All posts by nagaraj11081993

Iran War: ಟ್ರಂಪ್​ಗೆ ಸೆಡ್ಡು ಹೊಡೆದ ಟೆಹ್ರಾನ್; ಯುದ್ಧ ನಿಲ್ಲಿಸಲು ಅಮೆರಿಕಕ್ಕೆ 5 ಷರತ್ತು ವಿಧಿಸಿದ ಇರಾನ್

Iran War: ಟ್ರಂಪ್​ಗೆ ಸೆಡ್ಡು ಹೊಡೆದ ಟೆಹ್ರಾನ್; ಯುದ್ಧ ನಿಲ್ಲಿಸಲು ಅಮೆರಿಕಕ್ಕೆ 5 ಷರತ್ತು ವಿಧಿಸಿದ ಇರಾನ್

ಟೆಹ್ರಾನ್, ಮಾರ್ಚ್ 25: ಕಳೆದ 2 ದಿನಗಳಿಂದ ಡೊನಾಲ್ಡ್ ಟ್ರಂಪ್ (Donald Trump) ಈ ಯುದ್ಧ ಸಾಕಾಗಿದೆ ಎಂಬಂತೆ ವರ್ತಿಸಿದ್ದರು. ಇರಾನ್ ಜೊತೆ ಕದನವಿರಾಮದ ಸುಳಿವನ್ನೂ ನೀಡಿದ್ದರು. ಹಾಗೇ, ಇರಾನ್ ಮೇಲಿನ ದಾಳಿಯನ್ನು ಕೊನೆಗೊಳಿಸಲು 15 ಅಂಶಗಳ ಶಾಂತಿ ಯೋಜನೆಯನ್ನು ಘೋಷಿಸಿದ್ದರು. ಆದರೆ, ಅವರ ಈ ನಿರ್ಧಾರವನ್ನು ತಿರಸ್ಕರಿಸಿರುವ ಇರಾನ್ ಅಮೆರಿಕಕ್ಕೆ ತಕ್ಕ ತಿರುಗೇಟು ನೀಡಿದೆ. ಈ ಯುದ್ಧವನ್ನು ಯಾವಾಗ ಕೊನೆಗೊಳಿಸಬೇಕು, ಹೇಗೆ ಕೊನೆಗೊಳಿಸಬೇಕೆಂದು ಟ್ರಂಪ್ ನಿರ್ಧರಿಸಲು ನಾವು ಅವಕಾಶ ನೀಡುವುದಿಲ್ಲ. ಈ ಯುದ್ಧ ನಿಲ್ಲಬೇಕಾದರೆ ನಾವು ಹಾಕುವ 5 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಇರಾನ್ ಘೋಷಿಸಿದೆ.

ತನ್ನ ಷರತ್ತುಗಳು ಪೂರೈಸಿದರೆ ಮಾತ್ರ ಯುದ್ಧವನ್ನು ಕೊನೆಗೊಳಿಸುವುದಾಗಿ ಇರಾನ್ ಹೇಳಿದೆ. ಕದನ ವಿರಾಮಕ್ಕೆ ಸಮಯವನ್ನು ನಿಗದಿಪಡಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಪ್ರಯತ್ನವನ್ನು ದೃಢವಾಗಿ ತಿರಸ್ಕರಿಸಿರುವ ಇರಾನ್ ಅಮೆರಿಕ ಪಶ್ಚಿಮ ಏಷ್ಯಾದ ಯುದ್ಧದಲ್ಲಿ ಅತಿಯಾಗಿ ಮೂಗು ತೂರಿಸುತ್ತಿದೆ ಎಂದು ಟೀಕಿಸಿದೆ.

ಇದನ್ನೂ ಓದಿ: ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಇದರ ನಡುವೆ ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಇರಾನ್ ದೃಢ ನಿಲುವನ್ನು ತೆಗೆದುಕೊಂಡಿದೆ. ಯುದ್ಧ ನಿಲ್ಲಿಸಲು ಇರಾನ್ ಹಾಕಿರುವ 5 ಪ್ರಮುಖ ಷರತ್ತುಗಳು ಹೀಗಿವೆ.

1. ಅಮೆರಿಕ ಮತ್ತು ಇಸ್ರೇಲ್‌ನಿಂದ ಆಕ್ರಮಣಶೀಲತೆ ಮತ್ತು ಟಾರ್ಗೆಟ್ ಮಾಡಿದ ಹತ್ಯೆಗಳನ್ನು ಸಂಪೂರ್ಣವಾಗಿ ನಿಲ್ಲಿಸುವುದು.

2. ಇರಾನ್ ವಿರುದ್ಧ ಮುಂದಿನ ದಿನಗಳಲ್ಲಿ ಯಾವುದೇ ಮಿಲಿಟರಿ ಕ್ರಮ ಅಥವಾ ದಾಳಿ ನಡೆಸುವುದಿಲ್ಲ ಎಂದು ಭರವಸೆ ನೀಡುವುದು;

3. ಯುದ್ಧ ಸಂಬಂಧಿತ ನಷ್ಟಗಳು ಮತ್ತು ಹಾನಿಗಳಿಗೆ ಸೂಕ್ತವಾದ ಪರಿಹಾರ ನೀಡುವುದು.

4. ಮಿತ್ರ ಗುಂಪುಗಳು ಸೇರಿದಂತೆ ಎಲ್ಲಾ ಪ್ರಾದೇಶಿಕ ರಂಗಗಳಲ್ಲಿ ಹಗೆತನಕ್ಕೆ ಅಂತ್ಯ ಹಾಡುವುದು.

5. ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ಗೆ ಅಧಿಕಾರದ ಅಧಿಕೃತ ಮಾನ್ಯತೆ ನೀಡುವುದು.

ಇದನ್ನೂ ಓದಿ: ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

‘ನಮ್ಮ ಈ ಷರತ್ತುಗಳನ್ನು ಒಪ್ಪಿದ ಮೇಲೆ ಯುದ್ಧ ಕೊನೆಗೊಳ್ಳುತ್ತದೆ’ ಎಂದು ಇರಾನ್ ಸ್ಪಷ್ಟವಾಗಿ ತಿಳಿಸಿದೆ. ಇವೆಲ್ಲದಕ್ಕೆ ಇಸ್ರೇಲ್ ಹಾಗೂ ಅಮೆರಿಕ ಒಪ್ಪುವ ಸಾಧ್ಯತೆ ಕಡಿಮೆ ಇರುವುದರಿಂದ ಸದ್ಯಕ್ಕೆ ಯುದ್ಧ ನಿಲ್ಲುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಹಾಗೇ, ಯಾವುದೇ ಕದನ ವಿರಾಮದ ಸಮಯವನ್ನು ಇರಾನ್ ಮಾತ್ರ ನಿರ್ಧರಿಸುತ್ತದೆಯೇ ವಿನಃ ಬೇರೆ ದೇಶಗಳು ಇದನ್ನು ನಿರ್ಧರಿಸುವಂತಿಲ್ಲ ಎಂದು ಇರಾನಿನ ಅಧಿಕಾರಿಗಳು ಹೇಳಿದ್ದಾರೆ. ಈ ಎಲ್ಲಾ ಷರತ್ತುಗಳು ಈಡೇರುವವರೆಗೆ ಮಿಲಿಟರಿ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ಇರಾನ್ ಸ್ಪಷ್ಟಪಡಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಕೆಕೆಆರ್ ತಂಡದಲ್ಲಿ ರಿಂಕು ಸಿಂಗ್​ಗೆ ಮಹತ್ವದ ಜವಾಬ್ದಾರಿ

Source link

ಪಿಎಂ ಎಸ್​ವೈಎಂ ಸ್ಕೀಮ್; ತಿಂಗಳಿಗೆ ಕೇವಲ 55 ರೂ ಹೂಡಿಕೆ; ಉತ್ತಮ ಮಾಸಿಕ ವರಮಾನ ಸೃಷ್ಟಿ

ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆಂದು ಸರ್ಕಾರ ವಿವಿಧ ನಿವೃತ್ತಿ ಸ್ಕೀಮ್​ಗಳನ್ನು ನಡೆಸುತ್ತಿದೆ. ಇದರಲ್ಲಿ ಪಿಎಂ ಎಸ್​ವೈಎಂ ಸ್ಕೀಮ್ ಕೂಡ ಒಂದು. ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಲ್ಲಿ ಬಹಳ ಅಲ್ಪ ಹೂಡಿಕೆಯಲ್ಲಿ 3,000 ರೂಗಳ ಮಾಸಿಕ ಖಾತ್ರಿ ಪಿಂಚಣಿ ಸೃಷ್ಟಿಸಲು ಸಾಧ್ಯ. 2019ರಲ್ಲೇ ಈ ಸ್ಕೀಮ್ ಆರಂಭವಾಗಿದೆ. ಇಪಿಎಫ್, ಎನ್​ಪಿಎಸ್ ಇತ್ಯಾದಿ ಸೌಲಭ್ಯ ಇಲ್ಲದ ಕೆಲಸಗಾರರು, ಉದ್ಯೋಗಿಗಳಿಗೆಂದು ಈ ಯೋಜನೆ ಇರುವುದು.

ಬೀದಿಬದಿ ವ್ಯಾಪಾರಿಗಳು, ಕಟ್ಟಡ ನಿರ್ಮಾಣದ ಕೂಲಿಕಾರ್ಮಿಕರು, ಮನೆಗೆಲಸದವರು, ಸಣ್ಣ ವರ್ತಕರು ಇತ್ಯಾದಿ ಅಸಂಘಟಿತ ವಲಯದ ಕೆಲಸಗಾರರು ಪಿಎಂ ಎಸ್​ವೈಎಂ ಯೋಜನೆಗೆ ಅರ್ಹರಿರುತ್ತಾರೆ. 60 ವರ್ಷ ವಯಸ್ಸಿನವರೆಗೂ ಪ್ರತೀ ತಿಂಗಳು ಅಲ್ಪ ಮೊತ್ತವನ್ನು ಕಟ್ಟುತ್ತಾ ಹೋಗಲು ಅವಕಾಶ ಇರುತ್ತದೆ. ನೀವು ಎಷ್ಟು ಕಟ್ಟುತ್ತೀರೋ, ಅದಕ್ಕೆ ಸರಿಸಮಾನವಾದ ಮೊತ್ತವನ್ನು ಸರ್ಕಾರವೂ ಒದಗಿಸುತ್ತದೆ. ಈ ಎರಡೂ ಹಣವೂ ಸೇರಿ, ಫಲಾನುಭವಿಯ ವಯಸ್ಸು 60 ವರ್ಷವಾದ ಬಳಿಕ ನಿಶ್ಚಿತ ಪಿಂಚಣಿ ದೊರಕುತ್ತಾ ಹೋಗುತ್ತದೆ.

ಇದನ್ನೂ ಓದಿ: ಮ್ಯೂಚುವಲ್ ಫಂಡ್​ಗಳನ್ನು ಉಡುಗೊರೆಯಾಗಿ ನೀಡಬೇಕಾ? ಸೆಬಿ ಮುಂದಿದೆ ಹೊಸ ಪ್ಲಾನ್

ಪಿಎಂ ಶ್ರಮ್ ಯೋಗಿ ಮಾನಧನ್ ಪಿಂಚಣಿ ಯೋಜನೆ ಹೇಗೆ?

  • ಪಿಎಂ ಎಸ್​ವೈಎಂ ಯೋಜನೆಯಲ್ಲಿ ಹೂಡಿಕೆ ಮಾಡಬೇಕೆನ್ನುವವರು 18ರಿಂದ 40 ವರ್ಷ ವಯಸ್ಸಿನವರಾಗಿರಬೇಕು.
  • ಅವರ ಮಾಸಿಕ ಆದಾಯ 15,000 ರೂಗಿಂತ ಕಡಿಮೆ ಇರಬೇಕು.
  • ಅಸಂಘಟಿತ ವಲಯದ ಕಾರ್ಮಿಕರಾಗಿರಬೇಕು.
  • ಇಪಿಎಫ್​ಒ, ಇಎಸ್​ಐ, ಎನ್​ಪಿಎಸ್ ಸ್ಕೀಮ್​ಗಳ ಫಲಾನುಭವಿಯಾಗಿರಬಾರದು.

ಪಿಎಂ ಎಸ್​ವೈಎಂ ಸ್ಕೀಮ್​ನಲ್ಲಿ ಎಷ್ಟು ಹೂಡಿಕೆ ಸಾಧ್ಯ?

ಹೂಡಿಕೆ ಆರಂಭಿಸಲು ಇರುವ ವಯೋಮಿತಿ 18ರಿಂದ 40 ವರ್ಷ. ಹೂಡಿಕೆ 60 ವರ್ಷ ವಯಸ್ಸಾಗುವವರೆಗೂ ಮಾಡಬೇಕು. 18 ವರ್ಷದಲ್ಲೇ ಹೂಡಿಕೆ ಆರಂಭಿಸಿದರೆ ಮಾಸಿಕ ಹೂಡಿಕೆ 55 ರೂ ಮಾತ್ರವೇ ಇರುತ್ತದೆ. ಒಂದು ವೇಳೆ 40 ವರ್ಷಕ್ಕೆ ಹೂಡಿಕೆ ಆರಂಭಿಸಿದರೆ ಮಾಸಿಕ ಹೂಡಿಕೆ 200 ರೂ ಇರುತ್ತದೆ. ಹೀಗೆ ಹೂಡಿಕೆಯ ಆರಂಭಿಕ ವಯಸ್ಸಿಗೆ ಅನುಗುಣವಾಗಿ ಹೂಡಿಕೆ ಮೊತ್ತದಲ್ಲಿ ವ್ಯತ್ಯಾಸ ಇರಬಹುದು.

ಇದನ್ನೂ ಓದಿ: ಸರ್ಕಾರದ ಸುಕನ್ಯಾ ಸಮೃದ್ದಿ ಸ್ಕೀಮ್​ನಲ್ಲಿ ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್ಸ್?

ಪಿಎಂ ಎಸ್​ವೈಎಂ ಸ್ಕೀಮ್​ಗೆ ಅರ್ಜಿ ಸಲ್ಲಿಸುವುದು ಹೀಗೆ…

ಸಮೀಪದ ಸಿಎಸ್​ಸಿ ಸೆಂಟರ್ ಅಥವಾ ನಾಗರಿಕ ಕೇಂದ್ರಕ್ಕೆ ಹೋಗಿ ಈ ಸ್ಕೀಮ್​ಗೆ ಅರ್ಜಿ ಹಾಕಬಹುದು. ಮಾನಧನ್ ಪೋರ್ಟಲ್ ಮೂಲಕ ಆನ್​ಲೈನ್​ನಲ್ಲೇ ಎನ್​ರೋಲ್ ಆಗಬಹುದು.

ಈ ಯೋಜನೆಯಲ್ಲಿ ಇಲ್ಲಿಯವರೆಗೆ 52 ಲಕ್ಷಕ್ಕೂ ಅಧಿಕ ಕಾರ್ಮಿಕರು ನೊಂದಾಯಿಸಿಕೊಂಡಿದ್ದಾರೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Shantaram Siddi: ಶಾಂತಾರಾಮರಿಗೆ ʼಸಿದ್ಧಿʼಸಿದ ವಿಧಾನ ಪರಿಷತ್ ಸಭಾಪತಿ ಪೀಠದ ಗೌರವ!

ಬೆಂಗಳೂರು, (ಮಾರ್ಚ್ 25): ಕರ್ನಾಟಕ ವಿಧಾನ ಪರಿಷತ್‌ (Karnataka Legislative Council) ಕಲಾಪದ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿರಮಿಸಿದ್ದ ವೇಳೆ, ಬಿಜೆಪಿಯ ಶಾಂತರಾಮ ಸಿದ್ದಿಯವರಿಗೆ (Shantaram Siddi) ಕೆಲಕಾಲ ಕಲಾಪ ನಡೆಸುವ ಅವಕಾಶ ದೊರಕಿದೆ. ಹಾಗೆಂದು ಅವರು ಶಾಶ್ವತವಾಗಿ ಆ ಪೀಠ ಅಲಂಕರಿಸಿಲ್ಲ. ವಿಧಾನ ಪರಿಷತ್‌ ಕಲಾಪದ ವೇಳೆ ಪರಿಷತ್‌ ಸಭಾಪತಿ ವಿರಮಿಸುವ ವೇಳೆ, ಸದನದಲ್ಲಿರುವ ಹಿರಿಯ ಸದಸ್ಯರಿಗೆ ಕೆಲವು ಬಾರಿ ಕಲಾಪ ನಡೆಸಲು ಅವಕಾಶ ನೀಡಲಾಗುತ್ತದೆ. ಅದರಂತೆ ಇಂದು (ಮಾರ್ಚ್ 25) ವಿಧಾನ ಪರಿಷತ್‌ ಕಲಾಪದ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿರಮಿಸಿದ್ದ ವೇಳೆ ಶಾಂತರಾಮ ಸಿದ್ದಿಯವರಿಗೆ ಅವಕಾಶ ಸಿಕ್ಕಿದ್ದು, ಅದನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಇದರೊಂದಿಗೆ ಸಿದ್ದಿ ಸಮುದಾಯದ ರಾಜಕಾರಣಿಯೊಬ್ಬರು ಪೀಠದಲ್ಲಿ ಆಸೀನರಾಗಿರುವುದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲು.

ಶಾಂತಾರಾಮ ಬುಡ್ನಾ ಸಿದ್ದಿ ಅವರು 2020ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶಿತರಾಗಿದ್ದರು. ಈ ಮೂಲಕ ರಾಜ್ಯದ ಅತ್ಯಂತ ಹಿಂದುಳಿದ ಬುಡಕಟ್ಟು ಜನಾಂಗಗಳಲ್ಲಿ ಒಂದಾದ ಸಿದ್ದಿ ಸಮುದಾಯದಿಂದ ರಾಜಕೀಯಕ್ಕೆ ಪ್ರವೇಶಿಸಿದ ಮೊದಲಿಗರು ಎನಿಸಿಕೊಂಡಿದ್ದಾರೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಭಾಪತಿ ಪೀಠದಲ್ಲಿ ಕುಳಿತುಕೊಳ್ಳುವ ಮೂಲಕ ಇತಿಹಾಸ ಬರೆದಿದ್ದಾರೆ.

ಇನ್ನು ಈ ಬಗ್ಗೆ ಕರ್ನಾಟಕ ಬಿಜೆಪಿಯ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ವಿಧಾನಪರಿಷತ್ ಸ್ಥಾನಕ್ಕೆ ಸಿದ್ಧಿ ಜನಾಂಗದ ಶ್ರೀ ಶಾಂತಾರಾಮ್ ಸಿದ್ದಿಯವರನ್ನು ಆಯ್ಕೆ ಮಾಡಿ, ಪ್ರಸ್ತುತ ಸಭಾಪತಿ ಸ್ಥಾನದಲ್ಲಿ ಅವರು ವಿಧಾನಪರಿಷತ್ ಕಲಾಪವನ್ನು ನಡೆಸುವುದನ್ನು ನೋಡುವಾಗ ನಮ್ಮ ಪಕ್ಷದ ಮೇಲಿರುವ ನಮ್ಮೆಲ್ಲರ ಅಭಿಮಾನ ಇನ್ನಷ್ಟು ಹೆಚ್ಚಾಗುತ್ತಿದೆ ಎಂದಿದ್ದಾರೆ.

Source link

ಬಿಲ್ ಪಾವತಿಸಲು ಲಂಚ ಪಡಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಡಿಹೆಚ್​ಒ ಕಚೇರಿ ಲೆಕ್ಕಪತ್ರ ವ್ಯವಸ್ಥಾಪಕ

ತುಮಕೂರು, ಮಾ.25: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರದ ಬಣ್ಣ ಬಯಲಾಗಿದೆ. ಆರೋಗ್ಯ ಜಾಗೃತಿ ಕಾರ್ಯಕ್ರಮದ ಬಿಲ್ ಪಾವತಿಸಲು ಎನ್​ಜಿಒ ಅಧ್ಯಕ್ಷರಿಂದ ಲಂಚ ಸ್ವೀಕರಿಸುತ್ತಿದ್ದ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. 2025-26ರ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಜಿಲ್ಲೆಯ 10 ತಾಲೂಕುಗಳ ಜಾತ್ರೆ ಮತ್ತು ಸಂತೆಗಳಲ್ಲಿ ಆರೋಗ್ಯ ಜಾಗೃತಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಜಿಲ್ಲೆಯ ಹತ್ತು ತಾಲ್ಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ಆರೋಗ್ಯ ಕುರಿತ ವಸ್ತು ಪ್ರದರ್ಶನ ಮಾಡಲಾಗಿತ್ತು. ಈ ಕಾರ್ಯಕ್ರಮ ನಡೆಸಿದ್ದ ಎನ್​ಜಿಒಗೆ ಬರಬೇಕಿದ್ದ 1.98 ಲಕ್ಷ ರೂ. ಬಿಲ್ ಪಾವತಿಸಲು ಅರವಿಂದ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಿಲ್ ಬಿಡುಗಡೆ ಮಾಡಲು ಅರವಿಂದ್ 12 ಸಾವಿರ ರೂ. ಲಂಚ ಕೇಳಿದ್ದರು. ಎನ್​ಜಿಒ ಅಧ್ಯಕ್ಷ ರಾಜಶೇಖರ್ ಅವರು ಲಂಚ ನೀಡಲು ನಿರಾಕರಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಇಂದು ಸಂಜೆ 4:10ಕ್ಕೆ ಕಚೇರಿ ಕಾಂಪೌಂಡ್ ಒಳಗೆ ರಾಜಶೇಖರ್ ಅವರಿಂದ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅರವಿಂದ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮಕ್ಕೆ ನಿರ್ಧಾರ

‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾದ ಕಥೆ ಬಗ್ಗೆ ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಅವರು ತಕರಾರು ತೆಗೆದಿದ್ದಾರೆ. ಕೃತಿಚೌರ್ಯ ಆಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ‘ಲವ್ ಮಾಕ್ಟೇಲ್ 3’ ಸಿನಿಮಾದ ನಿರ್ದೇಶಕ, ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಸೆಕೆಂಡ್ ಹಾಫ್ ಕಥೆ ಕದ್ದಿದ್ದಾರೆ ಅಂತ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಬಂದಿದೆ. ಒಬ್ಬ ಫಿಲ್ಮ್ ಮೇಕರ್​ಗೆ ಇದಕ್ಕಿಂತ ಬೇರೆ ಅವಮಾನ ಇಲ್ಲ. ನಮ್ಮ ಮರ್ಯಾದೆ ಹೋಗಿದೆ. ಅದಕ್ಕಾಗಿ ನಾನು ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಮೇಲೆ ಕಾನೂನು ಹೋರಾಟ ಮಾಡುತ್ತೇನೆ. ನಾನು ರಾಜಿ ಆಗಲ್ಲ. ಇಂಥವರಿಗೆ ಈ ರೀತಿಯೇ ಉತ್ತರ ನೀಡಬೇಕು’ ಎಂದು ಡಾರ್ಲಿಂಗ್ ಕೃಷ್ಣ (Darling Krishna) ಅವರು ಗರಂ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲೈಂಗಿಕ ಕಿರುಕುಳ ಪ್ರಕರಣ; ಅವಿಮುಕ್ತೇಶ್ವರಾನಂದ ಸ್ವಾಮಿಗೆ ನಿರೀಕ್ಷಣಾ ಜಾಮೀನು

ಅಲಹಾಬಾದ್, ಮಾರ್ಚ್ 25: ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿಯವರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರಿಗೆ ಮತ್ತು ಅವರ ಶಿಷ್ಯ ಸ್ವಾಮಿ ಮುಕುಂದಾನಂದ ಗಿರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಲಹಾಬಾದ್ ಹೈಕೋರ್ಟ್ (Allahabad High Court) ಅವರಿಬ್ಬರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಂಗೀಕರಿಸಿದೆ. ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಅವರ ಏಕ ಪೀಠವು ಈ ತೀರ್ಪು ನೀಡಿದೆ.

ಇದಕ್ಕೂ ಮೊದಲು ಫೆಬ್ರವರಿ 27ರಂದು ಅವಿಮುಕ್ತೇಶ್ವರಾನಂದ ಸ್ವಾಮೀಜಿ ಅವರ ಬಂಧನಕ್ಕೆ ತಡೆ ನೀಡಿ ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಆದೇಶ ಹೊರಡುವವರೆಗೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಬಾರದು ಎಂದು ಕೋರ್ಟ್ ನಿರ್ದೇಶಿಸಿತ್ತು. ಈ ವಿಷಯವನ್ನು ಆಲಿಸಿದ ನಂತರ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಹಾಗೇ, ಅರ್ಜಿದಾರರು ತನಿಖೆಗೆ ಸಹಕರಿಸುವಂತೆ ಸೂಚಿಸಿತ್ತು.

ಇದನ್ನೂ ಓದಿ: ನ್ಯಾಯಮೂರ್ತಿ ಯಶವಂತ್ ವರ್ಮಾ ವರ್ಗಾವಣೆ; ನಾಳೆ ಅಲಹಾಬಾದ್ ಹೈಕೋರ್ಟ್ ವಕೀಲರಿಂದ ​ ಮುಷ್ಕರ

ಈ ಮೊದಲು ಪ್ರಯಾಗ್‌ರಾಜ್‌ನ ಜಿಲ್ಲಾ ನ್ಯಾಯಾಲಯವು ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಇತರರ ವಿರುದ್ಧ ಅಪ್ರಾಪ್ತ ವಯಸ್ಕನನ್ನು ಒಳಗೊಂಡ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಪೋಕ್ಸೋ ಮತ್ತು ಅತ್ಯಾಚಾರ ವಿಶೇಷ ನ್ಯಾಯಾಲಯದ ಅಧ್ಯಕ್ಷತೆ ವಹಿಸಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವಿನೋದ್ ಕುಮಾರ್ ಚೌರಾಸಿಯಾ ಅವರು ಈ ಆದೇಶವನ್ನು ಹೊರಡಿಸಿದ್ದರು.

ಇದನ್ನೂ ಓದಿ: ಕೃಷ್ಣ ಜನ್ಮಭೂಮಿ ವಿವಾದ: ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ

ತುಳಸಿ ಪೀಠದ ಮುಖ್ಯಸ್ಥ ಸ್ವಾಮಿ ರಾಮಭದ್ರಾಚಾರ್ಯರ ಶಿಷ್ಯ ಅಶುತೋಷ್ ಬ್ರಹ್ಮಚಾರಿ ಅವರು ದೂರು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಝುನ್ಸಿ ಪೊಲೀಸರಿಗೆ ಎಫ್‌ಐಆರ್ ದಾಖಲಿಸಿ ಈ ವಿಷಯದ ಬಗ್ಗೆ ತನಿಖೆ ಆರಂಭಿಸುವಂತೆ ಸೂಚಿಸಿತ್ತು. ಬಳಿಕ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಸಹಚರ ಮುಕುಂದಾನಂದ ಗಿರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಆರ್​ಸಿಬಿ ತಂಡದಲ್ಲಿ ಯಶ್ ದಯಾಳ್​ನ ಬದಲಿಸುವವರ್ಯಾರು?

Source link

IPL 2026: ಐಪಿಎಲ್​ನಿಂದ ಹಿಂದೆ ಸರಿದ ಬೆನ್ ಡಕೆಟ್​ಗೆ 2 ವರ್ಷ ನಿಷೇಧದ ಶಿಕ್ಷೆ

Source link

ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ; ವಿವಾದಕ್ಕೀಡಾಯ್ತು ವಿಡಿಯೋ

ನವದೆಹಲಿ, ಮಾರ್ಚ್ 25: ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಜೆಪಿ (BJP) ನಾಯಕಿ ಮಾಧವಿ ಲತಾ (Madhavi Latha) ಅವರು ಪ್ರಾರ್ಥನೆ ಮಾಡಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದ ಮಹಿಳಾ ಪ್ರಾರ್ಥನಾ ಕೊಠಡಿಯೊಳಗೆ ಮಾಧವಿ ಲತಾ ಮುಸ್ಲಿಂ ಮಹಿಳೆಯರೊಂದಿಗೆ ಕುಳಿತು ದೇವರ ಶ್ಲೋಕಗಳನ್ನು ಹೇಳಿದ್ದಾರೆ. ವಿಮಾನ ನಿಲ್ದಾಣದ ಪ್ರಾರ್ಥನಾ ಸ್ಥಳದೊಳಗೆ ಮಾಧವಿ ಲತಾ “ದುರ್ಗಾ ಸೂಕ್ತಂ”ನ ಶ್ಲೋಕಗಳನ್ನು ಪಠಿಸಿದ್ದಾರೆ. ಈ ವಿಡಿಯೋವನ್ನು ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಲವರು ಅವರಿಗೆ ಬೆಂಬಲ ನೀಡಿದ್ದರೆ ಇನ್ನು ಕೆಲವರು ವಿರೋಧಿಸಿದ್ದಾರೆ. ಈ ವಿಡಿಯೋ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link