All posts by nagaraj11081993

Video: ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಗೆ ಹೆಗಲು ನೀಡಿದ ಪುಟಾಣಿ

Video: ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಗೆ ಹೆಗಲು ನೀಡಿದ ಪುಟಾಣಿ

ಪುಟಾಣಿಗಳ (little kids) ತೊದಲು ನುಡಿ, ತುಂಟಾಟ, ಅಪ್ಪ ಅಮ್ಮನ ಮುದ್ದಿಸುವ ರೀತಿ ನೋಡುವುದೇ ಚಂದ. ಕೆಲವೊಮ್ಮೆ ಈ ಪುಟಾಣಿ ಮಕ್ಕಳು ತಾವು ಮಾಡುವ ಕೆಲಸದಿಂದಲೇ ದೊಡ್ಡವರಂತೆ ಕಾಣುವುದಿದೆ.. ಇದೀಗ ಈ ಪುಟಾಣಿಯೂ ದೊಡ್ಡವರಂತೆ ನಡೆದುಕೊಂಡಿದೆ. ಗಾಯಗೊಂಡು ನಡೆಯಲು ಕಷ್ಟ ಪಡುತ್ತಿರುವ ತಾಯಿಯನ್ನು (mother) ಪುಟಾಣಿಯೊಂದು ತನ್ನ ಹೆಗಲ ಮೇಲೆ ಹೊತ್ತುಕೊಳ್ಳಲು ಪ್ರಯತ್ನಿಸಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ನೆಟ್ಟಿಗರು ತಾಯಿ ಮಗನ ಬಾಂಧವ್ಯಕ್ಕೆ ಫಿದಾ ಆಗಿದ್ದಾರೆ.

Leenesh Madhav ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ತಾಯಿಗೆ ಪುಟಾಣಿ ಬೆಂಬಲ ನೀಡುತ್ತಿರುವುದನ್ನು ಕಾಣಬಹುದು. ಕಾಲಿಗೆ ಗಾಯಗೊಂಡಿದ್ದು, ಬ್ಯಾಂಡೇಜ್ ಹಾಕಿಕೊಂಡು ನಡೆಯಲು ಕಷ್ಟ ಪಡುತ್ತಿರುವ ಮಹಿಳೆಯನ್ನು ನೀವು ಕಾಣಬಹುದು. ಅಲ್ಲೇ ಇದ್ದ ಪುಟಾಣಿಯೂ ತನ್ನ ತಾಯಿಯನ್ನು ತನ್ನ ಭುಜದ ಮೇಲೆ ಹೊತ್ತುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಈ ದೃಶ್ಯದಲ್ಲಿ ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಎಲ್ಲಾ ಮಾಡೋಕೆ ಆಗುತ್ತೆ, ಟೆನ್ಶನ್ ಮಾಡಿಕೊಳ್ಬೇಡಿ; ಆಡೋ ವಯಸ್ಸಿನಲ್ಲಿ ಲೈಫ್ ಟಿಪ್ಸ್ ನೀಡಿದ ಪುಟ್ಟ ಬಾಲಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತಾಯಿ ಮಗನ ಬಾಂಧವ್ಯ ಎಂದರೆ, ಮತ್ತೊಬ್ಬರು, ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಪುಟಾಣಿಯ ಸಹಾಯ ಮಾಡುವ ಗುಣ ನೋಡಿ ಖುಷಿಯಾಯ್ತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

 

Source link

MNREGA: ಕರ್ನಾಟಕ ನರೇಗಾದಲ್ಲಿ ಭಾರಿ ಅಕ್ರಮ, ಸಿಎಜಿ ವರದಿಯಲ್ಲಿ ಬಯಲಾಯ್ತು ಸ್ಫೋಟಕ ವಿಚಾರ

ಬೆಂಗಳೂರು, ಮಾರ್ಚ್​ 25: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಮಂಡನೆಯಾದ ಮಹಾಲೇಖಾಪರಿಶೋಧಕರ (CAG) ವರದಿಯು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅನುಷ್ಠಾನದಲ್ಲಿ ಭಾರಿ ಅಕ್ರಮಗಳು ನಡೆದಿರುವುದನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ, ಈಗಾಗಲೇ ಪೂರ್ಣಗೊಂಡ ಮನೆ ಕಾಮಗಾರಿಗಳಿಗೆ ಮತ್ತೆ ಹಣ ಪಾವತಿ ಮಾಡಿರುವುದು, ಅರ್ಹತೆಯಿಲ್ಲದವರಿಗೆ ಹಣ ನೀಡಿರುವುದು ಹಾಗೂ ಯಾವುದೇ ಕೆಲಸ ಮಾಡದೇ ಕಾರ್ಮಿಕರಿಗೆ ವೇತನ ನೀಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಕೆಲಸವೇ ಇಲ್ಲದೆ ವೇತನ!

ಕೆಲವು ಸ್ಥಳಗಳಲ್ಲಿ ನಿರ್ಮಾಣ ಕಾರ್ಯವೇ ನಡೆಯದಿದ್ದರೂ ಕಾರ್ಮಿಕರಿಗೆ ವೇತನ ಪಾವತಿಸಲಾಗಿದೆ. ಅಲ್ಲದೆ, ನಿಯಮಿತ ಮಿತಿಗಿಂತ ಹೆಚ್ಚು ಹಣ ನೀಡಿರುವುದೂ ವರದಿಯಲ್ಲಿ ಉಲ್ಲೇಖವಾಗಿದೆ. ಹೆಚ್ಚಿನ ಕೆಲಸದ ಸ್ಥಳಗಳಲ್ಲಿ ಕುಡಿಯುವ ನೀರು, ವೈದ್ಯಕೀಯ ನೆರವು ಮತ್ತು ಮಕ್ಕಳ ಆರೈಕೆ ಸೌಲಭ್ಯಗಳ ಕೊರತೆಯಿಂದ ಮಹಿಳೆಯರು ಹಾಗೂ ವೃದ್ಧರು ಕೆಲಸದಲ್ಲಿ ಪಾಲ್ಗೊಳ್ಳಲು ಹಿಂಜರಿದಿರುವುದೂ ವರದಿಯಿಂದ ತಿಳಿದುಬಂದಿದೆ.

ಅರ್ಧದಲ್ಲೇ ಸ್ಥಗಿತಗೊಂಡ ಯೋಜನೆಗಳು

ನರೇಗಾ ಅಡಿ ಅಂಗೀಕೃತ ಯೋಜನೆಗಳಲ್ಲಿ ಬಹಳಷ್ಟು ಪ್ರಾರಂಭವಾಗದೇ ಉಳಿದಿದ್ದರೆ, ಕೆಲವು ಯೋಜನೆಗಳು ಒಂದು ವರ್ಷಕ್ಕೂ ಹೆಚ್ಚು ಕಾಲ ಪೂರ್ಣಗೊಳ್ಳದೇ ಉಳಿದಿವೆ ಎಂದು ವರದಿ ತಿಳಿಸಿದೆ.

ಹಾಜರಾತಿಯಲ್ಲಿ ಭಾರಿ ಗೋಲ್​ಮಾಲ್

50 ಪ್ರಕರಣಗಳಲ್ಲಿ ಕಾರ್ಮಿಕರ ಹಾಜರಾತಿ ಗುರುತು ಹಾಕದೇ, ಸಹಿ ಅಥವಾ ಬೆರಳಚ್ಚು ಪಡೆಯದೇ ಇದ್ದರೂ, ಸುಮಾರು 5.51 ಲಕ್ಷ ರೂ. ವೇತನ ಪಾವತಿಸಿರುವುದು ಪತ್ತೆಯಾಗಿದೆ.

ಕೆಲಸ ಮಾಡಿದವರಿಗೆ ವೇತನವಿಲ್ಲ!

ಇನ್ನೊಂದೆಡೆ, 13 ಗ್ರಾಮ ಪಂಚಾಯಿತಿಗಳಲ್ಲಿ 17 ಕೆಲಸಗಳಲ್ಲಿ ತೊಡಗಿದ್ದ 497 ಕಾರ್ಮಿಕರಿಗೆ, ಎಲ್ಲಾ ದಾಖಲೆಗಳನ್ನು ಸಲ್ಲಿಸಿದರೂ 10.98 ಲಕ್ಷ ರೂ. ವೇತನ ಪಾವತಿಸದೇ ಇರುವುದಾಗಿ ಸಿಎಜಿ ವರದಿ ತಿಳಿಸಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ತಾಂತ್ರಿಕ ಸಮಿತಿಗಳು ರಚನೆಗೊಳ್ಳದ ಕಾರಣ ಅಸಂಬದ್ಧ ಅಂದಾಜುಗಳು, ಕಾಮಗಾರಿಗಳ ಅಸಮರ್ಪಕ ಅನುಷ್ಠಾನ ಮತ್ತು ಅನಿಯಮಿತ ವೆಚ್ಚಗಳು ಆಗಿರುವುದು ಗಮನಕ್ಕೆ ಬಂದಿದೆ.

ಕೆಲವು ಕಾಮಗಾರಿಗಳಲ್ಲಿ ಅಂದಾಜು ಪರಿಷ್ಕರಣೆ ಮಾಡದೇ ಹೆಚ್ಚುವರಿ ವೆಚ್ಚ ಮಾಡಲಾಗಿದೆ. ಜೊತೆಗೆ, ವೈಯಕ್ತಿಕ ಕಾಮಗಾರಿಗಳಲ್ಲಿ ವಸ್ತು ವೆಚ್ಚವನ್ನು ಲಾಭಾರ್ಥಿಗಳಿಗೆ ನೀಡಬೇಕಾದಲ್ಲಿ ನೇರವಾಗಿ ಮಾರಾಟಗಾರರಿಗೆ ಪಾವತಿಸಿರುವುದು ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಇದನ್ನೂ ಓದಿ: ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ

ಒಟ್ಟಿನಲ್ಲಿ, ಗ್ರಾಮೀಣ ಉದ್ಯೋಗ ಸೃಷ್ಟಿ ಹಾಗೂ ಬಡಜನರ ಆರ್ಥಿಕ ಭದ್ರತೆ ಗುರಿಯಾಗಿಟ್ಟುಕೊಂಡ ಎಂನರೇಗಾ ಯೋಜನೆಯಲ್ಲಿ ಇಂತಹ ಅಕ್ರಮಗಳು ನಡೆದಿರುವುದು ಆತಂಕಕಾರಿಯಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂಬ ಆಗ್ರಹ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಮೆರಿಕ-ಇರಾನ್ ಸಂಘರ್ಷ: ಭೂತದ ಬಾಯಲ್ಲಿ ಭಗವದ್ಗೀತೆಯಂತೆ ಶೆಹಬಾಜ್ ಬಾಯಲ್ಲಿ ಶಾಂತಿ ಮಂತ್ರ

ಇಸ್ಲಾಮಾಬಾದ್, ಮಾರ್ಚ್​ 25: ಅಂದು ಭಾರತ-ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಏನು ಮಾಡಿದ್ದರೂ, ಅದೇ ಕೆಲಸವನ್ನು ಈಗ ಇರಾನ್-ಅಮೆರಿಕ ಮಧ್ಯೆ ಹುಟ್ಟುಕೊಂಡಿರುವ ಉದ್ವಿಗ್ನತೆ ನಡುವೆ ಪಾಕ್ ಮಾಡಲು ಹೊರಟಿದೆ. ಯಾರೂ ಆಹ್ವಾನಿಸದಿದ್ದರೂ ಶೆಹಬಾಜ್ ಷರೀಫ್ ಮಧ್ಯಸ್ಥಿಕೆಗೆ ಬಂದು ಕುಳಿತಿದ್ದಾರೆ, ತಾವು ಶಾಂತಿ ಸ್ಥಾಪಕ ಎಂದು ಕರೆದುಕೊಳ್ಳುತ್ತಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವಿನ ಒಪ್ಪಂದದ ನಂತರ, ಎರಡೂ ದೇಶಗಳ ನಡುವೆ ಅರ್ಥಪೂರ್ಣ ಮತ್ತು ನಿರ್ಣಾಯಕ ಸಂವಾದವನ್ನು ಆಯೋಜಿಸಲು ಪಾಕಿಸ್ತಾನ ಸಿದ್ಧವಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್ ಜೊತೆ ಇರಾನ್ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಸಂವಾದವನ್ನು ಬೆಳೆಸಲು ನಡೆಯುತ್ತಿರುವ ಪ್ರಯತ್ನಗಳನ್ನು ಪಾಕಿಸ್ತಾನ ಸ್ವಾಗತಿಸಿದೆ. ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಗಳಿಗೆ ಆತಿಥೇಯ ಪಾತ್ರವನ್ನು ವಹಿಸುವ ಬಗ್ಗೆ ಪಾಕಿಸ್ತಾನವು ಮಹತ್ವದ ಹೇಳಿಕೆಯನ್ನು ನೀಡಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮಂಗಳವಾರ (ಮಾರ್ಚ್ 24, 2026) ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​​ನಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ಮಾತುಕತೆಯ ಮೂಲಕ ಕೊನೆಗೊಳಿಸಲು ನಡೆಯುತ್ತಿರುವ ಪ್ರಯತ್ನಗಳನ್ನು ಪಾಕಿಸ್ತಾನ ಸ್ವಾಗತಿಸುತ್ತದೆ ಮತ್ತು ಸಂಪೂರ್ಣವಾಗಿ ಬೆಂಬಲಿಸುತ್ತದೆ, ಇದರಿಂದಾಗಿ ಮಧ್ಯಪ್ರಾಚ್ಯ ಪ್ರದೇಶ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಸ್ಥಾಪಿಸಬಹುದು ಎಂದು ಹೇಳಿದ್ದಾರೆ.

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಪ್ರಾರಂಭವಾಗಿ ಮೂರು ವಾರಗಳಿಗೂ ಹೆಚ್ಚು ಸಮಯ ಕಳೆದಿದೆ. ಈ ಯುದ್ಧದಲ್ಲಿ, ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಹೆಚ್ಚಿನ ಸಂಖ್ಯೆಯ ಕ್ಷಿಪಣಿಗಳು ಮತ್ತು ದಾಳಿ ಡ್ರೋನ್‌ಗಳನ್ನು ಬಳಸಿಕೊಂಡು ಇರಾನ್ ಮೇಲೆ ಪ್ರಮುಖ ದಾಳಿ ನಡೆಸಿವೆ.

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಹಲವಾರು ಉನ್ನತ ಇರಾನಿನ ನಾಯಕರು, ಹಿರಿಯ ಮಿಲಿಟರಿ ಅಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ನಾಗರಿಕರು ಸಾವನ್ನಪ್ಪಿದ್ದಾರೆ. ಇರಾನಿನ ವಿದ್ಯುತ್ ಸ್ಥಾವರಗಳ ಮೇಲಿನ ದಾಳಿಯನ್ನು ಐದು ದಿನಗಳ ಕಾಲ ಮುಂದೂಡುವುದಾಗಿ ಮತ್ತು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಗಡುವನ್ನು ವಿಸ್ತರಿಸುವುದಾಗಿ ಟ್ರಂಪ್ ಘೋಷಿಸಿದ್ದಾರೆ.

ಆದಾಗ್ಯೂ, ಇರಾನಿನ ಅಧಿಕಾರಿಗಳು ಯಾವುದೇ ರಹಸ್ಯ ಮಾತುಕತೆಗಳನ್ನು ನಿರಾಕರಿಸಿದ್ದಾರೆ, ಇರಾನ್ ಎಚ್ಚರಿಕೆಯ ನಂತರ ಟ್ರಂಪ್ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಮಧ್ಯವರ್ತಿಯಾಗಿ ಹೊರಹೊಮ್ಮಿದ ಸುದ್ದಿ ಭಾರತದ ರಾಜಕೀಯ ವಾತಾವರಣವನ್ನು ಬಿಸಿಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಭಾರತವು ಈ ಪಾತ್ರದಲ್ಲಿ ನಿರ್ಲಕ್ಷ್ಯ ವಹಿಸಿದೆ, ಅದನ್ನು ಭಾರತ ನಿಭಾಯಿಸಬೇಕಿತ್ತು ಎಂದು ಹೇಳಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಬ್ಬಬ್ಬಾ! ಇಡೀ ರಾಜ್ಯದಲ್ಲಿ ಪ್ರತಿದಿನಕ್ಕೆ ಇಷ್ಟು ಕಸ ಸಂಗ್ರಹಣೆಯಾಗುತ್ತಾ?

ಬೆಂಗಳೂರು, ಮಾರ್ಚ್​ 25: ವಿಧಾನ ಪರಿಷತ್‌ನಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ (Waste management) ಕುರಿತು ಮಹತ್ವದ ಮಾಹಿತಿ ಹೊರಬಂದಿದೆ. ಪೌರಾಡಳಿತ ಸಚಿವ ರಹೀಂ ಖಾನ್ ಮಂಗಳವಾರ ಪರಿಷತ್‌ನಲ್ಲಿ ಮಾತನಾಡುತ್ತಾ, ಬೆಂಗಳೂರು ಹೊರತುಪಡಿಸಿ ರಾಜ್ಯದ 325 ನಗರ ಸ್ಥಳೀಯ ಸಂಸ್ಥೆಗಳು (ULBs) ಪ್ರತಿದಿನ ಒಟ್ಟು 7,304 ಮೆಟ್ರಿಕ್ ಟನ್ ಘನ ತ್ಯಾಜ್ಯವನ್ನು ಸಂಗ್ರಹಿಸುತ್ತಿವೆ ಎಂದು ತಿಳಿಸಿದ್ದಾರೆ. ಇದರಲ್ಲಿ 6,083 ಮೆಟ್ರಿಕ್ ಟನ್ ತ್ಯಾಜ್ಯವನ್ನು ಸಂಸ್ಕರಿಸಲಾಗುತ್ತಿದೆ ಎಂದು ವಿವರಿಸಿದರು.

ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಡಿಪಿಆರ್ ಸಿದ್ಧ

ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 219 ನಗರ ಸಂಸ್ಥೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಸಂಸ್ಥೆಗಳಲ್ಲೂ ಈ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. 47 ನಗರ ಸಂಸ್ಥೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಡಿಪಿಆರ್ ಸಿದ್ಧವಾಗಿದ್ದು, ಉಳಿದಡೆಗಳಿಗೂ ಶೀಘ್ರದಲ್ಲೇ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.

ಸ್ವಚ್ಛ ಭಾರತ ಮಿಷನ್–ಅರ್ಬನ್ 2.0 ಅಡಿಯಲ್ಲಿ 51 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಕೈಗೊಳ್ಳಲಾಗಿದ್ದು, 999 ಕಾಮಗಾರಿಗಳಲ್ಲಿ 542 ಪೂರ್ಣಗೊಂಡಿವೆ. ಒಣ ತ್ಯಾಜ್ಯ ಸಂಗ್ರಹ ಘಟಕಗಳಿಗೆ 259 ಕೋಟಿ ರೂ. ಹಾಗೂ 226 ನಗರ ಸಂಸ್ಥೆಗಳಲ್ಲಿ ಸ್ಯಾನಿಟರಿ ಲ್ಯಾಂಡ್‌ಫಿಲ್ ನಿರ್ಮಾಣಕ್ಕೆ 31 ಕೋಟಿ ರೂ. ಮೀಸಲಿಡಲಾಗಿದೆ. ಕಸ ಮಾಫಿಯಾ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಕೋರ್ಟ್​ ಪೇಟೆಂಟ್ ತಗೊಂಡಿದ್ದೀರಾ’; ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಉತ್ತರ

ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಲವ್ ಮಾಕ್ಟೇಲ್ 3’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಜೋರಾಗಿದೆ. ರಾಘವೇಂದ್ರ ನಾಯ್ಕ್ ಹೆಸರಿನ ನಿರ್ದೇಶಕ ‘ಇದು ನನ್ನ ಕಥೆ’ ಎಂದು ಆರೋಪಿಸಿದ್ದಾರೆ. ಡಾರ್ಲಿಂಗ್ ಕೃಷ್ಣಗೆ ಕಥೆ ಹೇಳಿದರೂ ಅವರು ಒಪ್ಪಿರಲಿಲ್ಲ ಎಂದಿದ್ದಾರೆ. ಈಗ ‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಅದೇ ಕಥೆ ಬಳಸಿದ್ದು ನೋಡಿ ಅವರಿಗೆ ಶಾಕ್ ಆಗಿದೆಯಂತೆ. ಈ ಆರೋಪಗಳಿಗೆ ಕೃಷ್ಣ ಉತ್ತರಿಸಿದ್ದಾರೆ.

ರಾಘವೇಂದ್ರ ನಾಯ್ಕ್ ಅವರು ಮೊದಲು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡರು. ಈ ವೇಳೆ ಅವರು ಸಿನಿಮಾ ಹೆಸರನ್ನು ಉಲ್ಲೇಖಿಸಿರಲಿಲ್ಲ. ‘ಇತ್ತೀಚೇಗೆ ಹಿಟ್ ಆದ ಚಿತ್ರವೊಂದು’ ಎಂದು ಉಲ್ಲೇಖಿಸಿ ಆರೋಪಿಸಿದರು. ಆ ಬಳಿಕ ಮಾಧ್ಯಮಗಳ ಎದುರು ಬಂದು ಈ ಕುರಿತು ನೇರ ಆರೋಪ ಮಾಡಲು ಆರಂಭಿಸಿದರು. ಈ ವಿಷಯದ ಕುರಿತು ಕೃಷ್ಣ ತಿರುಗೇಟು ನೀಡಿದ್ದಾರೆ. ಈ ಆರೋಪವನ್ನು ಜೋಕ್ ಎಂದು ಕರೆದಿದ್ದಾರೆ.

ನ್ಯೂಸೋ ನ್ಯೂಸು ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕೃಷ್ಣ ಹಾಗೂ ಮಿಲನಾ, ‘ಅವರ ಆರೋಪವೇ ಒಂದು ಜೋಕ್. ನಿಮ್ಮ ಬಳಿ ಸ್ಕ್ರೀನ್​​ಪ್ಲೇ ಇದೆಯಾ? ಬರೆದಿಟ್ಟುಕೊಂಡ ಡೈಲಾಗ್ ಇದೆಯಾ? ಈ ಪ್ರಶ್ನೆಗಳಿಗೆ ಇಲ್ಲ ಎನ್ನುತ್ತಾರೆ. ಸೆಕೆಂಡ್ ಹಾಫ್ ಕೋರ್ಟ್ ಅಲ್ಲಿ ನಡೆಯುತ್ತದೆ, ಅದಕ್ಕೆ ಹೋಲಿಕೆ ಇದೆ ಎನ್ನುತ್ತಾರೆ. ಕೋರ್ಟ್​ ಪೇಟೆಂಟ್ ತೆಗೆದುಕೊಂಡಿದ್ದೀರಾ’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

‘ಸೋಶಿಯಲ್ ಮೀಡಿಯಾದಲ್ಲಿ ಒಂದು ಕಡೆ ‘ಕದ್ದು ಮಾಡಿದ ಸಿನಿಮಾ’ ಎಂದು ಕಮೆಂಟ್ ನೋಡಿದೆ. ಇದನ್ನು ನೋಡಿದ್ರೆ ಬೇಸರ ಆಗುತ್ತೆ. ಇದನ್ನು ಕದ್ದು ಮಾಡಿದ್ದಲ್ಲ. ನಾವು ಕುಳಿತು ಮಾಡಿದ್ದು’ ಎಂದರು ಕೃಷ್ಣ.‘ಇದು ಹಾಸ್ಯದ ರೀತಿ ಕಾಣಿಸುತ್ತದೆ’ ಎಂದಿದ್ದಾರೆ ಮಿಲನಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು

ನವದೆಹಲಿ, ಮಾರ್ಚ್​ 25: ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಹುಷಾರ್, ಹೋಗುವಾಗ, ಮನೆಗೆ ಬರುವಾಗ ನೀವು ಅವರೊಂದಿಗಿದ್ದಿರೆ ಒಳಿತು. ಆಟೋ ಚಾಲಕನೊಬ್ಬ ಮಕ್ಕಳನ್ನು ಅಪಹರಿಸಲು ಯತ್ನಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. @/rider_akhil.1 ಎಂಬುವವರು ಒಂದು ವಿಡಿಯೋವನ್ನು ಸೆರೆಹಿಡಿದಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ.

ಇ-ರಿಕ್ಷಾ ಚಾಲಕನೊಬ್ಬ ಮಕ್ಕಳನ್ನು ಅಪಹರಿಸಲು ಯತ್ನಿಸಿದ್ದಾನೆ, ಆಟೋ ಚಾಲಕನನ್ನು ಬೈಕ್ ಸವಾರರು ಬೆನ್ನಟ್ಟಿದ್ದಾರೆ, ಆತ ವೇಗವಾಗಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಮಕ್ಕಳು ತಮ್ಮ ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಕೆಳಗೆ ಹಾರಿದ್ದಾರೆ. ರಸ್ತೆಯ ಮೇಲೆ ಬಿದ್ದರೂ ಕೂಡ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ

ಗದಗ, ಮಾರ್ಚ್ 25: ಗದಗ ಜಿಲ್ಲೆಯ ಹಲವೆಡೆ ಕಳೆದ ರಾತ್ರಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಲ್ಲಿ ಭಾರೀ ಅವಾಂತರ ಉಂಟಾಗಿದೆ. ಭಾರಿ ಗಾಳಿ ಹಾಗೂ ಮಳೆಯ ಅಬ್ಬರಕ್ಕೆ ತಾಂಡಾದಲ್ಲಿ 4ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗೆ ಹಾಕಿದ್ದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಈ ವೇಳೆ ಹಾರಿದ ಶೀಟ್‌ಗಳು ತಗುಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಪ್ಪ ಲಮಾಣಿ, ಸೋಮವ್ವ ಲಮಾಣಿ ಮತ್ತು ದೇವಲಪ್ಪ ಲಮಾಣಿ ಎಂದು ಗುರುತಿಸಲಾಗಿದೆ. ಭಾರೀ ಮಳೆ ಹಾಗೂ ಗಾಳಿಯ ಪರಿಣಾಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಸ್ಥರು ಕತ್ತಲಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!

ಬೆಂಗಳೂರು, ಮಾರ್ಚ್ 25: ಬೆಂಗಳೂರಿನ (Bangalore) ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿರುವ ಸಂತ್ರಸ್ತೆ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯು ರೌಡಿಶೀಟರ್ ಆಗಿದ್ದು, ಆಕೆಗೆ ಫೋನ್ ಕರೆ ಮಾಡಿದ್ದ ಇನ್​ಸ್ಪೆಕ್ಟರ್ ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬಂಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ ಎಂಬ ಆರೋಪ ಮಾಡಲಾಗಿದೆ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ ಎಂದು ಸಂತ್ರಸ್ತೆ ದೂರಿದ್ದಾರೆ.

ದೂರುದಾರೆಯ ಪ್ರಕಾರ, ಇನ್ಸ್‌ಪೆಕ್ಟರ್ ಪಾಪಣ್ಣ ಕಚೇರಿಯ ಹಾಗೂ ವೈಯಕ್ತಿಕ ಮೊಬೈಲ್ ಸಂಖ್ಯೆಯಿಂದ ಹಲವು ಬಾರಿ ಕರೆ ಮಾಡಿ ಕಿರುಕುಳ ನೀಡಿದ್ದಾರೆ. ಅಲ್ಲದೆ, ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಾಟ್ಸಪ್ ಚಾಟ್, ಆಡಿಯೋ ಸಾಕ್ಷ್ಯ ಸಲ್ಲಿಕೆ

ಆರೋಪಿಯು ವಾಟ್ಸಪ್ ಮೂಲಕ ಕಳುಹಿಸಿದ್ದ ಅಶ್ಲೀಲ ಸಂದೇಶಗಳು ಹಾಗೂ ಸಂಭಾಷಣೆಗಳ ಸ್ಕ್ರೀನ್‌ಶಾಟ್‌ಗಳನ್ನು ಕೂಡ ಪೊಲೀಸ್ ಆಯುಕ್ತರಿಗೆ ಆಸಂತ್ರಸ್ತೆ ಸಲ್ಲಿಸಿದ್ದಾರೆ. ಜೊತೆಗೆ, ಇನ್ಸ್‌ಪೆಕ್ಟರ್ ಮತ್ತು ದೂರುದಾರೆ ನಡುವೆ ನಡೆದಿದ್ದೆಂದು ಹೇಳಲಾಗುತ್ತಿರುವ ಆಡಿಯೋ ದಾಖಲೆಗಳನ್ನೂ ಕಮಿಷನರ್ ಕಚೇರಿಗೆ ನೀಡಿದ್ದಾರೆ.

ಕೊಲೆ ಬೆದರಿಕೆ ಆರೋಪ

ಈ ಪ್ರಕರಣ ಬಹಿರಂಗಪಡಿಸಿದರೆ ದೂರುದಾರೆಯನ್ನೂ ಅವರ ಮಕ್ಕಳನ್ನೂ ಸುಪಾರಿ ಕೊಟ್ಟು ಕೊಲೆ ಮಾಡಿಸುವುದಾಗಿ ಇನ್ಸ್‌ಪೆಕ್ಟರ್ ಪಾಪಣ್ಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಹಲವಾರು ಬಾರಿ ಕರೆ ಮಾಡಿ ಮನೆಗೆ ಬರುವುದಾಗಿ ಹೇಳಿ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ವಿವರಿಸಲಾಗಿದೆ.

ಎಲೆಕ್ಟ್ರಾನಿಕ್ ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಿರುವ ಈ ದೂರಿನ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸುವ ಸಾಧ್ಯತೆ ಇದೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಎಸ್ಟಿಯವರ ಜಮೀನಿನಲ್ಲಿ ಎಸ್ಸಿ ಯುವಕ ನೀರು ಕುಡಿದಿದ್ದಕ್ಕೆ ಭಾರೀ ಗಲಾಟೆ; 24 ಮಂದಿಗೆ ಗಾಯ!

ಬೆಂಗಳೂರು ಪೊಲೀಸ್ ಇಲಾಖೆಯ ಸಿಬ್ಬಂದಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಇದೇ ಮೊದಲಲ್ಲ. ಈ ಹಿಂದೆ ಬೆಂಗಳೂರಿನ ವಿವಿಧ ಠಾಣೆಗಳ ಸಿಬ್ಬಂದಿ ಹಣ ದೋಚಲು ಅಮಾಯಕರ ಮೇಲೆ ಸುಳ್ಳು ಕೇಸ್ ಹಾಕಿರುವುದು, ಕಮಿಷನರ್ ಕಚೇರಿ ವ್ಯಾಪ್ತಿಯಲ್ಲೇ ಡ್ರಗ್ಸ್ ದಂಧೆಗೆ ಸಹಕರಿಸಿದ್ದು ಮತ್ತು ಸುಲಿಗೆ ಪ್ರಕರಣಗಳಲ್ಲಿ ಶಾಮೀಲಾಗಿ ಅಮಾನತುಗೊಂಡಿರುವ ಅನೇಕ ನಿದರ್ಶನಗಳಿವೆ. ವಿಶೇಷವಾಗಿ ವೈಟ್‌ಫೀಲ್ಡ್ ಮತ್ತು ಬನ್ನೇರುಘಟ್ಟ ಭಾಗದಲ್ಲಿ ಸಾರ್ವಜನಿಕರನ್ನು ಬೆದರಿಸಿ ಆನ್‌ಲೈನ್ ಮೂಲಕ ಹಣ ವರ್ಗಾಯಿಸಿಕೊಂಡ ಪ್ರಕರಣಗಳು ದೊಡ್ಡ ಸುದ್ದಿಯಾಗಿದ್ದವು. ಈಗ ರಕ್ಷಣೆಯ ಜವಾಬ್ದಾರಿ ಹೊತ್ತ ಅಧಿಕಾರಿಯೇ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವುದು ಇಲಾಖೆಯ ನೈತಿಕತೆಯ ಬಗ್ಗೆ ಪ್ರಶ್ನೆ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಿರುತೆರೆ ನಟಿ ಸಂಜನಾ ಬುರ್ಲಿ ಮನೆಯಲ್ಲಿ ಮದುವೆ ಸಂಭ್ರಮ; ಅದ್ದೂರಿ ಆರತಕ್ಷತೆ

ಕಿರುತೆರೆ ನಟಿ ಸಂಜನಾ ಬುರ್ಲಿ (Sanjana Burli) ಮನೆಯಲ್ಲಿ ಈಗ ಮದುವೆ ಸಂಭ್ರಮ ಜೋರಾಗಿದೆ. ಸಮರ್ಥ್ ಚನ್ನಗಿರಿ ಜೊತೆ ಅವರ ವಿವಾಹ ಶಾಸ್ತ್ರ ನಡೆಯುತ್ತಿದೆ. ಅದಕ್ಕೂ ಮೊದಲ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ. ಇದರ ವಿಡಿಯೋಗಳನ್ನು ಸಂಜನಾ ಬುರ್ಲಿ ಅವರ ಅಭಿಮಾನಿ ಬಳಗದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.

ಸಂಜನಾ ಬುರ್ಲಿ ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸ್ನೇಹಾ ಹೆಸರಿನ ಪಾತ್ರ ಮಾಡಿ ಗಮನ ಸೆಳೆದರು. ಈ ಧಾರಾವಾಹಿಯನ್ನು ಅವರು ಅರ್ಧಕ್ಕೆ ತೊರೆದರು. ಅವರು ಓದುವ ಉದ್ದೇಶದಿಂದ ಈ ಧಾರಾವಾಹಿ ತೊರೆದರು ಎನ್ನಲಾಗಿತ್ತು. ಆ ಬಳಿಕ ಸಂಜನಾ ಅವರು ಕಾಣಿಸಿಕೊಂಡಿದ್ದು, ಕಲರ್ಸ್ ಕನ್ನಡದ ‘ಶ್ರೀ ಗಂಧದಗುಡಿ’ ಧಾರಾವಾಹಿಯಲ್ಲಿ. ಈ ಸೀರಿಯಲ್ ಗಮನ ಸೆಳೆಯಿತು. ಈ ಧಾರಾವಾಹಿಯನ್ನು ಸಂಜನಾ ಅರ್ಧಕ್ಕೆ ಬಿಟ್ಟಿದ್ದಾರೆ. ಇದಕ್ಕೆ ಕಾರಣ ವಿವಾಹ.

ಇದನ್ನೂ ಓದಿ: ‘ಶ್ರೀ ಗಂಧದ ಗುಡಿ’ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ ಬುರ್ಲಿ

ಸಮರ್ಥ ಚೆನ್ನಗಿರಿ ಎಂಬುವವರ ಜೊತೆ ಸಂಜನಾ ಬುರ್ಲಿ ಮದುವೆ ಆಗುತ್ತಿದ್ದಾರೆ. ಇಂದು (ಮಾರ್ಚ್ 26) ಅವರ ವಿವಾಹ ನೆರವೇರಬಹುದು ಎಂದು ಊಹಿಸಲಾಗಿದೆ. ಅದಕ್ಕೂ ಮೊದಲು ಅಂದರೆ, ಮಾರ್ಚ್ 24ರಂದು ಸಂಜನಾ ಬುರ್ಲಿ ಅವರ ವಿವಾಹ ಆರತಕ್ಷತೆ ನೆರವೇರಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಂಜನಾ ಅವರು ವಿವಾಹದ ಬಳಿಕ ಮತ್ತೆ ಕಿರುತೆರೆಗೆ ಮರಳಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಈ ಫ್ಯಾನ್ಸ್ ಕೋರಿಕೆಯನ್ನು ಅವರು ಈಡೇರಿಸುತ್ತಾರಾ ಎಂಬ ಕುತೂಹಲ ಮೂಡಿದೆ. ಅವರ ವಿವಾಹ ಫೋಟೋಗಳನ್ನು ನೋಡಲು ಫ್ಯಾನ್ಸ್ ಕೂಡ ಕಾದಿದ್ದಾರೆ. ಇತ್ತೀಚೆಗೆ ನಿಶ್ಚಿತಾರ್ಥದ ಫೋಟೋಗಳನ್ನು ಸಂಜನಾ ಅವರು ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಹೊಸ ಕಾರಿನಲ್ಲಿ ಜಾಲಿರೈಡ್​ಗೆಂದು ಕರ್ಕೊಂಡು ಬಂದ್ರೆ ಮಕ್ಕಳು ಕಾಪಾಡಿ ಕಾಪಾಡಿ ಎಂದು ಕೂಗೋದಾ?

ಸೋನಭದ್ರ, ಮಾರ್ಚ್​ 25: ಹೊಸ ಕಾರು ಖರೀದಿಸಿದ ಖುಷಿಯಲ್ಲಿ, ಅಕ್ಕಪಕ್ಕದ ಮನೆಯ ಮಕ್ಕಳನ್ನು ಕರೆದು ಬನ್ರಿ ಮಕ್ಕಳ ಜಾಲಿ ರೈಡ್ ಹೋಗೋಣ ಎಂದು ವ್ಯಕ್ತಿ ತನ್ನ ಹೊಸ ಕಾರಿನಲ್ಲಿ ಕೂರಿಸಿಕೊಂಡಿದ್ದರು. ಮಕ್ಕಳು ಕಾರೊಳಗೆ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ತಮಾಷೆಗೆ ಕಾಪಾಡಿ ಕಾಪಾಡಿ ಎಂದು ಮಕ್ಕಳು ಕಿರುಚಿದ್ದಾರೆ. ಜನರು ಅವರನ್ನು ಮಕ್ಕಳ ಕಳ್ಳ ಎಂದು ಭಾವಿಸಿ ಹೊಡೆದು, ಕಾರನ್ನು ಧ್ವಂಸ ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ.

 

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link