ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ಪೋಸ್ಟ್; ಇಬ್ಬರು ಅಡ್ಮಿನ್‌ಗಳ ವಿರುದ್ಧ ಎಫ್‌ಐಆರ್ ದಾಖಲು
ಬೆಳಗಾವಿ, ಮೇ 31: ರಾಜ್ಯ ರಾಜಕೀಯ ವಲಯದಲ್ಲಿ ಪ್ರಭಾವಿ ನಾಯಕರಾಗಿರುವ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ವದಂತಿ ಹರಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎರಡು ಫೇಸ್‌ಬುಕ್ ಪೇಜ್‌ಗಳ ಅಡ್ಮಿನ್‌ಗಳ ವಿರುದ್ಧ ಬೆಳಗಾವಿ (belagavi) ಜಿಲ್ಲಾ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮುಖ್ಯಾಂಶಗಳು ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್ ಪೋಸ್ಟ್ ಹರಿಬಿಟ್ಟ ಕಿಡಿಗೇಡಿಗಳು ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಂದ FIR ಸತೀಶ್ ಜಾರಕಿಹೊಳಿ ಬೆಂಗಲಿಗರಿಂದ ದೂರು…