Headlines

nagaraj11081993

ಬಿಟ್‌ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್‌ಗೆ ಇಡಿ ಇಕ್ಕಳ, ವಿಚಾರಣೆಗೆ ಹಾಜರಾಗಲು ಕಟ್ಟುನಿಟ್ಟಿನ ಆದೇಶ

ಬಿಟ್‌ಕಾಯಿನ್ ಹಗರಣದಲ್ಲಿ ಮೊಹಮ್ಮದ್ ನಲಪಾಡ್​ಗೆ ಸಂಕಷ್ಟImage Credit source: tv9 ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಒಂದೆಡೆ ಡಿಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದು, ಅವರ ಆಪ್ತ ವಲಯದಲ್ಲಿ ಸಂಭ್ರಮ ಮನೆಮಾಡಿದೆ. ಆದರೆ, ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಂತಿ‌ನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಹಾಗೂ ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್‌ಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ಬಹುಕೋಟಿ ಬಿಟ್‌ಕಾಯಿನ್ ಹಗರಣ (Bitcoin…

Read More

ಜೂನ್ 8ರಿಂದ ಬರಲಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ; ಪ್ರೋಮೋ ರಿಲೀಸ್

ಕಲರ್ಸ್ ಕನ್ನಡ ವಾಹಿನಿಯ ವೀಕ್ಷಕರಿಗೆ ಒಂದೆಡೆ ಬೇಸರ, ಇನ್ನೊಂದೆಡೆ ಭರ್ಜರಿ ಖುಷಿ ನೀಡುವ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲವು ವರ್ಷಗಳಿಂದ ಸತತವಾಗಿ ಪ್ರೇಕ್ಷಕರನ್ನು ರಂಜಿಸುತ್ತಾ, ಸಾವಿರಕ್ಕೂ ಹೆಚ್ಚು ಸಂಚಿಕೆಗಳನ್ನು ಪೂರೈಸಿದ್ದ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಕೊನೆಗೂ ಮುಕ್ತಾಯದ ಹಂತ ತಲುಪಿದ್ದು, ಈ ವಾರವೇ ತನ್ನ ಸುದೀರ್ಘ ಪಯಣಕ್ಕೆ ಸಂಪೂರ್ಣ ಅಂತ್ಯ ಹಾಡಲಿದೆ. ಆದರೆ, ಈ ಜನಪ್ರಿಯ ಸೀರಿಯಲ್ ಮುಗಿಯುತ್ತಿದ್ದಂತೆಯೇ ಕಿರುತೆರೆಯಲ್ಲಿ ಮತ್ತೊಂದು ಬಿಗ್ ಧಮಾಕಾ ಆರಂಭವಾಗಲಿದ್ದು, ವಾಹಿನಿಯ ಸಾರ್ವಕಾಲಿಕ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ಒಂದಾದ ‘ಅಗ್ನಿಸಾಕ್ಷಿ’ ಹೊಸ ರೂಪದಲ್ಲಿ…

Read More

ಇದು ಹೊಸ ಅಧ್ಯಾಯ: 3 ವರ್ಷಗಳಲ್ಲಿ 4 ಟ್ರೋಫಿ ಗೆದ್ದ RCB

ಭಾರತೀಯ ಟಿ20 ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಅಧ್ಯಾಯ ಮುಂದುವರೆದಿದೆ. 2024ರಲ್ಲಿ ಶುರುವಾದ ಈ ಹೊಸ ಅಧ್ಯಾಯದಿಂದ ಕೇವಲ 3 ವರ್ಷಗಳಲ್ಲಿ ಆರ್​ಸಿಬಿಗೆ ದಕ್ಕಿದ್ದು ಬರೋಬ್ಬರಿ 4 ಟ್ರೋಫಿಗಳು. ಅದರಲ್ಲೂ ಐಪಿಎಲ್​ನಲ್ಲಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಗಿದ್ರೆ ಕಳೆದ ಮೂರು ವರ್ಷಗಳಲ್ಲಿ ಆರ್​ಸಿಬಿ ಗೆದ್ದಿರುವ ಟ್ರೋಫಿಗಳಾವುವು ಎಂದು ನೋಡೋಣ.. (PC: IPL) 2024 – ಮೊದಲ WPL ಟ್ರೋಫಿ: ಸ್ಮೃತಿ ಮಂಧಾನ ನೇತೃತ್ವದ RCB ಮಹಿಳಾ…

Read More

ಈ ವಾರ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಕೊನೆಯ ಸಂಚಿಕೆ ಪ್ರಸಾರ

ಕನ್ನಡ ಕಿರುತೆರೆ ವೀಕ್ಷಕರ ನೆಚ್ಚಿನ ಧಾರಾವಾಹಿಗಳಲ್ಲಿ ಒಂದಾದ, ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಸೀರಿಯಲ್ ‘ಭಾಗ್ಯಲಕ್ಷ್ಮೀ’ ಈಗ ತನ್ನ ಸುದೀರ್ಘ ಹಾಗೂ ಯಶಸ್ವಿ ಪಯಣವನ್ನು ಮುಗಿಸಲು ಸಜ್ಜಾಗಿದೆ. ಹೌದು, ಸಾವಿರಕ್ಕೂ ಹೆಚ್ಚು ಸಂಚಿಕೆಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಈ ಧಾರಾವಾಹಿ ಈಗ ಮುಕ್ತಾಯದ ಹಂತಕ್ಕೆ ತಲುಪಿದ್ದು, ಅಂತಿಮ ಸಂಚಿಕೆಗಳು ಪ್ರಸಾರವಾಗುತ್ತಿವೆ. ಕನ್ನಡ ಕಿರುತೆರೆಯಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿ, ವರ್ಷಗಳಿಂದ ಕರುನಾಡಿನ ಪ್ರೇಕ್ಷಕರ ಹೃದಯ ಆಳಿದ್ದ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಈಗ ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ….

Read More

Karnataka Weather Forecast: ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! ಬೆಂಗಳೂರು, ಜೂನ್ 01: ರಾಜ್ಯದಲ್ಲಿ ಮುಂಗಾರು ಪೂರ್ವ ಮಾರುತಗಳು ಹಾಗೂ ಚಂಡಮಾರುತದ ಸುಳಿಗಾಳಿ ಪ್ರಭಾವ ತೀವ್ರಗೊಂಡಿದ್ದು, ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಮುಖ್ಯಾಂಶಗಳು ಕರ್ನಾಟಕದ 7 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರಿ ಮಳೆಯ ಯೆಲ್ಲೋ…

Read More

ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ, ತಂದೆಯ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮೊರಾದಾಬಾದ್, ಜೂನ್ 1: ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಜಿಲ್ಲೆಯ ಕುಂದರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಕ್‌ಫಜ್‌ಪುರ ಗ್ರಾಮದಲ್ಲಿ ಹಬ್ಬ ಮತ್ತು ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಭೀಕರ ದುರಂತ ಸಂಭವಿಸಿದೆ. ಆರು ಸಹೋದರರಲ್ಲಿ ಕಿರಿಯವನಾದ ಫರತ್ ಅಲಿ (20) ಎಂಬ ಯುವಕ, ತನ್ನ ತಂದೆಯ ಪರವಾನಗಿ ಪಡೆದ (Licensed) ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ….

Read More

ಸಿನಿಮಾ ಸೋತಿದ್ದಕ್ಕೆ ಪ್ರೇಕ್ಷಕರನ್ನು ದೂಷಿಸಿದ ನಯನತಾರಾ ಪತಿ; ಇದು ಸರಿ ಅಲ್ಲ ಎಂದ ಫ್ಯಾನ್ಸ್

ವಿಘ್ನೇಶ್​-ನಯನಾತಾರImage Credit source: Nayanthara Instagram ತಮಿಳು ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ (Vignesh Shivan) ಆ್ಯಕ್ಷನ್ ಕಟ್ ಹೇಳಿದ್ದ ‘ಲವ್ ಇನ್ಶೂರೆನ್ಸ್ ಕಂಪನಿ’ (LIK) ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣುವಲ್ಲಿ ವಿಫಲವಾಗಿತ್ತು. ಪ್ರದೀಪ್ ರಂಗನಾಥನ್, ಎಸ್.ಜೆ. ಸೂರ್ಯ ಹಾಗೂ ಕೃತಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದ ಈ ಚಿತ್ರ ದೊಡ್ಡ ಸೋಲು ಕಂಡಿತ್ತು. ಆದರೆ, ಇತ್ತೀಚೆಗಷ್ಟೇ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ವಿಘ್ನೇಶ್…

Read More

ಸಂಭ್ರಮಾಚರಣೆ ಭರದಲ್ಲಿ RCB ಫ್ಯಾನ್ಸ್ ಹುಚ್ಚಾಟ, ಲಾರಿ ಏರಿ ಮೈಮೇಲೆ ಪಟಾಕಿ ಹಾಕೊಂಡು ಮೊಂಡಾಟ: ಲಾಠಿ ಚಾರ್ಜ್

ಸಂಭ್ರಮಾಚರಣೆ ಭರದಲ್ಲಿ RCB ಫ್ಯಾನ್ಸ್ ಹುಚ್ಚಾಟImage Credit source: tv9 ಬೆಂಗಳೂರು, ಜೂನ್ 1: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (GT) ತಂಡವನ್ನು ಮಣ್ಣುಮುಕ್ಕಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿದೆ. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಗರ್ಜನೆ ಹಾಗೂ ರೆಡ್ ಆರ್ಮಿ ಆರ್ಭಟಕ್ಕೆ ಸಿಕ್ಕ ಜಯದ ಬೆನ್ನಲ್ಲೇ ಕರ್ನಾಟಕದಲ್ಲಿ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು…

Read More

ಎರಡು ವರ್ಷದ ಮಗುವಿಗೆ ಚಿತ್ರಹಿಂಸೆ ಕೊಟ್ಟು, ಹೊಡೆದು ಚರಂಡಿಗೆ ಎಸೆದ ತಂದೆ

ಲಕ್ನೋ, ಜೂನ್ 1: ಎರಡೂವರೆ ವರ್ಷದ ತನ್ನ ಪುಟ್ಟ ಹೆಣ್ಣುಮಗಳ ಮೇಲೆ ಅತಿಮಾನುಷವಾಗಿ ಹಲ್ಲೆ ನಡೆಸಿ, ರಸ್ತೆ ಬದಿಯ ಚರಂಡಿಗೆ ತಳ್ಳಿ ಕೊಲ್ಲಲು ಯತ್ನಿಸಿದ ತಂದೆಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೋನು ಅಲಿಯಾಸ್ ಯೋಗೇಂದ್ರ ಸಿಂಗ್ (50) ಎಂದು ಗುರುತಿಸಲಾಗಿದೆ. ಶನಿವಾರ ನಡೆದ ಈ ಭೀಕರ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ವಿಡಿಯೋ ಮೇ 30 ರಂದು ಮಧ್ಯಾಹ್ನ 2.30 ರ…

Read More

Horoscope Today: ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳು ಪರಿಹಾರವಾಗಲಿವೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 1, ಸೋಮವಾರದ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷ, ಜೇಷ್ಠ ನಕ್ಷತ್ರದ ಈ ದಿನದ ಮಹತ್ವವನ್ನು ತಿಳಿಸಲಾಗಿದೆ. ಇಂದು ವಿಶ್ವ ಪೋಷಕರ ದಿನ ಮತ್ತು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ದಿನಗಳಂದು ಹಾಲನ್ನು ದಾನ ಮಾಡುವುದು ಮಂಗಳಕರ ಎಂದು ಗುರೂಜಿ ಹೇಳಿದ್ದಾರೆ.    …

Read More