All posts by nagaraj11081993

IPL 2026 Final: ಅಹಮದಾಬಾದ್‌ ಪಿಚ್ ಯಾರಿಗೆ ಸಹಕಾರಿ? ಫೈನಲ್ ದಿನದಂದು ಹವಾಮಾನ ಹೇಗಿರಲಿದೆ?

ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ಇದೇ ಭಾನುವಾರ ಸಂಜೆ 7:30 ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಎರಡೂ ತಂಡಗಳು ತಮ್ಮ ಎರಡನೇ ಐಪಿಎಲ್ ಟ್ರೋಫಿಯನ್ನು ಎತ್ತುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ. ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕ್ವಾಲಿಫೈಯರ್ -1 ರಲ್ಲಿ ಗುಜರಾತ್ ಮಣಿಸಿ ಫೈನಲ್​ಗೇರಿತ್ತು. ಇತ್ತ ಗುಜರಾತ್ ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ನಾಲ್ಕನೇ ಬಾರಿ. ಕಳೆದ ಮೂರು ಪಂದ್ಯಗಳಲ್ಲಿ ಆರ್‌ಸಿಬಿ ಎರಡು ಬಾರಿ ಗೆದ್ದಿದ್ದರೆ, ಗುಜರಾತ್ ಒಂದು ಪಂದ್ಯವನ್ನು ಗೆದ್ದಿದೆ. ಇನ್ನು ಫೈನಲ್ ಪಂದ್ಯವನ್ನು ಆಯೋಜಿಸುತ್ತಿರುವ ಅಹಮದಾಬಾದ್​ನ ಮೋದಿ ಮೈದಾನದ ಪಿಚ್ ಯಾರಿಗೆ ಸಹಕಾರಿಯಾಗಲಿದೆ? ಪಂದ್ಯದ ದಿನದಂದು ಹವಾಮಾನ ಹೇಗಿರಲಿದೆ ಎಂಬುದನ್ನು ನೋಡುವುದಾದರೆ..

ಅಹಮದಾಬಾದ್​ನಲ್ಲಿ ಸತತ ಎರಡನೇ ಫೈನಲ್

  • ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣವು ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್ ಪಂದ್ಯವನ್ನು ಆಯೋಜಿಸಲಿದೆ.
  • ಇದಕ್ಕೂ ಮೊದಲು 2025 ರಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.
  • ಈಗ ಮತ್ತೊಮ್ಮೆ ಆರ್‌ಸಿಬಿ ಈ ಮೈದಾನದಲ್ಲಿ ಪ್ರಶಸ್ತಿ ಉಳಿಸಿಕೊಳ್ಳಲು ಕಣಕ್ಕಿಳಿಯಲಿದೆ.
  • ಮತ್ತೊಂದೆಡೆ, ಗುಜರಾತ್ ಟೈಟಾನ್ಸ್ ತಂಡವು ತಮ್ಮ ತವರು ನೆಲದಲ್ಲಿ ಪ್ರಶಸ್ತಿ ಗೆಲ್ಲುವ ಅವಕಾಶವನ್ನು ಹೊಂದಿದೆ.

ಅಹಮದಾಬಾದ್ ಪಿಚ್ ಯಾರಿಗೆ ಸಹಕಾರಿ?

ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣವು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ಈ ಆವೃತ್ತಿಯಲ್ಲೇ ಈ ಮೈದಾನದಲ್ಲಿ ದೊಡ್ಡ ಸ್ಕೋರಿಂಗ್ ಪಂದ್ಯಗಳು ನಡೆದಿವೆ. ಆದಾಗ್ಯೂ ಆರಂಭದಲ್ಲಿ ವೇಗದ ಬೌಲರ್‌ಗಳು ಸ್ವಲ್ಪ ಬೌನ್ಸ್ ಪಡೆಯಬಹುದು. ಹಾಗೆಯೇ ದೊಡ್ಡ ಬೌಂಡರಿಗಳಿಂದಾಗಿ ಸ್ಪಿನ್ನರ್‌ಗಳು ಮಧ್ಯಮ ಓವರ್‌ಗಳಲ್ಲಿ ಸ್ವಲ್ಪ ಸಹಾಯವನ್ನು ಪಡೆಯಬಹುದು. ಒಟ್ಟಾರೆಯಾಗಿ, ಇದು ಹೆಚ್ಚಿನ ಸ್ಕೋರಿಂಗ್ ಪಂದ್ಯವಾಗಬಹುದು. ಆದರೆ ಸಂಜೆಯಾಗುತ್ತಿದ್ದಂತೆ ಇಬ್ಬನಿ ಪ್ರಮುಖ ಪಾತ್ರ ವಹಿಸುವುದರಿಂದ ಇದು ಚೇಸಿಂಗ್ ತಂಡಕ್ಕೆ ಅನುಕೂಲಕರವಾಗಬಹುದು. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಬಹುದು.

IPL 2026 Final: ಆರ್​ಸಿಬಿ- ಗುಜರಾತ್ ನಡುವೆ ಫೈನಲ್ ಫೈಟ್; ಮುಖಾಮುಖಿ ದಾಖಲೆ ಹೇಗಿದೆ?

ಅಹಮದಾಬಾದ್‌ನ ಹವಾಮಾನ ವರದಿ

ಭಾನುವಾರ ಅಹಮದಾಬಾದ್‌ನಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಹವಾಮಾನ ಮುನ್ಸೂಚನೆಯ ಪ್ರಕಾರ, ಅಹಮದಾಬಾದ್‌ನಲ್ಲಿ ಸ್ಪಷ್ಟ ಹವಾಮಾನವಿರುತ್ತದೆ, ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆಯಿದೆ. ಇದರರ್ಥ ಪಂದ್ಯದ ದಿನದಂದು ಮಳೆ ಬರುವ ಸಾಧ್ಯತೆಯೇ ಇಲ್ಲ. ಆದ್ದರಿಂದ, ಅಭಿಮಾನಿಗಳು ಸಂಪೂರ್ಣ ಪಂದ್ಯವನ್ನು ಆನಂದಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ಬಿಚ್ಚಿಟ್ಟ ಯತೀಂದ್ರ

ಬೆಂಗಳೂರು, (ಮೇ 30): ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕರ್ನಾಟಕದ ಮುಂದಿನ ಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ರಾಹುಲ್ ಗಾಂಧಿ ನೀಡಿದ ಒಂದೇ ಒಂದು ಸೂಚನೆ ಯಾವುದೇ ತಂಟೆ ತಗಾದೆ ತಗೆಯದೇ ಸಿದ್ದರಾಂಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾದರಿಯಾಗಿದ್ದಾರೆ. ಇನ್ನು ಹೈಕಮಾಂಡ್ ಸಹ ಸಿದ್ದರಾಮಯ್ಯನವರ ನಡೆಗೆ ಶ್ಲಾಘಿಸಿದ್ದು, ಖುದ್ದು ರಾಹುಲ್ ಗಾಂಧಿಯವರೇ ಸಿದ್ದರಾಮಯ್ಯನವರನ್ನ ದೆಹಲಿಗೆ ಕರೆಯಿಸಿಕೊಂಡು ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಇದೇ ವೇಳೆ ನಿಮ್ಮ ತ್ಯಾಗಕ್ಕೆ ಪುತ್ರ ಯತೀಂದ್ರ ಸಿದ್ದರಾಮಯ್ಯನವರಿಗೆ ಒಂದು ಒಳ್ಳೆಯ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಯತೀಂದ್ರ ಅವರು ಡಿಸಿಎಂ ಆಗಲಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಆದ್ರೆ, ಡಿಸಿಎಂ ಆಗುತ್ತಾರೋ ಬಿಡುತ್ತಾರೋ ಗೊತ್ತಿಲ್ಲ. ಡಿಕೆಶಿ ಸಚಿವ ಸಂಪುಟದಲ್ಲಿ ಯತೀಂದ್ರ ಅವರಿಗೆ ಒಂದು ಸ್ಥಾನ ಖಚಿತ. ಈ ಬಗ್ಗೆ ಹೈಕಮಾಂಡ್ ಕೊಟ್ಟ ಭರವಸೆಯನ್ನು ಸ್ವತಃ ಯತೀಂದ್ರ ಅವರೇ ಬಹಿರಂಗಪಡಿಸಿದ್ದಾರೆ.

Source link

ಗೃಹಲಕ್ಷ್ಮಿ- ವಿಧವಾ ವೇತನದ ಹಣ ಸಾಲದ ಖಾತೆಗೆ ಜಮೆ: ಬಡ ಮಹಿಳೆಯ ಹೊಟ್ಟೆ ಮೇಲೆ ಹೊಡೆದ ಬ್ಯಾಂಕ್

ಬ್ಯಾಂಕ್​​ ಎಡವಟ್ಟಿಗೆ ತಾಯಿ-ಮಗ ಪರದಾಟImage Credit source: tv9 kannada

ಹಾವೇರಿ, ಮೇ 30: ಬಡವರಿಗೆ ಮತ್ತು ಮಹಿಳೆಯರಿಗೆ ಆಸರೆಯಾಗಲಿ ಎಂದು ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಹಾಗೂ ವಿಧವಾ ವೇತನದ ಹಣಕ್ಕೆ ಬ್ಯಾಂಕೊಂದು ಕೈ ಹಾಕಿದೆ. ಹಾವೇರಿಯಲ್ಲಿ (haveri) ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿ ದರ್ಪಕ್ಕೆ ತಾಯಿ ಮತ್ತು ಮಗ ಬೀದಿಗೆ ಬೀಳುವಂತಾಗಿದೆ. ನಿಯಮಗಳನ್ನು ಗಾಳಿಗೆ ತೂರಿ, ಮಹಿಳೆಯ ಖಾತೆಯಲ್ಲಿದ್ದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಂಡಿರುವ ಕೆವಿಜಿ ಬ್ಯಾಂಕ್ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮುಖ್ಯಾಂಶಗಳು

  • ಗೃಹಲಕ್ಷ್ಮಿ, ವಿಧವಾ ವೇತನ ಹಣ ದುರ್ಬಳಕೆ
  • ಸಾಲದ ಹೆಸರಿನಲ್ಲಿ ಸರ್ಕಾರಿ ಯೋಜನೆಗಳ ಹಣ ಕಡಿತ
  • ಬ್ಯಾಂಕ್ ಎಡವಟ್ಟಿಗೆ ಸಾರ್ವಜನಿಕರು ಆಕ್ರೋಶ

ನಡೆದಿದ್ದೇನು? 

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದಿದೆ. ಈ ಅವಧಿಯಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂ ಹಣ ಕೋಟ್ಯಂತರ ಮಹಿಳೆಯರಿಗೆ ಆಸರೆಯಾಗಿದೆ. ಆದರೆ, ಹಾವೇರಿಯ ನಾಗೇಂದ್ರಮಟ್ಟಿಯಲ್ಲಿರುವ ಕೆವಿಜಿ ಬ್ಯಾಂಕ್ ಮಾತ್ರ ಸರ್ಕಾರದ ನಿಯಮಗಳನ್ನೇ ಗಾಳಿಗೆ ತೂರಿದೆ. ಬಡ ಮಹಿಳೆಯೊಬ್ಬರ ಗೃಹಲಕ್ಷ್ಮಿ ಯೋಜನೆ ಮತ್ತು ವಿಧವಾ ವೇತನದ ಬರೋಬ್ಬರಿ 20 ಸಾವಿರಕ್ಕೂ ಅಧಿಕ ಹಣವನ್ನು ಬ್ಯಾಂಕ್ ಸಿಬ್ಬಂದಿ ಸಾಲದ ಖಾತೆಗೆ ಕಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬ್ಯಾಂಕ್​ ಕ್ಯಾಶಿಯರ್​ನಿಂದ ಅಸಭ್ಯ ವರ್ತನೆ: ಗ್ರಾಹಕರ ಎದುರೇ ಕ್ಲಾಸ್​​ ತೆಗೆದುಕೊಂಡ ಮಹಿಳಾ ಸಿಬ್ಬಂದಿ

ನಾಗೇಂದ್ರಮಟ್ಟಿ ನಿವಾಸಿ ಜುಲೇಕಾಬಿ ಸೋಮನಕಟ್ಟಿ ಎಂಬುವವರ ಖಾತೆಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಮತ್ತು ವಿಧವಾ ವೇತನ ಸೇರಿ 2,800 ರೂ ಜಮೆಯಾಗುತ್ತಿತ್ತು. ತಮಗೆ ವಯಸ್ಸಾಗಿದ್ದರಿಂದ, ಆರೋಗ್ಯ ಕೈಕೊಟ್ಟಾಗ ಆಸ್ಪತ್ರೆ ಖರ್ಚಿಗೆ ನೆರವಾಗಲಿ ಎಂದು ಜುಲೇಕಾಬಿ ಆ ಹಣವನ್ನು ಖಾತೆಯಲ್ಲೇ ಬಿಟ್ಟಿದ್ದಾರೆ. ಆದರೆ, ಈ ಹಿಂದೆ ಜುಲೇಕಾಬಿ ಅವರು ಐದು ಜನ ಮಹಿಳೆಯರ ಜೊತೆ ಸೇರಿ ಬ್ಯಾಂಕ್‌ನಲ್ಲಿ ಗ್ರೂಪ್ ಲೋನ್ ಪಡೆದಿದ್ದರು. ಅದರಲ್ಲಿ ತಮ್ಮ ಪಾಲಿನ ಸಾಲದ ಹಣವನ್ನು ಇವರು ಸಂಪೂರ್ಣವಾಗಿ ಮರುಪಾವತಿಸಿದ್ದರು. ಆದರೆ, ಗುಂಪಿನ ಉಳಿದ ಮಹಿಳೆಯರು ಸಾಲದ ಕಂತು ಕಟ್ಟದ ಕಾರಣ, ಬ್ಯಾಂಕ್ ಸಿಬ್ಬಂದಿ ಜುಲೇಕಾಬಿ ಅವರ ವೈಯಕ್ತಿಕ ಖಾತೆಯಲ್ಲಿದ್ದ ಗೃಹಲಕ್ಷ್ಮಿ ಮತ್ತು ವಿಧವಾ ವೇತನದ ಎರಡು ತಿಂಗಳ ಹಣಕ್ಕೆ ಕತ್ತರಿ ಹಾಕಿದ್ದಾರೆ.

ಮಗ ಶೂರಿಟಿಯಾಗಿದ್ದಕ್ಕೆ ತಾಯಿ ಖಾತೆಯಿಂದಲೇ ಹಣ ಕಟ್​

ಬ್ಯಾಂಕ್ ಸಿಬ್ಬಂದಿಯ ಎಡವಟ್ಟು ಇಷ್ಟಕ್ಕೇ ನಿಂತಿಲ್ಲ. ಜುಲೇಕಾಬಿ ಅವರ ಮಗ ಇಮಾಮ್ ಹುಸೇನ್ ತನ್ನ ಗೆಳೆಯನೊಬ್ಬ ಬ್ಯಾಂಕ್‌ನಲ್ಲಿ ಪಡೆದಿದ್ದ 50 ಸಾವಿರ ರೂ ಸಾಲಕ್ಕೆ ಶೂರಿಟಿ ಆಗಿದ್ದ. ಆ ಗೆಳೆಯ ಕೂಡ ಸರಿಯಾಗಿ ಸಾಲದ ಕಂತು ಪಾವತಿಸಿರಲಿಲ್ಲ. ಇದನ್ನೇ ನೆಪವಾಗಿಸಿಕೊಂಡ ಬ್ಯಾಂಕ್ ಸಿಬ್ಬಂದಿ, ಮಗ ಶೂರಿಟಿಯಾಗಿದ್ದಕ್ಕೆ ತಾಯಿಯ ಖಾತೆಯಿಂದಲೇ ಹಂತ ಹಂತವಾಗಿ 5ರಿಂದ 6 ಸಾವಿರ ರೂ ಹಣ (ಎರಡು ತಿಂಗಳ) ಕಟ್ ಮಾಡಿದ್ದಾರೆ.

ಬ್ಯಾಂಕ್ ಮ್ಯಾನೇಜರ್ ದರ್ಪ

ಸರ್ಕಾರ ಬಡವರ ಹೊಟ್ಟೆ ತುಂಬಿಸಲು ನೀಡಿದ ಹಣವನ್ನು ಈ ರೀತಿ ಕಟ್ ಮಾಡಿಕೊಂಡಿದ್ದರ ಬಗ್ಗೆ ಪ್ರಶ್ನಿಸಲು ಹೋದರೆ, ಬ್ಯಾಂಕ್ ಮ್ಯಾನೇಜರ್ ದರ್ಪ ಪ್ರದರ್ಶಿಸಿದ್ದಾರೆ. ಬ್ಯಾಂಕ್‌ನಲ್ಲಿ ಸಾಲ ಬಾಕಿ ಇಟ್ಟುಕೊಂಡಿದ್ದಕ್ಕೆ ಕಟ್ ಮಾಡಿದ್ದೇವೆ. ಸರ್ಕಾರದ ಆದೇಶ ನಮಗೂ ಗೊತ್ತು, ಹಾಗಿದ್ದರೆ ಸಾಲ ಏಕೆ ಮಾಡಬೇಕಿತ್ತು? ಎಂದು ತಾಯಿ-ಮಗನಿಗೆ ದರ್ಪದಲ್ಲಿ ಉತ್ತರಿಸಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಒಟ್ಟಿನಲ್ಲಿ ಸರ್ಕಾರ ನೀಡುವ ಗೃಹಲಕ್ಷ್ಮಿ ಮತ್ತು ವಿಧವಾ ವೇತನ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿದ್ದು, ಸ್ಥಳೀಯರ ಆಕ್ರೋಶ ಕಾರಣವಾಗಿದೆ. ಬ್ಯಾಂಕ್ ಸಿಬ್ಬಂದಿ ಎಡವಟ್ಟಿನಿಂದ ತಾಯಿ-ಮಗ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ 9 ಹಾವೇರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ತಮಿಳುನಾಡು ಸಿಎಂ ವಿಜಯ್​ ಸಾಧನೆ ಕೊಂಡಾಡಿದ ರಾಮ್ ಚರಣ್: ಹೇಳಿದ್ದೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಭರ್ಜರಿ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ರಾಮ್ ಚರಣ್. ದೇಶದ ಪ್ರಮುಖ ನಗರಗಳಲ್ಲಿ ಸುತ್ತಾಡಿ ಪ್ರಚಾರ ಮಾಡುತ್ತಿರುವ ರಾಮ್ ಚರಣ್ ಇಂದು (ಮೇ 30) ಚೆನ್ನೈಗೆ ಭೇಟಿ ನೀಡಿದ್ದರು. ಚೆನ್ನೈನಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಮಾತನಾಡಿದ ನಟ ರಾಮ್ ಚರಣ್, ತಮ್ಮ ‘ಪೆದ್ದಿ’ ಸಿನಿಮಾದ ಬಗ್ಗೆ ಮಾತನಾಡುವ ಜೊತೆಗೆ ಸಿನಿಮಾರಂಗದಿಂದ ರಾಜಕೀಯಕ್ಕೆ ಪ್ರವೇಶಿಸಿ ಇತ್ತೀಚೆಗಷ್ಟೆ ತಮಿಳುನಾಡಿನ ಸಿಎಂ ಸಹ ಆಗಿರುವ ವಿಜಯ್ ಅವರ ಸಾಧನೆಯನ್ನು ಕೊಂಡಾಡಿದರು.

‘ವಿಜಯ್ ಅವರು ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗಲೇ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸಿನಿಮಾರಂಗದಿಂದ ದೂರ ಸರಿದಿದ್ದಾರೆ. ಚಲನಚಿತ್ರ ರಂಗದ ವ್ಯಕ್ತಿಯಾಗಿ ತಮಗೆ ಅವರ ಬಗ್ಗೆ ಹೆಮ್ಮೆ ಇದೆ. ಸಾರ್ವಜನಿಕ ಸೇವೆಗೆ ಮಾಡಲೆಂದು ನೀವು (ವಿಜಯ್) ನಿಮ್ಮ ಯಶಸ್ಸಿನ ಉತ್ತುಂಗದಲ್ಲಿದ್ದಾಗ ನಿಮ್ಮ ತಾರಾ ಪಟ್ಟ (ಸ್ಟಾರ್‌ಡಮ್) ಮತ್ತು ವೃತ್ತಿಜೀವನವನ್ನು ತ್ಯಜಿಸಿದ್ದೀರಿ. ಚಿತ್ರರಂಗದ ಒಬ್ಬ ವ್ಯಕ್ತಿಯಾಗಿ ನನಗೆ ಇದು ತುಂಬಾ ತುಂಬಾ ಹೆಮ್ಮೆಯ ವಿಷಯವಾಗಿದೆ, ಮತ್ತು ನಾನು ತಮಿಳುನಾಡಿನ ಜನತೆಗೆ ಹಾಗೂ ವಿಜಯ್ ಸರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ’ ಎಂದಿದ್ದಾರೆ.

ಇದಕ್ಕೂ ಮುನ್ನ, ಚರಣ್ ಅವರು ಟ್ವಿಟರ್ ನಲ್ಲೂ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ತಮ್ಮ ಪೋಸ್ಟ್‌ನಲ್ಲಿ ಅವರು, ‘ತಮಿಳುನಾಡು ಚುನಾವಣೆಯಲ್ಲಿ ಅತ್ಯದ್ಭುತ ಜಯ ಸಾಧಿಸಿದ ವಿಜಯ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ದೂರದೃಷ್ಟಿ ಮತ್ತು ಜನರೊಂದಿಗಿನ ಒಡನಾಟವು ನಿಜವಾಗಿಯೂ ಮನ ಮುಟ್ಟಿದೆ. ತಮಿಳುನಾಡನ್ನು ನಿರಂತರ ಪ್ರಗತಿಯತ್ತ ಮುನ್ನಡೆಸುವಲ್ಲಿ ನಿಮಗೆ ಉತ್ತಮ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ’ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ:ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು?

ರಾಮ್ ಚರಣ್ ಅವರ ತಂದೆ ಮೆಗಾಸ್ಟಾರ್ ಚಿರಂಜೀವಿ ಸಹ ಕೆಲ ದಿನಗಳ ಹಿಂದೆ ಖುದ್ದು ಸಿಎಂ ವಿಜಯ್ ಅವರಿಗೆ ಕರೆ ಮಾಡಿ ಮಾತನಾಡಿದ್ದರು. ವಿಜಯ್ ಅವರ ಅಭೂತಪೂರ್ವ ಚುನಾವಣಾ ಗೆಲುವಿಗೆ ಅವರು ಅಭಿನಂದಿಸಿದ್ದರು. ಅಲ್ಲದೆ, ಅದಕ್ಕೂ ಮುಂಚೆ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಲೀಕ್ ಆದಾಗಲೂ ಸಹ ಅದನ್ನು ತೀವ್ರವಾಗಿ ಖಂಡಿಸಿ, ವಿಜಯ್ ಪರ ಧ್ವನಿ ಎತ್ತಿದ್ದರು.

ಇನ್ನು ರಾಮ್ ಚರಣ್ ಅವರ ಚಿಕ್ಕಪ್ಪ, ಪ್ರಸ್ತುತ ಆಂಧ್ರ ಪ್ರದೇಶ ಡಿಸಿಎಂ ಸಹ ಇತ್ತೀಚೆಗೆ ವಿಜಯ್ ಅವರ ಗೆಲುವಿನ ಬಗ್ಗೆ ಮಾತನಾಡಿದ್ದರು, ‘ವಿಜಯ್ ಗೆಲುವು ತಮಗೆ ಅಸೂಯೆ ತಂದಿದೆ’ ಎಂದಿದ್ದರು. ವಿಜಯ್ ಬಲು ಸುಲಭವಾಗಿ ಸಿಎಂ ಆಗಿಬಿಟ್ಟರು. ಪೋಸ್ಟರ್​​ಗಳನ್ನು ಹಾಕಿ ಜನರನ್ನು ಸೆಳೆದರು. ಆದರೆ ನನ್ನನ್ನು ನಮ್ಮ ಜನ ಕಳೆದ 15 ವರ್ಷಗಳಿಂದಲೂ ಅಲೆಸಿದರು’ ಎಂದು ಹೇಳಿ ನಕ್ಕಿದ್ದರು ಪವನ್ ಕಲ್ಯಾಣ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 8:33 pm, Sat, 30 May 26

Source link

IPL 2026 Final: ಸತತ 2ನೇ ಬಾರಿಗೆ ಚಾಂಪಿಯನ್; ಮತ್ತೊಂದು ದಾಖಲೆ ಸೃಷ್ಟಿಸುವ ಸನಿಹದಲ್ಲಿ ಆರ್​ಸಿಬಿ

ಐಪಿಎಲ್ 2026 (IPL 2026) ರ 74ನೇ ಮತ್ತು ಕೊನೆಯ ಪಂದ್ಯ ಮೇ 31 ರಂದು ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ತಂಡಗಳ ಪ್ರಶಸ್ತಿಗಾಗಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಈ ಹಿಂದೆ ಟೂರ್ನಿಯಲ್ಲಿ ತಲಾ ಒಂದೊಂದು ಪ್ರಶಸ್ತಿಯನ್ನು ಗೆದ್ದಿವೆ. ಆದ್ದರಿಂದ, ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಅವಕಾಶ ಉಭಯ ತಂಡಗಳಿಗಿದೆ. ಇತ್ತ ರಜತ್ ಪಾಟಿದಾರ್ ನೇತೃತ್ವದಲ್ಲಿ, ಆರ್‌ಸಿಬಿ ತಂಡವು ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿದೆ. ಕಳೆದ ಆವೃತ್ತಿಯಲ್ಲಿ ಟ್ರೋಫಿ ಎತ್ತಿಹಿಡಿದಿದ್ದ ಆರ್‌ಸಿಬಿಗೆ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಅವಕಾಶವಿದೆ. ಇದು ಸಾಧ್ಯವಾದರೆ ಆರ್‌ಸಿಬಿ ಐಪಿಎಲ್​ನಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸಲಿದೆ.

ಮುಂಬೈ , ಸಿಎಸ್​ಕೆ ಗುಂಪಿಗೆ ಸೇರಲಿದೆ ಆರ್​ಸಿಬಿ

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮಾತ್ರ ಸತತ ಎರಡು ಬಾರಿ ಪ್ರಶಸ್ತಿ ಗೆದ್ದಿವೆ. ಇದೀಗ ಆರ್‌ಸಿಬಿಗೆ ಈ ಅವಕಾಶ ಸಿಕ್ಕಿದೆ. ಇದು ಸಾಧ್ಯವಾದರೆ, ಐಪಿಎಲ್‌ನಲ್ಲಿ ಸತತ ಎರಡು ಟ್ರೋಫಿಗಳನ್ನು ಗೆದ್ದ ಮೂರನೇ ತಂಡ ಎಂಬ ದಾಖಲೆ ಆರ್​ಸಿಬಿ ಪಾಲಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ 2010 ಮತ್ತು 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಪ್ರಶಸ್ತಿ ಗೆದ್ದಿತ್ತು. ಹಾಗೆಯೇ ಮುಂಬೈ ಇಂಡಿಯನ್ಸ್ 2019 ಮತ್ತು 2020 ರಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ಇದೀಗ 2025 ರಲ್ಲಿ ಟ್ರೋಫಿ ಗೆದ್ದಿರುವ ಆರ್‌ಸಿಬಿ, ಸತತ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶ ಹೊಂದಿದೆ.

IPL 2026 Final: ಆರ್​ಸಿಬಿ- ಗುಜರಾತ್ ನಡುವೆ ಫೈನಲ್ ಫೈಟ್; ಮುಖಾಮುಖಿ ದಾಖಲೆ ಹೇಗಿದೆ?

3ನೇ ಬಾರಿಗೆ ಫೈನಲ್​ಗೇರಿದ ಗುಜರಾತ್

ಗುಜರಾತ್ ಟೈಟಾನ್ಸ್ ತಂಡ ಕೂಡ ಎರಡನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಗುಜರಾತ್ ಟೈಟಾನ್ಸ್ 2022 ರಲ್ಲಿ ಪ್ರಶಸ್ತಿ ಗೆದ್ದಿತ್ತು. ಅದಾದ ನಂತರ, 2023 ರಲ್ಲಿ ಪ್ರಶಸ್ತಿ ಗೆಲ್ಲುವ ಅವಕಾಶವಿತ್ತಾದರೂ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿತ್ತು. ಇದರಿಂದಾಗಿ ಗುಜರಾತ್, ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳಂತೆ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಅವಕಾಶದಿಂದ ವಂಚಿತವಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇಹದಲ್ಲಿ ಹೆಚ್ಚುತ್ತಿದೆ ಒಬೆಸಿಟಿ ಮತ್ತು ಡಯಾಬಿಟಿಸ್ ಸಮಸ್ಯೆ: ಹೊಸ ಸಮೀಕ್ಷೆಯಿಂದ ಹೆಚ್ಚಾಗಿದೆ ಆತಂಕ

ದೇಶದಲ್ಲಿ ಸ್ಥೂಲಕಾಯತೆ (Obesity) ಮತ್ತು ಮಧುಮೇಹ (Diabetes) ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಆರೋಗ್ಯ ಸಮೀಕ್ಷೆಯ ವರದಿ ತಜ್ಞರಲ್ಲಿ ಆತಂಕ ಮೂಡಿಸಿದೆ. 2019ರ ನಂತರ ಈ ಎರಡೂ ಆರೋಗ್ಯ ಸಮಸ್ಯೆಗಳ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-6 (NFHS-6) ವರದಿ ಪ್ರಕಾರ, 15 ರಿಂದ 49 ವರ್ಷದೊಳಗಿನ ಪುರುಷರು ಮತ್ತು ಮಹಿಳೆಯರಲ್ಲಿ ಅಧಿಕ ತೂಕ ಹಾಗೂ ಸ್ಥೂಲಕಾಯದ ಪ್ರಮಾಣ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿದೆ. ಪುರುಷರಲ್ಲಿ ಶೇಕಡಾ 4.4ರಷ್ಟು ಮತ್ತು ಮಹಿಳೆಯರಲ್ಲಿ ಶೇಕಡಾ 6.7ರಷ್ಟು ಏರಿಕೆ ದಾಖಲಾಗಿದೆ.

2019-21ರಲ್ಲಿ ಶೇಕಡಾ 24ರಷ್ಟು ಮಹಿಳೆಯರು ಅಧಿಕ ತೂಕ ಅಥವಾ ಸ್ಥೂಲಕಾಯದಿಂದ ಬಳಲುತ್ತಿದ್ದರು. ಆದರೆ 2023-24ರಲ್ಲಿ ಈ ಪ್ರಮಾಣ ಶೇಕಡಾ 30.7ಕ್ಕೆ ಏರಿಕೆಯಾಗಿದೆ. ಅಂದರೆ, ಪ್ರತಿ ಮೂವರು ಮಹಿಳೆಯರಲ್ಲಿ ಒಬ್ಬರು ಈಗ ಸ್ಥೂಲಕಾಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಸಮೀಕ್ಷೆಯನ್ನುದೇಶದ 715 ಜಿಲ್ಲೆಗಳಲ್ಲಿ ನಡೆಸಲಾಗಿದ್ದು, ಸುಮಾರು 6.79 ಲಕ್ಷ ಕುಟುಂಬಗಳನ್ನು ಒಳಗೊಂಡಿತ್ತು. ನಗರ ಪ್ರದೇಶಗಳಲ್ಲಿ ಸಮಸ್ಯೆ ಹೆಚ್ಚು ಗಂಭೀರವಾಗಿದ್ದು, ಶೇಕಡಾ 42.8ರಷ್ಟು ಮಹಿಳೆಯರು ಅಧಿಕ ತೂಕ ಅಥವಾ ಸ್ಥೂಲಕಾಯದಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಮಾಣ ಶೇಕಡಾ 25.5ರಷ್ಟಿದೆ. ಜಂಕ್ ಫುಡ್ ಸೇವನೆ, ಕುಳಿತು ಕೆಲಸ ಮಾಡುವ ಅಭ್ಯಾಸ ಹಾಗೂ ವ್ಯಾಯಾಮದ ಕೊರತೆ ಪ್ರಮುಖ ಕಾರಣಗಳಾಗಿವೆ.

ಮಧುಮೇಹದ ಅಪಾಯವೂ ಹೆಚ್ಚಳ

ಅಷ್ಟೇಅಲ್ಲ, ಇತ್ತೀಚಿಗೆ ಮಧುಮೇಹದ ಅಪಾಯವೂ ಹೆಚ್ಚುತ್ತಿದೆ.15 ವರ್ಷಕ್ಕಿಂತ ಮೇಲ್ಪಟ್ಟ ಪುರುಷರಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿರುವವರ ಸಂಖ್ಯೆ 2019-21ರ ಶೇಕಡಾ 15.6ರಿಂದ 2023-24ರಲ್ಲಿ ಶೇಕಡಾ 20.9ಕ್ಕೆ ಏರಿಕೆಯಾಗಿದೆ. ಮಹಿಳೆಯರಲ್ಲೂ ಮಧುಮೇಹದ ಪ್ರಕರಣಗಳು ಹೆಚ್ಚುತ್ತಿದ್ದು, ವಿಶೇಷವಾಗಿ ನಗರ ಪ್ರದೇಶದ ಮಹಿಳೆಯರಲ್ಲಿ ಈ ಪ್ರವೃತ್ತಿ ಹೆಚ್ಚು ಕಂಡುಬರುತ್ತಿದೆ.

ಇದನ್ನೂ ಓದಿ: ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು? ಇದು ಬರದಂತೆ ತಡೆಯಲು ಏನು ಮಾಡಬೇಕು?

ಈ ರೀತಿಯ ಸಮಸ್ಯೆ ತಡೆಗಟ್ಟಲು ವೈದ್ಯರು ನೀಡಿರುವ ಸಲಹೆ:

  • ಪ್ರತಿದಿನ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡಿ.
  • ಜಂಕ್ ಫುಡ್ ಮತ್ತು ಸಕ್ಕರೆಯುಕ್ತ ಆಹಾರವನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿ.
  • ಹಣ್ಣು, ತರಕಾರಿ ಹಾಗೂ ನಾರಿನಾಂಶಯುಕ್ತ ಆಹಾರ ಹೆಚ್ಚಿಸಿ.
  • ಸರಿಯಾಗಿ ನಿದ್ರೆ ಮಾಡಿ.
  • ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ.

ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದೇ ಸ್ಥೂಲಕಾಯ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುವ ಅತ್ಯುತ್ತಮ ಮಾರ್ಗವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವೈಭವ್ ಸೂರ್ಯವಂಶಿ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ?

2026 ರ ಐಪಿಎಲ್ (IPL 2026) ಮುಗಿಯುವ ಹಂತಕ್ಕೆ ಬಂದಿದೆ. ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಫೈನಲ್ ಪಂದ್ಯದೊಂದಿಗೆ ಈ ಸೀಸನ್​ಗೆ ತೆರೆ ಬೀಳಲಿದೆ. ಆ ಬಳಿಕ ಟೀಂ ಇಂಡಿಯಾ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಡೆ ಮುಖ ಮಾಡಲಿದೆ. ಆದಾಗ್ಯೂ ಐಪಿಎಲ್‌ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆ ಸುರಿಸುವುದರ ಜೊತೆಗೆ ರನ್​ಗಳ ಶಿಖರ ಕಟ್ಟಿದ ವೈಭವ್ ಸೂರ್ಯವಂಶಿಗೆ (Vaibhav Sooryavanshi) ಅಭಿಮಾನಿಗಳ ಬಳಗ ಗಣನೀಯವಾಗಿ ಹೆಚ್ಚಾಗಿದೆ. ಅವರ ಆಟವನ್ನು ನೋಡುವ ಸಲುವಾಗಿಯೇ ಅಭಿಮಾನಿಗಳು ಕ್ರೀಡಾಂಗಣಕ್ಕೆ ಬರುತ್ತಿದ್ದರು. ಇದೀಗ ರಾಜಸ್ಥಾನ್ ತಂಡ ಐಪಿಎಲ್​ನಿಂದ ಹೊರಬಿದ್ದಿರುವ ಕಾರಣದಿಂದಾಗಿ ವೈಭವ್ ಸೂರ್ಯವಂಶಿ ಮತ್ತೆ ಯಾವಾಗ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಹಲವರ ಪ್ರಶ್ನೆಯಾಗಿದೆ. ಅದಕ್ಕೆ ಉತ್ತರ ಇಲ್ಲಿದೆ.

ವೈಭವ್ ಮತ್ತೆ ಕಣಕ್ಕಿಳಿಯುವುದು ಯಾವಾಗ?

ವೈಭವ್ ಆಟವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿರುವ ಅಭಿಮಾನಿಗಳು ಇನ್ನು 10 ದಿನ ಕಾಯಬೇಕಾಗಿದೆ. ವಾಸ್ತವವಾಗಿ ಭಾರತ, ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ಎ ತಂಡಗಳ ನಡುವೆ ತ್ರಿಕೋನ ಸರಣಿ ನಡೆಯಲಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಈ ಸರಣಿಗೆ ಭಾರತ ಎ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ. ಈ ತಂಡದಲ್ಲಿ ವೈಭವ್ ಸೂರ್ಯವಂಶಿ ಕೂಡ ಸ್ಥಾನ ಪಡೆದಿದ್ದಾರೆ. ಹೀಗಾಗಿ ಆ ಸರಣಿಯಲ್ಲಿ ವೈಭವ್ ಆಡುವುದನ್ನು ನಾವು ಕಾಣಬಹುದು.

ತ್ರಿಕೋನ ಸರಣಿ

ಬಿಸಿಸಿಐ, ತಿಲಕ್ ವರ್ಮಾ ನೇತೃತ್ವದಲ್ಲಿ ಭಾರತ ಎ ತಂಡವನ್ನು ಶ್ರೀಲಂಕಾ ಪ್ರವಾಸಕ್ಕೆ ಕಳುಹಿಸುತ್ತಿದೆ. ಈ ಪ್ರವಾಸದಲ್ಲಿ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ ಎ ಜೊತೆ ತ್ರಿಕೋನ ಏಕದಿನ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಭಾರತದ ಮೊದಲ ಪಂದ್ಯ ಜೂನ್ 9 ರಂದು ನಡೆಯಲಿದೆ. ಅದರ ನಂತರ, ಜೂನ್ 11 ರಂದು ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಆ ಬಳಿಕ ಜೂನ್ 15 ರಂದು ಶ್ರೀಲಂಕಾ ಎ ವಿರುದ್ಧ ಮತ್ತು ಜೂನ್ 17 ರಂದು ಅಫ್ಘಾನಿಸ್ತಾನ ಎ ವಿರುದ್ಧ ಪಂದ್ಯವನ್ನಾಡಲಿದೆ. ಅದರ ನಂತರ, ಜೂನ್ 21 ರಂದು ಫೈನಲ್ ಪಂದ್ಯ ನಡೆಯಲಿದೆ.

ವೈಭವ್ ಸೂರ್ಯವಂಶಿ ಮತ್ತು ಪ್ರಿಯಾಂಶ್ ಆರ್ಯ ಶ್ರೀಲಂಕಾ ಪ್ರವಾಸದಲ್ಲಿ ಭಾರತದ ಪರ ಇನ್ನಿಂಗ್ಸ್ ಆರಂಭಿಸುವುದು ಖಚಿತವಾಗಿದೆ. ಈ ಇಬ್ಬರೂ ಈ ಹಿಂದೆ ಏಷ್ಯಾಕಪ್ ರೈಸಿಂಗ್ ಸ್ಟಾರ್ ಟೂರ್ನಮೆಂಟ್‌ನಲ್ಲಿ ಭಾರತ ಎ ಪರ ಆರಂಭಿಕರಾಗಿ ಆಡಿದ್ದರು. ವೈಭವ್ ಸೂರ್ಯವಂಶಿ ತಮ್ಮ ಆಕ್ರಮಣಕಾರಿ ಆಟದ ಮೂಲಕವೂ ಗಮನ ಸೆಳೆದಿದ್ದಾರೆ. ಈ ಕಾರಣದಿಂದಾಗಿ, ಈ ಸ್ಫೋಟಕ ಜೋಡಿಯ ಆಟವನ್ನು ನೋಡುವ ಕುತೂಹಲ ಹೆಚ್ಚಾಗಿದೆ.

IPL 2026: ‘ನಿನ್ನ ವಯಸ್ಸಲ್ಲಿ ನಮಗೆ..’; ವೈಭವ್ ಆಟವನ್ನು ಕೊಂಡಾಡಿದ ಅಮಿತಾಬ್ ಬಚ್ಚನ್‌

ಐಪಿಎಲ್​ನಲ್ಲಿ ವೈಭವ್ ಪ್ರದರ್ಶನ

ವೈಭವ್ ಸೂರ್ಯವಂಶಿ 2026 ರ ಐಪಿಎಲ್ ಪಂದ್ಯಾವಳಿಯಲ್ಲಿ 16 ಪಂದ್ಯಗಳನ್ನು ಆಡಿದ್ದು 48.50 ರ ಸರಾಸರಿಯಲ್ಲಿ 776 ರನ್ ಗಳಿಸಿದ್ದಾರೆ. ಈ ಮೂಲಕ ವೈಭವ್ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಅನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಇದರ ಫಲವಾಗಿ ಆರೆಂಜ್ ಕ್ಯಾಪ್ ಕೂಡ ವೈಭವ್ ಬಳಿ ಇದೆ. ಇದೀಗ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಫೈನಲ್ ಪಂದ್ಯದಲ್ಲಿ ರನ್ ಗಳಿಸಲು ವಿಫಲವಾದರೆ, ವೈಭವ್ ಸೂರ್ಯವಂಶಿ ಆರೆಂಜ್ ಕ್ಯಾಪ್ ವಿಜೇತರಾಗುತ್ತಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆ ಶಿವಕುಮಾರ್ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಬೆಂಗಳೂರು, (ಮೇ 30):  ವಿಧಾನಸೌಧದಲ್ಲಿ ಇಂದು (ಮೇ 30) ನಡೆದ ಸಿಎಲ್‌ಪಿ ಸಭೆಯಲ್ಲಿ (CLP Meeing) ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು  ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ  ಆಯ್ಕೆ ಮಾಡಲಾಗಿದ್ದು, ಇದಾದ ಬಳಿಕ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ರಚನೆಗೆ ಗವರ್ನರ್‌ ಆಹ್ವಾನಿಸಿದ್ದಾರೆ. ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯಪಾಲರಿಂದ ಅಧಿಕೃತ ಪತ್ರ ಕಳುಹಿಸಲಾಗಿದೆ. ಲೋಕಭವನದಲ್ಲಿ ಜೂನ್‌ 3ರಂದು ಸಂಜೆ 4.05 ಗಂಟೆಗೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ, ತಾವು ತಮ್ಮ ತಂಡದೊಂದಿಗೆ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಬೇಕು ಎಂದು ಪತ್ರದಲ್ಲಿ ರಾಜ್ಯಪಾಲರು ಕೋರಿದ್ದಾರೆ.

ಈ ಮೊದಲು ಸಂಜೆ 5ಕ್ಕೆ ಅಷ್ಟಕ್ಕೆ ಇಷ್ಟಕ್ಕೆ ಅಂತೆ ಕಂತೆ ಸುದ್ದಿ ಕೇಳಿಬರುತ್ತಿದ್ದವು. ಆದರೆ, ಇದೀಗ ರಾಜ್ಯಪಾಲರ ಅಧಿಕೃತ ಪತ್ರದ ಪ್ರಕಾರ ಜೂನ್ 3ರ ಸಂಜೆ 4.5ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Source link

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಾಟದ ಎರಡು ಕೇಸ್​​ ಕೈಬಿಟ್ಟ ಕೋರ್ಟ್

ಶಾಸಕ ಜನಾರ್ದನ ರೆಡ್ಡಿImage Credit source: tv9 kannada

ಬೆಂಗಳೂರು, ಮೇ 30: ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ (Illegal Mining Case) ಸಂಬಂಧಿಸಿದಂತೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ (Gali Janardhan Reddy) ದೊಡ್ಡ ರಿಲೀಫ್ ಸಿಕ್ಕಿದೆ. ಲೋಕಾಯುಕ್ತ ಎಸ್‌ಐಟಿ ದಾಖಲಿಸಿದ್ದ ಎರಡು ಪ್ರಮುಖ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಹಲವರನ್ನು ಕೈಬಿಟ್ಟು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.

ಮುಖ್ಯಾಂಶಗಳು

  • ಶಾಸಕ ಜನಾರ್ದನ ರೆಡ್ಡಿ ವಿರುದ್ಧದ ಅಕ್ರಮ‌ ಅದಿರು ಸಾಗಾಟ ಪ್ರಕರಣ
  • ಪ್ರಕರಣದಿಂದ ಕೈಬಿಟ್ಟು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ
  • ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಲೋಕಾಯುಕ್ತ ವಿಶೇಷ ತನಿಖಾ ದಳ ದಾಖಲಿಸಿದ್ದ ಎರಡು ಪ್ರಮುಖ ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್ ಸಿಕ್ಕಿದೆ. ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜನಾರ್ದನ ರೆಡ್ಡಿ ಸೇರಿದಂತೆ ಇತರ ಆರೋಪಿಗಳನ್ನು ಪ್ರಕರಣದಿಂದ ಕೈಬಿಟ್ಟು ಮಹತ್ವದ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಅಂಗಲಾಚಿದರೂ ಕೇಳದ ಕೋರ್ಟ್: ಜನಾರ್ದನ ರೆಡ್ಡಿಗೆ ಮತ್ತೆ ಜೈಲು ಫಿಕ್ಸ್, ಶಾಸಕ ಸ್ಥಾನಕ್ಕೂ ಕುತ್ತು!

ಜನಾರ್ದನ ರೆಡ್ಡಿ ಅವರೊಂದಿಗೆ ಮೆಹಫೂಜ್ ಅಲಿ ಖಾನ್, ಉದ್ಯಮಿಗಳಾದ ಹೊತ್ತೂರ್ ಅಬ್ದುಲ್ ವಹಾಬ್, ಹೊತ್ತೂರ್ ನೂರ್ ಅಹಮದ್, ಹೊತ್ತೂರ್ ಮೊಹಮ್ಮದ್ ಇಕ್ಬಾಲ್ ಹಾಗೂ ಟ್ರೈಡೆಂಟ್ ಮೈನಿಂಗ್ ಕಂಪನಿ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನೂ ಸಹ ಕೋರ್ಟ್ ವಜಾಗೊಳಿಸಿದೆ.

ಈ ಹಿಂದೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಲ್ಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಾಟಕ್ಕೆ ಪಿತೂರಿ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಆರ್‌ಪಿಸಿ ಸೆಕ್ಷನ್ 227 ಅಡಿಯಲ್ಲಿ ಪ್ರಕರಣದಿಂದ ಕೈಬಿಡುವಂತೆ ಆರೋಪಿಗಳ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ವಿಶೇಷ ನ್ಯಾಯಾಲಯವು ಇದೀಗ ಇವರೆಲ್ಲರಿಗೂ ಕ್ಲೀನ್ ಚೀಟ್ ನೀಡಿದೆ.

ಪ್ರಕರಣದ ಹಿನ್ನೆಲೆ

ಆಂಧ್ರಪ್ರದೇಶದಲ್ಲಿ ವೈ.ಎಸ್. ರಾಜಶೇಖರ ರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಅಕ್ರಮ ಗಣಿಗಾರಿಕೆ ಹಗರಣ ಬೆಳಕಿಗೆ ಬಂದಿತ್ತು. ಆಂಧ್ರ ಮತ್ತು ಕರ್ನಾಟಕದ ಗಡಿಭಾಗಕ್ಕೆ ಹೊಂದಿಕೊಂಡಿರುವ ಓಬಳಾಪುರಂ ಬೆಟ್ಟ ಪ್ರದೇಶದಲ್ಲಿ ವ್ಯಾಪಕವಾಗಿ ಅದಿರು ಲೂಟಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಗಣಿಗಾರಿಕೆ ಮಂಜೂರಾತಿ ಪ್ರಕ್ರಿಯೆಯಲ್ಲಿ ಉಭಯ ರಾಜ್ಯಗಳ ಅರಣ್ಯ ಮತ್ತು ಗಣಿ ಇಲಾಖೆಗಳ ಉನ್ನತ ಅಧಿಕಾರಿಗಳು ಶಾಮೀಲಾಗಿ ಕೋಟ್ಯಂತರ ರೂ ಅಕ್ರಮ ಎಸಗಿದ್ದಾರೆ ಎಂದು ತನಿಖೆಯಿಂದ ಬಹಿರಂಗವಾಗಿತ್ತು.

ಇದನ್ನೂ ಓದಿ: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ: ಸಿಬಿಐ ಕೋರ್ಟ್ ತೀರ್ಪು

ಈ ಹಗರಣದಲ್ಲಿ ಒಟ್ಟು 29 ಲಕ್ಷ ಟನ್ ಅದಿರನ್ನು ಕಾನೂನುಬಾಹಿರವಾಗಿ ಲೂಟಿ ಮಾಡಲಾಗಿದ್ದು, ಬರೋಬ್ಬರಿ 884 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಗರಣ ನಡೆದಿರುವುದು ಸಾಬೀತಾಗಿತ್ತು. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಇದೇ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿದ್ದರು. ಬಳಿಕ ಜಾಮೀನು ಪಡೆದು ಹೊರಬಂದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

2027ಕ್ಕೆ ಅಬ್ಬರಿಸಲು ಸಜ್ಜಾಗುತ್ತಿದೆ ‘ಬಾಹುಬಲಿ’, ಇದು ರೀ ರಿಲೀಸ್ ಅಲ್ಲ

ಬಾಹುಬಲಿ’ (Bahubali) ಮತ್ತು ‘ಬಾಹುಬಲಿ 2’ ಸಿನಿಮಾಗಳು ವಿಶ್ವ ಸಿನಿಮಾ ರಂಗದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಹು ಎತ್ತರಕ್ಕೆ ಹಾರಿಸಿದ ಸಿನಿಮಾಗಳು. ಭಾರತೀಯ ಸಿನಿಮಾ ರಂಗದ ಇತಿಹಾಸ ಬರೆದರೆ ‘ಬಾಹುಬಲಿ’ಗೆ ಮುಂಚೆ ಮತ್ತು ನಂತರ ಎಂದು ಬರೆಯಬೇಕಾಗುತ್ತದೆ, ಅಷ್ಟು ದೊಡ್ಡ ಪರಿಣಾಮವನ್ನು ಭಾರತೀಯ ಸಿನಿಮಾಗಳ ಮೇಲೆ ಮೂಡಿಸಿದ ಸಿನಿಮಾ ‘ಬಾಹುಬಲಿ’ ಮತ್ತು ‘ಬಾಹುಬಲಿ 2’ನದ್ದು. ಇದೀಗ ಮತ್ತೊಮ್ಮೆ ‘ಬಾಹುಬಲಿ’ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾನೆ, ಹಾಗೆಂದು ಇದು ರೀ-ರಿಲೀಸ್ ಅಲ್ಲ ಬದಲಿಗೆ ಅನಿಮೇಟೆಡ್ ರೂಪದಲ್ಲಿ ಬರಲಿದ್ದಾನೆ ‘ಬಾಹುಬಲಿ’.

‘ಬಾಹುಬಲಿ’ ಸಿನಿಮಾಗಳ ಎಲ್ಲ ಪಾತ್ರಗಳು ಬಹಳ ಜನಪ್ರಿಯಗೊಂಡಿದ್ದವು. ಇದೇ ಕಾರಣಕ್ಕೆ ‘ಬಾಹುಬಲಿ’ ಪಾತ್ರಗಳನ್ನು ಇರಿಸಿಕೊಂಡು ಆ ಕತೆಯನ್ನು ಮುಂದುವರೆಸಿಕೊಂಡು ಹೋಗಲು ನಿಶ್ಚಯಿಸಿ ಅನಿಮೇಟೆಡ್ ಮಾದರಿಯಲ್ಲಿ ಸಿನಿಮಾವನ್ನು ಹೊರತರಲು ನಿರ್ಣಯಿಸಲಾಯ್ತು. ಈ ಹಿಂದೆ ಒಂದು ಆವೃತ್ತಿ ಸಿದ್ಧವಾಗಿತ್ತಾದರೂ ಅದು ಗುಣಮಟ್ಟದಿಂದ ಕೂಡಿರಲಿಲ್ಲವೆಂದು ರಾಜಮೌಳಿ, ನಿರ್ಮಾಣ ಸಂಸ್ಥೆ ಮತ್ತು ನೆಟ್​​ಫ್ಲಿಕ್ಸ್ ತಿರಸ್ಕರಿಸಿತು. ಆದರೆ ಇದೀಗ ಮತ್ತೊಂದು ಆವೃತ್ತಿ ತಯಾರಾಗುತ್ತಿದ್ದು, ಅನಿಮೇಟೆಡ್ ಸಿನಿಮಾ ಅಂತಿಮಗೊಳ್ಳುವ ಮೊದಲೇ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:‘ಬಾಹುಬಲಿ 2’ ದಾಖಲೆ ಉಡೀಸ್: ಹೊಸ ಇತಿಹಾಸ ಬರೆಯಲು ಸಜ್ಜಾದ ‘ಧುರಂಧರ್ 2’

‘ಬಾಹುಬಲಿ: ಎಟರ್ನಲ್ ವಾರ್’ ಹೆಸರಿನಲ್ಲಿ ಅನಿಮೇಟೆಡ್ ಸಿನಿಮಾ ರೆಡಿಯಾಗುತ್ತಿದೆ. ಕೆಲ ತಿಂಗಳ ಹಿಂದೆ ಈ ಸಿನಿಮಾದ ಒಂದು ಆಕ್ಷನ್ ದೃಶ್ಯವನ್ನು ಯೂಟ್ಯೂಬ್​​ನಲ್ಲಿ ಹಂಚಿಕೊಳ್ಳಲಾಗಿತ್ತು. ಬಾಹುಬಲಿಯ ಪರವಾಗಿ ಇಂದ್ರನ ಜೊತೆಗೆ ಯಮರಾಜ ಯುದ್ಧ ಮಾಡುವ ದೃಶ್ಯ ಅದಾಗಿತ್ತು. ಇತ್ತೀಚೆಗಷ್ಟೆ ಇದೇ ಸಿನಿಮಾದ ಇನ್ನೂ ಕೆಲ ದೃಶ್ಯಗಳನ್ನು ದೆಹಲಿಯಲ್ಲಿ ನಡೆದ ‘ಅನಿಮೆ ಇಂಡಿಯಾ’ ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ್ದು, ಅಲ್ಲಿ ಈ ಸಿನಿಮಾ ತೀವ್ರ ಗಮನ ಸೆಳೆದಿದೆ.

‘ಬಾಹುಬಲಿ: ಎಟರ್ನಲ್ ವಾರ್’ ಸಿನಿಮಾವು ಬಾಹುಬಲಿ ಸತ್ತ ನಂತರ ಸ್ವರ್ಗಕ್ಕೆ ಹೋದ ಬಳಿಕದ ಕತೆಯನ್ನು ಒಳಗೊಂಡಿದೆಯಂತೆ. 14 ಲೋಕಗಳ ಆಧಿಪತ್ಯಕ್ಕಾಗಿ ನಡೆಯುವ ಹೋರಾಟ ಮತ್ತು ಅದರಲ್ಲಿ ‘ಬಾಹುಬಲಿ’ ವಹಿಸುವ ಪಾತ್ರದ ಕುರಿತಾದ ಕತೆಯನ್ನು ಈ ‘ಎಟರ್ನಲ್ ವಾರ್’ ಸಿನಿಮಾ ಒಳಗೊಂಡಿರಲಿದೆ. ಈ ಸಿನಿಮಾಕ್ಕೆ ಈ ವರೆಗೆ 120 ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದು, ಈ ಅನಿಮೇಟೆಡ್ ಸಿನಿಮಾ 3ಡಿ ಮತ್ತು ಇನ್ನಿತೆರ ಆಧುನಿಕ ತಂತ್ರಜ್ಞಾನಗಳಲ್ಲಿ ತೆರೆಗೆ ಬರಲಿದೆ. ಸಿನಿಮಾದ ಕಾರ್ಯ ಚಾಲ್ತಿಯಲ್ಲಿದ್ದು, ಸಿನಿಮಾ 2027ಕ್ಕೆ ತೆರೆಗೆ ಬರಲಿದೆಯಂತೆ. ಈ ಸಿನಿಮಾನಲ್ಲಿ ಬಾಹುಬಲಿ ಪಾತ್ರಕ್ಕೆ ಖುದ್ದು ಪ್ರಭಾಸ್ ಧ್ವನಿ ನೀಡಿದ್ದಾರೆ. ನಟಿ ರಮ್ಯಾಕೃಷ್ಣ ಸಹ ಧ್ವನಿ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link