All posts by nagaraj11081993

‘ಧುರಂಧರ್ 2’ ಅಬ್ಬರಕ್ಕೆ ಹೆದರಿದ ಅಕ್ಷಯ್ ಕುಮಾರ್? ‘ಭೂತ್ ಬಂಗ್ಲ’ ಬಿಡುಗಡೆ ಮುಂದೂಡಿಕೆ ಸಾಧ್ಯತೆ

‘ಧುರಂಧರ್ 2’ ಅಬ್ಬರಕ್ಕೆ ಹೆದರಿದ ಅಕ್ಷಯ್ ಕುಮಾರ್? ‘ಭೂತ್ ಬಂಗ್ಲ’ ಬಿಡುಗಡೆ ಮುಂದೂಡಿಕೆ ಸಾಧ್ಯತೆ

ಬಾಲಿವುಡ್‌ನಲ್ಲಿ ನಟ ರಣವೀರ್ ಸಿಂಗ್ (Ranveer Singh) ಅವರು ಹೊಸ ಬಾಕ್ಸ್ ಆಫೀಸ್ ಸುಲ್ತಾನ್ ಆಗಿದ್ದಾರೆ. ಅವರು ಅಭಿನಯಿಸಿದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರವು ಥಿಯೇಟರ್‌ಗಳಲ್ಲಿ ಸುನಾಮಿ ಎಬ್ಬಿಸಿದೆ. ಈ ಚಿತ್ರದ ಅಭೂತಪೂರ್ವ ಯಶಸ್ಸು ಈಗ ಅಕ್ಷಯ್ ಕುಮಾರ್ ಅವರ ಮುಂಬರುವ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಮೇಲೆ ಪ್ರಭಾವ ಬೀರಲಾರಂಭಿಸಿದೆ. ಹಾಗಾಗಿ ‘ಭೂತ್ ಬಂಗ್ಲ’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂಬ ಗಾಸಿಪ್ ಕೇಳಿಬರುತ್ತಿದೆ.

ಮಾರ್ಚ್ 19ರಂದು ಬಿಡುಗಡೆಯಾದ ‘ಧುರಂಧರ್ 2’ ಸಿನಿಮಾ ವೀಕೆಂಡ್ ಮಾತ್ರವಲ್ಲದೇ ವಾರದ ದಿನಗಳಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಕ್ರೇಜ್ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ, ಏಪ್ರಿಲ್ 10ರಂದು ಬಿಡುಗಡೆ ಆಗಬೇಕಿದ್ದ ‘ಭೂತ್ ಬಂಗ್ಲ’ ಚಿತ್ರವನ್ನು ಒಂದು ವಾರ ಮುಂದೂಡಲು ಚಿತ್ರತಂಡ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

‘ಧುರಂಧರ್ 2 ಸಿನಿಮಾ ಐತಿಹಾಸಿಕ ಕಲೆಕ್ಷನ್ ಮಾಡುತ್ತಿದೆ. ಇದು ತನ್ನ ನಾಲ್ಕನೇ ವಾರದಲ್ಲೂ (ಅಂದರೆ ಏಪ್ರಿಲ್ 10ರ ಆಸುಪಾಸು) ಪ್ರಬಲವಾಗಿ ಮುನ್ನುಗ್ಗುವ ಸಾಧ್ಯತೆಯಿದೆ. ಅದೇ ಸಮಯದಲ್ಲಿ ಏಪ್ರಿಲ್ 17ರಂದು ಯಾವುದೇ ದೊಡ್ಡ ಹಿಂದಿ ಚಿತ್ರಗಳು ಬಿಡುಗಡೆಗೆ ನಿಗದಿಯಾಗಿಲ್ಲ. ಹೀಗಾಗಿ ಪೈಪೋಟಿ ತಪ್ಪಿಸಲು ‘ಭೂತ್ ಬಂಗ್ಲ’ ಚಿತ್ರವನ್ನು ಏಪ್ರಿಲ್ 17ಕ್ಕೆ ಮುಂದೂಡುವುದು ಸೂಕ್ತ ಎಂಬ ಚರ್ಚೆ ನಡೆಯುತ್ತಿದೆ’ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.

ಆದರೆ, ಮತ್ತೊಂದು ಮಾಹಿತಿ ಪ್ರಕಾರ, ಏಪ್ರಿಲ್ 10ರ ಹೊತ್ತಿಗೆ ಹೆಚ್ಚಿನ ಜನರು ‘ಧುರಂಧರ್ 2’ ಸಿನಿಮಾವನ್ನು ನೋಡಿ ಮುಗಿಸಿರುತ್ತಾರೆ. ಹಾಗಾಗಿ ಹೊಸ ಚಿತ್ರ ‘ಭೂತ್ ಬಂಗ್ಲ’ ಬಿಡುಗಡೆ ಆದರೆ ಹೆಚ್ಚಿನ ಲಾಭ ಸಿಗಬಹುದು ಎಂಬ ವಾದವೂ ಇದೆ. ನಟ ಅಕ್ಷಯ್ ಕುಮಾರ್ ಮತ್ತು ನಿರ್ಮಾಪಕಿ ಏಕ್ತಾ ಕಪೂರ್ ಈ ಬಗ್ಗೆ ಮುಂದಿನ 24 ಗಂಟೆಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: Dhurandhar 2: ರಣವೀರ್ ಸಿಂಗ್ ಮುಂದೆ ಬೇರೆ ಹೀರೋಗಳೆಲ್ಲ ಜೋಕರ್​ಗಳು; ಆರ್​ಜಿವಿ ಟೀಕೆ

ಒಂದು ವೇಳೆ ‘ಭೂತ್ ಬಂಗ್ಲ’ ಚಿತ್ರವು ನಿಗದಿತ ದಿನಾಂಕವಾದ ಏಪ್ರಿಲ್ 10ರಂದೇ ಬಿಡುಗಡೆ ಆಗುವುದಾದರೆ, ಬಹುನಿರೀಕ್ಷಿತ ಟ್ರೇಲರ್​ ಅನ್ನು ಈ ಶುಕ್ರವಾರ (ಮಾರ್ಚ್ 27) ಬಿಡುಗಡೆ ಮಾಡಲು ತಂಡ ಸಜ್ಜಾಗಿದೆ. ಒಂದು ವೇಳೆ, ಸಿನಿಮಾ ಮುಂದೂಡಿಕೆಯಾದರೆ ಟ್ರೇಲರ್ ಲಾಂಚ್ ಕೂಡ ವಿಳಂಬವಾಗಲಿದೆ. ಈ ಬಗ್ಗೆ ಸಿನಿಪ್ರಿಯರಿಗೆ ಕೌತುಕ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೋಟೆಲ್, ರೆಸ್ಟೋರೆಂಟ್ ಬಿಲ್​​​ನಲ್ಲಿ ಎಲ್​ಪಿಜಿ ಚಾರ್ಜ್ ಹಾಕಿದರೆ ನೀವು ಏನು ಮಾಡಬೇಕು?

ನವದೆಹಲಿ, ಮಾರ್ಚ್ 25: ಕಮರ್ಷಿಯಲ್ ಎಲ್​ಪಿಜಿಯ ಬಿಕ್ಕಟ್ಟು (LPG Crisis)  ಶುರುವಾದಾಗಿನಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳು ಅಡುಗೆ ಮಾಡಲು ಪರದಾಡುತ್ತಿವೆ. ಕೆಲವು ರೆಸ್ಟೋರೆಂಟ್​​ಗಳು ಬಾಯ್ಲರ್, ಎಲೆಕ್ಟ್ರಿಕ್ ಸ್ಟೌವ್​ಗಳನ್ನು ಬಳಸುತ್ತಿವೆ. ಕೆಲವು ಹೋಟೆಲ್​ಗಳಲ್ಲಿ ಗ್ಯಾಸ್​ ಅಭಾವದ ನೆಪ ಹೇಳಿ ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರದಿಂದ (CCPA) ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

ಒಂದುವೇಳೆ ನೀವು ಹೋಗುವ ಹೋಟೆಲ್ ಬಿಲ್​​ಗಳಲ್ಲಿ ಗ್ಯಾಸ್ ಚಾರ್ಜ್​ ಅಥವಾ ಎಲ್​ಪಿಜಿ ಚಾರ್ಜ್ ಎಂದು ನಮೂದಿಸಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಈ ರೀತಿ ಹಣ ವಸೂಲಿ ಮಾಡುವುದು ಅಕ್ರಮ. ಗ್ಯಾಸ್ ಸರ್‌ಚಾರ್ಜ್, ಇಂಧನ ರಿಕವರಿ ಹೆಸರಿನಲ್ಲಿ ಬಿಲ್ ಮಾಡೋದು ಶಿಕ್ಷಾರ್ಹ ಅಪರಾಧ. ಮೆನುವಿನಲ್ಲಿ ಉಲ್ಲೇಖಿಸಲಾದ ಬೆಲೆಗೆ ಅನ್ವಯವಾಗುವ ತೆರಿಗೆಗಳನ್ನು ಮಾತ್ರ ಸೇರಿಸಬಹುದು ಎಂದು ಸೂಚಿಸಿದೆ. ಹೆಚ್ಚುವರಿ ಶುಲ್ಕದಿಂದ ಗ್ರಾಹಕ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆಗುತ್ತದೆ. ಆಹಾರದ ಬೆಲೆಯಲ್ಲೇ ವೆಚ್ಚ ಸೇರಿರಬೇಕು ಎಂದು ಸಿಸಿಪಿಎ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ಮನೆಯಲ್ಲಿ ಪಿಎನ್​ಜಿ ಕನೆಕ್ಷನ್ ಇದ್ದರೂ ಬಳಸದಿದ್ದರೆ ಎಲ್​ಪಿಜಿ ಪೂರೈಕೆ ಸ್ಥಗಿತ; ಸರ್ಕಾರದಿಂದ ಎಚ್ಚರಿಕೆ

ಇಂಧನ, LPG, ವಿದ್ಯುತ್ ಮತ್ತು ಇತರ ಕಾರ್ಯಾಚರಣೆಯ ವೆಚ್ಚಗಳಂತಹ ಇನ್‌ಪುಟ್ ವೆಚ್ಚಗಳು ವ್ಯವಹಾರವನ್ನು ನಡೆಸುವ ವೆಚ್ಚದ ಭಾಗವಾಗಿದೆ. ಅದು ಮೆನು ಐಟಂಗಳ ಬೆಲೆಯಲ್ಲಿ ಸೇರಿಸಬೇಕು ಎಂದು CCPA ಸ್ಪಷ್ಟಪಡಿಸಿದೆ.

ಆಹಾರದ ಬೆಲೆಯಲ್ಲೇ ಇಂಧನ ಮತ್ತು ಸೇವೆಯ ವೆಚ್ಚ ಸೇರಿರಬೇಕೆಂದು ಸೂಚಿಸಲಾಗಿದೆ. ಬೆಲೆ ಮತ್ತು ಅನ್ವಯವಾಗುವ ತೆರಿಗೆ ಹೊರತುಪಡಿಸಿ ಬೇರೆ ಶುಲ್ಕ ವಿಧಿಸುವಂತಿಲ್ಲ. ಗ್ಯಾಸ್ ದರ ಏರಿಕೆಯ ನೆಪವೊಡ್ಡಿ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಹಾಕದಂತೆ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಹಾಗೇ, ಕಾನೂನಿನಿಂದ ಪಾರಾಗಲು ಹೊಸ ಹೆಸರಲ್ಲಿ ಹಣ ಪಡೆಯುವುದು ಕೂಡ ಅಪರಾಧವಾಗಿದೆ. ಸೇವಾ ಶುಲ್ಕದ ನಿಯಮ ತಪ್ಪಿಸಲು ಹಣ ಪಡೆಯುವುದು ಅಪರಾಧ.

ಇದನ್ನೂ ಓದಿ: ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?

ಹೆಚ್ಚು ಹಣ ಪಡೆದರೆ ನೀವೇನು ಮಾಡಬೇಕು?:

ಅನಗತ್ಯ ಚಾರ್ಜ್‌ಗಳ ವಿರುದ್ಧ ನೀವು ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ದೂರು ನೀಡಬಹುದು. ಹೆಲ್ಪ್​ಲೈನ್ 1915 ಅಥವಾ ಇ-ಜಾಗೃತಿ ಪೋರ್ಟಲ್ ಮೂಲಕ ದೂರು ಸಲ್ಲಿಸಬಹುದು. ಡಿಸಿ ಅಥವಾ ಸಿಸಿಪಿಎಗೆ ಇ-ಮೇಲ್ ಮೂಲಕವೂ ದೂರು ನೀಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ ಬ್ಯಾಗ್​​ನಲ್ಲಿ 6 ಲಕ್ಷ‌ ಹಣ ಪತ್ತೆ: ದುಡ್ಡು ತಂದಿದ್ಯಾಕೆ?

ಬೆಂಗಳೂರು, (ಮಾರ್ಚ್ 25): ಇತ್ತೀಚೆಗಷ್ಟೇ ವಿಧಾನಸೌಧದಲ್ಲಿ (Vidhan Soudha) ಲಕ್ಷಾಂತರ ಹಣ ಮತ್ತು ಚಿನ್ನಾಭರಣ ಕಳ್ಳತನವಾಗಿತ್ತು ಪ್ರಕರಣ ನಡೆದಿದ್ದು, ಈ ಪ್ರಕರಣ ಮಾಸುವ ಮುನ್ನವೇ ವಿಧಾನಸೌಧದಲ್ಲಿ ಮತ್ತೊಂದು ಮನಿ ಬ್ಯಾಗ್ ಕೇಸ್ ಬೆಳಕಿಗೆ ಬಂದಿದೆ. ಹೌದು… ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ ಬ್ಯಾಗ್​​ನಲ್ಲಿ 6 ಲಕ್ಷ ರೂಪಾಯಿ ಪತ್ತೆಯಾಗಿದೆ. ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರನ್ನು ಭೇಟಿಯಾಗಲು ವಿಧಾನಸೌಧಕ್ಕೆ ಆಗಮನಿಸಿದ್ದು, ಈ ವೇಳೆ ಪೊಲೀಸರು ಯುವಕನ ಬ್ಯಾಗ್ ಪರಿಶೀಲನೆ ವೇಳೆ ಬರೋಬ್ಬರಿ ಆರು ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಇದರಿಂದ ಪೊಲೀಸರು ಶಾಕ್ ಆಗಿದ್ದು, ಕೂಡಲೇ ಯುವಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇಂದು  (ಮಾರ್ಚ್ 25) ವ್ಯಕ್ತಿಯೊಬ್ಬರು ಕೆಂಗಲ್ ಗೇಟ್‌ ಮೂಲಕ ವಿಧಾನಸೌಧ ಒಳಗೆ ಹೋಗಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಯುವಕನ ಬ್ಯಾಗ್ ಪರಿಶೀಲನೆ ಮಾಡಿದಾಗ 6 ಲಕ್ಷ ರೂ, ಪತ್ತೆಯಾಗಿದೆ. ಆಗ ಪೊಲೀಸರು ,  ಇಷ್ಟು ದೊಡ್ಡ ಮೊತ್ತದ ಹಣದೊಂದಿಗೆ ಒಳಗೆ ಹೋಗುವಂತಿಲ್ಲ. ವಾಪಸ್ ಹೋಗಿ ಎಂದಿದ್ದಾರೆ. ಆದರೂ ಶಾಸಕರನ್ನು ನೋಡಲೇಬೇಕು ಎಂದು ಯುವಕ ಹಠ ಹಿಡಿದಿದ್ದ ಎನ್ನಲಾಗಿದೆ. ಬಳಿಕ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ಎಸಿಪಿ ಕೃಷ್ಣಯ್ಯ ಅವರ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಯುವಕ, ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಲೆಟರ್ ಹೆಡ್ ಪಡೆಯಲು ಬಂದಿರುವುದಾಗಿ ಒಪ್ಪಿಕೊಂಡಿದ್ದು, ಹಣವನ್ನು ತನ್ನ ದೊಡ್ಡಪ್ಪನ ಚಿಕಿತ್ಸೆಗೆಂದು ತಂದಿದ್ದಾಗಿ ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ 10 ಲಕ್ಷ ರೂ. ಸಿಕ್ಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್, ಸಚಿವರ ಹೆಸರು ಬಹಿರಂಗ

ವಿಚಾರಣೆ ವೇಳೆ ಯುವಕ ಹೇಳಿದ್ದೇನು?

ನಾನು ಶಾಸಕರನ್ನು ನೋಡಲು ಬಂದಿದ್ದೇನೆ. ನಾನು ಆ ಕ್ಷೇತ್ರದವನಾಗಿದ್ದು, ಶಾಸಕ ಯಶವಂತ ತಾಯಗೌಡ ಪಾಟೀಲ್ ಲೆಟರ್‌ಹೆಡ್ ಪಡೆಯಲು ಬಂದಿದ್ದೆ. ಇನ್ನು ಹಣದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಯುವಕ, ದೊಡ್ಡಪ್ಪನಿಗೆ ಹುಷಾರಿಲ್ಲ, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದಕ್ಕೆ ಹಣ ತಂದಿದ್ದೆ ಎಂದು ಹೇಳಿಕೆ ನೀಡಿದ್ದಾನೆ.

2023ರಲ್ಲೂ ವಿಧಾನಸೌಧದಲ್ಲಿ ಹಣ ಸಿಕ್ಕಿತ್ತು

ಇನ್ನು 2023ರಲ್ಲೂ ಸಹ ಇದೇ ರೀತಿಯ ಪ್ರಕರಣ ನಡೆದಿತ್ತು. ಅಂದು ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವಾಗಲೇ ವಿಧಾನಸೌಧದಲ್ಲಿ ಅನಧಿಕೃತವಾಗಿ 10.5 ಲಕ್ಷ ಹಣ ಪತ್ತೆಯಾಗಿತ್ತು. ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್(Assistant Engineer of Public Works Department) ಜಗದೀಶ್​​ ಎನ್ನುವರು ಹಣ ಸಾಗಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದರು. ಈ ಪ್ರಕರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ ಆಡಳಿತ, ವಿರೋಧ ಪಕ್ಷ ನಡುವೆ ಆರೋಪ ಪ್ರತ್ಯಾರೋಪಗಳು ಜೋರಾಗಿತ್ತು.

ಸದ್ಯ ಇಂಡಿ ಕ್ಷೇತ್ರದ ಯುವಕನ ಮನಿ ಬ್ಯಾಗ್  ಪತ್ತೆ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದ್ದು, ಇದು ಮುಂದೆ ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

RCB: ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು

ಜೂನ್ 4, 2025.. ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಎಂದಿಗೂ ಮರೆಯಲಾಗದ ದಿನ. ಬರೋಬ್ಬರಿ 18 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದ್ದ ಆರ್​ಸಿಬಿ, ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಎತ್ತಿಹಿಡಿದಿತ್ತು. ಆರ್​ಸಿಬಿಯ ಮೊದಲ ಗೆಲುವನ್ನು ಅದರ ಅಭಿಮಾನಿಗಳು ಹಬ್ಬದಂತೆ ಸಂಭ್ರಮಿಸಿದ್ದರು. ಬೀದಿ ಬೀದಿಗಳಲ್ಲಿ ಆರ್​ಸಿಬಿ ಪರ ಘೋಷಣೆಗಳು ಮೊಳಗಿದ್ದವು. ಆದರೆ ಈ ಗೆಲುವಿನ ಸಂಭ್ರಮ ಸರಿಯಾಗಿ ಒಂದು ದಿನವೂ ಇರಲಿಲ್ಲ. ಟ್ರೋಫಿ ಗೆಲುವಿನ ಸಂಭ್ರಮದಲ್ಲಿದ್ದ ಆರ್​ಸಿಬಿ ಮ್ಯಾನೇಜ್​ಮೆಂಟ್ ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನಿಗಳೊಂದಿಗೆ ಈ ಸಂಭ್ರಮವನ್ನು ಹಂಚಿಕೊಳ್ಳಲು ಬಯಸಿತ್ತು. ಇತ್ತ ಅಭಿಮಾನಿಗಳು ಕೂಡ ಈ ಸಂಭ್ರಮದಲ್ಲಿ ಭಾಗಿಯಾಗಲು ಮೈದಾನದಲ್ಲಿ ಸಾಗರೋಪಾದಿಯಾಗಿ ಹರಿದುಬಂದಿದ್ದರು. ಸಂಭ್ರಮಾಚರಣೆ ಶುರುವಾಗುವ ವೇಳೆಗೆ ಅಲ್ಲಿ ಜವರಾಯನ ಆಗಮನವಾಗಿ ಕಾಲ್ತುಳಿತವೆಂಬ ಘೋರ ದುರಂತದಿಂದ 11 ಅಮಾಯಕರು ಸಾವನ್ನಪ್ಪಿದರು.

ಈ ಅವಘಡದ ಬಳಿಕ ಏನೆಲ್ಲ ಆಯ್ತು ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಆದಾಗ್ಯೂ ಅಗಲಿದ ಈ ಜೀವಗಳಿಗೆ ಆರ್​ಸಿಬಿ ಹಾಗೂ ಕೆಎಸ್‌ಸಿಎ ಮಾಡಿದ ಸಹಾಯ ಅಲ್ಪ ಎಂಬ ಕೊರಗು ಅಭಿಮಾನಿಗಳಲ್ಲಿ ಕಾಡಲಾರಂಭಿಸಿತ್ತು. ಆದರೀಗ ಆರ್​ಸಿಬಿ ಹಾಗೂ ಕೆಎಸ್‌ಸಿಎ ಆಡಳಿತ ಮಂಡಳಿ ಮಡದಿ ಜೀವಗಳ ನೆನಪಿಗೆ ಇದುವರೆಗೆ ಯಾರೂ ಮಾಡದ ಕೆಲಸಕ್ಕೆ ಕೈಹಾಕಿದೆ. ಈ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಮನಸು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಐಪಿಎಲ್ 19 ನೇ ಸೀಸನ್ ಆರಂಭಕ್ಕೂ ಮುನ್ನ, ಆರ್‌ಸಿಬಿ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಈ ಘಟನೆಯನ್ನು ಸ್ಮರಿಸಲು ಭಾವನಾತ್ಮಕ ನಿರ್ಧಾರ ತೆಗೆದುಕೊಂಡಿವೆ. ಅಗಲಿದ ಈ 11 ಜೀವಗಳ ನೆನಪಿಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮರಣಾರ್ಥ ಫಲಕವನ್ನು ಸ್ಥಾಪಿಸಲು ಮತ್ತು ಕ್ರೀಡಾಂಗಣದ ಗ್ಯಾಲರಿಯಲ್ಲಿ 11 ಸೀಟುಗಳನ್ನು ಯಾವಾಗಲೂ ಖಾಲಿ ಇಡಲು ಆರ್‌ಸಿಬಿ-ಕೆಎಸ್‌ಸಿಎ ನಿರ್ಧರಿಸಿದೆ. ಈ 11 ಸೀಟುಗಳನ್ನು ಕೇವಲ ಐಪಿಎಲ್ ಪಂದ್ಯಗಳಿಗೆ ಮಾತ್ರವಲ್ಲ, ಅಂತರರಾಷ್ಟ್ರೀಯ ಪಂದ್ಯಗಳ ಸಮಯದಲ್ಲೂ ಖಾಲಿ ಇಡಲು ತೀರ್ಮಾನಿಸಲಾಗಿದೆ ಎಂದು ಕೆಎಸ್​ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾಧ್ ಮಾಹಿತಿ ನೀಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿರುವ ಈ 11 ಆಸನಗಳು ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 11 ಜನರನ್ನು ಪ್ರತಿನಿಧಿಸುತ್ತವೆ. ಇದರ ಜೊತೆಗೆ ಕ್ರೀಡಾಂಗಣದ ಪ್ರವೇಶದ್ವಾರದ ಬಳಿ ಸ್ಮಾರಕ ಫಲಕವನ್ನು ಇರಿಸಲಾಗುವುದು. ಹಾಗೆಯೇ ಐಪಿಎಲ್​ನ ಉದ್ಘಾಟನಾ ಪಂದ್ಯ ಆರಂಭಕ್ಕೂ ಮೊದಲು ಸಾವನ್ನಪ್ಪಿದವರ ಹೆಸರುಗಳನ್ನು ಪರದೆಯ ಮೇಲೆ ತೋರಿಸಲಾಗುತ್ತದೆ ಮತ್ತು ಒಂದು ನಿಮಿಷ ಮೌನಾಚರಣೆ ಮಾಡಲಾಗುವುದು. ಇದರಲ್ಲಿ ಎರಡೂ ತಂಡಗಳು ಭಾಗವಹಿಸುತ್ತವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೈಕಮಾಂಡ್ ಮಾತು ಯಾರು ಕೇಳಬೇಕು? : ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ

ಬೆಂಗಳೂರು, ಮಾ.25: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ತೀವ್ರ ಚರ್ಚೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರ ಪ್ರಶ್ನೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಹೈಕಮಾಂಡ್ ನಿರ್ಧಾರಗಳ ಕುರಿತು ಎದ್ದ ಪ್ರಶ್ನೆಗಳಿಗೆ ಉತ್ತರಿಸಿದ ಸಿದ್ದರಾಮಯ್ಯ, ನಾನು ಪಕ್ಷ ನಿಷ್ಠೆ ಮತ್ತು ರಾಜಕೀಯ ತತ್ವಗಳನ್ನು ಹೆಚ್ಚು ಗೌರವಿಸುತ್ತೇನೆ. ನೀವು ಮೋದಿ ಅವರನ್ನು ಕೇಳಿ ಎಲ್ಲ ಮಾಡುತ್ತೀರಾ? ಎಂದು ಸಿಎಂ ಹೇಳದಾಗ, ಶಾಸಕ ಸುನಿಲ್ ಕುಮಾರ್ “ನಾನು ಮೋದಿಯವರ ಭಕ್ತ, ನಾನು ಹೈಕಮಾಂಡ್​ನ ಭಕ್ತ, ನಾನು ಒಬ್ಬ ಪಾರ್ಟಿಯ ಶಿಸ್ತಿನ ಸಿಪಾಯಿ. ನಾನು ಕರ್ನಾಟಕದಲ್ಲಿ ಇದ್ದೀನಿ ಅನ್ನೋ ಕಾರಣಕ್ಕೆ ಹೈಕಮಾಂಡ್ ಮಾತು ಕೇಳಲ್ಲ ಅಂತ ಹೇಳಲ್ಲ. ನಾನು ಹೈಕಮಾಂಡ್ ಮಾತೇ ಕೇಳೋದು, ನಾನು ಪಾರ್ಟಿ ಮಾತೇ ಕೇಳೋದು” ಎಂದು ಹೇಳಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಟೀಕೆಯನ್ನು ಮಾಡಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ತಮ್ಮ ಸುದೀರ್ಘ ರಾಜಕೀಯ ಪಯಣದ ಮಹತ್ವದ ಘಟನೆಗಳನ್ನು ಸದನದಲ್ಲಿ ವಿವರಿಸಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ನಾನು ರಾಜ್ಯ ಘಟಕದ ಅಧ್ಯಕ್ಷರಾಗಿದ್ದೆನೆಂದು ತಿಳಿಸಿದರು. “ಕರ್ನಾಟಕದಲ್ಲಿ ನಾವಿಬ್ಬರೂ ಪರಸ್ಪರ ಮಾತುಕತೆ ಆಡಿಕೊಂಡೇ ಪಕ್ಷ ನಡೆಸುತ್ತಾ ಇದ್ದಿದ್ದು” ಎಂದು ಸ್ಮರಿಸಿದರು. ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶವನ್ನು ಆಯೋಜಿಸುವ ನಿರ್ಧಾರವನ್ನು ದೇವೇಗೌಡರು ವಿರೋಧಿಸಿದರೂ, ಆದರೆ ನಾನು ಸಮಾವೇಶವನ್ನು ಯಶಸ್ವಿಯಾಗಿ ನಡೆಸಿದೆ. ಇದರ ಪರಿಣಾಮವಾಗಿ, ದೇವೇಗೌಡರು ಜನತಾ ದಳ (ಸೆಕ್ಯುಲರ್) ಪಕ್ಷದಿಂದ ನನ್ನನ್ನು ಉಚ್ಚಾಟಿಸಿದರು. 2006ರಲ್ಲಿ ಜನತಾ ದಳ (ಸೆಕ್ಯುಲರ್)ದಿಂದ ಉಚ್ಚಾಟನೆಗೊಂಡ ನಂತರ ಸಿದ್ದರಾಮಯ್ಯ ಅವರು ಅಖಿಲ ಭಾರತ ಪ್ರಗತಿಪರ ಜನತಾದಳ (APJD) ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದರು. “ನಾನು ರಘುಪತಿ ಅವರನ್ನು ಕಳಿಸಿ ಅದನ್ನ ರಿಜಿಸ್ಟರ್ ಮಾಡಿಸಿ ನಮ್ಮ ಹೆಸರಿಗೆ ಮಾಡಿಸಿಕೊಂಡಿದ್ದು” ಎಂದು ತಿಳಿಸಿದರು. ನಂತರ, ತಾವು ಒಂಬತ್ತು ಮಂದಿ ಶಾಸಕರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಮತ್ತೆ ಗೆಲುವು ಸಾಧಿಸಿ ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡ ಬಗ್ಗೆ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

‘ಧುರಂಧರ್ 2’ ಸಿನಿಮಾ ನೋಡಿ ‘ಬ್ರಿಲಿಯಂಟ್’ ಎಂದು ಹೊಗಳಿದ ಶಿವರಾಜ್​ಕುಮಾರ್

ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ ‘ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಅನೇಕ ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಈಗಾಗಲೇ ರಜನಿಕಾಂತ್, ರಿಷಬ್ ಶೆಟ್ಟಿ ಮುಂತಾದವರು ಹೊಗಳಿದ್ದಾರೆ. ಈಗ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಕೂಡ ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ಶಿವಣ್ಣ ಅವರು ಈ ಸಿನಿಮಾವನ್ನು ಬ್ರಿಲಿಯಂಟ್ ಎಂದು ಬಣ್ಣಿಸಿದ್ದಾರೆ. ರಣವೀರ್ ಸಿಂಗ್ (Ranveer Singh) ಅವರ ಅಭಿನಯಕ್ಕೆ ಶಿವರಾಜ್​ಕುಮಾರ್ ಫುಲ್​ ಮಾರ್ಕ್ಸ್ ನೀಡಿದ್ದಾರೆ.

‘ಧುರಂಧರ್: ದಿ ರಿವೇಂಜ್’ ಸಿನಿಮಾ ಬಹಳ ಚೆನ್ನಾಗಿದೆ. ಈ ಸಿನಿಮಾದಲ್ಲಿನ ಪ್ರತಿಯೊಂದು ಅಂಶ ಕೂಡ ಇಷ್ಟ ಆಯಿತು. ರಣವೀರ್ ಸಿಂಗ್ ಬ್ರಿಲಿಯಂಟ್. ಹಳೇ ಸಾಂಗ್ ಬಳಸಿಕೊಂಡಿರುವ ಸಂಗೀತ ನಿರ್ದೇಶಕ ಶಾಶ್ವತ್ ಸಚ್​ದೇವ್ ಅವರ ಕೆಲಸ ಪರಿಣಾಮಕಾರಿ ಆಗಿದೆ’ ಎಂದು ಶಿವರಾಜ್​ಕುಮಾರ್ ಅವರು ತಮ್ಮ ಅನಿಸಿಕೆಯನ್ನು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

‘ನಿರ್ದೇಶಕ ಆದಿತ್ಯ ಧರ್ ಅವರ ಕೆಲಸಕ್ಕೆ ಗೌರವ ಸಲ್ಲಬೇಕು. ಸೈನಿಕನ ದೇಶಭಕ್ತಿಯೇ ಈ ಸಿನಿಮಾದ ಜೀವಾಳ. ಇಡೀ ಧುರಂಧರ್ 2 ಚಿತ್ರತಂಡಕ್ಕೆ ಅಭಿನಂದನೆಗಳು’ ಎಂದು ಶಿವರಾಜ್​ಕುಮಾರ್ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಹಿಂದೆ ಅವರು ‘ಧುರಂಧರ್’ ಮೊದಲ ಭಾಗವನ್ನು ನೋಡಿ ಕೂಡ ಇದೇ ರೀತಿ ಹೊಗಳಿದ್ದರು.

‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ಜೊತೆ ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್, ಕಬೀರ್ ಬೇಡಿ, ಆರ್. ಮಾಧವನ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಭರ್ಜರಿ ಕಮಾಯಿ ಮಾಡುತ್ತಿದೆ. ಈ ಮೊದಲಿನ ಎಲ್ಲ ದಾಖಲೆಗಳನ್ನು ಅಳಿಸಿ ಹಾಕುತ್ತಿದೆ.

ಇದನ್ನೂ ಓದಿ: ‘ಧುರಂಧರ್ 2’ ಚಿತ್ರಕ್ಕೆ ಸಂಕಷ್ಟ: ಆ ಒಂದು ದೃಶ್ಯದಿಂದ ಸಿಖ್ ಧರ್ಮದ ಭಾವನೆಗೆ ಧಕ್ಕೆ

ಈ ಮೊದಲು ‘45’ ಸಿನಿಮಾದ ಸುದ್ದಿಗೋಷ್ಠಿ ಮುಂಬೈನಲ್ಲಿ ನಡೆದಿತ್ತು. ಅದರಲ್ಲಿ ಭಾಗಿಯಾಗಿದ್ದ ಶಿವರಾಜ್​ಕುಮಾರ್ ಅವರು ‘ಧುರಂಧರ್’ ಸಿನಿಮಾದ ಬಗ್ಗೆ ಮಾತನಾಡಿದ್ದರು. ‘ರಣವೀರ್ ಸಿಂಗ್ ಅವರು ಮಾಡಿದ ಪಾತ್ರ ಸುಲಭವಲ್ಲ. ಅದನ್ನು ಅವರು ಬಹಳ ಬ್ರಿಲಿಯಂಟ್ ಆಗಿ ನಿಭಾಯಿಸಿದ್ದಾರೆ’ ಎಂದು ಶಿವರಾಜ್​ಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs SA: ಭಾರತ- ದಕ್ಷಿಣ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

2025 ರ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ಮಹಿಳಾ ತಂಡ ಟಿ20 ಸರಣಿ ಗೆದ್ದು, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಸೋತಿತ್ತು. ಇದೀಗ ಹೊಸ ಪ್ರವಾಸಕ್ಕೆ ಸಜ್ಜಾಗಿರುವ ವನಿತಾ ಪಡೆ, ಐದು ಪಂದ್ಯಗಳ ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸಕ್ಕಾಗಿ ಇದೀಗ ಬಿಸಿಸಿಐ, ತಂಡವನ್ನು ಸಹ ಪ್ರಕಟಿಸಿದೆ. ಈ ಪ್ರವಾಸಕ್ಕೆ 15 ಆಟಗಾರ್ತಿಯರ ತಂಡವನ್ನು ಘೋಷಿಸಿದ್ದು, ಎಂದಿನಂತೆ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ.

ಇಬ್ಬರು ಆಟಗಾರ್ತಿಯರಿಗೆ ಮೊದಲ ಅವಕಾಶ

ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಏಪ್ರಿಲ್‌ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದ್ದು, ಇದಕ್ಕಾಗಿ ತಂಡವನ್ನು ಆಯ್ಕೆ ಮಾಡಲಾಗಿದೆ. ಈ ಪ್ರವಾಸಕ್ಕಾಗಿ ಮೊದಲ ಬಾರಿಗೆ ಟಿ20 ತಂಡಕ್ಕೆ ಇಬ್ಬರು ಆಟಗಾರ್ತಿಯರನ್ನು ಆಯ್ಕೆ ಮಾಡಲಾಗಿದೆ. ಈ ಇಬ್ಬರು ಆಟಗಾರ್ತಿಯರೆಂದರೆ ಕಾಶ್ವಿ ಗೌತಮ್ ಮತ್ತು ಅನುಷ್ಕಾ ಶರ್ಮಾ.

ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್, ಅರುಂಧತಿ ರೆಡ್ಡಿ, ರೇಣುಕಾ ಠಾಕೂರ್, ಕ್ರಾಂತಿ ಗೌಡ್, ಶ್ರೀ ಚರಣಿ, ಶ್ರೇಯಂಕಾ ಪಾಟೀಲ್, ಕಾಶ್ವಿ ಗೌತಮ್, ಭಾರತಿ ಫುಲ್ಮಾಲಿ, ಉಮಾ ಛೆಟ್ರಿ, ಅನುಷ್ಕಾ ಶರ್ಮಾ.

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ವೇಳಾಪಟ್ಟಿ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸವು ಏಪ್ರಿಲ್ 17 ರಂದು ಪ್ರಾರಂಭವಾಗಲಿದೆ. ಪ್ರವಾಸವು ಐದು ಪಂದ್ಯಗಳ ಟಿ20 ಸರಣಿಯನ್ನು ಒಳಗೊಂಡಿದ್ದು, ಅಂತಿಮ ಪಂದ್ಯ ಏಪ್ರಿಲ್ 27 ರಂದು ನಡೆಯಲಿದೆ. ಮೊದಲ ಎರಡು ಪಂದ್ಯಗಳು ಏಪ್ರಿಲ್ 17 ಮತ್ತು 19 ರಂದು ಡರ್ಬನ್‌ನಲ್ಲಿ ನಡೆಯಲಿವೆ. ಮುಂದಿನ ಎರಡು ಪಂದ್ಯಗಳು ಏಪ್ರಿಲ್ 22 ಮತ್ತು 25 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿವೆ. ಸರಣಿಯ ಅಂತಿಮ ಪಂದ್ಯ ಏಪ್ರಿಲ್ 27 ರಂದು ಬೆನೋನಿಯಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಡಿಶಾದಲ್ಲಿ ಬೇಗ ಪೆಟ್ರೋಲಿಯಂ ಮೀಸಲು ಯೋಜನೆ ಪೂರ್ಣಗೊಳಿಸಲು ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ

ನವದೆಹಲಿ, ಮಾರ್ಚ್ 25: ಜಾಗತಿಕ ಅಸ್ಥಿರತೆ ಮತ್ತು ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ಅಗತ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan), ಒಡಿಶಾದ ಜಾಜ್‌ಪುರ ಜಿಲ್ಲೆಯ ಚಾಂಡಿಖೋಲ್‌ನಲ್ಲಿ 4 ಮಿಲಿಯನ್ ಮೆಟ್ರಿಕ್ ಟನ್ (MMT) ಕಾರ್ಯತಂತ್ರದ ಪೆಟ್ರೋಲಿಯಂ ಮೀಸಲು (SPR) ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮತ್ತು ಕಾರ್ಯಗತಗೊಳಿಸಲು ಒತ್ತಾಯಿಸಿದ್ದಾರೆ.

ಒಡಿಶಾದ ಚಾಂಡಿಖೋಲ್‌ನಲ್ಲಿ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿರುವ ಪೆಟ್ರೋಲಿಯಂ ಮೀಸಲು ಪ್ರದೇಶವನ್ನು ತ್ವರಿತವಾಗಿ ಪೂರ್ಣಗೊಳಿಸಲು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಎಎನ್​ಐ ಜೊತೆ ಮಾತನಾಡಿರುವ ಅವರು, “ನಾನು ಒಡಿಶಾದ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಹರ್ದೀಪ್ ಪುರಿಯವರಿಗೆ ಪತ್ರ ಬರೆದಿದ್ದೇನೆ. ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ನಾವು ಶೀಘ್ರದಲ್ಲೇ ಕಾರ್ಯತಂತ್ರದ ಪೆಟ್ರೋಲಿಯಂ ಮೀಸಲು ಪ್ರದೇಶವನ್ನು ನಿರ್ಮಿಸುವ ಕೆಲಸವನ್ನು ಪ್ರಾರಂಭಿಸಿದರೆ ಅದು ದೇಶದ ಭದ್ರತೆಗಾಗಿ ದೇಶದ ತೈಲ ನಿಕ್ಷೇಪಗಳಲ್ಲಿ ಒಂದು ದೊಡ್ಡ ಹೆಜ್ಜೆಯಾಗಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಎನ್‌ಇಪಿ ಮತ್ತು ಪಿಎಂಶ್ರೀ ಕುರಿತ ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಸಚಿವ ಸಂಪುಟವು 2018ರ ಜೂನ್ 27ರಂದು ಚಾಂಡಿಖೋಲೆ SPR ಯೋಜನೆಯನ್ನು ಅನುಮೋದಿಸಿತ್ತು. ಆಗಿನ ರಾಜ್ಯ ನಾಯಕತ್ವದೊಂದಿಗೆ ಈ ಹಿಂದೆ ಮಾತುಕತೆ ನಡೆಸಿದ್ದರೂ ಅದರ ಅನುಷ್ಠಾನವು ಸ್ಥಗಿತಗೊಂಡಿತ್ತು ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

2025ರ ಏಪ್ರಿಲ್ 8ರಂದು ನವದೆಹಲಿಯಲ್ಲಿ EPIKOL, ಒಡಿಶಾ ಸರ್ಕಾರ ಮತ್ತು ISPRL ನಡುವೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದಾಗ ಈ ಯೋಜನೆಯ ಪ್ರಗತಿ ಪುನರಾರಂಭವಾಯಿತು. ಸುಮಾರು 8,743 ಕೋಟಿ ರೂ. ಮೌಲ್ಯದ ಈ ಯೋಜನೆಯು ಭಾರತದ ಅತಿದೊಡ್ಡ ಭೂಗತ ಕಚ್ಚಾ ತೈಲ ನಿಕ್ಷೇಪವಾಗಲಿದೆ. ಇದು ನೇರವಾಗಿ ಮತ್ತು ಪರೋಕ್ಷವಾಗಿ 5,000ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸುತ್ತದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

30 ಕೋಟಿ ರೂ. ಇದ್ದರೂ ಹಾಳಾಯ್ತು ಯೂಟ್ಯೂಬರ್ ಜೀವನ; ನಡೆಯಲು ಆಗದ ಸ್ಥಿತಿ

‘ನನಗೆ ಮತ್ತೆ ನಡೆಯಲು ಸಾಧ್ಯವಿಲ್ಲವೇ ಅಂತ ಆತಂಕವಾಗುತ್ತಿದೆ’ ಎಂದು ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ (Anurag Dobhal) ಅವರು ಕಣ್ಣೀರು ಹಾಕುತ್ತಿದ್ದಾರೆ. ಯೂಟ್ಯೂಬರ್ ಆಗಿ ಖ್ಯಾತಿ ಪಡೆದಿದ್ದ ಅವರು ಇತ್ತೀಚೆಗೆ ಇನ್‌ಸ್ಟಾಗ್ರಾಮ್ ಲೈವ್‌ನಲ್ಲೇ ಆತ್ಮಹತ್ಯೆಗೆ ಯತ್ನಿಸಿ ಭೀಕರ ಕಾರು ಅಪಘಾತಕ್ಕೀಡಾಗಿದ್ದರು. ಬಿಗ್ ಬಾಸ್ 17ರ ಸ್ಪರ್ಧಿಯಾಗಿದ್ದ ಅನುರಾಗ್ ದೊಭಾಲ್ ಅವರ ಜೀವನ ಈಗ ನರಕ ಆಗಿದೆ. 30 ಕೋಟಿ ರೂಪಾಯಿ ಆಸ್ತಿ ಇದ್ದರೂ ಕೂಡ ಅವರು ನಡೆಯಲು ಸಾಧ್ಯವಾಗದ ಸ್ಥಿತಿ ತಲುಪಿದ್ದಾರೆ. ಅವರ ಆರೋಗ್ಯದ ಅಪ್‌ಡೇಟ್ (Anurag Dobhal Health Update) ತಿಳಿದು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿದೆ.

ಶಸ್ತ್ರಚಿಕಿತ್ಸೆಗಳ ನಂತರ ಆಸ್ಪತ್ರೆಯಿಂದ ವಿಡಿಯೋ ಹಂಚಿಕೊಂಡಿರುವ ಅನುರಾಗ್, ‘ಜೀವನದಲ್ಲಿ ನಾನು ಮತ್ತೆ ಎಂದಾದರೂ ನಡೆಯಲು ಸಾಧ್ಯವೇ ಅಥವಾ ಇಲ್ಲವೇ’ ಎಂಬ ನೋವಿನ ಶೀರ್ಷಿಕೆ ನೀಡಿದ್ದಾರೆ. ವಿಡಿಯೋದಲ್ಲಿ ಅವರು ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿರುವುದು ಕಾಣಬಹುದು. ‘ನನ್ನ ಒಂದು ಕಾಲು ಸಂಪೂರ್ಣವಾಗಿ ಮರಗಟ್ಟಿದೆ. ಅದನ್ನು ಸರಿಸಲು ನನಗೆ ಸಾಧ್ಯವಾಗುತ್ತಿಲ್ಲ. ಸೊಂಟದ ಭಾಗದಲ್ಲಿ ಶಸ್ತ್ರಚಿಕಿತ್ಸೆ ಮಾಡಿರುವುದರಿಂದ ಕಾಲಿನ ನರಗಳು ಹಾನಿಗೊಳಗಾಗಿವೆ. ನಾನು ಹೇಗೆ ಗುಣಮುಖನಾಗುತ್ತೇನೋ ಗೊತ್ತಿಲ್ಲ’ ಎಂದು ಕಣ್ಣೀರಿಟ್ಟಿದ್ದಾರೆ.

ಮಾರ್ಚ್ ಮೊದಲ ವಾರದಲ್ಲಿ ಅನುರಾಗ್ ದೊಭಾಲ್ ಅವರು ‘ಇದು ನನ್ನ ಕೊನೆಯ ವಿಡಿಯೋ’ ಎಂದು ಯೂಟ್ಯೂಬ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು. ಪ್ರೇಯಸಿ ರಿತಿಕಾ ಜೊತೆ ಅಂತರ್​ಜಾತಿ ವಿವಾಹ ಮಾಡಿಕೊಂಡಿದ್ದಕ್ಕೆ ಕುಟುಂಬದವರು ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ತಮ್ಮ ಬ್ಯಾಂಕ್ ಖಾತೆಯ ನಿಯಂತ್ರಣವನ್ನು ಕೂಡ ಕುಟುಂಬದವರು ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

ಮಾರ್ಚ್ 7ರಂದು ದೆಹಲಿ-ಮೀರಟ್ ಎಕ್ಸ್‌ಪ್ರೆಸ್‌ವೇನಲ್ಲಿ ತಮ್ಮ ಟೊಯೋಟಾ ಫಾರ್ಚುನರ್ ಕಾರನ್ನು 140-150 ಕಿಲೋಮೀಟರ್ ವೇಗದಲ್ಲಿ ಚಲಾಯಿಸುತ್ತಾ ಇನ್‌ಸ್ಟಾಗ್ರಾಮ್ ಲೈವ್ ಬಂದಿದ್ದ ಅನುರಾಗ್ ದೊಭಾಲ್ ಅವರು, ಭೀಕರವಾಗಿ ಅಪಘಾತಕ್ಕೀಡಾಗಿದ್ದರು. ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ಐಸಿಯುಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ ಸ್ಥಿತಿ ಗಂಭೀರ: ಹೆಚ್ಚಿದೆ ಶ್ವಾಸಕೋಶದ ಸೋಂಕು

ಅಭಿಮಾನಿಗಳ ಹಾರೈಕೆ: ಅನುರಾಗ್ ಅವರ ಈ ವಿಡಿಯೋ ನೋಡಿ ಅಭಿಮಾನಿಗಳು ಮರುಗಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಕಾಮೆಂಟ್ ಸೆಕ್ಷನ್‌ನಲ್ಲಿ ಪ್ರಾರ್ಥಿಸುತ್ತಿದ್ದಾರೆ. ಈ ಹಂತದಲ್ಲಿ ಮಾನಸಿಕ ಧೈರ್ಯ ಮುಖ್ಯ ಎಂದು ಹಲವರು ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?

ಬೆಂಗಳೂರು (ಮಾರ್ಚ್ 25): ಮೊದಲ ಹೆಂಡ್ತಿ ಬದುಕಿರುವಾಗಲೇ, ವಿಚ್ಛೇದನವನ್ನೂ ಕೊಡದೆ ಎರಡನೇ ಮದುವೆಯಾಗಲು (Second Marriage) ಹೋಗಿದ್ದ ಪತಿರಾಯನಿಗೆ ಮೊದಲ ಪತ್ನಿ ಮಂಟಪದಲ್ಲೇ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ (Kodagurki Village) ಮುನೇಶ್ವರ ದೇಗುಲದ ಬಳಿ ಸುರೇಶ್ ಎಂಬಾತ ಕದ್ದು ಮುಚ್ಚಿ ಎರಡನೇ ಮದುವೆಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಹೌದು…ವಿಚ್ಚೇದನ ನೀಡದೆ ಮತ್ತೊಂದು ವಿವಾಹವಾಗುತ್ತಿರುವ ವಿಚಾರ ತಿಳಿದು ಮೊದಲ ಪತ್ನಿ ಪೊಲೀಸರ ಜೊತೆಯಲ್ಲೇ ಆಗಮಿಸಿ ಮದುವೆ ನಿಲ್ಲಿಸಿದ್ದಾಳೆ.

19 ವರ್ಷಗಳ ಹಿಂದೆಯೇ ಚಿಕ್ಕಬಳ್ಳಾಪುರ ಮಂಚೇನಹಳ್ಳಿ ಗ್ರಾಮದ ನಾಗಮಣಿ ಎಂಬಾಕೆಯನ್ನ ಆಂಧ್ರ ಮೂಲದ ಕದರಿ ಎಂಬ ಗ್ರಾಮಕ್ಕೆ ಸೇರಿದ್ದ ಸುರೇಶ್ ಮದುವೆಯಾಗಿದ್ದ. ಈ ದಂಪತಿ ಇಬ್ಬರು ಮಕ್ಕಳು ಕೂಡ ಇದ್ದಾರಂತೆ. ಮದುವೆಯಾಗಿ ಹತ್ತಾರು ವರ್ಷ ಸಂಸಾರ ಮಾಡಿದ ಸುರೇಶ್​ ಮೊದಲ ಪತ್ನಿಯನ್ನ ಬಿಟ್ಟು 2ನೇ ಮದುವೆಯಾಗಲು ಮುಂದಾಗಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಮುನೇಶ್ವರ ದೇಗುಲದ ಬಳಿ ಸುರೇಶ್​ ಎಂಬಾತನ ಎರಡನೇ ಮದುವೆ ಕೂಡ ನಡೆದಿತ್ತು. ಇನ್ನೇನು ತಾಳಿ ಕಟ್ಟೋ ಸಮಯಕ್ಕೆ ಸರಿಯಾಗಿ ಬಂದ ನಾಗಮಣಿ ಮದುವೆ ನಿಲ್ಲಿಸಿದ್ದಾರೆ.

ಇದನ್ನೂ ನೋಡಿ: ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್

ಇನ್ನೂ ಪೊಲೀಸರ ಸಮೇತ ಮೊದಲ ಪತ್ನಿ ಎಂಟ್ರಿಕೊಡುತ್ತಿದ್ದಂತೆಯೇ ಗಂಡ ಕಕ್ಕಾಬಿಕ್ಕಿಯಾಗಿದ್ದಾರೆ. ಮೊದಲನೆ ಪತ್ನಿಗೆ ವಿಚ್ಚೇಧನ ನೀಡದೆ ಎರಡನೆ ಮದುವೆಯಾಗುವುದು ತಪ್ಪು ಎಂದು ಬುದ್ದಿವಾದ ಹೇಳಿದ್ದು ಮದುವೆಯನ್ನ ನಿಲ್ಲಿಸಿದ್ದು, ಸಿಂಗಾರಗೊಂಡು ಮದುವೆಗೆ ಸಿದ್ದವಾಗಿ ಕುಳಿತಿದ್ದ ಸುರೇಶ್ ನನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link