Headlines

nagaraj11081993

ಇರಾನ್​ಗೆ ತೈಲ ಮಾರಾಟದಿಂದ ದಿನಕ್ಕೆ 7,000 ಕೋಟಿ ರೂ ಆದಾಯ; ಇರಾನ್​ಗೂ ಭರ್ಜರಿ ಆಯಿಲ್ ಬ್ಯುಸಿನೆಸ್

ನವದೆಹಲಿ, ಮಾರ್ಚ್ 26: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಶುರು ಮಾಡಿದ ಯುದ್ಧದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಆಗುತ್ತಿದೆಯೋ ಸ್ಪಷ್ಟ ಇಲ್ಲ, ಆದರೆ ರಷ್ಯಾ ಮತ್ತು ಇರಾನ್​ನ ಆಯಿಲ್ ಬ್ಯುಸಿನೆಸ್ ಬಹಳ ಜೋರಾಗಿ ನಡೆಯುತ್ತಿದೆ. ಎರಡೂ ದೇಶಗಳು ತೈಲ ಮಾರಾಟದಿಂದ ಸಾವಿರಾರು ಕೋಟಿ ರೂ ಲಾಭ ಮಾಡುತ್ತಿವೆ. ತಂತಮ್ಮ ಯುದ್ಧ ಮುಂದುವರಿಸಲು ಈ ದೇಶಗಳಿಗೆ ಫಂಡಿಂಗ್ ಸಿಕ್ಕಂತಾಗಿದೆ. ವಿಶ್ವದ ಶೇ. 20ಕ್ಕಿಂತಲೂ ಹೆಚ್ಚು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವು…

Read More

ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ: ತನಿಖೆ ಚುರುಕು, ನಾಲ್ವರ ಬಂಧನ

ಕಾರವಾರ, ಮಾರ್ಚ್​ 26: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ (Gopalakrishna Naik) ಹತ್ಯೆ ಯತ್ನ ಘಟನೆಗೆ ಸಂಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ಬಂಧಿತ ನಾಲ್ವರ ವಿಚಾರಣೆ ತೀವ್ರಗೊಂಡಿದೆ. ಈ ನಡುವೆ ಬಂಧಿತರ ಫೋಟೋ ಮತ್ತು ಓಡಾಡುವ ದೃಶ್ಯ ವೈರಲ್ ಆಗಿದ್ದು, ಎಲ್ಲರೂ ಗೋವಾ ಮೂಲದವರಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ…

Read More

ದಾವಣಗೆರೆಯಲ್ಲಿ ತಣ್ಣಗಾಗದ ಅಸಮಾಧಾನ, ಅಖಾಡದಲ್ಲೇ ಉಳಿದ ಪೈಲ್ವಾನ್, ಕಾಂಗ್ರೆಸ್​​ಗೆ ಟೆನ್ಷನ್

ದಾವಣಗೆರೆ , (ಮಾರ್ಚ್ 26): ದಾವಣಗೆರೆ ದಕ್ಷಿಣ ಕ್ಷೇತ್ರ (Davanagere South ) ಶಾಮನೂರು ಕುಟುಂಬದ ಭದ್ರಕೋಟೆ. ಕಳೆದ 30 ವರ್ಷಗಳಿಂದ್ಲೂ ಶಾಮನೂರು ಕುಟುಂಬದ ಕೈಯಲ್ಲಿಯೇ ಇಲ್ಲಿನ ಆಡಳಿತ. ಆದ್ರೆ ಶಾಮನೂರು ಶಿವಶಂಕರಪ್ಪನವರ ನಿಧನ ಬಳಿಕ ಈ ಕ್ಷೇತ್ರ ತೆರವಾಗಿದ್ದು, ತಂದೆಯ ಸ್ಥಾನವನ್ನ ಮಗನಿಗೆ ಕೊಡಿಸುವಲ್ಲಿ ಸಚಿವ SS ಮಲ್ಲಿಕಾರ್ಜುನ ಸಫಲರಾಗಿದ್ದಾರೆ. ಆದ್ರೆ,ನಮಗೆ ಟಿಕೆಟ್ ಕೊಡಿ ಎಂದಿದ್ದ ಮುಸ್ಲಿಂ ಸಮುದಾಯ ಕಾಂಗ್ರೆಸ್ (Congress) ವಿರುದ್ಧ ಬಂಡಾಯ ಸಾರಿದೆ. ಹೌದು..ಕೈ ಹೈಕಮಾಂಡ್ ತಮ್ಮ ಸಮುದಾಯವನ್ನ ಬಿಟ್ಟು ಶಾಮನೂರು ಕುಟುಂಬಕ್ಕೆ…

Read More

Video: 1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’

ಹರೈಯಾ, ಮಾರ್ಚ್​ 26: ವ್ಯಕ್ತಿಯೊಬ್ಬರು ಸಾವಿರ ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್ ಬಂಕ್​ಗೆ ಬಂದಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಹರೈಯಾದಲ್ಲಿ ನಡೆದಿದೆ. ಘಟನೆ NH-28 ರ ಭದವಾಲ್ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದೆ. ಪೆಟ್ರೋಲ್ ತುಂಬಿಸಲು ಒಬ್ಬ ವ್ಯಕ್ತಿ 1,000 ಲೀಟರ್ ದೊಡ್ಡ ಟ್ಯಾಂಕ್‌ನೊಂದಿಗೆ ಅಲ್ಲಿಗೆ ಬಂದಿದ್ದರು. ಇನ್ನೂ ಅಚ್ಚರಿಯ ಸಂಗತಿಯೆಂದರೆ ಆ ಯುವಕ ತನ್ನ ಹೆಗಲ ಮೇಲೆ ಭಾರವಾದ ಟ್ಯಾಂಕ್ ಅನ್ನು ಪೆಟ್ರೋಲ್ ಪಂಪ್‌ಗೆ ಹೊತ್ತುಕೊಂಡು ಹೋಗಿದ್ದಾರೆ.     ವಿಡಿಯೋ…

Read More

ರಾಜಸ್ಥಾನ್​ ಮಾರಾಟ ಒಪ್ಪಂದವನ್ನು ರದ್ದುಗೊಳಿಸುವಂತೆ ಬಿಸಿಸಿಐ ಮೊರೆ ಹೋದ ರಾಜ್ ಕುಂದ್ರಾ

15000 ಕೋಟಿ ರೂಗೆ ಮಾರಾಟವಾಗಿ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ದುಬಾರಿ ತಂಡ ಎಂಬ ದಾಖಲೆ ಬರೆದಿದ್ದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೊಸ ಸಂಕಷ್ಟವೊಂದು ಎದುರಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ವ್ಯಾಪಾರ ಒಪ್ಪಂದವನ್ನು ಕೂಡಲೇ ರದ್ದುಗೊಳಿಸುವಂತೆ ತಂಡದ ಮಾಜಿ ಮಾಲೀಕ ರಾಜ್ ಕುಂದ್ರಾ, ಬಿಸಿಸಿಐ ಬಳಿ ಮನವಿ ಮಾಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯಲ್ಲಿರುವ ನನ್ನ 11.7% ಪಾಲನ್ನು ಇತ್ಯರ್ಥಪಡಿಸುವವರೆಗೆ ಫ್ರಾಂಚೈಸಿಯ ಮಾಲೀಕರು ಬದಲಾಗಲು ಸಾಧ್ಯವಿಲ್ಲ. ತಂಡವನ್ನು ಯಾರಿಗೂ ಮಾರಾಟ ಮಾಡಲು ಸಾಧ್ಯವಿಲ್ಲ. ಹೀಗಾಗಿ ಒಪ್ಪಂದವನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿ…

Read More

ಈ ಸುಡು ಬೇಸಿಗೆಯಲ್ಲಿ ಅನಾನಸ್‌ ಜ್ಯೂಸ್‌ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಅನಾನಸ್‌ (pineapple) ಬೇಸಿಗೆಯ ಸೀಸನ್‌ನಲ್ಲಿ ಹೇರಳವಾಗಿ ಸಿಗುವಂತಹ ಹಣ್ಣು. ಹೊರಗಿನಿಂದ ಒರಟಾಗಿ ಮತ್ತು ಮುಳ್ಳಿನಿಂದ ಕೂಡಿರುವ ಈ ಹಣ್ಣು ತಿನ್ನಲು ರುಚಿಕರ ಮಾತ್ರವಲ್ಲದೆ ಆರೋಗ್ಯಕ್ಕೂ ಸಖತ್‌  ಪ್ರಯೋಜನಕಾರಿ. ಹೌದು ಕ್ಯಾಲ್ಸಿಯಂ, ಫೈಬರ್, ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಈ ಹಣ್ಣು,  ಅನೇಕ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.  ಅನಾನಸ್ ತಿನ್ನುವುದಕ್ಕಿಂತ ಹೆಚ್ಚಾಗಿ  ಅದರ ಜ್ಯೂಸ್ ಕುಡಿಯಲು ಬಹುತೇಕ ಹೆಚ್ಚಿನವರು ಇಷ್ಟಪಡುತ್ತಾರೆ. ಸುಡು ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸುವ ಈ ಜ್ಯೂಸ್‌ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ….

Read More

ಸೋರಬ್ ಬೇಡಿ ಜೊತೆಗಿನ ಡೇಟಿಂಗ್ ವದಂತಿಗೆ ಸ್ಪಷ್ಟನೆ ನೀಡಿದ ಮಲೈಕಾ ಅರೋರಾ

ಬಾಲಿವುಡ್‌ನ ಸ್ಟೈಲಿಶ್ ನಟಿ ಮಲೈಕಾ ಅರೋರಾ (Malaika Arora) ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ವೈಯಕ್ತಿಕ ಜೀವನ, ಒಂಟಿತನ ಮತ್ತು ಹರಿದಾಡುತ್ತಿರುವ ಡೇಟಿಂಗ್ ವದಂತಿಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸಿನಿಮಾ ರಂಗದಲ್ಲಿ ಯಾರ ಜೊತೆ ಕಂಡರೂ ಲಿಂಕ್-ಅಪ್ ವದಂತಿಗಳು ಹರಡುವುದು ಸಾಮಾನ್ಯ. ಇತ್ತೀಚೆಗೆ ಮಲೈಕಾ ಅವರು ಸೋರಬ್ ಬೇಡಿ (Sorab Bedi) ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈಗ ಇವೆಲ್ಲವೂ…

Read More

Video: ಸ್ನಾನ ಮಾಡಿಸ್ತೀನಿ ಅಂದದ್ದಕ್ಕೆ ಅಮ್ಮನಿಗೆ ವಾರ್ನಿಂಗ್ ಕೊಟ್ಟ ಪುಟಾಣಿ

ಈಗಿನ ಮಕ್ಕಳು (children) ಎಷ್ಟು ಜಾಣರೋ, ಅಷ್ಟೇ ತುಂಟರು ಕೂಡ. ಮಕ್ಕಳ ಮುಂದೆ ಏನಾದರೂ ಹೇಳಿದರೆ ಸಾಕು, ಪ್ರಶ್ನೆಯ ಮೇಲೆ ಪ್ರಶ್ನೆ ಕೇಳುತ್ತಾರೆ. ಒಂದೇ ಒಂದು ಮಾತಿನಲ್ಲಿ ಹೆತ್ತವರ ಬಾಯಿ ಮುಚ್ಚಿಸಿ ಬಿಡುತ್ತಾರೆ. ಆದರೆ ಇಲ್ಲೊಂದು ಪುಟಾಣಿಯೂ (little kid) ಅದೇ ರೀತಿ ಮಾಡಿದೆ. ನಾನು ಸ್ನಾನ ಮಾಡಿಸ್ತೀನಿ ಎಂದು ತಾಯಿ ಹೇಳುತ್ತಿದ್ದಂತೆ ತನ್ನದೇ ಭಾಷೆಯಲ್ಲಿ ಬೈಯಲು ಶುರು ಮಾಡಿದ್ದು ವಾರ್ನಿಂಗ್ ಕೊಟ್ಟಿದೆ. ಈ ಪುಟ್ಟ ಕಂದಮ್ಮ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪೂಜಾ…

Read More

ಬಂಗಲೆಯಲ್ಲಿ ಟ್ರಾನ್ಸ್​ಜೆಂಡರ್ ಜತೆ ಸಿಕ್ಕಿಬಿದ್ದ ಮಹಾರಾಷ್ಟ್ರ ಸಚಿವ ನರಹರಿ ಜಿರ್ವಾಲ್

ಮುಂಬೈ, ಮಾರ್ಚ್​ 26: ಮಹಾರಾಷ್ಟ್ರ ರಾಜಕಾರಣದಲ್ಲಿ ಆಘಾತಕಾರಿ ಬೆಳವಣಿಗೆಯೊಂದು ನಡೆದಿದೆ. ಸಚಿವರೊಬ್ಬರು ತೃತೀಯಲಿಂಗಿ(Transgender) ಜತೆ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದ್ದು, ಹೊಸದೊಂದು ವಿವಾದಕ್ಕೆ ನಾಂದಿ ಹಾಡಿದೆ. ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನರಹರಿ ಜಿರ್ವಾಲ್ ತಮ್ಮ ಬಂಗಲೆಯಲ್ಲಿ ಟ್ರಾನ್ಸ್​ಜೆಂಡರ್ ಜತೆ ಇದ್ದ ವಿಡಿಯೋ ವೈರಲ್ ಆಗಿದೆ. ವಿರೋಧ ಪಕ್ಷ ಮಹಾ ವಿಕಾಸ್ ಅಘಾಡಿ ಅವರ ತಕ್ಷಣದ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಎರಡು ತಿಂಗಳಲ್ಲಿ ನರಹರಿ ಹುಟ್ಟು ಹಾಕಿದ ಎರಡನೇ ವಿವಾದವಿದು. ಸಚಿವಾಲಯದಲ್ಲಿ 35 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ…

Read More

ಟ್ರೇಡಿಂಗ್ ಆ್ಯಪ್​ಗಳಿಗೆ ವೆರಿಫೈಡ್ ಲೇಬಲ್; ವಂಚಕರನ್ನು ದೂರ ಇಡಲು ಸೆಬಿ ಹೊಸ ಕ್ರಮ

ನವದೆಹಲಿ, ಮಾರ್ಚ್ 26: ಆನ್​ಲೈನ್​ನಲ್ಲಿ ಸಾಕಷ್ಟು ವಂಚನೆಗಳಾಗುತ್ತವೆ. ವಾಟ್ಸಾಪ್, ಟೆಲಿಗ್ರಾಮ್ ಇತ್ಯಾದಿ ಮೆಸೇಜಿಂಗ್ ಪ್ಲಾಟ್​ಫಾರ್ಮ್​ಗಳಲ್ಲಿ ವಂಚಕ ವೆಬ್​ಸೈಟ್​ಗಳಿಗೆ ದಾರಿ ಕೊಡುವ ನಕಲಿ ಲಿಂಕ್​ಗಳನ್ನು ಹಾಕಿ ಯಾಮಾರಿಸುವವರು ಬಹಳ ಇದ್ದಾರೆ. ಹಾಗೆಯೇ, ಷೇರು ಮಾರುಕಟ್ಟೆಯಲ್ಲಿ ಟ್ರೇಡಿಂಗ್ ಮೂಲಕ ಅದ್ಬುತವಾಗಿ ಸಂಪಾದನೆ ಮಾಡಬಹುದು ಎಂದು ಪುಸಲಾಯಿಸಿ, ನಕಲಿ ಟ್ರೇಡಿಂಗ್ ಆ್ಯಪ್​ಗಳನ್ನು ಡೌನ್​ಲೋಡ್ ಮಾಡಿಕೊಳ್ಳುವಂತೆ ಮಾಡಲಾಗುತ್ತದೆ. ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿರುವುದುಂಟು. ಇವಕ್ಕೆ ಕಡಿವಾಣ ಹಾಕಲು ಮತ್ತು ಹೂಡಿಕೆದಾರರನ್ನು ವಂಚಕರಿಂದ ರಕ್ಷಿಸಲು ಸೆಬಿ (SEBI) ಹೊಸ ಉಪಾಯ ಮಾಡಿದೆ. ಷೇರು…

Read More