ನೂತನ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಡಿಸಿಎಂ ಸ್ಥಾನಕ್ಕೆ ಪೈಪೋಟಿ, ಮಂತ್ರಿಗಿರಿಗೂ ಹೆಚ್ಚಿದ ಲಾಬಿ
ಬೆಂಗಳೂರು, ಮೇ 31: ನೂತನ ಮುಖ್ಯಮಂತ್ರಿಯ ಆಯ್ಕೆ ಬೆನ್ನಲ್ಲಿಯೇ ಡಿಸಿಎಂ ಮತ್ತು ಸಚಿವ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ (Congress) ಪಾಳಯದಲ್ಲಿ ಲಾಬಿ ಜೋರಾಗಿ ನಡೆಯುತ್ತಿದೆ. ಉಪ ಮುಖ್ಯಮಂತ್ರಿ ಸ್ಥಾನಗಳ ವಿಚಾರದಲ್ಲಿ ಇನ್ನೂ ಪ್ರಸ್ತಾಪ ಬಂದಿಲ್ಲ. ಪ್ರಸ್ತಾಪ ಬಂದ ಬಳಿಕ ಎಷ್ಟು ಡಿಸಿಎಂ, ಎಷ್ಟು ಸಚಿವರು ಅಂತಾ ತೀರ್ಮಾನ ಆಗುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ನಡುವೆಯೂ ಪಟ್ಟಕ್ಕಾಗಿ ಪೈಪೋಟಿ ನಡೆದಿದೆ. ಅದರಲ್ಲಿ ದಲಿತ ಕೋಟಾದಡಿ ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ರೇಸ್ ಶುರುವಾಗಿರುವ…