PSG ಚಾಂಪಿಯನ್ಸ್… ಈ ಸಲ ಕಪ್ RCBಗೆ?
ಯುಇಎಫ್‌ಎ ಚಾಂಪಿಯನ್ಸ್ ಲೀಗ್ನಲ್ಲಿ ಫ್ರಾನ್ಸ್ ಕ್ಲಬ್ ಪ್ಯಾರಿಸ್ ಸೈಂಟ್-ಜರ್ಮೈನ್ (PSG) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಈ ಬಾರಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡ ಚಾಂಪಿಯನ್ ಪಟ್ಟಕ್ಕೇರಲಿದೆ ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಇಂತಹದೊಂದು ಲೆಕ್ಕಾಚಾರಕ್ಕೆ ಮುಖ್ಯ ಕಾರಣ ಉಭಯ ತಂಡಗಳ ನಡುವಣ ಸಾಮ್ಯತೆ. ಪ್ಯಾರಿಸ್ ಸೈಂಟ್-ಜರ್ಮೈನ್ ತಂಡವು ಯುರೋಪ್ನ ಬಲಿಷ್ಠ ಫುಟ್ಬಾಲ್ ತಂಡ ಎನಿಸಿಕೊಂಡರೂ ಮೊದಲ ಯುಇಎಫ್‌ಎ ಚಾಂಪಿಯನ್ಸ್ ಲೀಗ್ ಟ್ರೋಫಿ ಗೆಲ್ಲಲು ತೆಗೆದುಕೊಂಡಿದ್ದು ಬರೋಬ್ಬರಿ 55 ವರ್ಷಗಳು….