‘ನಮಗೆ ಬೇಕಾದ್ದು ದಕ್ಕದೇ ಹೋದರೆ ಬೇರೆ ಮಾರ್ಗದಲ್ಲಿ ಕೊನೆಗಾಣಿಸಬೇಕಾಗುತ್ತದೆ’- ಇರಾನ್ಗೆ ಟ್ರಂಪ್ ವಾರ್ನಿಂಗ್
ವಾಷಿಂಗ್ಟನ್, ಮೇ 31: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ದೇಶಕ್ಕೆ ತೀವ್ರ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ. ಪಶ್ಚಿಮ ಏಷ್ಯಾ ಬಿಕ್ಕಟ್ಟು ತೀವ್ರಗೊಂಡಿರುವ ಈ ಸಂದರ್ಭದಲ್ಲಿ, ಶಾಂತಿ ಒಪ್ಪಂದದ ನಿಯಮಗಳನ್ನು ಕಠಿಣಗೊಳಿಸಿರುವ ಟ್ರಂಪ್, “ನಾವು ಅಂದುಕೊಂಡಿದ್ದು ನಮಗೆ ಸಿಗದಿದ್ದರೆ, ನಾವು ಬೇರೆ ಮಾರ್ಗದಲ್ಲೇ ಇದನ್ನು ಕೊನೆಗಾಣಿಸುತ್ತೇವೆ” ಎಂದು ನೇರ ಎಚ್ಚರಿಕೆ ನೀಡಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವೆ ಮಧ್ಯವರ್ತಿಗಳ ಮೂಲಕ ನಡೆಯುತ್ತಿರುವ ಶಾಂತಿ ಒಪ್ಪಂದದ ಕರಡು ಪ್ರತಿಯನ್ನು (Draft MoU) ಶ್ವೇತಭವನದ ಸಿಚುಯೇಷನ್…