೃತದೇಹದ ಜೊತೆ ಕಬ್ಬಿಣದ ರಾಡ್ ಪತ್ತೆ ಆಗಿದೆ ಎಂದರು.
ಕೊಲೆ ಬಳಿಕ ಮೃತದೇಹ ಕಾರಿನ ಡಿಕ್ಕಿಗೆ ಹಾಕಲಾಗಿದೆ. ರಂಜಿತ್ನ ಕೊಲೆ ಮಾಡಿದ ಶ್ರೀನಿವಾಸ್ ನೇರವಾಗಿ ಬನ್ನೇರುಘಟ್ಟ ಠಾಣೆಗೆ ಬಂದಿದ್ದಾನೆ ಎಂದು ಬನ್ನೇರುಘಟ್ಟ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಮಾಹಿತಿ ನೀಡಿದ್ದಾರೆ.
ನವದೆಹಲಿ, ಮಾರ್ಚ್ 26: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಶುರು ಮಾಡಿದ ಯುದ್ಧದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಆಗುತ್ತಿದೆಯೋ ಸ್ಪಷ್ಟ ಇಲ್ಲ, ಆದರೆ ರಷ್ಯಾ ಮತ್ತು ಇರಾನ್ನ ಆಯಿಲ್ ಬ್ಯುಸಿನೆಸ್ ಬಹಳ ಜೋರಾಗಿ ನಡೆಯುತ್ತಿದೆ. ಎರಡೂ ದೇಶಗಳು ತೈಲ ಮಾರಾಟದಿಂದ ಸಾವಿರಾರು ಕೋಟಿ ರೂ ಲಾಭ ಮಾಡುತ್ತಿವೆ. ತಂತಮ್ಮ ಯುದ್ಧ ಮುಂದುವರಿಸಲು ಈ ದೇಶಗಳಿಗೆ ಫಂಡಿಂಗ್ ಸಿಕ್ಕಂತಾಗಿದೆ.
ವಿಶ್ವದ ಶೇ. 20ಕ್ಕಿಂತಲೂ ಹೆಚ್ಚು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವು ಈಗ ಇರಾನ್ ಬಳಿ ಇದೆ. ಈ ಕಿರು ಜಲಮಾರ್ಗದಲ್ಲಿ ಇರಾನ್ ಬಿಟ್ಟು ಬೇರೆ ದೇಶಗಳ ಹಡಗುಗಳು ಸಾಗುತ್ತಿಲ್ಲ. ಯುದ್ಧ ಶುರುವಾದಾಗಿನಿಂದ ತೈಲಕ್ಕೆ ಬಂದಿರುವ ಬೇಡಿಕೆಯು ಇರಾನ್ಗೆ ಒಳ್ಳೆಯ ಬ್ಯುಸಿನೆಸ್ ತಂದಿದೆ.
ಇರಾನ್ ಈಗ ದಿನಕ್ಕೆ 16 ಲಕ್ಷ ಬ್ಯಾರಲ್ ಕಚ್ಛಾ ತೈಲವನ್ನು ಮಾರುತ್ತಿದೆ. ಯುದ್ಧಕ್ಕೆ ಮುಂಚೆ ಇರಾನ್ಗೆ ವಿವಿಧ ನಿಷೇಧಗಳನ್ನು ಹಾಕಿದ್ದ ಅಮೆರಿಕವು ಈಗ ತೈಲ ಮಾರುವಂತೆ ಇರಾನ್ಗೆ ದುಂಬಾಲು ಬಿದ್ದಿದೆ. ಯುದ್ಧ ಮುಂದುವರಿಸಲು ಬೇಕಾದ ಫಂಡಿಂಗ್ ಅನ್ನು ಇರಾನ್ಗೆ ಸಿಗುತ್ತಿರಬಹುದು. ಇರಾನ್ನಿಂದ ಅತಿಹೆಚ್ಚು ತೈಲ ಪಡೆಯುತ್ತಿರುವುದು ಚೀನಾ.
ರಷ್ಯಾ ತೈಲಕ್ಕೆ ಬಹಳ ಡಿಮ್ಯಾಂಡ್
ಇರಾನ್ ಯುದ್ಧ ಶುರುವಾದ ಬಳಿಕ ರಷ್ಯಾ ತೈಲಕ್ಕೆ ವಿಪರೀತ ಬೇಡಿಕೆ ಬಂದಿದೆ. ರಷ್ಯನ್ ತೈಲ ಖರೀದಿಸಲು ಎಲ್ಲಾ ದೇಶಗಳಿಗೂ ಅಮೆರಿಕವೇ ಹಸಿರು ನಿಶಾನೆ ತೋರಿದೆ. ವರದಿ ಪ್ರಕಾರ ರಷ್ಯಾಗೆ ದಿನವೊಂದಕ್ಕೆ 760 ಮಿಲಿಯನ್ ಡಾಲರ್ ಆದಾಯವು ಸಿಗುತ್ತಿದೆ. ಅಂದರೆ, ತೈಲ ಮಾರಾಟದಿಂದ ರಷ್ಯಾ ದಿನಕ್ಕೆ 7,000 ಕೋಟಿ ರೂ ಹಣ ಗಳಿಸುತ್ತಿದೆ.
ಉಕ್ರೇನ್ ಯುದ್ಧ ಶುರುವಾದ ಬಳಿಕ ರಷ್ಯಾ ಮೇಲೆ ಅಮೆರಿಕ ನಿಷೇಧ ಹಾಕಿದ ಪರಿಣಾಮ ರಷ್ಯಾ ಕಡಿಮೆ ಬೆಲೆಗೆ ತೈಲ ಪೂರೈಕೆ ಮಾಡುತ್ತಿತ್ತು. ಚೀನಾ ಮತ್ತು ಭಾರತ ಹಾಗೂ ಇನ್ನೂ ಇತರ ಕೆಲ ದೇಶಗಳು ಅಗ್ಗದ ಬೆಲೆಗೆ ರಷ್ಯನ್ ತೈಲ ಪಡೆಯುತ್ತಿದ್ದವು. ಈಗ ತೈಲಕ್ಕೆ ಬೇಡಿಕೆ ಹೆಚ್ಚಿರುವುದರಿಂದ ರಷ್ಯನ್ ತೈಲ ಡಿಸ್ಕೌಂಟ್ನಲ್ಲಿ ಸಿಗುತ್ತಿಲ್ಲ. ಹೆಚ್ಚುವರಿ ಬೆಲೆಗೆ ರಷ್ಯಾ ತನ್ನ ತೈಲವನ್ನು ಮಾರುತ್ತಿದೆ. ಭಾರತಕ್ಕೆ ಈ ಹಿಂದೆ ಸಿಗುತ್ತಿದ್ದ ಡಿಸ್ಕೌಂಟ್ ಈಗ ಇಲ್ಲ. ಚೀನಾಗೆ ನೀಡಿದ್ದ ಡಿಸ್ಕೌಂಟ್ ಅರ್ಧದಷ್ಟು ಕಡಿಮೆ ಆಗಿದೆ.
ಕಾರವಾರ, ಮಾರ್ಚ್ 26: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ (Gopalakrishna Naik) ಹತ್ಯೆ ಯತ್ನ ಘಟನೆಗೆ ಸಂಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ಬಂಧಿತ ನಾಲ್ವರ ವಿಚಾರಣೆ ತೀವ್ರಗೊಂಡಿದೆ. ಈ ನಡುವೆ ಬಂಧಿತರ ಫೋಟೋ ಮತ್ತು ಓಡಾಡುವ ದೃಶ್ಯ ವೈರಲ್ ಆಗಿದ್ದು, ಎಲ್ಲರೂ ಗೋವಾ ಮೂಲದವರಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಹಾಡಹಗಲೇ ವ್ಯಕ್ತಿ ಓರ್ವನನ್ನ ಅಟ್ಟಾಡಿಸಿ ಹೊಡೆದಿರುವ ದೃಶ್ಯ ನಿಜಕ್ಕೂ ಎದೆ ಝಲ್ ಎಣಿಸುವಂತಹದು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಿನ್ನೆ ನಡೆದ ಘಟನೆ ಬೆನ್ನಲ್ಲೇ ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣವಾಗಿದೆ.
ದಶಕಗಳ ನಂತರ ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡನೋರ್ವನ ಹತ್ಯೆ ಯತ್ನದ ಘಟನೆ ನಡೆದಿದೆ. ನಿನ್ನೆ ಬೆಳಿಗ್ಗೆ ಹೇರ್ ಸಲೂನ್ಗೆ ಬಂದು ವಾಪಾಸಾಗುತ್ತಿದ್ದ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ಆರೇಳು ಜನರ ಗುಂಪು ಸುತ್ತವರಿದಿದೆ. ಅಲ್ಲದೆ ಅವರ ಹತ್ಯೆಗೆ ಪ್ರಯತ್ನಿಸಿತ್ತು. ಗೋಪಾಲರನ್ನ ರಕ್ಷಿಸಲು ಸಹೋದರ ರಾಘವೇಂದ್ರ ಮುಂದಾಗಿದ್ದರಿಂದ ಅದೃಷ್ಟವಶಾತ್ ಗೋಪಾಲ್ ಅವರು ಓಡಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಗಾಯಗೊಂಡಿರುವ ಅವರು ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾಲ್ವರ ಬಂಧನ
ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ಕಾರವಾರದ ಮಾಜಾಳಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆಯಲಾಗಿತ್ತು. ದಾಳಿಕೋರರು ಅಂಕೋಲಾದಲ್ಲಿ ಓಡಾಡಿದ ದೃಶ್ಯ ಆಯಾ ಕಡೆಗಳಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ ಬಂಧಿತರ ಫೋಟೋ ಕೂಡ ವೈರಲ್ ಆಗಿದೆ. ಬಂಧಿತ ನಾಲ್ವರು ಗೋವಾ ಮೂಲದವರಾಗಿದ್ದಾರೆ. ಜಾಕೀರ್, ನೈಜಲ್, ಸದ್ದಾಂ ಹಾಗೂ ಇರ್ಪಾನ್ ಬಂಧಿತರು. ಘಟನೆಗೆ ಸಂಬಂಧಿಸಿದಂತೆ ಎರಡು ಬೈಕ್ ಹಾಗೂ ಕಾರು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ದೀಪನ್ ಎಂ ಎನ್ ಹೇಳಿದ್ದಾರೆ.
ಬಂಧಿತರು ಗೋವಾದವರಾಗಿದ್ದು, ಓರ್ವ ಬೌನ್ಸರ್, ಇನ್ನೋರ್ವ ವೆಲ್ಡರ್, ಮತ್ತೋರ್ವ ರಿಯಲ್ ಎಸ್ಟೇಟ್ ಮತ್ತು ಇನ್ನೋರ್ವ ಡ್ರೈವರ್ ಆಗಿದ್ದಾರೆ. ಆದರೆ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ನಾಲ್ಕು ತಂಡಗಳನ್ನ ರಚನೆ ಮಾಡಿದ್ದಾರೆ. ಗೋವಾ ಸೇರಿದಂತೆ ಇತರೆಡೆ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಆಗಾಗ ಅಂಕೋಲಾಕ್ಕೆ ಬಂದು ಹೋಗುತ್ತಿದ್ದರು. ಮೂರು ದಿನಗಳ ಹಿಂದೆ ಇಲ್ಲಿನ ಅಂಕೋಲಾದಲ್ಲಿ ಬೀಡುಬಿಟ್ಟದ್ದು ನಿನ್ನೆ ಬೆಳಗಿನ ವೇಳೆ ಹತ್ಯೆಗೆ ಪ್ರಯತ್ನಿಸಿದ್ದಾರೆ. ಒಟ್ಟಿನಲ್ಲಿ ಹತ್ಯೆಗೆ ಯತ್ನಿಸಿರುವುದು ರಾಜಕೀಯ ಕಾರಣಕ್ಕಾ, ವ್ಯವಹಾರ ಸಂಬಂಧನಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಒಟ್ಟಿನಲ್ಲಿ ಹಾಡಹಗಲೇ ಅಂಕೋಲಾ ಪಟ್ಟಣದಲ್ಲಿ ನಡೆದ ಈ ದಾಳಿ ಎಲ್ಲರನ್ನ ಬೆಚ್ಚಿಬೀಳಿಸಿದೆ. ರಾಜಕೀಯದಲ್ಲಿ ಕಳೆದ ಕೆಲ ದಿನಗಳಿಂದ ಯುವ ಸಮುದಾಯದ ಸ್ನೇಹವನ್ನ ಗಳಿಸುತ್ತಿದ್ದ ಗೋಪಾಲಕೃಷ್ಣ ಅವರಿಗೆ ಸಹಿಸಲಾಗದವರು ಅಥವಾ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಕೊಂಡವರಿಂದ ಈ ಕೃತ್ಯ ನಡೆದಿದೆಯಾ ಎಂಬುದು ಗೊತ್ತಾಗಬೇಕಿದೆ. ಪೊಲೀಸರು ಪ್ರಕರಣ ಸಂಬಂಧ ತನಿಖೆಯನ್ನ ಚುರುಕುಗೊಳಿಸಿದ್ದು, ಮುಂದಿನ ದಿನಗಳಲ್ಲಿ ಯಾವ ಸಂಬಂಧ ಈ ಘಟನೆ ನಡೆದಿದೆ ಎಂಬುದು ಗೊತ್ತಾಗಲಿದೆ.
ದಾವಣಗೆರೆ , (ಮಾರ್ಚ್ 26): ದಾವಣಗೆರೆ ದಕ್ಷಿಣ ಕ್ಷೇತ್ರ (Davanagere South ) ಶಾಮನೂರು ಕುಟುಂಬದ ಭದ್ರಕೋಟೆ. ಕಳೆದ 30 ವರ್ಷಗಳಿಂದ್ಲೂ ಶಾಮನೂರು ಕುಟುಂಬದ ಕೈಯಲ್ಲಿಯೇ ಇಲ್ಲಿನ ಆಡಳಿತ. ಆದ್ರೆ ಶಾಮನೂರು ಶಿವಶಂಕರಪ್ಪನವರ ನಿಧನ ಬಳಿಕ ಈ ಕ್ಷೇತ್ರ ತೆರವಾಗಿದ್ದು, ತಂದೆಯ ಸ್ಥಾನವನ್ನ ಮಗನಿಗೆ ಕೊಡಿಸುವಲ್ಲಿ ಸಚಿವ SS ಮಲ್ಲಿಕಾರ್ಜುನ ಸಫಲರಾಗಿದ್ದಾರೆ. ಆದ್ರೆ,ನಮಗೆ ಟಿಕೆಟ್ ಕೊಡಿ ಎಂದಿದ್ದ ಮುಸ್ಲಿಂ ಸಮುದಾಯ ಕಾಂಗ್ರೆಸ್ (Congress) ವಿರುದ್ಧ ಬಂಡಾಯ ಸಾರಿದೆ. ಹೌದು..ಕೈ ಹೈಕಮಾಂಡ್ ತಮ್ಮ ಸಮುದಾಯವನ್ನ ಬಿಟ್ಟು ಶಾಮನೂರು ಕುಟುಂಬಕ್ಕೆ ಮಣೆ ಹಾಕಿರುವುದ ವಿರುದ್ಧ ಸೆಟೆದು ನಿಂತಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಹೀಗಾಗಿ ಕೈ ಪಡೆ ಕೂಡ ಬಂಡಾಯ ಶಮನದ ಸಹಜ ಪ್ರಯತ್ನ ನಡೆಸಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಸಾದಿಕ್ ಮನವೊಲಿಕೆಗೆ ಯತ್ನಿಸಿದ್ರು. ಕಳೆದ ರಾತ್ರಿ ಕರೆ ಮಾಡಿ ಮಾತನಾಡಿದ್ರು. ಆದ್ರೆ ಪೈಲ್ವಾನ್ ಮಾತ್ರ ತಮ್ಮ ಪಟ್ಟು ಸಡಿಲಿಸುತ್ತಿಲ್ಲ.
ಪೈಲ್ವಾನ್ ಮನವೊಲಿಸುವ ಯತ್ನ ವಿಫಲ
ಮುಸ್ಲಿಮರನ್ನು ಮನವೊಲಿಸಲು ಕಾಂಗ್ರೆಸ್ನ ಅಲ್ಪಸಂಖ್ಯಾತ ನಾಯಕರು ಇವತ್ತು ದಾವಣಗೆರೆಗೆ ಎಂಟ್ರಿ ಕೊಟ್ಟಿದ್ದು, ಸಾದಿಕ್ ಮನೆಗೆ ಬಂದು ಮನವೊಲಿಸಲು ಯತ್ನಿಸಿದ್ದಾರೆ. ಆದ್ರೆ ಸಾದಿಕ್ ಬೆಂಬಲಿಗರು ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ. ಹೀಗಾಗಿ ಶಾಸಕ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಬಂದ ದಾರಿಗೆ ಸುಂಕ ಇಲ್ಲ ಎನ್ನುವಂತೆ ವಾಪಸ್ ಆಗಿದ್ದಾರೆ. ಆದರೆ ಮನವೊಲಿಸುವ ತಮ್ಮ ಆತ್ಮವಿಶ್ವಾಸವನ್ನ ಮಾತ್ರ ಬಿಡುತ್ತಿಲ್ಲ. ನಾಮಪತ್ರ ವಾಪಸ್ ಪಡೆಯುವ ಅವಧಿ ಮುಗಿದರೂ ಮಾತುಕತೆ ನಡೆಸುತ್ತೇವೆ ಎಂದಿದ್ದಾರೆ.
ಮತ್ತೊಂದ್ಕಡೆ ಸಾದಿಕ್, ಕ್ಷೇತ್ರದಲ್ಲಿ ನಿರ್ಣಾಯಕವಾಗಿರೋ ಮುಸ್ಲಿಂ ಮತದಾರರು ತಮ್ಮ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಸಮುದಾಯ ನನ್ನ ಹಿಂದೆ ಇದೆ, ನಾನು ಹಿಂದೆ ಸರಿಯಲ್ಲ ಎಂದು ಮಿನಿ ಸಮರದಲ್ಲಿ ಕದನದಲ್ಲಿ ಧೂಳೆಬ್ಬಿಸಿದ್ದಾರೆ. ಇನ್ನು ಸಚಿವ ಜಮೀರ್ ಅಹ್ಮದ್ ಅವರು ಟಿಕೆಟ್ ವಿಚಾರದಲ್ಲಿ ಮುನಿಸಿಕೊಂಡಿದ್ದಾರೆ ಎನ್ನುವ ಮಾತುಗಳು ಹರಿದಾಡ್ತಿವೆ. ಈ ಕಾರಣಕ್ಕೆ ಅಂತರ ಕಾಪಾಡಿಕೊಳ್ಳುತ್ತಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ. ಇದಕ್ಕೆ ಇಂಬು ನೀಡುವಂತೆ ನಿನ್ನೆ (ಮಾರ್ಚ್ 25) ಸಿಎಂ ನಿವಾಸದಲ್ಲಿ ನಡೆದಿದ್ದ ಮುಸ್ಲಿಂ ಸಚಿವರು, ಶಾಸಕರು, MLCಗಳ ಸಭೆಗಳಿಗೆ ಜಮೀರ್ ಗೈರಾಗಿದ್ದರು. ಅಲ್ಲದೇ ಪೈಲ್ವಾನ್ ಮನವೊಲಿಸುವ ಪ್ರಯತ್ನ ಸಹ ಮಾಡಿಲ್ಲ.
ಕಣದಲ್ಲಿ ಒಟ್ಟು 25 ಅಭ್ಯರ್ಥಿಗಳ
ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಒಟ್ಟು 36 ಅಭ್ಯರ್ಥಿಗಳ ನಾಮಪತ್ರ ಸಿಂಧು ಆಗಿದ್ದವು. ಈ ಪೈಕಿ ಇಂದು (ಮಾರ್ಚ್ 26) 11 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಇದರೊಂದಿಗೆ ಅಂತಿಮವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 25 ಅಭ್ಯರ್ಥಿಗಳ ಪೈಕಿ ಓರ್ವ ಮಹಿಳಾ ಅಭ್ಯರ್ಥಿ ಕಣದಲ್ಲಿದ್ದಾರೆ. ಸಾದಿಕ್ ಪೈಲ್ವಾನ್ ಪಕ್ಷೇತರ ಅಭ್ಯರ್ಥಿ ಆಗಿ ಉಳಿದುಕೊಂಡಿದ್ದಾರೆ . ಇದರೊಂದಿಗೆ 14 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದ್ರೆ, ಮುಸ್ಲಿಂ ಅಭ್ಯರ್ಥಿಗಳು ಸಾಧಿಕ್ ಪೈಲ್ವಾನ್ ಅವರಿಗೆ ಬೆಂಬಲಿಸುವುದಾಗಿ ಹೇಳಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಟೆನ್ಷನ್ ಶುರುವಾಗಿದೆ.
ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.
ಈ ಬಗ್ಗೆ ಮಾತನಾಡಿದ ಸಾದಿಕ್ ಪೈಲ್ವಾನ್, ಮೊದಲೇ ರಾಜ್ಯ ನಾಯಕರು ಬಂದು ನಮ್ಮ ಅಹಿಂದ ಮುಖಂಡರು ಹಾಗೂ ನನ್ನ ಜೊತೆ ಸಭೆ ನಡೆಸಬೇಕಿತ್ತು. ನಾವು ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನನಗೆ ಕಾಂಗ್ರೆಸ್ ಹಾಗೂ ಬಿಜೆಪಿ ಯಾವುದು ಪ್ರತಿಸ್ಪರ್ಧಿ ಅಲ್ಲ. ಈ ಬಾರಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ಲುತ್ತೇನೆ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ ಎಂದು ಸವಾಲು ಎಸೆದಿದ್ದಾರೆ.
ಹರೈಯಾ, ಮಾರ್ಚ್ 26: ವ್ಯಕ್ತಿಯೊಬ್ಬರು ಸಾವಿರ ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್ ಬಂಕ್ಗೆ ಬಂದಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಹರೈಯಾದಲ್ಲಿ ನಡೆದಿದೆ. ಘಟನೆ NH-28 ರ ಭದವಾಲ್ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದೆ. ಪೆಟ್ರೋಲ್ ತುಂಬಿಸಲು ಒಬ್ಬ ವ್ಯಕ್ತಿ 1,000 ಲೀಟರ್ ದೊಡ್ಡ ಟ್ಯಾಂಕ್‌ನೊಂದಿಗೆ ಅಲ್ಲಿಗೆ ಬಂದಿದ್ದರು. ಇನ್ನೂ ಅಚ್ಚರಿಯ ಸಂಗತಿಯೆಂದರೆ ಆ ಯುವಕ ತನ್ನ ಹೆಗಲ ಮೇಲೆ ಭಾರವಾದ ಟ್ಯಾಂಕ್ ಅನ್ನು ಪೆಟ್ರೋಲ್ ಪಂಪ್‌ಗೆ ಹೊತ್ತುಕೊಂಡು ಹೋಗಿದ್ದಾರೆ.