‘ಧುರಂಧರ್ 2’ ನೋಡದಿದ್ದರೂ ಚಿತ್ರತಂಡದ ಸಾಧನೆಗೆ ಭೇಷ್ ಎಂದ ಆಮಿರ್ ಖಾನ್
ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ ಅವರು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ಯಶಸ್ಸನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಪ್ರೇಕ್ಷಕರಿಂದ ಪಡೆಯುತ್ತಿರುವ ಅಭೂತಪೂರ್ವ ಬೆಂಬಲಕ್ಕೆ ಆಮಿರ್ ಖಾನ್ (Aamir Khan) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಆರ್. ಮಾಧವನ್, ಅರ್ಜುನ್ ರಾಮ್ಪಾಲ್, ರಾಕೇಶ್ ಬೇಡಿ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಹೊಗಳುತ್ತಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜೊತೆಗಿನ ಸಂವಾದದಲ್ಲಿ…