ಗ್ಯಾಸ್ ಟ್ರಬಲ್ ಆಯ್ತು, ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರು, ಮಾರ್ಚ್ 25: ಭಾರತ್ ಪೆಟ್ರೋಲಿಯಂ ಲಿಮಿಟೆಡ್‌ನಿಂದ ಇಂಧನ ಪೂರೈಕೆ ಸ್ಥಗಿತಗೊಂಡಿರುವುದರಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗುವ ಆತಂಕ ಎದುರಾಗಿದೆ. ಅಖಿಲ ಕರ್ನಾಟಕ ಫೆಡರೇಶನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ ಈ ಕುರಿತು ಎಚ್ಚರಿಕೆ ನೀಡಿದೆ. ಕಂಪನಿಯು ಮುಂಗಡ ಹಣ ಪಡೆದಿದ್ದರೂ ಲೋಡ್ ನೀಡುತ್ತಿಲ್ಲ ಎಂದು ಫೆಡರೇಶನ್ ತಿಳಿಸಿದೆ. ಈ ಸಮಸ್ಯೆ ಪ್ರಸ್ತುತ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಾದ ಆನೇಕಲ್, ಕೋಲಾರ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ಭಾಗಗಳಲ್ಲಿ ಕಂಡುಬಂದಿದೆ. ಇದು ಮುಂದಿನ ದಿನಗಳಲ್ಲಿ ರಾಜಧಾನಿ…