All posts by nagaraj11081993

Petrol Diesel Prices: ಭಾರತದಲ್ಲಿ ನಯಾರಾ ಪೆಟ್ರೋಲ್ ದರ ಹೆಚ್ಚಳ; ಲೀಟರ್​ಗೆ 5 ರೂ ಬೆಲೆ ಏರಿಕೆ

Petrol Diesel Prices: ಭಾರತದಲ್ಲಿ ನಯಾರಾ ಪೆಟ್ರೋಲ್ ದರ ಹೆಚ್ಚಳ; ಲೀಟರ್​ಗೆ 5 ರೂ ಬೆಲೆ ಏರಿಕೆ

ನವದೆಹಲಿ, ಮಾರ್ಚ್ 26: ಇರಾನ್ ಯುದ್ಧ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ (crude oil price) ಎರಡು ಪಟ್ಟು ಹೆಚ್ಚಾಗಿದೆ. ಆದರೂ ಭಾರತದಲ್ಲಿ ಸರ್ಕಾರದ ಸೂಚನೆ ಮೇರೆಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಏರಿಸಲಾಗಿಲ್ಲ. ಇದೀಗ ಖಾಸಗಿ ಇಂಧನ ರೀಟೇಲ್ ಮಾರಾಟ ಸಂಸ್ಥೆಯಾದ ನಯಾರಾ ಎನರ್ಜಿ (Nayara Energy) ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆ 5.30 ರೂ ಏರಿದರೆ, ಡೀಸಲ್ ಬೆಲೆ 3 ರೂ ಹೆಚ್ಚಿದೆ.

ಭಾರತದಲ್ಲಿ 2022ರಿಂದ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳ ಆಗಿದ್ದು ಇದೇ ಮೊದಲು. 2022ರ ಮೇ ತಿಂಗಳಲ್ಲಿ ಪೆಟ್ರೋಲ್ ದರ ಪರಿಷ್ಕರಣೆ ಆಗಿತ್ತು. ಮತ್ತೊಂದು ಖಾಸಗಿ ರೀಟೇಲರ್ ಆಗಿರುವ ಜಿಯೋ ಬಿಪಿ ಇನ್ನೂ ಕೂಡ ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡಿಲ್ಲ. ಪೆಟ್ರೋಲ್ ರೀಟೇಲ್ ಕ್ಷೇತ್ರದಲ್ಲಿ ಶೇ. 90ರಷ್ಟು ಪಾರಮ್ಯ ಹೊಂದಿರುವ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಎಚ್​ಪಿ ಮತ್ತು ಬಿಪಿ ತಮ್ಮ ಸಾಮಾನ್ಯ ಪೆಟ್ರೋಲ್, ಡೀಸಲ್ ದರಗಳನ್ನು ಏರಿಸಿಲ್ಲ.

ಇದನ್ನೂ ಓದಿ: ಹೆಲ್ತ್ ಇನ್ಷೂರೆನ್ಸ್; ಕಾರ್ಪೊರೇಟ್ ಪಾಲಿಸಿ ಜೊತೆಗೆ ವೈಯಕ್ತಿಕ ವಿಮೆಯೂ ಇರಲಿ: ನಿತಿನ್ ಕಾಮತ್ ಸಲಹೆ

ಕೆಲ ದಿನಗಳ ಹಿಂದೆ ಈ ಒಎಂಸಿಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ಬೆಲೆಗಳನ್ನು ಏರಿಸಿದ್ದವು. ಪ್ರೀಮಿಯಮ್ 95-ಆಕ್ಟೇನ್ ಪೆಟ್ರೋಲ್ ಬೆಲೆಯಲ್ಲಿ ಲೀಟರ್​ಗೆ 2 ರೂನಷ್ಟು ಏರಿಕೆ ಮಾಡಲಾಯಿತು. ಇಂಡಸ್ಟ್ರಿಯಲ್ ಡೀಸಲ್ ಬೆಲೆಯಲ್ಲೂ ಏರಿಕೆ ಮಾಡಲಾಗಿತ್ತು. ಆದರೆ, ಮಾಮೂಲಿಯ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳಲ್ಲಿ ಹೆಚ್ಚಳ ಮಾಡಲಾಗಿಲ್ಲ. ನಯಾರಾ ಪೆಟ್ರೋಲ್ ಪಂಪ್​ಗಳಲ್ಲಿ ಮಾತ್ರವೇ ಬೆಲೆ ಏರಿಕೆ ಆಗಿದೆ.

ಖಾಸಗಿ ಕಂಪನಿಗಳಿಗೆ ನಷ್ಟದ ಹೊರೆ ಅಧಿಕ

ಸರ್ಕಾರ 2022ರಿಂದ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಫ್ರೀಜ್ ಮಾಡಿದೆ. ತೈಲ ಬೆಲೆ ಏರಿಕೆಯಾದಾಗ ಸರ್ಕಾರಿ ಸ್ವಾಮ್ಯದ ಒಎಂಸಿಗಳಿಗೆ ನಷ್ಟದ ಹೊರೆ ಕಡಿಮೆ ಮಾಡಲು ಸರ್ಕಾರ ನೆರವಾಗುತ್ತದೆ. ಖಾಸಗಿ ರೀಟೇಲ್ ಕಂಪನಿಗಳಿಗೆ ಸರ್ಕಾರದ ನೆರವು ಸಿಗುವುದಿಲ್ಲ. ತೈಲ ಬೆಲೆ ಕಡಿಮೆ ಇದ್ದಾಗ ಬಂದಿರುವ ಲಾಭದಿಂದ ಈಗ ಆಗುವ ನಷ್ಟವನ್ನು ಸರಿದೂಗಿಸಲು ಯತ್ನಿಸುವುದು ಅನಿವಾರ್ಯ. ಅದು ಸಾಧ್ಯವಾಗದಿದ್ದರೆ ಪೆಟ್ರೋಲ್, ಡೀಸಲ್ ಬೆಲೆ ಏರಿಸುವುದು ಅನಿವಾರ್ಯ. ಅಂತೆಯೇ, ರಷ್ಯಾದ ರಾಸ್​ನೆಫ್ಟ್ (Rosneft) ಮಾಲಕತ್ವದ ನಯಾರಾ ಎನರ್ಜಿ ಸಂಸ್ಥೆ ಬೆಲೆ ಏರಿಸಿದೆ.

ಇದನ್ನೂ ಓದಿ: ಪಿಎಂ ಎಸ್​ವೈಎಂ ಸ್ಕೀಮ್; ತಿಂಗಳಿಗೆ ಕೇವಲ 55 ರೂ ಹೂಡಿಕೆ; ಉತ್ತಮ ಮಾಸಿಕ ವರಮಾನ ಸೃಷ್ಟಿ

ಭಾರತದಲ್ಲಿ 1,02,075 ಪೆಟ್ರೋಲ್ ಪಂಪ್​ಗಳಿವೆ. ಈ ಪೈಕಿ ನಯಾರಾ ಎನರ್ಜಿಯ ಪಂಪ್​ಗಳ ಸಂಖ್ಯೆ 6,967. ಜಿಯೊ ಬಿಪ್ ಔಟ್​ಲೆಟ್​ಗಳ ಸಂಖ್ಯೆ 2,185. ಇನ್ನುಳಿದ 90,000ಕ್ಕೂ ಅಧಿಕ ಪೆಟ್ರೋಲ್ ಪಂಪ್​ಗಳು ಇಂಡಿಯನ್ ಆಯಿಲ್, ಬಿಪಿ ಮತ್ತು ಎಚ್​ಪಿಗೆ ಸೇರಿದ್ದಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಕುಟುಂಬಕ್ಕೆ ಮತ್ತೆ ಮುಡಾ ಸಂಕಷ್ಟ: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್

ಬೆಂಗಳೂರು, (ಮಾರ್ಚ್ 26): ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ (Muda Case) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ (Karnataka High Court )ಇಂದು (ಮಾರ್ಚ್ 26) ತುರ್ತು ನೋಟಿಸ್ ಜಾರಿ ಮಾಡಿದೆ.  ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್​ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​, ಸಿಎಂ ಹಾಗೂ ಅವರ ಪತ್ನಿ ಅಲ್ಲದೇ ಲೋಕಾಯಯಕ್ತ ಪೊಲಿಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜನಸ್ವಾಮಿ, ದೇವರಾಜ ಅವರಿಗೂ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನ ಮುಂದೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಸೂಕ್ತ ಕಾರಣ ನೀಡಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ಬಿಸಿಸಿಐ

2026 ರ ಐಪಿಎಲ್‌ ಆರಂಭಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದೆ. ಮಾರ್ಚ್​ 28 ರಂದು ಲೀಗ್​ನ ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಸಂಜೆ 7:30 ರಿಂದ ಆರಂಭವಾಗಲಿದೆ. ಆದಾಗ್ಯೂ ಪ್ರತಿ ಆವೃತ್ತಿಯ ಮೊದಲ ಪಂದ್ಯ ನಡೆಯುವುದಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಆವೃತ್ತಿಯಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ.

ಬಿಸಿಸಿಐನ ಈ ನಿರ್ಧಾರದ ಹಿಂದೆ ಸೂಕ್ತ ಕಾರಣವೂ ಇದೆ. ವಾಸ್ತವವಾಗಿ ಕಳೆದ ವರ್ಷ ಬೆಂಗಳೂರಿನಲ್ಲಿ ಆರ್‌ಸಿಬಿಯ ವಿಜಯೋತ್ಸವದ ಮೆರವಣಿಗೆಯ ವೇಳೆ ಕಾಲ್ತುಳಿತ ಉಂಟಾಗಿ 11 ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಹೀಗಾಗಿ ಆ ಅವಘಡದಲ್ಲಿ ಮಡಿದವರ ಗೌರವಾರ್ಥವಾಗಿ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ

ಮೇಲೆ ಹೇಳಿದಂತೆ ಈ ಬಾರಿಯ ಐಪಿಎಲ್ ಮಾರ್ಚ್ 28 ರಂದು ಆರಂಭವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಐಪಿಎಲ್ 2026 ರ ಮೊದಲ ಪಂದ್ಯಕ್ಕೂ ಮುನ್ನ ಬಿಸಿಸಿಐ ಉದ್ಘಾಟನಾ ಸಮಾರಂಭವನ್ನು ಆಯೋಜಿಸದಿರಲು ಇದು ಪ್ರಮುಖ ಕಾರಣವಾಗಿದೆ.

ಉದ್ಘಾಟನಾ ಸಮಾರಂಭ ಏಕೆ ಇರುವುದಿಲ್ಲ?

ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹೀಗಾಗಿ ಜೂನ್ 4, 2025 ರಂದು ನಡೆದಿದ್ದ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ11 ಜನರು ಸಾವನ್ನಪ್ಪಿದರು. ಈ ಕಾರಣದಿಂದಾಗಿ ಈ ಆವೃತ್ತಿಯ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಆದಾಗ್ಯೂ, ಈ ಐಪಿಎಲ್‌ನ ಸಮಾರೋಪ ಸಮಾರಂಭವನ್ನು ಮೇ 31 ರಂದು ನಡೆಸಬಹುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವ್‌ಜಿತ್ ಸೈಕಿಯಾ ಹೇಳಿರುವುದಾಗಿ TOI ಉಲ್ಲೇಖಿಸಿದೆ.

ಈ ಹಿಂದೆಯೂ ರದ್ದುಗೊಳಿಸಲಾಗಿತ್ತು

ಕಳೆದ ಆವೃತ್ತಿಯ ಐಪಿಎಲ್ ಉದ್ಘಾಟನಾ ಸಮಾರಂಭವು ಕೋಲ್ಕತ್ತಾದಲ್ಲಿ ನಡೆದಿತ್ತು. ಇದರಲ್ಲಿ ಶಾರುಖ್ ಖಾನ್, ಶ್ರೇಯಾ ಘೋಷಾಲ್, ದಿಶಾ ಪಟಾನಿ ಮತ್ತು ಕರಣ್ ಔಜ್ಲಾ ಅವರಂತಹ ಕಲಾವಿದರು ಪ್ರದರ್ಶನ ನೀಡಿದ್ದರು. ಆದಾಗ್ಯೂ ಐಪಿಎಲ್ ಉದ್ಘಾಟನಾ ಸಮಾರಂಭ ರದ್ದಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್‌ಪಿಎಫ್ ಸೈನಿಕರ ಸ್ಮರಣಾರ್ಥ ಐಪಿಎಲ್ 2019 ರ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ನಿಗದಿಪಡಿಸಿದ ಹಣವನ್ನು ಹುತಾತ್ಮರ ಕುಟುಂಬಗಳಿಗೆ ವಿತರಿಸಲಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವು

ಜೆರುಸಲೇಂ, ಮಾರ್ಚ್​ 26: ಹಾರ್ಮುಜ್ ಜಲಸಂಧಿ ಬಳಿ ಇಸ್ರೇಲ್(Israel) ನಡೆಸಿದ ದಾಳಿಯಲ್ಲಿ ಇರಾನಿನ ನೌಕಾಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಈಗಾಗಲೇ ಹೆಚ್ಚಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಗಳು ನಿರಂತರವಾಗಿ ಹೆಚ್ಚುತ್ತಿರುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ತಂಗ್ಸಿರಿ ಇರಾನ್ ನೌಕಾಪಡೆಯ ಪ್ರಮುಖ ಕಮಾಂಡರ್ ಆಗಿದ್ದರು ಮತ್ತು ಹಾರ್ಮುಜ್‌ನಂತಹ ಕಾರ್ಯತಂತ್ರದ ಪ್ರದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾರ್ಮುಜ್ ಜಲಸಂಧಿ ಮುಚ್ಚಲು ಅವರೇ ಕಾರಣರಾಗಿದ್ದರು.

ಈ ಯುದ್ಧದಲ್ಲಿ ಇಲ್ಲಿಯವರೆಗೆ ಅಮೆರಿಕ-ಇಸ್ರೇಲ್ ಇರಾನ್​​ನ ಮೂರು ಡಜನ್​ಗಿಂತಲೂ ಹೆಚ್ಚು ಪ್ರಮುಖ ಮಿಲಿಟರಿ ಕಮಾಂಡರ್​ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ದಾಳಿಯು ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಬಹುದು. ಇರಾನ್ ತನ್ನ ಉನ್ನತ ಮಿಟಿಲರಿ ಅಧಿಕಾರಿಯ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವ ಭಯವಿದೆ, ಇದು ಗಲ್ಫ್​ ರಾಷ್ಟ್ರಗಳು ಮತ್ತು ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿನ ಭದ್ರತಾ ಬಿಕ್ಕಟ್ಟನ್ನು ಇನ್ನಷ್ಟು ಆಳಗೊಳಿಸುವ ಸಾಧ್ಯತೆ ಇದೆ.

ಇರಾನ್‌ನ ಪ್ರಬಲ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ನೌಕಾ ವಿಭಾಗದ ನೇತೃತ್ವ ವಹಿಸಿದ್ದ ತಂಗ್ಸಿರಿ, ಬಂದರು ನಗರಿ ಬಂದರ್ ಅಬ್ಬಾಸ್‌ನಲ್ಲಿ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇಸ್ರೇಲ್ ರಕ್ಷಣಾ ಪಡೆಗಳು ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಗೆ ತಂಗ್ಸಿರಿ ಕಾರಣರಾಗಿದ್ದರು.

ಮತ್ತಷ್ಟು ಓದಿ: ಟ್ರಂಪ್ ಕದನ ವಿರಾಮ ಬಯಸುತ್ತಿದ್ದಾರೆ, ಇರಾನ್ ಅಮೆರಿಕದ ಷರತ್ತಿಗೆ ಒಪ್ಪುವುದು ಅನುಮಾನ; ಇಸ್ರೇಲ್ ಅಭಿಮತ

ದಾಳಿಯ ಬಗ್ಗೆ ಇರಾನ್ ಅಥವಾ ಇಸ್ರೇಲ್ ಸೇನೆಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಇರಾನ್ ಇಸ್ರೇಲ್‌ನ ಟೆಲ್ ಅವೀವ್ ಸೇರಿದಂತೆ ವಸತಿ ಪ್ರದೇಶಗಳ ಮೇಲೆ ಎರಡು ಗಂಟೆಗಳಲ್ಲಿ ನಾಲ್ಕು ಕ್ಷಿಪಣಿಗಳನ್ನು ಹಾರಿಸಿತು, ಇದರಿಂದಾಗಿ ಏಳು ಜನರು ಗಾಯಗೊಂಡರು. ಲೆಬನಾನ್ ಇಸ್ರೇಲ್ ಮೇಲೆ ಹಲವಾರು ಡ್ರೋನ್‌ಗಳನ್ನು ಸಹ ಹಾರಿಸಿದೆ. ಬುಧವಾರ ರಾತ್ರಿ ದಕ್ಷಿಣ ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಉಗ್ರಗಾಮಿಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಐಡಿಎಫ್ ಸೈನಿಕ ಸಾವನ್ನಪ್ಪಿದ್ದಾರೆ.

ಇರಾನ್ ಭಾರತ, ಪಾಕಿಸ್ತಾನ, ಚೀನಾ, ರಷ್ಯಾ ಮತ್ತು ಟರ್ಕಿ ಸೇರಿದಂತೆ ತನ್ನ ಇತರ ಸ್ನೇಹಪರ ರಾಷ್ಟ್ರಗಳಿಗೆ ಕಿರಿದಾದ ಸಮುದ್ರ ಮಾರ್ಗದ ಮೂಲಕ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ.ಹಾರ್ಮುಜ್ ಮುಚ್ಚುವಿಕೆಯಿಂದಾಗಿ ಜಾಗತಿಕ ತೈಲ ಬಿಕ್ಕಟ್ಟಿನ ಬಗ್ಗೆ ಅಮೆರಿಕ ಚಿಂತಿತವಾಗಿದೆ. ಜಾಗತಿಕ ಇಂಧನದ ಐದನೇ ಒಂದು ಭಾಗವು ಅದರ ಮೂಲಕ ಹಾದುಹೋಗುತ್ತದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಮಾರ್ಚ್ 26: ಬೆಂಗಳೂರು ಮಹಾನಗರದಲ್ಲಿ ಆಸ್ತಿ ದಾಖಲೆಗಳ ನಿರ್ವಹಣೆ ಮತ್ತು ಖಾತಾ ಬದಲಾವಣೆ ಪ್ರಕ್ರಿಯೆಗಳನ್ನು ಸರಳಗೊಳಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ‘ಫೇಸ್‌ಲೆಸ್ ಆನ್‌ಲೈನ್ ಇ-ಖಾತಾ ಡಿಜಿಟಲ್ ಪ್ರಾಪರ್ಟಿ ರೆಕಾರ್ಡ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್’ಗೆ ಗೋಲ್ಡ್ ಮೆಡಲ್ ಲಭಿಸಿದೆ. ಇದು ಆಡಳಿತವನ್ನು ಪಾರದರ್ಶಕಗೊಳಿಸುವ ಪ್ರಯತ್ನದ ಭಾಗವಾಗಿದೆ ಎಂದು ಅವರು ಹೇಳಿದರು.

ಪ್ರಸ್ತುತ, ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿದ್ದು, ಇದುವರೆಗೆ 9.5 ಲಕ್ಷ ಖಾತೆಗಳನ್ನು ವಿತರಿಸಲಾಗಿದೆ. ಎ ಟು ಬಿ ಖಾತಾ ಪರಿವರ್ತನೆ ಪ್ರಕ್ರಿಯೆ ಚುರುಕುಗೊಂಡಿದ್ದು, 1.2 ಲಕ್ಷ ಅರ್ಜಿಗಳಲ್ಲಿ 60,000 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಭ್ರಷ್ಟಾಚಾರವನ್ನು ತಡೆಗಟ್ಟಲು ಫೇಸ್‌ಲೆಸ್ ವ್ಯವಸ್ಥೆಗಳನ್ನು ಜಾರಿಗೆ ತರಲಾಗುತ್ತಿದೆ. 50×80 ಅಳತೆಯ ಪ್ಲಾಟ್‌ಗಳಿಗೆ ‘ನಂಬಿಕೆ ನಕ್ಷೆ’ ಎಂಬ ಸ್ವಯಂಚಾಲಿತ ಯೋಜನಾ ಅನುಮೋದನೆ ವ್ಯವಸ್ಥೆಯನ್ನು 2024ರಲ್ಲಿ ಪರಿಚಯಿಸಲಾಗಿದೆ. ಆಸಕ್ತಿ ಮತ್ತು ದಂಡವನ್ನು ಮನ್ನಾ ಮಾಡುವ ಒಂದು ಬಾರಿ ಇತ್ಯರ್ಥ ಯೋಜನೆಯನ್ನು ಕೂಡ ಸದನದಲ್ಲಿ ಪಾಸ್ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

PM Narendra Modi: ವಿಶ್ವದ ಅತ್ಯಂತ ಜನಪ್ರಿಯ, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 26: ಮಾರ್ನಿಂಗ್ ಕನ್ಸಲ್ಟ್ ವಿಶ್ವದ ಅತ್ಯಂತ ವಿಶ್ವಾಸಾರ್ಹ ಮತ್ತು ಜನಪ್ರಿಯ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಗ್ಲೋಬಲ್ ಲೀಡರ್ ಅಪ್ರೂವಲ್ ರ‍ೇಟಿಂಗ್ ಟ್ರ್ಯಾಕರ್​​ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಮೊದಲನೇ ಸ್ಥಾನವನ್ನು ಪಡೆದಿದ್ದಾರೆ. ಶೇ. 68ರಷ್ಟು ಜನ ಮೋದಿಯವರ ಮೇಲೆ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ ಎನ್ನುತ್ತದೆ ಈ ಸಮೀಕ್ಷಾ ವರದಿ.

ಈ ಸಮೀಕ್ಷೆಯು ಮಾರ್ಚ್​ 2026ರ ಮೊದಲ ವಾರದ ದತ್ತಾಂಶವನ್ನು ಆಧರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನಪ್ರಿಯತೆಯ ರೇಟಿಂಗ್ ಕೇವಲ ಶೇ. 39 ರಷ್ಟಿದ್ದರೆ, ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರಿಗೆ ಕೇವಲ ಶೇ. 24 ರಷ್ಟಿತ್ತು. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಅವರಿಗೆ ಕೇವಲ ಶೇಕಡಾ 17 ರಷ್ಟು ರೇಟಿಂಗ್ ಸಿಕ್ಕಿತ್ತು, ಆದರೆ ಶೇ. 75 ರಷ್ಟು ಜನರು ಅವರ ಕೆಲಸವನ್ನು ಇಷ್ಟಪಡಲಿಲ್ಲ. ದಕ್ಷಿಣ ಕೊರಿಯಾದ ಅಧ್ಯಕ್ಷ ಲೀ ಜೇ-ಮ್ಯುಂಗ್ ಅವರನ್ನು ತಲಾ ಶೇ. 62 ರಷ್ಟು ಅನುಮೋದನೆ ರೇಟಿಂಗ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿ ಇರಿಸಿದೆ.

ಪ್ರಧಾನಿ ಮೋದಿ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವುದು ಇದೇ ಮೊದಲಲ್ಲ. ಜುಲೈ 2025 ರ ವರದಿಯಲ್ಲಿ ಅವರು ಶೇ. 75 ರಷ್ಟು ಅನುಮೋದನೆ ರೇಟಿಂಗ್‌ನೊಂದಿಗೆ ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ನಾಯಕರಾಗಿ ಸ್ಥಾನ ಪಡೆದಿದ್ದಾರೆ. ಮೇ 2024 ರಲ್ಲಿ ಅವರ ಮೂರನೇ ಅವಧಿ ಪ್ರಾರಂಭವಾದಾಗಿನಿಂದ ಅವರ ಜನಪ್ರಿಯತೆ ಸ್ಥಿರವಾಗಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ. 26 ರಷ್ಟು ಜನರು ಮಾತ್ರ ಅವರನ್ನು ಒಪ್ಪುವುದಿಲ್ಲ, ಇದು ಇತರ ಜಾಗತಿಕ ನಾಯಕರ ಅಸಮ್ಮತಿ ರೇಟಿಂಗ್‌ಗಳಿಗಿಂತ ಗಮನಾರ್ಹವಾಗಿ ಕಡಿಮೆಯಾಗಿದೆ.

ಮತ್ತಷ್ಟು ಓದಿ: ಸರ್ಕಾರದ ಮುಖ್ಯಸ್ಥರಾಗಿ ಸುದೀರ್ಘ ಸೇವೆ ಸಲ್ಲಿಸಿದ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಮೋದಿ

 

ಮೋದಿ ಸತತ ಪ್ರಧಾನಿ ಹುದ್ದೆಗಳಲ್ಲಿ ಇಂದಿರಾ ಗಾಂಧಿಯವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈಗ ಅವರು ಭಾರತದ ಎರಡನೇ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಪ್ರಧಾನಿಯಾಗಿದ್ದಾರೆ. ಈ ಪ್ರತಿಷ್ಠಿತ ಪಟ್ಟಿಯಲ್ಲಿ, ಅವರು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗಿಂತ ಹಿಂದುಳಿದಿದ್ದಾರೆ, ಇದು ಭಾರತೀಯ ರಾಜಕೀಯದಲ್ಲಿ ಅವರ ಬೆಳೆಯುತ್ತಿರುವ ಸ್ಥಾನಮಾನ ಮತ್ತು ಅವರ ಮೇಲಿನ ಅಚಲ ಸಾರ್ವಜನಿಕ ನಂಬಿಕೆಗೆ ಸಾಕ್ಷಿಯಾಗಿದೆ.

ಪ್ರಧಾನಿ ಮೋದಿ ಅವರ ಈ ರೇಟಿಂಗ್ ಮುಂಬರುವ ತಿಂಗಳುಗಳಲ್ಲಿ ನಡೆಯಲಿರುವ ಜಿ-20 ಮತ್ತು ಇತರ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾರತದ ರಾಜತಾಂತ್ರಿಕ ನಿರ್ಧಾರಗಳ ಮೇಲೆ ಸ್ಪಷ್ಟವಾಗಿ ಪರಿಣಾಮ ಬೀರುತ್ತದೆ. ಪಾಶ್ಚಿಮಾತ್ಯ ನಾಯಕರು ಆಂತರಿಕ ಸಂಘರ್ಷ ಮತ್ತು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವಾಗ, ಪ್ರಧಾನಿ ಮೋದಿ ಅವರ ರೇಟಿಂಗ್ ಅಭಿವೃದ್ಧಿ ಹೊಂದಿದ ಭಾರತ’ದ ಬಗ್ಗೆ ಅವರ ಬದ್ಧತೆಯ ಬಗ್ಗೆ ಭಾರತೀಯ ಸಾರ್ವಜನಿಕರ ಅಚಲ ನಂಬಿಕೆಯನ್ನು ಪ್ರದರ್ಶಿಸುತ್ತದೆ.

ಸೆಪ್ಟೆಂಬರ್ 2021ನಿಂದ ಮಾರ್ನಿಂಗ್ ಕನ್ಸಲ್ಟ್ ಗ್ಲೋಬಲ್ ಲೀಡರ್ ಅಪ್ರೂವಲ್ ರ‍ೇಟಿಂಗ್ ಟ್ರ‍್ಯಾಕರ್ ನಲ್ಲಿ ಮೋದಿ ಅಗ್ರ ಸ್ಥಾನದಲ್ಲಿದ್ದಾರೆ. 2021ರಲ್ಲಿ ಶೇ. 70ರಷ್ಟು ರೇಟಿಂಗ್ ಅನ್ನು ಮೋದಿ ಪಡೆದಿದ್ದರು. 2022ರಲ್ಲಿ ಶೇ. 71 ರೇಟಿಂಗ್ ಅನ್ನು ಮೋದಿ ಪಡೆದಿದ್ದರು.

ಇದಾದ ನಂತರದ ವರ್ಷದಲ್ಲೂ (2023) ಪ್ರಧಾನಿ ಮೋದಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದರು. ಮೂರು ಬಾರಿ ಅಂದರೆ ಏಪ್ರಿಲ್, ಸೆಪ್ಟಂಬರ್ ಮತ್ತು ಡಿಸೆಂಬರ್ ಮಾಸದಲ್ಲಿ ನಡೆಸಲಾಗಿದ್ದ ಸಮೀಕ್ಷೆಯಲ್ಲೂ ಮೋದಿ ಶೇ. 76 ರೇಟಿಂಗ್ ಅನ್ನು ಪಡೆದಿದ್ದರು. 2024ರ ಸಮೀಕ್ಷೆಯಲ್ಲಿ ಮೋದಿ ಅಪ್ರೂವಲ್ ರೇಟಿಂಗ್ ಶೇ. 78ಕ್ಕೆ ತಲುಪಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Weather Today: 22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಬಿರುಗಾಳಿ

ನವದೆಹಲಿ, ಮಾರ್ಚ್ 26: ಕಳೆದ ಒಂದು ವಾರದಿಂದ ಭಾರತದ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಹವಾಮಾನ ಇಲಾಖೆ ಸುಮಾರು 22 ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಳೆ (Rain Updates) ಮತ್ತು ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢ, ಆಂಧ್ರಪ್ರದೇಶ, ಕರ್ನಾಟಕದ ಮಲೆನಾಡು, ತೆಲಂಗಾಣ, ವಿದರ್ಭ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಪಶ್ಚಿಮ ರಾಜಸ್ಥಾನದಲ್ಲೂ ಮಳೆಯಾಗಲಿದೆ. ಈ ತಿಂಗಳ 28ರವರೆಗೆ ಕರಾವಳಿ ಕರ್ನಾಟಕ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ಈಶಾನ್ಯ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಮಳೆರಾಯನ ಅವಾಂತರಕ್ಕೆ ಹಾರಿ ಹೋಯ್ತು ಸೂರು! ಇಂದೂ ವರುಣನ ಆರ್ಭಟ ಜೋರು

ಮಾರ್ಚ್ 27ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆ ಮತ್ತು ಹಿಮಪಾತವಾಗಬಹುದು ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಉತ್ತರ ಭಾರತದಲ್ಲಿ ಬಿರುಗಾಳಿ ಬೀಸುವ ಬಗ್ಗೆ ಎಚ್ಚರಿಕೆ ನೀಡಿದೆ. ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮಾರ್ಚ್ 29ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ವ್ಯಾಪಕ ಮಳೆ, ಮಿಂಚು ಮತ್ತು ಬಲವಾದ ಗಾಳಿ ಬೀಸುವ ಬಗ್ಗೆ ಐಎಂಡಿ ಎಚ್ಚರಿಕೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​- ಶಾಸಕ ಮುನಿರತ್ನ ನಡುವೆ ಮಾತಿನ ಕದನ

ಬೆಂಗಳೂರು, ಮಾರ್ಚ್​​ 26: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಬೆಂಗಳೂರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ವೇಳೆ ವೈಯಕ್ತಿಕ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬಂದಿವೆ. ಮುನಿರತ್ನ ಕೇಸ್‌ಗಳ ಬಗ್ಗೆ ಮಾತಾಡೋದು ಬೇಕಾದಷ್ಟಿದೆ. ಅದರ ಬಗ್ಗೆ ಚರ್ಚೆ ಮಾಡಬೇಕು ಅಂದರೆ ಮಾಡ್ತೀನಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ವೇಳೆ ಎಲ್ಲವನ್ನೂ ಹೇಳಿ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದು, ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?

ಬೆಂಗಳೂರು, ಮಾರ್ಚ್​​ 26: ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ. ಸಿವಿಲ್ ಇಲಾಖೆಯು ಸಹ ಈ ಮಾಕ್ ಡ್ರಿಲ್‌ನಲ್ಲಿ ಪಾಲ್ಗೊಂಡಿದ್ದು, ಪ್ರಮುಖವಾಗಿ ತರಬೇತಿಯನ್ನು ನೀಡಲಾಗಿದೆ. ಫೈರ್ ಎಕ್ಸಿಟ್ ಬಾಗಿಲುಗಳ ಪರಿಶೀಲನೆ, ಗೇಟ್‌ಗಳ ಅಗಲೀಕರಣದಂತಹ ಎಲ್ಲಾ ಅಗತ್ಯ ಕೆಲಸಗಳು ಸಂಪೂರ್ಣವಾಗಿ ಮುಗಿದಿವೆ ಎನ್ನಲಾಗಿದೆ.

ವರದಿ: ಅರುಣ್​​ ಕುಮಾರ್​​, ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?

ಬೆಂಗಳೂರು, ಮಾರ್ಚ್​​ 26: ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ. ಸಿವಿಲ್ ಇಲಾಖೆಯು ಸಹ ಈ ಮಾಕ್ ಡ್ರಿಲ್‌ನಲ್ಲಿ ಪಾಲ್ಗೊಂಡಿದ್ದು, ಪ್ರಮುಖವಾಗಿ ತರಬೇತಿಯನ್ನು ನೀಡಲಾಗಿದೆ. ಫೈರ್ ಎಕ್ಸಿಟ್ ಬಾಗಿಲುಗಳ ಪರಿಶೀಲನೆ, ಗೇಟ್‌ಗಳ ಅಗಲೀಕರಣದಂತಹ ಎಲ್ಲಾ ಅಗತ್ಯ ಕೆಲಸಗಳು ಸಂಪೂರ್ಣವಾಗಿ ಮುಗಿದಿವೆ ಎನ್ನಲಾಗಿದೆ.

ವರದಿ: ಅರುಣ್​​ ಕುಮಾರ್​​, ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link