All posts by nagaraj11081993

ಕಾಂಗ್ರೆಸ್​ಗೆ ಹೊಸ ಸಂಕಷ್ಟ, ದೆಹಲಿಯ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ನೋಟಿಸ್

ಕಾಂಗ್ರೆಸ್​ಗೆ ಹೊಸ ಸಂಕಷ್ಟ, ದೆಹಲಿಯ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ನೋಟಿಸ್

ನವದೆಹಲಿ, ಮಾರ್ಚ್​ 25: ಕಾಂಗ್ರೆಸ್​​(Congress)ಗೆ ಹೊಸ ಸಂಕಷ್ಟ ಎದುರಾಗಿದೆ. ದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ನೋಟಿಸ್ ಜಾರಿಮಾಡಲಾಗಿದೆ. ಖಾಲಿ ಮಾಡಲು ಮಾರ್ಚ್​ 28ರವರೆಗೆ ಅವಕಾಶ ನೀಡಲಾಗಿದೆ. ಪಕ್ಷವು ತನ್ನ ಕಾರ್ಯಾಚರಣೆಯನ್ನು ಈಗಾಗಲೇ ಐಟಿಒ ಬಳಿಯ ಇಂದಿರಾ ಭವನದಲ್ಲಿರುವ ತನ್ನ ಹೊಸ ಪ್ರಧಾನ ಕಚೇರಿಗೆ ಸ್ಥಳಾಂತರಿಸಿದ್ದರೂ ಸಹ,  ಪ್ರಮುಖ ನಿರ್ಧಾರಗಳನ್ನು ಅಲ್ಲಿಂದಲೇ ತೆಗೆದುಕೊಳ್ಳಲಾಗುತ್ತಿತ್ತು.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಮತ್ತು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ಕ್ರಮವನ್ನು ಟೀಕಿಸಿ, ಇದನ್ನು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಕರೆದಿದ್ದಾರೆ ಮತ್ತು ಪಕ್ಷವು ಲಭ್ಯವಿರುವ ಎಲ್ಲಾ ನಿಯಮಗಳನ್ನು ಅನುಸರಿಸುತ್ತದೆ ಎಂದಿದ್ದಾರೆ.

ಸುಮಾರು 48 ವರ್ಷಗಳ ಕಾಲ ಕಾಂಗ್ರೆಸ್‌ನ ಕೇಂದ್ರ ಪ್ರಧಾನ ಕಚೇರಿಯಾಗಿ ಕಾರ್ಯನಿರ್ವಹಿಸಿತ್ತು. ಪಕ್ಷವು ಕಳೆದ ವರ್ಷ ತನ್ನ ಹೊಸ ಪ್ರಧಾನ ಕಚೇರಿಯಾದ ಇಂದಿರಾ ಭವನಕ್ಕೆ ಸ್ಥಳಾಂತರಗೊಂಡರೂ, ಪಕ್ಷದ ಚಟುವಟಿಕೆಗಳು ಹಳೆಯ ಕಚೇರಿಯಲ್ಲಿಯೇ ಮುಂದುವರೆದಿತ್ತು.

ಮತ್ತಷ್ಟು ಓದಿ: ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಈ ನೋಟಿಸ್ ಬಗ್ಗೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಇದು ಪ್ರಜಾಪ್ರಭುತ್ವ ಸರ್ಕಾರವಲ್ಲ. ಇದು ದುರದೃಷ್ಟಕರ. ನಾವು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಹೇಳಿದ್ದಾರೆ.

ಬುಧವಾರ ಹೊರಡಿಸಲಾದ ನೋಟಿಸ್‌ನಲ್ಲಿ, ಎಸ್ಟೇಟ್ ಇಲಾಖೆಯು 24 ಅಕ್ಬರ್ ರಸ್ತೆಯ ಜೊತೆಗೆ, 5 ರೈಸಿನಾ ರಸ್ತೆಯಲ್ಲಿರುವ ಭಾರತೀಯ ಯುವ ಕಾಂಗ್ರೆಸ್ ಕಚೇರಿಯನ್ನು ಸಹ ಮಾರ್ಚ್ 28 ರೊಳಗೆ ಖಾಲಿ ಮಾಡಬೇಕು ಎಂದು ಸ್ಪಷ್ಟವಾಗಿ ತಿಳಿಸಿದೆ. ಈ ಬಂಗಲೆಯನ್ನು ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಹಂಚಿಕೆ ಮಾಡಲಾಗಿದ್ದು, ಅದರ ಅಂಗಸಂಸ್ಥೆ ಘಟಕವು ಅದನ್ನು ಬಳಸುತ್ತಿದೆ ಎಂದು ವರದಿಯಾಗಿದೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಮಾತನಾಡಿ, ಅಕ್ಬರ್ ರಸ್ತೆ ಕಚೇರಿ ಮತ್ತು ಯುವ ಕಾಂಗ್ರೆಸ್ ಕಚೇರಿಗೆ ನೋಟಿಸ್ ಬಂದಿದೆ. ಈಗ ದೇಶದ ಆದ್ಯತೆ ಏನು ಎಂಬ ಪ್ರಶ್ನೆ ಮೂಡಿದೆ. ಎಲ್​ಪಿಜಿಯನ್ನು ಯಾವುದೇ ಅಡೆತಡೆ ಇಲ್ಲದೆ ದೇಶಕ್ಕೆ ತರುವುದು, ಕಾಳಸಂತೆಯಲ್ಲಿ ಮಾರಾಟವಾಗದಂತೆ ನೋಡಿಕೊಳ್ಳುವ ಅಗತ್ಯವಿದೆ. ಗರಂ ಮಸಾಲ, ಬಾಳೆಹಣ್ಣು, ದ್ರಾಕ್ಷಿ, ಅರಿಶಿನ, ಬಾಸ್ಮರಿ ಅಕ್ಕಿ ಎಲ್ಲವೂ ಈಗ ಸಿಲುಕಿಕೊಂಡಿದೆ. ಇದು ನಮ್ಮ ದೇಶದ ಆದ್ಯತೆಯಾಗಬೇಕು ಎಂದರು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ, ಕಾಮಗಾರಿ ಸ್ಥಗಿತಗೊಳಿಸಲು ಕಾರಣವೇನು?

ಬೆಂಗಳೂರು, ಮಾ.25: ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಾರ್ಮೋಡಗಳು ಈಗ ಬೆಂಗಳೂರಿನ ರಸ್ತೆಗಳ ಮೇಲೂ ಬಿದ್ದಿದೆ. ಯುದ್ಧದ ಹಿನ್ನೆಲೆಯಲ್ಲಿ ಬಿಟುಮೆನ್ (Bitumen) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳು ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಡಾಂಬರು ಮಿಶ್ರಣಕ್ಕೆ ಅತ್ಯಗತ್ಯವಾಗಿರುವ ‘ಬಿಟುಮೆನ್’ ಕಚ್ಚಾ ತೈಲದ ಉಪ ಉತ್ಪನ್ನವಾಗಿದೆ. ಭಾರತಕ್ಕೆ ಇದರ ಬಹುಪಾಲು ಪೂರೈಕೆ ಕೊಲ್ಲಿ ರಾಷ್ಟ್ರಗಳಿಂದ ಆಗುತ್ತದೆ. ಯುದ್ಧದಿಂದಾಗಿ ಹಡಗುಗಳ ಸಂಚಾರ ಮತ್ತು ಪೂರೈಕೆಗೆ ಪೆಟ್ಟು ಬಿದ್ದಿದೆ. ಬೆಂಗಳೂರಿನ ಗುತ್ತಿಗೆದಾರರು ಮಂಗಳೂರು ರಿಫೈನರೀಸ್ (MRPL) ಮತ್ತು ಮದ್ರಾಸ್ ರಿಫೈನರೀಸ್ ಮೂಲಕ ಬಿಟುಮೆನ್ ಪಡೆಯುತ್ತಿದ್ದರು. ಆದರೆ ಈಗ ಅಲ್ಲಿಯೂ ಪೂರೈಕೆ ಕಡಿಮೆಯಾಗಿದೆ. ಪೂರೈಕೆ ಕಡಿಮೆ ಇರುವುದರಿಂದ ಬಿಟುಮೆನ್ ಬೆಲೆ ಗಗನಕ್ಕೇರಿದೆ. ಹಿಂದೆ ಒಂದು ಟನ್ ಬಿಟುಮೆನ್‌ಗೆ 45,000 ರೂ. ಇದ್ದ ದರ, ಈಗ 60,000 ರೂ.ಗೆ ಏರಿಕೆಯಾಗಿದೆ. ದರ ಏರಿಕೆಯಿಂದಾಗಿ ಗುತ್ತಿಗೆದಾರರ ವೆಚ್ಚ ವಿಪರೀತ ಹೆಚ್ಚಾಗಿದ್ದು, ಹಳೆಯ ದರದಲ್ಲಿ ಕಾಮಗಾರಿ ಮುಂದುವರಿಸುವುದು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನೇಕ ಕಾಮಗಾರಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ವರದಿ: ಅರುಣ್​ ಕುಮಾರ್​​​​ ಟಿವಿ9 ಮೆಟ್ರೋ 

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು!

ಬೆಂಗಳೂರು, (ಮಾರ್ಚ್ 25): ವಿಧಾನಸಭೆಯಲ್ಲಿ ಬಜೆಟ್​ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುವ ವೇಳೆ ಕೆಲ ಸ್ವಾರಸ್ಯಕರ ಪ್ರಸಂಗಗಳು ಜರುಗಿವೆ. ಅದರಲ್ಲೂ ಮುಖ್ಯವಾಗಿ ಡಿಕೆ ಶಿವಕುಮಾರ್ ಶಾಲ್ ಹಾಕುತ್ತಿರುವ ಬಗ್ಗೆ ಚರ್ಚೆಯಾಗಿದ್ದು, ಬಿಜೆಪಿ ಶಾಸಕ ಸುನೀಲ್​ಕುಮಾರ್​ ಮಧ್ಯಪ್ರವೇಶಿಸಿ, ನೀವು ಶಾಲು ಹಾಕಿದ‌ಮೇಲೆ ಮುಖ್ಯಮಂತ್ರಿ ಆಗಿದ್ದೀರಿ. ಅದಕ್ಕೆ‌ ಡಿಕೆ ಕೂಡ ಶಾಲು ಹಾಕ್ತಿದ್ದಾರೆಂದು ಸಿದ್ದರಾಮಯ್ಯನವರ ಕಾಲೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮೊದಲು ಟವೆಲ್ ಹಾಕುತ್ತಿದ್ದೆ. ಅದು ಯಾವಾಗಲೂ ಬಿದ್ದು ಹೋಗುತ್ತಿತ್ತು. ಅವತ್ತಿನಿಂದ ನಾನು ಶಾಲು ಹಾಕ್ತಿರೋದು, ಬೇರೆ ಅರ್ಥ ಬೇಡ. ನಾನು ದೇವರಿದ್ದಾನೆ ಎನ್ನುಉದನ್ನು ಒಪ್ಪುತ್ತೇನೆ. ಆದರೆ ದೇವಸ್ಥಾನದಲ್ಲಿಲ್ಲ. ಉಳ್ಳವರು ದೇವಾಲಯ ಮಾಡುವರು, ನಾನೇನು ಮಾಡಲಯ್ಯ, ಈ ಬಗ್ಗೆ ಬಸವಣ್ಣ ಅವರು ಹೇಳಿದ್ರು ಎಂದು ಬಸವಣ್ಣನ ವಚನದ ಮೂಲಕ, ಸುನೀಲ್ ಕುಮಾರ್ ಹೆ ಟಾಂಗ್ ಕೊಟ್ಟರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧಾರವಾಡದ ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್! ಮಹಿಳೆಯೊಂದಿಗಿನ ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ?

ಧಾರವಾಡ, ಮಾರ್ಚ್​ 25: ಜಿಲ್ಲೆಯಲ್ಲಿ ಮಾಜಿ ಶಾಸಕನ ಪುತ್ರನ ಹತ್ಯೆ ಪ್ರಕರಣ ಭಾರೀ ತಿರುವು ಪಡೆದಿದ್ದು, ಘಟನೆ ಪೂರ್ವನಿಯೋಜಿತ ಕೊಲೆ ಎಂಬ ಶಂಕೆ ಮತ್ತಷ್ಟು ಗಾಢವಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಶವ ಧಾರವಾಡ (Dharwad) ತಾಲೂಕಿನ ರಾಮಾಪುರ ಅರಣ್ಯ ಪ್ರದೇಶದಲ್ಲಿ ಕಾರಿನೊಳಗೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿತ್ತು.  ಈ ಪ್ರಕರಣದಲ್ಲಿ ಮೂವರಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಗೆ ಸಾಲದ ರೂಪದಲ್ಲಿ ಹಣ ನೀಡಿದ್ದ ರಾಜು

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಗುರುತು ಸಿಗದಷ್ಟು ಸ್ಥಿತಿಯಲ್ಲಿ ಸುಟ್ಟು ಕರಕಲಾದ ರಾಜುನ ಶವ ಸಿಕ್ಕಿತ್ತು. ಈ ಘಟನೆಯು ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಇದು ಪೂರ್ವನಿಯೋಜಿತ ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರಾಜು ಬೋಳಶೆಟ್ಟಿ, ದೈಹಿಕ ಸಂಪರ್ಕಕ್ಕೆ ಬಂದಾಗ ಆಕೆಗೆ ಹಣ ನೀಡುತ್ತಿದ್ದ. ಸಾಲದ ರೂಪದಲ್ಲಿಯೇ ಮಹಿಳೆಗೆ ಹಣ ನೀಡುತ್ತದ್ದ ರಾಜು, 2 ಲಕ್ಷ ರೂ. ಗೂ ಹೆಚ್ಚು ಹಣ ಕೊಟ್ಟಿದ್ದ. ಇದೇ ವಿಚಾರಕ್ಕೆ ಮಹಿಳೆ ಹಾಗೂ ರಾಜು ನಡುವೆ ಮನಸ್ತಾಪ ಆಗಿತ್ತು. ನಿನ್ನೆಯೂ ಆತ ದೈಹಿಕ ಸಂಪರ್ಕಕ್ಕಾಗಿ ಹೊಲಕ್ಕೆ ಮಹಿಳೆಯನ್ನು ಕರೆದಿದ್ದ. ಇದೇ ವೇಳೆ ಮಹಿಳೆ, ಆಕೆಯ ಮಗ ಹಾಗೂ ಆಕೆಯ ಪ್ರಿಯಕರ ಸೇರಿ ಈ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ

ಶವವನ್ನು ಕಾರು ಸಮೇತ ಸುಟ್ಟ ಆರೋಪಿಗಳು

ರಾಜು ಬೋಳಶೆಟ್ಟಿಯ ಕಾರಿನಲ್ಲೇ ರಾಮಾಪುರ ಅರಣ್ಯಕ್ಕೆ ಆತನ ಶವವನ್ನು ತಂದ ಈ ಮೂವರು, ಹಿಂದಿನ ಸೀಟಿನಲ್ಲಿ ಶವವಿಟ್ಟು, ತಾವು ತಂದಿದ್ದ 10 ಲೀ. ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬಳಿಕ ಮೂವರೂ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರ ಚುರುಕಿನ ಕಾರ್ಯಾಚರಣೆಯಿಂದ ಕೆಲವೇ ಘಂಟೆಗಳಲ್ಲಿ ಮೂವರನ್ನೂ ಸೆರೆ ಹಿಡಿಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತದಲ್ಲಿ ಪಿಎನ್​ಜಿ ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ನಾಂದಿ ಹಾಡುತ್ತಿದೆ ಎಲ್​ಪಿಜಿ ಬಿಕ್ಕಟ್ಟು

ನವದೆಹಲಿ, ಮಾರ್ಚ್ 25: ಎಲ್​ಪಿಜಿ ಪೂರೈಕೆಯಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಈಗ ಭಾರತದಲ್ಲಿ ಪರ್ಯಾಯ ವ್ಯವಸ್ಥೆ ಹೆಚ್ಚಿಸಲು ಅನಿವಾರ್ಯವಾಗಿಸಿದೆ. ಸರ್ಕಾರವು ನೈಸರ್ಗಿಕ ಅನಿಲ (Natural Gas) ಸೌಕರ್ಯಗಳಾದ ಪಿಎನ್​ಜಿ ಮತ್ತು ಸಿಎನ್​ಜಿ ಲಭ್ಯತೆ ಹೆಚ್ಚಿಸಲು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಬೇಕಾದ ಸುಧಾರಣೆಗಳನ್ನು ತರುತ್ತಿದೆ. ಪಿಎನ್​ಜಿ ಸೌಕರ್ಯವನ್ನು ವೇಗವಾಗಿ ಹೆಚ್ಚಿಸಲು ಈ ಸುಧಾರಣೆ ತರಲಾಗಿದೆ. ಈ ಸಂಬಂಧ ಸರ್ಕಾರವು ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವಿತರಣೆ ಆದೇಶ 2026 ಅನ್ನು ಹೊರಡಿಸಿದೆ.

ವಿವಿಧ ಪ್ರದೇಶಗಳಿಗೆ ನ್ಯಾಚುರಲ್ ಗ್ಯಾಸ್ ಪೈಪ್​ಲೈನ್ ಹಾಕಲು ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಟರ್​ಗಳಿಗೆ ಅನೇಕ ತಡೆಗಳು, ಸಮಸ್ಯೆಗಳಿವೆ. ಭೂಮಿ ಸಿಗದೇ ಇರುವುದು, ಅನುಮೋದನೆ ದೊರಕದೇ ಇರುವುದು, ಅಧಿಕ ಶುಲ್ಕ ಇರುವುದು ಇತ್ಯಾದಿ ತಡೆಗಳನ್ನು ನಿವಾರಿಸಿ, ನ್ಯಾಚುರಲ್ ಗ್ಯಾಸ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಗೆ ಪೈಪ್​ಲೈನ್ ಅಳವಡಿಸುವ ಕಾರ್ಯಗಳನ್ನು ಸುಗಮಗೊಳಿಸಲು ಸರ್ಕಾರವು ಏಕರೀತಿಯ ಒಂದು ಫ್ರೇಮ್​ವರ್ಕ್ ರೂಪಿಸುವುದು ಅಗತ್ಯ ಇದೆ ಎಂದು ಪೆಟ್ರೋಲಿಯಂ ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ರಷ್ಯಾದಿಂದ 60 ಮಿಲಿಯನ್ ಬ್ಯಾರಲ್ ಕಚ್ಛಾ ತೈಲ ಖರೀದಿಸಿದ ಭಾರತ

ಎಲ್​ಪಿಜಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯವನ್ನು ಸರಿದೂಗಿಸಲು ಸರ್ಕಾರವು ನೈಸರ್ಗಿಕ ಅನಿಲದತ್ತ ಗಮನ ಹರಿಸಿದೆ. ನ್ಯಾಚುರಲ್ ಗ್ಯಾಸ್​ಗೆ ಭಾರತವು ಗಲ್ಫ್ ರಾಷ್ಟ್ರಗಳ ಮೇಲೆ ಅವಲಂಬನೆ ಕಡಿಮೆ ಇದೆ. ಹೀಗಾಗಿ, ಎಲ್​ಪಿಜಿಗೆ ಹೋಲಿಸಿದರೆ ಎಲ್​ಎನ್​ಜಿ ಮತ್ತು ಪಿಎನ್​ಜಿ ಪೂರೈಕೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಆದರೆ, ಪಿಎನ್​ಜಿ ಅಥವಾ ಪೈಪ್ಡ್ ಗ್ಯಾಸ್ ನೆಟ್ವರ್ಕ್ ಎಲ್ಲೆಡೆ ಸಾಕಷ್ಟು ಮಟ್ಟದಲ್ಲಿ ಲಭ್ಯ ಇಲ್ಲದಿರುವುದು ಪ್ರಮುಖ ಹಿನ್ನಡೆಯಾಗಿದೆ.

ಭಾರತದಲ್ಲಿ ಒಂದೂವರೆ ಕೋಟಿಗೂ ಸ್ವಲ್ಪ ಹೆಚ್ಚು ಮನೆಗಳಿಗೆ ಪಿಎನ್​ಜಿ ಕನೆಕ್ಷನ್ ಇದೆ. ಹೆಚ್ಚಿನ ನಗರಗಳಲ್ಲಿ ಪಿಎನ್​ಜಿ ಪೂರೈಕೆ ಇದೆಯಾದರೂ ವ್ಯಾಪಕವಾಗಿ ಪೈಪ್​ಲೈನ್ ಅಳವಡಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಕೆಲ ಪ್ರದೇಶಗಳಲ್ಲಿ ಪೈಪ್​ಲೈನ್ ಇದ್ದರೆ, ಮತ್ತಷ್ಟು ಪ್ರದೇಶಗಳಲ್ಲಿ ಅಳವಡಿಕೆಯೇ ಆಗಿಲ್ಲ. ಹೀಗಾಗಿ, ಹೆಚ್ಚಿನ ಮನೆಗಳಿಗೆ ಪಿಎನ್​ಜಿ ಸಂಪರ್ಕವೇ ಲಭ್ಯ ಇಲ್ಲದಂತಾಗಿದೆ. ಈ ಸಮಸ್ಯೆ ನೀಗಿಸಲು ಸರ್ಕಾರ ಈ ಹೊಸ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸಲ್ ಕೊರತೆ ಇಲ್ಲ, ಗಾಬರಿ ಬೇಡ: ಪೆಟ್ರೋಲಿಯಂ ಕಂಪನಿಗಳಿಂದ ಸ್ಪಷ್ಟನೆ

ಈ ಆದೇಶವು ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಟಿಂಗ್ ಸಂಸ್ಥೆಗಳಿಗೆ ಹೆಚ್ಚಿನ ಶಕ್ತಿ ಸಿಗಲಿದೆ. ತ್ವರಿತವಾಗಿ ಪೈಪ್​ಲೈನ್​ಗಳನ್ನು ಅಳವಡಿಸಲು ಸಾಧ್ಯವಾಗಬಹುದು. ಇದರಿಂದ ಜನರನ್ನು ಎಲ್​ಪಿಜಿಯಿಂದ ಪಿನ್​ಜಿ ಸಂಪರ್ಕಕ್ಕೆ ವರ್ಗಾಯಿಸುವುದು ಸುಲಭವಾಗುತ್ತದೆ. ಎಲ್​ಪಿಜಿ ತಂದಿರುವ ಬಿಕ್ಕಟ್ಟು ಈಗ ಪಿಎನ್​ಜಿ ಸೌಕರ್ಯ ಹೆಚ್ಚಿಸಲು ಅನುಕೂಲ ಮಾಡಿಕೊಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ! ಸಿಎಂ ಸಿದ್ದರಾಮಯ್ಯ ಹೀಗೆಂದಿದ್ದೇಕೆ ನೋಡಿ

ಬೆಂಗಳೂರು, ಮಾರ್ಚ್ 25: ಕರ್ನಾಟಕ ಬಜೆಟ್ 2026 ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಹುಕಾಲ ನೋಡಿಕೊಂಡು ಸಮಯ ನಿಗದಿ ಮಾಡಿದ್ದರು ಎಂಬ ಪ್ರತಿಪಕ್ಷ ನಾಯಕರ ಟೀಕೆ ಬುಧವಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ನಾಂದಿಹಾಡಿತು. ಈ ವಿಚಾರವಾಗಿ, ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು. ಅದಕ್ಕುತ್ತರಿಸಿದ ಸಿದ್ದರಾಮಯ್ಯ, ಅಧಿಕಾರಿಗಳು ಹಾಗೂ ಮನೆಯವರ ಮಾತು ಕೇಳಿ ರಾಹುಕಾಲ ನೋಡಿದ್ದು ನಿಜ. ಆದರೆ, ವೈಯಕ್ತಿಕವಾಗಿ ರಾಹುಕಾಲ, ಗುಳಿಕಕಾಲ ಅಥವಾ ಯಾವುದೇ ರೀತಿಯ ಗ್ರಹಣ ಕಾಲಗಳಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.

ಈ ಹಿಂದೆ ಹಲವು ಬಾರಿ ರಾಹುಕಾಲದಲ್ಲೇ ಬಜೆಟ್ ಮಂಡಿಸಿದ್ದ ಉದಾಹರಣೆಗಳನ್ನೂ ಸಿದ್ದರಾಮಯ್ಯ ಅವರು ನೀಡಿದ್ದಾರೆ. ಅಲ್ಲದೆ, ‘ಯುಗಾದಿ ದಿನ ಹಾಗೂ ಶಿವರಾತ್ರಿ ದಿನ ಯಾರಾದರೂ ಮಾಂಸ ಸೇವನೆ ಮಾಡುತ್ತಾರಾ? ನಾನು ತಿನ್ನುತ್ತೇನೆ, ನನ್ನಿಷ್ಟ’ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶುಕ್ರವಾರ ಮಾಂಸ ಮಾರಾಟಕ್ಕೆ ಬ್ರೇಕ್! ಜಿಬಿಎಯಿಂದ ಬಂತು ಆರ್ಡರ್

ಬೆಂಗಳೂರು, ಮಾರ್ಚ್​ 25: ಶ್ರೀರಾಮನವಮಿ (Ram Navami) ಹಬ್ಬದ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ಸಾರ್ವಜನಿಕ ಸೂಚನೆಯನ್ನು ಹೊರಡಿಸಿದೆ. ಮಾರ್ಚ್ 27, ಶುಕ್ರವಾರದಂದು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪ್ರಾಧಿಕಾರದ ಪಶುಸಂಗೋಪನಾ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಜಿಬಿಎ ಹೊರಡಿಸಿದ ಆದೇಶದಲ್ಲೇನಿದೆ?

ಎಲ್ಲಾ ಕಸಾಯಿಖಾನೆಗಳನ್ನು ಆ ದಿನ ಮುಚ್ಚುವಂತೆ ಜಿಬಿಎ ಆದೇಶ ಹೊರಡಿಸಿದ್ದು, ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ. ನಗರ ವ್ಯಾಪ್ತಿಯಲ್ಲಿರುವ ಎಲ್ಲ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಬಿಎ ಆದೇಶ

ನಿಯಮ ಉಲ್ಲಂಘಿಸಿದರೆ ಕ್ರಮ!

ಹಬ್ಬದ ದಿನದ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಭಾವನೆಗಳನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.ನಗರದಲ್ಲಿ ಯಾವುದೇ ರೀತಿಯ ಅಸಭ್ಯತೆ ಅಥವಾ ಅಕ್ರಮ ನಡೆಯದಂತೆ ನಿಗಾ ವಹಿಸಲಾಗುತ್ತಿದೆ. ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸಹಕರಿಸಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಷ್ಯಾದಿಂದ 60 ಮಿಲಿಯನ್ ಬ್ಯಾರಲ್ ಕಚ್ಛಾ ತೈಲ ಖರೀದಿಸಿದ ಭಾರತ

ನವದೆಹಲಿ, ಮಾರ್ಚ್ 25: ಗಲ್ಫ್ ಭಾಗದಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ಪರಿಸ್ಥಿತಿ ಇನ್ನೂ ತಿಳಿಯಾಗಿಲ್ಲದ ಹಿನ್ನೆಲೆಯಲ್ಲಿ ಭಾರತವು ತನ್ನ ಕಚ್ಛಾ ತೈಲ ಅಗತ್ಯಗಳನ್ನು ರಷ್ಯಾದಿಂದ ಪಡೆಯುತ್ತಿದೆ. ಮುಂದಿನ ತಿಂಗಳಿಗಾಗಿ ಭಾರತವು ರಷ್ಯಾದಿಂದ 60 ಮಿಲಿಯನ್ ಬ್ಯಾರಲ್ ಕಚ್ಛಾ ತೈಲವನ್ನು (Russian crude oil) ಖರೀದಿ ಮಾಡಿದೆ ಎಂದು ಬ್ಲೂಮ್​ಬರ್ಗ್ ಸುದ್ದಿ ಏಜೆನ್ಸಿಯು ವರದಿ ಮಾಡಿದೆ.

ಇರಾನ್ ಯುದ್ಧಕ್ಕೆ ಮುನ್ನ ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿ ಮಾಡುತ್ತಿದ್ದ ಭಾರತ ಈಗ ಹೆಚ್ಚಿನ ದರ ತೆರಬೇಕಾಗಿದೆ. ಬ್ರೆಂಟ್ ಕ್ರೂಡ್ ದರಗಳಿಗೆ ಹೋಲಿಸಿದರೆ ಒಂದು ಬ್ಯಾರಲ್​ಗೆ 5ರಿಂದ 15 ಡಾಲರ್​ನಷ್ಟು ಹೆಚ್ಚಿನ ಬೆಲೆಗೆ ತೈಲ ಪಡೆಯಲಾಗುತ್ತಿದೆ. ಜಾಗತಿಕವಾಗಿ ತೈಲ ಮತ್ತು ಅನಿಲಗಳಿಗೆ ಬಹಳ ಬೇಡಿಕೆ ಬಂದಿದೆ. ಇವುಗಳ ಪೂರೈಕೆಯೂ ಕೂಡ ಕಷ್ಟಕರ ಸ್ಥಿತಿಯಲ್ಲಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸಲ್ ಕೊರತೆ ಇಲ್ಲ, ಗಾಬರಿ ಬೇಡ: ಪೆಟ್ರೋಲಿಯಂ ಕಂಪನಿಗಳಿಂದ ಸ್ಪಷ್ಟನೆ

ಭಾರತವು ಏಪ್ರಿಲ್ ತಿಂಗಳ ಡೆಲಿವರಿಗಾಗಿ 60 ಮಿಲಿಯನ್ ಕಚ್ಛಾ ತೈಲ ಖರೀದಿಸಿದೆ. ಮಾರ್ಚ್ ತಿಂಗಳಿಗಾಗಿಯೂ ಇದೇ ಪ್ರಮಾಣದ ತೈಲ ಪಡೆಯಲಾಗಿತ್ತು. ಇರಾನ್ ಯುದ್ಧ ಶುರುವಾದ ಬಳಿಕ ತೈಲ ಪೂರೈಕೆಗೆ ವ್ಯತ್ಯಯ ಆಗುತ್ತಿದ್ದಂತೆಯೇ ಭಾರತವು ರಷ್ಯಾದಿಂದ ತೈಲ ಪಡೆಯಲು ಆರಂಭಿಸಿತು. ಚೀನಾ ಮತ್ತಿತರೆಡೆ ಹೋಗಲು ಅಣಿಯಾಗಿದ್ದ ರಷ್ಯನ್ ತೈಲ ಹಡಗುಗಳು ಭಾರತದ ಬಂದರುಗಳ ಕಡೆಗೆ ಬಂದಿದ್ದವು.

ಹಾರ್ಮುಜ್ ಜಲಸಂಧಿಯಲ್ಲಿ ತಡೆ ಇರುವುದರಿಂದ ರಷ್ಯಾದಿಂದ ತೈಲ ಪಡೆಯಲು ಭಾರತಕ್ಕೆ ಅನುಮತಿಸಿರುವುದಾಗಿ ಅಮೆರಿಕ ತಿಳಿಸಿತ್ತು. ಇದಾದ ಬಳಿಕ ಭಾರತ ರಷ್ಯಾದಿಂದ ತೈಲ ಖರೀದಿಯನ್ನು ಮತ್ತಷ್ಟು ಹೆಚ್ಚಿಸಿದೆ. ಭಾರತಕ್ಕೆ ಅಗತ್ಯವಿರುವ ಹೆಚ್ಚಿನ ತೈಲವನ್ನು ರಷ್ಯಾದಿಂದ ಪಡೆಯಲಾಗುತ್ತಿದೆ.

ಭಾರತದ ರಿಫೈನರಿ ಕಂಪನಿಗಳಾದ ಮಂಗಳೂರು ರಿಫೈನರಿ ಮತ್ತು ಪೆಟ್​ರೋಕೆಮಿಕಲ್ಸ್, ಹಿಂದೂಸ್ತಾನ್ ಮಿಟ್ಟಲ್ ಎನರ್ಜಿ ಮೊದಲಾದವು ಈಗ ರಷ್ಯನ್ ಕಚ್ಛಾ ತೈಲದ ಖರೀದಿ ಪುನಾರಂಭಿಸಿವೆ. ಅಮೆರಿಕದ ಒತ್ತಡದ ಕಾರಣಕ್ಕೆ ಈ ರಿಫೈನರಿಗಳು ರಷ್ಯಾದಿಂದ ತೈಲ ಖರೀದಿಯನ್ನು ಡಿಸೆಂಬರ್​ನಲ್ಲಿ ನಿಲ್ಲಿಸಿದ್ದವು. ಸೌದಿ ಅರೇಬಿಯಾ, ಇರಾಕ್​ನಿಂದ ತೈಲ ಪೂರೈಕೆ ಪಡೆಯುತ್ತಿದ್ದವು. ಈ ಗಲ್ಫ್ ದೇಶಗಳಿಂದ ಬುಕ್ ಮಾಡಲಾಗಿದ್ದ ತೈಲವು ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿರುವುದರಿಂದ ರಷ್ಯಾದಿಂದ ತೈಲ ಪಡೆಯುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: ಟ್ರಂಪ್ ವರಸೆ ಬದಲು; ಕಚ್ಛಾ ತೈಲ ಬೆಲೆ ದಿಢೀರ್ ಇಳಿಕೆ

ಭಾರತ ಇದೀಗ ರಷ್ಯಾದಿಂದ ಮಾತ್ರವಲ್ಲ, ಒಂದಷ್ಟು ಪ್ರಮಾಣದ ತೈಲವನ್ನು ವೆನಿಜುವೆಲಾದಿಂದಲೂ ಪಡೆಯುತ್ತಿದೆ. ಏಪ್ರಿಲ್​ನಲ್ಲಿ ವೆನಿಜುವೆಲಾದಿಂದ 8 ಮಿಲಿಯನ್ ಬ್ಯಾರಲ್ ಕಚ್ಛಾ ತೈಲ ಭಾರತಕ್ಕೆ ಬರಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಲವ್ ಮಾಕ್ಟೆಲ್ 3’: ಕತೆ ಕದ್ದ ಆರೋಪ, ಕೇಸು ಹಾಕ್ತೀನಿ ಎಂದ ಡಾರ್ಲಿಂಗ್ ಕೃಷ್ಣ

ಡಾರ್ಲಿಂಗ್ ಕೃಷ್ಣ (Darling Krishna), ನಟಿಸಿ, ನಿರ್ಮಿಸಿ, ನಿರ್ದೇಶನವನ್ನೂ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾ ಕಳೆದ ವಾರ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದು, ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ‘ಧುರಂಧರ್ 2’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳ ಅಬ್ಬರದ ನಡುವೆಯೂ ಸಹ ‘ಲವ್ ಮಾಕ್ಟೆಲ್ 3’ ಸಿನಿಮಾ ಜನರನ್ನು ಸೆಳೆಯುತ್ತಿದೆ. ಅಪ್ಪ-ಮಗಳ ಬಂಧದ ಬಗ್ಗೆ ಕತೆಯನ್ನು ‘ಲವ್ ಮಾಕ್ಟೆಲ್ 3’ ಸಿನಿಮಾ ಹೊಂದಿದ್ದು, ಸಿನಿಮಾದ ಕತೆಯನ್ನು ಡಾರ್ಲಿಂಗ್ ಕೃಷ್ಣ ಅವರೇ ಬರೆದಿದ್ದಾರೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ರಾಘವೆಂದ್ರ ನಾಯಕ್ ಅವರುಗಳು ಡಾರ್ಲಿಂಗ್ ಕೃಷ್ಣ ಅವರು ನಮ್ಮ ಕತೆ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಯಧುನಂದನ್ ತಾವು ಗುರು ಹಾಗೂ ರಾಘವೇಂದ್ರ ವಿರುದ್ಧ ಕೇಸು ಹಾಕುವುದಾಗಿ ಹೇಳಿದ್ದಾರೆ.

ತಮ್ಮ ಮೇಲೆ ಬಂದಿರುವ ಕತೆ ಕದ್ದ ಆರೋಪಕ್ಕೆ ಸ್ಪಷ್ಟನೆ ನೀಡಲೆಂದು ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅವರು ಸುದ್ದಿಗೋಷ್ಠಿ ಕರೆದಿದ್ದರು, ಮಾಧ್ಯಮಗಳ ಮುಂದೆ ಮಾತನಾಡಿದ ಡಾರ್ಲಿಂಗ್ ಕೃಷ್ಣ, ಕತೆ ಕದ್ದ ಆರೋಪ ಮಾಡುತ್ತಿರುವ ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯಕ್ ವಿರುದ್ಧ ಸಿಟ್ಟು ಹೊರಹಾಕಿದರು. ಅಲ್ಲದೆ ಇಬ್ಬರ ಮೇಲೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

‘ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ಸ್ವತಃ ರಾಘವೇಂದ್ರ ನಾಯಕ್ ಹೇಳಿದ್ದಾರೆ, ನನ್ನ ಕತೆಯ ದೃಶ್ಯಗಳನ್ನು ತೆಗೆದುಕೊಂಡಿಲ್ಲ, ಸಂಭಾಷಣೆಗಳನ್ನು ತೆಗೆದುಕೊಂಡಿಲ್ಲ ಎಂದು. ಆದರೆ ಕತೆ ಕದ್ದಿದ್ದಾರೆ ಎನ್ನುತ್ತಿದ್ದಾರೆ. ಅಸಲಿಗೆ ನಮ್ಮ ಸಿನಿಮಾನಲ್ಲಿ ಇರುವ ಕತೆ ಲಕ್ನೋನಲ್ಲಿ ನಿಜವಾಗಿ ನಡೆದಿರುವ ಕತೆ. ಅವರು ಹೇಳಿದ್ದು ಸಹ ಅದೇ ಕತೆ. ಗೋಗಲ್​​ನಲ್ಲಿ ಇರುವ ಕತೆಯನ್ನು ನನಗೆ ಹೇಳಿ, ಈಗ ಕತೆ ಕದ್ದಿದ್ದಾರೆ ಎನ್ನುತ್ತಿದ್ದಾರೆ’ ಎಂದು ಡಾರ್ಲಿಂಗ್ ಕೃಷ್ಣ ಹೇಳಿದ್ದಾರೆ.

‘ಇವರು ಮಾಡಿರುವ ಆರೋಪದಿಂದ ಪ್ರೇಕ್ಷಕರು ನಮ್ಮನ್ನು ಅನುಮಾನದಿಂದ ನೋಡುವಂತಾಗಿದೆ. ಸತತ ನಾಲ್ಕು ವರ್ಷ ಶ್ರಮ ಹಾಕಿ ನಾವು ಕತೆ ಬರೆದಿದ್ದೀವಿ. ಮೊದಲಿಗೆ ನಾವು ಕ್ಲೈಮ್ಯಾಕ್ಸ್ ಯೋಚಿಸಿ ಆ ನಂತರವೇ ಚಿತ್ರಕತೆಗೆ ಕೂರೋದು. ನಾವು ನಾಲ್ಕು ವರ್ಷದ ಹಿಂದೆಯೇ ಸಿನಿಮಾದ ಎರಡನೇ ಅರ್ಧ ಯೋಚಿಸಿದ್ದೆವು. ಆದರೆ ಈಗ ಇವರು ಆರೋಪ ಮಾಡಿದ್ದಕ್ಕೆ ಕೆಲವು ಪ್ರೇಕ್ಷಕರು ಕತೆ ಕದ್ದಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು ನಮಗೆ ಅಗೌರವ ತರುವ ವಿಷಯ, ನನಗೆ ವೈಯಕ್ತಿಕವಾಗಿ ಇದರಿಂದ ಬಹಳ ಬೇಸರ ಆಗಿದೆ’ ಎಂದಿದ್ದಾರೆ ಕೃಷ್ಣ.

ಇದನ್ನೂ ಓದಿ:‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

‘ಸಿನಿಮಾ ಚೆನ್ನಾಗಿ ಆಗುತ್ತಿದೆ, ನಾವು ಸ್ವಲ್ಪ ಲಾಭ ಮಾಡಿಕೊಳ್ಳೋಣ ಎಂದು ಬಂದಿದ್ದರು, ಈಗ ನಮಗೆ ಹೆಸರು ಕೊಡಿ ಸಾಕು ಅಂತಿದ್ದಾರೆ. ಆದರೆ ಇದಕ್ಕೆಲ್ಲ ನಾನು ಬಗ್ಗುವುದಿಲ್ಲ. ಗುರು ದೇಶಪಾಂಡೆ ಎಂಥಹಾ ವ್ಯಕ್ತಿ ಎಂಬುದು ನನಗೆ ಗೊತ್ತು. ಇಂಥಹವರಿಗೆ ಕಾನೂನು ಮೂಲಕವೇ ಉತ್ತರ ಕೊಡುತ್ತೀನಿ. ಗುರು ದೇಶಪಾಂಡೆ ನನ್ನ ಜೊತೆ ಎರಡು ಸಿನಿಮಾ ಮಾಡಿದ್ದಾರೆ, ಎರಡೂ ಸಹ ರೀಮೇಕ್ ಸಿನಿಮಾ, ಅಂಥಹವರ ಜೊತೆಗೆ ನಾನು ಕತೆ ಯಾಕೆ ಡಿಸ್ಕಸ್ ಮಾಡಲಿ’ ಎಂದಿದ್ದಾರೆ ಕೃಷ್ಣ.

‘ಸಿನಿಮಾ ರಿಲೀಸ್ ಆಗಿ ಚೆನ್ನಾಗಿ ಹೋಗುತ್ತಿತ್ತು, ಕೆಲ ದಿನ ಆದ ಮೇಲೆ ರಾತ್ರಿ 1 ಗಂಟೆಗೆ ನನಗೆ ಕಾಲ್ ಮಾಡಿ, ನನ್ನ ಕತೆ ಎತ್ತಿಬಿಟ್ಟಿದ್ದೀರ ಅಂದರು, ಅದಕ್ಕೆ ನಾನು ಯಾವ ಕತೆ ಎಂದೆ, ನನಗೆ ಇವರು ಲಕ್ನೋದ ಕತೆ ಹೇಳಿದ್ದು ಎರಡು ನಿಮಿಷದಲ್ಲಿ, ಆಗ ಒಂದು ಫೋಟೊ ಸಹ ತೋರಿಸಿದ್ದರು. ಅದಾದ ಮೇಲೆ ಒಂದು ಹಳ್ಳಿ ಕತೆ ಹೇಳಿದ್ದರು. ಇನ್ನೂ ಒಂದು ಕತೆಯನ್ನು ಡೀಟೇಲ್ ಆಗಿ ಹೇಳಿದ್ದರು. ಹಾಗಾಗಿ ನಾನು ಕತೆ ಮರೆತುಹೋಗಿದೆ ಎಂದು ಹೇಳಿದೆ. ಅವರು ಫೋನ್ ಕಟ್ ಮಾಡಿದ ಮೇಲೆ ನಾನು ಅಸ್ಪಷ್ಟ ಕೀವರ್ಡ್ ಹಾಕಿ ಗೂಗಲ್ ಮಾಡಿದಾಗ ನನಗೆ ಆ ಕತೆ ಸಿಕ್ಕಿತು. ಇವರು ಗೂಗಲ್​​ ನಲ್ಲಿ ಸಿಕ್ಕಿದ್ದನ್ನು ಕತೆ ಎಂದು ಹೇಳಿ, ಈಗ ಆ ಕತೆಯನ್ನು ಕದ್ದಿದ್ದೀಯ ಎನ್ನುತ್ತಿದ್ದಾರೆ’ ಎಂದಿದ್ದಾರೆ ಡಾರ್ಲಿಂಗ್ ಕೃಷ್ಣ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಹುಕಾಲ ಬಿಟ್ಟು ಬಜೆಟ್ ಮಂಡಿಸಿದ್ದು ನಿಜವೆಂದ ಸಿದ್ದರಾಮಯ್ಯ! ಕೊಟ್ಟ ಕಾರಣ ಏನು ಗೊತ್ತಾ?

ಬೆಂಗಳೂರು, ಮಾರ್ಚ್ 25: ರಾಹುಕಾಲವನ್ನು (Rahu Kaal) ತಪ್ಪಿಸುವುದಕ್ಕಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೆಳಗ್ಗೆ 10.15ಕ್ಕೆ ಬಜೆಟ್ (Karnataka Budget) ಮಂಡನೆ ಸಮಯ ನಿಗದಿಪಡಿಸಿದ್ದು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದರು. ಇದೀಗ ವಿಧಾನಸಭೆಯಲ್ಲಿ ಕೂಡ ಆ ವಿಚಾರ ಚರ್ಚೆಯಾಗಿದೆ. ರಾಹುಕಾಲ ತಪ್ಪಿಸುವುದಕ್ಕಾಗಿಯೇ ಆ ಸಮಯ ನಿಗದಿ ಮಾಡಿದ್ದು ನಿಜ ಎಂದು ಖುದ್ದು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ! ಅಲ್ಲದೆ, ಅದಕ್ಕೆ ಕಾರಣವನ್ನು ಕೂಡ ಕೊಟ್ಟಿದ್ದಾರೆ.

ಬಜೆಟ್ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಬುಧವಾರ ಉತ್ತರ ನೀಡಿದರು. ಇದೇ ವೇಳೆ, ಪ್ರತಿಪಕ್ಷ ನಾಯಕ ಆರ್ ಅಶೋಕ್, ರಾಹುಕಾಲ ನೋಡಿಕೊಂಡು ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದ ಬಗ್ಗೆ ಉಲ್ಲೇಖಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹೌದು, ‘ರಾಹುಕಾಲ ನೋಡಿಕೊಂಡು ಬಜೆಟ್ ಮಂಡಿಸಿದ್ದಾರೆ’ ಎಂಬುದು ನಿಜ ಎಂದರು.

ರಾಹುಕಾಲ ನೋಡಿಕೊಂಡು ಬಜೆಟ್ ಮಂಡಿಸಿದ್ದಕ್ಕೆ ಸಿದ್ಧರಾಮಯ್ಯ ಕೊಟ್ಟ ಕಾರಣವೇನು?

ರಾಹುಕಾಲ ನೋಡಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂಬುದು ನಿಜ. ಮನೆಯವರು, ಅಧಿಕಾರಿಗಳ ಮಾತು ಕೇಳಬೇಕು ಅಲ್ಲವೇ? ನಿಮ್ಮಂಥವರ ಮಾತು ಕೇಳಬೇಕು ಅಲ್ಲವೇ ಎಂದು ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಮಧ್ಯ ಪ್ರವೇಶ ಮಾಡಿದ ಅಶೋಕ್, ಅವತ್ತಿನ ಪರಿಸ್ಥಿತಿ ಬೇರೆ ಇತ್ತು. ಇಂದಿನ ಪರಿಸ್ಥಿತಿ ಬೇರೆ ಇದೆ. ಮುಂದೆಯೂ ನೀವು ಬಜೆಟ್ ಮಂಡನೆ ಮಾಡಬೇಕು ಅಲ್ಲವೇ? ಅದಕ್ಕಾಗಿ ಈ ಬಾರಿ ಕಾಲ ನೋಡಿದ್ದೀರಿ ಎಂದರು.

ಸಿದ್ದರಾಮಯ್ಯ ಹೇಳಿದ್ದೇನು?

ಅಶೋಕ್ ಮಾತಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ರಾಹುಕಾಲ, ಯಮಗಂಡಕಾಲ ಮತ್ತು ಗುಳಿಕಕಾಲ ಇದನ್ನೆಲ್ಲಾ ನಾನು ನಂಬಲ್ಲ. ಅಧಿಕಾರಿಗಳ ಹಾಗೂ ಮನೆಯವರ ಮಾತು ಕೇಳಿ ಸಮಯ ನೋಡಿದ್ದೇನೆ ಅಷ್ಟೇ. ನಾನು ಶಿವರಾತ್ರಿ ಹಾಗೂ ಯುಗಾದಿಯಲ್ಲಿ ಮಾಂಸ ತಿಂದಿದ್ದೇನೆ. ನೀವು ತಿಂದಿದ್ದೀರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: 10.15ಕ್ಕೇ ಸಿದ್ದರಾಮಯ್ಯ ಬಜೆಟ್ ಮಂಡನೆ ಏಕೆ? ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೊಟ್ಟರು ಅಚ್ಚರಿಯ ಕಾರಣ! ನಿಜವಿರಬಹುದೇ?

ಸಾಮಾನ್ಯವಾಗಿ ಬಜೆಟ್ ಮಂಡನೆ ಬೆಳಗ್ಗೆ 10 ಗಂಟೆ ಅಥವಾ 11 ಗಂಟೆಗೆ ಮಾಡುತ್ತಾರೆ. ಆದರೆ ಈ ಬಾರಿ 10.15ಕ್ಕೆ ಸಿದ್ದರಾಮಯ್ಯ ಬಜೆಟ್ ಮಂಡನೆ ಸಮಯ ನಿಗದಿ ಮಾಡಿಕೊಂಡಿದ್ದಾರೆ. ಏಕೆಂದು ಕುತೂಹಲದಿಂದ ವಿಚಾರಿಸಿದಾಗ ಗೊತ್ತಾಗಿದ್ದು, ಬೆಳಗ್ಗೆ 10. 30 ರಿಂದ ರಾಹು ಕಾಲ ಇದೆ ಎಂಬುದು. ಬೆಳಗ್ಗೆ 7.30 ಗಂಟೆ ಯಿಂದ 9 ಗಂಟೆಯವರೆಗೂ ಗುಳಿಕಾಲ. #ಮೂಢನಂಬಿಕೆ ಎಂಬ ಹ್ಯಾಷ್​ಟ್ಯಾಗ್​ನೊಂದಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಬಜೆಟ್ ದಿನವೇ ಫೇಸ್​​ಬುಕ್​​ನಲ್ಲಿ ಪೋಸ್ಟ್ ಮಾಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link