All posts by nagaraj11081993

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ಥಾನ ಪರಿಶ್ರಮದಿಂದ ಮೇಲೇರುವ ಸಾಧ್ಯತೆ ಇದೆ

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ಥಾನ ಪರಿಶ್ರಮದಿಂದ ಮೇಲೇರುವ ಸಾಧ್ಯತೆ ಇದೆ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಸೌಭಾಗ್ಯ, ಕರಣ : ವಣಿಜ, ಸೂರ್ಯೋದಯ – 06 – 25 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:01 – 15:32 ಯಮಗಂಡ ಕಾಲ 09:26 – 07:57, ಗುಳಿಕ ಕಾಲ 09:28 – 10:59

ಮೇಷ ರಾಶಿ :

ನೀವು ತೆಗೆದುಕೊಳ್ಳುವ ನಿರ್ಣಯವು ಪೂರ್ಣ ಬೆಂಬಲದಿಂದ ಕೂಡಿರದು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಕೆಡಿಸುವುದು. ಅಸಾಧ್ಯವಾದುದನ್ನು ಸಾಧಿಸುವ ಭ್ರಮೆಯಿಂದ ಹೊರಬನ್ನಿ. ಅಹಂಕಾರ ಸುಳಿಯುವ ಸಾಧ್ಯತೆ ಇದೆ. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ಮಕ್ಕಳ‌ ವಿವಾಹ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ಮಾತನ್ನು ಚೆನ್ನಾಗಿ ಇಟ್ಟುಕೊಂಡು ವ್ಯವಹಾರವನ್ನು ಮುನ್ನಡೆಸುವಿರಿ.

ವೃಷಭ ರಾಶಿ :

ಕೃತಜ್ಞತೆಯನ್ನು ಬೆಳೆಸಿಕೊಳ್ಳುವುದು ನಿಮ್ಮ ವ್ಯಕ್ತಿತ್ವವನ್ನು ಬದಲಿಸಬಹುದು. ಪ್ರೇಮದಲ್ಲಿ ಹಿನ್ನಡೆಯಾಗಲಿದೆ. ತಾಳ್ಮೆಯಿಂದ ಮುಖ್ಯ ಆಯುಧವಾಗಿರಲಿ. ವಿದೇಶದ ಕನಸು ಸದ್ಯ ಸಾಕಾರವಾಗದು. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಉನ್ನತ ಅಭ್ಯಾಸದಿಂದ ಹಿಂದೇಟುಹಾಕುವ ಸ್ಥಿತಿ ಬರಬಹುದು. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಂಡು ಸಮಾಧಾನ ಪಡುವಿರಿ. ತುರ್ತು ಅವಶ್ಯಕತೆ ಇರುವುದು. ಇನ್ನೊಬ್ಬರ ಯೋಜನೆಯನ್ನು ನಿಮ್ಮದೆಂದು ಸಾಧಿಸುವಿರಿ.‌

ಮಿಥುನ ರಾಶಿ :

ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಇರುವುದು. ವಿದ್ಯಾರ್ಥಿಗಳು ಅನಾರೋಗ್ಯದಿಂದ ವಿಶ್ರಾಂತಿ ಪಡೆಯಬೇಕಾಗಬಹುದು. ಅಧಿಕಾರಕ್ಕಾಗಿ ಯಾರನ್ನೂ ವಂಚಿಸಬಹುದು. ಸರಿಯಾದ ಹಂಚಿಕೊಂಡು ಕೆಲಸವನ್ನು ಮಾಡುವುದು ಸೂಕ್ತ. ಕಛೇರಿಯ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು. ಅಪರಿಚಿತರ ಜೊತೆ ಮಾತನಾಡಲು ಬಹಳ ಹಿಂಜರಿಕೆ ಇರುವುದು.

ಕರ್ಕಾಟಕ ರಾಶಿ :

ಅವಶ್ಯಕತೆ ಇರುವವರಿಗೆ ಬೇಕಾದ ಸಹಾಯವನ್ನು ಮಾಡಿ. ಇಂದಿನ ಕೆಲವು ಮಾತುಗಳು ನಿಮಗೆ ಇಷ್ಟವಾಗದೇ ಹೋಗುವುದು. ಕೆಲವು ವಿಚಾರದಲ್ಲಿ ನೀವು ಆತುರರಾಗುವಿರಿ. ಮನೆಯ ಖರೀದಿಯ ಬಗ್ಗೆ ಉತ್ಸಾಹ ತೋರುವಿರಿ. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ. ಮನೆಯ ವಾತಾರಣದಲ್ಲಿ ಇರಲು ಖುಷಿಯಾಗುವುದು.‌ ನಿಮ್ಮ ರಹಸ್ಯವನ್ನು ನೀವು ಗೊತ್ತಿಲ್ಲದೇ ಬೇರೆಯವರ ಜೊತೆ ಹಂಚಿಕೊಳ್ಳುವಿರಿ.

ಸಿಂಹ ರಾಶಿ :

ಊಹಿಸದೇ ಇರುವ ಕಡೆಯಿಂದ ನಿಮಗೆ ಬೇಕು ಎನಿಸಿದ ಸಂಪತ್ತು ದೊರೆಯುವುದು. ಸರ್ಕಾರೀ ಮೂಲದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ನೂತನ‌ ಸ್ನೇಹವನ್ನು ಬೆಳೆಸಿಕೊಳ್ಳುವಿರಿ. ಆಕರ್ಷಕ ಮಾತಿಗೆ ಮನಸೋತು ಪ್ರೀತಿಯಲ್ಲಿ ಬೀಳುವಿರಿ. ನಿಮ್ಮನ್ನು ಅಧಿಕಾರದಲ್ಲಿ ಕುಳ್ಳಿರಿಸಲು ಮೇಲಧಿಕಾರಿಗಳು ಕಾಯುವರು.

ಕನ್ಯಾ ರಾಶಿ :

ಮುಖವನ್ನು ಗಂಟು ಹಾಕಿಕೊಂಡು ಇರುವುದರಿಂದ ನಿಮ್ಮಿಂದ ಜನರನ್ನು ದೂರವಿರಿಸುವುದು. ಅತಿಯಾದ ಆಡಂಬರವು ನಿಮಗೆ ಇಷ್ಟವಾಗದು. ಬೇಡವೆನಿಸಿದವರನ್ನು ನಿಧಾನವಾಗಿ ಗೊತ್ತಾಗದಂತೆ ಪಕ್ಕಕ್ಕೆ ಸರಿಸುವಿರಿ. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಉದ್ಯೋಗಕ್ಕೆ ವಿರಾಮ ಹೇಳಿ ಹೊರಗೆ ಸುತ್ತಾಟವನ್ನು ಮಾಡುವಿರಿ. ಎಲ್ಲ ಕಾರ್ಯವನ್ನೂ ನೀವೇ ಮಾಡಬೇಕು ಎಂಬ ಹೆಬ್ಬಯಕೆ ಬೇಡ. ಸಂತೋಷಕೂಟಕ್ಕೆ ಹಣವನ್ನು ಖರ್ಚು ಮಾಡಬೇಕಾದೀತು.

ತುಲಾ ರಾಶಿ :

ಇಂದು ನೀವು ತೋರಿಕೆಗೆ ಬಹಳ ಶಾಂತರಂತೆ ಕಂಡರೂ ಒಳಗೇ ಜ್ವಾಲಗ್ನಿಯಂತೆ ಕುದಿಯುವಿರಿ. ಎಲ್ಲ ವಿಚಾರದಲ್ಲಿಯೂ ಅಸಮಾಧನವು ಇರಲಿದೆ. ಪರರ ಅವಕಾಶವನ್ನು ನೋಡಿ ಮನಸ್ಸಿನಲ್ಲಿ ಸಂಕಟ. ಅತಿಯಾದ ಒತ್ತಡವು ನಿಮ್ಮ ದಕ್ಷತೆಯನ್ನು ಕಡಿಮೆ‌ ಮಾಡುವುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ. ಇಂದು ಖರೀದಿಸಿದ ಹೊಸ ವಸ್ತುಗಳು ನಿಮಗೆ ಬಹಳ ಖುಷಿಯನ್ನು ಕೊಡುವುದು. ವೃತ್ತಿಯಲ್ಲಿ ನಿಮ್ಮನ್ನು ಗುರುತಿಸಿರುವುದು ಮನಸ್ಸನ್ನು ಹಿಗ್ಗಿಸಿರುವುದು.

ವೃಶ್ಚಿಕ ರಾಶಿ :

ನಿಮ್ಮ ಕಾರ್ಯಕ್ಷಮತೆ ಕಡಿಮೆಯಾದಂತೆ ತೋರುವುದು. ಯಾವ ಹೊಸತನ್ನೂ ಸ್ವೀಕರಿಸುವ ಮಾನಸಿಕತೆ ಇಂದು ಇರದು. ಎಲ್ಲ ವಿಚಾರಕ್ಕೂ ನಿಮ್ಮ ಮೌನಮುದ್ರೆಯು ಒತ್ತಿರುವುದು. ಹೂಡಿಕೆಯನ್ನು ಹಿಂಪಡೆಯುವ ಸಾಧಿಸುವಿರಿ ಇದೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಶುಭವಾದ ಕೆಲಸಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ.

ಧನು ರಾಶಿ :

ದುಡುಕಿನಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ಉದ್ಯಮಕ್ಕೆ ಸಂಬಂಧಿಸಿದ ಸರಿಯಾದ ನಿರ್ಧಾರವನ್ನು ಯಾರಿಂದಲಾದರೂ ಪಡಡಸುಕೊಳ್ಳಿ. ನಿಮ್ಮ ಚಾಂಚಲ್ಯದ ಸ್ಥಿತಿಗೆ ಸಿಟ್ಟಾಗಬಹುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು‌‌. ಕಛೇರಿಯಲ್ಲಿ ನಿಮ್ಮ ಶ್ರಮಕ್ಕೆ ಮೆಚ್ಚುಗೆ ಉಂಟಾಗಲಿದೆ‌. ಹಣಕಾಸಿನ ವ್ಯವಹಾರದಲ್ಲಿ ಹಿನ್ನಡೆ ಉಂಟಾಗಬಹುದು.

ಮಕರ ರಾಶಿ :

ಪತ್ರವ್ಯವಹಾರವು ಸಂಪೂರ್ಣ ಪ್ರಾಮಾಣಿಕವಾಗಿ ಇರದು ಎಂಬುದು ಗಮನದಲ್ಲಿ ಇರಲಿ. ನಿಮ್ಮ ಉದ್ಯೋಗವನ್ನು ನೀವು ಪ್ರೀತಿಸುವಿರಿ. ಕೇಳಿಕೊಂಡು ಬಂದವರಿಗೆ ನಿಮ್ಮಿಂದ ಅಲ್ಪ ಸಹಾಯ ಸಿಗುವುದು. ಕುಟುಂಬದ ಜವಾಬ್ದಾರಿಯನ್ನು ಸಂಗಾತಿ ನೋಡಿಕೊಳ್ಳುವಂತೆ ಮಾಡುವಿರಿ. ಭೋಗವಸ್ತುಗಳನ್ನು ಖರೀದಿ ಮಾಡುವಿರಿ. ಇವತ್ತಿಗೆ ತುರ್ತಾಗಿ ಬೇಕಾದುದನ್ನು ಸ್ನೇಹಿತರಿಂದ ಪಡೆದುಕೊಳ್ಳುವಿರಿ. ಪಕ್ಷಪಾತ ಮಾಡದೇ ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುವ ಪ್ರಯತ್ನ ಮಾಡಿ.

ಕುಂಭ ರಾಶಿ :

ಇಂದು ಬಂಧುಗಳಿಂದ ನೀವು ದೂರವಾಗುವಿರಿ. ಸದಾ ಅನ್ಯರ ಬಗ್ಗೆ ಆಲೋಚನೆ ಮಾಡುವುದನ್ನು ಬಿಡಿ. ನೆರೆ ಹೊರೆಯವರ ವಿಚಾರದಲ್ಲಿ ಸಣ್ಣ ಅಸಮಾಧಾನ ಇರಲಿದೆ. ದೇಹಕ್ಕೆ ತೊಂದರೆ ಮಾಡಿಕೊಳ್ಳುವ ಸನ್ನಿವೇಶವಿರಲಿದೆ. ಮನೆಯ ಬದಲಾವಣೆಯನ್ನು ಮಾಡುವಿರಿ. ನಿಮ್ಮ ನಡಿಗೆಯೇ ವಿಶ್ವಾಸದಿಂದ ಇರುವುದನ್ನು ಹೇಳುತ್ತದೆ. ಇದರಿಂದ ಅಪಮಾನವು ಆಗುವುದು. ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಮಸ್ಯೆಯಾಗಬಹುದು. ಇಂದು ಭಯವು ಕಾಡಲಿದ್ದು ಮನೆಯನ್ನು ಬಿಟ್ಟು ಹೋಗಲಾರಿರಿ.

ಮೀನ ರಾಶಿ :

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ತೊಂದರೆ ಆಗಲಿದ್ದು ಮನಸ್ಸು ಪ್ರೇಮದ ಕಾರಣಕ್ಕೆ ವಿಚಲಿತವಾಗಬಹುದು. ಮಿತ್ರರು ನಿಮಗೆ ಸಹಕಾರ ನೀಡಲಾರರು. ಸಾಲ ಮಾಡುವ ಸಂದರ್ಭವನ್ನು ತಂದುಕೊಳ್ಳುವುದು ಬೇಡ. ವಿದ್ಯಾರ್ಥಿಗಳ ಕ್ರಿಯಾಶೀಲ ವ್ಯಕ್ತಿತ್ವದಿಂದ ಎಲ್ಲರ ಗಮನವನ್ನು ಸೆಳೆಯುವರು‌. ಇಂದಿನ ಹೂಡಕೆಯು ಲಾಭದಾಯಕವಾಗಿರುವುದು. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ಅತಿಯಾದ ಕಾರ್ಯಗಳಿಂದ ಏಕಾಂಗಿಯಾಗಿ ಇರಬೇಕು ಎಂದು ಅನ್ನಿಸಬಹುದು.

-ಲೋಹಿತ ಹೆಬ್ಬಾರ್-8762924271 (what’s app only)

Source link

ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ: ಕೃತಿಚೌರ್ಯ ಎಂದವರಿಗೆ ಡಾರ್ಲಿಂಗ್ ಕೃಷ್ಣ ಪ್ರತಿಕ್ರಿಯೆ

ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ್ದಾರೆ. ಅದರಿಂದಾಗಿ ಡಾರ್ಲಿಂಗ್ ಕೃಷ್ಣ ಗರಂ ಆಗಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಹಲವು ವಿಷಯಗಳಿಗೆ ಪ್ರತಿಕ್ರಿಯಿಸಿದರು. ‘ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಆರೋಪದಲ್ಲಿ ಲಾಜಿಕ್ ಇಲ್ಲ. ಚಿತ್ರಕತೆ, ಡೈಲಾಗ್ ಅಥವಾ ಯಾವುದೇ ಸೀನ್ ಕೂಡ ಕಾಪಿ ಆಗಿಲ್ಲ ಅಂತ ಅವರೇ ಹೇಳಿದ್ದಾರೆ. ಮತ್ತೆ ಯಾಕೆ ಬಂದಿದ್ದಾರೆ? ಸೋಶಿಯಲ್ ಮೀಡಿಯಾದಲ್ಲಿ, ಗೂಗಲ್​ನಲ್ಲಿ ಸಿಗುವ ಕಥೆಯನ್ನು ಇಟ್ಟುಕೊಂಡು ಬಂದು ಇದು ತಮ್ಮ ಕಥೆ ಅಂತ ಹೇಳುತ್ತಿದ್ದಾರಲ್ಲ. ಇವರಿಗೆ ಕಾಮನ್ ಸೆನ್ಸ್ ಏನಾದರೂ ಇದೆಯಾ?’ ಎಂದು ಡಾರ್ಲಿಂಗ್ ಕೃಷ್ಣ (Darling Krishna) ಅವರು ಖಡಕ್ ಆಗಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಮುಂಬೈ, ಮಾರ್ಚ್ 25: ಮಹಾರಾಷ್ಟ್ರದ ಜಲ್ನಾದಲ್ಲಿ ಟೊಮ್ಯಾಟೊ ಬೆಲೆ (Tomato Price) ಕುಸಿತವಾಗಿದೆ. ಇದರಿಂದ ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರು ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗದ ಕಾರಣದಿಂದಾಗಿ ತಮ್ಮ ಬೆಳೆಯನ್ನು ನಾಶಪಡಿಸಿ ಪ್ರತಿಭಟಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದ್ದರು. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್ ಸಿಗಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: 2-0 ಇರೋದ್ನ 4-0 ಮಾಡ್ತೀನಿ; ಸಿಎಸ್​ಕೆಗೆ ಸವಾಲು ಹಾಕಿದ ವೈಭವ್ ಸೂರ್ಯವಂಶಿ

2026 ರ ಐಪಿಎಲ್ (IPL 2026) ಮಾರ್ಚ್ 28 ರಂದು ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಈ ಪಂದ್ಯ ಮುಗಿದ ಒಂದು ದಿನದ ನಂತರ ಅಂದರೆ ಮಾರ್ಚ್​ 30 ರಂದು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (CSK vs RR) ತಂಡಗಳು ಮುಖಾಮುಖಿಯಾಗಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಆಟಗಾರ 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi), ಧೋನಿ ತಂಡ ಸಿಎಸ್‌ಕೆಗೆ ಮುಕ್ತ ಸವಾಲು ಹಾಕಿದ್ದು, ಈ ಆವೃತ್ತಿಯಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸುವುದಾಗಿ ಭರವಸೆ ನೀಡಿದ್ದಾರೆ.

ಸಿಎಸ್‌ಕೆಗೆ ಸವಾಲು ಹಾಕಿದ ವೈಭವ್

ವಾಸ್ತವವಾಗಿ ಕೆಲವು ದಿನಗಳ ಹಿಂದೆ ನಡೆದಿದ್ದ ಬಿಸಿಸಿಐ ನಮನ್ ಪ್ರಶಸ್ತಿ ಸಮಾರಂಭದಲ್ಲಿ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುವ ವೈಭವ್ ಸೂರ್ಯವಂಶಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಆಯುಷ್ ಮ್ಹಾತ್ರೆ ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ಇಬ್ಬರು ಅಂಡರ್ 19 ಕ್ರಿಕೆಟ್‌ನಲ್ಲಿ ಒಟ್ಟಿಗೆ ಆಡಿದ್ದರಿಂದ ಇಬ್ಬರ ಮಧ್ಯೆ ಆತ್ಮೀಯತೆ ಹೆಚ್ಚಿದೆ. ಹೀಗಾಗಿ ಆ ಕಾರ್ಯಕ್ರಮದಲ್ಲಿ, ವೈಭವ್ ಸೂರ್ಯವಂಶಿ, ಸಿಎಸ್​ಕೆ ಪರ ಆಡುವ ಆಯುಷ್ ಮ್ಹಾತ್ರೆಗೆ ಸವಾಲೊಂದನ್ನು ಹಾಕಿದ್ದರು.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೇರಿದಾಗಿನಿಂದ ಸಿಎಸ್‌ಕೆ ಎರಡು ಬಾರಿ ಸೋತಿದೆ. ಈ ಬಾರಿ ಅದು 4-0 ಅಂತರಕ್ಕೇರಲಿದೆ ಎಂದು ವೈಭವ್ ಸೂರ್ಯವಂಶಿ, ಆಯುಷ್ ಮ್ಹಾತ್ರೆ ಅವರಿಗೆ ತಿಳಿಸಿದರು. ಸೂರ್ಯವಂಶಿ ಹೇಳಿಕೆಯ ಅರ್ಥ, ಐಪಿಎಲ್ 2025 ರಲ್ಲಿ ಸಿಎಸ್‌ಕೆ, ಆರ್‌ಆರ್ ವಿರುದ್ಧ ಆಡಿದ್ದ ಎರಡೂ ಪಂದ್ಯಗಳನ್ನು ಸೋತಂತೆ, ಈ ಬಾರಿಯೂ ಸೋಲಲಿದೆ ಎಂದಿದ್ದಾರೆ. ಐಪಿಎಲ್ ಗುಂಪು ಹಂತದಲ್ಲಿ ಪ್ರತಿಯೊಂದು ತಂಡವು ಪರಸ್ಪರ ಎರಡು ಬಾರಿ ಮುಖಾಮುಖಿಯಾಗಲಿದ್ದು, ಈ ಎರಡೂ ಪಂದ್ಯಗಳಲ್ಲಿ ಸಿಎಸ್​ಕೆ ತಂಡವನ್ನು ಸೋಲಿಸುವುದಾಗಿ ವೈಭವ್ ಸೂರ್ಯವಂಶಿ ತಮಾಷೆಯಾಗಿ ಹೇಳಿದ್ದಾರೆ.

ಐಪಿಎಲ್​ನಲ್ಲಿ 30 ಲಕ್ಷಕ್ಕೆ ಮಾರಾಟವಾಗಿದ್ದವ ಈಗ 16 ಸಾವಿರ ಕೋಟಿ ಮೌಲ್ಯದ ಆರ್​ಸಿಬಿಗೆ ಅಧ್ಯಕ್ಷ

ಕಳೆದ ಮುಖಾಮುಖಿ ಹೇಗಿತ್ತು?

ಐಪಿಎಲ್ 2025 ರಲ್ಲಿ ಆರ್‌ಆರ್ ಮತ್ತು ಸಿಎಸ್‌ಕೆ ನಡುವಿನ ಮೊದಲ ಮುಖಾಮುಖಿ ಮಾರ್ಚ್ 30 ರಂದು ನಡೆದಿತ್ತು ಇದರಲ್ಲಿ ರಾಜಸ್ಥಾನ್, ಚೆನ್ನೈ ತಂಡವನ್ನು 6 ರನ್‌ಗಳಿಂದ ಸೋಲಿಸಿತ್ತು. ವೈಭವ್ ಸೂರ್ಯವಂಶಿ ಆ ಪಂದ್ಯದಲ್ಲಿ ಆಡದಿದ್ದರೂ, ರಾಜಸ್ಥಾನ ತಂಡದ ಭಾಗವಾಗಿದ್ದರು. ಉಭಯ ತಂಡಗಳ ಎರಡನೇ ಮುಖಾಮುಖಿ ಮೇ 20 ರಂದು ನಡೆದಿತ್ತು. ಈ ಪಂದ್ಯದಲ್ಲೂ ರಾಜಸ್ಥಾನ್, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ, ವೈಭವ್ ಸೂರ್ಯವಂಶಿ 33 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 57 ರನ್​ಗಳ ಇನ್ನಿಂಗ್ಸ್‌ ಆಡಿದ್ದರು. ಇದೀಗ ಲೀಗ್ ಆರಂಭಕ್ಕೂ ಮುನ್ನ ಈ ರೀತಿಯ ಹೇಳಿಕೆ ನೀಡಿರುವ ವೈಭವ್, ಪಂದ್ಯದ ದಿನ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಾಲೆಗೆ ಹೋಗು ಎಂದಿದ್ದಕ್ಕೆ ಮಹಿಳೆಗೆ ಚಾಕುವಿನಿಂದ ಇರಿದ 11ನೇ ತರಗತಿ ವಿದ್ಯಾರ್ಥಿ

ರಾಣಿಪೇಟೆ, ಮಾರ್ಚ್ 25: ಶಾಲೆಗೆ ಹೋಗದೆ ಗೆಳೆಯರ ಜೊತೆ ಓಡಾಡಿಕೊಂಡಿದ್ದಕ್ಕಾಗಿ ಮಹಿಳೆಯೊಬ್ಬರು 11ನೇ ತರಗತಿ ವಿದ್ಯಾರ್ಥಿಗೆ ಗದರಿದ್ದರು. ಇದೇ ಕಾರಣದಿಂದ ಆತ ಆ ಮಹಿಳೆಯ ಮೇಲೆ ಚಾಕುವಿನಿಂದ ಹಿಂಸಾತ್ಮಕವಾಗಿ ಹಲ್ಲೆ ಮಾಡಿದ್ದಾನೆ. 16 ವರ್ಷದ ಆ ವಿದ್ಯಾರ್ಥಿಯನ್ನು ಅರಕ್ಕೋಣಂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಊರಿನಲ್ಲಿ ಆಘಾತ ಸೃಷ್ಟಿಸಿದೆ. ರಾಣಿಪೇಟೆ ಜಿಲ್ಲೆಯ ಅರಕ್ಕೋಣಂನ ಓಥವಡೈ ಬೀದಿಯಲ್ಲಿ ವಾಸಿಸುವ ಸರವಣನ್ ಮತ್ತು ಸತ್ಯ ದಂಪತಿಗೂ ಆ ಬಾಲಕನ ಕುಟುಂಬಕ್ಕೂ ಬಹಳ ಪರಿಚಯವಿತ್ತು. ಸರವಣನ್ ವಿಮಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಸ್ನೇಹಿತ ಲಕ್ಷ್ಮಿಪತಿ ಕೂಡ ಅದೇ ವೃತ್ತಿಯಲ್ಲಿದ್ದರು. ಈ ಇಬ್ಬರೂ ಪರಸ್ಪರರ ಮನೆಗೆ ಬಂದು ಹೋಗುತ್ತಿದ್ದುದರಿಂದ ಅವರ ಕುಟುಂಬಕ್ಕೂ ಅವರಿಬ್ಬರ ಗೆಳೆತನ ಗೊತ್ತಿತ್ತು.

ಲಕ್ಷ್ಮಿಪತಿಯ 16 ವರ್ಷದ ಮಗ ಸತ್ಯ ಅವರ ಮನೆಗೆ ಆಗಾಗ ಭೇಟಿ ನೀಡುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದ. ಆತ ಕಳೆದ ಮೂರ್ನಾಲ್ಕು ದಿನಗಳಿಂದ ಶಾಲೆಗೆ ಹೋಗಿಲ್ಲ ಎಂಬ ವಿಷಯ ಸತ್ಯ ಅವರಿಗೆ ಗೊತ್ತಾಗಿತ್ತು. ಅವನು ತನ್ನ ಗಂಡನ ಸ್ನೇಹಿತನ ಮಗನಾಗಿದ್ದರಿಂದ ಸತ್ಯ ಆತನನ್ನು ಕರೆದು ಅಪ್ಪ-ಅಮ್ಮ ಹೇಳಿದ್ದನ್ನು ಕೇಳಬೇಕು, ದಿನವೂ ಶಾಲೆಗೆ ಹೋಗಬೇಕೆಂದು ಸಲಹೆ ನೀಡಿದ್ದರು. ಈ ವೇಳೆ ಕೋಪದಿಂದ ಆತ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: ನಾಚಿಕೆಯಾಗುವುದಿಲ್ಲವೇ?; 4 ವರ್ಷದ ಮಗು ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ

ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಸತ್ಯ ಅವರ ಮನೆಯಿಂದ ಕಿರುಚಾಟಗಳು ಕೇಳಿಬಂದವು. ನೆರೆಹೊರೆಯವರು ಸ್ಥಳಕ್ಕೆ ಧಾವಿಸಿದಾಗ ಚಾಕು ಹಿಡಿದು ನಿಂತಿದ್ದ ವಿದ್ಯಾರ್ಥಿಯನ್ನು ನೋಡಿದರು. ಅವನು “ಯಾರಾದರೂ ಹತ್ತಿರ ಬಂದರೆ, ನಾನು ನಿಮ್ಮನ್ನು ಇರಿದು ಹಾಕುತ್ತೇನೆ” ಎಂದು ಬೆದರಿಸುತ್ತಾ ಓಡಿಹೋದ. ಅವರೆಲ್ಲ ಮನೆಯೊಳಗೆ ಹೋಗಿ ನೋಡಿದಾಗ ಇಡೀ ರೂಂ ರಕ್ತದಲ್ಲಿ ಮುಳುಗಿರುವುದನ್ನು ನೋಡಿ ಗಾಬರಿಗೊಂಡರು. ಸತ್ಯಾಳ ದೇಹದಾದ್ಯಂತ ಹಲವು ಕಡೆ ಇರಿತದ ಗಾಯಗಳಿದ್ದವು.

ಇದನ್ನೂ ಓದಿ: ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ಅಣ್ಣ-ತಂಗಿ ಸಾವು

ಈ ಘಟನೆಯ ಬಗ್ಗೆ ಅರಕ್ಕೋಣಂ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಲಾಯಿತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸತ್ಯಾಳನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ತಿರುವಳ್ಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆಕೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಆ ವಿದ್ಯಾರ್ಥಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನದಂತೆ ಭಾರತ ದಲ್ಲಾಳಿ ರಾಷ್ಟ್ರವಲ್ಲ; ಇರಾನ್ ಯುದ್ಧದ ಮಧ್ಯಸ್ಥಿಕೆ ಕುರಿತು ಸಚಿವ ಜೈಶಂಕರ್ ವ್ಯಂಗ್ಯ

ನವದೆಹಲಿ,ಮಾರ್ಚ್ 25: ಮಧ್ಯಪ್ರಾಚ್ಯ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದಿಂದ ಜಗತ್ತಿನ ನಾನಾ ದೇಶಗಳು ಕಂಗೆಟ್ಟು ಕುಳಿತಿವೆ. ಕದನವಿರಾಮ ಘೋಷಣೆಯಾಗಲು ಹಲವು ದೇಶಗಳು ಪ್ರಯತ್ನ ಮಾಡುತ್ತಿವೆ. ಇದರ ನಡುವೆ ಇರಾನ್- ಇಸ್ರೇಲ್- ಅಮೆರಿಕದ ಯುದ್ಧದಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆ ಪ್ರಯತ್ನವನ್ನು ಭಾರತ ಅಪಹಾಸ್ಯ ಮಾಡಿದೆ. ಇಂದು ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಪಾಕಿಸ್ತಾನವನ್ನು “ದಲ್ಲಾಳಿ ರಾಷ್ಟ್ರ” (ಬ್ರೋಕರ್) ಎಂದು ಅಪಹಾಸ್ಯ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಭಾರತವು ಪಾಕಿಸ್ತಾನದಂತೆ ಮಧ್ಯವರ್ತಿ ಅಥವಾ ದಲ್ಲಾಳಿ ರಾಷ್ಟ್ರವಾಗಿ ಕಾರ್ಯನಿರ್ವಹಿಸುವುದಿಲ್ಲ” ಎಂದು ಸಭೆಯಲ್ಲಿ ಸಚಿವ ಜೈಶಂಕರ್ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಪಾಕಿಸ್ತಾನ ಅಮೆರಿಕ ಮತ್ತು ಇರಾನ್ ನಡುವೆ ಮಧ್ಯಸ್ಥಿಕೆ ವಹಿಸಲು ಮುಂದಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತ ಪ್ರತಿಕ್ರಿಯೆ ನೀಡಿದೆ.

ಇದನ್ನೂ ಓದಿ: ಎಲ್​ಪಿಜಿ ಬಿಕ್ಕಟ್ಟು ಎದುರಿಸಲು ಹರ್ದೀಪ್ ಪುರಿ ಮತ್ತು ಜೈಶಂಕರ್ ಜೊತೆ ಪ್ರಧಾನಿ ಮೋದಿ ಸಭೆ

ಇಲ್ಲಿಯವರೆಗೆ 4,25,000 ಭಾರತೀಯರನ್ನು ಇರಾನ್‌ನಿಂದ ಮರಳಿ ಕರೆತರಲಾಗಿದೆ ಎಂದು ಇಂದಿನ ಸರ್ವಪಕ್ಷ ಸಭೆಯಲ್ಲಿ ತಿಳಿಸಲಾಯಿತು. ಇರಾನ್‌ನಲ್ಲಿ ಉಳಿದಿರುವವರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸಚಿವ ಜೈಶಂಕರ್ ತಿಳಿಸಿದ್ದಾರೆ ಎನ್ನಲಾಗಿದೆ.

ಇರಾನ್ ಮೇಲಿನ ಅಮೆರಿಕದ ನಿರ್ಬಂಧಗಳು 15 ವರ್ಷಗಳಿಗೂ ಹೆಚ್ಚು ಕಾಲ ಜಾರಿಯಲ್ಲಿವೆ ಮತ್ತು ಅದು ಭಾರತವು ತನ್ನ ಇಂಧನ ಅಗತ್ಯಗಳನ್ನು ಭದ್ರಪಡಿಸಿಕೊಳ್ಳಲು ಇರಾನಿನ ತೈಲವನ್ನು ಖರೀದಿಸುವುದನ್ನು ತಡೆಯಲಿಲ್ಲ ಎಂದು ಸಭೆಯಲ್ಲಿ ಕೇಂದ್ರ ಸರ್ಕಾರವು ಹೇಳಿದೆ ಎನ್ನಲಾಗಿದೆ. ಹಾಗೇ,
ಅಮೆರಿಕವು ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿ ಉಳಿದಿದೆ ಎಂದು ಸರ್ಕಾರ ಒತ್ತಿ ಹೇಳಿತು.

ಇದನ್ನೂ ಓದಿ: Iran War: ಟ್ರಂಪ್​ಗೆ ಸೆಡ್ಡು ಹೊಡೆದ ಟೆಹ್ರಾನ್; ಯುದ್ಧ ನಿಲ್ಲಿಸಲು 5 ಷರತ್ತು ವಿಧಿಸಿದ ಇರಾನ್

ಭಾರತವು ಮಧ್ಯಪ್ರಾಚ್ಯದಾದ್ಯಂತ ಸಮತೋಲಿತ ಸಂಬಂಧಗಳನ್ನು ಕಾಯ್ದುಕೊಳ್ಳುತ್ತದೆ, ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುತ್ತದೆ ಮತ್ತು ಇರಾನ್‌ನೊಂದಿಗೆ ನಿರಂತರ ಮಾತುಕತೆಗಳನ್ನು ನಡೆಸುತ್ತಿದೆ ಎಂದು ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಳಿಯಾರಿನಲ್ಲಿ ಕಳ್ಳರ ಕೈಚಳಕ! ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ

ಹುಳಿಯಾರು, ಮಾ.25: ದೇವರ ದರ್ಶನಕ್ಕೆಂದು ಹೋದ ದಂಪತಿಯ ಮನೆಯೇ ಕಳ್ಳರ ಪಾಲಾಗಿರುವ ದುರ್ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ನಡೆದಿದೆ. ರೋಷನ್ ಎಂಬುವವರ ಮನೆಯ ಬೀಗ ಮುರಿದಿರುವ ಕಳ್ಳರು ಕೈಚಳಕ ತೋರಿಸಿದ್ದಾರೆ. ಹುಳಿಯಾರಿನ ನಿವಾಸಿ ರೋಷನ್ ಅವರು ತಮ್ಮ ಪತ್ನಿಯೊಂದಿಗೆ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿಯ ದರ್ಶನಕ್ಕಾಗಿ ನಿನ್ನೆ ರಾತ್ರಿ ಮನೆಯಿಂದ ಹೊರಟಿದ್ದರು.ಇಂದು ಮಧ್ಯಾಹ್ನ ರೋಷನ್ ಅವರು ದೇವಸ್ಥಾನದಲ್ಲಿದ್ದಾಗ, ಅವರ ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ನೆರೆಹೊರೆಯವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣವೇ ಮನೆಯೊಳಗೆ ಹೋಗಿ ನೋಡುವಂತೆ ತಿಳಿಸಿದಾಗ ಕಳ್ಳತನವಾಗಿರುವುದು ದೃಢಪಟ್ಟಿದೆ.ವಿಷಯ ತಿಳಿಯುತ್ತಿದ್ದಂತೆಯೇ ನಂಜನಗೂಡಿನಿಂದ ವಾಪಸ್ಸಾದ ದಂಪತಿ, ಸದ್ಯ ಹುಳಿಯಾರು ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳ್ಳರು ಎಷ್ಟು ಮೌಲ್ಯದ ಆಭರಣ ಮತ್ತು ಹಣ ದೋಚಿದ್ದಾರೆ ಎಂಬುದು ತನಿಖೆಯ ನಂತರ ತಿಳಿಯಬೇಕಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಮುಗಿಯಿತು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ: ಅಂತಿಮವಾಗಿ ಆದ ಕಲೆಕ್ಷನ್ ಎಷ್ಟು?

ಬಾಲಿವುಡ್‌ನ ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಈಗ ಸೈಲೆಂಟ್ ಆಗಿದೆ. ಬಿಡುಗಡೆಗೂ ಮುನ್ನ ಈ ಸಿನಿಮಾ ಸಖತ್ ಸದ್ದು ಮಾಡಿತ್ತು. ಆದರೆ ‘ಧುರಂಧರ್ 2’ (Dhurandhar 2) ಬಿಡುಗಡೆ ಆದ ಬಳಿಕ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ ಅಂತ್ಯವಾಗಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾದ ಪ್ರದರ್ಶನ ಬಹುತೇಕ ಕೊನೆಗೊಂಡಿದೆ. ಉಲ್ಕಾ ಗುಪ್ತಾ, ಐಶ್ವರ್ಯಾ ಓಜಾ ಮತ್ತು ಅದಿತಿ ಭಾಟಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆಯ ಮಟ್ಟ ತಲುಪುವಲ್ಲಿ ವಿಫಲವಾಗಿದೆ.

ಕಾಮಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ ‘ದಿ ಕೇರಳ ಸ್ಟೋರಿ 2’ ಚಿತ್ರವು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 42.10 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತನ್ನ ನಾಲ್ಕನೇ ವಾರದಲ್ಲಿ ಸಿನಿಮಾ ಕೇವಲ 60 ಲಕ್ಷ ರೂಪಾಯಿ ಗಳಿಸಿದೆ. ಹಿಂದಿನ ವಾರಗಳಿಗೆ ಹೋಲಿಸಿದರೆ ಇದು ಭಾರಿ ಕುಸಿತ. ಭಾರಿ ಕಲೆಕ್ಷನ್ ಮಾಡುವ ನಿರೀಕ್ಷೆ ಹೊಂದಿದ್ದ ಈ ಸಿನಿಮಾ ಹಾಫ್ ಸೆಂಚುರಿ ಬಾರಿಸಲು ಕೂಡ ಸಾಧ್ಯವಾಗಿಲ್ಲ.

‘ದಿ ಕೇರಳ ಸ್ಟೋರಿ 2’ ಸಿನಿಮಾದ ಈ ದಿಢೀರ್ ಕುಸಿತಕ್ಕೆ ಪ್ರಮುಖ ಕಾರಣ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರ. ಹೌದು, ಈ ಸಿನಿಮಾ ಬಿಡುಗಡೆಯಾದ ನಂತರ ಚಿತ್ರಮಂದಿರಗಳಲ್ಲಿ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಇದ್ದ ಹೆಚ್ಚಿನ ಸ್ಕ್ರೀನ್‌ಗಳನ್ನು ಕಸಿದುಕೊಳ್ಳಲಾಯಿತು. ಒಂದು ವೇಳೆ ‘ಧುರಂಧರ್ 2’ ಪೈಪೋಟಿ ಇಲ್ಲದಿದ್ದರೆ, ಈ ಸಿನಿಮಾ ಸುಲಭವಾಗಿ 50 ಕೋಟಿ ರೂಪಾಯಿ ಗಡಿ ದಾಟುತ್ತಿತ್ತು.

2023ರಲ್ಲಿ ಬಿಡುಗಡೆಯಾಗಿದ್ದ ‘ದಿ ಕೇರಳ ಸ್ಟೋರಿ’ ಮೊದಲ ಭಾಗವು 6.75 ಕೋಟಿ ರೂಪಾಯಿ ಓಪನಿಂಗ್ ಪಡೆದುಕೊಂಡಿತ್ತು. ಅಂತಿಮವಾಗಿ 220 ಕೋಟಿ ರೂಪಾಯಿ ಬಾಚಿಕೊಂಡು ಬ್ಲಾಕ್‌ಬಸ್ಟರ್ ಎನಿಸಿಕೊಂಡಿತ್ತು. ಆದರೆ, ಅದರ ಸೀಕ್ವೆಲ್ ಆ ಮಟ್ಟದ ಮ್ಯಾಜಿಕ್ ಮಾಡಲು ಸಾಧ್ಯವಾಗಿಲ್ಲ. ಆದರೂ, ಚಿತ್ರದ ಬಜೆಟ್ ಕಡಿಮೆ ಇದ್ದ ಕಾರಣ ಇದು ಹಿಟ್ ಸಿನಿಮಾ ಎಂದೇ ಪರಿಗಣಿಸಲ್ಪಟ್ಟಿದೆ.

ಇದನ್ನೂ ಓದಿ: ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ಬಿಡುಗಡೆಗೂ ಮೊದಲು ‘ದಿ ಕೇರಳ ಸ್ಟೋರಿ 2’ ಸಿನಿಮಾ ಮೇಲೆ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ಈ ಸಿನಿಮಾಗೆ ಕೇರಳದಲ್ಲಿ ಬಹಳ ವಿರೋಧ ವ್ಯಕ್ತವಾಗಿತ್ತು. ಈ ಪ್ರಕರಣವು ಕೋರ್ಟ್ ಮೆಟ್ಟಿಲೇರಿತ್ತು. ಅನೇಕ ಕಡೆಗಳಲ್ಲಿ ಈ ಸಿನಿಮಾದ ಶೋ ರದ್ದಾಯಿತು. ನೆಗೆಟಿವ್ ವಿಮರ್ಶೆ ಕೂಡ ಸಿಕ್ಕಿದ್ದರಿಂದ ದೊಡ್ಡ ಮಟ್ಟದ ಕಲೆಕ್ಷನ್ ಆಗಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್! ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು, ಮಾ.25: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿದೆ. ಇದೊಂದು ಅಭಿಮಾನಿಗಳಿಗೆ ಹಬ್ಬವೇ ಸರಿ, ಅದರಲ್ಲೂ ಈ ಬಾರಿ ಆರ್​​ಸಿಬಿ ಮೊದಲ ಪಂದ್ಯ ಇಲ್ಲಿ ನಡೆಯುತ್ತಿರುವ ಕಾರಣ ಇನ್ನು ರೋಚಕವಾಗಿರಲಿದೆ. ಬೆಂಗಳೂರಿನಲ್ಲಿ ಆರ್​ಸಿಬಿ ಅಭಿಮಾನಿಗಳು ಇರುವ ಕಾರಣ ಹೆಚ್ಚು ಜನ ಸೇರಬಹುದು. ಹಾಗೂ ಜನ ದಟ್ಟಣೆಯೂ ಆಗಬಹುದು ಇದರ ಜತೆಗೆ ವಾಹನ ದಟ್ಟಣೆ ಕೂಡ ಆಗಬಹುದು ಎಂಬ ಕಾರಣಕ್ಕೆ ಬೆಂಗಳೂರು ಸಂಚಾರಿ ಪೊಲೀಸರು ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆಡಳಿತ ಮಂಡಳಿ ಹೆಚ್ಚು ವ್ಯವಸ್ಥೆಗಳನ್ನು ಮಾಡಿದೆ. ಸಂಚಾರಿ ಪೊಲೀಸರು ಕೂಡ ಪಾರ್ಕಿಂಗ್​​ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಯೋಜನೆ ಹಾಕಿಕೊಂಡಿದ್ದಾರೆ. ಇದೀಗ ಮೆಟ್ರೋ ಕೂಡ ಈ ದಿನದಂದು ಹೆಚ್ಚಿನ ಸೇವೆಗಳನ್ನು ನೀಡಲು ಮುಂದಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಟಿ-20 ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಿಸಿದೆ. ಪಂದ್ಯ ಮುಗಿದ ಬಳಿಕ ಅಭಿಮಾನಿಗಳು ಸುರಕ್ಷಿತವಾಗಿ ಮನೆ ತಲುಪಲು ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯ ಸಮಯದ ಬದಲಾಗಿ ಅಂದು ರಾತ್ರಿ 11 ರಿಂದ ಮುಂಜಾನೆ 2 ಗಂಟೆಯವರೆಗೆ ಮೆಟ್ರೋ ರೈಲುಗಳು ಸಂಚರಿಸಲಿವೆ.

ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಹೊರಡುವ ಸಮಯ:

ವೈಟ್‌ಫೀಲ್ಡ್ (ಕಾಡುಗೋಡಿ): ರಾತ್ರಿ 12.30ಕ್ಕೆ.

ಚೆಲ್ಲಘಟ್ಟ: ರಾತ್ರಿ 12.45ಕ್ಕೆ.

ರೇಷ್ಮೆ ಸಂಸ್ಥೆ ಮತ್ತು ಮಾದಾವರ: ರಾತ್ರಿ 12.45ಕ್ಕೆ.

ಬೊಮ್ಮಸಂದ್ರ: ರಾತ್ರಿ 01.00ಕ್ಕೆ.

ಆರ್.ವಿ. ರಸ್ತೆ: ಮುಂಜಾನೆ 02.00ಕ್ಕೆ.

ಮೆಜೆಸ್ಟಿಕ್ (ನಾಡಪ್ರಭು ಕೆಂಪೇಗೌಡ ನಿಲ್ದಾಣ)ನಿಂದ ನಾಲ್ಕೂ ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲುಗಳು ಹೊರಡಲಿವೆ. ಮೆಟ್ರೋ ನಿಲ್ದಾಣಗಳಲ್ಲಿ ವಾಹನ ನಿಲುಗಡೆಗೆ ಹೆಚ್ಚಿನ ಒತ್ತಡವಿರುವ ಕಾರಣ ಅಂದು ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ: ಐಪಿಎಲ್ ಅಭಿಮಾನಿಗಳೇ ಗಮನಿಸಿ! ಪಂದ್ಯದ ದಿನ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಈ ರಸ್ತೆಗಳು ಬಂದ್!

ಪಂದ್ಯದ ದಿನ ರಸ್ತೆಗಳು ಬಂದ್!

ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯ ನಡೆಯಲಿದೆ. ಈ ಬಾರಿ ಪಂದ್ಯಕ್ಕೆ ಭಾರೀ ಜನ ಸೇರುವ ಸಾಧ್ಯತೆಗಳು ಇದೆ. ಅದರಲ್ಲೂ ನೆಚ್ಚಿನ ಟೀಮ್​​​ ಆರ್​​ಸಿಬಿ ಬೆಂಗಳೂರಿನಲ್ಲಿ ಆಡುತ್ತಿದೆ ಎಂದರೆ ಖಂಡಿತ ಜನ ಬರುವುದು ಖಂಡಿತ. ಅದಕ್ಕಾಗಿ ಜನರನ್ನು ಹಾಗೂ ವಾಹನಗಳನ್ನು ನಿಭಾಯಿಸಲು ಹಲವು ಕ್ರಮಗಳನ್ನು ಸಂಚಾರಿ ಪೊಲೀಸರು ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆಡಳಿಯ ಮಂಡಳಿ ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ವಾಹನ ಸಂಚಾರ ಹಾಗೂ ಪಾರ್ಕಿಂಗ್​​​, ಜನರ ಓಡಾಟ ಎಲ್ಲದಕ್ಕೂ ಹೊಸ ರೂಲ್ಸ್​​ ತರಲಾಗಿದೆ. ಪಂದ್ಯಗಳ ದಿನದಂದು ಕ್ರೀಡಾಂಗಣದ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Iran War: ಟ್ರಂಪ್​ಗೆ ಸೆಡ್ಡು ಹೊಡೆದ ಟೆಹ್ರಾನ್; ಯುದ್ಧ ನಿಲ್ಲಿಸಲು ಅಮೆರಿಕಕ್ಕೆ 5 ಷರತ್ತು ವಿಧಿಸಿದ ಇರಾನ್

ಟೆಹ್ರಾನ್, ಮಾರ್ಚ್ 25: ಕಳೆದ 2 ದಿನಗಳಿಂದ ಡೊನಾಲ್ಡ್ ಟ್ರಂಪ್ (Donald Trump) ಈ ಯುದ್ಧ ಸಾಕಾಗಿದೆ ಎಂಬಂತೆ ವರ್ತಿಸಿದ್ದರು. ಇರಾನ್ ಜೊತೆ ಕದನವಿರಾಮದ ಸುಳಿವನ್ನೂ ನೀಡಿದ್ದರು. ಹಾಗೇ, ಇರಾನ್ ಮೇಲಿನ ದಾಳಿಯನ್ನು ಕೊನೆಗೊಳಿಸಲು 15 ಅಂಶಗಳ ಶಾಂತಿ ಯೋಜನೆಯನ್ನು ಘೋಷಿಸಿದ್ದರು. ಆದರೆ, ಅವರ ಈ ನಿರ್ಧಾರವನ್ನು ತಿರಸ್ಕರಿಸಿರುವ ಇರಾನ್ ಅಮೆರಿಕಕ್ಕೆ ತಕ್ಕ ತಿರುಗೇಟು ನೀಡಿದೆ. ಈ ಯುದ್ಧವನ್ನು ಯಾವಾಗ ಕೊನೆಗೊಳಿಸಬೇಕು, ಹೇಗೆ ಕೊನೆಗೊಳಿಸಬೇಕೆಂದು ಟ್ರಂಪ್ ನಿರ್ಧರಿಸಲು ನಾವು ಅವಕಾಶ ನೀಡುವುದಿಲ್ಲ. ಈ ಯುದ್ಧ ನಿಲ್ಲಬೇಕಾದರೆ ನಾವು ಹಾಕುವ 5 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಇರಾನ್ ಘೋಷಿಸಿದೆ.

ತನ್ನ ಷರತ್ತುಗಳು ಪೂರೈಸಿದರೆ ಮಾತ್ರ ಯುದ್ಧವನ್ನು ಕೊನೆಗೊಳಿಸುವುದಾಗಿ ಇರಾನ್ ಹೇಳಿದೆ. ಕದನ ವಿರಾಮಕ್ಕೆ ಸಮಯವನ್ನು ನಿಗದಿಪಡಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಪ್ರಯತ್ನವನ್ನು ದೃಢವಾಗಿ ತಿರಸ್ಕರಿಸಿರುವ ಇರಾನ್ ಅಮೆರಿಕ ಪಶ್ಚಿಮ ಏಷ್ಯಾದ ಯುದ್ಧದಲ್ಲಿ ಅತಿಯಾಗಿ ಮೂಗು ತೂರಿಸುತ್ತಿದೆ ಎಂದು ಟೀಕಿಸಿದೆ.

ಇದನ್ನೂ ಓದಿ: ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಇದರ ನಡುವೆ ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಇರಾನ್ ದೃಢ ನಿಲುವನ್ನು ತೆಗೆದುಕೊಂಡಿದೆ. ಯುದ್ಧ ನಿಲ್ಲಿಸಲು ಇರಾನ್ ಹಾಕಿರುವ 5 ಪ್ರಮುಖ ಷರತ್ತುಗಳು ಹೀಗಿವೆ.

1. ಅಮೆರಿಕ ಮತ್ತು ಇಸ್ರೇಲ್‌ನಿಂದ ಆಕ್ರಮಣಶೀಲತೆ ಮತ್ತು ಟಾರ್ಗೆಟ್ ಮಾಡಿದ ಹತ್ಯೆಗಳನ್ನು ಸಂಪೂರ್ಣವಾಗಿ ನಿಲ್ಲಿಸುವುದು.

2. ಇರಾನ್ ವಿರುದ್ಧ ಮುಂದಿನ ದಿನಗಳಲ್ಲಿ ಯಾವುದೇ ಮಿಲಿಟರಿ ಕ್ರಮ ಅಥವಾ ದಾಳಿ ನಡೆಸುವುದಿಲ್ಲ ಎಂದು ಭರವಸೆ ನೀಡುವುದು;

3. ಯುದ್ಧ ಸಂಬಂಧಿತ ನಷ್ಟಗಳು ಮತ್ತು ಹಾನಿಗಳಿಗೆ ಸೂಕ್ತವಾದ ಪರಿಹಾರ ನೀಡುವುದು.

4. ಮಿತ್ರ ಗುಂಪುಗಳು ಸೇರಿದಂತೆ ಎಲ್ಲಾ ಪ್ರಾದೇಶಿಕ ರಂಗಗಳಲ್ಲಿ ಹಗೆತನಕ್ಕೆ ಅಂತ್ಯ ಹಾಡುವುದು.

5. ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ಗೆ ಅಧಿಕಾರದ ಅಧಿಕೃತ ಮಾನ್ಯತೆ ನೀಡುವುದು.

ಇದನ್ನೂ ಓದಿ: ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

‘ನಮ್ಮ ಈ ಷರತ್ತುಗಳನ್ನು ಒಪ್ಪಿದ ಮೇಲೆ ಯುದ್ಧ ಕೊನೆಗೊಳ್ಳುತ್ತದೆ’ ಎಂದು ಇರಾನ್ ಸ್ಪಷ್ಟವಾಗಿ ತಿಳಿಸಿದೆ. ಇವೆಲ್ಲದಕ್ಕೆ ಇಸ್ರೇಲ್ ಹಾಗೂ ಅಮೆರಿಕ ಒಪ್ಪುವ ಸಾಧ್ಯತೆ ಕಡಿಮೆ ಇರುವುದರಿಂದ ಸದ್ಯಕ್ಕೆ ಯುದ್ಧ ನಿಲ್ಲುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಹಾಗೇ, ಯಾವುದೇ ಕದನ ವಿರಾಮದ ಸಮಯವನ್ನು ಇರಾನ್ ಮಾತ್ರ ನಿರ್ಧರಿಸುತ್ತದೆಯೇ ವಿನಃ ಬೇರೆ ದೇಶಗಳು ಇದನ್ನು ನಿರ್ಧರಿಸುವಂತಿಲ್ಲ ಎಂದು ಇರಾನಿನ ಅಧಿಕಾರಿಗಳು ಹೇಳಿದ್ದಾರೆ. ಈ ಎಲ್ಲಾ ಷರತ್ತುಗಳು ಈಡೇರುವವರೆಗೆ ಮಿಲಿಟರಿ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ಇರಾನ್ ಸ್ಪಷ್ಟಪಡಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link