ಚಲಿಸುವ ಬಸ್ ಕಿಟಕಿಯಲ್ಲಿ ಬ್ಯಾಗ್ ಇಡಲು ಹೋಗಿ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಕಾಲು: ಸೆರೆಯಾಯ್ತು ಭೀಕರ ದೃಶ್ಯ
ತುಮಕೂರು, ಮಾ.25: ನಗರದ ದೇವರಾಜ ಅರಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳ ಅತಿ ಆತುರದ ನಿರ್ಧಾರವೊಂದು ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಬಸ್ ಪ್ಲಾಟ್‌ಫಾರ್ಮ್‌ಗೆ ಬರುವ ಮೊದಲೇ ಕಿಟಕಿಯ ಮೂಲಕ ಸೀಟ್ ಹಿಡಿಯಲು ಹೋದ ವಿದ್ಯಾರ್ಥಿನಿ, ಬಸ್‌ನ ಹಿಂದಿನ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದಾರೆ. ತುಮಕೂರು-ಪಾವಗಡ ಮಾರ್ಗದ ಬಸ್ ಹತ್ತಲು ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಏಕಾಏಕಿ ಮುಗಿಬಿದ್ದಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಬಸ್ ನಿಲ್ಲುವ ಮೊದಲೇ ಕಿಟಕಿಯ ಒಳಗೆ ಬ್ಯಾಗ್ ಇಟ್ಟು ಸೀಟ್ ಕಾಯ್ದಿರಿಸಲು ಪ್ರಯತ್ನಿಸಿದ್ದಾಳೆ. ಚಲಿಸುತ್ತಿದ್ದ ಬಸ್‌ನ ವೇಗಕ್ಕೆ…