ಖಾಸಗಿ ಆಸ್ಪತ್ರೆಗಳ ‘ಟ್ರಾನ್ಸ್ಪ್ಲಾಂಟ್’ ದಂಧೆಗೆ ಬೀಳುತ್ತಾ ಬ್ರೇಕ್? ಸರ್ಕಾರಿ ಆಸ್ಪತ್ರೆಗಳಲ್ಲಿ ಕಡಿಮೆ ಖರ್ಚಿನಲ್ಲಿ ಸಿಗಲಿದೆ ಹೈಟೆಕ್ ಚಿಕಿತ್ಸೆ!
ಬೆಂಗಳೂರು, ಜೂನ್ 01: ಕೆಲ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಹಾಗೂ ಬೇಕಾಬಿಟ್ಟಿ ಹಣ ವಸೂಲಿ ಮಾಡುವ ದಂಧೆ ಈಗಿನದಲ್ಲ. ಪ್ರತಿಯೊಂದು ಚಿಕಿತ್ಸೆಗೂ ಲಕ್ಷ ಲಕ್ಷ ಪೀಕುವ ಖಾಸಗಿ ಆಸ್ಪತ್ರೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಅಂಗಾಂಗ ಕಸಿ (Organ Transplant) ಚಿಕಿತ್ಸೆ ಮಾಡಿಸಬೇಕೆಂದರೆ ಬಡ ಹಾಗೂ ಮಧ್ಯಮ ವರ್ಗದ ಜನರು ದುಪ್ಪಟ್ಟು ಹಣ ನೀಡಿ ಬೀದಿಗೆ ಬೀಳುವ ಪರಿಸ್ಥಿತಿ ಇದೆ. ಈ ಜಾಲಕ್ಕೆ ಕಡಿವಾಣ ಹಾಕಲು ಮತ್ತು ಜನಸಾಮಾನ್ಯರಿಗೆ ನೆರವಾಗಲು ಈಗ ಆರೋಗ್ಯ ಇಲಾಖೆ ಮಹತ್ವದ ಮಾಸ್ಟರ್ ಪ್ಲಾನ್ ಒಂದನ್ನು…