Headlines

nagaraj11081993

Petrol Diesel Prices: ಭಾರತದಲ್ಲಿ ನಯಾರಾ ಪೆಟ್ರೋಲ್ ದರ ಹೆಚ್ಚಳ; ಲೀಟರ್​ಗೆ 5 ರೂ ಬೆಲೆ ಏರಿಕೆ

ನವದೆಹಲಿ, ಮಾರ್ಚ್ 26: ಇರಾನ್ ಯುದ್ಧ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ (crude oil price) ಎರಡು ಪಟ್ಟು ಹೆಚ್ಚಾಗಿದೆ. ಆದರೂ ಭಾರತದಲ್ಲಿ ಸರ್ಕಾರದ ಸೂಚನೆ ಮೇರೆಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಏರಿಸಲಾಗಿಲ್ಲ. ಇದೀಗ ಖಾಸಗಿ ಇಂಧನ ರೀಟೇಲ್ ಮಾರಾಟ ಸಂಸ್ಥೆಯಾದ ನಯಾರಾ ಎನರ್ಜಿ (Nayara Energy) ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆ 5.30 ರೂ ಏರಿದರೆ, ಡೀಸಲ್ ಬೆಲೆ 3 ರೂ ಹೆಚ್ಚಿದೆ. ಭಾರತದಲ್ಲಿ 2022ರಿಂದ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳ…

Read More

ಸಿಎಂ ಕುಟುಂಬಕ್ಕೆ ಮತ್ತೆ ಮುಡಾ ಸಂಕಷ್ಟ: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್

ಬೆಂಗಳೂರು, (ಮಾರ್ಚ್ 26): ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ (Muda Case) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ (Karnataka High Court )ಇಂದು (ಮಾರ್ಚ್ 26) ತುರ್ತು ನೋಟಿಸ್ ಜಾರಿ ಮಾಡಿದೆ.  ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್​ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​, ಸಿಎಂ…

Read More

IPL 2026: ಸೂಕ್ತ ಕಾರಣ ನೀಡಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ಬಿಸಿಸಿಐ

2026 ರ ಐಪಿಎಲ್‌ ಆರಂಭಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದೆ. ಮಾರ್ಚ್​ 28 ರಂದು ಲೀಗ್​ನ ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಸಂಜೆ 7:30 ರಿಂದ ಆರಂಭವಾಗಲಿದೆ. ಆದಾಗ್ಯೂ ಪ್ರತಿ ಆವೃತ್ತಿಯ ಮೊದಲ ಪಂದ್ಯ ನಡೆಯುವುದಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಆವೃತ್ತಿಯಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐನ ಈ ನಿರ್ಧಾರದ ಹಿಂದೆ ಸೂಕ್ತ…

Read More

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವು

ಜೆರುಸಲೇಂ, ಮಾರ್ಚ್​ 26: ಹಾರ್ಮುಜ್ ಜಲಸಂಧಿ ಬಳಿ ಇಸ್ರೇಲ್(Israel) ನಡೆಸಿದ ದಾಳಿಯಲ್ಲಿ ಇರಾನಿನ ನೌಕಾಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಈಗಾಗಲೇ ಹೆಚ್ಚಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಗಳು ನಿರಂತರವಾಗಿ ಹೆಚ್ಚುತ್ತಿರುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ತಂಗ್ಸಿರಿ ಇರಾನ್ ನೌಕಾಪಡೆಯ ಪ್ರಮುಖ ಕಮಾಂಡರ್ ಆಗಿದ್ದರು ಮತ್ತು ಹಾರ್ಮುಜ್‌ನಂತಹ ಕಾರ್ಯತಂತ್ರದ ಪ್ರದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾರ್ಮುಜ್ ಜಲಸಂಧಿ ಮುಚ್ಚಲು ಅವರೇ ಕಾರಣರಾಗಿದ್ದರು. ಈ ಯುದ್ಧದಲ್ಲಿ ಇಲ್ಲಿಯವರೆಗೆ ಅಮೆರಿಕ-ಇಸ್ರೇಲ್ ಇರಾನ್​​ನ ಮೂರು ಡಜನ್​ಗಿಂತಲೂ…

Read More

ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಮಾರ್ಚ್ 26: ಬೆಂಗಳೂರು ಮಹಾನಗರದಲ್ಲಿ ಆಸ್ತಿ ದಾಖಲೆಗಳ ನಿರ್ವಹಣೆ ಮತ್ತು ಖಾತಾ ಬದಲಾವಣೆ ಪ್ರಕ್ರಿಯೆಗಳನ್ನು ಸರಳಗೊಳಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ‘ಫೇಸ್‌ಲೆಸ್ ಆನ್‌ಲೈನ್ ಇ-ಖಾತಾ ಡಿಜಿಟಲ್ ಪ್ರಾಪರ್ಟಿ ರೆಕಾರ್ಡ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್’ಗೆ ಗೋಲ್ಡ್ ಮೆಡಲ್ ಲಭಿಸಿದೆ. ಇದು ಆಡಳಿತವನ್ನು ಪಾರದರ್ಶಕಗೊಳಿಸುವ ಪ್ರಯತ್ನದ ಭಾಗವಾಗಿದೆ ಎಂದು ಅವರು ಹೇಳಿದರು. ಪ್ರಸ್ತುತ, ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿದ್ದು, ಇದುವರೆಗೆ 9.5 ಲಕ್ಷ ಖಾತೆಗಳನ್ನು ವಿತರಿಸಲಾಗಿದೆ. ಎ ಟು…

Read More

PM Narendra Modi: ವಿಶ್ವದ ಅತ್ಯಂತ ಜನಪ್ರಿಯ, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 26: ಮಾರ್ನಿಂಗ್ ಕನ್ಸಲ್ಟ್ ವಿಶ್ವದ ಅತ್ಯಂತ ವಿಶ್ವಾಸಾರ್ಹ ಮತ್ತು ಜನಪ್ರಿಯ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಗ್ಲೋಬಲ್ ಲೀಡರ್ ಅಪ್ರೂವಲ್ ರ‍ೇಟಿಂಗ್ ಟ್ರ್ಯಾಕರ್​​ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಮೊದಲನೇ ಸ್ಥಾನವನ್ನು ಪಡೆದಿದ್ದಾರೆ. ಶೇ. 68ರಷ್ಟು ಜನ ಮೋದಿಯವರ ಮೇಲೆ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ ಎನ್ನುತ್ತದೆ ಈ ಸಮೀಕ್ಷಾ ವರದಿ. ಈ ಸಮೀಕ್ಷೆಯು ಮಾರ್ಚ್​ 2026ರ ಮೊದಲ ವಾರದ ದತ್ತಾಂಶವನ್ನು ಆಧರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನಪ್ರಿಯತೆಯ ರೇಟಿಂಗ್ ಕೇವಲ ಶೇ….

Read More

Weather Today: 22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಬಿರುಗಾಳಿ

ನವದೆಹಲಿ, ಮಾರ್ಚ್ 26: ಕಳೆದ ಒಂದು ವಾರದಿಂದ ಭಾರತದ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಹವಾಮಾನ ಇಲಾಖೆ ಸುಮಾರು 22 ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಳೆ (Rain Updates) ಮತ್ತು ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ. ಛತ್ತೀಸ್‌ಗಢ, ಆಂಧ್ರಪ್ರದೇಶ, ಕರ್ನಾಟಕದ ಮಲೆನಾಡು, ತೆಲಂಗಾಣ, ವಿದರ್ಭ,…

Read More

ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​- ಶಾಸಕ ಮುನಿರತ್ನ ನಡುವೆ ಮಾತಿನ ಕದನ

ಬೆಂಗಳೂರು, ಮಾರ್ಚ್​​ 26: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಬೆಂಗಳೂರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ವೇಳೆ ವೈಯಕ್ತಿಕ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬಂದಿವೆ. ಮುನಿರತ್ನ ಕೇಸ್‌ಗಳ ಬಗ್ಗೆ ಮಾತಾಡೋದು ಬೇಕಾದಷ್ಟಿದೆ. ಅದರ ಬಗ್ಗೆ ಚರ್ಚೆ ಮಾಡಬೇಕು ಅಂದರೆ ಮಾಡ್ತೀನಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ವೇಳೆ ಎಲ್ಲವನ್ನೂ ಹೇಳಿ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದು, ಸದನದಲ್ಲಿ ಭಾರಿ…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?

ಬೆಂಗಳೂರು, ಮಾರ್ಚ್​​ 26: ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ….

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?

ಬೆಂಗಳೂರು, ಮಾರ್ಚ್​​ 26: ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ….

Read More