All posts by nagaraj11081993

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ತನಿಖೆ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಚಿಕ್ಕಬಳ್ಳಾಪುರ ಎಸ್​​ಪಿ

ಬೆಂಗಳೂರು, ಮೇ.31: ಬಾಗೇಪಲ್ಲಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಮಧ್ಯಾಹ್ನ ಸುಮಾರು 3 ಗಂಟೆಗೆ ಈ ದುರ್ಘಟನೆ ನಡೆದಿದೆ. ಗಾರೆ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ಹತ್ತು ಜನರನ್ನು (ಒಬ್ಬ ಚಾಲಕ ಮತ್ತು ಒಂಬತ್ತು ಮಹಿಳೆಯರು) ಕರೆದೊಯ್ಯುತ್ತಿದ್ದ ಆಟೋಗೆ, ಅತಿ ವೇಗವಾಗಿ ಬಂದ ಥಾರ್ ವಾಹನವು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮದಿಂದ, ಆಟೋ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿ ಮತ್ತು ಥಾರ್ ವಾಹನಗಳ ನಡುವೆ ಸಿಲುಕಿ ಸ್ಯಾಂಡ್‌ವಿಚ್‌ನಂತೆ ನಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸಿದ ಸ್ಥಳದಲ್ಲೇ ಐದು ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ ಉಳಿದ ಐದು ಜನರನ್ನು ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ನೀಡಿ ಚಿಕ್ಕಬಳ್ಳಾಪುರಕ್ಕೆ ಕಳುಹಿಸಲಾಗಿತ್ತು. ಚಿಕ್ಕಬಳ್ಳಾಪುರದಲ್ಲಿ ಮತ್ತೊಬ್ಬ ಮಹಿಳೆ ಸಾವನ್ನಪ್ಪುವುದರೊಂದಿಗೆ, ಒಟ್ಟು ಸಾವಿನ ಸಂಖ್ಯೆ ಆರುಕ್ಕೆ ಏರಿದೆ. ಲಾರಿ ಚಾಲಕ ಮತ್ತು ಥಾರ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆಯ ಕುರಿತು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಈ ಘಟನೆ ಬಗ್ಗೆ ಪೊಲೀಸ್​​ ಅಧಿಕಾರಿ ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು

ನೆಲಮಂಗಲ, ಮೇ 31: ಕಳೆದ ಎರಡು ದಿನಗಳಿಂದ ನಿರಂತರ ಮಳೆಗೆ (Rain) ಅವಘಡವೊಂದು ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಬೊಮ್ಮಶಟ್ಟಿಹಳ್ಳಿಯಲ್ಲಿ ದ್ಯಾಮಪ್ಪ ಮತ್ತು ಬಾಬುಲಾಲ್ ಮೃತರು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ
  • ಕೆಲಸ ಮಾಡುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕರ ಸಾವು
  • ಕಳೆದ 2 ದಿನಗಳಿಂದ ನಿರಂತರ ಮಳೆಗೆ ಕುಸಿದ ಗೋಡೆ

ನಡೆದಿದ್ದೇನು?

ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿದಿದೆ. ಇತ್ತ ಕಾರ್ಮಿಕರು ಪಟೇಲ್ ಎಂಬುವರಿಗೆ ಸೇರಿದ ಸೈಟ್‌ನಲ್ಲಿ ಗೋಡೆ ನಿರ್ಮಾಣದ ಕೆಲಸ ಮಾಡುತ್ತಿದ್ದರು. ಮಳೆಯಿಂದಾಗಿ ಕೆಲಸ ಮಾಡುತ್ತಿರುವಾಗಲೇ ಗೋಡೆ ಕುಸಿದು ಕಾರ್ಮಿಕರು ಇಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಗೆ ಆಟೋ ಚಾಲಕ ಬಲಿ

ದುರಂತ ನಂತರ ಇಬ್ಬರು ಕಾರ್ಮಿಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Published On – 9:47 pm, Sun, 31 May 26

Source link

ಬೆಂಗಳೂರಿನಲ್ಲಿ ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ; ಸಾರ್ವಜನಿಕರ ಆಕ್ರೋಶ!

ವಿಐಪಿ ಸಂಸ್ಕೃತಿ , ರಾಜ್ಯಪಾಲರ ಸಂಚಾರ

ಬೆಂಗಳೂರು, ಮೇ.31: ರಾಜಧಾನಿ ಬೆಂಗಳೂರಿನಲ್ಲಿ ವಿಐಪಿ ಸಂಸ್ಕೃತಿ ಮತ್ತು ಅಧಿಕಾರಿಗಳ ಭದ್ರತೆಯ ಹೆಸರಿನಲ್ಲಿ ಸಾಮಾನ್ಯ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುವ ಘಟನೆಗಳು ನಿಲ್ಲುವಂತೆ ಕಾಣುತ್ತಿಲ್ಲ. ಈಗಾಗಲೇ ಅಂಡರ್‌ಪಾಸ್ ನಿರ್ಮಾಣ ಕಾರ್ಯದಿಂದಾಗಿ ಉಸಿರುಗಟ್ಟುತ್ತಿರುವ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಇಂದು ರಾಜ್ಯಪಾಲರ (Governor) ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ನರಕಸದೃಶ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಚಾರ ದಟ್ಟಣೆಯ ನಡುವೆ ತನ್ನ ಗರ್ಭಿಣಿ ಪತ್ನಿಯನ್ನು ತುರ್ತಾಗಿ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಸಿಲುಕಿಕೊಂಡಿದ್ದು, ಸಾರ್ವಜನಿಕರ ಕಣ್ಣು ತೇವವಾಗುವಂತೆ ಮಾಡಿದೆ. ಅಂಡರ್‌ಪಾಸ್ ಕಾಮಗಾರಿಯಿಂದಾಗಿ ಮೊದಲೇ ಕಿರಿದಾಗಿದ್ದ ರಸ್ತೆಯಲ್ಲಿ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ಏಕಾಏಕಿ ರಸ್ತೆ ನಿರ್ಬಂಧಿಸಿದ್ದರಿಂದ, ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ತಲುಪಿಸಲಾಗದೆ ಆ ವ್ಯಕ್ತಿ ನಡುರಸ್ತೆಯಲ್ಲೇ ತೀವ್ರ ಕಂಗಾಲಾಗಿದ್ದರು.

ಇದನ್ನೂ ಓದಿ: ಬೆಂಗಳೂರು ಜಂಗಲ್ ರಾಜ್‌ ಆಗಿ ಬದಲಾಗುತ್ತಿದೆ?: ಶಾಲೆಯ ಮುಂದೆಯೇ ಲಾಂಗ್ ಬೀಸಿದ ಪುಂಡರು!; ವಿಡಿಯೋ ವೈರಲ್!

“ಸಾಮಾನ್ಯ ಸಾರ್ವಜನಿಕರ ಹಾಗೂ ರೋಗಿಗಳ ಅನುಕೂಲ ಮತ್ತು ಜೀವವು ವಿಐಪಿಗಳ ಸೌಕರ್ಯದಷ್ಟೇ ಮುಖ್ಯವಾಗುವುದು ಯಾವಾಗ?” ಎಂದು ಸ್ಥಳೀಯ ನಿವಾಸಿಗಳು ಮತ್ತು ವಾಹನ ಸವಾರರು ಕಟುವಾಗಿ ಪ್ರಶ್ನಿಸಿದ್ದಾರೆ. ಅಂಡರ್‌ಪಾಸ್ ನಿರ್ಮಾಣ ಹಂತದಲ್ಲಿರುವ ಇಂತಹ ಸೂಕ್ಷ್ಮ ರಸ್ತೆಗಳಲ್ಲಿ ಗಣ್ಯರ ಸಂಚಾರಕ್ಕೆ ಗಂಟೆಗಟ್ಟಲೆ ಸಾರ್ವಜನಿಕರನ್ನು ತಡೆಯುವುದು ಎಷ್ಟು ಸರಿ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರು ಬೆಂಗಳೂರು ಟ್ರಾಫಿಕ್ ಪೊಲೀಸ್ (BTP) ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಆಗಿ ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್​

ಬೆಂಗಳೂರು, ಮೇ 31: ಜೂನ್​ 3ರಂದು ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್​​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಇದೇ ದಿನದಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲು ಡಿಕೆ ಶಿವಕುಮಾರ್​​ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅದೇ ಸಂದರ್ಭದಲ್ಲಿ ಕಾಂಗ್ರೆಸ್ ಭವನದ ಶಂಕುಸ್ಥಾಪನೆಯನ್ನು ಆಯೋಜಿಸಲು ಸಿದ್ಧತೆಗಳು ನಡೆದಿವೆ. ಇನ್ನು ಪ್ರಮಾಣ ವಚನ ಸಮಾರಂಭಕ್ಕೆ ಎಲ್ಲ ನಾಯಕರಿಗೂ ಲೋಕಭವನದಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರುಗಳು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸುವ ಪದಾಧಿಕಾರಿಗಳಿಗಾಗಿ ಕಾಂಗ್ರೆಸ್ ಭವನದ ಆವರಣದಲ್ಲಿ ವಿಶೇಷ ವೇದಿಕೆ ಮತ್ತು ದೊಡ್ಡ ಪರದೆಗಳನ್ನು ಅಳವಡಿಸಲಾಗುತ್ತಿದೆ. ಈ ಮೂಲಕ ಅವರು ಪ್ರಮಾಣ ವಚನ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತದೆ. ರಾಹುಲ್ ಗಾಂಧಿ ಅವರ ಅನುಮೋದನೆ ದೊರೆತರೆ, ಈ ಕಾರ್ಯಕ್ರಮಗಳು ಜೂನ್ 3ರಂದು ನಡೆಯಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

RCB vs GT Final: ಫೈನಲ್ ಪಂದ್ಯದಲ್ಲೂ ಆರ್​ಸಿಬಿಗೆ ಮೋಸ; 3ನೇ ಅಂಪೈರ್ ವಿರುದ್ಧ ಫ್ಯಾನ್ಸ್ ಆಕ್ರೋಶ

ಪ್ರತಿ ಐಪಿಎಲ್​ನಂತೆ ಈ ಬಾರಿಯ ಐಪಿಎಲ್ ಕೂಡ ವಿವಾದಗಳಿಂದ ಹೊರತಾಗಿರಲಿಲ್ಲ. ಈ ಆವೃತ್ತಿಯಲ್ಲೂ ಸಾಕಷ್ಟು ವಿವಾದಗಳು ಸೃಷ್ಟಿಯಾದವು. ಅದರಲ್ಲೂ ಮೂರನೇ ಅಂಪೈರ್​ ನೀಡಿದ ಕೆಲವೊಂದು ತೀರ್ಪುಗಳು ಹಲವರ ಅಸಮಾಧಾನಕ್ಕೆ ಕಾರಣವಾಗಿದ್ದವು. ಅದರಲ್ಲಿ ಪ್ರಮುಖವಾದದ್ದು, ಲೀಗ್ ಹಂತದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ನೀಡಿದ ಕ್ಯಾಚ್ ಅನ್ನು ಜೇಸನ್ ಹೊಲ್ಡರ್ ಹಿಡಿದ ರೀತಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಚೆಂಡು ಸ್ಪಷ್ಟವಾಗಿ ನೆಲಕ್ಕೆ ತಾಗಿದರೂ ಮೂರನೇ ಅಂಪೈರ್ ಅದನ್ನು ಔಟೆಂದು ತೀರ್ಪು ನೀಡಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಅದೇ ರೀತಿಯ ಕ್ಯಾಚ್ ಅನ್ನು ಆರ್​ಸಿಬಿ ಹಿಡಿದಿತ್ತು. ಆದರೆ ಅದನ್ನು ಮಾತ್ರ ನಾಟೌಟ್ ಎಂದು ಮೂರನೇ ಅಂಪೈರ್ ತೀರ್ಪು ನೀಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

Source link

IPL 2026 Orange Cap: ಆರೆಂಜ್ ಕ್ಯಾಪ್ ಗೆದ್ದ 15 ವರ್ಷದ ವೈಭವ್ ಸೂರ್ಯವಂಶಿ

ಐಪಿಎಲ್ 2026 ರ ಫೈನಲ್ ಪಂದ್ಯ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಈ ಫೈನಲ್ ಪಂದ್ಯ ಮುಗಿಯುವುದಕ್ಕೆ ಮುನ್ನವೇ ಈ ಬಾರಿಯ ಆರೆಂಜ್ ಕ್ಯಾಚ್ ಯಾರ ಪಾಲಾಗಿದೆ ಎಂಬುದು ಖಚಿತವಾಗಿದೆ. ವಾಸ್ತವವಾಗಿ ಎಲ್ಲರಿಗೂ ತಿಳಿದಿರುವಂತೆ ಇಡೀ ಆವೃತ್ತಿಯಲ್ಲಿ ಯಾರು ಅತ್ಯಧಿಕ ರನ್ ಕಲೆಹಾಕುತ್ತಾರೋ ಅವರಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಈ ಆರೆಂಜ್ ಕ್ಯಾಪ್ ರೇಸ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಅಗ್ರಸ್ಥಾನದಲ್ಲಿದ್ದರು. ಆದಾಗ್ಯೂ ಅದರ ನಂತರದ ಎರಡು ಸ್ಥಾನಗಳಲ್ಲಿ ಗುಜರಾತ್ ತಂಡದ ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಇದ್ದ ಕಾರಣ ಫೈನಲ್ ಪಂದ್ಯ ಮುಗಿದ ಬಳಿಕವಷ್ಟೇ ಆರೆಂಜ್ ಕ್ಯಾಪ್ ಯಾರ ಪಾಲಾಗಲಿದೆ ಎಂಬುದನ್ನು ಅಧಿಕೃತವಾಗಿ ಹೇಳಬಹುದಾಗಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಗಿಲ್ ಹಾಗೂ ಸುದರ್ಶನ್, ಸೂರ್ಯವಂಶಿ ಅವರನ್ನು ಮೀರಿಸದ ಕಾರಣ ಅವರಿಬ್ಬರು ಈ ರೇಸ್​ನಿಂದ ಹೊರಬಿದ್ದಿದ್ದು, ವೈಭವ್​ಗೆ ಈ ಕ್ಯಾಪ್ ಸಿಕ್ಕಿದೆ.

Source link

ಬಾಲಸುಬ್ರಹ್ಮಣ್ಯಂ ನಟನೆಯ ಸುಂದರ ತೆಲುಗು ಸಿನಿಮಾ ಕನ್ನಡದಲ್ಲೂ ಬಿಡುಗಡೆ

ಭಾರತೀಯ ಸಿನಿಮಾ ಸಂಗೀತ ಲೋಕದ ಅತ್ಯುತ್ತಮ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ (sp balasubrahmanyam) ಅತ್ಯದ್ಭುತ ಗಾಯಕರಾಗಿದ್ದ ಜೊತೆಗೆ ಅದ್ಭುತ ನಟರೂ ಆಗಿದ್ದರು. ಅವರು ಕನ್ನಡದಲ್ಲಿ ‘ಮುದ್ದಿನ ಮಾವ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ಪರಭಾಷೆಯ ಕೆಲ ಸಿನಿಮಾಗಳಲ್ಲೂ ಅವರು ನಟಿಸಿದ್ದರು. ಬಾಲಸುಬ್ರಹ್ಮಣ್ಯಂ ಸಾಮಾನ್ಯವಾಗಿ ಅಮಾಯಕ, ಮುಗ್ಧ ವ್ಯಕ್ತಿಯ ಪಾತ್ರದಲ್ಲಿ ನಟಿಸುತ್ತಿದ್ದರು. ಅವರು ನಟಿಸಿದ ಹಲವು ಸಿನಿಮಾಗಳು ಹಿಟ್ ಆಗಿರುವುದು ಮಾತ್ರವಲ್ಲ ಅವರ ಪಾತ್ರವೂ ಜನಪ್ರಿಯತೆ ಗಳಿಸಿವೆ. ಆದರೆ ಎಸ್​​ಪಿಬಿ ಅವರು ನಿಧನ ಹೊಂದುವುದಕ್ಕೆ ಮುಂಚೆ ನಟಿಸಿದ್ದ ಸಿನಿಮಾ ಒಂದು ದೊಡ್ಡ ಹಿಟ್ ಆಗಿತ್ತು. ಇದೀಗ ಆ ಸಿನಿಮಾ ಕನ್ನಡದಲ್ಲೂ ಬಿಡುಗಡೆ ಆಗುತ್ತಿದೆ.

ಕೋವಿಡ್ ಸಮಯದಲ್ಲಿ ನಿಧನ ಹೊಂದಿದ ಬಾಲಸುಬ್ರಹ್ಮಣ್ಯಂ ಅವರು ನಟಿಸಿದ ಕೊನೆಯ ಸಿನಿಮಾಗಳಲ್ಲಿ ಒಂದು ‘ಮಿಥುನಂ’. 2012 ರಲ್ಲಿ ಬಿಡುಗಡೆ ಆದ ಈ ಸಿನಿಮಾ ಅನ್ನು ತನಿಕೇಳ ಭರಣಿ ನಿರ್ದೇಶನ ಮಾಡಿದ್ದರು. ವೃದ್ಧರಿಬ್ಬರ ಪ್ರೇಮಕತೆಯನ್ನು, ಜೀವನದ ಮೇಲೆ ಅವರಿಗಿರುವ ಪ್ರೀತಿಯನ್ನು ತೋರಿಸುವ ಸಿನಿಮಾ ಅದಾಗಿತ್ತು. ಈ ತೆಲುಗು ಸಿನಿಮಾದ ಕನ್ನಡ ಅವತರಣಿಕೆ ಜೂನ್ 5 ರಂದು ಬಿಡುಗಡೆಯಾಗಲಿದೆ. ಜೂನ್ 4 ಎಸ್ ಪಿ ಬಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಚಿತ್ರ ಕನ್ನಡದಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ.

ಹರಿದಾಸರ ಚಿತ್ರಗಳ ನಿರ್ದೇಶಕರೆಂದೆ ಹೆಸರಾಗಿರುವ ಮಧುಸೂದನ್ ಹವಾಲ್ದಾರ್ ಹಾಗೂ ತ್ರಿವಿಕ್ರಮ ಜೋಶಿ ಅವರ ಸಾರಥ್ಯದಲ್ಲಿ ಈ ಚಿತ್ರದ ಕನ್ನಡದ ಅವತರಣಿಕೆ ಸಿದ್ದವಾಗಿದೆ. ಶ್ರೀದೇವಿ ಶ್ರೀನಿವಾಸ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಕನ್ನಡ ಅವತರಣಿಕೆಯ ಟೀಸರ್ ಬಿಡುಗಡೆ ಸಮಾರಂಭ ಹಾಗೂ ಪೂರ್ವಭಾವಿ ಪ್ರದರ್ಶನ ನಡೆಯಿತು. ನಟ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಸುಂದರರಾಜ್, ಎಸ್ ಪಿ ಬಿ ಅವರ ಆಪ್ತರಾದ ಗೋಪಿ, ಸೌಂಡ್ ಆಫ್ ಮ್ಯೂಸಿಕ್ ಗುರುರಾಜ್, ಪಿ.ಆರ್.ಓ ಸುಧೀಂದ್ರ ವೆಂಕಟೇಶ್, ಶ್ರೀದೇವಿ ಶ್ರೀನಿವಾಸ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಎಸ್ ಪಿ ಬಿ ಅವರ ಜೊತೆಗಿನ ಒಡನಾಟವನ್ನು ಹಂಚಿಕೊಂಡರು. ‘ಮಿಥುನಂ’ ಚಿತ್ರದ ಕನ್ನಡದ ಅವತರಣಿಕೆ ಯಶಸ್ವಿಯಾಗಲೆಂದು ಹಾರೈಸಿದರು.

ಇದನ್ನೂ ಓದಿ:‘ಕಾಲಾ ಹಿರನ್’: ಸಲ್ಮಾನ್ ಖಾನ್ ಕೃಷ್ಣಮೃಗ ಭೇಟೆ ಕೇಸು ಕುರಿತು ಸಿನಿಮಾ

ಈ ಸಂದರ್ಭದಲ್ಲಿ ಮಾತನಾಡಿದ ಮಧುಸೂದನ್ ಹವಾಲ್ದಾರ್, ನನಗೆ ತನಿಕೆಳ್ಳ ಭರಣಿ ಅವರು ಪರಿಚಯ. ಅವರ ಬಳಿ ಈ ಸಿನಿಮಾದ ರೈಟ್ಸ್ ಕೇಳಿದಾಗ, ಅವರು ನಿರ್ಮಾಪಕರನ್ನು ಕೇಳಿ ಎಂದರು. ನಿರ್ಮಾಪಕರು ಕನ್ನಡದಲ್ಲಿ ಬಿಡುಗಡೆ ಮಾಡುವುದಕ್ಕೆ ‌ಖುಷಿಯಿಂದ ರೈಟ್ಸ್ ನೀಡಿದರು. ಅದರೆ ಚಿತ್ರವನ್ನು ಆರು ತಿಂಗಳಲ್ಲಿ ಬಿಡುಗಡೆ ಮಾಡಬೇಕು ಮತ್ತು ‌ಎಸ್ ಪಿ ಬಿ ಅವರ ಧ್ವನಿಗೆ ಯಾವುದೇ ಧಕ್ಕೆ ಬಾರದ ಹಾಗೆ ಅಂತಹವರಿಂದ ಡಬ್ಬಿಂಗ್ ಮಾಡಿಸ ಬೇಕು ಎಂದರು. ಕನ್ನಡದಲ್ಲಿ ಪ್ರಭಾಕರ್ ಅವರ ಧ್ವನಿ ಕೇಳಿದಾಗ ಎಸ್ ಪಿ ಬಿ ಅವರ ಧ್ವನಿ ಕೇಳಿದ ಹಾಗೆ ಅನಿಸುತ್ತದೆ. ಇನ್ನೂ, ಈ ಚಿತ್ರ ಹದಿನೈದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು, ಆಗಿನ ಸೆನ್ಸಾರ್ ಮಂಡಳಿ ನಿಯಮಗಳಿಗೂ ಈಗಿನ ನಿಯಮಗಳಿಗೂ ವ್ಯತ್ಯಾಸವಿದೆ. ಅನಿಮಲ್ ಬೋರ್ಡ್ ಪರ್ಮಿಷನ್ ದೊರಕುವುದು ಸ್ವಲ್ಪ ತಡವಾಗಿರುವುದರಿಂದ ಕನ್ನಡದ ಅವತರಣಿಕೆ ಬಿಡುಗಡೆ ಸ್ವಲ್ಪ ತಡವಾಯಿತು. ಈಗ ಜೂನ್ 5 ರಂದು ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

RCB vs GT Final: ಪವರ್​ ಪ್ಲೇನಲ್ಲೇ ಗುಜರಾತ್ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಆರ್​ಸಿಬಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ತಂಡ ಪವರ್​​ಪ್ಲೇನಲ್ಲೇ ಅಂದರೆ ಮೊದಲ 6 ಓವರ್​​ಗಳಲ್ಲೇ ತನ್ನ ಬ್ಯಾಟಿಂಗ್‌ ಆಧಾರಸ್ತಂಭಗಳಾಗಿದ್ದ ನಾಯಕ ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಅವರ ವಿಕೆಟ್ ಕಳೆದುಕೊಂಡಿದೆ. ಈ ಎರಡು ವಿಕೆಟ್​ಗಳು ಕೇವಲ 26 ರನ್​ಗಳಿಗೆ ಪತನವಾದವು. ಇದರ ಪರಿಣಾಮವಾಗಿ ಗುಜರಾತ್ ಪವರ್​ಪ್ಲೇನಲ್ಲಿ 2 ವಿಕೆಟ್ ಕಳೆದುಕೊಂಡು 45 ರನ್ ಕಲೆಹಾಕಿದೆ.

Source link

ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ಪೋಸ್ಟ್; ಇಬ್ಬರು ಅಡ್ಮಿನ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿ, ಮೇ 31: ರಾಜ್ಯ ರಾಜಕೀಯ ವಲಯದಲ್ಲಿ ಪ್ರಭಾವಿ ನಾಯಕರಾಗಿರುವ ಸಚಿವ ಸತೀಶ್ ಜಾರಕಿಹೊಳಿ‌ (Satish Jarkiholi) ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ವದಂತಿ ಹರಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎರಡು ಫೇಸ್‌ಬುಕ್ ಪೇಜ್‌ಗಳ ಅಡ್ಮಿನ್‌ಗಳ ವಿರುದ್ಧ ಬೆಳಗಾವಿ (belagavi) ಜಿಲ್ಲಾ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮುಖ್ಯಾಂಶಗಳು

  • ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್ ಪೋಸ್ಟ್ ಹರಿಬಿಟ್ಟ ಕಿಡಿಗೇಡಿಗಳು
  • ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಂದ FIR
  • ಸತೀಶ್ ಜಾರಕಿಹೊಳಿ ಬೆಂಗಲಿಗರಿಂದ ದೂರು

ಸಿದ್ದರಾಮಯ್ಯಗೆ ದ್ರೋಹ ಬಗೆದ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ವಿರುದ್ಧ 37 ಶಾಸಕರ ಸಹಿ ಸಂಗ್ರಹ ಮಾಡಿ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ನಕಲಿ‌ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಹರಿಬಿಡಲಾಗಿತ್ತು. ಸುಳ್ಳು ಸುದ್ದಿ ವೈರಲ್​ ಆಗುತ್ತಿದ್ದಂತೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಬೆಳಗಾವಿಯ ಸಿಇಎನ್​ ಠಾಣೆಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ?

ಇನ್ನು ಈ ಬಗ್ಗೆ ರಾಜಶೇಖರ್ ತಳವಾರ ಎಂಬುವವರು ದೂರು ನೀಡಿದ್ದಾರೆ. ‘ಕರುನಾಡು ಕುರುಬಗೌಡ್ರು’ ಮತ್ತು ‘ಬಂಡಾಯದ ಧ್ವನಿ’ ಎಂಬ ಎರಡು ನಕಲಿ ಫೇಸ್‌ಬುಕ್ ಖಾತೆಗಳ ಮೂಲಕ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದ್ರೋಹ ಮಾಡಿದ್ದಾರೆ. ಸಿದ್ದರಾಮಯ್ಯನವರ ಜೊತೆಯಲ್ಲೇ ಇದ್ದುಕೊಂಡು ಅವರ ವಿರುದ್ಧವೇ ಸುಮಾರು 32-37 ಶಾಸಕರ ಸಹಿ ಸಂಗ್ರಹಿಸಿ, ಆ ಪಟ್ಟಿಯನ್ನು ಡಿ.ಕೆ. ಶಿವಕುಮಾರ್ ಅವರಿಗೆ ಕೊಟ್ಟಿದ್ದಾರೆ ಎಂದು ಡಿಕೆ ಶಿವಕುಮಾರ್​​ ಮತ್ತು ಸತೀಶ್ ಜಾರಕಿಹೊಳಿ ಒಟ್ಟಿಗೆ ಕುಳಿತಿರುವ ಫೋಟೋವನ್ನು ಎಡಿಟ್ ಮಾಡಿ ಅಪಪ್ರಚಾರ ಮಾಡಲಾಗಿದೆ.

ಇದನ್ನೂ ಓದಿ: ದಯಾಮರಣ ಕೊಡಿಸಿ ಎಂದು ಸಚಿವರಿಗೆ ಕೈಮುಗಿದು ವ್ಯಾಪಾರಿಯ ಮನವಿ: ಕಾರಣ ಇಲ್ಲಿದೆ

ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಹಾಳುಮಾಡುವುದು ಇದರ ಒಂದು ಉದ್ದೇಶ. ಜೊತೆಗೆ, ಈ ಪೋಸ್ಟ್‌ಗಳ ಮೂಲಕ ಕುರುಬ ಮತ್ತು ವಾಲ್ಮೀಕಿ ಸಮುದಾಯಗಳ ನಡುವೆ ದ್ವೇಷ ಹುಟ್ಟಿಸಿ, ಸಾರ್ವಜನಿಕ ಶಾಂತಿ ಕದಡಿ ಗಲಭೆ (ದೊಂಬಿ) ಸೃಷ್ಟಿಸುವುದು ಇದರ ಹಿಂದಿನ ಮುಖ್ಯ ಉದ್ದೇಶವಾಗಿದೆ. ಸಮಾಜದ ಶಾಂತಿ ಕದಡಲು ಯತ್ನಿಸುತ್ತಿರುವ ಈ ಎರಡು ನಕಲಿ ಫೇಸ್‌ಬುಕ್ ಖಾತೆಗಳ ಹಿಂದಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜಶೇಖರ್ ತಳವಾರ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಬೇಸಿಗೆ ರಜೆ ಮುಗಿಸಿ ಅಜ್ಜಿ ಮನೆಯಿಂದ ಹೊರಟ ಮೊಮ್ಮಗನನ್ನು ಕಂಡು ಭಾವುಕರಾದ ಅಜ್ಜಿ 

ಅಜ್ಜಿ ಮನೆ ಎಂದರೆ ಎಲ್ಲಾ ಮೊಮ್ಮಕ್ಕಳಿಗೂ (grandchildren) ಸ್ವರ್ಗ. ಬಾಲ್ಯದ ಸುಂದರ ಬೇಸಿಗೆ ನೆನಪುಗಳು ಬೆಸೆದುಕೊಂಡಿರುವುದು ಅದೇ ಮನೆಯಲ್ಲಿ. ಬೇಸಿಗೆ ರಜೆ (summer vacation) ಶುರುವಾಗುತ್ತಿದ್ದಂತೆ ಯಾವಾಗ ಅಜ್ಜಿ ಮನೆಗೆ ಹೋಗುತ್ತೇನೆ ಎಂದು ಅದೆಷ್ಟೋ ಮಕ್ಕಳು ಕಾಯುತ್ತಾರೆ. ಅಜ್ಜಿಯ ಮಡಿಲಲ್ಲಿ ಮಲಗಿ ಕಥೆಗಳನ್ನು ಕೇಳುವುದು, ಅಜ್ಜನ ಜತೆಗೆ ಊರು ಸುತ್ತುವುದು ಇಂತಹ ನೆನಪುಗಳು ಒಂದೆರಡಲ್ಲ. ಹಳ್ಳಿಗಳಲ್ಲಿನ ಅಜ್ಜಿ ಮನೆಯ ಅನುಭವವು ಇಂದಿಗೂ ಅಷ್ಟೇ ಅಮೂಲ್ಯ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಬೇಸಿಗೆ ರಜೆ ಮುಗಿಸಿ ತನ್ನ ಮನೆಗೆ ಹೊರಡು ನಿಂತಿರುವ ಮೊಮ್ಮಗನನ್ನು ತಬ್ಬಿಕೊಂಡು ಅಳುತ್ತಾ ನಿಂತಿರುವ ಹಿರಿಜೀವದ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಅಪೋಲೋ ಇಂಗ್ಲಿಷ್ ಸ್ಕೂಲ್ ದೊಂಬರಹಳ್ಳಿ (Apollo English School Dombarahalli) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ಬೇಸಿಗೆ ರಜೆ ತನ್ನ ಅಜ್ಜಿ ಮನೆಗೆ ಬಂದ ಮೊಮ್ಮಗ ಮತ್ತೆ ಮನೆಗೆ ಕಳುಹಿಸಿ ಕೊಡುವ ದೃಶ್ಯ ಕಾಣಬಹುದು. ಕಾರು ಹತ್ತಿ ಕುಳಿತಿರುವ ಮೊಮ್ಮಗನನ್ನು ತಬ್ಬಿಕೊಂಡು ಕಣ್ಣೀರು ಸುರಿಸುತ್ತಿರುವ ಅಜ್ಜಿಯನ್ನು ನೀವಿಲ್ಲಿ ಕಾಣಬಹುದು. ಅಜ್ಜಿಯನ್ನು ಬಿಟ್ಟು ಹೋಗಲು ಮನಸ್ಸಿಲ್ಲದೇ ಮೊಮ್ಮಗನು ಕಣ್ಣೀರು ಹಾಕುತ್ತಿದ್ದಾನೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನನ್ನ ಅಜ್ಜಿ ಪಿಜ್ಜಾ ಪ್ರಿಯೆ; ಬಾಯಿ ಚಪ್ಪರಿಸಿಕೊಂಡು ಪಿಜ್ಜಾ ತಿಂದ ಅಜ್ಜಿ

ಈ ವಿಡಿಯೋ ಇಪ್ಪತ್ತೆಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಆ ದಿನಗಳು ಮತ್ತೆ ಮರಳಿ ಕೇಳುವೆ ಎಂದಿದ್ದಾರೆ. ಇನ್ನೊಬ್ಬರು, ನನ್ನ ಅಜ್ಜಿಯ ಮನೆಯ ನೆನಪಾಯಿತು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಅಜ್ಜಿ ತಾತ ಇದ್ರೆ ಅಪ್ಪ ಅಮ್ಮನನ್ನೇ ಮರೆತು ಬಿಡ್ತೇವೆ ಅಂತಹ ಪ್ರೀತಿ ಅದು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link